ವಿಷಯದ ವಿವರಗಳಿಗೆ ದಾಟಿರಿ

Posts from the ‘ಇತಿಹಾಸ’ Category

8
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 22
ಚಿದಂಬರಂ ಪಿಳ್ಳೈ
– ರಾಮಚಂದ್ರ ಹೆಗಡೆ

downloadಭಾರತ-ಶ್ರೀಲಂಕಾ ನಡುವಿನ ಸಮುದ್ರದಲ್ಲಿ ನೌಕಾಯಾನದ ಹೆಸರಿನಲ್ಲಿ ಜನರ ಸುಲಿಗೆ ಮಾಡುತ್ತಿದ್ದ ಬ್ರಿಟಿಷರ ಆಟಾಟೋಪಕ್ಕೆ ಉತ್ತರವಾಗಿ ‘ಸ್ವದೇಶಿ ನ್ಯಾವಿಗೇಷನ್ ಕಂಪೆನಿ’ ಹುಟ್ಟುಹಾಕಿದ ಧೀರ ಸಾಹಸಿ ತಮಿಳುನಾಡಿನ ಚಿದಂಬರಂ ಪಿಳ್ಳೈ. ತಮ್ಮದೇ ಆದ ಸಂಪೂರ್ಣ ಸ್ವದೇಶಿ ನೌಕಾಯಾನ ಸಂಸ್ಥೆಯನ್ನು 1906 ರ ಸಮಯದಲ್ಲೇ ಹುಟ್ಟುಹಾಕಿ ಈಸ್ಟ್ ಇಂಡಿಯಾ ಕಂಪನಿಯೇ ಪತರಗುಟ್ಟುವಂತೆ ಮಾಡಿದ, ಭಾರತೀಯರ ಪ್ರತಿರೋಧ ಕೇವಲ ಯುದ್ಧ ಬಲಿದಾನಗಳಲ್ಲಷ್ಟೇ ಅಲ್ಲ ಎಂದು ನಿರೂಪಿಸಿದ ಅಪ್ರತಿಮ ದೇಶಭಕ್ತ ಪಿಳ್ಳೈ. ಆಗಿನ ಕಾಲದಲ್ಲಿ ತಮಿಳುನಾಡಿನಲ್ಲಿ ಸ್ವರಾಜ್ಯ ಎಂಬ ಶಬ್ದವನ್ನು ಉಚ್ಚಾರ ಮಾಡಲೂ ಜನರು ಹೆದರುತ್ತಿದ್ದರು. ‘ಸ್ವಾತಂತ್ಯ್ರ’ ಎಂದು ಅಪ್ಪಿ ತಪ್ಪಿ ಹೇಳಿದರೆ ಅದು ರಾಜದ್ರೋಹವಾಗುತ್ತದೆ ಎಂದು ಜನರಿಗೆ ಅಂಜಿಕೆ. ಅಂಥ ಒಂದು ಕಾಲದಲ್ಲಿ ಚಿದಂಬರಂ ಪಿಳ್ಳೈಯವರು ತಮಿಳುನಾಡಿನಲ್ಲಿ ‘ವಂದೇ ಮಾತರಂ’ ಎಂದು ಘೋಷಣೆ ಕೂಗಿದರು. ಬ್ರಿಟಿಷರ ಚಕ್ರಾಧಿಪತ್ಯದ ವಿರುದ್ಧ ಜನರನ್ನು ಎತ್ತಿಕಟ್ಟಿದರು. ಸಹಸ್ರಾರು ಸ್ವಾತಂತ್ಯ್ರ ವೀರರನ್ನು ಹುರಿಗೊಳಿಸಿದ ಚಿದಂಬರಂ ಪಿಳ್ಳೈಯವರು ರಾಜದ್ರೋಹದ ಆಪಾದನೆ ಹೊತ್ತು ಆರು ವರ್ಷಗಳ ಕಾಲ ಸೆರೆಮನೆಯಲ್ಲಿ ಕಷ್ಟಪಟ್ಟರು. ಮತ್ತಷ್ಟು ಓದು »

6
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 21:
ಲಾಲಾ ಹರದಯಾಳ್
– ರಾಮಚಂದ್ರ ಹೆಗಡೆ

IMG26‘ಬೇಕಾಗಿದ್ದಾರೆ – ಭಾರತದಲ್ಲಿ ಬಂಡಾಯವೆಬ್ಬಿಸಲು ಸೈನಿಕರು.
ವೇತನ – ಸಾವು
ಬಹುಮಾನ – ಹುತಾತ್ಮತೆ
ಪೆನ್ಷನ್ – ಸ್ವಾತಂತ್ರ್ಯ
ಯುದ್ಧ ಕ್ಷೇತ್ರ – ಭಾರತ’

