ವಿಷಯದ ವಿವರಗಳಿಗೆ ದಾಟಿರಿ

Posts from the ‘ಪ್ರಚಲಿತ’ Category

29
ಜುಲೈ

ಹಸುವಿನ ಕೆಚ್ಚಲು ಹಿಂಡಿ ತೋಳನಿಗೆ ಹಾಲುಣಿಸುವವರು

– ರೋಹಿತ್ ಚಕ್ರತೀರ್ಥ

6a00d8341dd33453ef0168e5744052970c-550wiದಡ್ಡ ವೈರಿಯನ್ನು ಗೆಲ್ಲುವುದು ಸುಲಭ. ಆದರೆ ಅತಿ ಬುದ್ಧಿವಂತ ಶತ್ರುವಿನದ್ದೇ ಸಮಸ್ಯೆ. ಕ್ರಿಸ್ಟೋಫರ್ ನೊಲನ್‍ನ ಡಾರ್ಕ್ ನೈಟ್ ಸಿನೆಮಾ ಸರಣಿಯನ್ನು ನೋಡಿದವರಿಗೆ ಜೋಕರ್‍ನ ಪರಿಚಯ ಚೆನ್ನಾಗಿಯೇ ಇರುತ್ತದೆ. ಈತ ಹೊಡೆ ಬಡಿ ಕೊಲ್ಲು ಎನ್ನುವಂಥ ನೇರಾನೇರ ವಿಲನ್ ಅಲ್ಲ. ನಾಯಕನ ಜೊತೆಗೇ ಇದ್ದು, ಆತನ ತಂತ್ರಗಳನ್ನೆಲ್ಲ ಕರಗತ ಮಾಡಿಕೊಳ್ಳಬಲ್ಲ; ಸಂದರ್ಭ ಬಂದರೆ ನಾಯಕನಿಗಿಂತ ಚೆನ್ನಾಗಿ ಅವನ್ನು ಪ್ರಯೋಗಿಸಬಲ್ಲ ಚತುರನೀತ. ಇಂಥವರನ್ನು ಸಂಭಾಳಿಸುವುದು ಕಷ್ಟದ, ನಾಜೂಕಿನ, ಬುದ್ಧಿವಂತಿಕೆ ಮತ್ತು ಸಂಯಮ ಬೇಡುವ ಕೆಲಸ. ಸಿನೆಮಾದಲ್ಲಿ ಈತನ ಹಾವಭಾವ, ವೇಷಭೂಷಣಗಳನ್ನು ನೋಡಿಯಾದರೂ ವಿಲನ್ ಎನ್ನಬಹುದೇನೋ; ಆದರೆ ನಿಜಜೀವನದಲ್ಲಿ ಇವರು ನಮ್ಮ ನಿಮ್ಮಂತೆಯೇ ಇರುತ್ತಾರೆ. ನಮ್ಮ ಭಾಷೆಯನ್ನೇ, ನಮ್ಮ ಧಾಟಿಯಲ್ಲೇ ಮಾತಾಡುತ್ತಾರೆ. ನಮಗೇನೋ ಬಹಳ ದೊಡ್ಡ ಉಪಕಾರ ಮಾಡಲಿಕ್ಕೆಂಬಂತೆ ಹಿಂದೆ ಮುಂದೆ ಸುಳಿದಾಡಿಕೊಂಡಿರುತ್ತಾರೆ. “ನೀನೂ? ಬ್ರೂಟಸ್!” ಎಂದು ನಾವು ಕಂಗಾಲಾಗಿ ನೆಲಕ್ಕುರುಳುವಷ್ಟರಲ್ಲಿ ಕಾಲ ಮಿಂಚಿರುತ್ತದೆ. ಮತ್ತಷ್ಟು ಓದು »

28
ಜುಲೈ

ನನ್ನ ಊರು ಬೆಂಗಳೂರು – ಇಂತಿ ನಿಮ್ಮ ಪ್ರೀತಿಯ ಬಾಂಗ್ಲಾ ನುಸುಳುಕೋರ

– ವೃಷಾಂಕ್ ಭಟ್

1ಭಾರತದಲ್ಲಿ ದಿನಕಳೆದಂತೆ ಕೌಶಲ್ಯರಹಿತ ಕಾರ್ಮಿಕರ (Unskilled labourers) ಸಂಖ್ಯೆ ಕ್ಷೀಣಿಸುತ್ತಿದೆ. ಡ್ರೈವರ್ಗಳು, ಹೊಟೇಲ್ ಮಾಣಿಗಳು, ಮನೆಕೆಲಸದವರು, ಕೃಷಿಕಾರ್ಮಿಕರು, ಕ್ಲೀನರ್ಗಳು, ಹಮಾಲಿಗಳು, ಚಿಂದಿ ಸಂಗ್ರಹಿಸುವವರು ಕ್ಷೀಣಿಸಿರುವ ಪರಿಣಾಮ ದೇಶದ ಬಹುದೊಡ್ಡ ಉದ್ಯೋಗ ಕ್ಷೇತ್ರವೊಂದು ಖಾಲಿಯಾಗಿತ್ತು. ಬೆಂಗಾಲಿ ಮಾತನಾಡುವ ಮುಸಲ್ಮಾನರು ಇಂದು ಆ ಸ್ಥಾನವನ್ನು ತುಂಬಿದ್ದಾರೆ. ಬೆಂಗಾಲಿ ಮಾತನಾಡಿದ ತಕ್ಷಣ ಅವರೆಲ್ಲ ಪಶ್ಚಿಮ ಬಂಗಾಳದವರಲ್ಲ. ಅವರೆಲ್ಲರೂ ಬಾಂಗ್ಲಾ  ನುಸುಳುಕೋರರು..! ಮತ್ತಷ್ಟು ಓದು »

21
ಜುಲೈ

ವೈದ್ಯಕೀಯ ವಿದ್ಯಾಲಯಗಳಲ್ಲಿ ಕಲಿಸದ ವಿಷಯವೇನೆಂದರೆ……!!

