ಬಹುಸಂಖ್ಯಾತರಿಗೆ ರಿಲಿಜನ್ ಇಲ್ಲವಾದರೆ ಅಲ್ಪಸಂಖ್ಯಾತರು ಯಾರು?
– ರಾಕೇಶ್ ಶೆಟ್ಟಿ
ಅದು ರಾಮಕೃಷ್ಣ ಮಿಷನ್ ವರ್ಸಸ್ ಪಶ್ಚಿಮ ಬಂಗಾಳ ಸರ್ಕಾರದ ನಡುವೆ ನಡೆದ ಕುತೂಹಲಕಾರಿ ಕಾನೂನು ಕದನ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ರಾಮಕೃಷ್ಣ ಮಿಷನ್ ಸಂಸ್ಥೆಗೆ ಸೇರಿದ ಶಿಕ್ಷಣ ಸಂಸ್ಥೆಯೊಂದರಲ್ಲಿ ಶುರುವಾಗಿದ್ದ ಕಾಲೇಜಿನ ನಿರ್ವಹಣೆಗೆ ಸಂಬಂಧಿಸಿದಂತೆ,ಸರ್ಕಾರದ ಹಸ್ತಕ್ಷೇಪವನ್ನು ಪ್ರಶ್ನಿಸಿ ರಾಮಕೃಷ್ಣ ಮಿಷನ್ ನ್ಯಾಯಾಲಯದ ಮೆಟ್ಟಿಲೇರಿತ್ತು.ತಮ್ಮ ಸಂಘಟನೆಯೂ ರಾಮಕೃಷ್ಣರ ಬೋಧನೆಗಳ ಮೇಲೆ ಆಧಾರಿತವಾಗಿರುವುದರಿಂದ ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಸಂವಿಧಾನದ Article 30(1) ಮತ್ತು Article 26(a) ಕಾಯ್ದೆಯಡಿಯಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಇರಬೇಕಾದ ರಕ್ಷಣೆಯಿದೆ ಎಂದು ವಾದಿಸಿತ್ತು.ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟು, ರಾಮಕೃಷ್ಣಯಿಸಂ ಎಂಬ ಪ್ರತ್ಯೇಕವಾದ ರಿಲಿಜನ್ ಇಲ್ಲ ಮತ್ತದು ಹಿಂದೂ ಸಂಪ್ರದಾಯಗಳ ವ್ಯಾಪ್ತಿಯಲ್ಲೇ ಇದೆ ಎಂದಿತ್ತು ಹಾಗೂ ಹಿಂದೂ ಎಂಬುದು ರಿಲಿಜನ್ ಅಲ್ಲ ಅದೊಂದು ಜೀವನ ಪದ್ಧತಿ ಎಂದು ತೀರ್ಪು ನೀಡಿತ್ತು.ಈ ದೇಶದ ಸರ್ವೋಚ್ಚ ನ್ಯಾಯಾಲಯವೇ ಹಿಂದೂ ಎಂಬುದು ರಿಲಿಜನ್ ಅಲ್ಲ ಎಂದ ಮೇಲೆ ನಮ್ಮ ಸರ್ಕಾರಗಳು ಅದನ್ನು ಪರಿಗಣಿಸಬೇಕಿತ್ತಲ್ಲವೇ?
ಒಂದು ವೇಳೆ ಪರಿಗಣಿಸಿದ್ದರೆ ಈಗಲೂ ಸರ್ಕಾರಿ,ಖಾಸಗಿ ಕಚೇರಿ,ಶಿಕ್ಷಣ ಸಂಸ್ಥೆ ಇತ್ಯಾದಿಗಳ ಅರ್ಜಿಗಳಲ್ಲಿ “ಹಿಂದೂ” ಎಂಬುದನ್ನು “ರಿಲಿಜನ್” ಕಾಲಂನಲ್ಲಿ ಭರ್ತಿ ಮಾಡಿಕೊಳ್ಳುತ್ತಿರಲಿಲ್ಲ. ಉದಾಹರಣೆಗೆ ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ಸರ್ಕಾರ ಮಾಡಿದ ಜಾತಿಗಣತಿಯ ವೇಳೆ ನನಗಾದ ಅನುಭವದ ಬಗ್ಗೆ ಹೇಳಬೇಕು.
ವಿವೇಕ ಶಾನಭಾಗರ ಹೊಸ ಕಾದಂಬರಿ – ‘ಊರು ಭಂಗ’
– ರಾಘವೇಂದ್ರ ಅಡಿಗ ಹೆಚ್.ಎನ್
ಭಾಸ್ಕರರಾವ್ ಆಡಿದ್ದೆನ್ನಲಾದ ಈ ಮಾತಿನ ಕುರಿತು ನಮ್ಮೊಳಗೆ ತೀವ್ರ ಚರ್ಚೆ ಶುರುವಾಗಿತ್ತು. ಈ ಎರಡು ಶಬ್ದಗಳು ಒಂದು ಕಂಪನಿಯ ಕಾರ್ಪೊರೇಟ್ ಆಫೀಸಿನಲ್ಲಿ ಎಷ್ಟು ಕ್ರಾಂತಿಕಾರಿಯಾದ, ಭೀಕರ ಘೋಷಣೆಯಾಗಿ ಕೇಳಬಹುದೆನ್ನುವುದು ಇಂಥ ಜಗತ್ತಿನ ಬಗ್ಗೆ ಗೊತ್ತಿದ್ದವರಿಗೇ ಗೊತ್ತು. ಅಲ್ಲಿ ಮಾತ್ರ ಯಾಕೆ, ಕುಟುಂಬ ಅಥವಾ ರಾಜಕೀಯದಂಥ ಯಾವುದೇ ವ್ಯವಸ್ಥೆಯೂ ಅಂಜುವ ಶಬ್ದಗಳಿವು.
ಎಲ್ಲವನ್ನೂ ಹೇಳುತ್ತೇನೆಂಬುದೇ ಭಿನ್ನಮತದ ಅತ್ಯಂತ ಶಕ್ತಿಶಾಲಿ ಅಸ್ತ್ರ ತಾನೇ? ಪಕ್ಷ ತೊರೆದ ಧುರೀಣರು, ತಂಡದಿಂದ ಕೈಬಿಟ್ಟ ಆಟಗಾರರು, ಹೊಡೆದಾಡಿದ ವ್ಯಾಪಾರದ ಪಾಲುದಾರರು, ಜಗಳಾಡಿದ ಪ್ರೇಮಿಗಳು, ಬೇರೆಯಾದ ದಂಪತಿಗಳು – ಎಲ್ಲರೂ ಒಂದಲ್ಲ ಒಂದು ವಿಧದಲ್ಲಿ, ಒಂದಲ್ಲ ಒಂದು ರೂಪದಲ್ಲಿ ಈ ಅಸ್ತ್ರ ಎತ್ತಿಕೊಂಡವರೇ. ಈ ಎರಡು ಮಾತಿನಲ್ಲಿ ಎದೆಗಾರಿಕೆ, ಇಷ್ಟು ದಿನ ಸಾಧ್ಯವಾಗದ್ದನ್ನು ಈಗಲಾದರೂ ಮಾಡುತ್ತಿದ್ದೇನೆನ್ನುವ ಆತ್ಮಸಮಾಧಾನ, ತುಸು ಹುತಾತ್ಮತೆ ಇರುವಂತೆಯೇ ಸ್ವಲ್ಪ ವಿಶ್ವಾಸಘಾತುಕತನವೂ ಇದೆ.
