ಅಮರು ಶತಕದೊಳಗೊಂದು ಇಣುಕುನೋಟ
– ಹಂಸಾನಂದಿ
ಅಮರುಕ ಎಂಟನೇ ಶತಮಾನದಲ್ಲಿದ್ದ ಒಬ್ಬ ಸಂಸ್ಕೃತ ಕವಿ. ಈಗ ಕಾಶ್ಮೀರದ ರಾಜನೆಂದೂ, ಮಾಹಿಷ್ಮತಿಯ ರಾಜನೆಂದೂ ಪ್ರತೀತಿಯಿದೆ. ಇವನು ಅಮರುಶತಕ ವೆಂಬ ಹೆಸರಿನಲ್ಲಿ ಪ್ರಖ್ಯಾತವಾಗಿರುವ ಒಂದು ನೂರು ಪದ್ಯಗಳನ್ನು ಸಂಸ್ಕೃತದಲ್ಲಿ ಬರೆದಿದ್ದಾನೆ. ಈ ಪದ್ಯಗಳ ವಿಷಯವೆಂದರೆ ಗಂಡು ಹೆಣ್ಣಿನ ನಡುವಿನ ಪ್ರೇಮ. ಅಮರುಕನ ಒಂದೊಂದು ಬಿಡಿಪದ್ಯವೇ ಒಂದೊಂದು ಕಾವ್ಯದಷ್ಟು ರಸವತ್ತಾಗಿರುತ್ತದೆಂದು ನಂತರದ ಕವಿಗಳು, ವಿಮರ್ಶಕರು ಹೊಗಳಿದ್ದಾರೆ. ಗಂಡು ಹೆಣ್ಣಿನ ನಡುವಿನ ನವಿರಾದ ಪ್ರೇಮ ವಿರಹ ದುಗುಡ ಮೊದಲಾದ ಎಲ್ಲ ಭಾವನೆಗಳನ್ನು ಚಿತ್ರಿಸುವುದರಲ್ಲಿ ಅಮರುಕನಿಗೆ ಅವನೇ ಸಾಟಿ. ಇವನ ಕಾವ್ಯದ ಹಲವು ಹಸ್ತಪ್ರತಿಗಳು ದೊರತಿದ್ದು ಮುಖ್ಯವಾಗಿ ಮೂರು ಪಾಠಾಂತರಗಳಿವೆ – ಇವುಗಳಲ್ಲಿ ಇರುವ ಪದ್ಯಗಳೆಲ್ಲ ಎಲ್ಲವೂ ಒಂದೇ ಆಗಿಲ್ಲ. ಅಲ್ಲದೆ, ನಂತರದ ಕೆಲವು ಕವಿಗಳೂ ಅಮರುಕನದ್ದೆಂದು ಕೆಲವು ಪದ್ಯಗಳನ್ನು ತಮ್ಮ ಕಾವ್ಯಗಳಲ್ಲಿ ಉದಾಹರಿಸಿಯೂ ಇದ್ದಾರೆ. ಇವೆಲ್ಲಾ ಸೇರಿಸಿ, ಅಮರುಕನದ್ದೆಂದು ಹೇಳಲಾಗುವ ಸುಮಾರು ೧೬೦ ಪದ್ಯಗಳಿವೆ.
ಇವನ ಬಗ್ಗೆ ಇನ್ನೊಂದು ಕಥೆಯೂ ಇದೆ. ಮಂಡನಮಿಶ್ರರ ಹೆಂಡತಿ ಉಭಯಭಾರತಿಯ ಜೊತೆ ಆದಿಶಂಕರರ ವಾದ ನಡೆಯುತ್ತಿದ್ದಾಗ ಆಕೆ ಸಾಂಸಾರಿಕ ಜೀವನದ ಬಗ್ಗೆ ಪ್ರಶ್ನೆ ಮಾಡಲು, ಬಾಲ ಸನ್ಯಾಸಿಯಾಗಿದ್ದ ಶಂಕರರು ತಮ್ಮ ಅನುಭವದಿಂದಲೇ ಆ ಪ್ರಶ್ನೆಗೆ ಉತ್ತರಿಸಲು ಅಕಾಲದಲ್ಲಿ ಸತ್ತು ಹೋಗಿದ್ದ ಅಮರುಕನ ದೇಹದಲ್ಲಿ ಪರಕಾಯ ಪ್ರವೇಶಮಾಡಿದ್ದರೆಂದೂ, ಆ ಸಮಯದಲ್ಲಿ ಅವರು ಬರೆದ ಪದ್ಯಗಳೇ ಈ ಅಮರುಶತಕವೆಂದೂ ಕೆಲವು ಶಂಕರ ವಿಜಯ ಕಾವ್ಯಗಳು ಹೇಳುತ್ತವೆ. ಇವುಗಳ ಸತ್ಯಾಸತ್ಯತೆ ಹೇಗೇ ಇರಲಿ – ಅಮರು ಬರೆದ ಪದ್ಯಗಳು ಸಾವಿರದಿನ್ನೂರು ವರ್ಷಗಳ ನಂತರವೂ ರಸಿಕರ ಮನ ಸೆಳೆಯುತ್ತಿವೆ. ಅಂದ ಹಾಗೆ , ಎಸ್ ಎಲ್ ಭೈರಪ್ಪ ಅವರ ’ಸಾರ್ಥ’ ಕಾದಂಬರಿಯನ್ನು ಓದಿದ್ದವರಿಗೆ ಅದರಲ್ಲಿ ಬರುವ ಅಮರುಕನ ಪಾತ್ರ ನೆನಪಾದರೂ ಆಗಬಹುದೇನೋ.
ಅಮರುಕನ ಪದ್ಯಗಳು ಅವುಗಳ ಲಾಲಿತ್ಯಕ್ಕೆ ಹೆಸರುವಾಸಿ. ಹಾಗಾಗಿ ಅವುಗಳ ಅನುವಾದ ಸ್ವಲ್ಪ ಕಷ್ಟವೇ ಆದರೂ, ಮನಸ್ಸಿಗೆ ಬಹಳ ತೃಪ್ತಿ ಕೊಡುವಂತಹವು. ನಾನು ಮಾಡಿರುವ ಅನುವಾದಗಳಲ್ಲಿ ಕೆಲವನ್ನು ಇಲ್ಲಿ ಕೊಟ್ಟಿದ್ದೇನೆ.
****
ಯಾವಾಗಲೋ ಒಮ್ಮೆ ನಾಯಕಿ ತನ್ನ ನಲ್ಲನಲ್ಲಿ ಹುಸಿಮುನಿಸು ತೋರಿದಳು. ಆದರೆ ಅದು ಸುಳ್ಳು ಎಂದರಿಯದ ಅವನು ದೂರವಾಗಿಬಿಟ್ಟ. ಈಗ ಇವಳಿಗೆ ಉಳಿದಿದ್ದೇನು? ಬರೀ ಒಂಟಿತನ. ತನ್ನ ಕೊರಗನ್ನು ಹೇಳಿಕೊಳ್ಳುವುದಕ್ಕೆ ಒಬ್ಬ ಗೆಳತಿಯಿದ್ದಾಳಲ್ಲ, ಸದ್ಯ! ಇಲ್ಲದಿದ್ದರೆ ಇವಳ ಪಾಡು ಏನಾಗುತ್ತಿತ್ತೋ! (ಅಮರುಶತಕ: ೧೫)
ಯಾವುದೋ ಹುಸಿಮುನಿಸಿನಲಿ ನಾ ಸುಮ್ಮನೇ ಹೋಗೆನ್ನಲು
ಕಲ್ಲು ಮನದಾ ನಲ್ಲ ತಟ್ಟನೆ ಸಜ್ಜೆ ಯಿಂದಲಿ ಎದ್ದು ತಾ
ಭರದಿ ಪ್ರೇಮವ ಗೆಳತಿ ಹೇವದಿ ಮುರಿಯುತಲಿ ದೂರಾದರೂ
ನಾಚದೀ ಮನವವನೆಡೆಗೆ ಹೋಗುವುದಕೇನನು ಮಾಡಲೇ?
ಹದಿಮೂರರ ಪೋರಿಯೂ ನಮಗೆ ಬದುಕು ಕಲಿಸಬಲ್ಲಳು!
