ವಿಷಯದ ವಿವರಗಳಿಗೆ ದಾಟಿರಿ

Posts from the ‘ಧರ್ಮ’ Category

24
ಸೆಪ್ಟೆಂ

ಸಂಸ್ಕೃತಿ ಸಂಕಥನ – ೬

ರಮಾನಂದ ಐನಕೈ

ಸಂಶೋಧನೆ ಅಂದರೆ ಏನು? ಇತ್ತೀಚಿನ ದಿನಗಳಲ್ಲಿ ಯಾರಾದರೂ ಸಂಶೋಧನೆ ಮಾಡಿದ್ದಾರೆ ಅಥವಾ ಪಿ.ಎಚ್.ಡಿ. ಪದವಿ ಪಡೆದಿದ್ದಾರೆಂದರೆ ನಗು ಬರುತ್ತದೆ. ನೌಕರಿ ಪಡೆಯಲು ಅಥವಾ ನೌಕರಿಯಲ್ಲಿ ಬಡ್ತಿ ಪಡೆಯಲು ಈ ಪಿ.ಎಚ್.ಡಿ. ಅರ್ಹತೆಯಾಗುತ್ತದೆಯೆಂಬ ಕಾರಣಕ್ಕೆ ಮಾಡುತ್ತಾರೆಯೇ ವಿನಾ ಆಸಕ್ತಿಗಾಗಿ ಅಲ್ಲ. ನಮ್ಮ ವಿಶ್ವವಿದ್ಯಾಲಯಗಳ ಸಂಶೋಧನಾ ವಿಭಾಗಗಳಿಗೆ ಈ ದುರ್ಗತಿ ಬಂದಿದೆ. ಹಣ ಕೊಟ್ಟರೆ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರೇ ಪ್ರಬಂಧ ಬರೆದು ಪದವಿ ಕೊಡುತ್ತಾರೆ. ಪಿ.ಎಚ್.ಡಿ. ಎಂಬುದು ವ್ಯಾಪಾರವಾಗಿದೆ. ಸಂಶೋಧನೆಗೆ ಆಯ್ದುಕೊಳ್ಳುವ ವಿಷಯವಾದರೂ ಎಂಥದ್ದು. ಯಾರಿಗೂ ಪ್ರಯೋಜನವಾಗದ ವಿಷಯ. ಸಂಶೋಧನಾ ಪ್ರಬಂಧವನ್ನು ನೆಟ್ಟಗೆ ಮೂರು ಜನರು ಓದಲಾರರು. ಈ ರೀತಿಯ ಸಂಶೋಧನೆಗಳಿಂದ ಅಥವಾ ಸಂಶೋಧಕರಿಂದ ದೇಶಕ್ಕೆ ಏನಾದರೂ ಪ್ರಯೋಜನ ಇದೆಯಾ?

ಸುಮಾರು ಹತ್ತು ವರ್ಷಗಳ ಹಿಂದಿನ ಘಟನೆ. ಶಿರಸಿಯ ಗಣಪತಿ ದೇವಸ್ಥಾನದ ಹತ್ತಿರವಿರುವ ಶಂಕರಹೊಂಡದ ಸ್ವಚ್ಛತಾ ಕಾರ್ಯಕ್ರಮ ನಡೆಯತ್ತಿತ್ತು. ಆಗ ಒಂದು ಪುಟ್ಟ ವಿಗ್ರಹ ಸಿಕ್ಕಿತು. ಕ್ಷಣಾರ್ಧದಲ್ಲಿ ಇಡೀ ಶಿರಸಿ ನಗರ ವ್ಯಾಪಿಸಿತು ಈ ಸುದ್ದಿ. ಅಷ್ಟರಲ್ಲಿ ಇತಿಹಾಸ ಸಂಶೋಧಕನೊಬ್ಬ ಅಲ್ಲಿಗೆ ಬಂದ ಆತ ಆಗಷ್ಟೇ ಅರೆಕಾಲಿಕ ಇತಿಹಾಸ ಉಪನ್ಯಾಸಕನಾಗಿ ಸೇರಿದವ. ಆಗಲೇ ಹೆಸರಿನ ಹಿಂದೆ ಪ್ರೊಫೆಸರ್ ಎಂದು ಬಳಸುತ್ತಿದ್ದ. ಆತ ಈ ವಿಗ್ರಹವನ್ನು ಕೂಲಂಕಶವಾಗಿ ಪರಿಶೀಲಿಸಿ ಅದರ ಕುರಿತು ಪತ್ರಿಕಾ ಪ್ರಕಟಣೆ ನೀಡಿದ.

ಮತ್ತಷ್ಟು ಓದು »

23
ಸೆಪ್ಟೆಂ

ಕುರುಡಾಗದಿರು ಭಾರತೀಯ ನಿನ್ನ ಕಣ್ಣುಗಳಿರುವ ತನಕ..

ಅಶ್ವಿನ್ ಎಸ್ ಅಮೀನ್

ಕೋಮುವಾದ, ಜಾತಿವಾದ,  ಇವುಗಳ ನಡುವಿನ ಸಂಘರ್ಷಗಳು ಯಾವ ದೇಶದಲ್ಲಿ ಎಷ್ಟರವರೆಗೆ ಇರುತ್ತವೆಯೋ ಅಲ್ಲಿಯ ತನಕ ಆ ದೇಶದ ಬೆಳವಣಿಗೆ ಕುಂಠಿತವಾಗಿ ಸಾಗುತ್ತದೆ. ಅದರಲ್ಲೂ ಆಳುವ ಸರಕಾರಗಳು ನಡೆಸುವ ಒಂದು ಸಮುದಾಯದವರ ಓಲೈಕೆ ಅದು ಅಲ್ಪಸಂಖ್ಯಾತರನ್ನಾಗಲೀ, ಬಹುಸಂಖ್ಯಾತರನ್ನಾಗಲೀ ದೇಶದ ಹಿತದೃಷ್ಟಿಯಿಂದ ಒಳ್ಳೆಯದಲ್ಲ.

