ಕಾವೇರಿ ವಿವಾದ : ನಾಲಾಯಕ್ ನಾಯಕರ ನಡುವಿನ ಜನನಾಯಕರು
ಕಾವೇರಿ ವಿವಾದ ಮತ್ತೆ ಭುಗಿಲೆದ್ದಿದೆ. ಸೆಪ್ಟಂಬರ್ ೯ರಂದು ಕರ್ನಾಟಕ ಬಂದ್ ಗೂ ಕರೆ ನೀಡಲಾಗಿದೆ. ನಮಗೆ ಕುಡಿಯಲಿಕ್ಕೇ ನೀರಿಲ್ಲದಿರುವಾಗ ಕೈಲಾಗದ ಸರ್ಕಾರ ತಮಿಳುನಾಡಿನ ಬೆಳೆಗಳಿಗೆ ನೀರು ಹರಿಸುತ್ತಿದೆ. ನಮ್ಮಲ್ಲೇ ಹೆಚ್ಚಾಗಿರುವ ನಾಲಾಯಕ್ ನಾಯಕರ ನಡುವೆ, ಅಪರೂಪಕ್ಕೆ ದಿಟ್ಟತನ ಹಾಗೂ ಚಾಣಾಕ್ಷತನ ತೋರಿದ ಇಬ್ಬರು ಜನನಾಯಕರ ನೆನಪುಗಳು ನಿಮಗಾಗಿ – ನಿಲುಮೆ
ನೆನಪು ೧ :
ನಿಜವಾದ ಗಂಡಸು ಎಂದರೆ ಅದು ಬಂಗಾರಪ್ಪ
1991ರಲ್ಲಿ, ತಮಿಳುನಾಡಿಗೆ 205 ಟಿಎಂಸಿ ನೀರು ಬಿಡುವಂತೆ ಕಾವೇರಿ ನ್ಯಾಯಾಧಿಕರಣವು ಮಧ್ಯಂತರ-ತೀರ್ಪನ್ನು ನೀಡಿತು. ಈ ತೀರ್ಪಿಗೆ ವಿರುದ್ಧವಾಗಿಯೇ ಮುಖ್ಯಮಂತ್ರಿ ಬಂಗಾರಪ್ಪನವರು ಸುಗ್ರೀವಾಜ್ಞೆ ಹೊರಡಿಸಿ ಕಾವೇರಿ ಕೊಳ್ಳದ ಅಣೆಕಟ್ಟುಗಳಲ್ಲಿನ ನೀರನ್ನು ರಕ್ಷಿಸಿ, ನಮ್ಮ ರಾಜ್ಯದ ರೈತರಿಗೇ ಉಳಿಸಿಕೊಳ್ಳುವಂತೆ ಅಣೆಕಟ್ಟುಗಳ ಉಸ್ತುವಾರಿಯ ಅಧಿಕಾರಿಗಳಿಗೆ ಆದೇಶಿಸಿದರು. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 17:
ಧೋಂಡಿಯ ವಾಘ್
– ರಾಮಚಂದ್ರ ಹೆಗಡೆ
ಮಲೆನಾಡು ಪ್ರದೇಶದಲ್ಲಿ ಬ್ರಿಟಿಷರ ನಿದ್ದೆಗೆಡಿಸಿ ಸಹ್ಯಾದ್ರಿಯ ಹುಲಿ ಎಂಬ ಖ್ಯಾತಿಗೆ ಪಾತ್ರನಾದ ವೀರ ಧೋಂಡಿಯ ವಾಘ್. ಹುಟ್ಟಿನಿಂದ ಮರಾಠಾ ಆಗಿದ್ದ ದೋಂಡಿಯಾ ವಾಘ್ ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲೂಕಿನಿಂದ ಬಂದ ಒಬ್ಬ ಕೂಲಿ ಸೈನಿಕ. ಮೊದಲು ಕೊಲ್ಹಾಪುರ, ಧಾರವಾಡ ಮುಂತಾದ ಕಡೆ ಸಂಸ್ಥಾನಗಳಲ್ಲಿ ದುಡಿದು ನಂತರ ಹೈದರಾಲಿ ಸೈನ್ಯದಲ್ಲಿ ಸೇರಿಕೊಂಡಿದ್ದ. ನಂತರ ಸೈನ್ಯದಿಂದ ಓಡಿಹೋದ ವಾಘ್ ತನಗೆ ಬೇಕಾದ ಜನರ ಒಂದು ತಂಡವನ್ನು ಖಾಸಗಿ ಸೈನ್ಯವಾಗಿ ಕಟ್ಟಿದ. ಕೆಲಕಾಲ ಸೆರೆಯಲ್ಲಿದ್ದ ವಾಘ್ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸವಾಲೆಸೆಯುವ ತೀರ್ಮಾನ ಕೈಗೊಂಡ. ಅಲ್ಲಿಂದ ಬಿಡುಗಡೆಯಾಗಿ ಬ್ರಿಟಿಷರ ವಿರೋಧಿಯಾಗಿ ಬೆಳೆದ. ಮೈಸೂರು ಸಂಸ್ಥಾನವು ಬ್ರಿಟಿಷರಿಗೆ ವಾರ್ಷಿಕ ಕಾಣಿಕೆಯನ್ನು ಒಪ್ಪಿಸುವ ಸಲುವಾಗಿ ರೈತರ ಮೇಲೆ ಕರ ಹೇರಿದಾಗ ವಾಘ್ ಅದರ ವಿರುದ್ಧ ದನಿಯೆತ್ತಿದ. ರೈತರು ದೋಂಡಿಯಾ ವಾಘನನ್ನು ಬೆಂಬಲಿಸಿದರು. ಆರಂಭದಲ್ಲಿ ಅವನ ಸಂಘಟನೆ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿದ್ದು, ಬ್ರಿಟಿಷರು ಬಿನ್ನುಹತ್ತಿದಾಗ ಹೈದರಾಬಾದ್ ಕರ್ನಾಟಕ ಪ್ರಾಂತಕ್ಕೆ ಬಂದು ಸೇರಿದ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ– 14:
ಸಂಗೊಳ್ಳಿ ರಾಯಣ್ಣ
– ರಾಮಚಂದ್ರ ಹೆಗಡೆ
1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮುನ್ನವೇ ಬ್ರಿಟಿಷ್ ಸಾಮ್ರಾಜ್ಯದ ಎದೆ ನಡುಗಿಸಿದ, ತನ್ನ ಅಪಾರ ಶೌರ್ಯ ಪರಾಕ್ರಮಗಳಿಂದ ಬ್ರಿಟಿಷರಿಗೆ ಸವಾಲಾಗಿ ನಿಂತು ಕ್ರಾಂತಿಯ ರಣಕಹಳೆ ಮೊಳಗಿಸಿದ ಕನ್ನಡ ನಾಡಿನ ಗಂಡುಗಲಿ, ನಮ್ಮೆಲ್ಲರ ಹೆಮ್ಮೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ. ಬಹುತೇಕರಿಗೆ ತಿಳಿಯದ ಅಚ್ಚರಿಯೆಂದರೆ, ನಮ್ಮ ರಾಯಣ್ಣ ಹುಟ್ಟಿದ್ದು ಆಗಸ್ಟ್ 15 ರಂದು ಮತ್ತು ದೇಶಕ್ಕಾಗಿ ಬಲಿದಾನಗೈದದ್ದು ಜನವರಿ 26 (15 ಆಗಸ್ಟ್ 1798 – 26 ಜನವರಿ 1831). ಒಂದು ಸ್ವಾತಂತ್ರ್ಯ ದಿನ, ಮತ್ತೊಂದು ಗಣರಾಜ್ಯ ದಿನ, ಎರಡೂ ದಿನಗಳೂ ಭಾರತೀಯರ ಪಾಲಿಗೆ ಅವಿಸ್ಮರಣೀಯ ದಿನಗಳು. ಬ್ರಿಟಿಷರ ದಬ್ಬಾಳಿಕೆಯನ್ನು ಮೆಟ್ಟಿ ನಿಂತು ಕೆಚ್ಚೆದೆಯಿಂದ ಅವರ ವಿರುದ್ಧ ಸಮರ ಸಾರಿದ ಕನ್ನಡದ ವೀರವನಿತೆ ಕಿತ್ತೂರ ರಾಣಿ ಚೆನ್ನಮ್ಮಳ ಬಲಗೈ ಬಂಟ ರಾಯಣ್ಣ. ತನ್ನವರದೇ ಮೋಸಕ್ಕೆ ಒಳಗಾಗಿ ಚೆನ್ನಮ್ಮ ಬ್ರಿಟಿಷರ ಸೆರೆಗೆ ಸಿಕ್ಕಾಗ ಕಿತ್ತೂರಿನ ಪರವಾಗಿ ಕ್ರಾಂತಿ ಕಹಳೆ ಮೊಳಗಿಸಿದ ಗಂಡುಗಲಿ. ಮತ್ತಷ್ಟು ಓದು 
ಬ್ರಹ್ಮರ್ಷಿ ನಾರಾಯಣ ಗುರುಗಳ ಮೇಲೇಕೆ ಬೌದ್ಧಿಕ ವಿಧ್ವಂಸಕರ ವಕ್ರದೃಷ್ಟಿ?