– ಸಹನಾ ವಿಜಯಕುಮಾರ್. ಬೆಂಗಳೂರು
ಹದಿಮೂರು ವರ್ಷದ ಚುರುಕು ಹುಡುಗಿಯೊಬ್ಬಳು ಸತತವಾಗಿ ಎರಡು ವರ್ಷಗಳ ಕಾಲ ಹೊರಪ್ರಪಂಚದ ಸಂಪರ್ಕ ಕಡಿದುಕೊಂಡು ತನ್ನ ಕುಟುಂಬದೊಂದಿಗೆ ಅಜ್ಞಾತವಾಸದಲ್ಲಿರಬೇಕಾಗಿ ಬಂದರೆ ಏನಾಗಬಹುದು? ಹಣೆಬರಹವನ್ನು ಹಳಿಯುತ್ತ ದಿನದೂಡಬಹುದು. ತನಗೆ ಈ ದುರ್ಗತಿಯನ್ನು ತಂದಿತ್ತ ದೇವರನ್ನು ಶಪಿಸುತ್ತ ಕಣ್ಣೀರಿಡಬಹುದು ಅಥವಾ ಸುಮ್ಮನೆ ಕೊರಗಿ ಖಿನ್ನತೆಗೊಳಗಾಗಬಹುದು. ಅದೆಲ್ಲ ಬಿಟ್ಟು ತನ್ನ ನೋವು ಸಂಕಟ ತೊಳಲಾಟಗಳನ್ನು, ಆ ದಿನಗಳ ಚಿತ್ರಣವನ್ನು ತನ್ನ ಡೈರಿಯಲ್ಲಿ ಯಥಾವತ್ತಾಗಿ ದಾಖಲಿಸಿಟ್ಟು ಸಾವಿನ ನಂತರವೂ ಸ್ಮರಣೀಯಳಾಗಬಹುದೇ? ವ್ಯತಿರಿಕ್ತ ಪರಿಸ್ಥಿತಿಯನ್ನು ಎಳೆಎಳೆಯಾಗಿ ಬಿಡಿಸಿಟ್ಟು, ಸಣ್ಣ-ಪುಟ್ಟದ್ದಕ್ಕೆಲ್ಲ ಧೃತಿಗೆಡುವವರಿಗೆ ಸ್ಫೂರ್ತಿಯಾಗಿ ವಿಶ್ವಕ್ಕೇ ಮಾನವೀಯತೆಯ ಪಾಠ ಕಲಿಸುವ ಗುರುವಾಗಬಹುದೇ? ಹೌದು ಎನ್ನುತ್ತದೆ ಇತಿಹಾಸ. ತನ್ನ ಪುಟ್ಟ ಬದುಕನ್ನು ಡೈರಿಯ ಪುಟಗಳಲ್ಲಿ ಸ್ಫುಟವಾಗಿ ಬರೆದಿಟ್ಟು, ಸತ್ತ ಮೇಲೂ ತನ್ನ ಬರಹದಿಂದಲೇ ಬದುಕಿರುವ ಈ ಬಾಲೆಯ ಹೆಸರು ‘ಆನ್ ಫ್ರ್ಯಾಂಕ್’.
ಆನ್ ಹುಟ್ಟಿದ್ದು 1929ನೇ ಇಸವಿಯ ಜೂನ್ 12ರಂದು, ಜರ್ಮನಿಯ ಫ್ರಾಂಕ್‍ಫರ್ಟ್ ಎಂಬಲ್ಲಿ. ಅಪ್ಪ ಓಟ್ಟೊ ಫ್ರ್ಯಾಂಕ್, ಅಮ್ಮ ಎಡಿತ್ ಹಾಗೂ ಅಕ್ಕ ಮಾರ್ಗೋಟ್‍ರನ್ನೊಳಗೊಂಡ ಸಣ್ಣ ಯಹೂದಿ ಕುಟುಂಬ ಇವರದ್ದು. ಅಪ್ಪ ಪುಸ್ತಕ ಪ್ರಿಯನಾದ್ದರಿಂದ ಮನೆಯಲ್ಲೇ ದೊಡ್ಡ ಗ್ರಂಥಾಲಯವಿತ್ತು. ಮಕ್ಕಳಿಗೂ ಪುಸ್ತಕಗಳನ್ನು ಓದಲು ಬಹಳ ಉತ್ತೇಜನವಿತ್ತು. ‘ಆನ್’ಗೆ ನಾಲ್ಕು ವರ್ಷಗಳಾಗುವವರೆಗೂ ಎಲ್ಲ ಮಾಮೂಲಾಗಿಯೇ ಇತ್ತು. ಆದರೆ 1933ರ ಮಾರ್ಚ್ 13ರಂದು ನಡೆದ ಚುನಾವಣೆಯಲ್ಲಿ ಹಿಟ್ಲರ್‍ನ ನಾಜಿ ಪಕ್ಷ ಗೆದ್ದೊಡನೆ ಯಹೂದಿಗಳಲ್ಲಿ ಸಣ್ಣ ಸಂಚಲನ ಶುರುವಾಯಿತು. ಚಾನ್ಸೆಲರ್ ಆಗಿ ನಿಯುಕ್ತನಾದ ಹಿಟ್ಲರ್ ನಿರೀಕ್ಷಿಸಿದ್ದಂತೆಯೇ ದೌರ್ಜನ್ಯಕ್ಕಿಳಿದ. ಅವನು ಮಾಡಿದ ಮೊತ್ತ ಮೊದಲ ಕೆಲಸ Concentration Camp ಎಂದು ಕರೆಯಲ್ಪಡುತ್ತಿದ್ದ ಸಮರ ಶಿಬಿರ(ಯುದ್ಧದ ಸೆರೆಯಾಳುಗಳನ್ನು ಕೂಡಿಡುವ ಶಿಬಿರ)ಗಳನ್ನು ಶುರುಮಾಡಿ ಒಂದು ವರ್ಷದಲ್ಲೇ ಸುಮಾರು 45 ಸಾವಿರ ಜನರನ್ನು ಅಲ್ಲಿಗೆ ದೂಡಿದ್ದು. ಆಗ ಜರ್ಮನಿಯನ್ನು ತೊರೆದ ಸುಮಾರು 3 ಲಕ್ಷ ಯಹೂದಿ ಕುಟುಂಬಗಳಲ್ಲಿ ‘ಆನ್’ಳ ಕುಟುಂಬವೂ ಸೇರಿತ್ತು.
ಹೀಗೆ ಜರ್ಮನಿ ಬಿಟ್ಟು ಆಶ್ರಯ ಹುಡುಕಿಕೊಂಡು ಹೊರಟ ಈ ಕುಟುಂಬ ನೆಲೆ ಕಂಡುಕೊಂಡದ್ದು ಹಾಲೆಂಡ್‍ನಲ್ಲಿ. ಐದಾರು ವರ್ಷಗಳು ನೆಮ್ಮದಿಯಾಗಿ ಉರುಳಿದ್ದವೇನೋ, 1940ರ ಮೇ ತಿಂಗಳಿನಲ್ಲಿ ಹಾಲೆಂಡ್‍ನ ಮೇಲೆ ದಾಳಿ ನಡೆಸಿದ ಹಿಟ್ಲರ್‍ನ ಸೈನ್ಯ ಅದನ್ನು ಸುಲಭವಾಗಿ ವಶಪಡಿಸಿಕೊಂಡಿತು. ದುರುಳ ಹಿಟ್ಲರ್‍ನ ಯಹೂದಿ ವಿರೋಧಿ ಚಟುವಟಿಕೆಗಳು ಇಲ್ಲಿಯೂ ಗರಿಗೆದರಿದವು. ಯಹೂದಿಗಳೆಲ್ಲ ಹೆಸರು ನೋಂದಣಿ ಮಾಡಿಸುವುದು ಕಡ್ಡಾಯವಾಯಿತು. ಅಪ್ಪ ಓಟ್ಟೊ ತನ್ನ ಉದ್ಯಮವನ್ನು ಗೆಳೆಯರ ಹೆಸರಿಗೆ ಹಸ್ತಾಂತರಿಸಿದರೆ, ಓದಿನಲ್ಲಿ ಮುಂದಿದ್ದ ಅಕ್ಕ-ತಂಗಿಯರು ತಾವು ಹೋಗುತ್ತಿದ್ದ ಪ್ರತಿಷ್ಠಿತ ಶಾಲೆಗಳನ್ನು ಬಿಟ್ಟು ಯಹೂದಿಯರಿಗೆ ಮೀಸಲಿದ್ದ ಶಾಲೆ ಸೇರಬೇಕಾಯಿತು. ಅಕ್ಕ ಮಾರ್ಗೋಟ್ ತುಂಬಾ ಮೆದು ಸ್ವಭಾವದ ಅಂತರ್ಮುಖಿಯಾಗಿದ್ದರೆ ತಂಗಿ ಆನ್ ವಾಚಾಳಿ ಹಾಗೂ ನಿರ್ಭೀತ ವ್ಯಕ್ತಿತ್ವದವಳಾಗಿದ್ದಳು. ಹಿಟ್ಲರ್‍ನ ಸೇನೆ ಹೇರಿದ್ದ ನೂರೆಂಟು ನಿರ್ಬಂಧಗಳ ನಡುವೆಯೂ ಬದುಕು ಹೇಗೋ ಸಾಗುತ್ತಿತ್ತು. 1943ನೇ ಇಸವಿಯ ಜೂನ್ 12 ‘ಆನ್’ಳ 13ನೆಯ ಹುಟ್ಟುಹಬ್ಬ. ಅಂದು ತಾನು ಬಹಳ ದಿನಗಳಿಂದ ಬಯಸಿದ್ದ ಕೆಂಪು-ಬಿಳಿ ಚೌಕಗಳಿದ್ದ ಆಟೋಗ್ರಾಫ್ ಪುಸ್ತಕವೊಂದನ್ನು ಉಡುಗೊರೆಯಾಗಿ ಪಡೆದಳು. ಅದನ್ನು ಡೈರಿಯಂತೆ ಬಳಸುವ ನಿಶ್ಚಯ ಮಾಡಿ ಪ್ರತಿದಿನ ನಡೆಯುತ್ತಿದ್ದ ಘಟನೆಗಳನ್ನು ದಾಖಲಿಸತೊಡಗಿದಳು.