ನಮ್ಮೀ ಭಾರತ ಇದೆಲ್ಲ ಸಮಸ್ಯೆಗಳಿಂದ ಹೊರತಾಗಿಲ್ಲ.. ಬಹುಶಃ ಈ ತರಹದ ಕೋಮು ವಿಂಗಡಣೆ, ಜಾತಿ ವಿಂಗಡಣೆ ರಾಜಕೀಯ ಭಾರತದಲ್ಲಿ ಬಿಟ್ಟರೆ ಬೇರೆಲ್ಲೂ ಕಾಣಸಿಗದು..! ತಾಜಾ ಉದಾಹರಣೆಯಾಗಿ ಕೇಂದ್ರದ NAC ಸಿದ್ದಪಡಿಸಿದ ಕೋಮು ಸಂಘರ್ಷ ನಿಯಂತ್ರಣಾ ಕಾಯಿದೆಯ ಕರಡು ರೂಪದಲ್ಲೊಮ್ಮೆ ಕಣ್ಣಾಡಿಸಿ. ಇಲ್ಲಿ ಕಾಣಸಿಗುವುದು ಅಲ್ಪ ಸಂಖ್ಯಾತ, ಬಹು ಸಂಖ್ಯಾತ, ಪರಿಶಿಷ್ಟ ವರ್ಗ – ಪಂಗಡಗಳೆಂಬ ವಿಂಗಡಣಾ ರಾಜಕೀಯ.
ಕೋಮು ಸಂಘರ್ಷಗಳಲ್ಲಿ ತಪ್ಪಿತಸ್ಥರಾದವರಿಗೆ ಎಲ್ಲರಿಗೂ ಶಿಕ್ಷೆಯಾಗುವುದಾದರೆ ಈ ಕೋಮು ಸಂಘರ್ಷ ನಿಯಂತ್ರಣ ಕಾಯಿದೆ ಸ್ವಾಗತಾರ್ಹವಾಗುತಿತ್ತು. ಇಡೀ ಭಾರತಕ್ಕೆ ಭಾರತವೇ NAC ಯ ಮುಖ್ಯಸ್ಥೆ ಸೋನಿಯಾ ಗಾಂದಿಯವರನ್ನು ಅಭಿನಂದನೆಗಳಿಂದ ಮುಳುಗೇಳಿಸುತ್ತಿತ್ತು. ಆದರೆ ಹಾಗಾಗಲಿಲ್ಲ..! ಕಾರಣ ಇಲ್ಲಿ ಕೇವಲ ಬಹುಸಂಖ್ಯಾತರಿಗಷ್ಟೇ ಶಿಕ್ಷೆ.. ಅಲ್ಪಸಂಖ್ಯಾತರು ಯಾವುದೇ ಗಲಬೆಗಳಲ್ಲಿ ಪಾಲ್ಗೊಂಡರೂ ಈ ಕಾಯಿದೆಯಡಿ ಶಿಕ್ಷೆಯಿಲ್ಲ. ಅದರಲ್ಲೂ ಬೆಂಕಿಗೆ ತುಪ್ಪ ಸುರಿದಂತೆ ಬಹುಸಂಖ್ಯಾತ ಹಿಂದೂ ಧರ್ಮದಿಂದ ಪರಿಶಿಷ್ಟ ವರ್ಗ-ಪಂಗಡಗಳನ್ನು ಬೇರ್ಪಡಿಸಿರುವುದು..! ಪರಿಶಿಷ್ಟ ವರ್ಗ-ಪಂಗಡಗಳಿಗೆ ಸೌಲಭ್ಯ ಕಲ್ಪಿಸಿರುವುದು ಒಳ್ಳೆಯದೇ ಆಗಿದೆ. ಆದರೆ ಇಲ್ಲಿ ಭಾರತದ ಮೂಲ ಧರ್ಮವಾದ ಸನಾತನ ಹಿಂದೂ ಧರ್ಮವನ್ನು ಒಡೆಯುವ ಷಡ್ಯಂತ್ರ ಅಡಗಿದೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಬೇಕು. ಮತ್ತಷ್ಟು ಓದು »
17
ಆಗಸ್ಟ್

`ಆವರಣ’ ಹಿಂದಿಗೆ

-ಕಾಲಂ ೯

ಕನ್ನಡದಲ್ಲಿ ವಾದ-ವಿವಾದಗಳಿಗೆ ಕಾರಣವಾಗಿದ್ದ ಎಸ್. ಎಲ್. ಭೈರಪ್ಪನವರ ‘ಆವರಣ’ ಹಿಂದಿ ಜಗತ್ತನ್ನೂ ಪ್ರವೇಶಿಸಿದೆ. ಈ ಹಿಂದೆಯೇ ತಮಿಳು, ಮರಾಠಿ, ಸಂಕ್ಸಿತಕ್ಕೆ ಆವರಣ ಹೋದ ಸುದ್ದಿ ಇತ್ತು.

ಮುಸ್ಲಿಂ ನವಾಬರ ‘ಜನಾನ’ದ ವರೆಗೆ ಕಥೆ ಪ್ರವೇಶಿಸಿದ್ದು ಒಂದು ಕಡೆಯಾದರೆ ಮತ್ತೊಂದೆಡೆ ಬುದ್ಧಿಜೀವಿಗಳ ಹರಕು-ಹುಳುಕನ್ನು ಕಾದಂಬರಿ ಹರಾಜು ಹಾಕಿ ವಿವಾದಕ್ಕೆ ಕಾರಣವಾಗಿತ್ತು. ಒಂದೇ ವರ್ಶದಲ್ಲಿ 20ಕ್ಕೂ ಹೆಚ್ಚು ಮುದ್ರಣಗಳಿಗೂ ಹೋಗಿತ್ತು.

