ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

7
ನವೆಂ

ಟಿಪ್ಪು ಜಯಂತಿ ಬೇಕಿರುವುದು ಯಾರಿಗೆ ?

– ರೋಹಿತ್ ಚಕ್ರತೀರ್ಥ

dsc8476_tipu_sultan_mಟಿಪ್ಪು ಜಯಂತಿಯಿಂದ ಯಾರಿಗೆ ಉಪಕಾರ ಎಂದು ಕೆಲವರು ಕೇಳುತ್ತಿದ್ದಾರೆ. ಕಳೆದ ವರ್ಷ ಸರಕಾರ ಪ್ರತಿ ಜಿಲ್ಲಾಡಳಿತಕ್ಕೆ 50,000 ರುಪಾಯಿ, ಪ್ರತಿ ತಾಲೂಕು ಕಚೇರಿಗೆ 25,000 ರುಪಾಯಿ ಕೊಟ್ಟು “ಟಿಪ್ಪು ಸುಲ್ತಾನ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸತಕ್ಕದ್ದು” ಎಂಬ ಖಡಕ್ ಸುತ್ತೋಲೆ ಕಳಿಸಿತ್ತು. ನಮ್ಮೂರ ಕಡೆ ಒಂದು ತಾಲೂಕು ಪಂಚಾಯಿತಿಗೂ 25,000 ರುಪಾಯಿಗಳು ಸಂದಾಯವಾಗಿದ್ದವು. ಆ ಕಚೇರಿಯಲ್ಲಿ ನೀರಿನ ವ್ಯವಸ್ಥೆ ಇಲ್ಲ; ಇದ್ದೊಂದು ಕೊಳ ಒಡೆದುಹೋಗಿ ಆರು ತಿಂಗಳ ಮೇಲಾಯಿತು; ಗೋಡೆಗೆ ಸುಣ್ಣಬಣ್ಣ ಹೊಡೆಸದೆ ನಾಲ್ಕು ವರ್ಷಗಳಾಗುತ್ತ ಬಂತು; ಊರಿನಲ್ಲೊಂದು ಸಣ್ಣ ಸಂಕ ಕಟ್ಟಿಸಬೇಕೆಂದು ಬೇಡಿಕೆ ಇಟ್ಟೂ ಇಟ್ಟೂ ಅರ್ಜಿ ಕೊಟ್ಟೂ ಕೊಟ್ಟೂ ಬೇಸತ್ತು ಕೊನೆಗೆ ಊರವರೇ ಒಂದಷ್ಟು ದುಡ್ಡು ಹಾಕಿ ಏನೋ ತಮ್ಮ ಸಂಕ ತಾವೇ ಕಟ್ಟಿಕೊಂಡಿದ್ದಾರೆ. ಆ ತಾಲೂಕಿನ ಕೆಲವು ರಸ್ತೆಗಳಿಗೆ ಒಂದೊಮ್ಮೆ ಓಬೀರಾಯನ ಕಾಲದಲ್ಲಿ ಜಲ್ಲಿ ಹೊಡೆಸಿದ್ದು, ಅದೀಗ ಡಾಂಬರಿಗೆ ಅನುದಾನ ಸಿಗದೆ ಮತ್ತೆ ಮಣ್ಣಿನ ರಸ್ತೆಯಾಗುವ ಸ್ಥಿತಿಗೆ ಬಂದಿದೆ. ಮತ್ತಷ್ಟು ಓದು »

7
ನವೆಂ

ಭವಿಷ್ಯತ್ತಿನಲ್ಲಿ ಯಾವ ಹಬ್ಬ ಕೈಬಿಡಲಿದೆಯೋ…?