– ಸಂತೋಷ್ ತಮ್ಮಯ್ಯ
ಕೆಲವರ್ಷಗಳ ಹಿಂದೆ ಉತ್ತರ ಭಾರತದ ಎಲ್ಲೋ ಬಾಂಬ್ ಸ್ಪೋಟಿಸಿದವರನ್ನು ಹಿಡಿಯಲು ಭಯೋತ್ಪಾದನಾ ನಿಗ್ರಹ ದಳ ಮಂಗಳೂರಿಗೆ ಆಗಮಿಸಿತ್ತು. ಭಯೋತ್ಪಾದಕರು ತಲೆಮರೆಸಿಕೊಂಡಿದ್ದಾರೆ ಎನ್ನಲಾದ ಉಲ್ಲಾಳ ಪ್ರದೇಶದ ಒಂದು ಊರೊಳಗೂ ಅವರು ನುಗ್ಗಿ ಭಯೋತ್ಪಾದಕರನ್ನೂ ಹಿಡಿದಿದ್ದರು. ಆದರೆ ಭಯೋತ್ಪಾದನಾ ನಿಗ್ರಹ ದಳವೆಂಬ ಚಾಲಾಕಿಗಳ ತಂಡವನ್ನು ಸ್ಥಳೀಯರು ಊರಿಂದ ಜಪ್ಪಯ್ಯ ಎಂದರೂ ಹೊರಹೋಗಬಿಡಲಿಲ್ಲ. ಜನರು ಕಾಶ್ಮೀರದಲ್ಲಿ ಕಲ್ಲೆಸೆಯುವವರಂತೆ ಅಧಿಕಾರಿಗಳಿದ್ದ ಕಾರುಗಳತ್ತ ಕಲ್ಲೆಸೆದರು, ಟಯರುಗಳನ್ನು ಸುಟ್ಟು ರಸ್ತೆಗೆಸೆದರು. ಹೀಗೆ ಮಾಡಿದವರೇನೂ ಬಾಂಗ್ಲಾ ವಲಸಿಗರಲ್ಲ. ಲಷ್ಕರ್ ತೊಯಿಬಾದವರಲ್ಲ. ಎಲ್ಲರೂ ಕರಾವಳಿಯ ಬ್ಯಾರಿಗಳೆಂಬ ಸ್ಥಳೀಯ ಮುಸ್ಲಿಮರು. ಶಂಕಿತ ಭಯೋತ್ಪಾದಕನೂ ತಮ್ಮಂತೆ ಒಬ್ಬ ಮುಸಲ್ಮಾನ ಎಂಬ ಒಂದೇ ಒಂದು ಕಾರಣಕ್ಕೆ ಸ್ಥಳೀಯರು ಹಾಗೆ ವರ್ತಿಸಿದ್ದರು. ಆದರೂ ನಮ್ಮಲ್ಲಿ ಭಯೋತ್ಪಾದನೆಗೆ ಧರ್ಮವಿಲ್ಲ! ವಿಚಿತ್ರವೆಂದರೆ ಆಗ ಕರಾವಳಿಯ ರಕ್ಷಕರೆಂಬಂತೆ ವರ್ತಿಸುವ ಮಂಗಳೂರಿನ ಸಮಸ್ತ ಬುದ್ಧಿಜೀವಿಗಳು, ಬಾಂಬುಗಳನ್ನೇ ಅಕ್ಷರಗಳಾಗಿ ಬರೆಯುವವರಾರೂ ‘ಬ್ಯಾರಿಗಳು ಬಲ್ಲವರಾಗಬೇಕು’ ಎಂದು ತಲೆಕೆಟ್ಟವರಿಗೆ ಬುದ್ಧಿಹೇಳಲಿಲ್ಲ. ಮತ್ತಷ್ಟು ಓದು 