ಕಂಪನಿಯ ವೈಸ್ ಪ್ರೆಸಿಡೆಂಟ್ ಆಗಿರುವ ಭಾಸ್ಕರರಾವ್ ಅವಧಿಗಿಂತ ಮುನ್ನ ನಿವೃತ್ತಿ ಪಡೆಯುತ್ತಾರೆ ಎಂಬುದು ಬೆಳಗಿನ ಮುಖ್ಯ ಸುದ್ದಿಯಾಗಿತ್ತು. ಅದು ಜೀರ್ಣವಾಗುವ ಮೊದಲೇ ಅವರು ಹೇಳಿದ್ದಾರೆನ್ನಲಾದ ‘ಎಲ್ಲವನ್ನೂ ಹೇಳುತ್ತೇನೆ…’ ಎಂಬ ಶಬ್ದಗಳು ನಮ್ಮ ಆಫೀಸಿನಾದ್ಯಂತ ಕಂಪನಗಳನ್ನು ಎಬ್ಬಿಸಿದವು…
***
ಇದು ವಿವೇಕ್ ಶಾನಭಾಗ ಅವರ ಮೂರನೆಯ ಕಾದಂಬರಿ.“ಊರು ಭಂಗ” ದ ಮೊದಲ ಸಾಲುಗಳು ಸುಮಾರು ಇನ್ನೂರೈವತ್ತು ಪುಟಗಳ “ಊರು ಭಂಗ” ಕಾದಂಬರಿ ಆರಂಭದ ಪುಟಗಳಿಂದಲೇ ಆವರಿಸಿಕೊಳ್ಳುವ ಧಾಟಿಯದು ಕಾರ್ಪೊರೇಟ್ ರಂಗದ ಒಳಸುಳಿಗಳನ್ನು ನಿಧಾನವಾಗಿ ಹೇಳುತ್ತಾ ಹೋದಂತೆ ತೆಂಕಣಕೇರಿ ಎಂಬ ಊರಿನ ಭೂತ ಜಗತ್ತು ಬಿಚ್ಚಿಕೊಳ್ಳತೊಡಗುತ್ತದೆ. ಕಾದಂಬರಿಯ ಮೊದಲ ಎರಡು ಅಧ್ಯಾಯಗಳು ಕಾರ್ಪೊರೇಟ್ ಜಗತ್ತಿನ ಕಿರು ಪರಿಚಯ ಮಾಡುವುದರೊಂದಿಗೆ, ಬರವಣಿಗೆಯ ನಿಖರ, ಆಕರ್ಷಕ ಶೈಲಿಯ ಪರಿಚಯವನ್ನೂ ಮಾಡುತ್ತವೆ. ಕಾದಂಬರಿಯುದ್ದಕ್ಕೂ ಸಂಭಾಷಣೆಗಳು , ಸನ್ನಿವೇಶಗಳ ವಿವರಣೆಗಳು , ಎಲ್ಲವೂ ತುಂಬಾ ನೈಜವಾಗಿ ಮೂಡಿ ಬಂದಿವೆ. .
ಮತ್ತಷ್ಟು ಓದು 
ಜಗತ್ತಿನ ಪ್ರಶ್ನೆಗಳಿಗೆ ನಿರುತ್ತರ ಕೊರಿಯ
– ರೋಹಿತ್ ಚಕ್ರತೀರ್ಥ
ಫೆಬ್ರವರಿ 12, 2013. ಮಂಗಳವಾರ. ದೊಡ್ಡಣ್ಣ ಅಮೆರಿಕದ ಅಧ್ಯಕ್ಷ ಒಬಾಮ ಟಿವಿಗಳಲ್ಲಿ ಕಾಣಿಸಿಕೊಂಡು, “ಈ ಪ್ರಯತ್ನ ಕೂಡಲೇ ನಿಲ್ಲಬೇಕು. ಇಲ್ಲವಾದರೆ ತಕ್ಕ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ” ಅಂತ ಘೋಷಿಸಿದ್ದೇ ತಡ, ಒಂದರ ಹಿಂದೊಂದರಂತೆ ಘೋಷಣೆ, ಬೆದರಿಕೆಗಳ ಸುರಿಮಳೆ. ಜಪಾನ್, ದಕ್ಷಿಣ ಕೊರಿಯ, ರಷ್ಯ, ಇಂಗ್ಲೆಂಡ್, ಫ್ರಾನ್ಸ್, ಸಿಂಗಪುರ, ಮಲೇಷಿಯಾದಂತಹ ಹತ್ತುಹಲವಾರು ದೇಶಗಳ ಅಧ್ಯಕ್ಷರುಗಳು ತಮ್ಮ ಹೇಳಿಕೆಗಳನ್ನು ತಾರಕಸ್ವರದಲ್ಲಿ ಕೂಗಿ ಹೇಳಲು ಕ್ಯೂ ನಿಂತುಬಿಟ್ಟರು. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾ ಕಿ ಮೂನ್ ಕೂಡ, “ನಿಮ್ಮ ಪ್ರಯೋಗಗಳನ್ನು ಕೂಡಲೇ ಸ್ಥಗಿತಗೊಳಿಸಿ. ಇಲ್ಲವಾದರೆ ಪ್ರತಿರೋಧ ಎದುರಿಸಿ” ಅಂತ ಘಂಟಾಘೋಷವಾಗಿ ಹೇಳಿದರು. ಹೆಗಲಿಗೆ ಕೈಹಾಕಿ ಕುಶಲ ಕೇಳುವ ಗೆಳೆಯ ಚೀನಾ ಕೂಡ (ಒಳಗೊಳಗೆ ಬೆಂಬಲಿಸಿದರೂ), ಈ ಪರೀಕ್ಷೆಗಳನ್ನೆಲ್ಲ ಕೈಬಿಟ್ಟು ಸುಮ್ಮನಿದ್ದರೆ ಏನು ನಷ್ಟ? ಅಂತ ಆಪ್ತಸಲಹೆ ಕೊಟ್ಟು ಕೈತೊಳೆದುಕೊಂಡಿತು.
