ವಿಷಯದ ವಿವರಗಳಿಗೆ ದಾಟಿರಿ

Posts from the ‘ಲೇಖನಗಳು’ Category

11
ಸೆಪ್ಟೆಂ

ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)

– ರೋಹಿತ್ ಚಕ್ರತೀರ್ಥ

karl-marx-wikimedia-commonsಹತ್ತೊಂಬತ್ತು ಮತ್ತು ಇಪ್ಪತ್ತನೇ ಶತಮಾನದ ಪ್ರಪಂಚವನ್ನು ಹೆಚ್ಚು ಪ್ರಭಾವಿಸಿದ, ಬದಲಾಯಿಸಿದ ಸಿದ್ಧಾಂತಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವುದು ಕಮ್ಯುನಿಸಂ. ಇಪ್ಪತ್ತನೇ ಶತಮಾನದಲ್ಲಿ ನಡೆದ ಹಲವು ಮಹತ್ವದ ರಾಜಕೀಯ ಚಳುವಳಿಗೆ ಕಮ್ಯುನಿಸಂ ಮೂಲದ್ರವ್ಯವಾಗಿ ಒದಗಿಬಂತು. ಕಮ್ಯುನಿಸಂ ಎಂದರೇನು, ಅದು ಜಗತ್ತನ್ನು ಪ್ರಭಾವಿಸಿದ ಬಗೆ ಹೇಗೆ, 1970ರ ನಂತರ ಅದು ಅವನತಿಯತ್ತ ಸಾಗಲು ಕಾರಣವಾದ ಸನ್ನಿವೇಶಗಳೇನು, ಇಂದಿನ ಯುಗಕ್ಕೆ ಕಮ್ಯುನಿಸಂ ಪ್ರಸ್ತುತವೇ ಎಂಬ ವಿಚಾರಗಳನ್ನು ತಿಳಿದುಕೊಳ್ಳಲು, ಮೊದಲಿಗೆ ನಾವು ಅದರ ಹುಟ್ಟಿನ ದಿನಗಳ ಅವಲೋಕನ ಮಾಡಬೇಕಾಗುತ್ತದೆ. ಮತ್ತಷ್ಟು ಓದು »

10
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 24:
ವಿದುರಾಶ್ವತ್ಥದ ಬಲಿದಾನಿಗಳು
– ರಾಮಚಂದ್ರ ಹೆಗಡೆ

image012ಸ್ವಾತಂತ್ರ್ಯ ಸಮರದಲ್ಲಿ ಕರ್ನಾಟಕದಲ್ಲಿ ನಡೆದ ಅತೀ ಭೀಕರ ಹತ್ಯಾಕಾಂಡಗಳಲ್ಲಿ ಒಂದಾದ ‘ವಿದುರಾಶ್ವತ್ಥದ ಬಲಿದಾನ’ ಕರ್ನಾಟಕದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೂ ಹೆಸರಾಗಿದೆ. ಒಬ್ಬ ಗರ್ಭಿಣಿಯೂ ಸೇರಿದಂತೆ 32 ಜನ ದೇಶಭಕ್ತರು ಬ್ರಿಟಿಷರ ಗುಂಡಿಗೆ ಬಲಿಯಾಗಿ ಪ್ರಾಣಾರ್ಪಣೆ ಮಾಡಿದ್ದು, ಈ ನೆಲದ ಜನರ ಅಪ್ರತಿಮ ದೇಶಭಕ್ತಿಗೆ ಹಾಗೂ ಬ್ರಿಟಿಷ್ ಆಡಳಿತದ ಬರ್ಬರತೆಗೆ ಸಾಕ್ಷಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕ್ಷೇತ್ರ ‘ವಿದುರಾಶ್ವತ್ಥ’ ದೇಶದ ಸ್ವಾತಂತ್ರ್ಯ ಹೋರಾಟಗಾರರ ಚಳುವಳಿಯ ಕೇಂದ್ರವಾಗಿತ್ತೆಂಬುದು ಗಮನಾರ್ಹ ಸಂಗತಿ. ಮಹಾಭಾರತ ಕಾಲದಲ್ಲಿ ವಿದುರ ನೆಟ್ಟಿದ್ದನೆಂದು ನಂಬಲಾಗುವ ಅಶ್ವತ್ಥ ವೃಕ್ಷ ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಬ್ರಿಟಿಷರ ಪೈಶಾಚಿಕ ದೌರ್ಜನ್ಯಕ್ಕೂ ಸಾಕ್ಷಿಯಾಗಿದ್ದು ದುರಂತದ ಸಂಗತಿ. ಮತ್ತಷ್ಟು ಓದು »