“ಮಹಾನ್” ಇತಿಹಾಸಕಾರರೆಂಬ “ಮಹಾತ್ಮ”ರ ಸನ್ನಿಧಿಯಲ್ಲಿ….
– ರಾಘವೇಂದ್ರ ಅಡಿಗ ಎಚ್ಚೆನ್
ಕೆಲತಿಂಗಳ ಹಿಂದೆ ಬೆಂಗಳೂರಿನ ಟೀಚರ್ಸ್ ಕಾಲೇಜು ಸಭಾಂಗಣದಲ್ಲಿ ಒಂದು ಅಪರೂಪದ ಪುಸ್ತಕಗಳ ಬಿಡುಗಡೆ ಸಮಾರಂಭ ಏರ್ಪಾಡಾಗಿತ್ತು. ಕನ್ನಡದ ಖ್ಯಾತ ಲೇಖಕರಾದ ಡಾ. ಎಸ್.ಎಲ್. ಭೈರಪ್ಪನವರು ಭಾಗವಹಿಸಿದ್ದ ಆ ಕಾರ್ಯಕ್ರಾಮಕ್ಕೆ ಬಹಳ ನಿರೀಕ್ಷೆಗಳನ್ನಿಟ್ಟುಕೊಂಡು ನನ್ನಂತಹ ಸಾಕಷ್ಟು ಜನರು ಬಂದಿದ್ದರು. ಅಸಲಿಗೆ ಅಲ್ಲಿ ಬಿಡುಗಡೆಯಾಗುತ್ತಿದ್ದ ಪುಸ್ತಕಳು ಸಹ ಅಷ್ಟೇ ಕುತೂಹಲ ಹುಟ್ಟಿಸುವಂತಿದ್ದವು. ಸ್ವತಂತ್ರ ಭಾರತದ ಖ್ಯಾತ ಪತ್ರಿಕಾ ಬರಹಗಾರ, ಸಂಶೋಧಕ ಅರುಣ್ ಶೌರಿಯವರ ಪುಸ್ತಕದ ಬಿಡುಗಡೆ ಕಾರ್ಯಕ್ರಾಮವದಾಗಿತ್ತು.
ಅರುಣ್ ಶೌರಿ ಅವರೊಬ್ಬ ಪತ್ರಕರ್ತ, ಪತ್ರಿಕಾ ಸಂಪಾದಕ, ಧೀಮಂತ ರಾಜಕಾರಣಿ, ಸತ್ಯನಿಷ್ಟ ಬರಹಗಾರರಾಗಿ ಭಾರತದಾದ್ಯಂತ ಹೆಸರು ಮಾಡಿದವರು. ಕೇಂದ್ರದಲ್ಲಿ ಎನ್.ಡಿ.ಎ. ಸರ್ಕಾರವಿದ್ದ ಸಂದರ್ಭದಲ್ಲಿ ಸಮಾಚಾರ ಮತ್ತು ಪ್ರಸಾರ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಶೌರಿಯವರು ಸರ್ಕಾರಿ ಕೆಲಸ ಹಾಗೂ ಪತ್ರಿಕಾ ರಂಗ ಎರಡರಲ್ಲಿಯೂ ಒಳ್ಳೆಯ ಹೆಸರನ್ನು ಗಳಿಸಿಕೊಂಡಿರುವವರು.ಭಾರತದ ಪ್ರಸಿದ್ದ ಆಂಗ್ಲ ದೈನಿಕ “ಇಂಡಿಯನ್ ಎಕ್ಸ್ ಪ್ರೆಸ್”ನಲ್ಲಿ ಸಾಕಷ್ಟು ವರ್ಷ ಕೆಲಸ ಮಾಡಿದ್ದ ಶೌರಿಯವರು ಆ ಸಮಯದಲ್ಲಿ ಸಾಕಷ್ಟು ಭ್ರಷ್ಟಾಚರಗಳನ್ನು, ಹಗರಣಗಳನ್ನೂ ಬೆಳಕಿಗೆ ತಂದಿದ್ದರು. ಇವರ ಕೆಲಸ, ಸಮಾಜ ಸೇವೆಗೆ ಮೆಚ್ಚಿ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ, ದಾದಾಭಾಯಿ ನವರೋಜಿ ಪುರಸ್ಕಾರ, ಫ್ರೀಡಮ್ ಟು ಪಬ್ಲಿಷ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.
ಮೊದಲಿನಿಂದಲೂ ಅಧ್ಯಯನ, ಸಂಶೊಧನೆಗಳಲ್ಲಿ ಆಸಕ್ತಿ ತಳೆದಿದ್ದ ಅರುಣ್ ಶೌರಿಯವರು ತಾವೇ ಖುದ್ದಾಗಿ ಸಾಕಷ್ಟು ಪುಸ್ತಕಗಳನ್ನು ರಚಿಸಿದ್ದಾರೆ. “The Only Fatherland’’, “The World of Fatwas’’, “Eminent Historians’’, “ Does He know a Mother’s Heart?’’ ಇವೇ ಮೊದಲಾದ ಕೃತಿಗಳನ್ನು ರಚಿಸಿರುವ ಶೌರಿ ಈ ಒಂದೊಂದರಲ್ಲಿಯೂ ಸಾಕಷ್ಟು ಮಾಹಿತಿಯನ್ನು ಓದುಗರೊಡನೆ ಹಂಚಿಕೊಂಡಿದ್ದಾರೆ.ಅರುಣ್ ಶೌರಿಯವರ ಬರಹಗಳನ್ನು ಅರ್ಥ ಮಾಡಿಕೊಳ್ಳುವುದು ತುಸು ತ್ರಾಸದಾಯಕವದ ಕೆಲಸ.ಅವರಷ್ಟು ಚಿಂತನೆಗೆ ಹಚ್ಚುವ ಬರಹಗಾರರು ಮತ್ತೊಬ್ಬರು ಸಿಕ್ಕುವುದು ತೀರಾ ಅಪರೂಪವೆನ್ನಬೇಕು. ಅಂತಹಾ ಶೌರಿಯವರ ಪುಸ್ತಕವೊಂದು ಕನ್ನಡಕ್ಕೆ ಬಂದಿದೆ.ಅರುಣ್ ಶೌರಿಯವರ “Eminent Historians’’ಕೃತಿಯನ್ನು “ಮಹಾನ್” ಇತಿಹಾಸಕಾರರು ಎನ್ನುವ ಹೆಸರಿನಲ್ಲಿ ಮಂಜುನಾಥ ಅಜ್ಜಂಪುರರವರು ಕನ್ನದಕ್ಕೆ ಅನುವಾದಿಸಿ ನಮ್ಮ ಕೈಗಿತ್ತಿದ್ದಾರೆ. ಇತಿಹಾಸದ ಬಗ್ಗೆ ಆಸಕ್ತಿ ಇರುವ ಪ್ರತಿಯೊಬ್ಬರಿಗೂ ಇಷ್ಟವಾಗುವ ಕೃತಿ ಇದು ಎಂದರೆ ತಪ್ಪಾಗಲಾರದು.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೭
— ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೬
ಆವರಣ’ ಎಂಬ ವಿ-ಕೃತಿ ಸಂಗ್ರಹ: ಗೌರಿ ಲಂಕೇಶ್
ಶ್ರೀ ಶಂಕರಾಚಾರ್ಯ ಜೀವನ ಸಂದೇಶ
– ರಾಘವೇಂದ್ರ ಅಡಿಗ ಎಚ್ಚೆನ್
ಭಾರತದಲ್ಲಿ ಹಿಂದೂ ಧರ್ಮವು ಸಂಕಷ್ಟದಲ್ಲಿದ್ದ ಎಂಟನೇ ಶತಮಾನದ ಕಾಲಘಟ್ಟದಲ್ಲಿ, ಹಿಂದೂಗಳಲ್ಲಿದ್ದ ಜಾತಿ ಪದ್ದತಿ, ಮೂಢ ಆಚರಣೆಗಳ ಬಗ್ಗೆ ಆಗ ಪ್ರಬಲರಾಗಿದ್ದ ಬೌದ್ದ ಸನ್ಯಾಸಿಗಳು ಸಾಕಷ್ಟು ನಿಂದನೆಗಳನ್ನು ಮಾಡುತ್ತಿದ್ದ ಕಾಲದಲ್ಲಿ ಹಿಂದೂ ಧರ್ಮೀಯರಲ್ಲಿ ಮತ್ತೆ ಆತ್ಮವಿಶ್ವಾಸ ಹುಟ್ಟಿಸಿ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ತಮ್ಮ ಅದ್ವೈತ ತತ್ವದ ಮೂಲಕ ಧರ್ಮ ಜಾಗೃತಿಯನ್ನುಂಟುಮಾಡಿ ಹಿಂದೂ ಧರ್ಮವನ್ನು ಪುನರುತ್ತಾನಗೊಳಿಸಿದವರು ಶ್ರೀ ಶಂಕರಾಚಾರ್ಯರು. ಕಳೆದ ಮೇ 4 ರಂದು ಜಗದ್ಗುರು ಆದಿ ಶಂಕರಾಚಾರ್ಯರ ಜಯಂತಿಯನ್ನು ವಿಶ್ವಾದ್ಯಂತ ಆಚರಿಸಲಾಯಿತು.