– ಸಂತೋಷಕುಮಾರ ಮೆಹೆಂದಳೆ. ಕೈಗಾ 

dsc8476_tipu_sultan_m
( ನಾನು ನನ್ನ ಸಮಾಜ ಮತ್ತು ಧರ್ಮಾಧಾರಿತ ವೃತ್ತದಲ್ಲಿ ನನ್ನ ಹಿರಿಮೆಯನ್ನು ಸ್ಥಾಪಿಸಿಕೊಳ್ಳುವುದು ಹೇಗೆ..? ಇನ್ನೊಂದು ಧರ್ಮವನ್ನು ಮುಗಿಸಿ ಹಾಕುವುದರ ಮೂಲಕ. ಇದು ಸುಲಭದ ದಾರಿ ಮತ್ತು ಸರಿಯಾಗಿ ಇನ್ನೂರು ವರ್ಷಗಳ ಹಿಂದೆ ಟಿಪ್ಪು ಮಾಡಿದ್ದೂ ಅದೇ. ಅನಾಮತ್ತಾಗಿ ಲಕ್ಷಗಟ್ಟಲೇ ಹಿಂದೂಗಳನ್ನು ವರ್ಷವಧಿಯೊಳಗೆ ಮುಗಿಸಿ ಹಾಕಿ, ಕೊಡವರ ಒಂದು ತಲೆಮಾರನ್ನೇ ನಿರ್ನಾಮ ಮಾಡಿ, ಅದನ್ನು ಸಾಧನೆ ಎಂಬಂತೆ ಪತ್ರಗಳ ಮೂಲಕ ಪ್ರಚುರಪಡಿಸಿದ ಕೂಡಾ. ಆದರೆ ಇವತ್ತಿಗೂ ಅವನ ಭಜನೆ ಮಾಡುತ್ತಿರುವ ಭಟ್ಟಂಗಿಗಳಿಗೆ ತಾವೂ ಮುಂದೊಮ್ಮೆ ಇಂತಹದ್ದೇ ಪರಿಸ್ಥಿತಿಗೆ ಈಡಾಗಲಿದ್ದೇವೆ ಎನ್ನುವ ಅರಿವಾದರೂ ಬೇಡವಾ…? )   ಮತ್ತಷ್ಟು ಓದು »

3
ನವೆಂ

ಸಮಾಜ ಒಡೆಯುವ ಜಯಂತಿ, ಉತ್ಸವಗಳು ಬೇಕೆ…?

– ಸಂತೋಷಕುಮಾರ ಮೆಹೆಂದಳೆ.

dsc8476_tipu_sultan_m( ಬುದ್ಧಿಜೀವಿಗಳು ಆಳುವವರನ್ನು ಮೆಚ್ಚಿಸಲು ಬರೆದ ಲೇಖನಗಳನ್ನು ನಾನು ನೋಡಿದ್ದೇನೆ. ಟಿಪ್ಪು ರಾಕೇಟ್ ಹಾರಿಸಿದ, ಟಿಪ್ಪು ತನ್ನ ಮಕ್ಕಳನ್ನು ಬಲಿಕೊಟ್ಟ ಎನ್ನುವವರಿಗೆ, ಸಾಲುಸಾಲಾಗಿ ತಮ್ಮ ಗಂಡಂದಿರನ್ನೇ ಇವತ್ತು ಕಾಶ್ಮೀರ ಗಡಿಯಲ್ಲಿ ನಮ್ಮ ಮಹಿಳೆಯರು ತ್ಯಾಗಮಾಡುತ್ತಿದ್ದರೆ, ಅವರ ಮಕ್ಕಳು ಅಪ್ಪನ ಹೆಣಕ್ಕೆ ಸೆಲ್ಯೂಟ್ ಹೋಡೆದು `..ಜೈ ಹಿಂದ್..’ ಎಂದು ಕಿರುಚುತ್ತಾ ಕಣ್ಣೀರು ಹಾಕುತ್ತವಲ್ಲ ಅದು ಯಾವನಿಗೂ ಕಾಣುತ್ತಲೇ ಇಲ್ಲವಲ್ಲ. )