10
ಸೆಪ್ಟೆಂ

ಜಮ್ಮು-ಕಾಶ್ಮೀರ (ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು)

ನಿಲುಮೆ ತಂಡ ನಡೆಸಿದ ಕಾಶ್ಮೀರದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪ್ರೊ.ಪ್ರೇಮಶೇಖರವರ ಮಾತುಗಳನ್ನು ಶೋಭ ರಾವ್ ರವರು ಅಕ್ಷರ ರೂಪಕ್ಕಿಳಿಸಿದ್ದಾರೆ. ಅಂದಿನ ಕಾರ್ಯಕ್ರಮದ ವಿಚಾರಗಳು ಈಗ ನಿಲುಮೆಯ ಓದುಗರ ಮುಂದೆ..

14088692_10154596775090649_5386569408904041755_nಕಾಶ್ಮೀರದ ಬಗ್ಗೆ ಇಂದು ಹಲವಾರು ಜನ ತಮ್ಮ ಅಲ್ಪಜ್ಞಾನದಿಂದ ಹಲವಾರು ತರಹ ಮಾತಾಡುತ್ತಾರೆ. ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ದುರಂತವೆಂದರೆ ಅದನ್ನು ಕೇಳಲು ಕೂಡ ಬಹಳಷ್ಟು ಜನರಿದ್ದಾರೆ. ನಾವು ಅವರ ಬಳಿ ಹೋಗಿ ಬೀದಿ ಜಗಳ ಮಾಡಬೇಕಿಲ್ಲ. ವಸ್ತುನಿಷ್ಠ ಚರ್ಚೆಯನ್ನು ಏರ್ಪಡಿಸಿ ನಿಜಸಂಗತಿಗಳನ್ನ ತಿಳಿಸಿದರೆ ಸಾಕು. ಕಾಶ್ಮೀರ ನಮ್ಮದೂ ಎಂದು ಭಾರತವೂ ಹೇಳುತ್ತೆ, ಪಾಕಿಸ್ತಾನವೂ ಹೇಳುತ್ತೆ. ನಾವು ಇವೆರೆಡಕ್ಕೂ ಸೇರಿಲ್ಲ ಎಂದು ಮತ್ತೊಂದು ಗುಂಪು ಕೂಡ ಹೇಳುತ್ತೆ. ಇದೇ ಕಾಶ್ಮೀರದ ನಿಜವಾದ ಸಮಸ್ಯೆ. ಮತ್ತಷ್ಟು ಓದು »

10
ಸೆಪ್ಟೆಂ

ಅಂತ್ಯದ ಬೆನ್ನೇರಿ…!

