ಶೇರು ಮಾರುಕಟ್ಟೆ : ಭಾಗ -೩
– ವೆಂಕಟೇಶ್ ಗುರುರಾಜ್
೧೯೭೭ರಲ್ಲಿ ನೀವು ೧,೦೦೦ ರೂಪಾಯಿಗಳಲ್ಲಿ ಇಂದಿರಾ ವಿಕಾಸ್ ಪತ್ರವನ್ನು ತೆಗೆದುಕೊಂಡು ಇಲ್ಲಿಯವರೆಗೆ ಅಂದರೆ ೨೦೧೨ರವರೆಗೆ ಇಟ್ಟುಕೊಂಡಿದ್ದರೆ ನಿಮ್ಮ ಹಣ ೧೯೮೨ರಲ್ಲಿ ದ್ವಿಗುಣವಾಗಿ ೨,೦೦೦, ೧೯೮೭ರಲ್ಲಿ ೪,೦೦೦, ೧೯೯೨ರಲ್ಲಿ ೮,೦೦೦, ೧೯೯೭ರಲ್ಲಿ ೧೬,೦೦೦, ೨೦೦೨ರಲ್ಲಿ ೩೨,೦೦೦, ೨೦೦೭ರಲ್ಲಿ ೬೪,೦೦೦, ೨೦೧೨ರಲ್ಲಿ ೧,೨೮,೦೦೦ ಸಾವಿರವಾಗುತ್ತಿತ್ತು. (ಸುಮಾರು ೧೪.೨೫% ಬಡ್ಡಿಯಂತೆ.) ೫ ವರ್ಷಗಳಲ್ಲಿ ನಿಮ್ಮ ಹಣ ದ್ವಿಗುಣವಾಗುತ್ತಿತ್ತು. ಮುಂದೆ ಅದನ್ನು ೫ ೧/೨ ವರ್ಷಕ್ಕೆ ಮಾರ್ಪಾಡು ಮಾಡಲಾಯಿತು. (ಇಂದಿರಾ ವಿಕಾಸ್ ಪತ್ರವನ್ನು ೧೯೯೬ನೆ ಇಸವಿಯಲ್ಲಿ ನಿಲ್ಲಿಸಿಬಿಟ್ಟತು ಕೇಂದ್ರ ಸರ್ಕಾರ.) ನೀವು ಅದೇ ಹಣವನ್ನು ಬ್ಯಾಂಕ್ ನಲ್ಲಿ ಇಟ್ಟಿದ್ದರೆ ನಿಮ್ಮ ಹಣ ದ್ವಿಗುಣವಾಗಿ ೧೯೮೪ ಮತ್ತು ೨ ತಿಂಗಳಲ್ಲಿ ೨,೦೦೦, ೧೯೯೧ ಮತ್ತು ೪ ತಿಂಗಳಲ್ಲಿ ೪,೦೦೦, ೧೯೯೮ ಮತ್ತು ೬ ತಿಂಗಳಲ್ಲಿ ೮,೦೦೦, ೨೦೦೫ ಮತ್ತು ೮ ತಿಂಗಳಲ್ಲಿ ೧೬,೦೦೦, ೨೦೧೨ ಮತ್ತು ೧೦ ತಿಂಗಳಲ್ಲಿ ಕೇವಲ ೩೨,೦೦೦ ರೂಪಾಯಿಗಳಾಗುತ್ತಿತ್ತು (ಅದು ಸುಮಾರು ೧೦% ಬಡ್ಡಿಯನ್ನು ನಿಮಗೆ ತಂದುಕೊಡುವಂತಿದ್ದರೆ.) ೭ ವರ್ಷ ೨ ತಿಂಗಳಲ್ಲಿ ನಿಮ್ಮ ಹಣ ದ್ವಿಗುಣವಾಗುತ್ತಿತ್ತು.
ಆದರೆ, ಅದೇ ೧,೦೦೦ ರೂಪಾಯಿಗಳನ್ನು ನೀವು ೧೯೭೭ರಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯಲ್ಲಿ ಹೂಡಿದ್ದರೆ ಈಗ ನಿಮ್ಮ ಬಳಿ ೭.೭೮ ಲಕ್ಷ ರೂಪಾಯಿ ಇರುತ್ತಿತ್ತು. ೧೯೭೭ರಲ್ಲಿ ರಿಲಯನ್ಸ್ ಕಂಪನಿಗಳ ೧೦೦ ಶೇರುಗಳ ಬೆಲೆ ೧,೦೦೦ ಇತ್ತು.