ಇಷ್ಟೆಲ್ಲ ಅಧ್ವಾನಕ್ಕೆ ಕಾರಣವಾಗಿದ್ದು ಉತ್ತರ ಕೊರಿಯ ಎಂಬ ದೇಶ, ತಾನೇ ಹೇಳಿಕೊಂಡಂತೆ – ಬಹಳ ಸಣ್ಣಪ್ರಮಾಣದಲ್ಲಿ ನಡೆಸಿದ, ಮಾಪಕಗಳಲ್ಲಿ 4.9ರಷ್ಟು ದಾಖಲಾದ ನ್ಯೂಕ್ಲಿಯರ್ ಪರೀಕ್ಷೆ. 2006ರ ಪರೀಕ್ಷೆಯ ಹತ್ತುಪಟ್ಟು, 2009ರ ಪರೀಕ್ಷೆಯ ಎರಡು ಪಟ್ಟು ಶಕ್ತಿಶಾಲಿಯಾಗಿದ್ದ ಈ ಪರೀಕ್ಷೆಯಿಂದ ಉತ್ತರ ಕೊರಿಯ ಅಮೆರಿಕೆಗೆ ತನ್ನ ತಾಕತ್ತು ತೋರಿಸಲು ಹೊರಟಿತ್ತು. ಗಾಯದ ಮೇಲೆ ಗೀರೆಳೆದಂತೆ, ಪರೀಕ್ಷೆ ನಡೆಸಿದ ಮೇಲೆ, “ನಮ್ಮ ವ್ಯವಹಾರಗಳಲ್ಲಿ ಪದೇಪದೇ ಮೂಗು ತೂರಿಸುವ ಅಮೆರಿಕಕ್ಕೆ ನಾವು ಕೊಡುತ್ತಿರುವ ಎಚ್ಚರಿಕೆ ಇದು. ಅದರ ಹಸ್ತಕ್ಷೇಪ ನಿಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಪರೀಕ್ಷೆಗಳನ್ನು ನಡೆಸುತ್ತ ಹೋಗುತ್ತೇವೆ” ಅಂತ ಹೇಳಿಕೆ ಕೂಡ ಬಿಡುಗಡೆ ಮಾಡಿತು. ಅಚ್ಚರಿಯ ಮಾತೆಂದರೆ “ಜಗತ್ತಿನ ಸೂಪರ್ ಪವರ್ ನಾಯಕನಾಗಿ ಹೊರಹೊಮ್ಮುತ್ತಿರುವ ನಮ್ಮ ದೇಶದ ಯುದ್ಧ ಸಿದ್ಧತೆಗೆ ಹೆದರಿ ಬಾಲಮುದುರಿ ಕುಂಯ್‍ಗುಡುತ್ತಿರುವ ಅಮೆರಿಕ” ಅಂತ ರಾಷ್ಟ್ರೀಯ ಚಾನೆಲ್‍ನಲ್ಲಿ ಬಂದ ಸುದ್ದಿಯನ್ನು ನೋಡಿ ಪ್ಯೊಂಗ್‍ಯಾಂಗಿನ ಬೀದಿಗಳಲ್ಲಿ ಜನ ಸಂಭ್ರಮಿಸಿ ಕುಣಿದರು! ದೇಶಪ್ರೇಮ ಎನ್ನುತ್ತೀರೋ, ಹಿಸ್ಟೀರಿಯ ಎನ್ನುತ್ತೀರೋ!
ಈ ಎಲ್ಲ ರಾಜಕೀಯ ಪ್ರೇರಿತ ರಾದ್ಧಾಂತ, ಗೊಂದಲಗಳನ್ನು ಬದಿಗಿಟ್ಟು ಈ ಕತೆಯ ಸುತ್ತ ಹಬ್ಬಿಬೆಳೆದ ಹುತ್ತವನ್ನು ತಡವುತ್ತ ಹೋದರೆ, ಕೊನೆಗೆ ನಮಗೆ ಹಾವು ಗೋಚರಿಸಬಹುದೋ ಏನೋ! ಹಾಗಾಗಿ, ಉತ್ತರ ಕೊರಿಯದ ಸುತ್ತ ಸುಮ್ಮನೆ ನಿಷ್ಪಕ್ಷಪಾತವಾಗಿ ಒಂದು ಸುತ್ತು ಹಾಕ್ಕೊಂಡು ಬರೋಣ, ಬನ್ನಿ. ಮತ್ತಷ್ಟು ಓದು 
ಪ್ರತಿಭಾಪಲಾಯನ
– ಮಯೂರ ಲಕ್ಷ್ಮಿ
ಅದೊಂದು ಕಾಲದಲ್ಲಿ ನಳಂದಾ, ತಕ್ಷಶಿಲಾ ಮುಂತಾದ ವಿಶ್ವವಿಖ್ಯಾತ ವಿದ್ಯಾಲಯಗಳಿಂದ ಪ್ರಸಿದ್ಧಿಹೊಂದಿ ಎಲ್ಲೆಡೆಯಿಂದ ಎಲ್ಲರನ್ನೂ ಆಕರ್ಷಿಸಿ ಜ್ಞಾನದೇಗುಲವೆನಿಸಿದ್ದ ಭಾರದ ದೇಶವು ತನ್ನ ಹಿಂದಿನ ವೈಭವಗಳನ್ನು ಮರೆತುಹೋಗುವ ಸ್ಥಿತಿ ತಲುಪಿದ್ದಾದರೂ ಏಕೆ? ಯಾವುದೇ ಒಂದು ದೇಶವು ಆರ್ಥಿಕವಾಗಿ ಸಧೃಢವೆನಿಸಿಕೊಳ್ಳಲು ದೇಶದ ಬೆನ್ನೆಲುಬಾದ ಯುವಶಕ್ತಿಯಿಂದ ಮಾತ್ರ! ಜಗತ್ತಿಗೆ ಅರಿವು ನೀಡುವ ಜ್ಞಾನದೇಗುಲವೆನಿಸಿದ್ದ ಭಾರತ ಮೆಕಾಲೆಯ ಆಗಮನದಿಂದ ತನ್ನ ಮೌಲ್ಯಾಧರಿತ ಶಿಕ್ಷಣ ವ್ಯವಸ್ಥೆಯನ್ನೇ ಕಳೆದುಕೊಂಡಿತು.
ಭಾರತವು ವಿಶ್ವಮಾನ್ಯವೆನಿಸಿದ್ದು ತನ್ನ ಜ್ಞಾನ-ವಿಜ್ಞಾನ, ತಂತ್ರಜ್ಞಾನಗಳಿಂದ ಪ್ರಪಂಚಕ್ಕೆ ನೀಡಿದ ಕೊಡುಗೆಯಿಂದ.ಕಾಲಕ್ರಮೇಣ ಜಾಗತೀಕರಣದೊಂದಿಗೆ ಬದಲಾಗತೊಡಗಿದ ಭಾರತವು ಎದುರಿಸಿದ ಆರ್ಥಿಕ ಸಮಸ್ಯೆಗಳಲ್ಲಿ ಅತಿ ಮುಖ್ಯವಾದ ಸಮಸ್ಯೆಯಾಗಿದ್ದು ಪ್ರತಿಭಾ ಪಲಾಯನ. ಅಂದಿನ ಸ್ವಾಮೀ ವಿವೇಕಾನಂದರಿಂದ ಇಂದಿನ ಅಬ್ದುಲ್ ಕಲಾಂರವರು ನಂಬಿರುವುದು ಸಧೃಢ ಭಾರತದ ನಿರ್ಮಾಣದ ಕನಸು ಸಾಕಾರಗೊಳ್ಳಬೇಕಾಗಿರುವುದು ಈ ದೇ±್ನುದ ಯುವಶಕ್ತಿಯಿಂದ ಎನ್ನುವ ಭರವಸೆ! ಅದರೆ ಭಾರತವನ್ನು ಇನ್ನೈದು ವರ್ಷಗಳಲ್ಲಿ ಮುಂದವರಿದ ದೇಶವನ್ನಾಗಿಸುವ ಹೊಣೆ ಹೊತ್ತಿರುವ ನಮ್ಮ ಯುವಶಕ್ತಿ ವಿದೇಶಗಳಲ್ಲಿ ಪೋಲಾಗುತ್ತುರುವುದು ದುಃಖದ ವಿಚಾರ.