-ವಿನಾಯಕ ಪೈ ಬಿ
mudra-e1446143388978ಒಂದು ಸುಸಂಸ್ಕೃತ ಸಮಾಜ ಎಂದರೆ ವ್ಯಕ್ತಿಗತ ಚಿಂತನೆಗಳ, ಸಾಮಾಜಿಕ ಸ್ಥಿತ್ಯಂತರಗಳ, ಧಾರ್ಮಿಕ ಆಚರಣೆ, ಆಧ್ಯಾತ್ಮಿಕ ನಂಬಿಕೆಗಳ ಮತ್ತು ಅದರ ಕಾಲಾಂತರ್ಗತ ಪರಿಷ್ಕರಣೆಗಳ ಸಮ್ಮಿಲನವೇ ಆಗಿದೆ. ಈ ಸಮ್ಮಿಲನದಲ್ಲಿ ಯಾವುದಾದರು ಒಂದನ್ನು ನಿರ್ಲಕ್ಷಿಸಿದರು, ಸುಜ್ಞಾನದ ಕೊರತೆ ಸಮಾಜದ ಬೆಳವಣಿಗೆಯ ಮೇಲೆ ತೀವ್ರವಾಗಿ ಪ್ರತಿಫಲಿಸುತ್ತದೆ. ಮಾನವೀಯ ಮೌಲ್ಯಗಳು, ಸದ್ವಿಚಾರಗಳ ಸಾಂಗತ್ಯವೇ ನಮ್ಮ ಸಮೂಹದ ಅಂತಃಸತ್ವ. ಧಾರ್ಮಿಕ ಮತ್ತು ಆಧ್ಯಾತ್ಮಿಕ  ಚಿಂತನೆಗಳೇ ಸಮಾಜಕ್ಕೆ ಭದ್ರಬುನಾಧಿಯನ್ನು ಒದಗಿಸಿ, ಸಾಮಾಜಿಕ ಚಿಂತನೆಗಳು ಸದ್ಭಾವನೆಯ ಮೆಟ್ಟಿಲುಗಳಾಗಿ, ಮನುಕುಲವನ್ನು ಏಳಿಗೆಯತ್ತ ಕೊಂಡೊಯ್ಯುತ್ತದೆ . ಮತ್ತಷ್ಟು ಓದು »

9
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 23:
ಮದನ್ ಲಾಲ್ ಧಿಂಗ್ರಾ
– ರಾಮಚಂದ್ರ ಹೆಗಡೆ

madan_lal_dhingraಪರದೇಶಿ ಬ್ರಿಟಿಷರು ಭಾರತದ ನೆಲಕ್ಕೆ ಬಂದು ದಬ್ಬಾಳಿಕೆ ನಡೆಸುತ್ತಿದ್ದ ಕಾಲದಲ್ಲಿ ಅವರ ನೆಲಕ್ಕೇ ಹೋಗಿ ಇಂಗ್ಲೆಂಡಿನಲ್ಲೇ ಕ್ರಾಂತಿ ಚಟುವಟಿಕೆ ನಡೆಸಿ ಬ್ರಿಟಿಷರನ್ನೇ ಬೆಚ್ಚಿಬೀಳಿಸಿದ, ವಿದೇಶಿ ನೆಲದಲ್ಲಿ ಭಾರತಕ್ಕಾಗಿ ಮೊದಲ ಬಲಿದಾನ ಮಾಡಿದ ಕೆಚ್ಚೆದೆಯ ವೀರ ಮದನ್ ಲಾಲ್ ಧಿಂಗ್ರಾ. ಪಂಜಾಬಿನ ಅಮೃತಸರದ ಶ್ರೀಮಂತ ಕುಟುಂಬದ ಮದನ್ ಲಾಲ್ ಇಂಜಿನೀಯರಿಂಗ್ ಓದಲಿಕ್ಕೆಂದು ಲಂಡನ್ ಗೆ ಹೋಗಿದ್ದವನು. ಸ್ವಭಾವತಃ ಶೋಕಿಲಾಲ. ಮನೆಯವರೆಲ್ಲ ಬ್ರಿಟಿಷರ ಪರಮ ಭಕ್ತರು. ಇಂಗ್ಲೆಂಡ್ ನ ವಿಲಾಸೀ ಸಂಸ್ಕೃತಿಗೆ ಮಾರುಹೋದ ಮದನ್ ಬೆಲೆಬಾಳುವ ಸೂಟು ಬೂಟುಗಳನ್ನು ಹಾಕಿಕೊಂಡು ಶೋಕಿಲಾಲನಾಗಿ ಇಂಗ್ಲೆಂಡಿನ ರಸ್ತೆಗಳಲ್ಲಿ ಹಾಡುತ್ತಾ, ಕುಣಿಯುತ್ತಾ ಯುವತಿಯರೊಂದಿಗೆ ಚಕ್ಕಂದವಾಡುತ್ತ ಕಾಲಕಳೆಯುತೊಡಗಿದ್ದ. ಮತ್ತಷ್ಟು ಓದು »