ಶೇರು ಮಾರುಕಟ್ಟೆ : ಭಾಗ -೨
– ವೆಂಕಟೇಶ್ ಗುರುರಾಜ್
ನಮ್ಮ ದೇಶದ ಗುಜರಾತಿಗಳು ಮತ್ತು ಮಾರ್ವಾಡಿಗಳು ಈ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವುದು ಹೆಚ್ಚಾಗಿ ಕಂಡುಬರುತ್ತದೆ. ನಮ್ಮ ಕನ್ನಡಿಗರು ಹೆಚ್ಚಾಗಿ ಬ್ಯಾಂಕ್/ಅಂಚೆ ಕಛೇರಿ ಗಳಲ್ಲಿ ನಿಶ್ಚಿತ ಠೇವಣಿಗಳಲ್ಲಿ ಹಣ ಇಟ್ಟು ಅವರು ಕೊಡುವ ೧೦-೧೧% ವಾರ್ಷಿಕ ಬಡ್ಡಿಗೆ ತೃಪ್ತಿಪಟ್ಟುಕೊಳ್ಳುತ್ತಾರೆ. ಇನ್ನು ಕೆಲವರು ಚಿನ್ನವನ್ನು ಒಡವೆ ರೂಪದಲ್ಲಿ ಇಟ್ಟುಕೊಂಡು ತಮ್ಮ ಕಷ್ಟ ಕಾಲದಲ್ಲಿ ಉಪಯೋಗಿಸಿಕೊಳ್ಳುತ್ತಾರೆ. ಮತ್ತೆ ಕೆಲವರು ಭೂಮಿಯ ಮೇಲೆ ಹಣವನ್ನು ವಿನಿಯೋಗಿಸುತ್ತಾರೆ. ಕನ್ನಡಿಗರು ಈ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸುವುದು ಬಹಳ ಕಡಿಮೆ. ಒಂದು ಜ್ಞಾನದ ಕೊರತೆಯಾದರೆ, ಮತ್ತೊಂದು ಹೆಚ್ಚಿನ ರಿಸ್ಕ್ ತೆಗೆದುಕೊಳ್ಳಲು ಹೆಚ್ಚಾಗಿ ಕನ್ನಡಿಗರು ಇಷ್ಟಪಡುವುದಿಲ್ಲ. ಆದ ಕಾರಣ ನಮ್ಮಲ್ಲಿ ಈ ಶೇರು ಮಾರುಕಟ್ಟೆಯ ಬಗ್ಗೆ ಕನ್ನಡದಲ್ಲಿ ಬಂದಿರುವ ಪುಸ್ತಕಗಳು ಬಹಳ ಕಡಿಮೆ. ಕೆಲವು ಪತ್ರಿಕೆಗಳು ಲೇಖನಗಳನ್ನು ಆಗಾಗ ಪ್ರಕಟಿಸುತ್ತವೆ. ಆದರೆ ಅದು ಬಹಳ ಕಡಿಮೆ. ನಮ್ಮ ಕನ್ನಡಿಗರು ಈ ಮಾರುಕಟ್ಟೆಯಿಂದ ದೂರ ಇರಲು ಇದೂ ಸಹ ಒಂದು ಕಾರಣವಿರಬಹುದು. ಆಂಗ್ಲ ಭಾಷೆಯಲ್ಲಿ ಈ ಮಾರುಕಟ್ಟೆಯ ಬಗ್ಗೆ ಸಂಭೃದ್ದ ಮಾಹಿತಿ ಇದೆ. ಗೊಗಲ್ ನಲ್ಲಿಯೂ ಸಹ ಅನೇಕ ಮಾಹಿತಿ ಪಡೆಯಬಹುದು.
ಪ್ರಪಂಚದ ೩ನೇ ಅತೀ ದೊಡ್ಡ ಶ್ರೀಮಂತ ವಾರನ್ ಬಫೆಟ್ ಶೇರು ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಹಣ ಸಂಪಾದಿಸಿರುವ ವ್ಯಕ್ತಿ. ಇವರ ಹೂಡಿಕೆ ಕಂಪನಿಯ ಹೆಸರು ” ಬರ್ಕ್ ಶೈರ್ ಹಾಥ್ ವೇ ’ ಇವರು ತಮ್ಮ ೧೩-೧೪ನೇ ವಯಸ್ಸಿನಲ್ಲಿ ಈ ಶೇರು ಮಾರುಕಟ್ಟೆಯ ವ್ಯವಹಾರದಲ್ಲಿ ಇಳಿದು, ” ಬಫೆಟ್ ಲೀ ” ಮುಂತಾದ ಕೆಲವು ಕಂಪನಿಗಳನ್ನೂ ಸೃಷ್ಟಿಸಿದ್ದಾರೆ. ಭಾರತದಲ್ಲಿ ಶೇರು ಮಾರುಕಟ್ಟೆಯ ರಾಜನೆಂದು ಪ್ರಸಿದ್ದಿಗೆ ಬಂದವರು ರಾಕೇಶ್ ಜುಂಜುನ್ ವಾಲ. ಇವರು ಅತಿ ದೊಡ್ಡ ಮಾರುಕಟ್ಟೆಯ ವಿಶ್ಲೇಷಕರು ಹಾಗೂ ನಮ್ಮ ಶೇರು ಮಾರುಕಟ್ಟೆಯ ದೊಡ್ದ ಹೂಡಿಕದಾರರಲ್ಲಿ ಒಬ್ಬರು.