ಇಂದು ಜಯಂತಿ, ಒಂದು ಹಬ್ಬ ಹರಿದಿನ ಎನ್ನುವುದು ಖುಶಿಯಾಗಿ ಮನೆ ಮತ್ತು ಕುಟುಂಬ ಕೊನೆಗೆ ಸಮಾಜವೊಂದು ಸಂಪೂರ್ಣವಾಗಿ ಪಾಲ್ಗೊಳ್ಳುವಿಕೆಯ ಸಾಮೂಹಿಕ ಹಬ್ಬವಾಗಿರುತ್ತದೆಯೇ ಹೊರತಾಗಿ ಮುಖ ತಿರುವುವ, ಇದ್ದಬದ್ದ ಸಾಮರಸ್ಯದ ಸಂಬಂಧವೂ ಮುರಿದುಕೊಳ್ಳುವ ಜಾಡ್ಯವಾಗಬಾರದು. ಇವತ್ತು ಮನೆ, ವಠಾರಗಳಲ್ಲಿ ನಡೆಯುವ ಸಮಾರಂಭಗಳನ್ನು ಗಮನಿಸಿ. ಮನೆಯಲ್ಲಿಷ್ಟು ಸಂತಸ, ನೆಂಟರಿಷ್ಟರಿಗೆ ಸಿಹಿ, ಮಾಂಸಾಹಾರಿಗಳಾಗಿದ್ದರೆ ಕೊನೆಯ ದಿನ ಬಾಡೂಟ ಹಾಕಿಸಿ ಹಿಂದಿನ ಇದ್ದಬದ್ದ ಕಹಿಯನ್ನೂ ಮರೆಯುವ ಸಂಪ್ರದಾಯ ಮತ್ತು ಸಾಮಾಜಿಕ ಅಗತ್ಯತೆಗಳನ್ನು ಗಮನಿಸಿಯೇ ನಮ್ಮ ನಮ್ಮಲ್ಲಿ ಆಯಾ ಕಾಲವಾರು ಮತ್ತು ಸಾಮಾಜಿಕ ನಡವಳಿಕೆ ಜಾತಿ ಧರ್ಮಾಧಾರಿತ ಆಚರಣೆಗಳು ಬೆಳಕಿಗೆ ಬಂದವು. ಮತ್ತಷ್ಟು ಓದು »