ಮೂಲಕಥೆ ಉತ್ತರಭಾರತದ ಹಿಂದಿ ಜಗತ್ತಿನದೇ. ಇದೀಗ ಕಾದಂಬರಿ ಹಿಂದಿ ಜಗತ್ತನ್ನು ಪ್ರವೇಶಿಸಿದೆ. ಕುವೆಂಪು ಭಾಷಾ ಭಾರತಿಯ ಅಧ್ಯಕ್ಷರಾಗಿರುವ ಡಾ|  ಪ್ರಧಾನ ಗುರುದತ್ ಹಿಂದಿಗೆ ಅನುವಾದಿಸಿದ್ದಾರೆ.

ಇಂಡಿಯಾ ಟುಡೇ ಹಿಂದಿ ಅವತರಣಿಕೆಯ ಈ ವಾರದ ಸಂಚಿಕೆ ಅರ್ಧ ಪುಟದ ವಿಮರ್ಶೆ ಪ್ರಕಟಿಸಿದೆ. ವಿಮರ್ಶಕ ಶಶಿಭೂಷಣ ದ್ವಿವೇದಿಗೆ ಪ್ರಧಾನರ ಅನುವಾದ ಸಮಧಾನ ತಂದಿಲ್ಲ.

ಇದೇ ಅಗಸ್ಟ್ 16ರಂದು ಕೇರಳದ ಕೊಚ್ಚಿನ್ ನಲ್ಲಿ ಆವರಣದ ಸಂಸ್ಕೃತ ಆವೃತ್ತಿಗೆ ಕೇಂದ್ರ ಸಾಹಿತ್ಯ ಅಕಾಡಮಿಯ ‘ಅತ್ಯುತ್ತಮ ಅನುವಾದ’ ಪುರಸ್ಕಾರ ಸಿಗಲಿದೆ ಎಂದು ಗೊತ್ತಾಗಿದೆ.

**********

8
ಆಗಸ್ಟ್

ಈ ಕಥೆ ಮುಂದಿನ ರಾಜಕಾರಣಿಗಳಿಗೆ ಒಂದು ಪಾಠವಾಗಲಿ

– ರಾಕೇಶ್ ಎನ್ ಎಸ್

ಅದು ೧೯೬೦ನೇ ದಶಕದ ಕೊನೆಯ ಭಾಗ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರವೆಂಬ ಪುಟ್ಟ ಪಟ್ಟಣದಲ್ಲಿ ಬೂಕನೆಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಎಂಬ ವ್ಯಕ್ತಿ ಒಂದು ಅಕ್ಕಿ ಮಿಲ್‌ನಲ್ಲಿ ಸಾಮಾನ್ಯ ಗುಮಾಸ್ತನಾಗಿ ತಿಂಗಳಿಗೆ ಕೇವಲ ೧೩೦ ರೂ ಸಂಬಳ ಪಡೆದುಕೊಂಡು ದಿನ ಸಾಗಿಸುತ್ತಿದ್ದ. ಅಷ್ಟರಲ್ಲೇ ಆ ವ್ಯಕ್ತಿ ಒಂಚೂರು ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ಆಸಕ್ತನಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕನಾಗಿ, ಜನಸಂಘದ ಮುಖಂಡನಾಗಿ, ಆ ಬಳಿಕ ಶಿಕಾರಿಪುರ ಪುರ ಸಭೆಯ ಸದಸ್ಯನಾಗಿ, ತುರ್ತು ಪರಿಸ್ಥಿತಿ ಘೋಷಿಸಿದ ಅದಕ್ಕೆ ಸಡ್ಡು ಹೊಡೆದ ಹೋರಾಟಗಾರನಾಗಿ, ರಾಜ್ಯದಲ್ಲಿ ಬಿಜೆಪಿಯ ಮುಖವಾಣಿಯಾಗಿ, ರೈತಾಪಿ ಜನರ ದನಿಯಾಗಿ, ರಾಜ್ಯದ ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತ ಕತೆ ಈ ದೇಶದ ಪ್ರಜಾಪ್ರಭುತ್ವದ ಸೌಂದರ್ಯಕ್ಕೆ ಮುಕುಟ ಪ್ರಾಯವಾದದ್ದಾಗಿರಬೇಕಾಗಿತ್ತು. ಆದರೆ ಈ ನಾಡಿನ ದುರದೃಷ್ಟವೆಂದರೆ ಆ ವ್ಯಕ್ತಿ ಇಂದು ಈ ನಾಡು ಕಂಡು ಕೇಳರಿಯದ ರಾಕ್ಷಸ ರಾಜಕಾರಣದ ವಾರಸುದಾರನಾಗಿ ಬಿಟ್ಟಿದ್ದಾರೆ. ಪ್ರಜಾಪ್ರಭುತ್ವದ ಚೆಲುವನ್ನು ಹೀರಿದ ಬಂದಣಿಕೆಯಾಗಿ ಇತಿಹಾಸದ ಪುಟ ಸೇರಿದ್ದಾರೆ.