ಶೇರು ಮಾರುಕಟ್ಟೆ : ಭಾಗ -೧
– ವೆಂಕಟೇಶ್ ಗುರುರಾಜ್
ಹಣ ಯಾರಿಗೆ ಬೇಡ? ಮನುಷ್ಯ ಹುಟ್ಟಿದಾಗಿನಿಂದ ಸಾಯುವ ವರೆಗೂ ಮತ್ತು ಅವನು ಸತ್ತಮೇಲೆ ಅವನ ಅಂತ್ಯಕ್ರಿಯಯನ್ನು ಮಾಡುವ ಅವನ ಮನೆಯವರಿಗೂ ಹಣ ಬೇಕೇಬೇಕು. ಒಂದೇ ಮಾತಿನಲ್ಲಿ ಹೇಳಬೇಕೆಂದರೆ ನಾಮಕರಣದಿಂದ ತಿಥಿಯವರೆಗೆ. ನಾವು ನೀವೆಲ್ಲರೂ ನಮ್ಮ ಜೀವಿತ ಅವಧಿಯಲ್ಲಿ ಹಣವನ್ನು ನಮ್ಮ ಇತಿಮಿತಿಯಲ್ಲಿ ಸಂಪಾದಿಸುತ್ತೇವೆ. ಕೆಲವರು ಉದ್ಯೋಗವನ್ನು ಮಾಡಿ, ಮತ್ತೆ ಕೆಲವರು ಸ್ವಂತ ಉದ್ಯೋಗವನ್ನು ಮಾಡಿ, ಮತ್ತೆ ಕೆಲವರು ವ್ಯಾಪಾರ ವಹಿವಾಟು ಮಾಡಿ, ಮತ್ತೆ ಕೆಲವರು ಹಣದಿಂದ ಹಣವನ್ನು ಸಂಪಾದಿಸುತ್ತಾರೆ. ಮೊದಲ ಮೂರು ನಮಗೆಲ್ಲರಿಗೂ ತಿಳಿದ ವಿಷಯವೇ ಆಗಿದೆ. ಕೊನೆಯದಾದ ಹಣದಿಂದ ಹಣವನ್ನು ಸಂಪಾದಿಸುವುದು ಹೇಗೆ ಎಂಬುದರ ಬಗ್ಗೆ ಸ್ವಲ್ಪ ಗಮನ ಕೊಡೋಣ. ಇದನ್ನು ಬಂಡವಾಳ ಹೂಡಿಕೆ ಎಂದೂ ಸಹ ಕರೆಯುತ್ತಾರೆ. ಬಂಡವಾಳ ಎಂದರೆ ಏನು ಎಂಬುದರ ಬಗ್ಗೆ ಸ್ವಲ್ಪ ಚಿಂತನೆಯನ್ನು ಮಾಡೋಣವೇ?
ಬಂಡವಾಳ ಹೂಡುವುದೆಂದರೆ ಜನಸಾಮಾನ್ಯರಲ್ಲಿ ಅದು ಲಕ್ಷ/ಕೋಟಿಗಳ ರೂಪದಲ್ಲಿ ಇರುತ್ತದೆ ಎಂಬ ತಪ್ಪು ಕಲ್ಪನೆ ಇದೆ. ಇದು ಸುಳ್ಳು. ಒಂದು ರೀತಿಯಲ್ಲಿ ಹೇಳಬೇಕೆಂದರೆ ಜನ ಸಾಮಾನ್ಯರೂ ಸಹ ಸ್ವಲ್ಪ ಮಟ್ಟಿನ ಬಂಡವಾಳ ಹೂಡಿಕೆದಾರರೇ. ಕೆಲವರು ತಮ್ಮ ಹೆಚ್ಚುವರಿ ಸಂಪಾದನೆಯನ್ನು ಅಥವಾ ತಮ್ಮ ಉಳಿತಾಯದ ಹಣವನ್ನು ನಿಶ್ಚಿತ ಠೇವಣಿಯಾಗಿ ಬ್ಯಾಂಕ್/ಅಂಚೆ ಕಚೇರಿಯಲ್ಲಿ ಇಟ್ಟು ಅದರಲ್ಲಿ ಬರುವ ಬಡ್ದಿಯನ್ನು ಪಡೆಯುತ್ತಾರೆ. ಇದೂ ಸಹ ನಿಮ್ಮ ಹಣ ವೃದ್ದಿಸುತ್ತದೆ. ಭೂಮಿಯ ಮೇಲೆ ಹಾಕಿದ ಹಣ ನಿಮ್ಮ ಮೂಲ ಹಣವನ್ನು ಅನೇಕ ಬಾರಿ ವೃದ್ದಿಸುತ್ತದೆ. ಚಿನ್ನ, ಬೆಳ್ಳಿಯ ಮೇಲೆ ಹಾಕಿದ ಹಣ ನಿಮಗೆ ದುಪ್ಪಟ್ಟು, ತಿಪ್ಪಟ್ಟಾಗುತ್ತದೆ. ಶೇರು/ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿದ ಹಣ ನಿಮಗೆ ಲಾಭವನ್ನು ತಂದುಕೊಡುತ್ತದೆ.