ಹೀಗೆ ದಪ್ಪ ದಪ್ಪ ಅಕ್ಷರಗಳಲ್ಲಿ ಈ ಜಾಹೀರಾತು, 1914ರ ಸೆಪ್ಟೆಂಬರ್ ತಿಂಗಳಲ್ಲಿ ಹೊರಬಿದ್ದ “ಗದರ್” ಪತ್ರಿಕೆಯ ಮುಖಪುಟದಲ್ಲಿ ಅಚ್ಚಾಗಿತ್ತು. ಗದರ್ (ಬಂಡಾಯ) ಪಕ್ಷ, ಗದರ್ ಪತ್ರಿಕೆ – ಮೊದಲನೆಯ ಮಹಾಯುದ್ಧ ಆರಂಭವಾಗುವುದಕ್ಕೆ ಸ್ವಲ್ಪ ಮುಂಚೆ ಸ್ಥಾಪಿತವಾಗಿ, ಸಶಸ್ತ್ರ ಬಂಡಾಯವೆಬ್ಬಿಸಿ ಭಾರತವನ್ನು ಸ್ವತಂತ್ರಗೊಳಿಸಲು ಮಹಾನ್ ಪ್ರಯತ್ನ ನಡೆಸಿದವು. ಈ ಕ್ರಾಂತಿಯ ಉರಿಯೆಬ್ಬಿಸಿದ ಸಾಹಸಿ ಲಾಲಾ ಹರದಯಾಳ್. ವಿದೇಶದಲ್ಲಿರುವ ಭಾರತೀಯರನ್ನು ಸಂಘಟಿಸಿ ಅವರಲ್ಲಿ ತಾಯ್ನಾಡಿನ ಸ್ವಾತಂತ್ರ್ಯ ಭಾವನೆ ಅರಳಿಸಿ ಅವರೆಲ್ಲರೂ ಸ್ವದೇಶಕ್ಕೆ ತೆರಳಿ ದಂಗೆಯೇಳುವಂತೆ ಮಾಡಬೇಕು ಎಂಬುದು ಲಾಲನ ಅಪೇಕ್ಷೆಯಾಗಿತ್ತು. 1884 ರಲ್ಲಿ ಜನಿಸಿದ ಹರದಯಾಳ್ ಚಿಕ್ಕಂದಿನಲ್ಲೇ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ತಮ್ಮ ತಂದೆ ತಾಯಿಯಿಂದ ಕೇಳಿ ತಿಳಿದಿದ್ದರು. ಬ್ರಿಟಿಷ್ ಸರ್ಕಾರದಿಂದಲೇ ವಿದ್ಯಾರ್ಥಿ ವೇತನ ಪಡೆದು ಉನ್ನತ ವ್ಯಾಸಂಗಕ್ಕಾಗಿ ಆಕ್ಸ್ಫರ್ಡ್ ಗೆ ತೆರಳಿದ ಲಾಲಾ ಅಲ್ಲಿ ಸಾವರ್ಕರ್, ಶ್ಯಾಮಜಿ ಕೃಷ್ಣವರ್ಮ, ಭಾಯಿ ಪರಮಾನಂದರ ಸಂಪರ್ಕಕ್ಕೆ ಬಂದು ಭಾರತ ಭಕ್ತರಾಗಿ ಬದಲಾದರು. ಮತ್ತಷ್ಟು ಓದು »

5
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 20:
ಬಿನೋಯ್ ಬಾದಲ್ ದಿನೇಶ್:
– ರಾಮಚಂದ್ರ ಹೆಗಡೆ

Binoy-Badal-Dineshಭಾರತ ಸ್ವಾತಂತ್ರ್ಯ ಸಮರದ ಪುಟಗಳನ್ನು ತೆರೆಯುತ್ತಾ ಹೋದಂತೆ ಅಲ್ಲಿ ಒಂದಕ್ಕಿಂತ ಒಂದು ರೋಚಕ ಅಧ್ಯಾಯವನ್ನು ಕಾಣುತ್ತ ಹೋಗಬಹುದು. ದೇಶವನ್ನು ದಾಸ್ಯದ ಕಪಿಮುಷ್ಟಿಯಿಂದ ರಕ್ಷಿಸಲು ಈ ದೇಶದ ಬಿಸಿರಕ್ತದ ಯುವಕರು ಜೀವ ನೀಡಲಿಕ್ಕೂ ಹಿಂದೇಟು ಹಾಕದ ಸ್ಪೂರ್ತಿದಾಯಕ ಸಾಹಸಗಾಥೆ ನಮಗಲ್ಲಿ ಸಿಗುತ್ತವೆ. ದೇಶದ ರಕ್ಷಣೆಯ ವಿಚಾರ ಬಂದಾಗ ರಕ್ತವೇನು, ಜೀವವನ್ನೂ ಕೊಟ್ಟೇವು ಎಂದಿದ್ದಷ್ಟೇ ಅಲ್ಲ, ಸ್ವಯಂ ತಮ್ಮನ್ನು ಅರ್ಪಿಸಿಕೊಂಡು ನಗುನಗುತ್ತಾ ನೇಣುಗಂಬವೇರಿದ ರೋಮಾಂಚಕಾರಿ ಸಾಹಸಗಳು ಸ್ವಾತಂತ್ರ್ಯ ಸಮರದ ಇತಿಹಾಸವನ್ನು ರಕ್ತರಂಜಿತವಾಗಿ, ವರ್ಣರಂಜಿತವಾಗಿ ಮಾಡಿವೆ. ಬಂಗಾಳದ ಈ ಮೂವರು ಬಿಸಿರಕ್ತದ ದೇಶಪ್ರೇಮಿ ತರುಣರು ಬಿನೋಯ್ ಬಸು, ಬಾದಲ್ ಗುಪ್ತಾ, ದಿನೇಶ್ ಗುಪ್ತಾ ಹಾಗೆ ಸ್ವಾತಂತ್ರ್ಯದ ಕನಸಿನಲ್ಲಿ ಕ್ರಾಂತಿಯ ಕಹಳೆ ಊದಿ ಸಾವಿನ ಕದ ತಟ್ಟಿದಾಗ ಅವರಿಗಿನ್ನೂ 22, 19, 18 ವರ್ಷಗಳಷ್ಟೇ. ಮತ್ತಷ್ಟು ಓದು »