ಅಂದು ಜೆ ಎನ್ ಯು, ಇಂದು ಬೆಂಗಳೂರು
– ತನ್ಮಯೀ ಪ್ರೇಮ್ ಕುಮಾರ್
ಜೆಎನ್‌ಯುನಲ್ಲಿ ನಡೆದ ದೇಶದ್ರೋಹದ ಕೆಲಸಗಳು, ಘೋಷಣೆಗಳು, ಬೌದ್ಧಿಕ ದಾರಿದ್ರ್ಯತನವನ್ನು, ವೈಚಾರಿಕ ಗುಲಾಮಿತನದ ಪರಿಸ್ಥಿತಿ ಕಂಡು ಮರುಗಿದ್ದೆ. ಎಷ್ಟೋ ಅಸಹನೆಯ ರಾತ್ರಿಗಳನ್ನು ನಿದ್ದೆಯಿಲ್ಲದೆ ಕಳೆದಿದ್ದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಭಟನೆ, ವಿಚಾರ ಸಂಕಿರಣ, ಆಂದೋಲನದ ಭಾಗವಾಗಿದ್ದೆ ಕೂಡ. ಆದರೆ ಶಾಂತಿಪ್ರಿಯ ಬೆಂಗಳೂರಿನಲ್ಲಿ ಇಂಥದೇ ಘಟನೆ ನಡೆಯಬಹುದೆಂಬ ಕಲ್ಪನೆ ಕನಸಿನಲ್ಲೂ ಬಂದಿರಲಿಲ್ಲ. ಮೊನ್ನೆ ಜೆಎನ್‌ಯು ವಿವಿಯ ಸ್ನೇಹಿತೆಯೊಬ್ಬಳು ಸಿಕ್ಕಾಗಲೂ ಕರ್ನಾಟಕ ಇಂಥ ಘಟನೆಗಳಿಂದ ಮುಕ್ತವಾಗಿದೆ ಎಂಬ ಗರ್ವದಿಂದ ಮಾತನಾಡಿದ್ದೆ. ಮೊನ್ನೆಯವರೆಗೆ ಎಲ್ಲರ ನಂಬಿಕೆಯೂ ಅದೇ ಆಗಿತ್ತು. ಆದರೆ ಆಗಸ್ಟ್ 13ರ ಸಂಜೆ ಭಾರತ 70ನೇ ಸ್ವಾತಂತ್ರ್ಯ ಸಂಭ್ರಮದ ಹೊಸ್ತಿಲಲ್ಲಿ ನಿಂತ ಸಂದರ್ಭದಲ್ಲಿ ನಮ್ಮ ವಿಶ್ವಾಸಕ್ಕೆ, ನೆಮ್ಮದಿಯ ಬಾಳಿಗೆ ಕೊಡಲಿ ಪೆಟ್ಟು ಬೀಳುವಂತ ಘಟನೆ ನಡೆದಿದೆ. ಮತ್ತಷ್ಟು ಓದು 
ಕನ್ನಡದ ಮೊದಲ ಕೋಮುವಾದಿ ಈ ಮುಮ್ಮಡಿ ಬಲ್ಲಾಳ ವೀರ!