ಭಾರತದಲ್ಲಿ ಹಿಂದೂ ಧರ್ಮವು ಸಂಕಷ್ಟದಲ್ಲಿದ್ದ ಎಂಟನೇ ಶತಮಾನದ ಕಾಲಘಟ್ಟದಲ್ಲಿ, ಹಿಂದೂಗಳಲ್ಲಿದ್ದ ಜಾತಿ ಪದ್ದತಿ, ಮೂಢ ಆಚರಣೆಗಳ ಬಗ್ಗೆ ಆಗ ಪ್ರಬಲರಾಗಿದ್ದ ಬೌದ್ದ ಸನ್ಯಾಸಿಗಳು ಸಾಕಷ್ಟು ನಿಂದನೆಗಳನ್ನು ಮಾಡುತ್ತಿದ್ದ ಕಾಲದಲ್ಲಿ ಹಿಂದೂ ಧರ್ಮೀಯರಲ್ಲಿ ಮತ್ತೆ ಆತ್ಮವಿಶ್ವಾಸ ಹುಟ್ಟಿಸಿ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ತಮ್ಮ ಅದ್ವೈತ ತತ್ವದ ಮೂಲಕ ಧರ್ಮ ಜಾಗೃತಿಯನ್ನುಂಟುಮಾಡಿ ಹಿಂದೂ ಧರ್ಮವನ್ನು ಪುನರುತ್ತಾನಗೊಳಿಸಿದವರು ಶ್ರೀ ಶಂಕರಾಚಾರ್ಯರು. ತಾವು ಬದುಕಿದ್ದು ಕೇವಲ 32 ವರ್ಷಗಳಷ್ಟೇ ಆದರೂ ಆದಿ ಶಂಕರರು ತಾವು ಮಾಡಿದ ಕಾರ್ಯ, ಗಳಿಸಿದ ಕೀರ್ತಿ , ಅಪಾರವಾದುದು. ಶ್ರೀಮದ್ಭಗವದ್ಗೀತೆ, ಉಪನಿಷತ್ತುಗಳು, ಬ್ರಹ್ಮಸೂತ್ರಗಳಿಗೆ ಭಾಷ್ಪಗಳನ್ನು ಬರೆದ ಮೊದಲಿಗರು ಶ್ರೀ ಶಂಕರಾಚಾರ್ಯರು. ಶಂಕರಾಚಾರ್ಯರು ಭಾರತೀಯ ವೈಚಾರಿಕ ರಂಗದಲ್ಲಿ ಕ್ರಾಂತಿಯನ್ನೇ ಮಾಡಿದ್ದವರು. ಇವರು ಯಾವೊಂದು ಹೊಸತಾದ ಮತ, ಪಂಥಗಳನ್ನು ಸ್ಥಾಪಿಸಿಲ್ಲವಾದರೂ ಹಿಂದೂ ಧರ್ಮದಲ್ಲಿನ ವೇದಸಂಪ್ರದಾಯವನ್ನೇ ಎತ್ತಿಹಿಡಿದರು. ವೇದಗಳಲ್ಲಿನ ಸತ್ವವನ್ನೂ, ಸಾರವನ್ನು ತಮ್ಮದೇ ಆದ ನೆಲೆಯಲ್ಲಿ ನಿಷ್ಕರ್ಷಿಸುವ ಮೂಲಕ ಜಗತ್ತಿಗೆ ಪ್ರಕಾಶಪಡಿಸಿದವರು ಆಚಾರ್ಯ ಶಂಕರರು ಎಂದರೆ ತಪ್ಪಾಗಲಾರದು.
ಜೀವನ
ಅದು ಎಂಟು-ಒಂಭತ್ತನೇ ಶತಮಾನಗಳ ಮಧ್ಯದ ಅವಧಿ. ಭಾರತ ದಕ್ಷಿಣ ಸಮುದ್ರ ತೀರದ ಕೇರಳ ರಾಜ್ಯದ ಕಾಲಟಿ ಎಂಬೊಂದು ಸಣ್ಣ ಹಳ್ಳಿ. ಆ ಹಳ್ಳಿಯಲ್ಲಿ ಶಿವಗುರು ಹಾಗೂ ಆರ್ಯಾಂಬರೆನ್ನುವ ಬಡ ಬ್ರಾಹ್ಮಣಾ ದಂಪತಿಗಳು ವಾಸವಾಗಿದ್ದರು. ಊಟ, ವಸತಿಗಳಎಲ್ಲಾ ಅದು ಹೇಗೋ ದಿನನಿತ್ಯವೂ ನಡೆಯುತ್ತಿದ್ದರೂ ಆ ದಂಪತಿಗಳೈಗೆ ‘ತಮ್ಮದಾದ ಒಂದು ಮಗುವಿಲ್ಲ, ತಮಗೆ ಸಂತಾನಭಾಗ್ಯವಿಲ್ಲ’ ಎನ್ನುವ ಚಿಂತೆಯು ಬಲವಾಗಿ ಕಾಡುತ್ತಿತ್ತು. ಹೀಗಿರಲು ಇದೇ ಚಿಂತೆಯಲ್ಲಿ ಆ ಈರ್ವರೂ ತಾವು ಈ ಕುರಿತು ಪರಮೇಶ್ವರನ ಮೊರೆಹೋಗಲು ತೀರ್ಮಾನಿಸಿ ಅದರಂತೆ ಪರಮೇಶ್ವರನನ್ನು ಶ್ರದ್ದಾ ಭಕ್ತಿಗಳಿಂದ ಆರಾಧಿಸಿಲು ಮುಂದಾದಾರು. ಅದೊಂದು ದಿನ ಪರಮೇಶ್ವರನು ತಾನು ಶಿವಗುರುವಿನ ಕನಸಿನಲ್ಲಿ ಕಾಣಿಸಿಕೊಂಡು- “ಭಕ್ತಾ, ನಿನ್ನ ಪೂಜೆಗೆ ಮೆಚ್ಚಿದ್ದೇನೆ. ನಿನ್ನ ಕೋರಿಕೆಯನ್ನು ನಾನು ಈಡೇರಿಸಲಿದ್ದೇನೆ, ನಿನಗೆಂತಹಾ ಮಗನು ಬೇಕು? ಮಹಾನ್ ಜ್ಞಾನಿಯಾದ, ಆದರೆ ಅಲ್ಪಾಯುವದ ಮಗನು ಬೇಕೋ, ಇಲ್ಲವೇ ಅಲ್ಪ ಜ್ಞಾನಿಯಾದ ದೀರ್ಘಾಯುವಾದ ಮಗನು ಬೇಕೋ?” ಎಂದೆನ್ನಲು ಶಿವಗುರುವು ತಾನು ಕ್ಷಣಕಾಲವೂ ಯೋಚಿಸದೆ- “ನನಗೆ ಮಹಾಜ್ಞಾನಿಯಾದ ಮಗನು ಬೇಕು” ಎಂದೆನ್ನಲು “ತಥಾಸ್ತು” ಎಂದ ಪರಮೇಶ್ವರನು ತಾನು ಅಂತರ್ಧಾನನಾದನು. ಅದಾದ ಕೆಲ ತಿಂಗಳಿನಲ್ಲಿಯೇ ಮಾತೆ ಆರ್ಯಾಂಬಾ ಜನ್ಮತಃ ಮಹಾಜ್ಞಾನಿಯಾದ ಶಂಕರನಿಗೆ ಜನ್ಮವಿತ್ತಳು.