4
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 19:
ಸುಬ್ರಮಣ್ಯ ಭಾರತಿ
– ರಾಮಚಂದ್ರ ಹೆಗಡೆ

Subramanya_Bharathiಮಹಾಕವಿ ಭಾರತಿಯಾರ್ ಎಂದೇ ಪ್ರಸಿದ್ಧರಾದ, ಭಾರತದ ಅತ್ಯುತ್ತಮ ಕವಿಗಳಲ್ಲಿ ಒಬ್ಬರು ಎಂಬ ಖ್ಯಾತಿಗೆ ಪಾತ್ರರಾದ ತಮಿಳುನಾಡಿನ ಕವಿ, ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕರು ಶ್ರೀ ಸುಬ್ರಮಣ್ಯ ಭಾರತಿ. ತಮ್ಮ ರಾಷ್ಟ್ರೀಯವಾದಿ ಸಾಹಿತ್ಯದ ಮೂಲಕ ಭಾರತೀಯ ಸ್ವಾತಂತ್ರ್ಯ ಸಂಗ್ರಾಮಕ್ಕೆ ದಕ್ಷಿಣ ಭಾರತದಲ್ಲಿ ಜನಸಮೂಹವನ್ನು ಸಂಘಟಿಸುವಲ್ಲಿ ಸುಬ್ರಮಣ್ಯ ಭಾರತಿಯವರ ಪಾತ್ರ ಬಲು ದೊಡ್ಡದು. ಆವರ ಹಲವಾರು ಕೃತಿಗಳು ಭಾರತೀಯ ಸ್ವಾತಂತ್ಯ ಆಂದೋಲನದ ಕಾಲದಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಜ್ವಾಲೆಯನ್ನು ಪ್ರಖರಗೊಳಿಸುವಲ್ಲಿ ನೆರವಾದವು ಹಾಗೂ ದೇಶಪ್ರೇಮವನ್ನು ಬಡಿದೆಬ್ಬಿಸಿದವು. 1882ರಲ್ಲಿ ತಮಿಳುನಾಡಿನ ಎತ್ತಯಾಪುರಂ ಎಂಬ ಗ್ರಾಮದಲ್ಲಿ ಜನಿಸಿದ ಸುಬ್ರಮಣ್ಯ ಭಾರತಿ ತಿರುನಲ್ವೇಲಿಯಲ್ಲಿ ಆರಂಭಿಕ ಶಿಕ್ಷಣ ನಂತರ ವಾರಣಾಸಿ ಯಲ್ಲಿ ಪ್ರೌಢ ಹಾಗೂ ಪದವಿ ಶಿಕ್ಷಣ ಪಡೆದರು. ಬಾಲ್ಯದಿಂದಲೇ ಅತ್ಯಂತ ಪ್ರತಿಭಾಶಾಲಿ ಕವಿಯಾಗಿದ್ದ ಭಾರತಿ ತಮ್ಮ 11ನೇ ವಯಸ್ಸಿನಲ್ಲೆ ಎತ್ತಯಾಪುರಂನ ಆಸ್ಥಾನ ಕವಿಗಳು ಹಾಗು ಸಂಗೀತಗಾರರ ಸಮ್ಮೇಳನಕ್ಕೆ ಆಹ್ವಾನಿತರಾಗಿದ್ದರು. ವಾರಣಾಸಿ ಯಲ್ಲಿ ನೆಲಸಿದ್ದ ಅವಧಿಯಲ್ಲಿ ಭಾರತಿಯವರು ಹಿಂದೂ ಆಧ್ಯಾತ್ಮಿಕತೆ ಹಾಗು ರಾಷ್ಟ್ರೀಯತೆಯ ಪ್ರಭಾವಕ್ಕೆ ಒಳಗಾದರು. ಜೊತೆಗೆ ಅವರು ಸಂಸ್ಕೃತ, ಹಿಂದಿ ಹಾಗು ಆಂಗ್ಲ ಭಾಷೆಗಳಲ್ಲಿ ಪರಿಣತಿಯನ್ನು ಹೊಂದಿದರು. ಡಿಸೆಂಬರ್ 1905ರಲ್ಲಿ, ಬನಾರಸ್ ನಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದಲ್ಲಿ ಭಾರತಿ ಪಾಲ್ಗೊಂಡರು. ನಂತರ ಅವರು ವಿವೇಕಾನಂದರ ಮಾನಸ ಪುತ್ರಿ ಸೋದರಿ ನಿವೇದಿತಾರನ್ನು ಸಂಧಿಸಿದರು. ಮತ್ತಷ್ಟು ಓದು »