ಕಳೆದ ಇಪ್ಪತ್ತು ವರ್ಷಗಳಿಂದೀಚೆಗೆ ಉನ್ನತ ಶಿಕ್ಷಣ ಮತ್ತು ವೃತ್ತಿಗಳನ್ನರಸಿ ಅಮೇರಿಕಾ, ಇಂಗ್ಲೆಂಡ್, ಫ್ರಾನ್ಸ್ ಮುಂತಾದ ದೇಶಗಳಿಗೆ ವಲಸೆ ಹೋಗಿ ಹಿಂದಿರುಗಿ ಬಾರದಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದು ಭಾರತದ ಅಭಿವೃದ್ಧಿಯ ನಿಟ್ಟಿನಲ್ಲಿ ಮಾರಕವೇ.ಈ ಪ್ರತಿಭಾ ಪಲಾಯನವು ಮುಂದುವರಿದ ರಾಷ್ಟ್ರಗಳಿಗೆ ವರವಾದರೆ ಭಾರತದ ಮಟ್ಟಿಗೆ ಶಾಪವೇ ಸರಿ! ಭಾರತದಲ್ಲಿ ನಮ್ಮ ವ್ಯಕ್ತಿ ಸಂಪನ್ಮೂಲ ನಮ್ಮ ಆಧಾರಸ್ತಂಭ, ನಮ್ಮ ವ್ಯಕ್ತಿ-ಶಕ್ತಿಯನ್ನು ಕಳೆದುಕೊಳ್ಳುವುದು ಮುಂದಿನ ಅಭಿವೃದ್ಧಿಯ ದೃಷ್ಟಿಯಲ್ಲಿ ಆತಂಕದ ವಿಚಾರ.ನಮ್ಮ ಭಾರತೀಯ ಮನಸ್ಥಿತಿಯೂ ವಿಚಿತ್ರ, ಸಣ್ಣ ಪುಟ್ಟದ್ದಕ್ಕೂ ದೇಶಭಕ್ತಿಯನ್ನು ಮೆರೆಯುವುದೇ ನಮ್ಮ ಸಹಜ ಗುಣ. ನಮ್ಮ ದೇಶದ ಮೂಲ ವ್ಯಕ್ತಿಗಳು ಮತ್ತೆಲ್ಲೋ ಮಿಂಚಿ ಸುದ್ದಿಯಾದ ವಿಚಾರಗಳನ್ನೇ ಮತ್ತೆ ಮತ್ತೆ ಮೆಲುಕು ಹಾಕಿ ಸುದ್ದಿಯಾಗಿಸುತ್ತೇವೆ.
ಹ್ಯಾಮ್ ರೇಡಿಯೋ
– ಭರತೇಶ ಅಲಸಂಡೆಮಜಲು
ಜೀವನವೆಷ್ಟೇ ಸುಖ ನೆಮ್ಮದಿಯಿಂದಿದ್ದರೂ ಜೀವನದ ಸೃಜನಾತ್ಮಕತೆಗೆ ಗೊಬ್ಬರವ ನೀಡಿ ಸಮಯದ ಸದುಪಯೋಗದ ಜೊತೆಗೆ ಮನೋಚೈತನ್ಯ, ಮನೋವಿಕಾಸಕ್ಕೆ ದ್ರವ್ಯವಾಗಿ ಪೋಷಿಸುವುದು ನಮ್ಮ ಹವ್ಯಾಸಗಳು. ಹೌದು ವೈಜ್ಞಾನಿಕ ಹವ್ಯಾಸಗಳಲ್ಲಿ ಹ್ಯಾಮ್ ರೇಡಿಯೋವು ಒಂದು. ಇದು ರೇಡಿಯೋ ಸಾಧನದ ಮೂಲಕ ವಿಶ್ವ ಗೆಳೆತನವನ್ನು ಸಾಧಿಸುವುದು, ಭಾಷೆ, ದೇಶ, ಲಿಂಗ, ಧರ್ಮ,ಅಂತಸ್ತು ಮೀರಿ ಸಭಿರುಚಿಯ ಅಪರಿಚಿತರನ್ನು ಸ್ನೇಹಿತರನ್ನಾಗಿಸುವುದು. ವ್ಯಕ್ತಿಗತ, ಸಮೂಹ ಅಥವಾ ಸಂಸ್ಥೆಯೊಂದು ತನ್ನ ಸ್ವಂತ ಸ್ಥಾಪಿತ ರೇಡಿಯೋ ನೆಲೆಯಿಂದ ಮತ್ತೊಂದು ರೇಡಿಯೋ ಹವ್ಯಾಸಿಯೊಂದಿಗೆ ಸಂಪರ್ಕ ಸಾಧಿಸಿ ಸ್ನೇಹ ಬಯಸುವ ಹವ್ಯಾಸಿಗಳ ಬಳಗ ಅಂದರೆ ನಮ್ಮ ರೇಡಿಯೋದಿಂದ ಗೆಳೆಯನ ರೇಡಿಯೋಗೆ ಕರೆ ಮಾಡುವುದು.
ಇದು ದ್ವಿಮುಖಿ ಸಂವಹನ ಮಾಧ್ಯಮ ಇದರಲ್ಲಿ ಒಂದು ಪ್ರಸರಕವಾದರೆ(Transmitter) ಮತ್ತೊಂದು ಪಡೆಯಕ(Receiver) ಪ್ರತಿಯೊಬ್ಬ ಹವ್ಯಾಸಿಯು ತನ್ನದೇ ಅದ ಕರೆ ಗುರುತು ಸಂಖ್ಯೆ ಹೊಂದಿರುತ್ತಾನೆ. ಇದು ವ್ಯಕ್ತಿಗತ ಮನರಂಜನೆ, ಹಾಸ್ಯ, ವಾಣಿಜ್ಯೇತರ ಸಂದೇಶ, ನಿಸ್ತಂತು ಪ್ರಯೋಗ, ನಿಶ್ಚಿತವರದಿಗಾರಿಕೆ, ಹವಾಮಾನ, ವಾಹನ ಒತ್ತಡ, ತುರ್ತು ಸಂದೇಶ ರವಾನೆ, ಸ್ವತರಬೇತಿ, ಚರ್ಚೆ, ಸಂವಾದ ಮೂಲಕ ಸ್ವಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುವ ಹವ್ಯಾಸಗಳಲ್ಲೊಂದು. ಇತರ ಎಲ್ಲಾ ದೂರ ಸಂಪರ್ಕ ಮಾಧ್ಯಮಗಳು ನಿಷ್ಕ್ರಿಯಗೊಂಡಾಗ ಅತ್ಯುಪಯೋಗವಾಗುವ ಎಕೈಕ ಸಂಪರ್ಕ ಸಾಧನವೆಂಬ ಹೆಗ್ಗಳಿಕೆಯು ಇದಕ್ಕಿದೆ.
ಭೂಪಂಕ, ಸುನಾಮಿ, ಚಂಡಮಾರುತ, ಪ್ರವಾಹ ಮೊದಲಾದ ನೈಸರ್ಗಿಕ ಅವಗಘಗಳ ಸಂದರ್ಭದಲ್ಲಿ ಎಲ್ಲ ಸಂಪರ್ಕ ಸಾಧನಗಳು ನೆಲಕಚ್ಚಿದಾಗ ಯಾವುದೇ ಮಾಧ್ಯಮಗಳ ಹಂಗಿಲ್ಲದೇ ಪೋಲಿಸ್, ಮಿಲಿಟರಿ ವ್ಯವಸ್ಥೆಗಳ ಜೊತೆ ಕೈಜೋಡಿಸಿ ಮಾಹಿತಿ ಕಲೆಹಾಕಿ ಸಾಮಾನ್ಯರ ಪಾಲಿನ ಬಂಧುವಾಗಿ ಸಹಾಯ ಮಾಡಬಲ್ಲುದು.