ಚಿದಂಬರಂ ಪಿಳ್ಳೆ
– ನವೀನ್ ನಾಯಕ್
ಭರತಖಂಡದ ಒಂದೊಂದೆ ಭಾಗಗಳನ್ನು ತಮ್ಮ ಕುತಂತ್ರದಿಂದ ಕಬಳಿಸಿದ ಬ್ರಿಟೀಶರು ಎಲ್ಲೆಲ್ಲೂ ತಮ್ಮ ಧಾರ್ಷ್ಟ್ಯವನ್ನು ತೋರತೊಡಗಿದರು. ನಮ್ಮ ಸಂಸ್ಕೃತಿಯನ್ನು ಒಂದೆಡೆ ಹೀಯಾಳಿಸುತ್ತ ಇನ್ನೊಂದೆಡೆ ಮತಾಂತರಿಸುತ್ತ ತಮ್ಮ ಸಾಮ್ರಾಜ್ಯವನ್ನು ಶಾಶ್ವತಗೊಳಿಸಲು ಸರ್ವಪ್ರಯತ್ನವನ್ನು ಮಾಡುತ್ತಲೇ ಇದ್ದರು. ತೆರಿಗೆ ಪದ್ದತಿಯ ವಿರೂಪದಿಂದ ಲಕ್ಷಾಂತರ ನೇಕಾರರು , ಕಾರ್ಮಿಕರು ಬೀದಿಗೆ ಬಿದ್ದರು.ದೇಶಿಯ ಮಾರುಕಟ್ಟೆಯನ್ನು ತಮ್ಮ ಕೈವಶ ಮಾಡಿಕೊಂಡು ಅನಾವಶ್ಯಕ ತೆರಿಗೆಗಳನ್ನು ಹೇರಿ ಸಾಮಾನ್ಯ ಜನರು ತತ್ತರಿಸುವಂತೆ ಮಾಡತೊಡಗಿದರು. ಸಮುದ್ರ ಪಯಣಗಳಿಗೂ ಇದರ ಬಿಸಿ ತಟ್ಟಿತ್ತು. ಆ ದಿನಗಳಲ್ಲಿ ಕೊಲೊಂಬೊ ಹಾಗು ತೂತ್ತುಕುಡಿಯ ನಡುವಿನ ಹಡಗು ಪಯಣದ ಸಂಪೂರ್ಣ ಅಧಿಕಾರ ಬ್ರಿಟೀಶರ ಕೈಯಲ್ಲಿತ್ತು. ಬ್ರಿಟೀಶ್ ಇಂಡಿಯಾ ಸ್ಟೀಮ್ ನ್ಯಾವಿಗೇಶನ್ ಕಂಪನಿ ಎಂಬ ಈ ಸಂಸ್ಥೆ ತಮಗಿಷ್ಟ ಬಂದಂತೆ ಪ್ರಯಾಣ ವೆಚ್ಚವನ್ನು ಏರಿಸತೊಡಗಿದರು. ಇವರ ದುರಹಂಕಾರಕ್ಕೆ ಸೆಡ್ಡು ಹೊಡೆಯಲು ಲೆಕ್ಕಚಾರ ಹಾಕಿ ಕುಳಿತವರೇ ಚಿದಂಬರಂ ಪಿಳ್ಳೆ.
ತಮಿಳುನಾಡಿನ ಓಟ್ಟಪ್ಪಿದಪುರಂನಲ್ಲಿ ಉಳಗನಾಥಂ ಮತ್ತು ಪರಮಾಯಿ ಅಮ್ಮಾಳ್ ದಂಪತಿಗೆ ಸೆಪ್ಟಂಬರ್ 5 1827 ರಲ್ಲಿ ಚಿದಂಬರಂ ಪಿಳ್ಳೆಯವರು ಜನಿಸಿದರು. ತನ್ನ ಹದಿಮೂರನೇ ವಯಸ್ಸಿನವರೆಗೆ ಜನ್ಮಸ್ಥಳದಲ್ಲೇ ಕಳೆದ ಚಿದಂಬರಂರವರು ಮುಂದಿನ ವಿದ್ಯಾಭ್ಯಾಸಕ್ಕಾಗಿ ತೂತ್ತುಕುಡಿ ಎಂಬಲ್ಲಿಗೆ ಬಂದರು. ತಮ್ಮ ವಿದ್ಯಾಭ್ಯಾಸ ಮಾಡುತ್ತ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿ ತಮ್ಮ ಪ್ರಭುತ್ವ ಸ್ಥಾಪಿಸಿಕೊಂಡರು. ತದನಂತರ ಕೆಲಕಾಲ ತಾಲ್ಲೂಕು ಕಛೇರಿಯಲ್ಲಿ ಗುಮಾಸ್ತನಾಗಿ ದುಡಿದರು. ಈ ಕೆಲಸ ಚಿದಂಬರಂರವರಿಗೆ ತೃಪ್ತಿಯನ್ನು ತಂದು ಕೊಡುವಲ್ಲಿ ವಿಫಲವಾಯಿತು. ಚಿದಂಬರಂರವರ ವಂಶದ ಹಿರಿತಲೆಗಳು ವಕೀಲಿ ವೃತ್ತಿಯಲ್ಲಿ ನಿಷ್ಣಾತರಾಗಿದ್ದರು. ಇದೇ ಪ್ರಭಾವವನ್ನು ಬಳಸಿಕೊಂಡು ಅನ್ಯಾಯವಾಗಿ ಪೋಲಿಸ್ ಇಲಾಕೆಯ ಕಪಿಮುಷ್ಟಿಯಲ್ಲಿ ಸಿಲುಕಿದ ನಿರಪರಾಧಿಗಳ ಪರವಾಗಿ ವಾದಿಸಲು ವಕೀಲಿ ಅಭ್ಯಸಿಸಿ ತಿರುಚ್ಚಿಯ ಸಬ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ವಕೀಲಿ ವೃತ್ತಿಯನ್ನು ಆರಂಭಿಸಿದರು. ಎಷ್ಟೋ ಬಾರಿ ನಿರಪರಾಧಿಗಳ ಪರವಾಗಿ ನಿಃಶುಲ್ಕವಾಗಿ ಮೊಕದ್ದಮೆ ನಡೆಸಿಕೊಟ್ಟು ಜನರ ಪ್ರೀತಿ ವಿಶ್ವಾಸವನ್ನು ಗಳಿಸಿದರು. ಚಿದಂಬರಂರವರ ಈ ಕೆಲಸದಿಂದ ಬ್ರಿಟೀಶರು,ಪೋಲಿಸ್ ಅಧಿಕಾರಿಗಳ ದ್ವೇಷಕ್ಕೆ ಒಳಗಾಗತೊಡಗಿದರು.