9
ಸೆಪ್ಟೆಂ

ತಮಿಳುನಾಡು, ಕಾವೇರಿ, ಜಯಲಲಿತ, ದೇವೇಗೌಡರು ಮತ್ತು ನಾನು

– ಪ್ರೇಮಶೇಖರ

jayನೆರೆಯ ತಮಿಳುನಾಡಿನಲ್ಲಿ ಹಲವು ಅಚ್ಚರಿ ಹುಟ್ಟಿಸುವ ವಿರೋಧಾಭಾಸಗಳು ಕಾಣಸಿಗುತ್ತವೆ. ತಮಿಳರು ಮಹಾ ಭಾಷಾಭಿಮಾನಿಗಳು. ತಮ್ಮ ನಾಡು ನುಡಿಯ ಬಗ್ಗೆ ಅವರ ಪ್ರೀತಿ, ಅಭಿಮಾನ, ಕಾಳಜಿಗೆ ಸಮಕಾಲೀನ ಭಾರತೀಯ ಇತಿಹಾಸದಲ್ಲಿ ದಂತಕತೆಯ ಆಯಾಮವೊದಗಿಬಿಟ್ಟಿದೆ. ಆದರೆ, ಇಂತಹ ಸ್ವಾಭಿಮಾನಿ ತಮಿಳರು ಕಳೆದ ನಲವತ್ತು-ನಲವತ್ತೈದು ವರ್ಷಗಳಿಂದಲೂ ತಮಿಳೇತರರನ್ನು ತಮ್ಮ ರಾಜಕೀಯ ನಾಯಕರನ್ನಾಗಿ ಒಪ್ಪಿಕೊಂಡು ಅವರ ಕೈಯಲ್ಲಿ ತಮ್ಮ ರಾಜ್ಯವನ್ನಿಟ್ಟುಬಿಟ್ಟಿದ್ದಾರೆ. ಕರುಣಾನಿಧಿ ಕಳೆದ ನಾಲ್ಕು ದಶಕಗಳಿಂದಲೂ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಅನಭಿಷಿಕ್ತ ಸಾಮ್ರಾಟರಾಗಿ ಮೆರೆಯುತ್ತಿದ್ದಾರೆ, ನಾಲ್ಕು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದಾರೆ. ಈ ಕರುಣಾನಿಧಿ ತೆಲುಗು ಮೂಲದವರು. ಡಿಎಂಕೆ ಪಕ್ಷವನ್ನು ಒಡೆದು ಅದಕ್ಕೆ ಪರ್ಯಾಯವಾಗಿ “ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ” (ಎಐಎಡಿಎಂಕೆ) ಪಕ್ಷ ಕಟ್ಟಿ ಸತತ ಹತ್ತು ವರ್ಷಗಳವರೆಗೆ ತಮಿಳುನಾಡನ್ನು ಆಳಿದ ಎಂ. ಜಿ. ರಾಮಚಂದ್ರನ್ (ಎಂಜಿಆರ್) ಒಬ್ಬ ಮಲೆಯಾಳಿ. ಅವರ ಸಹವರ್ತಿ ಮತ್ತು ಉತ್ತರಾಧಿಕಾರಿ, ಕೋಟ್ಯಂತರ ತಮಿಳರ ಪ್ರೀತಿಯ “ಅಮ್ಮ” ಜಯಲಲಿತಾರ ಮೂಲ ಕರ್ನಾಟಕದಲ್ಲಿ. ಅದಕ್ಕೂ ಹಿಂದೆ ಹೋಗುವುದಾದರೆ ದ್ರಾವಿಡ ಚಳುವಳಿಯ ಅಧ್ವರ್ಯು, ತಮಿಳುನಾಡಿನ ಇತಿಹಾಸದ ದಿಕ್ಕನ್ನೇ ಬದಲಿಸಿದ “ಪೆರಿಯಾರ್” ಬಿರುದಾಂಕಿತ ಇ. ವಿ. ರಾಮಸ್ವಾಮಿ ನಾಯಕರ್ ಕನ್ನಡಿಗರಂತೆ. ಇವರೆಲ್ಲರೂ ತಮಿಳನ್ನು ತಮ್ಮದಾಗಿಸಿಕೊಂಡು, ತಮಿಳುನಾಡಿಗೆ ತಮ್ಮನ್ನರ್ಪಿಸಿಕೊಂಡು ತಮಿಳರ ಹೃದಯಗಳಲ್ಲಿ ಸ್ಥಾನ ಗಳಿಸಿಕೊಂಡುಬಿಟ್ಟರು. ಮತ್ತಷ್ಟು ಓದು »