30
ಆಕ್ಟೋ

ದೀಪಾವಳಿಯ ಬೆಳಕಿಗೆ ಶಾಶ್ವತ ಕತ್ತಲೆ ತುಂಬಿದ ಸೈತಾನ

– ಸಂತೋಷ್ ತಮ್ಮಯ್ಯ

dsc8476_tipu_sultan_mಮಂಡ್ಯದಲ್ಲಿ ಅಕಸ್ಮಾತ್ತಾಗಿ ಪರಿಚಯವಾದ ಒಬ್ಬರು ತನ್ನನ್ನು ಸೂರಜ್ ರಂಗಯ್ಯನ್ ಎಂದು ಹೇಳಿಕೊಂಡರು. ಕನ್ನಡದ್ದಲ್ಲದ ಕನ್ನಡದ ಹೆಸರು. ಕನ್ನಡದಂತೆಯೇ ಕೇಳಿಸುವ ಆ ಹೆಸರಿನ ಮೂಲವನ್ನು ಹೇಳುತ್ತಾ ಹೋದಂತೆ ಅದೊಂದು ಕಥೆಯೇ ಆದೀತು. ಆ ಕಥೆ ಮತ್ತೆಲ್ಲಿಗೋ ತಿರುವನ್ನು ಪಡೆದುಕೊಳ್ಳತೊಡಗಿತು. ಆ ಕಥೆ ಇತಿಹಾಸವಾಯಿತು. ಇತಿಹಾಸ ಭೀಕರತೆಯನ್ನು ಹೇಳಿತು. ಭೀಕರತೆ ಸೂತಕವನ್ನು ಹೇಳಿತು. ಆ ಇತಿಹಾಸ ವಿಚಿತ್ರವಾಗಿತ್ತು. ಅಪರೂಪವಾಗಿತ್ತು. ನೋವಿನಿಂದ ಕೂಡಿತ್ತು. ಆ ಇತಿಹಾಸ, ಭೀಕರತೆ, ನೋವಿನ ಉಳಿಕೆಯಂತೆ ಸೂರಜ್ ರಂಗಯ್ಯನ್ ಕಂಡರು. ಸೂಕ್ಷ್ಮವಾಗಿ ನೋಡಿದರೆ ಇನ್ನೂರು ವರ್ಷಗಳ ಹಿಂದಿನ ನೋವು ಇಂದೂ ಅವರ ಮುಖದಲ್ಲಿ ಇಣುಕುತ್ತಿತ್ತು. ಇತಿಹಾಸವನ್ನು ಹೇಳುತ್ತಾ ಹೇಳುತ್ತಾ ಸೂರಜ್ “ಹಾಗಾಗಿ ನಾವು ಇಂದಿಗೂ ದೀಪಾವಳಿ ಆಚರಿಸುತ್ತಿಲ್ಲ” ಎಂದು ಮುಗಿಸಿದರು. ಸೌಜನ್ಯಕ್ಕೂ ಹಬ್ಬಕ್ಕೆ ಕರೆಯಲಾರದ ಸ್ಥಿತಿ ಅವರದ್ದು. ಅವರು ಮಂಡ್ಯದ ಸದ್ಗಹಸ್ಥರು. ಅತಿ ವಿರಳ ಸಂಖ್ಯೆಯಲ್ಲಿರುವ ಮಂಡಯಂ ಅಯ್ಯಂಗಾರರರು ಎಂಬ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಮತ್ತಷ್ಟು ಓದು »

28
ಆಕ್ಟೋ

ಉತ್ತರ ಕನ್ನಡ ಹವ್ಯಕರ ದೊಡ್ಡಬ್ಬ (ದೀಪಾವಳಿ) ದ ಆಚರಣೆ

– ಗೀತಾ ಹೆಗ್ಡೆ

download-1ನಮ್ಮ ಹವ್ಯಕ ಜನಾಂಗದಲ್ಲಿ ದೀಪಾವಳಿ ಹಬ್ಬ ಎಂದು ಕರೆಯುವ ವಾಡಿಕೆ ಇಲ್ಲ. ಚೌತಿ ಹಬ್ಬ (ಗಣೇಶ ಚತುರ್ಥಿ) ಮಾರ್ನೋಮಿ ಹಬ್ಬ ಅಥವಾ ನವರಾತ್ರಿ ಹಬ್ಬ ( ದಸರಾ ಹಬ್ಬ) ದೊಡ್ಡಬ್ಬ (ದೀಪಾವಳಿ ಹಬ್ಬ) ಹೀಗೆ ತಮ್ಮದೆ ಶೈಲಿಯಲ್ಲಿ ಹಬ್ಬಗಳನ್ನು ಕರೆಯುವ ವಾಡಿಕೆ ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೂ ಈ ಹಬ್ಬಗಳನ್ನು ಆಚರಿಸುವ ರೀತಿ ಕೂಡಾ ವಿಭಿನ್ನವಾಗಿದೆ. ಯಾವುದೇ ಹವ್ಯಕರ ಮನೆಗೆ ತೆರಳಿದರೂ ಹಬ್ಬ ಆಚರಿಸುವ ರೀತಿ, ಅಡುಗೆ ಮಾಡುವ ರೀತಿ, ಹವ್ಯಕ ಭಾಷೆ, ನಡೆ, ನುಡಿ, ಆದರಾಥಿತ್ಯ ಎಲ್ಲವೂ ಒಂದೇ ರೀತಿ ಇರುತ್ತದೆ. ಇದು ಉತ್ತರ ಕನ್ನಡದ ಹವ್ಯಕರ ನಡೆಯಾದರೆ ದಕ್ಷಿಣ ಕನ್ನಡದ ಕಡೆ ಹವ್ಯಕ ಭಾಷೆ, ಹಬ್ಬದ ಆಚರಣೆ ವಿಭಿನ್ನವಾಗಿ ಇರುತ್ತದೆ. ಅಡುಗೆ ಊಟ ಉಪಚಾರ ಪೂಜೆ, ಶಾಸ್ತ್ರ ಎಲ್ಲವೂ ವಿಭಿನ್ನವಾಗಿದೆ. ಎಲ್ಲರೂ ಹವ್ಯಕ ಬ್ರಾಹ್ಮಣರೇ ಆದರೂ ಸ್ವಲ್ಪ ವ್ಯತ್ಯಾಸ. ಮತ್ತಷ್ಟು ಓದು »