ಅಪನಂಬಿಕೆ, ಸ್ವಜನಪಕ್ಷಪಾತ, ಅಧಿಕಾರದ ಮೋಹ, ಇನ್ನೊಬ್ಬರ ಕಾಲೆಳೆಯುವ ಚಾಳಿ, ಭಟ್ಟಂಗಿಗಳ ಪಟಾಲಂ ಈ ಪಂಚ ಅನಿಷ್ಠ ಗುಣಗಳಲ್ಲಿ ಒಂದು ಗುಣವಿದ್ದರು ಕೂಡ ಒಬ್ಬ ವ್ಯಕ್ತಿಯ ಬದುಕು ಪಾತಳ ಮುಖಿ ಅಗುವುದರಲ್ಲಿ ಅನುಮಾನವಿಲ್ಲ. ಅಂತಹದ್ದರಲ್ಲಿ ಈ ಪಂಚ ಗುಣಗಳನ್ನೆ ತಮ್ಮ ನಡತೆಯಾಗಿಸಿಕೊಂಡಿವವರು ನಾಯಕರಾಗಿ ಬಿಟ್ಟರೆ ಅಥವಾ ನಾಯಕರೆಂದು ಕರೆಸಿಕೊಂಡರೆ ಅವರು ಮಾತ್ರವಲ್ಲ ಅವರಿರುವ ಸಮಾಜ ಅಥವಾ ಪರಿಸರ ಗಬ್ಬೆದ್ದು ಹೋಗುತ್ತದೆ ಎಂಬುದಕ್ಕೆ ಬಿ ಎಸ್ ಯಡಿಯೂರಪ್ಪ ಮತ್ತು ಕರ್ನಾಟಕದ ರಾಜ್ಯ ರಾಜಕೀಯವೇ ಸಾಕ್ಷಿ. ಮತ್ತಷ್ಟು ಓದು »
5
ಆಗಸ್ಟ್

ಭಗವದ್ಗೀತೆಯ ಆಧುನಿಕ ನಿರೂಪಣೆಗಳು ಹಾಗೂ ಸಮಸ್ಯೆಗಳು

ಡಾ. ರಾಜಾರಾಮ ಹೆಗಡೆ

ಇತ್ತೀಚೆಗೆ ಭಗವದ್ಗೀತೆಯ ಕುರಿತು ಅನೇಕ ಚರ್ಚೆಗಳೆದ್ದಿವೆ. ಶಾಲೆಗಳಲ್ಲಿ ಅದನ್ನು ಪ್ರಚಾರ ಮಾಡುವ  ಕೆಲಸವನ್ನು ಸಮರ್ಥಿಸಿ ಹಾಗೂ ವಿರೋಧಿಸಿ ಹೇಳಿಕೆಗಳು ಬರುತ್ತಿವೆ. ಈ ಎರಡೂ ಪಕ್ಷಗಳ ವಕ್ತಾರರೂ ಕೂಡ ಭಗವದ್ಗೀತೆಯು ಹಿಂದೂಗಳ ಧರ್ಮಗ್ರಂಥವೆಂಬ ಗ್ರಹಿಕೆಯನ್ನು  ಆಧರಿಸಿ ವಾದ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟ. ವಿರೋಧಿಸುವವರ ವಾದವೆಂದರೆ ಸೆಕ್ಯುಲರ್ ರಾಷ್ಟ್ರವಾದ ಭಾರತದಲ್ಲಿ ಎಲ್ಲಾ ಧರ್ಮದವರೂ ಇರುವ ಸಾರ್ವಜನಿಕ ಸಂಸ್ಥೆಗಳಲ್ಲಿ ಹಿಂದೂಗಳಲ್ಲದವರೂ ಭಗವದ್ಗೀತೆಯನ್ನು ಕಲಿಯಬೇಕೆನ್ನುವುದು ಸಂವಿಧಾನ ವಿರೋಧೀ ಕೃತ್ಯವಾಗುತ್ತದೆ. ಹಾಗಾಗಿ ಸೆಕ್ಯುಲರ್ ತತ್ವದ ಪ್ರಕಾರ ಅದು ತಪ್ಪೊಂದೇ ಅಲ್ಲ, ಅದು ಕಾನೂನಿನ ದೃಷ್ಟಿಯಲ್ಲಿ ಅಪರಾಧ ಕೂಡಾ. ಈ ವಿರೋಧವನ್ನು ಖಂಡಿಸಿರುವ ಪರ ಪಕ್ಷದವರು ಭಗವದ್ಗೀತೆಯ ಶಿಕ್ಷಣವನ್ನು ವಿರೋಧಿಸುವವರು ದೇಶ ಬಿಟ್ಟು ತೊಲಗಲಿ ಎನ್ನುತ್ತಿದ್ದಾರೆ. ಅಂದರೆ ಅಂಥ ವಿರೋಧಿಗಳ ರಾಷ್ಟ್ರೀಯತೆಯನ್ನೇ ಪ್ರಶ್ನಿಸುತ್ತಿದ್ದಾರೆ.

ಒಂದೊಮ್ಮೆ ಎರಡೂ ಪಕ್ಷದವರೂ ಒಮ್ಮತಕ್ಕೆ ಬಂದು ಭಗವದ್ಗೀತೆಯನ್ನು ಕೇವಲ ಹಿಂದೂ ಮಕ್ಕಳಿಗೆ ಕಡ್ಡಾಯ ಮಾಡಬಹುದು ಎಂದರೆ ಸಮಸ್ಯೆ ಬಗೆಹರಿಯುತ್ತದೆಯೆ? ಭಗವದ್ಗೀತೆಯು ಹಿಂದೂ ಧರ್ಮಗ್ರಂಥವೆಂದು ನಂಬಿರುವ ವಿರೋಧ ಪಕ್ಷದವರ ಪ್ರಕಾರ ದಲಿತರಿಗೆ ಹಾಗೂ ಶೂದ್ರರಿಗೆ  ಅದೊಂದು ಅಪಾಯಕಾರಿ ಗ್ರಂಥವಾಗಿದೆ.  ಅದನ್ನು ಶಾಲೆಗಳಲ್ಲಿ ಕಡ್ಡಾಯಮಾಡುವ ಪ್ರಯತ್ನದ ಹಿಂದೆ ಬ್ರಾಹ್ಮಣ ಪುರೋಹಿತಶಾಹಿಯ ಹುನ್ನಾರವಿದೆ. ಈ ಕಾರ್ಯದಿಂದ ಅಲ್ಪಸಂಖ್ಯಾತರಿಗೊಂದೇ ಅಲ್ಲ, ದಲಿತ-ಶೂದ್ರರ ಹಿತಾಸಕ್ತಿಗೂ ಧಕ್ಕೆಯಿದೆ. ಈ ವಾದಕ್ಕೆ ಪರಪಕ್ಷದವರು ನೀಡುವ ಉತ್ತರವೆಂದರೆ ಇಂಥ ಹೇಳಿಕೆಗಳು ಬರುತ್ತಿರುವುದೇ ಹಿಂದೂ ಧರ್ಮದ ಅವನತಿಯ ದ್ಯೋತಕ. ಹಾಗಾಗಿ ಇಂತಹ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಹಾಗೂ ಹಿಂದೂ ಧರ್ಮದ ಐಕ್ಯತೆಯನ್ನು ಸಾಧಿಸಲು ಹಿಂದೂ ಧರ್ಮಗ್ರಂಥಗಳನ್ನು ಕಡ್ಡಾಯವಾಗಿಯಾದರೂ ಹಿಂದೂಗಳಿಗೆ ತಿಳಿಸುವುದು ಅತ್ಯಗತ್ಯ. ಮತ್ತಷ್ಟು ಓದು »