9
ಸೆಪ್ಟೆಂ

ಕಾಶ್ಮೀರ ಸಮಸ್ಯೆಯ ವರ್ತಮಾನ

– ಪ್ರೊ. ರಾಜಾರಾಮ ಹೆಗಡೆ

12-kashmir-protest-2ಕಾಶ್ಮೀರವು ಇಂದು ಕೇವಲ ಭಾರತ ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳ ನಡುವಿನ ಹಗೆಯ ಕಾರಣವಷ್ಟೇ ಅಲ್ಲ, ಭಾರತದಲ್ಲೇ ಆಂತರಿಕ ಹಗೆಯ ಹೊಗೆಯೆಬ್ಬಿಸುತ್ತಿರುವ ಒಂದು ವರ್ತಮಾನದ ಸಮಸ್ಯೆಯಾಗಿದೆ. ಹಾಗಾಗಿ ಕಾಶ್ಮೀರ ವಿವಾದವು ಹೇಗೆ ಪ್ರಾರಂಭವಾಯಿತು, ನಮ್ಮ ಮುತ್ಸದ್ದಿಗಳು ಎಲ್ಲಿ ಎಡವಿದರು ಎಂಬ ಹಿಸ್ಟರಿಗಿಂತ ಅದರ ತೆಕ್ಕೆಯೊಳಗೆ ಬರಲು ಸೋಲುವ ಅಥವಾ ನಿರಾಕರಿಸುವ ವರ್ತಮಾನದ ಆಯಾಮಗಳು ನನಗೆ ಸೋಜಿಗ ಹುಟ್ಟಿಸುತ್ತಿವೆ. ಇಂದು ಕಾಶ್ಮೀರವು ಭಾರತ ಪಾಕಿಸ್ತಾನಗಳ ಗಡಿ ಸಮಸ್ಯೆಯಾಗಿ ಉಳಿದಿಲ್ಲ, ಬದಲಾಗಿ ಅದು ದೇಶದ ಸಮಸ್ತ ಪ್ರಗತಿಪರ ಹೋರಾಟಗಾರರಿಗೂ, ಆಜಾದಿಯ ಕರೆಯಾಗಿ ಕಾಣಿಸುತ್ತಿದೆ ಎಂಬುದನ್ನು ಗಮನಿಸುವುದು ಅಗತ್ಯ. ಕೇವಲ ಮುಸ್ಲಿಂ ಸಂಘಟನೆಗಳೊಂದೇ ಅಲ್ಲ ಭಾರತದ ಪ್ರಗತಿಪರ ಸಂಘಟನೆಗಳೂ, ಕಾಶ್ಮೀರಿ ಮುಸ್ಲಿಂ ಹೋರಾಟಗಾರರ ಜೊತೆಗೆ ಆಜಾದಿಯ ಘೋಷಣೆ ಕೂಗುತ್ತಿವೆ. ದೇಶದ ಬರ್ಬಾದಿಯ ಕುರಿತು ಮಾತನಾಡುವುದು ಈ ಸಂಘಟನೆಗಳಿಗೆ ರಾಷ್ಟ್ರೀಯತೆಯ ಸಮಸ್ಯೆಯಾಗಿ ಕಾಣಿಸುತ್ತಿಲ್ಲ. ಬದಲಾಗಿ ಬಿಡುಗಡೆಯ ಕರೆಯಾಗಿ ಕಾಣಿಸುತ್ತಿದೆ. ಇಂಥ ಚಳವಳಿಗಳನ್ನು ಬೆಂಬಲಿಸುವ ಬುದ್ಧಿಜೀವಿಗಳಿಗೆ ಇಂಥ ಘೋಷಣೆಗಳು ನ್ಯಾಯಯುತವೆನಿಸತೊಡಗಿವೆ. ಈ ಪರಿಸ್ಥಿತಿಯು ನಮಗೆ ಎರಡು ಸವಾಲುಗಳನ್ನು ಸೃಷ್ಟಿಸಿದೆ: ಮತ್ತಷ್ಟು ಓದು »