– ಸಂತೋಷ್ ತಮ್ಮಯ್ಯ
ಕ್ರಿ.ಶ ೧೩೧೦. ಅದು ಮುಸಲ್ಮಾನರ ರಂಜಾನ್ ತಿಂಗಳಿನ ೨೨ನೇ ದಿನ, ಭಾನುವಾರ. ಆ ಪವಿತ್ರ ತಿಂಗಳಿನ ೨೧ ದಿನಗಳೂ ಮುಸಲ್ಮಾನರು ದಕ್ಷಿಣ ಭಾರತದಲ್ಲಿ ನಿರಂತರ ಲೂಟಿ ನಡೆಸಿದ್ದರು. ಕಾಫಿರರ ಕೊಲೆ ಮಾಡಿದ್ದರು, ವಿಗ್ರಹ ಭಂಜನೆ ನಡೆಸಿದ್ದರು, ಮತಾಂತರಗಳು ನಡೆದಿದ್ದವು.
ರಂಜಾನಿನ ೨೨ನೇ ದಿನದಂದು ಅವರು ಲೂಟಿಗೆ ಆರಿಸಿಕೊಂಡದ್ದು ಶ್ರೀಮಂತ ದ್ವಾರಸಮುದ್ರವನ್ನು. ಮಲ್ಲಿಕಾಫರ್ ಎಂಬ ಒಂದು ಕಾಲದ ಬ್ರಾಹ್ಮಣ ಮತಾಂತರವಾದೊಡನೆಯೇ ವಿಪರೀತ ಕ್ರೂರಿಯೂ, ಮಾತೃ ಧರ್ಮದ ದ್ವೇಷಿಯೂ ಆಗಿ ಬದಲಾಗಿದ್ದ. ಹಿಂದೂ ಧರ್ಮದ ಯಾವ ನರವನ್ನು ಮೀಟಿದರೆ ಲಾಭ ಎಂಬುದನ್ನು ಉಳಿದ ದಾಳಿಕೋರರಿಗಿಂತ ಆತ ಚೆನ್ನಾಗಿ ಬಲ್ಲವನಾಗಿದ್ದ. ಅಲ್ಲಾವುದ್ದೀನ್ ಖಿಲ್ಜಿಯ ಕೂಲಿ ಮಾಡುತ್ತಿದ್ದ ಆತ ದಣಿಯನ್ನು ಮೆಚ್ಚಿಸಲು ಏನು ಮಾಡಲೂ ಹಿಂಜರಿಯುತ್ತಿರಲಿಲ್ಲ. ದ್ವಾರಸಮುದ್ರವನ್ನು ಲೂಟಿಮಾಡಬೇಕು ಎಂದು ಆತನೇ ಮುಹೂರ್ತ ನಿಗದಿಪಡಿಸಿದ್ದ. ಏಕೆಂದರೆ ಆ ಹೊತ್ತಲ್ಲಿ ದ್ವಾರಸಮುದ್ರದ ರಾಜ ರಾಜಧಾನಿಯಲ್ಲಿರಲಿಲ್ಲ. ನಿಶ್ಚಯವಾದಂತೆ ದ್ವಾರಸಮುದ್ರದ ಮೇಲೆ ದಾಳಿಯಾಯಿತು. ನಿರಂತರ ೧೩ ದಿನ ಲೂಟಿ ನಡೆಯಿತು. ದೇವಸ್ಥಾನಗಳು ಧ್ವಂಸವಾದವು. ಅತ್ತ ರಾಜ ರಾಜಧಾನಿಗೆ ದೌಢಾಯಿಸಿ ಬಂದಾಗ ಕಾಲ ಮಿಂಚಿಹೋಗಿತ್ತು. ಮಲ್ಲಿಕಾಫರನಿಗೆ ಶರಣಾಗದೆ ಆತನಿಗೆ ಬೇರೆ ದಾರಿಯಿರಲಿಲ್ಲ. ದುಷ್ಟ ಮಲ್ಲಿಕಾಫರ್ ಆತನಿಗೆ ಎರಡು ಆಯ್ಕೆಗಳನ್ನು ನೀಡಿದ. ಒಂದೋ ಇಸ್ಲಾಮಿಗೆ ಮತಾಂತರವಾಗಬೇಕು. ಇಲ್ಲವೇ ತಮಿಳು ಪಾಂಡ್ಯರನ್ನು ಗೆಲ್ಲಲು ಸಹಾಯ ಮಾಡಬೇಕು ಮತ್ತು ದ್ವಾರಸಮುದ್ರದಲ್ಲಿ ಮುಸಲ್ಮಾನ ಸೈನ್ಯವನ್ನು ಇರಿಸಿಕೊಳ್ಳಬೇಕು. ರಾಜ ಮತಾಂತರಕ್ಕೆ ಒಪ್ಪಿಗೆ ನೀಡಲಿಲ್ಲ. ಉಳಿದ ಷರತ್ತುಗಳಿಗೆ ಒಪ್ಪಿದ. ಮಲ್ಲಿಕಾಫರ್ ದ್ವಾರಸಮುದ್ರದ ಸೈನ್ಯದ ಬಲದಿಂದ ತಮಿಳು ಪಾಂಡ್ಯರನ್ನು ಗೆದ್ದು ಲೂಟಿಗೈದು ದೆಹಲಿಗೆ ಹೊರಟುಹೋದ. ಮತ್ತಷ್ಟು ಓದು 
ನನ್ನ ಊರು ಬೆಂಗಳೂರು – ಇಂತಿ ನಿಮ್ಮ ಪ್ರೀತಿಯ ಬಾಂಗ್ಲಾ ನುಸುಳುಕೋರ
– ವೃಷಾಂಕ್ ಭಟ್
ಭಾರತದಲ್ಲಿ ದಿನಕಳೆದಂತೆ ಕೌಶಲ್ಯರಹಿತ ಕಾರ್ಮಿಕರ (Unskilled labourers) ಸಂಖ್ಯೆ ಕ್ಷೀಣಿಸುತ್ತಿದೆ. ಡ್ರೈವರ್ಗಳು, ಹೊಟೇಲ್ ಮಾಣಿಗಳು, ಮನೆಕೆಲಸದವರು, ಕೃಷಿಕಾರ್ಮಿಕರು, ಕ್ಲೀನರ್ಗಳು, ಹಮಾಲಿಗಳು, ಚಿಂದಿ ಸಂಗ್ರಹಿಸುವವರು ಕ್ಷೀಣಿಸಿರುವ ಪರಿಣಾಮ ದೇಶದ ಬಹುದೊಡ್ಡ ಉದ್ಯೋಗ ಕ್ಷೇತ್ರವೊಂದು ಖಾಲಿಯಾಗಿತ್ತು. ಬೆಂಗಾಲಿ ಮಾತನಾಡುವ ಮುಸಲ್ಮಾನರು ಇಂದು ಆ ಸ್ಥಾನವನ್ನು ತುಂಬಿದ್ದಾರೆ. ಬೆಂಗಾಲಿ ಮಾತನಾಡಿದ ತಕ್ಷಣ ಅವರೆಲ್ಲ ಪಶ್ಚಿಮ ಬಂಗಾಳದವರಲ್ಲ. ಅವರೆಲ್ಲರೂ ಬಾಂಗ್ಲಾ ನುಸುಳುಕೋರರು..! ಮತ್ತಷ್ಟು ಓದು 
ಹಳಿ ತಪ್ಪಿರುವ ಚಾಲಕನಿಗೆ ತಿಳಿಹೇಳುವವರು ಯಾರು?