ಬಡವ ಯಾರು ?
– ಮಹೇಶ ಹುಂಡೆಕಾರ್
ಸಹಾಯಕ ಪ್ರಾಧ್ಯಾಪಕ,ಜಿ. ಎನ್. ಡಿ. ಇಂಜಿನಿಯರಿಂಗ್ ಕಾಲೇಜ,ಬೀದರ್
ಬಡವನಾದವನು ಧನಿಕನಿಗೆ ದಿನಾ ತನ್ನ ಅಸಲಿನ ಬಡ್ಡಿ ಕೊಟ್ಟು ಬದುಕುತ್ತಾನೆ, ಹಾಗೆಯೆ ಧನಿಕನು ದಿನಾ ಬಡ್ಡಿ ಎನ್ನುತ್ತಾ ಸಾಯುತ್ತಾನೆ. ದುಡ್ಡು ಪಡೆದವನಿಗೆ ಅಸಲು ಮತ್ತು ಬಡ್ಡಿ ಹೊಂದಿಸುವುದಷ್ಟೆ ಕೆಲಸ ಆದರೆ ಧನಿಕನಿಗೆ ಬಡ್ಡಿ ಪಡೆದ ಮೇಲೆ ಅದರ ಲೆಕ್ಕದ ಕೆಲಸ ಕೂಡ. ಒಂದರ್ಥದಲ್ಲಿ ಬಾಳಿ ಬದುಕುವವನು ಬಡವನೆ ಹೊರತು ಧನಿಕನಲ್ಲ.ಇಲ್ಲದ ಚಿಂತೆ ಮಾಡಿ ಬರದ ಕಾಯಿಲೆಗಳನೆಲ್ಲಾ ಬರಮಾಡಿಕೊಂಡು,ಬಡ್ಡಿ ಪಡೆದ ಹಣವು ಗುಳಿಗೆಗಳಿಗೆ ಮೀಸಲಿಟ್ಟು, ಹಣದ ಲೆಕ್ಕ ಮಾತ್ರ ಮಾಡುತ್ತ ಹಾಸಿಗೆ ಹಿಡಿದು ಕೂತಿದ್ದಾನೆ ನಮ್ಮ ಕಥಾನಾಯಕ ತಿಮಯ್ಯಸೆಟ್ಟರು ಜೊತೆಗೆ ಜೀವದ ಗೆಳೆಯರಾದ ಗುಣಲಿಂಗ ಹಾಗೂ ಶಾಂತರೂಪರು ಆಸಿನರಾಗಿದ್ದರೆ.ನಮ್ಮ ತಿಮ್ಮಯ್ಯಸೆಟ್ಟರ ಭಾರಿ ವಿಚಾರಗಳು ಮತ್ತು ಅದಕ್ಕೆ ಪೂರಕವಾಗಿ ತನ್ನ ಸುತ್ತಲಿನ ಪರಿಸರವನ್ನು ತಾನೆ ನಿರ್ಮಿಸಿಕೊಳ್ಳುತಿದ್ದ ಏಕೆಂದರೆ ಆ ಬಡಾವಣೆಯಲ್ಲಿ ತಾನೆ ಶ್ರೀಮಂತ “ಹಣದಲ್ಲಿ” ಹಾಗೆಯೆ ಅದರ ಮಹಿಮೆಯಿಂದ ಮೆರೆಯತೊಡಗಿದ.ಅನುಕಂಪದ ಆಧಾರದ ಮೇಲೆ ಸರಕಾರಿ ಕೆಲಸ ಗಿಟ್ಟಿಸಿಕೊಂಡು ಬಹಳ ಚಿಕ್ಕ ವಯಸ್ಸಿನಲ್ಲೇ ದುಡ್ಡಿನ ಹುಚ್ಚು ಆಡರಿಸಿಬಿಟ್ಟಿತು. “ದುಡ್ಡು ಜೀವನಕ್ಕೆ ಬಹಳ ಅಗತ್ಯ, ಆದರೆ ದುಡ್ಡೆ ಜೀವನವಲ್ಲ” ನಮ್ಮ ತಿಮ್ಮಯ್ಯಸೆಟ್ಟರದು ದುಡ್ಡು ಒಂದೆ ಬೇಕು ಜೀವನಕ್ಕೆ ಎಂದು ಊರೆಲ್ಲ ಹಲಗೆ ಹೋಡಿದು ಸಾರುತ್ತಿದ್ದರು.
ಹರಟೆ ಕಟ್ಟೆ: ಹುಣಿಸೆಕಾಯಿಗೆ ನಲ್ಲಿಕಾಯಿ ಸಾಕ್ಷಿ
– ಸುದರ್ಶನ ರಾವ್
“ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷೀನೋ , ಇಲ್ಲಾ… ಓತಿಕ್ಯಾಥಕ್ಕೆ ಬೇಲಿ ಸಾಕ್ಷೀನೋ ? ಇವೆರೆಡರಲ್ಲಿ ಅನಂತಮೂರ್ತಿ ಮತ್ತು ಕಲಬುರ್ಗಿ ಇಬ್ಬರ ಕಾಂಬಿನೇಷನ್ಗೆ ಚೆನ್ನಾಗಿ ಹೊಂದಿಕೆಯಾಗುವ ಗಾದೆ ಯಾವುದು?” ಎಂದು ವಿಜಯ ಕೇಳ್ದ. ಕಾಫಿ ಕುಡಿಯೋಣ ಬನ್ರೋ ಅಂತ ಕರೆದು, ಈಗ ನೋಡಿದ್ರೆ ತಲೆ ಕೆರಕೊಳ್ಳೋ ಪ್ರಶ್ನೆ ಕೇಳ್ತಾನಲ್ಲಾ ಅಂತ ಸೀನ, ಕಿಟ್ಟ, ಜಗ್ಗು, ಪುಟ್ಟ ಮತ್ತು ಸಂಜಯರಿಗೆ ಅನ್ನಿಸದೇ ಇರಲಿಲ್ಲ. ಇದೇನೋ ಮಸಲತ್ತು ಮಾಡ್ತಾ, ಯಾವ್ದೋ ಪ್ರಶ್ನೆ ಕೇಳಿ ಕಾಫಿ ದುಡ್ಡನ್ನು ಯಾರ್ದಾದ್ರೂ ತಲೆಗೆ ಕಟ್ಟೋ ಹುನ್ನಾರ ಮಾಡುತ್ತಿದ್ದಾನೆಂದು ಅವರಿಗೆ ಸಂಶಯವಾಯ್ತು. ಕೇಳೇ ಬಿಟ್ರು, “ಅದೆಲ್ಲಾ ಏನಿಲ್ಲ. ಇವತ್ತು ಕಾಫೀ ಖರ್ಚು ನನ್ನದೇ” ಅಂದ ವಿಜಯ.