9
ಸೆಪ್ಟೆಂ

ಕಾವೇರಿ ವಿವಾದ : ನಾಲಾಯಕ್ ನಾಯಕರ ನಡುವಿನ ಜನನಾಯಕರು

800x480_image57629329ಕಾವೇರಿ ವಿವಾದ ಮತ್ತೆ ಭುಗಿಲೆದ್ದಿದೆ. ಸೆಪ್ಟಂಬರ್ ೯ರಂದು ಕರ್ನಾಟಕ ಬಂದ್ ಗೂ ಕರೆ ನೀಡಲಾಗಿದೆ. ನಮಗೆ ಕುಡಿಯಲಿಕ್ಕೇ ನೀರಿಲ್ಲದಿರುವಾಗ ಕೈಲಾಗದ ಸರ್ಕಾರ ತಮಿಳುನಾಡಿನ ಬೆಳೆಗಳಿಗೆ ನೀರು ಹರಿಸುತ್ತಿದೆ. ನಮ್ಮಲ್ಲೇ ಹೆಚ್ಚಾಗಿರುವ ನಾಲಾಯಕ್ ನಾಯಕರ ನಡುವೆ, ಅಪರೂಪಕ್ಕೆ ದಿಟ್ಟತನ ಹಾಗೂ ಚಾಣಾಕ್ಷತನ ತೋರಿದ ಇಬ್ಬರು ಜನನಾಯಕರ ನೆನಪುಗಳು ನಿಮಗಾಗಿ – ನಿಲುಮೆ

ನೆನಪು ೧ :
ನಿಜವಾದ ಗಂಡಸು ಎಂದರೆ ಅದು ಬಂಗಾರಪ್ಪ
1991ರಲ್ಲಿ, ತಮಿಳುನಾಡಿಗೆ 205 ಟಿಎಂಸಿ ನೀರು ಬಿಡುವಂತೆ ಕಾವೇರಿ ನ್ಯಾಯಾಧಿಕರಣವು ಮಧ್ಯಂತರ-ತೀರ್ಪನ್ನು ನೀಡಿತು. ಈ ತೀರ್ಪಿಗೆ ವಿರುದ್ಧವಾಗಿಯೇ ಮುಖ್ಯಮಂತ್ರಿ ಬಂಗಾರಪ್ಪನವರು ಸುಗ್ರೀವಾಜ್ಞೆ ಹೊರಡಿಸಿ ಕಾವೇರಿ ಕೊಳ್ಳದ ಅಣೆಕಟ್ಟುಗಳಲ್ಲಿನ ನೀರನ್ನು ರಕ್ಷಿಸಿ, ನಮ್ಮ ರಾಜ್ಯದ ರೈತರಿಗೇ ಉಳಿಸಿಕೊಳ್ಳುವಂತೆ ಅಣೆಕಟ್ಟುಗಳ ಉಸ್ತುವಾರಿಯ ಅಧಿಕಾರಿಗಳಿಗೆ ಆದೇಶಿಸಿದರು. ಮತ್ತಷ್ಟು ಓದು »