3
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 18:
ದುರ್ಗಾ ದೇವಿ ವೋಹ್ರಾ (ದುರ್ಗಾ ಬಾಭಿ) :
– ರಾಮಚಂದ್ರ ಹೆಗಡೆ

20-women-who-made-our-heads-raise-high-8_1457531002_725x725ನೀವು ‘ಲೆಜೆಂಡ್ ಆ ಭಗತ್ ಸಿಂಗ್’ ಸಿನೆಮಾ ನೋಡಿದ್ದರೆ ಅದರಲ್ಲಿ ಬ್ರಿಟಿಷ್ ಅಧಿಕಾರಿ ಸೌಂಡರ್ಸ್ ಹತ್ಯೆಯ ನಂತರ ಭಗತ್ ಸಿಂಗ್ ಲಾಹೋರ್ ನಿಂದ ಕಲ್ಕತ್ತಾ ಗೆ ತಪ್ಪಿಸಿಕೊಂಡು ಹೋಗುವ ದೃಶ್ಯ ನೋಡಿರುತ್ತೀರಿ. ಬ್ರಿಟಿಷರು ಭಗತ್ ಸಿಂಗ್ ಗಾಗಿ ದೇಶಾದ್ಯಂತ ಕಟ್ಟೆಚ್ಚರದ ಹುಡುಕಾಟ ನಡೆಸಿದ್ದಾಗ ಅಲ್ಲಿಂದ ಕಲ್ಕತ್ತಾ ಗೆ ತಪ್ಪಿಸಿಕೊಂಡು ಹೋಗುವ ಐಡಿಯಾ ಕೊಟ್ಟು ಹಾಗೆ ತಪ್ಪಿಸಿಕೊಂಡು ಹೋಗಲು ಭಗತ್ ಸಿಂಗ್ ನ ಪತ್ನಿಯಂತೆ ವೇಷ ಧರಿಸಿ ಅವನಿಗೆ ಕಲ್ಕತ್ತಾ ತಲುಪಲು ನೆರವಾದವಳು ಈ ದುರ್ಗಾ ಬಾಭಿ. ಮತ್ತಷ್ಟು ಓದು »

1
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 16:
ಚಾಪೇಕರ್ ಸಹೋದರರು
– ರಾಮಚಂದ್ರ ಹೆಗಡೆ

ChapekarBrsಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮೈಲಾರ ಮಹಾದೇವರ ಕುಟುಂಬ ಸೆರೆವಾಸ ಅನುಭವಿಸಿದರೆ ವಿವೇಕಾನಂದರ ಕುಟುಂಬ ರಾಷ್ಟ್ರಜಾಗೃತಿಯಲ್ಲಿ ತೊಡಗಿಕೊಂಡ ಸ್ಫೂರ್ತಿದಾಯಕ ಕಥೆಯನ್ನು ಇದೇ ಸರಣಿಯಲ್ಲಿ ಹಿಂದೆ ಓದಿದ್ದೇವೆ. ಪುಣೆಯ ಚಾಪೇಕರ್ ಕುಟುಂಬ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಬಲಿದಾನಗೈದು ಭಾರತಮಾತೆಯ ದಾಸ್ಯ ವಿಮುಕ್ತಿ ಆಂದೋಲನದಲ್ಲಿ ಸಂಪೂರ್ಣವಾಗಿ ತನ್ನನ್ನು ಸಮರ್ಪಿಸಿಕೊಂಡ ಕಥೆ ರೋಮಾಂಚನಕಾರಿ. ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ದಾಮೋದರ ಚಾಪೇಕರ್, ಬಾಲಕೃಷ್ಣ ಚಾಪೇಕರ್ ಮತ್ತು ವಾಸುದೇವ್ ಚಾಪೇಕರ್ ತಮ್ಮ ಅಪ್ರತಿಮ ಶೌರ್ಯ ಹಾಗೂ ದೇಶಭಕ್ತಿಯಿಂದಾಗಿ ಕ್ರಾಂತಿಯ ಕಹಳೆ ಮೊಳಗಿಸಿ ಬಲಿದಾನಗೈದ ಕಥೆ ಇತಿಹಾಸದಲ್ಲಿ ಅಪರೂಪದ ಸಂಗತಿ. ದೇಶದ ಇತರ ಕ್ರಾಂತಿಕಾರಿಗಳ ಹೋರಾಟದ ಯಶೋಗಾಥೆಯನ್ನು, ಬಲಿದಾನದ ಸಾಹಸ ಕಥೆಯನ್ನು ಕೇಳುತ್ತಲೇ ಬೆಳೆದ ಚಾಪೇಕರ್ ಸಹೋದರರಿಗೆ ತಾವೂ ದೇಶದ ದಾಸ್ಯ ವಿಮುಕ್ತಿಗೆ ಹೋರಾಡಬೇಕೆಂಬ ಕನಸು ಹುಟ್ಟಿತು. ಇಂಗ್ಲಿಷರ ದರ್ಪ ದಬ್ಬಾಳಿಕೆಯ ವಿರುದ್ಧ ಹೋರಾಡಲು ಶರೀರಬಲ ಬೇಕು, ಸಂಘಟನೆ ಬೇಕು ಎಂದು ನಿರ್ಧರಿಸಿದ ಚಾಪೇಕರ್ ಸಹೋದರರು ದಿನನಿತ್ಯ ಕಠಿಣ ವ್ಯಾಯಾಮ ಯೋಗಾಭ್ಯಾಸದಲ್ಲಿ ನಿರತರಾದರು. ಮದುವೆಯಾಗಿ ಮಕ್ಕಳಾಗಿ ಹೊಸ ಜವಾಬ್ದಾರಿಗಳು ಬಂದರೂ ಅವರ ಸ್ವಾತಂತ್ರ್ಯದ ಕನಸು ದೂರಾಗಲಿಲ್ಲ. ಮತ್ತಷ್ಟು ಓದು »