ಉದ್ಧಾಮ ಸಾಹಿತಿ ಅನ್ನಿಸಿಕೊಂಡಿದ್ದ ಅನಂತಮೂರ್ತಿ ಬಾಲ್ಯದಲ್ಲೋ, ತಾರುಣ್ಯದಲ್ಲೋ ದೇವರ ಇರುವನ್ನು ಅಲ್ಲಗಳೆಯಲು, ತನಗೆ ತಾನೇ ಸತ್ಯದ ಸಾಕ್ಷಾತ್ಕಾರಕ್ಕೆ ದೇವರ ಮೂರ್ತಿಯ ಮೇಲೆ ಉಚ್ಚೆ ಮಾಡಿದ್ದು ಹಾಗೂ ಸಂಶೋಧಕ, ಪ್ರಾಧ್ಯಾಪಕ ಅನ್ನಿಸಿಕೊಂಡ ಕಲಬುರ್ಗಿ ಅದನ್ನು ಜಗಜ್ಜಾಹೀರು ಮಾಡಿದ್ದು,ಇದರಿಂದ ಹಿಂದೂ ಆಸ್ತಿಕವರ್ಗ ಕ್ರೋಧಗೊಂಡಿದ್ದು, ನಾಸ್ತಿಕ ವರ್ಗ ಪುಳಕಿತಗೊಂದಿದ್ದು, ಸಮಾಜದಲ್ಲಿ ಕೋಲಾಹಲ ಮೂಡಿದ್ದು, ಪತ್ರಿಕೆಗಳಲ್ಲಿ ಚರ್ಚೆಗೆ ಗ್ರಾಸವಾಗಿ ಪರಸ್ಪರರ ಮೇಲೆ ಕೆಸರೆರೆಚಾಟ ನಡೆದಿದ್ದು ಅವರಿಗೆ ಗೊತ್ತಿಲ್ಲದ್ದೇನಾಗಿರಲಿಲ್ಲ. ಇದನ್ನು ಚರ್ಚೆಗೆ ಎಳೆಯಲು ವಿಜಯ ಸಂಚು ನಡೆಸಿದ್ದ.
ಚರ್ಚೆಗೆ ವೇದಿಕೆ ಸಿದ್ಧಮಾಡಲು ವಿಜಯ ವಿಷಯದ ಪರಿಚಯ ಮಾಡಿದ: ಈಗ ಏನಪ್ಪಾ ಅಂದ್ರೆ,,,,
ಮತ್ತಷ್ಟು ಓದು 
ಹೋರಾಟದ ಹಾದಿ : ಇದು ಪ್ರಾಮಾಣಿಕ ಬದುಕಿನ ಅನಾವರಣ
– ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ
ಎಚ್.ನರಸಿಂಹಯ್ಯನವರದು ನಾನು ಅತ್ಯಂತ ಗಾಢವಾಗಿ ಪ್ರೀತಿಸುವ ವ್ಯಕ್ತಿತ್ವ. ನನ್ನ ಕೆಲವು ಲೇಖನಗಳಲ್ಲಿ ಅವರ ವ್ಯಕ್ತಿತ್ವದ ಒಂದಿಷ್ಟು ಮುಖಗಳನ್ನು ಉದಾಹರಣೆಯಾಗಿ ಬಳಸಿಕೊಂಡಿದ್ದೇನೆ. ಬದುಕೆಂದರೆ ಅದು ಹೇಗಿರಬೇಕೆಂದು ಪ್ರಭಾವ ಬೀರುವಷ್ಟರ ಮಟ್ಟಿಗೆ ಎಚ್.ನರಸಿಂಹಯ್ಯನವರು ತಮ್ಮ ಬದುಕನ್ನು ಬದುಕಿದವರು. ಇಂಥ ನರಸಿಂಹಯ್ಯನವರ ಬದುಕನ್ನು ಇಡೀಯಾಗಿ ಓದಬೇಕೆನ್ನುವ ನನ್ನ ಹಲವು ವರ್ಷಗಳ ಮನೋಭಿಲಾಷೆ ಇತ್ತೀಚಿಗೆ ತಾನೆ ಈಡೇರಿತು. ಅವರ ಆತ್ಮಕಥೆ `ಹೋರಾಟದ ಹಾದಿ’ ಪುಸ್ತಕವನ್ನು ಹುಡುಕಿ ಸೋತಿದ್ದೆ. ಅವರ ಕುರಿತು ಒಂದೆರಡು ಸಾಲು ಪುಸ್ತಕದಲ್ಲೊ ಅಥವಾ ಪತ್ರಿಕೆಯಲ್ಲೊ ಕಾಣಿಸಿದರೆ ಎಚ್ಚೆನ್‍ರ ಸಮಗ್ರ ಬದುಕನ್ನು ಓದಬೇಕೆಂದು ಮನಸ್ಸು ಕಾತರಿಸುತ್ತಿತ್ತು. ಕೊನೆಗೊಂದು ದಿನ ನನ್ನ ಮನಸ್ಸಿನ ಕಾತರತೆಯನ್ನು ಅರ್ಥ ಮಾಡಿಕೊಂಡವರಂತೆ ಹಿತೈಷಿಯೂ ಮತ್ತು ಮಿತ್ರರೂ ಆದ ಶ್ರೀ ಪಿ.ಎನ್.ಸಿಂಪಿ ಅವರು ಓದಲು ಪುಸ್ತಕವೊಂದನ್ನು ಕೈಗಿತ್ತರು. ಬಿಳಿಯ ರಕ್ಷಾ ಕವಚವನ್ನು ಧರಿಸಿದ್ದ ಆ ಪುಸ್ತಕದ ಹೆಸರು ಏನಿರಬಹುದೆಂದು ಶೀರ್ಷಿಕೆ ಪುಟದ ಮೇಲೆ ಕಣ್ಣು ಹಾಯಿಸಿದೆ. ನಿಜ ಹೇಳುತ್ತಿದ್ದೇನೆ ಒಂದು ಕ್ಷಣ ಮೈಯಲ್ಲಿ ವಿದ್ಯುತ್ ಸಂಚಾರವಾದ ಅನುಭವ. ಪುಸ್ತಕವನ್ನು ಕೈಯಲ್ಲಿ ಹಿಡಿದ ಆ ಸಮಯ ಕೋಟಿ ರೂಪಾಯಿ ಕೊಟ್ಟರೂ ಆಗದ ಸಂತಸ. ಯಾವ ಪುಸ್ತಕವನ್ನು ಓದಬೇಕೆಂದು ಹಲವು ವರ್ಷಗಳಿಂದ ಕಾತರಿಸುತ್ತಿದ್ದೇನೊ ಅದು ಅನಿರೀಕ್ಷಿತವಾಗಿ ಮತ್ತು ಅನಾಯಾಸವಾಗಿ ನನ್ನ ಕೈ ಸೇರಿತ್ತು. ರೂಢಿಯಂತೆ ರಾತ್ರಿಯ ನಿಶ್ಯಬ್ಧ ಮೌನದಲ್ಲಿ ಪುಸ್ತಕವನ್ನು ಓದಿದ್ದಾಯಿತು.