ಷೇರು ಮಾರುಕಟ್ಟೆ
-ಸಂದೀಪ್ ಬೆಂಗಳೂರು
ಸ್ಟಾಕುಗಳ ಖರೀದಿ ಮತ್ತು ಮಾರಾಟ ಮಾಡುವ ಸ್ಥಳವನ್ನು “ಷೇರು ಮಾರುಕಟ್ಟೆ” ಎಂದು ಕರೆಯುತೇವೆ . ಒಂದು ದೇಶದ ಆರ್ಥಿಕ ಆರೋಗ್ಯ ನಿಕಟವಾಗಿ ಷೇರುಪೇಟೆಗಳ ಮೇಲೆ ಅವಲಂಬಿತವಾಗಿರುತ್ತದೆ. Stock ಒಂದು ಕಂಪನಿಯ ಭಾಗಶಃ ಮಾಲೀಕತ್ವವನ್ನು ಪ್ರತಿನಿಧಿಸುವ ಒಂದು ಸಣ್ಣ ಪಾಲು. ಒಂದು ಕಂಪನಿಯು ತನ್ನ ಅಭಿವೃಧಿಗಾಗಿ ಮತ್ತು ಹೆಚ್ಹು ಬಂಡವಾಳದ ಅವಶ್ಯಕತೆಗಾಗಿ ಹಣವನ್ನು ಹೂಡಿಕೆದಾರರಿಂದ ಸಂಗ್ರಹಿಸಿ ಅದನ್ನು ಷೇರುಗಳ ರೂಪದಲ್ಲಿ ಪರಿವರ್ತಿಸುತ್ತಾರೆ. ಇದರಿಂದ ಬಂದ ಆದಾಯದಲ್ಲಿ ವಾರ್ಷಿಕ/ಅರ್ಧ ವಾರ್ಷಿಕಕ್ಕೆ ಒಮ್ಮೆ ಲಾಭಾಂಶವನ್ನು ಹೂಡಿಕೆದಾರರಿಗೆ ನೀಡುತ್ತಾರೆ.ಹೂಡಿಕೆ ಮಾಡುವ ಮೊದಲು ಕಂಪನಿಯ ಮೌಲ್ಯ,ಗುಣಮಟ್ಟ , ಅದರ ಹಿಂದಿನ ಆದಾಯದ ಬಗ್ಗೆ ಪರೀಕ್ಷಿಸಿ ಕೊಂಡರೆ ಉತ್ತಮ. ಷೇರುಗಳನ್ನು ಕೊಳ್ಳಲು ಅಥವಾ ಮಾರಲು ಆಯಾ ದೇಶಗಳಲ್ಲಿ ಒಂದು ನಿರ್ದಿಷ್ಟ ಮಾರುಕಟ್ಟೆಗಳಿರುತ್ತವೆ. ಉದಾ: ಬಾರತದಲ್ಲಿ “ಬಿ.ಎಸ್.ಇ”(ಬಾಂಬೆ ಸ್ಟಾಕ್ ಎಕ್ಸ್ಚೇಂಜ್), “ಎನ್.ಎಸ್.ಇ” (ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್) ಗಳು ಇವೆ. ಹೂಡಿಕೆದಾರರು ಅವನ ವ್ಯವಹಾರಗಳಿಗೆ ಮಧ್ಯವರ್ತಿಯನ್ನು ನೇಮಿಸಿಕೊಳಬೇಕು. ಮದ್ಯವರ್ಥಿಯು ಆಯಾ ದೇಶದ ಮಾರುಕಟ್ಟೆಗಳಲ್ಲಿ ನೊಂದಾಯಿತನಾಗಿರುತ್ತಾನೆ.