31
ಆಗಸ್ಟ್

ಕಾಶ್ಮೀರದ ಐತಿಹಾಸಿಕ ಸತ್ಯಗಳು : ನಿಲುಮೆ ವಿಚಾರ ಸಂಕಿರಣ

– ಹರೀಶ್ ಆತ್ರೇಯ

14088692_10154596775090649_5386569408904041755_nಕಾಶ್ಮೀರ ವಿವಾದಿತ ಪ್ರದೇಶವೇಕಾಗುತ್ತಿದೆ ಮತ್ತು ಅಲ್ಲಿನ ನಿಜ ಸ್ವರೂಪವೇನು ಎಂಬುದನ್ನು ತಿಳಿಯಲು ನಿಲುಮೆ ತಂಡ ಆಯೋಜಿಸಿದ ಕಾಶ್ಮೀರದ ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು ಎಂಬ ಸಂವಾದ ಕಾರ್ಯಕ್ರಮದಲ್ಲಿನ ಪ್ರೊ. ಪ್ರೇಮಶೇಖರ್ ರವರ ಕೆಲವು ವಿಚಾರಗಳನ್ನು ಹಂಚಿಕೊಳ್ಳುತಿದ್ದೇನೆ..

ಭಾರತದ ವಿಭಜನೆಯಾದಾಗ ಬ್ರಿಟಿಷರು ತಮ್ಮ ನೇರ ಆಡಳಿತಕ್ಕೆ ಒಳಪಟ್ಟ ರಾಜ್ಯಗಳನ್ನು ಭಾರತವೆಂದು ಮತ್ತು ಉಳಿದ ದೇಶೀಯ ಸ್ವತಂತ್ರ್ಯ ಪ್ರಾಂತ್ಯಗಳನ್ನು ಅವುಗಳ ಇಚ್ಚೆಯಂತೆ ಭಾರತದಲ್ಲಾಗಲೀ ಅಥವಾ ಪಾಕೀಸ್ತಾನದಲ್ಲಿಯಾಗಲೀ ಸೇರುವಂತೆ ಹೇಳಲಾಯ್ತು. ಇಂಡಿಯನ್ ಇಂಡಿಪೆಂಡೆನ್ಸ್ ಆಕ್ಟ್ ಪ್ರಕಾರ “British paramount should relapse on the midnight of 14 Aug 1947. ಎಂದರೆ ಸುಮಾರು ಆರುನೂರು ಸ್ಥಳೀಯ ಸಂಸ್ಥಾನಗಳು ಬ್ರಿಟಿಷ್ ಕಾಲನಿಗಳಾಗುವದಕ್ಕೂ ಮುಂಚೆ ಇದ್ದ ರೀತಿಯಲ್ಲಿ ಸ್ವತಂತ್ರ್ಯವಾಗಿರಬಹುದು. ಅಲ್ಲಿನ ಸ್ಥಳೀಯ ನಾಯಕನ (ಆತ ನವಾಬನಾಗಿರಬಹುದು ಅಥವ ಅರಸನಾಗಿರಬಹುದು) ಆತನ ಆಜ್ಞೆ ಅಥವಾ ನಡೆಯಂತೆ ಆ ಸಂಸ್ಥಾನಗಳು ಪಾಕೀಸ್ತಾನದೊಳಗೆ ಅಥವಾ ಭಾರತದೊಳಗೆ ವಿಲೀನವಾಗಬಹುದು. ಅದರ ಜೊತೆಗೆ ಮತ್ತೂ ಒಂದು ಸಲಹೆಯನ್ನು ಬ್ರಿಟಿಷರು ಕೊಡುತ್ತಾರೆ ಅದೇನೆ೦ದರೆ ವಿಲೀನಗೊಳಿಸಿಕೊಳ್ಳುವಾಗ ಆ ಪ್ರಾಂತ್ಯದ ಭೌಗೋಳಿಕ ನೆಲೆ ಮತ್ತು ಪ್ರಜೆಗಳ ಧರ್ಮವನ್ನು ಪರಿಗಣಿಸಿ ಎಂಬುದಾಗಿತ್ತು. ಇದನ್ನು ಕೇಳಿದ ಕಾಶ್ಮೀರ ಮತ್ತು ತಿರುವನಂತಪುರಂ ಸಂಸ್ಥಾನಗಳು ಸ್ವತಂತ್ರ್ಯವಾಗುವ ಯೋಚನೆಯನ್ನು ಮಾಡಿದವು. ಅಂದರೆ ಯಾರ ಆಡಳಿತಕ್ಕೂ ಒಳಪಡದೆ (ಅತ್ತ ಪಾಕೀಸ್ತಾನವೂ ಅಲ್ಲ ಇತ್ತ ಭಾರತವೂ ಅಲ್ಲ) ಸ್ವತಂತ್ರ್ಯವಾಗಿ ರಾಜ್ಯಭಾರ ಮಾಡುವುದು. ಇದು ಪಾಕೀಸ್ತಾನಕ್ಕೆ ಸಮ್ಮತವಾಗಲಿಲ್ಲ. ಏಕೆಂದರೆ PAKISTAN ನಲ್ಲಿನ K ಕಾಶ್ಮೀರವನ್ನ ಸೂಚಿಸುತ್ತೆ. PAKISTAN ಎನ್ನುವುದು ಒಂದು ಪೂರ್ಣ ಹೆಸರಲ್ಲ, ಹಲವು ಸ್ಥಳಗಳ ಅಕ್ಷರಗಳನ್ನು ಸೇರಿಸಿದ ಸಂಕ್ಷಿಪ್ತ ರೂಪ. ಇದನ್ನು ಕೊಡಮಾಡಿದವನು ಲಂಡನ್ನಿನ ವಿದ್ಯಾರ್ಥಿಯಾಗಿದ್ದ  ಚೌದರಿ ರೆಹಮತ್ ಆಲಿ ಮತ್ತು ಪ್ರಕಟಿಸಿದ್ದು ೨೮ ಜನವರಿ ೧೯೩೩ರಂದು ನೌ ಆರ್ ನೆವರ್ ಎಂಬ ಪತ್ರಿಕೆಯಲ್ಲಿ, ಆತನ ಪ್ರಕಾರ ವಾಯುವ್ಯ ಭಾರತವು ಸಾಮಾಜಿಕವಾಗಿ ಮತ್ತು ಧಾರ್ಮಿಕವಾಗಿ ಭಿನ್ನವಾಗಿದೆ ಮತ್ತು ಧಾರ್ಮಿಕವಾಗಿ ಮಧ್ಯ ಏಷಿಯಾಕ್ಕೆ ಮತ್ತು ಪಶ್ಚಿಮ ಏಷಿಯ ಹತ್ತಿರವಾಗಿದೆ, ಆದ ಕಾರಣ ಈ ಭಾಗವನ್ನು ಭಾರತದಿಂದ ಪ್ರತ್ಯೇಕಿಸಿ ಮಧ್ಯ ಏಷಿಯಾದೊಂದಿಗೆ ಸೇರಿಸಿ ಹೊಸತೊಂದು ರಾಷ್ಟ್ರವನ್ನು ಮಾಡಬೇಕು ಎಂಬುದು. ಆತ ಸೇರಿಸಿದ ಪ್ರಾಂತ್ಯಗಳು ಈ ಕೆಳಗಿನಂತಿವೆ. ಮತ್ತಷ್ಟು ಓದು »

29
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 13
ವೀರಪಾಂಡ್ಯ ಕಟ್ಟಬೊಮ್ಮನ್
– ರಾಮಚಂದ್ರ ಹೆಗಡೆ