ಆಧ್ಯಾತ್ಮ ಮತ್ತು ಶಿವನ ಕುರಿತು ಅಪಾರ ಶ್ರದ್ದೆಯನ್ನು ಚಿದಂಬರಂ ಬೆಳೆಸಿಕೊಂಡಿದ್ದರು.ತಮಿಳು ಸಾಹಿತ್ಯವನ್ನು ಓದಿ ಅದ್ಭುತ ಜ್ಞಾನವನ್ನು ಮೈಗೂಡಿಸಿಕೊಂಡಿದ್ದರಲ್ಲದೇ ಯೋಗ್ಯ ಗುರುಗಳ ಮತ್ತು ಸಾಧುಗಳ ಸಂಪರ್ಕವನ್ನು ಸಹ ಬೆಳೆಸಿಕೊಂಡಿದ್ದರು. ಜೊತೆಗೆ ರಾಷ್ಟ್ರೀಯ ವಿಚಾರಗಳಲ್ಲಿ ಅತೀವ ಆಸಕ್ತಿಯನ್ನು ಹೊಂದಿದ್ದರು. 1898 ಡಿಸೆಂಬರ್ ಸಮಯದಲ್ಲಿ ಮದ್ರಾಸಿನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಸ್ವಾಗತ ಸಮಿತಿಯ ಕಾರ್ಯದರ್ಶಿ ಮತ್ತು ಕೋಶಾಧಿಕಾರಿಯ ಹೊಣೆಯನ್ನು ಹೊತ್ತಿಕೊಂಡಿದ್ದರು. ಆ ಮಹಾಧಿವೇಶನದಲ್ಲಿ ಭಾಗವಹಿಸಿದ ಒಟ್ಟು 614 ಪ್ರತಿನಿಧಿಗಳಲ್ಲಿ 519ಜನ ತಮಿಳುನಾಡಿನಿಂದಲೇ ಬಂದಿದ್ದರು. ಅಷ್ಟು ಜನರನ್ನು ಅಧಿವೇಶನಕ್ಕಾಗಿ ಕಲೆಹಾಕಿದ್ದ ಶ್ರೇಯಸ್ಸು ಚಿದಂಬರಂರವರದೇ !
ಮತ್ತಷ್ಟು ಓದು 
ಹೀಗೊಂದು ಊರಿನ ಕತೆ:
– ಬಾಲಚಂದ್ರ ಭಟ್
ಅದೊಂದು ಊರು. ಬಡವ-ಬಲ್ಲಿದ, ಬುದ್ದಿವಂತ, ದಡ್ಡ ಎಲ್ಲರೂ ಇದ್ದ ಊರು. ಆ ಊರಿಗೆ ದರೋಡೆಕೋರರ ಕಾಟ. ಹಿಂಸೆ, ಬಲಾತ್ಕಾರ, ದೋಚುವದು ಇವೆಲ್ಲವನ್ನೂ ಮಾಡುತ್ತಿದ್ದರು.ದರೋಡೆಕೊರರನ್ನು ಎದುರಿಸುವದಕ್ಕೆ ಭಯಪಟ್ಟ ಕೆಲವು ಚಿಂತಕರು ದರೋಡೆಕೋರರ ಜೊತೆ ಸಂಧಾನಕ್ಕಿಳಿಯುವ ದಾರಿಯನ್ನು ಯೋಚಿಸಿದರು. ಕೆಲವು ಸಾಹಸಿಗಳು ದಾಳಿಕೋರರಿಗೆ ಅವರದೇ ರೀತಿಯಲ್ಲಿ ಉತ್ತರಿಸುವ ಯೋಜನೆ ಹಾಕಿಕೊಂಡರು.ಒಮ್ಮೆ ದರೋಡೆಕೋರರು ಹಳ್ಳಿಗೆ ಧಾಳಿಯಿಟ್ಟರು. ಚಿಂತಕರು ವಿದ್ಯಾವಂತರೇನೊ ಹೌದು. ಆದರೆ ದರೋಡೆಕೋರರನ್ನು ಎದುರಿಸುವ ಧೈರ್ಯ ಇರಲಿಲ್ಲ. ಹೆದರಿ ಬಾಗಿಲು ಹಾಕಿಕೊಂಡರು.ದರೋಡೆಕೋರರು ಬಗ್ಗದಿದ್ದಾಗ ಚಿಂತಕರು ಊರಿನ ಸಂಪತ್ತನಲ್ಲಿ ಕೆಲವು ಭಾಗವನ್ನು ಹಂಚಿಕೊಳ್ಳುವ ಒಪ್ಪಂದದೊಂದಿಗೆ ಪ್ರಾಣವನ್ನು ಉಳಿಸಿಕೊಂಡರು. ಆದರೆ ಊರಿನ ಕೆಲ ಸಾಹಸಿಗಳು ದರೋಡೆಕೋರರ ಜೊತೆ ಹೋರಾಡಿದರು. ಎರಡೂ ಕಡೆ ಪ್ರಾಣ ಹಾನಿ ಸಂಭವಿಸಿತು.ಇದೆಲ್ಲದಕ್ಕೂ ಚಿಂತಕರ ಮನೆಯ ಮುಚ್ಚಿದ ಬಾಗಿಲುಗಳೆ ಪ್ರೇಕ್ಷಕರಾದವು. ಹಾಗೂ ಹೀಗೂ ಊರಿನ ಹೋರಾಟಗಾರರು ದರೋಡೆಕೋರರನ್ನು ಬಗ್ಗು ಬಡಿದರು. ಕೆಲವು ದರೋಡೆಕೋರರು ಓಡಿ ಹೋದರು. ಸೆರೆಸಿಕ್ಕ ದರೋಡೆಕೋರರನ್ನು ತಳಿಸಲಾಯಿತು. ಊರು ದರೋಡೆಕೋರರಿಂದ ಮುಕ್ತಿ ಹೊಂದಿ ಉಸಿರಾಡುವಂತಾಯಿತು. ಊರಿನ ವಾತಾವರಣ ತಿಳಿಯಾಯಿತು.ಈಗ ಚಿಂತಕರು ಮನೆಯ ಬಾಗಿಲನ್ನು ತೆರೆದು ಹೊರಬಂದರು. ಊರಿನ ಜನರಿಂದ ತಳಿಸಲ್ಪಡುತ್ತಿದ್ದ ದರೋಡೆಕೋರರನ್ನು ನೋಡಿದರು. ಕೂಡಲೇ ದರೋಡೆಕೋರರ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ವಿರೋಧಿಸಿದರು. ಈ ಊರಿನಲ್ಲಿ ಮಾನವೀಯ ಹಕ್ಕುಗಳ ಉಲ್ಲಂಘನೆಯಾಗುತ್ತಿದೆಯೆಂದು ಆಪಾದಿಸಿದರು. ಮಾನವೀಯತೆಯ ಪಾಠ ಹೇಳಿದರು.ಅವರನ್ನು ಬಲಿಪಶುಗಳೆಂದು ಸಂತೈಸಲಾಯಿತು. ಕ್ರಮೇಣ ದರೋಡೆಕೋರರನ್ನು ಸಾಮಜಿಕ ವಲಯದಲ್ಲಿ ಸಂತೈಸುವದು, ಅವರ ಹಕ್ಕು, ಅಭಿವೃದ್ಧಿ, ಕಲ್ಯಾಣಗಳ ಕುರಿತ ಆಂದೋಲನಗಳು ಆ ಊರಿನ ಸಮಾಜಮುಖಿ ಬೆಳವಣಿಗೆಯಾಗಿ ಮಾರ್ಪಾಟಾಯಿತು. ಆ ಊರಿನ ಕೆಲವು ಭಾಗಗಳನ್ನು ದರೋಡೆಕೋರರಿಗೆ ಸ್ವತಂತ್ರವಾಗಿ ಬಿಟ್ಟುಕೊಡುವಂತೆ ಒತ್ತಡ ಹೇರಿದರು. ದರೋಡೆಕೋರರಿಗಾಗಿಯೇ ಅವರಿಗೆ ಒಪ್ಪಿತವಾದ ನ್ಯಾಯಾಂಗಕ್ಕೆ ಅವಕಾಶ ಒದಗಿಸಬೇಕೆಂದು ಒತ್ತಾಯಿಸಲಾಯಿತು. ದರೋಡೆಕೋರರನ್ನು ವಿರೋಧಿಸುವವರನ್ನು ಮನುಷ್ಯ ವಿರೋಧಿ ಎಂದು ಕರೆಯಲಾಯಿತು. ಆ ಊರಿನ ರಾಜಕೀಯ ಹಿತಾಸಕ್ತಿ ಹಾಗೂ ಪೈಪೋಟಿಯೆ ಇವೆಲ್ಲಕ್ಕೂ ಕಾರಣ ಎನ್ನುವದು ನಿರ್ವಿವಾದವಾಗಿತ್ತು.
ಸಾಯುವ ಕೊನೆ ಕ್ಷಣದಲ್ಲೂ ಆ ಮೂವರ ಬಾಯಲ್ಲಿ ಮೊಳಗಿದ ಮಂತ್ರ…. ಭಾರತ್ ಮಾತಾ ಕೀ ಜೈ!