5
ಆಗಸ್ಟ್

ಸಂಸ್ಕೃತಿ ಸಂಕಥನ – ೪

– ರಮಾನಂದ ಐನಕೈ

ಧರ್ಮದ ಮೈಮೇಲೆ – ರಿಲಿಜನ್ನಿನ ಅಂಗಿ 

 ವಿಪರ್ಯಾಸ ನೋಡಿ. ಒಂದು ಕಡೆ ‘ಹಿಂದೂ ಧರ್ಮ’ ಅನ್ನುತ್ತೇವೆ. ಇನ್ನೊಂದು ಕಡೆ ಅದನ್ನೇ ‘ಹಿಂದೂ ರಿಲಿಜನ್’ ಅನ್ನುತ್ತೇವೆ. ಯಾವುದೇ ಭಾರತೀಯರನ್ನು ಕೇಳಿದರೆ ಇವೆರಡರ ನಡುವೆ ವ್ಯತ್ಯಾಸವೇ ಇಲ್ಲ ಎಂದು ಆತ್ಮವಿಶ್ವಾಸದಿಂದ ಪ್ರತಿಪಾದಿಸುತ್ತಾರೆ. ಇವೆರಡರ ವ್ಯತ್ಯಾಸ ತಿಳಿಯದಿದ್ದದ್ದೇ ಭಾರತೀಯರ ಮುಖ್ಯ ಮಾನಸಿಕ ತೊಂದರೆ. ಹಾಗಾಗೇ ನಿತ್ಯ ಗೊಂದಲದಲ್ಲಿ ಒದ್ದಾಡುತ್ತೇವೆ.

‘ರಾಜಕೀಯದಲ್ಲಿ ಧರ್ಮ ಇರಬಾರದು’, ‘ಸಾಹಿತ್ಯದಲ್ಲಿ ಧರ್ಮ ಬರಬಾರದು’, ‘ಕೋಮು ಗಲಭೆಗೆ ಧರ್ಮ ಕಾರಣ’ – ಇತ್ಯಾದಿ ಹೇಳಿಕೆ ಕೇಳಿದಾಗ ನಮಗೆ ಪುನಃ ಗೊಂದಲ. ಏಕೆಂದರೆ ಈ ಹೇಳಿಕೆಯನ್ನು ತೇಲಿ ಬಿಡುವವರು ಬುದ್ಧಿಜೀವಿಗಳು. ಅವರು ರಿಲಿಜನ್ ಎಂಬ ಪರಿಕಲ್ಪನೆಯ ಮೇಲೆ ಪ್ರಜ್ಞಾಪೂರ್ವಕವಾಗಿ ವಾದಿಸುತ್ತಾರೆ. ಆದರೆ ನಾವು ಸಾಮಾನ್ಯ ನಾಗರಿಕರು ಧರ್ಮ ಎಂಬ ಅರ್ಥದ ನೆಲೆಯಲ್ಲಿ ಅದನ್ನು ಗ್ರಹಿಸುತ್ತೇವೆ. ಹಾಗಾಗಿ ಎಲ್ಲವೂ ನಮ್ಮ ಮನಸ್ಸಿಗೆ ಅರ್ಧಸತ್ಯ ಅನಿಸುತ್ತದೆ. ಧರ್ಮ ಬೇಡ ಅಂದರೆ ಪ್ರತಿಯೊಂದಕ್ಕೂ ಅದರದ್ದೇ ಆದ ಕರ್ತವ್ಯ ಬೇಡವೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಂದರೆ ಧರ್ಮ ಹಾಗೂ ರಿಲಿಜನ್ ಮಧ್ಯೆ ವ್ಯತ್ಯಾಸ ಇರಲೇಬೇಕೆಂಬುದು ನಮ್ಮ ಗೃಹಿಕೆಗೆ ಸೂಚಿಸುತ್ತದೆ. ಎರಡೂ ಒಂದೇ ಆಗಿದ್ದರೆ ಈ ರೀತಿ ಗೊಂದಲ ಏಕೆ ಸೃಷ್ಟಿಯಾಗುತ್ತದೆ? ಇದೇ ಅರ್ಥವಾಗದ ಒಗಟು.