Veerapandiya_Kattabomman_postage_stampಈಸ್ಟ್ ಇಂಡಿಯಾ ಕಂಪನಿ ಭಾರತಕ್ಕೆ ಆಗಮಿಸಿ ತನ್ನ ಬೇರು ಬಿಡಲು ಆರಂಭಿಸಿದ ದಿನಗಳಲ್ಲೇ ಅವರ ವಿರುದ್ಧ ಸಿಡಿದೆದ್ದು ಅವರಿಗೆ ಸೆಡ್ಡು ಹೊಡೆದು ನೇಣು ಶಿಕ್ಷೆಗೆ ಗುರಿಯಾದ ಅಪ್ರತಿಮ ಹೋರಾಟಗಾರ ವೀರಪಾಂಡ್ಯ ಕಟ್ಟಬೊಮ್ಮನ್. ಬ್ರಿಟಿಷರು ಭಾರತದಲ್ಲಿ ಭದ್ರವಾಗಿ ನೆಲೆಯೂರಿದ ತಕ್ಷಣ ತಮ್ಮ ದಬ್ಬಾಳಿಕೆಯನ್ನು ಆರಂಭಿಸಿದರು. ಸಣ್ಣ ಪುಟ್ಟ ರಾಜರುಗಳಿಗೆ ಕಿರುಕುಳ ನೀಡುತ್ತಾ ಅಧಿಕಾರ ಚಲಾಯಿಸಲು ಶುರುಮಾಡಿದರು. ಹೆಚ್ಚು ಹೆಚ್ಚು ತೆರಿಗೆ ವಿಧಿಸಿದರು. ಅವರ ಕಿರುಕುಳ ಸಹಿಸಲಾರದ ಬಹು ಮಂದಿ ರಾಜರುಗಳು ಅವರ ಅಡಿಯಾಳುಗಳಾದರು. ಆದರೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಪಾಂಚಾಲಂಕುರುಚ್ಚಿಯ ಪಾಳೆಯಗಾರ ವೀರಪಾಂಡ್ಯ ಕಟ್ಟಬೊಮ್ಮನ್ ಮಾತ್ರ ಅವರೆದುರು ಬಗ್ಗಲಿಲ್ಲ. ಪಾಂಚಾಲಂಕುರುಚ್ಚಿಯ ಸುತ್ತಮುತ್ತಲಿನ ಪ್ರದೇಶಕ್ಕೆ ಮ್ಯಾಕ್ಸ್‌ವೆಲ್ ಎಂಬಾತ ಆಗಿನ ಕಂಪೆನಿಯ ಅಧಿಕಾರಿ. ಬ್ರಿಟಿಷ್ ಸರ್ಕಾರಕ್ಕೆ ತೆರಿಗೆ ಕಟ್ಟಲು ಹಲವು ಬಾರಿ ನೋಟೀಸ್ ಕಳಿಸಿದರೂ ವೀರಪಾಂಡ್ಯ ಅದಕ್ಕೆ ಸೊಪ್ಪು ಹಾಕಲಿಲ್ಲ. ಇದನ್ನರಿತ ಮ್ಯಾಕ್ಸ್‌ವೆಲ್ ಬೊಮ್ಮುವಿಗೆ ಹಲವಾರು ಬೆದರಿಕೆ ಪತ್ರಗಳನ್ನು ಬರೆದ. ‘ಕಪ್ಪ ಸಲ್ಲಿಸಿ, ಇಲ್ಲದಿದ್ದರೆ ಯುದ್ಧಕ್ಕೆ ಬರುತ್ತೇವೆ’ ಎಂದು ಹೆದರಿಸಿದ. ‘ನಾವೀ ಮಣ್ಣಿನ ಮಕ್ಕಳು. ಇದು ನಮ್ಮ ಭೂಮಿತಾಯಿ. ನಾವು ಘನತೆ ಗೌರವಗಳಿಂದ ಬಾಳುವವರು. ನಮ್ಮ ಭೂಮಿಯ ಮರ್ಯಾದೆಯ ಸಲುವಾಗಿ ನಾವು ಪ್ರಾಣ ನೀಡುವೆವೇ ಹೊರತು ವಿದೇಶಿ ಶತ್ರುಗಳಿಗೆ ತಲೆಬಾಗುವುದಿಲ್ಲ. ಬನ್ನಿ ಹೋರಾಡೋಣ’ ಎಂದು ವೀರಪಾಂಡ್ಯ ಯುದ್ಧಕ್ಕೆ ಆಹ್ವಾನ ನೀಡಿದ. ಮತ್ತಷ್ಟು ಓದು »

27
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 12
ಅಲ್ಲೂರಿ ಸೀತಾರಾಮರಾಜು
– ರಾಮಚಂದ್ರ ಹೆಗಡೆ