– ನಿತ್ಯಾನಂದ ವಿವೇಕವಂಶಿ
ಈ ದೇಶಕ್ಕೆ ಸ್ವಾತಂತ್ರ್ಯವೆಂಬುದು ಸುಮ್ಮನೆ ಬರಲಿಲ್ಲ. ಸುಮಾರು ಆರೂವರೆ ಲಕ್ಷ ವೀರ ವೀರಾಂಗನೆಯರ ಪ್ರಾಣತ್ಯಾಗದ ಫಲವಾಗಿ ಈ ಸ್ವಾತಂತ್ರ್ಯ ದೊರಕಿದೆ. ಅವರು ತಮ್ಮ ನೆತ್ತರು ಹರಿಸಿ ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ನಾವಿಂದು ಅನುಭವಿಸುತ್ತಿದ್ದೇವೆ. ಈ ಸ್ವಾತಂತ್ರ್ಯ ಹೋರಾಟವೆಂಬ ಮಹಾ ಯಜ್ಞದಲ್ಲಿ ತಮ್ಮ ಪ್ರಾಣವನ್ನೇ ಆಹುತಿಯನ್ನಾಗಿ ನೀಡಿದ ವೀರರ ತ್ಯಾಗ ಬಲಿದಾನಗಳು ಅನನ್ಯವಾದವು. ಹೋರಾಟದ ಈ ಇತಿಹಾಸದಲ್ಲಿ ಹಲವಾರು ರೋಚಕ ಘಟನೆಗಳು, ರೋಮಾಂಚನಕಾರಿ ಕಥೆಗಳು, ಅದ್ವಿತೀಯ ತ್ಯಾಗ ಬಲಿದಾನದ ಘಟನೆಗಳಿವೆ. ಅವುಗಳಲ್ಲಿ ಕೆಲವು ಇತಿಹಾಸದ ಪುಟಗಳಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಟ್ಟಿದ್ದರೆ, ಇನ್ನು ಕೆಲವು ಅಜ್ಞಾತವಾಗಿ, ಹೊರ ಪ್ರಪಂಚಕ್ಕೆ ಪ್ರಕಟಗೊಳ್ಳದೇ, ಕಾಲಗರ್ಭದಲ್ಲಿ ಹೂತುಹೋಗಿ ಕಣ್ಮರೆಯಾಗಿವೆ. ಹೀಗೆ ಇತಿಹಾಸದ ಪುಟಗಳಲ್ಲಿ ದಾಖಲಾಗಿ ಉಳಿದಿರುವ ರೋಚಕ ಘಟನೆಗಳಲ್ಲಿ ಭಗತ್‍ಸಿಂಗ್, ರಾಜಗುರು, ಸುಖದೇವ್‍ರ ತ್ಯಾಗ ಬಲಿದಾನಗಳು ಚಿರಸ್ಮರಣೀಯವಾದುದಾಗಿದೆ. ತಮ್ಮ ಮಾತೃಭೂಮಿಯನ್ನು ಪರಕೀಯರ ಆಳ್ವಿಕೆಯಿಂದ ಮುಕ್ತಗೊಳಿಸಲು, ದಾಸ್ಯದ ಸಂಕೋಲೆಯನ್ನು ಕಿತ್ತೊಗೆಯಲು ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಸಮರವನ್ನೇ ಸಾರಿದ ಈ ಮೂವರು ಕ್ರಾಂತಿಕಾರಿಗಳಿಗೆ ಬ್ರಿಟೀಷ್ ನ್ಯಾಯಾಲಯವು ಗಲ್ಲು ಶಿಕ್ಷೆಯನ್ನು ವಿಧಿಸಿತು. 23 ಮಾರ್ಚ್ 1931 ರಂದು ತಮ್ಮ 23-24 ನೇ ವಯಸ್ಸಿನಲ್ಲಿಯೇ ಈ ಮೂವರು ಕ್ರಾಂತಿಸೋದರರು ನಗುನಗುತ್ತಾ ಬಲಿಗಂಬವನ್ನೇರಿದರು. ದುರದೃಷ್ಟಕರ ಸಂಗತಿಯೆಂದರೆ ನಮಗ್ಯಾರಿಗೂ ಆ ದಿನದ ನೆನಪೇ ಇಲ್ಲ. ಪ್ರತೀ ವರ್ಷ ಮಾರ್ಚ್ 23 ರಂದು ವಾರ್ತಾ ಇಲಾಖೆಯಿಂದ ದಿನಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ಜಾಹಿರಾತು ಬಿಟ್ಟರೆ, ‘ಶಹೀದ್ ಡೇ’ಯನ್ನು ಆಚರಿಸುವ ಕೆಲವು ಸಂಘಟನೆಗಳನ್ನು ಬಿಟ್ಟರೆ ಇಡೀ ದೇಶದಲ್ಲಿ ಎಲ್ಲಿಯೂ ಈ ಅಪೂರ್ವ ಬಲಿದಾನವನ್ನು ಸ್ಮರಿಸಿಕೊಳ್ಳುತ್ತಿಲ್ಲ. ಕಾರಣವೇನೆಂದರೆ ನಮಗೆ ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರ ಹೆಸರೂ ಕೂಡಾ ನೆನಪಿಲ್ಲ.
ಮತ್ತಷ್ಟು ಓದು 
ರಿಲಿಜನ್ನಿನ ಅಫೀಮು “ಶಂಕರಾಚಾರ್ಯ ಹಿಲ್” ಅನ್ನು “ತಖ್ತ್-ಈ-ಸುಲೇಮಾನ್” ಆಗಿಸುತ್ತದೆ
– ರಾಕೇಶ್ ಶೆಟ್ಟಿ
ಬೆಳಗ್ಗೆ ಎದ್ದು ನಮ್ಮಲ್ಲಿ ಕೆಲವರು ಹೇಳುತಿದ್ದ “ನಮಸ್ತೆ ಶಾರದ ದೇವಿ ಕಾಶ್ಮಿರಪುರವಾಸಿನಿ||” ಅನ್ನುವ ಉದ್ಘೋಷವನ್ನು ಇನ್ಮುಂದೆ ಬದಲಾಯಿಸಬೇಕಾದ ಅನಿವಾರ್ಯತೆ ಬರಬಹುದು ಅನ್ನಿಸುತ್ತಿದೆ.ಯಾಕೆಂದರೆ, ನಮ್ಮ ’ಭಾರತೀಯ ಪುರಾತತ್ವ ಇಲಾಖೆ’ ಮಾಡುತ್ತಿರುವ ಕೆಲಸವೇ ಅಂತದ್ದು.
ಟ್ರಿಬ್ಯೂನ್ ಪೇಪರಿನಲ್ಲಿ ಬಂದ ವರದಿಯ ಪ್ರಕಾರ,ಜಮ್ಮು-ಕಾಶ್ಮೀರದ “ಶಂಕರಾಚಾರ್ಯ ಹಿಲ್” ಅನ್ನು ಭಾರತೀಯ ಪುರಾತತ್ವ ಇಲಾಖೆ “ತಖ್ತ್-ಈ-ಸುಲೇಮಾನ್” ಅಂತ ಬದಲಾಯಿಸಿದೆ.ಕಾಶ್ಮೀರವನ್ನು ಈ ಹಿಂದೆ ಶಾರದ ದೇಶ,ಶಾರದ ಪೀಠ ಅಂತೆಲ್ಲ ಕರೆಯುತಿದ್ದರು.ಮೇಲೆ ಹೇಳಿದ್ದ “ನಮಸ್ತೆ ಶಾರದ ದೇವಿ ಕಾಶ್ಮಿರಪುರವಾಸಿನಿ||” ಅದನ್ನೇ ಸಾರುತ್ತಿದೆ.ಇನ್ನು ಶಂಕರಾಚಾರ್ಯರು ದೇಶದ ನಾಲ್ಕು ಮೂಲೆಗಳಿಗೂ ಸಾಗಿ ಶಾರದ ಪೀಠಗಳನ್ನು ಸ್ಥಾಪಿಸಿದ್ದು ಎಲ್ಲರಿಗೂ ತಿಳಿದಿರುವುದೇ,ಹಾಗಿದ್ದ ಮೇಲೆ,ಇವನೆಲ್ಲಿಂದ ಬಂದ ಸುಲೇಮಾನ್?