8
ಸೆಪ್ಟೆಂ

ಪ್ರೇತದ ಆತ್ಮ ಚರಿತೆ! (ಭಾಗ ೧)

– ಶ್ರೀಕಾಂತ್ ಶೆಟ್ಟಿ

14141689_1078140602281548_6643720140016381041_nಒಂದು ಪ್ರೇತದ ಕತೆ. ಆ ಒಂದು ಪ್ರೇತ ಮಾಡಿದ ಆವಾಂತರಕ್ಕೆ ಇತಿಹಾಸವೇ ಹೊಸ ತಿರುವು ಪಡೆದುಕೊಂಡು ಬಿಟ್ಟಿತು. ಈ ಭೂತ ಪ್ರೇತ ಇದೆಲ್ಲಾ ಇದೆಯೋ ಇಲ್ಲವೋ, ಇದ್ದರೆ ವೈಜ್ಞಾನಿಕ ಕಾರಣ ಕೊಡಿ. ಅದರ ಇರುವನ್ನು ಸಾಬೀತು ಮಾಡಿ ಎನ್ನುವವರಿಗೆ ಈ ಕತೆ ಹೇಳಿ ಮಾಡಿಸಿದ್ದಲ್ಲ. ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ಉಳಿದುಕೊಂಡು ಬಂದಿರುವ ದಂತಕತೆಯನ್ನು ಆಧಾರವಾಗಿಟ್ಟುಕೊಂಡು ಈ ಸರಣಿಯನ್ನು ಬರೆಯುತ್ತಿದ್ದೇನೆ. ಇದರಲ್ಲಿ ಕೇವಲ ಪ್ರೇತ ಮಾತ್ರ ಬಂದು ಹೋಗುವುದಿಲ್ಲ. ಹದಿನೆಂಟನೇ ಶತಮಾನದಲ್ಲಿ ಭೂಮಿ ನಡುಗಿಸುವಷ್ಟು ಸೇನೆ ಕಟ್ಟಿಕೊಂಡು, ಮೊಘಲರನ್ನು ಬೇರು ಸಮೇತ ಕಿತ್ತೊಗೆದ ಮರಾಟಾ ಪೇಶ್ವಾಗಳು ಬರುತ್ತಾರೆ. ಉತ್ತರದ ಹಿಮಾಲಯದಿಂದ ದಕ್ಷಿಣದ ಕೃಷ್ಣಾ ನದಿ ದಂಡೆಯವರೆಗೆ ಪೇಶ್ವಾಗಳ ಕತ್ತಿಯ ಅಬ್ಬರ, ಕುದುರೆಗಳ ಹೇಷಾರವ, ಮದೋನ್ಮತ್ತ ಆನೆಗಳ ಹೂಂಕಾರ.. ನಭವನ್ನೇ ನಡುಗಿಸುವ ಮರಾಠಾ ಮಾವಳಿಗಳ ಹರಹರಾ ಮಹಾದೇವ ರಣಘರ್ಜನೆ.. ಚಿತ್ಪಾವನ ಬ್ರಾಹ್ಮಣ ರಣಕಲಿಗಳ ಅಪ್ರತಿಮ ರಣತಂತ್ರ.. ಒಂದು ಶತಮಾನ ಕಾಲ ವಿಜೃಂಭಿಸಿದ ಮರಾಠ ಶಕ್ತಿಯ ವಿವಿಧ ಮುಖ ಪರಿಚಯ ಇಲ್ಲಿ ನಿಮಗಾಗಲಿದೆ.

ಮತ್ತಷ್ಟು ಓದು »

8
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 22
ಚಿದಂಬರಂ ಪಿಳ್ಳೈ
– ರಾಮಚಂದ್ರ ಹೆಗಡೆ

downloadಭಾರತ-ಶ್ರೀಲಂಕಾ ನಡುವಿನ ಸಮುದ್ರದಲ್ಲಿ ನೌಕಾಯಾನದ ಹೆಸರಿನಲ್ಲಿ ಜನರ ಸುಲಿಗೆ ಮಾಡುತ್ತಿದ್ದ ಬ್ರಿಟಿಷರ ಆಟಾಟೋಪಕ್ಕೆ ಉತ್ತರವಾಗಿ ‘ಸ್ವದೇಶಿ ನ್ಯಾವಿಗೇಷನ್ ಕಂಪೆನಿ’ ಹುಟ್ಟುಹಾಕಿದ ಧೀರ ಸಾಹಸಿ ತಮಿಳುನಾಡಿನ ಚಿದಂಬರಂ ಪಿಳ್ಳೈ. ತಮ್ಮದೇ ಆದ ಸಂಪೂರ್ಣ ಸ್ವದೇಶಿ ನೌಕಾಯಾನ ಸಂಸ್ಥೆಯನ್ನು 1906 ರ ಸಮಯದಲ್ಲೇ ಹುಟ್ಟುಹಾಕಿ ಈಸ್ಟ್ ಇಂಡಿಯಾ ಕಂಪನಿಯೇ ಪತರಗುಟ್ಟುವಂತೆ ಮಾಡಿದ, ಭಾರತೀಯರ ಪ್ರತಿರೋಧ ಕೇವಲ ಯುದ್ಧ ಬಲಿದಾನಗಳಲ್ಲಷ್ಟೇ ಅಲ್ಲ ಎಂದು ನಿರೂಪಿಸಿದ ಅಪ್ರತಿಮ ದೇಶಭಕ್ತ ಪಿಳ್ಳೈ. ಆಗಿನ ಕಾಲದಲ್ಲಿ ತಮಿಳುನಾಡಿನಲ್ಲಿ ಸ್ವರಾಜ್ಯ ಎಂಬ ಶಬ್ದವನ್ನು ಉಚ್ಚಾರ ಮಾಡಲೂ ಜನರು ಹೆದರುತ್ತಿದ್ದರು. ‘ಸ್ವಾತಂತ್ಯ್ರ’ ಎಂದು ಅಪ್ಪಿ ತಪ್ಪಿ ಹೇಳಿದರೆ ಅದು ರಾಜದ್ರೋಹವಾಗುತ್ತದೆ ಎಂದು ಜನರಿಗೆ ಅಂಜಿಕೆ. ಅಂಥ ಒಂದು ಕಾಲದಲ್ಲಿ ಚಿದಂಬರಂ ಪಿಳ್ಳೈಯವರು ತಮಿಳುನಾಡಿನಲ್ಲಿ ‘ವಂದೇ ಮಾತರಂ’ ಎಂದು ಘೋಷಣೆ ಕೂಗಿದರು. ಬ್ರಿಟಿಷರ ಚಕ್ರಾಧಿಪತ್ಯದ ವಿರುದ್ಧ ಜನರನ್ನು ಎತ್ತಿಕಟ್ಟಿದರು. ಸಹಸ್ರಾರು ಸ್ವಾತಂತ್ಯ್ರ ವೀರರನ್ನು ಹುರಿಗೊಳಿಸಿದ ಚಿದಂಬರಂ ಪಿಳ್ಳೈಯವರು ರಾಜದ್ರೋಹದ ಆಪಾದನೆ ಹೊತ್ತು ಆರು ವರ್ಷಗಳ ಕಾಲ ಸೆರೆಮನೆಯಲ್ಲಿ ಕಷ್ಟಪಟ್ಟರು. ಮತ್ತಷ್ಟು ಓದು »