Alluri-Sitarama-Rajuಭಾರತದ ಸ್ವಾತಂತ್ರ್ಯಕ್ಕಾಗಿ, ಆದಿವಾಸಿ ಗುಡ್ಡಗಾಡು ಜನಾಂಗಗಳ ಹಕ್ಕುಗಳಿಗೆ ತನ್ನ ಪ್ರಾಣವನ್ನು ತೆತ್ತ ಕ್ರಾಂತಿಕಾರಿ ಹೋರಾಟಗಾರ, ಭಾರತದ ನೆಲದಲ್ಲಿ ತಮ್ಮದೇ ಆದ ಇತಿಹಾಸ ಮತ್ತು ಸಂಸ್ಕೃತಿಯನ್ನು ಕಾಪಾಡಿಕೊಂಡು ಬಂದಿರುವ, ಈ ನೆಲದ ನಿಜ-ವಾರಸುದಾರರೆಂದು ಹೇಳಲಾಗುವ ಆದಿವಾಸಿಗಳ ಹಕ್ಕು ಕುರಿತಂತೆ ಈ ದೇಶದಲ್ಲಿ ಪ್ರಥಮ ಬಾರಿಗೆ ಧ್ವನಿ ಎತ್ತಿದ್ದು ಆಂಧ್ರ ಪ್ರದೇಶದ ಉತ್ತರ ತೆಲಂಗಾಣದ ಅಲ್ಲೂರಿ ಸೀತಾರಾಮ ರಾಜು ಎಂಬ ಒಬ್ಬ ಅಪ್ರತಿಮ ನಾಯಕ ಮತ್ತು ದೇಶಭಕ್ತ. ಇಂದಿನ ಬಸ್ತಾರ್ ಅರಣ್ಯ ಪ್ರದೇಶವೆಂದು ಕರೆಯುವ ಆಂಧ್ರ ಗಡಿ ಭಾಗದ ಅರಣ್ಯ ಸೇರಿದಂತೆ ಮಧ್ಯಪ್ರದೇಶ, ಒಡಿಶಾ, ಆಂಧ್ರದ ಗಡಿಭಾಗದ ಅರಣ್ಯದಲ್ಲಿ ವಾಸವಾಗಿರುವ ಚೆಂಚು ಎಂಬ ಬುಡಕಟ್ಟು ಜನಾಂಗದ ಪರವಾಗಿ ೧೯೨೦ರ ದಶಕದಲ್ಲಿ ಬ್ರಿಟಿಷರ ವಿರುದ್ಧ ಪ್ರಥಮ ಬಾರಿಗೆ ಧ್ವನಿ ಎತ್ತಿ ಹೋರಾಡಿ ಅವರಿಂದ ಅಮಾನುಷವಾಗಿ ಹತ್ಯೆಯಾದ ಹುತಾತ್ಮ ಮತ್ತು ಸ್ವಾತಂತ್ರ್ಯ ಹೋರಾಟಗಾರ ಈ ಅಲ್ಲೂರಿ ಸೀತಾರಾಮ ರಾಜು. ಇವರ ತಂದೆ ವೆಂಕಟರಾಮರಾಜು ಮಹಾ ದೇಶಭಕ್ತರಾಗಿದ್ದರಿಂದ ಮಗನಿಗೆ ದೇಶಭಕ್ತಿಯ ಮೊದಲ ಪಾಠ ಅವರಿಂದಲೇ ನಡೆಯಿತು. ಮತ್ತಷ್ಟು ಓದು »

24
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 10
ಹಲಗಲಿಯ ಬೇಡರು
– ರಾಮಚಂದ್ರ ಹೆಗಡೆ
bedaಬ್ರಿಟಿಷ್ ಸರ್ಕಾರದ ದೌರ್ಜನ್ಯ ದೇಶದಾದ್ಯಂತ ಆವರಿಸಿದ್ದ ಕಾಲ. ಅದಕ್ಕೆ ಉತ್ತರವಾಗಿ 1857 ರಲ್ಲಿ ದೇಶದ ವಿವಿದೆಡೆಗಳಲ್ಲಿ ಪ್ರಖರ ಹೋರಾಟ ಆರಂಭವಾಯಿತು. 1857 ರ ನವೆಂಬರ್ ನಲ್ಲಿ ಆಂಗ್ಲ ಸರ್ಕಾರ ‘ನಿಶ್ಶಸ್ತ್ರೀಕರಣ ಕಾನೂನನ್ನು’ ಜಾರಿಗೆ ತಂದು ದೇಶದ ಯಾರೂ ತಮ್ಮ ಬಳಿ ಯಾವುದೇ ಶಸ್ತ್ರಗಳನ್ನು ಹೊಂದುವಂತಿಲ್ಲ ಎಂಬ ಕರಾಳ ನಿಯಮವನ್ನು ಹೇರಿತು. ಅದರ ಪ್ರಕಾರ ಎಲ್ಲರೂ ತಮ್ಮಲ್ಲಿದ್ದ ಶಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕಾಯ್ತು. ಆದರೆ ಬೇಡರಿಗೆ ಆಯುಧಗಳೇ ಜೀವನೋಪಾಯದ ಆಧಾರಗಳು. ಹಾಗಾಗಿ ಆಯುಧಗಳನ್ನು ಹಿಂತಿರುಗಿಸುವುದಿಲ್ಲ ಎಂದು ಇದರ ವಿರುದ್ಧ ದಿಟ್ಟ ದನಿಯೆತ್ತಿ ಬ್ರಿಟಿಷ್ ಸರ್ಕಾರವನ್ನು ಬೆಚ್ಚಿ ಬೀಳಿಸಿ ಪ್ರಾಣಾರ್ಪಣೆಗೈದವರು ನಮ್ಮ ಕರ್ನಾಟಕದ ಹಲಗಲಿಯ ಬೇಡರು. ಮತ್ತಷ್ಟು ಓದು »