ದಾಲ್ ನದಿಯ ಕಡೆಗೆ ಮುಖಮಾಡಿ ನಿಂತಿರುವ ಈ ಪರ್ವತವಿರುವುದು ಶ್ರೀನಗರದಲ್ಲಿ.ಇದೇ ಜಾಗದಲ್ಲಿ ಆದಿ ಶಂಕರಾಚಾರ್ಯರು 788-820 ADರಲ್ಲಿ ನೆಲೆಸಿದ್ದರು ಅನ್ನುತ್ತದೆ ಇತಿಹಾಸ.ಪಂಡಿತ್ ಆನಂದ್ ಕೌಲ್ ಅವರ ಪ್ರಕಾರ ಈ ದೇವಸ್ಥಾನದ ನಿರ್ಮಾಣ ಮಾಡಿದ್ದು ಸಂಡಿಮನ್ ಎಂಬುವವ 2629 -2564 BC ಯಲ್ಲಿ.ಆ ನಂತರ ರಾಜ ಗೋಪಾದಿತ್ಯ 426–365 BCರಲ್ಲಿ ಮತ್ತು ರಾಜ ಲಲಿತಾಧಿತ್ಯ 697–734BC ರಲ್ಲಿ ಇದರ ಪುನುರುಜ್ಜೀವನ ಮಾಡಿಸಿದ್ದರು.ಝೈನ್-ಉಲ್-ಅಬಿದ್ದೀನ್ ಅವರು ದೇವಸ್ಥಾನದ ಮೇಲ್ಛಾವಣಿಯನ್ನು ದುರಸ್ತಿ ಮಾಡಿಸಿದ್ದರು.1841–1846ರಲ್ಲಿ ಸಿಖ್ ಗವರ್ನರ್ ಶೇಕ್ ಗುಲಾಂ ಮೊಹಿದುದ್ದೀನ್ ಕೂಡ ದುರಸ್ತಿ ಮಾಡಿಸಿದ್ದರು.ಇದನ್ನು ಜ್ಯೋತೇಶ್ವರ ದೇವಸ್ಥಾನವೆಂದು ಕರೆಯಲಾಗುತಿತ್ತು.ಬೌದ್ಧರಿಗೂ ಪೂಜ್ಯನೀಯವಾದ ಸ್ಥಳವಿದು.ಅವರಿದನ್ನು ಪಾರಸ್- ಪಹಾರ್ ಅನ್ನುತ್ತಾರೆ.ಶಂಕರರು ಇಲ್ಲಿ ಶಿವಲಿಂಗ ಪ್ರತಿಷ್ಟಾಪಿಸಿದ್ದರು.ಶಂಕರರು ಇಲ್ಲಿ ಬಂದನಂತರ,ಈ ಪರ್ವತ ಮತ್ತು ದೇವಸ್ಥಾನವನ್ನು ಶಂಕರಾಚರ್ಯರ ಹೆಸರಿನಿಂದಲೇ ಗುರಿತಿಸಲಾಗುತ್ತಿದೆ.
‘ತುರ್ತು ಪರಿಸ್ಥಿತಿ’ ವಿರುದ್ಧದ ಹೋರಾಟದಲ್ಲಿ ಹಾಸನ ಜಿಲ್ಲೆ ವಹಿಸಿದ ಪಾತ್ರ
-ಕ.ವೆಂ.ನಾಗರಾಜ್
ಪರಕೀಯರ ಸಂಕೋಲೆಯಿಂದ ೧೯೪೭ರಲ್ಲಿ ದೇಶ ಸ್ವತಂತ್ರಗೊಂಡ ಕೇವಲ ೨೮ ವರ್ಷಗಳ ನಂತರದಲ್ಲಿ ಸ್ವಕೀಯರಿಂದಲೇ ಪ್ರಜಾಪ್ರಭುತ್ವಕ್ಕೆ ಅತಿ ದೊಡ್ಡ ಗಂಡಾಂತರ ೧೯೭೫ರಲ್ಲಿ ತುರ್ತುಪರಿಸ್ಥಿತಿ ರೂಪದಲ್ಲಿ ಬಂದೆರಗಿತ್ತು. ಎರಡು ವರ್ಷಗಳ ಈ ತುರ್ತುಪರಿಸ್ಥಿತಿಯ ಅವಧಿ ದೇಶದ ಅತ್ಯಂತ ಕಲಂಕಿತ ಅವಧಿಯಾಗಿದ್ದು, ಇಂದು ಕಂಡುಬರುತ್ತಿರುವ ಅಧಿಕಾರದ ಹಪಾಹಪಿಗೆ ಭದ್ರ ತಳಪಾಯ ಒದಗಿಸಿತ್ತು. ಅಲಹಾಬಾದ್ ಉಚ್ಚನ್ಯಾಯಾಲಯವು ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಮೇಲಿದ್ದ ಭ್ರಷ್ಠಾಚಾರದ ಆರೋಪವನ್ನು ಎತ್ತಿ ಹಿಡಿದು ಅವರ ಚುನಾವಣೆಯ ಗೆಲುವನ್ನು ಅನೂರ್ಜಿತಗೊಳಿಸಿದ್ದಲ್ಲದೆ ಮುಂದಿನ ಆರು ವರ್ಷಗಳು ಅವರು ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದ್ದನ್ನು ಅವರು ಲೆಕ್ಕಿಸದೆ ಹೇಯಮಾರ್ಗ ಹಿಡಿದು ದೇಶದ ಮೇಲೆ ಅನಗತ್ಯವಾದ ತುರ್ತುಪರಿಸ್ಥಿತಿ ಹೇರಿ ಸರ್ವಾಧಿಕಾರಿಯಾಗಿ ಅಟ್ಟಹಾಸದಿಂದ ಮೆರೆದರು. ಕಹಿಯಾದ ಕಠಿಣ ಸತ್ಯವೆಂದರೆ ಭ್ರಷ್ಠಾಚಾರ ತಪ್ಪಲ್ಲವೆಂಬ ಭಾವನೆಗೆ, ಭ್ರಷ್ಠಾಚಾರ ಇಂದು ಮುಗಿಲೆತ್ತರಕ್ಕೆ ಬೆಳೆದಿರುವುದಕ್ಕೆ ಅಂದು ಹಾಕಿದ್ದ ಈ ಭದ್ರ ಬುನಾದಿಯೇ ಕಾರಣ. ಕಾಯದೆ, ಕಾನೂನುಗಳನ್ನು ಅನುಕೂಲಕ್ಕೆ ತಕ್ಕಂತೆ ತಿದ್ದಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘವೂ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳನ್ನು ನಿಷೇಧಿಸಲಾಯಿತು. ಲೋಕಸಭೆಯ ಅವಧಿ ಪೂರ್ಣಗೊಂಡರೂ ಸಂಸತ್ತಿನಲ್ಲಿ ನಿರ್ಣಯ ಮಾಡಿ ಮತ್ತೆ ಎರಡು ವರ್ಷಗಳ ಅವಧಿಗೆ ಮುಂದುವರೆಸಲಾಯಿತು. ಸಂವಿಧಾನಕ್ಕೆ ಹಲವು ತಿದ್ದುಪಡಿಗಳನ್ನು ಮಾಡಲಾಯಿತು. ೧೯೭೫ರ ಜೂನ್ ೨೬ರ ಬೆಳಕು ಹರಿಯುವಷ್ಟರಲ್ಲಿ ಭಾರತದ ಸ್ವತಂತ್ರತೆ ನಿರ್ಬಂಧಿಸಲ್ಪಟ್ಟಿತು. ಅಭಿವ್ಯಕ್ತಿ ಸ್ವಾತಂತ್ರ್ಯ, ಲೇಖನ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಸ್ವಂತ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ, ಇತ್ಯಾದಿ ಎಲ್ಲಾ ನಾಗರಿಕ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ದೇಶಾದ್ಯಂತ ನೂರಾರು ವಿರೋಧ ಪಕ್ಷದ ನಾಯಕರುಗಳನ್ನು ಬಂಧಿಸಿ ಸೆರೆಯಲ್ಲಿರಿಸಿದರು. ಜನರು ಸರ್ಕಾರದ ವಿರುದ್ಧ ಮಾತನಾಡಲು ಅಂಜುವಂತೆ ಆಯಿತು. ಆಕಾಶವಾಣಿ ಇಂದಿರಾವಾಣಿ ಆಯಿತು, ದೂರದರ್ಶನ ಇಂದಿರಾದರ್ಶನವಾಯಿತು. ಇಂದಿರಾ ಪರ ಸುದ್ದಿಗಳಿಗೆ ಮಾತ್ರ ಅವಕಾಶ. ‘ಇಂದಿರಾ ಅಂದರೆ ಇಂಡಿಯಾ, ಇಂಡಿಯಾ ಅಂದರೆ ಇಂದಿರಾ’ ಆಗಿಹೋಯಿತು.