ಮತ್ತಷ್ಟು ಓದು »

30
ಜುಲೈ

ಸಂಸ್ಕೃತಿ ಸಂಕಥನ – ೩

– ರಮಾನಂದ ಐನಕೈ

ವಿದ್ಯಾವಂತರೆನಿಸಿಕೊಂಡ ನಮಗೆಲ್ಲ ಒಂದು ತೊಂದರೆ ಇದೆ. ಅದೇನೆಂದರೆ ನಮ್ಮ ಜೀವನಶೈಲಿಯೊಂದಿಗೆ ಅನಿವಾರ್ಯವಾಗಿ ಪಾಲಿಸಲೇಬೇಕಾದ ಸಂಪ್ರದಾಯಗಳು. ಇದನ್ನು ಪಾಲಿಸದಿದ್ದರೆ ನಾವು ಸಮುದಾಯದಿಂದ ಹೊರಗುಳಿಯತ್ತೇವೆ. ಕೆಲವೊಮ್ಮೆ ಮಾನಸಿಕವಾಗಿ ನಮ್ಮೊಳಗೇ ಅಭದ್ರತೆಗೊಳಗಾಗುತ್ತೇವೆ. ಹಾಗಂತ ಸಂಪ್ರದಾಯವನ್ನು ಪಾಲಿಸಲು ನಮ್ಮ ವೈಚಾರಿಕತೆ ಅನುವು ಮಾಡಿಕೊಡುವುದಿಲ್ಲ. ನಾವು ಭೌತಿಕವಾಗಿ ಬದುಕುತ್ತಿರುವುದು ಸಂಪ್ರದಾಯದ ಸಮಾಜದಲ್ಲಿ. ಮಾನಸಿಕವಾಗಿ ಬದುಕುತ್ತಿರುಉವದು ವೈಚಾರಿಕತೆಯೆಂಬ ಭ್ರಮೆಯಲ್ಲಿ. ಯಾಕೆ ಹೀಗಾಗುತ್ತಿದೆ? ನಮ್ಮ ಸಂಪ್ರದಾಯಗಳಲ್ಲಿ ನಮಗೇಕೆ ಅರ್ಥ ಕಾಣುತ್ತಿಲ್ಲ? ಅಥವಾ ಅರ್ಥ ಹುಡುಕುವ ಹಠವಾದರೂ ಏಕೆ? ಇವುಗಳಿಗೆಲ್ಲ ಅರ್ಥ ಇರಲೇಬೇಕೆಂದಿದೆಯೇ? ಸ್ವತಂತ್ರ ಭಾರತದ 60 ವರ್ಷ ಕಳೆದರೂ ಇಂಥ ಗೊಂದಲಗಳಿಂದ ಮುಕ್ತರಾಗದೇ ಇದ್ದದ್ದು ನಿಜಕ್ಕೂ ಗಂಭೀರವಾಸ್ತವ.

ಸಂಪ್ರದಾಯ ಅಂದರೆ ತಲೆತಲಾಂತರದಿಂದ ನಡೆಸಿಕೊಂಡು ಬಂದ ಆಚರಣೆಗಳು. ನಮ್ಮ ಹಿರಿಯರು ಅವರ ಹಿರಿಯರನ್ನು ಅನುಕರಿಸಿದರು. ಅವರ ಹಿರಿಯರು ಅವರ ಹಿರಿಯರನ್ನು… ಹೀಗೆ ಯಾಕೆ ಆಚರಿಸಬೇಕೆಂದು ಯಾರೂ ಯಾರನ್ನೂ ಪ್ರಸ್ನಿಸಲಿಲ್ಲ. ಪ್ರಶ್ನಿಸುವ ಜಿಜ್ಞಾಸ ಹುಟ್ಟಲೇ ಇಲ್ಲ. ಏಕೆಂದರೆ ಎಲ್ಲರೂ ಅದು ತಮ್ಮದು ಎಂದು ನಂಬಿದ್ದರು. ಪ್ರೀತಿಸುತ್ತಿದ್ದರು. ಸ್ವಾತಂತ್ರ್ಯಾನಂತರ ನಮಗೆ ಸಂಪ್ರದಾಯಗಳ ಕುರಿತು ಹೆಚ್ಚು ಪ್ರಶ್ನೆಗಳು ಏಳಲು ಶುರುವಾಗಿವೆ. ಅದಕ್ಕೆ ಕಾರಣ ನಾವು ಪ್ರಭಾವಿಸಿಕೊಂಡ ಎರವಲು ವೈಚಾರಿಕತೆ ಅಥವಾ ವಿಚಾರವಾದ. ಅದು ನಮ್ಮ ಶಿಕ್ಷಣ ಹಾಗೂ ಓದುತ್ತಿರುವ ಸಮಾಜವಿಜ್ಞಾನಗಳಿಂದ ಸೃಷ್ಟಿಯಾದದ್ದು. ಪರೋಕ್ಷವಾಗಿ ಹೇಳಬಹುದಾದರೆ ಪಾಶ್ಚಾತ್ಯರು ಹೇಳಿಕೊಟ್ಟ ಕಂಠಪಾಠ. ಅವರ ಪ್ರಕಾರ ವೈಚಾರಿಕತೆಯತ್ತ ಸಾಗುವುದೇ ಪ್ರಗತಿ ಅಥವಾ ನಾಗರಿಕತೆಯ ಲಕ್ಷಣ. ಭಾರತೀಯ ಸಂಪ್ರದಾಯಗಳು (ಹಿಂದೂ ರಿಲಿಜನ್) ಅವೈಚಾರಿಕವಾದ್ದರಿಂದ ಭಾರತ ಹಿಂದುಳಿದ ದೇಶ. ಇಲ್ಲಿಯ ಜನ ಮೂಢರು ಮತ್ತು ದಡ್ಡರು. ಅರ್ಥವಿಲ್ಲದ ಆಚರಣೆಗಳನ್ನು ಮಾಡುವವರು ಎಂಬಿತ್ಯಾದಿ. ಇದೇ ನಿಜ ಎಂದು ನಾವೆಲ್ಲ ನಂಬಿಕೊಂಡಿದ್ದರಿಂದ ನಮ್ಮ ಸಂಪ್ರದಾಯಗಳು ನಮಗೆ ಅರ್ಥಹೀನ ಅನಿಸುತ್ತದೆ.

ಮತ್ತಷ್ಟು ಓದು »

28
ಜುಲೈ

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?