28
ಆಕ್ಟೋ

ದಲಿತರ ಹೆಗಲ ಮೇಲೆ ಬಂದೂಕಿಟ್ಟಿರುವ ಕೈಗಳು ಯಾರದ್ದು?

ರಾಕೇಶ್ ಶೆಟ್ಟಿ

udupi‘ಅಧಿಕಾರದಲ್ಲಿರುವ ಕಾಂಗ್ರೆಸ್ಸಿಗಿಂತಲೂ, ಅಧಿಕಾರದಲ್ಲಿರದ ಕಾಂಗ್ರೆಸ್ಸ್ ದೇಶಕ್ಕೆ ಅಪಾಯಕಾರಿ’ ಅಂತ ಗೆಳೆಯನೊಬ್ಬ ಆಗಾಗ್ಗೆ ಹೇಳ್ತಾ ಇರ್ತಾನೆ. 2014ರ ಮೇ 16 ರಂದು ಬಿಜೆಪಿ ಅಧಿಕಾರ ಹಿಡಿದ ದಿನದಿಂದ ಇವತ್ತಿನವರೆಗೂ ಕಾಂಗ್ರೆಸ್ಸ್ ಪಕ್ಷದವರ ಆರ್ಭಟಗಳನ್ನು ನೋಡಿದರೇ, ಗೆಳೆಯನ ಮಾತು ನಿಜವೆನಿಸುತ್ತದೆ. 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಹಿಂದಿನ ಯಾವುದೇ ಚುನಾವಣೆಗಳಂತಿರಲಿಲ್ಲ. ಕಾಂಗ್ರೆಸ್ ಎಂಬ ಪುರಾತನ ಪಕ್ಷ ಮಕಾಡೆ ಮಲಗಿದರೇ, ಉಳಿದ ಅವಕಾಶವಾದಿ ಪ್ರಾದೇಶಿಕ, ಕೌಟುಂಬಿಕ, ಸೆಕ್ಯುಲರ್, ಕಮ್ಯುನಿಸ್ಟ್ ಪಕ್ಷಗಳು ಹೇಳ ಹೆಸರಿಲ್ಲದಂತಾದವು. ಮತ್ತಷ್ಟು ಓದು »

23
ಆಕ್ಟೋ

ಜಗಳಕ್ಕೆ ಬುಡ ಯಾವುದು?

– ರೋಹಿತ್ ಚಕ್ರತೀರ್ಥ

rtnregnec“ಜಗಳಕ್ಕೆ ಬುಡ ಯಾವುದೋ ಬೋಳೀಮಗನೆ” ಅಂತ ನಮ್ಮ ಕಡೆ ಒಂದು ಗಾದೆ. ಚಿಕ್ಕವನಿರುವಾಗ ಕೇಳಿದ್ದು (ಪಾವೆಂ ಆಚಾರ್ಯರು ಇದನ್ನು ಒಮ್ಮೆ ಬರೆದೂ ಇದ್ದರು ಎನ್ನುವುದನ್ನು ಕೇಳಿದ್ದೇನೆ). ಒಗೆದ ಕಲ್ಲನ್ನು ಕಚ್ಚಿ ಹಿಡಿವ ಹಸಿಮಣ್ಣಿನ ಹಾಗೆ ಮನಸ್ಸು ಇಂಥ ಮಾತುಗಳನ್ನು ಬೇಗನೆ ಗ್ರಹಿಸಿ ಹಿಡಿದಿಟ್ಟುಕೊಂಡು ಬಿಡುತ್ತದೆ! ಈಗ ಕೂತು ಯೋಚನೆ ಮಾಡಿದರೆ ಇದಕ್ಕೆ ಎರಡು ಅರ್ಥ ಪದರಗಳಿರುವುದು ಹೊಳೆಯುತ್ತಿದೆ. ಒಂದು, ಜಗಳಕ್ಕೆ ಕಾರಣವೇ ಬೇಕಾಗಿಲ್ಲ; ಯಾವ ಕ್ಷುಲ್ಲಕ ವಿಚಾರವನ್ನು ಹಿಡಿದುಕೊಂಡೂ ಜಗಳವಾಡಬಹುದು ಎನ್ನುವುದು. ಇನ್ನೊಂದು, ನಮ್ಮಲ್ಲಿ ‘ಬೋಳೀಮಗ’ ಎಂಬ ಶಬ್ದಪ್ರಯೋಗ ಆದೊಡನೆ ಅದುವರೆಗೆ ನಡೆಯುತ್ತಿದ್ದ ಮಾತಿನ ಚಕಮಕಿಗೆ ಹೊಸ ರೂಪ, ಬಣ್ಣ, ವೇಗ ಸಿಗುತ್ತದೆ. ಉರಿಯಲೋ ಆರಲೋ ಎನ್ನುತ್ತ ಓಲಾಡುವ ಬಡಕಲು ಬೆಂಕಿಗೆ ಸೀಮೆಎಣ್ಣೆ ಸುರಿವಂತಹ ಪರಿಣಾಮವನ್ನು ಈ ಶಬ್ದ ಮಾಡುತ್ತದೆ – ಎನ್ನುವುದು. ಮತ್ತಷ್ಟು ಓದು »

21
ಆಕ್ಟೋ

ಕಟು ಸತ್ಯ

– ಗೀತಾ ಹೆಗ್ಡೆ

imagesಇದು ಕಲಿಗಾಲ. ಇಲ್ಲಿ ಏನು ನಡೆಯುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಗೊತ್ತಿದ್ದೂ ಕಣ್ಣು ಮುಚ್ಚಿ ಕುರುಡರಂತೆ ಅಸಹಾಯಕತೆಯಲ್ಲಿ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.  ಇನ್ನೂ ಆಗುತ್ತಲೇ ಇದೆ.  ಇದರ ಅಂತ್ಯ ಎಲ್ಲಿಗೆ ಹೋಗಿ ತಲುಪುತ್ತದೊ ಅನ್ನುವ ಆತಂಕ , ಜಿಜ್ಞಾಸೆ ಮನದಲ್ಲಿ.  ಈ ಜಗತ್ತು, ದೇಶ ಯಾರೊಬ್ಬರ ಸ್ವತ್ತಲ್ಲ.  ಆದರೆ ಬರಬರುತ್ತಾ ಈ ದೇಶದ, ರಾಜ್ಯದ ಸ್ಥಿತಿ ಹದಗೆಡುತ್ತಲಿದೆ.  ಹುಟ್ಟಿದ ಶಿಶುವಿನಿಂದ ಹಿಡಿದು ಸಾಯುವ ಮುದುಕರವರೆಗೂ ತೊಳಲಾಟ ತಪ್ಪಿದ್ದಲ್ಲ.  ಎಲ್ಲಿ ನೋಡಿದರೂ ಅರಾಜಕತೆ.  ಮನುಷ್ಯ ಪ್ರತಿಯೊಂದು ಕ್ಷಣವೂ ಕತ್ತಿಯ ಅಲಗಿನ ಮೇಲೆ ಬದುಕುವಂತ ಸ್ಥಿತಿ ನಿರ್ಮಾಣವಾಗುತ್ತಿದೆ. ಹಸುಳೆಗೆ ಹಾಲು ಕುಡಿಸುವಾಗಲೂ ತಂದ ಹಾಲು, ಹಾಲೋ  ಅಥವ ಹಾಲಾಹಲವೊ ಅನ್ನುವ ಸಂಕಟದಲ್ಲಿ ಹೆತ್ತ ಕರುಳು ಸಂಕಟ ಪಡುವಂತಾಗಿದೆ.  ಉಪಾಯ ಇಲ್ಲ. ಮನದೊಳಗಿನ ಆತಂಕ ಬದಿಗೊತ್ತಿ ಮಗುವಿನ ಹೊಟ್ಟೆ ತುಂಬಿಸುತ್ತಾಳೆ. ತಿನ್ನುವ ತರಕಾರಿ, ಹಣ್ಣು, ಬೇಳೆ ಕಾಳುಗಳಿಗೂ ವಿಷ ಮಿಶ್ರಿತ. ಕೆಡದೆ ಹಾಳಾಗದಿರಲು, ಫ್ರೆಶ್ ಆಗಿ ಕಾಣಲು. ಕಾಯಿ ಹಣ್ಣಾಗಲು ಎಲ್ಲದಕ್ಕೂ ತೀರ್ಥ ಪ್ರೋಕ್ಷಣೆ, ಗಂಧ ಲೇಪನ, ಅಕ್ಷತೆ ಹಾಕಿ ಜನರ ಕಣ್ಣಿಗೆ ಮಣ್ಣೆರಚುವ ಧಂದೆ ಅವ್ಯಾಹತವಾಗಿ ನಡೆಯುತ್ತಲೇ ಇದೆ.  ಟೀವಿ ಮಾಧ್ಯಮಗಳಲ್ಲಿ ಕಣ್ಣಾರೆ ಕಂಡ ಜನ ತುತ್ತು ಅನ್ನ ತಿನ್ನುವಾಗಲೂ ನಾಳೆ ನನ್ನ ಆರೋಗ್ಯ ಏನಾಗುತ್ತೊ ಎಂದು ಯೋಚಿಸುವಂತಾಗಿದೆ.  ಪಿಜ್ಜಾ ಬರ್ಗರ್ ಹಾವಳಿ ಯುವಕ ಯುವತಿಯರ ಬಾಯಿ ಚಪಲಕ್ಕೆ ಮನೆಯ ತಿಂಡಿ ರುಚಿಸದಂತಾಗಿದೆ. ಮತ್ತಷ್ಟು ಓದು »