ಪುಸ್ತಕವೇನೊ ಓದಿಯಾಯಿತು. ಆದರೆ ಮೊದಲಿಗಿಂತಲೂ ಒಂದಿಷ್ಟು ಹೆಚ್ಚೆ ಎನ್ನುವಷ್ಟು ಎಚ್.ನರಸಿಂಹಯ್ಯನವರು ಗಾಢವಾಗಿ ಕಾಡಲಾರಂಭಿಸಿದರು. ಮನಸ್ಸು ಅವರ ಬದುಕಿನ ಸುತ್ತಲೇ ಗಿರಿಕಿ ಹೊಡೆಯ ತೊಡಗಿತು. ಕುಳಿತಲ್ಲಿ, ನಿಂತಲ್ಲಿ ಅವರ ಬದುಕಿನ ಚಿತ್ರಗಳೇ ಕಣ್ಮುಂದೆ ಸುಳಿಯ ತೊಡಗಿದವು. ವ್ಯಕ್ತಿಯೊಬ್ಬ ಹೇಗೆಲ್ಲ ಬದುಕಬೇಕೆನ್ನುವುದಕ್ಕೆ ಎಚ್ಚೆನ್ ಹೊಸ ವ್ಯಾಖ್ಯಾನ ಬರೆದಿದ್ದರು. ಅವರ ಬದುಕಿನ ಗಾಢ ಪ್ರಭಾವಳಿಯನ್ನು ಕೆಲವು ಜನರೊಂದಿಗಾದರೂ ಹಂಚಿಕೊಳ್ಳಬೇಕೆನ್ನುವುದು ಪುಸ್ತಕವನ್ನು ಓದಿದ ನಂತರದ ನನ್ನ ಮನಸ್ಥಿತಿಗೆ ಅನಿವಾರ್ಯವಾಗಿತ್ತು. ಅವರ ಬದುಕಿನ ಸರಳತೆ, ಪ್ರಾಮಾಣಿಕತೆ, ಬದ್ಧತೆ ಎಲ್ಲವನ್ನೂ ಅನಾವರಣಗೊಳಿಸಿದ `ಹೋರಾಟದ ಹಾದಿ’ ಕೃತಿಯನ್ನು ಲೇಖನವನ್ನಾಗಿಸಿ ತೆಗೆದುಕೊಂಡು ಬಂದಿದ್ದೇನೆ. ಓದಿ ನೋಡಿ ನಿಮಗೂ ಮೆಚ್ಚುಗೆಯಾಗಬಹುದು.
ಹೋರಾಟದ ಹಾದಿ: ಆತ್ಮ ಕಥೆ
ಕನ್ನಡ ಇವೆಂಟ್ಸ್
– ಕನ್ನಡ ಇವೆಂಟ್ಸ್ ತಂಡ
ಮಿತ್ರರೇ, ತಮಗೆಲ್ಲ ತಿಳಿದಿರುವಂತೆ ಪ್ರತಿದಿನ ಬೆಂಗಳೂರಿನಲ್ಲಿ, ನಾಟಕ, ನೃತ್ಯ, ಉಪನ್ಯಾಸ , ಪುಸ್ತಕ ಬಿಡುಗಡೆ ಕಾರ್ಯಕ್ರಮ ಗಳನ್ನು ಒಳಗೊಂಡಂತೆ ಹಲವಾರು ಕನ್ನಡ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಎಲ್ಲ ಕಾರ್ಯಕ್ರಮಗಳ ಮಾಹಿತಿಯನ್ನು ಒಂದು ವೇದಿಕೆಯಲ್ಲಿ ಹಂಚಿಕೊಳ್ಳುವುದರ ಮೂಲಕ ಆಸಕ್ತರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬಹುದು ಮತ್ತು ಆಸಕ್ತರೂ ಸಹ ತಮಗೆ ಇಷ್ಟವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಇಂತಹ ಕನ್ನಡ ಕಾರ್ಯಕ್ರಮಗಳ ಒಟ್ಟು ಮಾಹಿತಿಯ ಪಟ್ಟಿಯನ್ನು ನಿಮಗೆ ನೀಡುವುದಕ್ಕಾಗಿ ನಾವು; “ಕನ್ನಡ ಇವೆಂಟ್ಸ್” ಅನ್ನುವ ಫೆಸ್ ಬುಕ್ ಪುಟ ವೊಂದನ್ನು ಶುರು ಮಾಡಿದ್ದೇವೆ.
ನೀವು ನಿಮ್ಮ ಕಾರ್ಯಕ್ರಮದ ಮಾಹಿತಿಯನ್ನು ಅಥವಾ ಮಾಹಿತಿ ಇರುವ ಪೋಸ್ಟರ್ ನ್ನು ನಮಗೆ ಕಳುಹಿಸಿ ಕೊಟ್ಟರೆ, ನಮ್ಮ ಫೆಸ್ ಬುಕ್ ಪುಟದಲ್ಲಿ ನಿಮ್ಮ ಕಾರ್ಯಕ್ರಮದ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ.
**************************************************************************************************************
ನೀವು ನಮಗೆ ಕಳಿಸುವ ಮಾಹಿತಿ ಈ ರೀತಿ ಇರಲಿ ಮತ್ತಷ್ಟು ಓದು 
ವೈಜ್ಞಾನಿಕ ಮನೋಧರ್ಮ ಎಂದರೇನು?
– ರೋಹಿತ್ ಚಕ್ರತೀರ್ಥ
ನಮ್ಮ ಜಗತ್ತು ಎಷ್ಟು ವೈಜ್ಞಾನಿಕವಾಗಿ ಮುಂದೆ ಹೋಗುತ್ತಿದೆಯೋ ನಾವಷ್ಟೇ ಕಂದಾಚಾರಿಗಳಾಗಿ ಹಿಂದುಳಿಯಲು ಬಯಸುತ್ತಿದ್ದೇವೆ. ಕಂದಾಚಾರ ಎನ್ನುವ ಪದವನ್ನು ಕೇವಲ ಅರ್ಥಹೀನ ಆಚರಣೆ ಎಂಬುದಕ್ಕಷ್ಟೇ ಸೀಮಿತಗೊಳಿಸದೆ, ಮೌಢ್ಯ (ಅಜ್ಞಾನ), ಮೂಢನಂಬಿಕೆಗಳ ಮೇಲೆ ಅಚಲ ವಿಶ್ವಾಸ ಮತ್ತು ಕುರುಡುಭಕ್ತಿ, ತನ್ನದಲ್ಲದ ಯಾವ ಚಿಂತನೆಯನ್ನೂ ಒಪ್ಪದೆ ನಿರಾಕರಿಸುವುದು, ಹಾಗೆ ನಿರಾಕರಿಸಲು ವಿತಂಡವಾದ ಒಡ್ಡುತ್ತ ತನ್ನ ಮೂಗಿನ ನೇರಕ್ಕೆ ಕಾರಣಗಳನ್ನು ಕೊಡುವುದು, ವಿಜ್ಞಾನದ ಆಳಜ್ಞಾನ ಇಲ್ಲದಿರುವುದು, ವಿಜ್ಞಾನ ಗೊತ್ತಿದ್ದರೂ ಅರ್ಧಸತ್ಯಗಳನ್ನಷ್ಟೇ ಹೇಳುವುದು, ಒಂದೇ ವಿಷಯದ ಬಗ್ಗೆ ಎರಡುಮೂರು ಸಿದ್ಧಾಂತಗಳಿದ್ದಾಗ, ಅವುಗಳಲ್ಲಿ ಒಂದು ಮಾತ್ರ ನಿಜ ಎಂದು ಯಾವ ಪರೀಕ್ಷೆಗಳಿಲ್ಲದೆ ನಂಬುವುದು – ಇವೆಲ್ಲವೂ ಇರುವ ಒಂದು ಸಂಕೀರ್ಣ ಮನಸ್ಥಿತಿಗೆ ಸಮೀಕರಿಸಲು ಬಳಸಬಹುದಾದ ವಿಶಾಲಾರ್ಥದ ಪದವಾಗಿ ತೆಗೆದುಕೊಂಡಿದ್ದೇನೆ.