-ರಾಕೇಶ್ ಎನ್ ಎಸ್
ಲೋಕಾಯುಕ್ತ ವರದಿ ಸೋರಿಕೆಯಾಗುತ್ತಲೆ ಯಡಿಯೂರಪ್ಪ, ರೆಡ್ಡಿ ಸೋದರರು, ಕುಮಾರಸ್ವಾಮಿ, ಅನಿಲ್ ಲಾಡ್ ಸೇರಿದಂತೆ ರಾಜ್ಯದ ಅನೇಕ ಅತಿರಥ ಮಹಾರಥಿಗಳು ಮತ್ತು ಸುಮಾರು ೫೦೦ಕ್ಕೂ ಮಿಕ್ಕ ಅಧಿಕಾರಿಗಳ ಮೇಲಿದ್ದ ಊಹಾಪೋಹ ಆಧಾರಿತ ಆರೋಪಗಳು ಇದೀಗ ತಾತ್ವಿಕ ಮತ್ತು ಸಾಂವಿಧಾನಿಕ ನೆಲಗಟ್ಟಿನ ಮೇಲೆ ನಿಂತ ಆರೋಪಗಳಾಗಿ ಪರಿವರ್ತನೆ ಗೊಂಡಿದೆ.ಯಡಿಯೂರಪ್ಪ ಸಕಲ ಭ್ರಷ್ಟಾಚಾರ ಕಲಾ ವಲ್ಲಭ ಎಂಬುದನ್ನು ಸಾಬೀತು ಮಾಡಲು ದೇಶದ ಜನರಿಗೆ ಯಾವುದೇ ವರದಿಯ ಅಗತ್ಯವಿರಲಿಲ್ಲ. ಆದರೆ ತಾನು ಭ್ರಷ್ಟಾಚಾರಿ ಎಂದು ಅವರನ್ನು ಅರ್ಥ ಮಾಡಿಕೊಳ್ಳಲು ಮತ್ತು ಭಾರತೀಯ ಜನತಾ ಪಕ್ಷದ ಅಧ್ಯಕ್ಷ ನಿತಿನ್ ಗಡ್ಕರಿಗೆ ಇದು ಗೊತ್ತಾಗಲು ಇಂತಹವೊಂದು ವರದಿ ಅಗತ್ಯವಾಗಿತ್ತು. ಆ ಕೆಲಸವನ್ನು ನ್ಯಾ. ಸಂತೋಷ್ ಹೆಗ್ಗಡೆ ಮಾಡಿ ಮುಗಿಸಿದ್ದಾರೆ.ಯಡಿಯೂರಪ್ಪ ಕರ್ನಾಟಕದ ಸಂಪತ್ತನ್ನು ಸುಮಾರು ೫ ವರ್ಷಗಳಿಂದ ಹುಲುಸಾಗಿ ಮೇಯುತ್ತಿದ್ದಾರೆ, ಕಳೆದ ಮೂರು ವರ್ಷಗಳಲ್ಲಿ ಅದು ಮಿತಿ ಮೀರಿದೆ. ಪ್ರತಿಯೊಂದಕ್ಕೂ ಕೊನೆ ಎಂಬುದು ಇದ್ದೆ ಇರುತ್ತದೆ. ಅದೇ ರೀತಿ ಯಡಿಯೂರಪ್ಪರ ಭ್ರಷ್ಟ ಆಡಳಿತಕ್ಕೆ ಕೊನೆಯ ಷರಾವನ್ನು ಲೋಕಾಯುಕ್ತದ ಈ ವರದಿ ಬರೆಯುತ್ತದೆಯೋ? ಇಲ್ಲ, ೨ ವರ್ಷಗಳ ಬಳಿಕ ಕರ್ನಾಟಕದ ಪ್ರಜ್ಙಾವಂತ ಜನರೇ ಬರೆಯಬೇಕಾಗುತ್ತದೆಯೇ? ಎಂಬುದು ಈಗಿರುವ ಪ್ರಶ್ನೆ… ಮತ್ತಷ್ಟು ಓದು »
27
ಜುಲೈ

ರಾಶಿ ಮತ್ತು ನಕ್ಷತ್ರ…

– ಗೋವಿಂದ ರಾವ್ ವಿ ಅಡಮನೆ

ಜನ್ಮರಾಶಿ ಮತ್ತು ನಕ್ಷತ್ರಗಳಿಗೆ ಜ್ಯೋತಿಷಿಗಳು ಬಲು ಪ್ರಾಧಾನ್ಯ ನೀಡುತ್ತಾರೆ. ಅವರು ನೀಡುತ್ತಿರುವ ಪ್ರಾಧಾನ್ಯ ಯುಕ್ತವಾದದ್ದೇ ಎಂಬುದನ್ನು ನೀವೇ ತೀರ್ಮಾನಿಸಲು ಅಗತ್ಯವಾದ ಕೆಲವು ಮೂಲಭೂತ ಮಾಹಿತಿ ಒದಗಿಸುವ ಉದ್ದೇಶದಿಂದ ಈ ಲೇಖನ ಬರೆಯುತ್ತಿದ್ದೇನೆ.