– ರೋಹಿತ್ ಚಕ್ರತೀರ್ಥ
ಮೂಕಂ ಕರೋತಿ ವಾಚಾಲಂ. ಹಾಗಾಗಿದೆ ನನಗೆ. ಬರೆಯಬೇಕಿದ್ದ ಕೈ ಓಡುತ್ತಿಲ್ಲ. ಮನಸ್ಸು ಹೆಪ್ಪುಗಟ್ಟಿ ಕೂತಿದೆ. ಏನು ಅಂತ ಬರೆಯಲಿ? ಏನನ್ನು ಹೇಳಲಿ? ಕತ್ತಲಿಗೆ ಹತ್ತೆ ತಲೆ? ನೂರಾರೆ? ಅದು ಅಸಂಖ್ಯ! ಕತ್ತರಿಸಿದರೆ ಬೆಳೆವ, ಬೆಳೆದು ಕತ್ತಿಗೆ ಬರುವ ಅನಾದಿ; ಕೋದಂಡದಂಡವೂ ಹೀಗೆ ದಂಡ ಎನ್ನುವ ಗೋಪಾಲಕೃಷ್ಣ ಅಡಿಗರ ಸಾಲುಗಳು ತಲೆಯೊಳಗೆ ಅಪ್ಪಾಲೆತಿಪ್ಪಾಲೆಯಂತೆ ಸುತ್ತುತ್ತಿವೆ. ಮಳೆಗಾಲದ ಕಾರ್ಮೋಡಗಳು ಸುತ್ತ ಇಳಿಬಿದ್ದಿರುವಂತೆ ಹೃದಯದ ತುಂಬೆಲ್ಲ ಕತ್ತಲೆ ತೂಗುತ್ತಿದೆ. ಮೈ ಮಂಜುಗಟ್ಟಿದೆ. ಬರೆಯುವುದನ್ನು ಉಸಿರಾಟದಷ್ಟೇ ಸಹಜವಾಗಿ ಮಾಡಬಲ್ಲ ನನಗೂ ಕೈಯನ್ನು ಯಾರೋ ಎಳೆದುಕಟ್ಟಿರುವಂಥ ಭಾವ. ಮತ್ತಷ್ಟು ಓದು 
ಕವಲು ದಾರಿಯಲ್ಲಿ ಕನ್ನಡ
-ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ
ನನ್ನ ಸ್ನೇಹಿತರ ಮನೆಯಲ್ಲಿ ನಡೆದ ಘಟನೆ ಇದು. ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಯಾದ ನನ್ನ ಸ್ನೇಹಿತರ ಮಗ ಕನ್ನಡ ಪಠ್ಯಪುಸ್ತಕದಲ್ಲಿನ ಪದವೊಂದರ ಅರ್ಥಕ್ಕಾಗಿ ತನ್ನ ತಂದೆಯಲ್ಲಿ ಕೇಳಿದ. ಅವರಿಬ್ಬರ ನಡುವಿನ ಸಂಭಾಷಣೆ ಹೀಗಿತ್ತು. ‘ಪಪ್ಪಾ ವ್ಹಾಟ್ ಈಜ್ ಬೇವಿನ ಮರ?’. ಆ ಮಗುವಿಗೆ ಅರ್ಥವಾಗಬೇಕೆಂದರೆ ಆತನದೇ ಧಾಟಿಯಲ್ಲಿ ಉತ್ತರಿಸುವುದು ಬಿಟ್ಟು ಆ ತಂದೆಗೆ ಬೇರೆ ದಾರಿಯೇ ಇರಲಿಲ್ಲ. ‘ಪಾಪು ಬೇವಿನಮರ ಮೀನ್ಸ್ ನೀಮ್ ಟ್ರೀ. ಎ ಟ್ರೀ ಆಫ್ ಬಿಟರ್ ಲೀವ್ಸ್. ಹ್ಯಾವ್ ಯು ಸೀನ್ ಎ ಬಿಗ್ ಟ್ರೀ ಇನ್ ಗ್ರ್ಯಾಂಡ್ ಪಾ ಹೌಸ್? ದಟ್ ಈಜ್ ಬೇವಿನ ಮರ’. ತಂದೆ ಇಂಗ್ಲಿಷ್ ಭಾಷೆಯಲ್ಲಿ ವಿವರಣೆ ನೀಡಿದ ನಂತರ ಆ ಮಗುವಿನ ಸಮಸ್ಯೆ ಸುಲಭವಾಗಿ ಬಗೆಹರಿಯಿತು. ತನ್ನದೇ ಪರಿಸರದಲ್ಲಿನ ವಸ್ತುವೊಂದರ ವಿವರಣೆಗಾಗಿ ಆ ಮಗು ತನ್ನದಲ್ಲದ ಅನ್ಯಭಾಷೆಯನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಸಹಜವಾಗಿಯೇ ಆತಂಕಪಡುವ ಸಂಗತಿ. ನಾವುಗಳೆಲ್ಲ ಚಿಕ್ಕವರಾಗಿದ್ದಾಗ ಇಂಗ್ಲಿಷ್ ಪಠ್ಯ ಪುಸ್ತಕದ ಜೊತೆಗೆ ಗೈಡ್‍ಗಳನ್ನು ಬಳಸುತ್ತಿದ್ದೇವು. ಆ ಗೈಡ್‍ಗಳಲ್ಲಿ ಇಂಗ್ಲಿಷ್ ಪಠ್ಯದ ಕನ್ನಡ ಭಾವಾರ್ಥದ ಜೊತೆಗೆ ಇಡೀ ಪಠ್ಯ ಕನ್ನಡ ಅಕ್ಷರಗಳಲ್ಲಿ ಪ್ರಕಟವಾಗಿರುತ್ತಿತ್ತು. ಹೀಗಾಗಿ ನಾವು ಇಂಗ್ಲಿಷ ಭಾಷೆಯನ್ನು ಕನ್ನಡ ಅಕ್ಷರಗಳ ಮೂಲಕವೇ ಕಲಿಯುತ್ತಿದ್ದೇವು. ಆದರೆ ಇವತ್ತು ನಮ್ಮದೇ ನೆಲದ ಮಕ್ಕಳು ಕನ್ನಡ ಭಾಷೆಯನ್ನು ಇಂಗ್ಲಿಷ್ ಮೂಲಕ ಕಲಿಯಲು ಪ್ರಯತ್ನಿಸುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ. ಇಂಗ್ಲಿಷ್ ಭಾಷೆಯನ್ನು ಕನ್ನಡದ ಮೂಲಕ ಕಲಿಯುವಂತಾಗಲಿ ಎನ್ನುವ ಸಲಹೆಯನ್ನು ಕೇಳದಷ್ಟು ಬಹುದೂರ ನಾವುಗಳೆಲ್ಲ ಸಾಗಿ ಬಂದಿದ್ದೇವೆ. ಮತ್ತಷ್ಟು ಓದು 
ನುಡಿ ಮರಣ ಭಾಷಾವಸಾನ
– ಸುದರ್ಶನ ಗುರುರಾಜರಾವ್
ಮುನ್ನುಡಿ:
ಕೆಳಗಿನ ಕವಿತಾ ಸಂಭಾಷಣೆಯ ಮೂಲಕ – ಸಮಸ್ಯೆಯ ಪರಿಚಯ ಗಮನಿಸಿ
ಕನ್ನಡಿಗ
ಓ ತಾಯಿ ನೀನೇಕೆ ಬೇಡುತಿಹೆ ಭಿಕ್ಷೆ
ಎಲ್ಲಿ ಹೋಯಿತು ನಿನ್ನ ಮನೆ ಮಂದಿ ರಕ್ಷೆ
ಬಾಡಿ ನಲುಗಿಹುದಲ್ಲ ಈ ನಿನ್ನ ವದನ
ಏನಾಯ್ತು ಆ ನಿನ್ನ ಬಹು ಭವ್ಯ ಸದನ
ಭುವನೇಶ್ವರಿ ದೇವಿ (ಕನ್ನಡ ಮಾತೆ:)
ಮಗುವೆ ಮನೆಯಿದ್ದು ಪರದೇಶಿ ನಾನು
ದಿನವೂ ನಾ ಅರೆಹೊಟ್ಟೆ ನೀ ತಿಳಿಯೆಯೇನು
ನನ್ನ ಕೋರಿಕೆಗಿನಿತು ಕೊಡದೆ ಬೆಲೆಯನ್ನು
ಬೇಯಿಸುತ ಬಡಿಸಿಹರು ಕಲಬೆರೆಕೆಯನ್ನು ಮತ್ತಷ್ಟು ಓದು 