ಮೊದಲಿಗೆ “ವೈಜ್ಞಾನಿಕ” ಎಂದರೆ ಏನೆಂದು ನೋಡೋಣ. ವಿಜ್ಞಾನದ ತಳಹದಿ ಇರುವಂಥಾದ್ದು ವೈಜ್ಞಾನಿಕ. ವ್ಯಕ್ತಿಗೆ ಅಥವಾ ಸಮಾಜಕ್ಕೆ ಕೇವಲ ವೈಜ್ಞಾನಿಕ ದೃಷ್ಟಿಯೊಂದೇ ಇರಬೇಕು ಎನ್ನುವ ಯಾವ ನಿಬಂಧನೆಯೂ ಇಲ್ಲ. ವೈಜ್ಞಾನಿಕವಲ್ಲದ ಎಷ್ಟೋ ಸಂಗತಿಗಳು ನಮ್ಮ ಸುತ್ತಮುತ್ತ ಮತ್ತು ಜೀವನದಲ್ಲಿ ಇರಬಹುದು. ಉದಾಹರಣೆಗೆ ಸಾಹಿತ್ಯ. ಒಂದು ಒಳ್ಳೆಯ ಸಾಹಿತ್ಯ (ಇದು ದ್ವಿರುಕ್ತಿ. “ಸಾಹಿತ್ಯ” ಅಂದರೇನೇ “ಹಿತವನ್ನುಂಟುಮಾಡುವಂಥದ್ದು”!) ನಮ್ಮ ಮನಸ್ಸಿಗೆ ನೆಮ್ಮದಿ ಕೊಡುತ್ತದೆ; ಕೆಟ್ಟಸಾಹಿತ್ಯ ವ್ಯಕ್ತಿತ್ವದ ಮೇಲೆ ಋಣಾತ್ಮಕ ಪರಿಣಾಮ ಮಾಡುತ್ತದೆ ಎನ್ನುವುದನ್ನು ವೈಜ್ಞಾನಿಕವಾಗಿ ಪ್ರಯೋಗಗಳ ಮೂಲಕ ಸಾಧಿಸಬಹುದೇನೋ. ಆದರೆ, ಅದೆಲ್ಲವನ್ನು ಆಳವಾಗಿ ಅಭ್ಯಾಸ ಮಾಡಿ ಯಾರೂ ಸಾಹಿತ್ಯ ಬರೆಯುವುದಿಲ್ಲ. ಲೇಖಕ ಮತ್ತು ಓದುಗ – ವಿಜ್ಞಾನದ ಯಾವ ತಲೆಬಿಸಿ ಇಲ್ಲದೆ ಬರೆಯುವ ಮತ್ತು ಓದುವ ಕ್ರಿಯೆಯನ್ನು ಮಾಡಬಹುದು. ಹಾಗಾಗಿ, ಸಾಹಿತ್ಯ ವೈಜ್ಞಾನಿಕತೆಯ ಛತ್ರಿಯಡಿ ಬರಬೇಕಾಗಿಲ್ಲ. ಇನ್ನು, ನಂಬಿಕೆಗಳು – ಇವೂ ಅಷ್ಟೆ, ವೈಜ್ಞಾನಿಕವಾಗಿರಬೇಕಾಗಿಲ್ಲ. ಉದಾಹರಣೆಗೆ ದೀಪಾವಳಿಗೆ ಪಟಾಕಿ ಹೊಡೆಯುತ್ತೇವೆ; ಯುಗಾದಿಗೆ ಬೇವುಬೆಲ್ಲ ತಿನ್ನುತ್ತೇವೆ; ರಂಜಾನ್ ತಿಂಗಳು ಉಪವಾಸವಿರುತ್ತೇವೆ, ಕ್ರಿಸ್‍ಮಸ್‍ಗೆ ಸಾಂತಾಕ್ಲಾಸ್‍ನ ಆಟ ಆಡುತ್ತೇವೆ. ಇವೆಲ್ಲ ಮನುಷ್ಯ ತನ್ನನ್ನು ಖುಷಿಯಾಗಿಟ್ಟುಕೊಳ್ಳಲು ಅಥವಾ ಹಬ್ಬಕ್ಕೆ ವಿಶೇಷತೆಯ ಮೆರುಗು ಕೊಡಲು ಅಳವಡಿಸಿಕೊಂಡಿರಬಹುದಾದ ಆಚರಣೆಗಳು. ಇವನ್ನು ವೈಜ್ಞಾನಿಕತೆಯ ನೆಲೆಯಲ್ಲಿ ನೋಡಬೇಕಾಗಿಲ್ಲ. ದೇವರು – ಎಂಬ ಕಲ್ಪನೆ – ಇದೂ ಅಷ್ಟೆ. ಮನುಷ್ಯನಿಗೆ ಹಲವು ಸಹಸ್ರವರ್ಷಗಳಿಂದ ಸದಾ ಕಾಡುವ ಸಂಗತಿಯಾಗಿ ನಿಂತಿರುವ “ದೇವರು” ಎಂಬ ಪರಿಕಲ್ಪನೆಯನ್ನು ಕೂಡ ವಿಜ್ಞಾನದಡಿ ತರಬೇಕಾಗಿಲ್ಲ. ದೇವರು ಇದ್ದಾನೆ ಅಥವಾ ಇಲ್ಲ ಎನ್ನುವುದನ್ನು ಪ್ರೂವ್ ಮಾಡುವುದು ವಿಜ್ಞಾನದ ಗುರಿ ಅಲ್ಲ. ಒಂದು ಸಂಗತಿ ವಿಜ್ಞಾನದ ಪರಿಧಿಗೆ ಬರುವುದಿಲ್ಲ; ವೈಜ್ಞಾನಿಕ ಅಲ್ಲ ಎನ್ನುವುದರಿಂದಲೇ ಅದರ ಮೌಲ್ಯನಿರ್ಣಯ ಆಗಿಹೋಗುವುದಿಲ್ಲ. ತುಂಬ ಸರಳವಾಗಿ ಹೇಳಬೇಕೆಂದರೆ ವೈಜ್ಞಾನಿಕ ಅಲ್ಲದ್ದು ಅವೈಜ್ಞಾನಿಕ ಸರಿ. ಆದರೆ ನಾವಿಂದು ಕೊಟ್ಟಿರುವ ಮೂಢ, ಬುದ್ಧಿಯಿಲ್ಲದ ಎಂಬರ್ಥದಲ್ಲಿ ಅಲ್ಲ. ಮ್ಯಾರಥಾನ್ ಓಡುವ ಹಿಂದಿನ ದಿನ ಏನೇನು ಆಹಾರ ತೆಗೆದುಕೊಳ್ಳಬೇಕೆಂಬ ವಿಷಯದಲ್ಲಿ ವೈಜ್ಞಾನಿಕನಾದ ನಾನು, ಹಬ್ಬಕ್ಕೆ ಒಬ್ಬಟ್ಟು ತಿನ್ನುವ ವಿಚಾರ ಬಂದಾಗ ವಿಜ್ಞಾನದ ಬಗ್ಗೆ ತಲೆಕೆಡಿಸಿಕೊಳ್ಳದ ಅವೈಜ್ಞಾನಿಕನಾಗುತ್ತೇನೆ. ಮತ್ತಷ್ಟು ಓದು 