ರಾಶಿಗೆ ಸಂಬಂಧಿಸಿದಂತೆ ನೀವು ತಿಳಿದಿರಲೇ ಬೇಕಾದ ಅಂಶಗಳು ಇಂತಿವೆ

ರಾಶಿಯನ್ನು, ಅರ್ಥಾತ್ ತಾರಾರಾಶಿಯನ್ನು ಎರಡು ರೀತಿಯಲ್ಲಿ ವ್ಯಾಖ್ಯಾನಿಸಬಹುದು. ಅಧ್ಯಯಿಸಲು ಅನುಕೂಲ ಆಗಲಿ ಎಂದು ಖಗೋಲದ ಒಟ್ಟು ಕ್ಷೇತ್ರವನ್ನು ೮೮ ಭಾಗಗಳಾಗಿ ಇಂಟರ್ ನ್ಯಾಶನಲ್ ಅಸ್ಟ್ರನಾಮಿಕಲ್ ಯೂನಿಯನ್ ವಿಭಜಿಸಿದೆ. ಆಧುನಿಕ ಖಗೋಲವಿಜ್ಞಾನದ ಪ್ರಕಾರ ಈ ವಿಭಾಗಗಳಿಗೆ ತಾರಾರಾಶಿಗಳು (ಕಾನ್ಸ್ಟಲೇಷನ್ಸ್) ಎಂದು ಹೆಸರು. ಎಂದೇ, ಖಗೋಲದ ಒಂದು ಸೀಮಿತ ಕ್ಷೇತ್ರದಲ್ಲಿ ಇರುವ ತಾರೆಗಳ ಸಮೂಹವೇ ರಾಶಿ, ಪ್ರತೀ ಭಾಗದಲ್ಲಿಯೂ ಅನೇಕ ತಾರೆಗಳು ಇರುವುದರಿಂದ. ತಾರಾನಿಬಿಡ ಆಕಾಶವನ್ನು ತದೇಕಚಿತ್ತದಿಂದ ಅವಲೋಕಿಸುತ್ತಿದ್ದರೆ ಕೆಲವು ಒಂಟಿ ತಾರೆಗಳು ತಮ್ಮ ಉಜ್ವಲತೆಯಿಂದಾಗಿ ನಮ್ಮ ಗಮನ ಮೊದಲು ಸೆಳೆಯುತ್ತವೆ. ತದನಂತರ ಸಾಪೇಕ್ಷವಾಗಿ ಆಸುಪಾಸಿನಲ್ಲಿ ಇರುವ ಕೆಲವು ತಾರೆಗಳು ನಮ್ಮ ಮನಃಪಟಲದಲ್ಲಿ ವಿಶಷ್ಟ ಆಕೃತಿಗಳನ್ನು ಮೂಡಿಸುವುದರ ಮುಖೇನ ನಮ್ಮ ಗಮನ ಸೆಳೆಯುತ್ತವೆ.

ಮತ್ತಷ್ಟು ಓದು »

11
ಜುಲೈ

ಕಲಾವಿದರೊಳಗಿನ ವಿವಾದಗಳ ಬ್ರಾಂಡ್ ಅಂಬಾಸಿಡರ್

ಮಂಸೋರೆ ಬೆಂಗಳೂರು

ಈ ಲೇಖನವನ್ನು ನಾನೊಬ್ಬ ಕಲಾವಿದ ಎಂಬ ದೃಷ್ಟಿಕೋನದಿಂದಲೇ ಓದುತ್ತಾರೆ ಎಂಬ ಅರಿವಿನೊಂದಿಗೆ ಬರೆಯುತ್ತಿದ್ದೇನೆ.

ನಾನೀಗ ಬರೆಯುತ್ತಿರುವ ವಿಷಯದ  ವ್ಯಕ್ತಿಯ ಕುರಿತಂತೆ ಸಾಕಷ್ಟು ಚರ್ಚೆಗಳಾಗಿವೆ. ಈ ಲೇಖನ ಆ ಚರ್ಚೆ, ಲೇಖನಗಳನ್ನು ವಿರೋದಿಸುವುದೂ ಅಲ್ಲ, ಸಮರ್ಥಿಸಿಕೊಳ್ಳುವುದು ಅಲ್ಲ. ಇದು ನನ್ನ ಸ್ವವಿಚಾರವಷ್ಟೇ.
ಹುಸೇನ್ ನನಗೆ ಈ ಕಲಾವ್ಯಾಸಂಗಕ್ಕೆ ಬರುವ ಮೊದಲಿಂದಲೂ ಗೊತ್ತು. ಈ ವ್ಯಕ್ತಿಯ ಜೊತೆ ಜೊತೆಗೆ ನನಗೆ ಗೊತ್ತಿದ್ದ ಇನ್ನಿತರ ಕಲಾವಿದರೆಂದರೆ ಕೆ.ಕೆ.ಹೆಬ್ಬಾರ್ ಮತ್ತು ರವಿವರ್ಮ ಬಿ.ಕೆ.ಎಸ್.ವರ್ಮ. ಈ ನಾಲ್ವರ ಪರಿಚಯ ನನಗೆ ನಾಲ್ಕು ವಿಭಿನ್ನ ಕಾರಣಗಳಿಂದಾಗಿ ಪರಿಚಿತರಾಗಿದ್ದರು, ಹುಸೇನ್ ಪತ್ರಿಕೆಗಳಲ್ಲಿ ಆಗಾಗ ಬರುತ್ತಿದ್ದ ಸುದ್ದಿಗಳಿಂದಾಗಿ, ಬಿ.ಕೆ.ಎಸ್ ವರ್ಮ ದೂರದರ್ಶನದಲ್ಲಿ ಚಿತ್ರ ಗೀತೆ(ಹಿನ್ನಲೆಯಲ್ಲಿ ಪರಿಸರ ಕುರಿತಾದ ಹಾಡು ಬರುತ್ತಿದ್ದರೆ ಅದಕ್ಕೆ ತಕ್ಕಂತೆ ಪ್ರಾತ್ಯಕ್ಷಿಕೆ ನೀಡುವಂತೆ ಚಿತ್ರ ರಚಿಸುತ್ತಿದ್ದರು), ಕೆ.ಕೆ ಹೆಬ್ಬಾರ್ ಕುರಿತಂತೆ ಪಠ್ಯವೊಂದಿದ್ದ ಕಾರಣದಿಂದಾಗಿ, ರವಿವರ್ಮ ಹಾಡಿನ ಮೂಲಕ(ರವಿವರ್ಮನ ಕುಂಚದ ಕಲೆ). ಇವಿಷ್ಟೇ , ಇವರಿಷ್ಟೇ ನನಗೆ ಗೊತ್ತಿದ್ದ ಕಲಾವಿದರು ಕಲಾಕೃತಿಗಳು.  ಮತ್ತಷ್ಟು ಓದು »