19
ಆಕ್ಟೋ

ಸಾಮಾಜಿಕ ಸಮಾನತೆಯ ಐಡಿಯಾಲಜಿ ಹಾಗೂ ಸಮವಸ್ತ್ರ ನಿಯಮದ ಸಮಸ್ಯೆ

– ವಿನಾಯಕ ಹಂಪಿಹೊಳಿ

rjp_310816_kesari1ಪಶ್ಚಿಮದ ದೇಶಗಳು ಶಾಲಾ ಕಾಲೇಜುಗಳಲ್ಲಿರುವ ಸಮವಸ್ತ್ರದ ನಿಯಮವನ್ನು ಕೇವಲ ಒಂದು ಶಿಸ್ತಿನ ನಿಯಮವನ್ನಾಗಿ ನೋಡುವದಿಲ್ಲ. ಆ ದೇಶಗಳು ಪ್ರೊಟೆಸ್ಟಂಟ್ ಚಳುವಳಿಯ ಕಾಲದಿಂದ ರೂಪಿಸಿಕೊಂಡಿರುವ ಸಾಮಾಜಿಕ ಸಮಾನತೆಯ ಐಡಿಯಾಲಜಿಯನ್ನು ಶಾಲೆಗಳಲ್ಲಿ ಅನುಷ್ಠಾನಕ್ಕೆ ತರುವ ಮತ್ತು ಬೆಳೆಯುತ್ತಿರುವ ಮಕ್ಕಳಿಗೆ ಆ ಐಡಿಯಾಲಜಿಯನ್ನು ತಿಳಿಸುವ ಪ್ರಯತ್ನ ಎಂದು ಅರ್ಥೈಸಲಾಗುತ್ತದೆ. ಶಾಲೆ ಎಂಬ ಸಂಸ್ಥೆಯ ಮುಂದೆ ಎಲ್ಲ ಮಕ್ಕಳೂ ಸಮಾನರು ಹಾಗೂ ಅಲ್ಲಿ ಬಡವ ಮತ್ತು ಬಲ್ಲಿದ ಎಂಬ ಭೇದವಿಲ್ಲ ಎಂಬ ಉನ್ನತವಾದ ಆಶಯವನ್ನು ಈ ಸಮವಸ್ತ್ರದ ನಿಯಮವು ಹೊಂದಿದೆ. ಹೀಗಾಗಿ ಅಲ್ಲಿ ಸಮವಸ್ತ್ರವನ್ನು ಹಾಕಿಕೊಳ್ಳಲು ಒಪ್ಪದಿರುವವರನ್ನು ಸಾಮಾಜಿಕ ಸಮಾನತೆಯ ವಿರೋಧಿ ಎಂದೇ ಪರಿಗಣಿಸಲಾಗುತ್ತದೆ. ಮತ್ತಷ್ಟು ಓದು »

17
ಆಕ್ಟೋ

ಪರಿಸರ ಶಿಕ್ಷಣ: ಸಾಧನೆ ಮತ್ತು ಸವಾಲುಗಳು

– ಕಲ್ಗುಂಡಿ ನವೀನ್
ಬೆಂಗಳೂರು
ದೂರವಾಣಿ: 944 89 05214

curriculumಇಂದು ಪರಿಸರ, ಪರಿಸರ ಮಾಲೀನ್ಯ ಎಂದರೆ ಅದನ್ನು ವಿವರಿಸಲು ಹೆಚ್ಚು ಶ್ರಮಪಡಬೇಕಿಲ್ಲ. ಆ ಕುರಿತಾದ ಜಾಗೃತಿ ಜನಸಾಮಾನ್ಯರಲ್ಲಿ ಇದೆ. ಇದೊಂದು ತೀರಾ ಇತ್ತೀಚಿನ ಸಂತೋಷದಾಯಕ ಬೆಳವಣಿಗೆ ಎಂದರೆ ಪರಿಸರ ಕುರಿತಾದ ಸಕಾರಾತ್ಮಕ ನಿಲುವು. ಹಿಂದೆ ಪರಿಸರ ಎಂಜಿನಿಯರ್‍ ಒಬ್ಬರು ಹೇಳುತ್ತಿದ್ದರು: “..ನಾವು ಪರಿಸರದ ಪರವಾಗಿ ಮಾತನಾಡಿದರೆ, ನಮ್ಮನ್ನು ಕರುಣೆಯಿಂದ ನೋಡಲಾಗುತ್ತಿತ್ತು” ಎಂದು! ಇಂದು ಆ ಸ್ಥಿತಿ ಖಂಡಿತಾ ಇಲ್ಲ.  ಈ ಜಾಗೃತಿ ಹದಗೆಡುತ್ತಿರುವ ನಮ್ಮ ಪರಿಸರ ವ್ಯವಸ್ಥೆಯನ್ನು ಸರಿಪಡಿಸುವಷ್ಟು ದೃಢವಾಗಿದೆಯೇ ಎಂಬ ಪ್ರಶ್ನೆ ಬೇರೆ! ಆದರೆ ಆ ಜಾಗೃತಿ ಮೂಡಿರುವುದು ಗಮನಾರ್ಹ ಮತ್ತು ಸಂತೋಷದಾಯಕ ಅಂಶ. ಮತ್ತಷ್ಟು ಓದು »