ಗುರುರಾಜ್ ಕೊಡ್ಕಣಿ, ಯಲ್ಲಾಪುರ

51jylfg77iL._SX333_BO1,204,203,200_ಅಸಲಿಗೆ ನಾನೇಕೆ ವೈದ್ಯನಾಗಬೇಕೆಂದುಕೊಂಡಿದ್ದೆ ಎನ್ನುವುದು ನನಗೆ ನೆನಪೇ ಇಲ್ಲ. ಆದರೆ ವೈದ್ಯನಾದ ಮೇಲೆ ನನ್ನ ವರ್ತನೆ ಉಳಿದೆಲ್ಲ ವೈದ್ಯರಿಗಿಂತ ತೀರ ಭಿನ್ನವೇನಾಗಿರಲಿಲ್ಲ. ನನ್ನಲ್ಲೊಂದು ಹೆಮ್ಮೆಯಿತ್ತು. ನಾನೊಬ್ಬ ವೈದ್ಯನೆನ್ನುವ ಗರ್ವ ಮೀರಿದ ಅಹಂಕಾರವಿತ್ತು. ನನ್ನಲ್ಲಿದ್ದ ಅಹಮಿಕೆಗೆ ಮೊದಲ ಪೆಟ್ಟು ಬಿದ್ದಿದ್ದು ಸರಿಸುಮಾರು ಮೂವತ್ತು ವರ್ಷಗಳ ಹಿಂದೆ. ಅದೊಂದು ನಸುಕಿನ ಜಾವಕ್ಕೆ ಮಹಿಳೆಯೊಬ್ಬಳು ಮೂವತ್ತರ ಹರೆಯದ ತನ್ನ ಪತಿಯ ಶವವನ್ನು ನಮ್ಮ ಆಸ್ಪತ್ರೆಗೆ ತಂದಿದ್ದಳು. ತನ್ನ ಗಂಡ ತೀರಿಕೊಂಡಿದ್ದಾನೆಂಬ ಸತ್ಯವನ್ನು ಅರಗಿಸಿಕೊಳ್ಳಲಾಗದ ಆಕೆ, ನನ್ನ ಮೊಣಕಾಲನ್ನು ಗಟ್ಟಿಯಾಗಿ ಹಿಡಿದುಕೊಂಡು ಬಿಕ್ಕುತ್ತ, “ಡಾಕ್ಟರ್, ನನ್ನ ಗಂಡ ಏಕೆ ಸತ್ತ.’? ಎಂದು ಪ್ರಶ್ನಿಸಿದಳು. ಅದೊಂದು ಪ್ರಶ್ನೆ ನಾನೊಬ್ಬ ದೊಡ್ಡ ವೈದ್ಯನೆನ್ನುವ ಗರ್ವವನ್ನು ಒಂದೇ ಪೆಟ್ಟಿಗೆ ಮುರಿದುಹಾಕಿತ್ತು. ಆಕೆ ತನ್ನ ಪತಿ’ಹೇಗೆ’ಸತ್ತ ಎಂದು ಪ್ರಶ್ನಿಸಿದ್ದರೆ ನಾನು ಆಕೆಗೆ ಹತ್ತಾರು ಕಾರಣಗಳನ್ನು ಕೊಡಬಹುದಿತ್ತು. ಅವನಿಗೆ ಹೃದಯಾಘಾತವಾಗಿದೆಯೆಂದೋ ಅಥವಾ ಅವನ ರಕ್ತದೊತ್ತಡ ಕುಸಿದಿದ್ದರಿಂದ ಸತ್ತನೆಂದೋ ಸುಳ್ಳುಹೇಳಿಬಿಡಬಹುದಾಗಿತ್ತು. ಆದರೆ ಆಕೆ ಕೇಳಿದ್ದು ತನ್ನ ಗಂಡ ‘ಏಕೆ’ ಸತ್ತ ಎನ್ನುವ ಪ್ರಶ್ನೆ. ನಿಜಕ್ಕೂ ಬಲು ಕ್ಲಿಷ್ಟ ಪ್ರಶ್ನೆಯದು. ಆತನಿಗೆ ಕೇವಲ ಮೂವತ್ತು ಚಿಲ್ಲರೆ ವರ್ಷಗಳಷ್ಟು ವಯಸ್ಸು. ಆತನ ರಕ್ತದೊತ್ತಡ, ಸಕ್ಕರೆಯ ಮಟ್ಟ ತೀರ ಸಾಮಾನ್ಯವಾಗಿದ್ದವು. ಹೃದಯವೂ ಗಟ್ಟಿಮುಟ್ಟಾಗಿಯೇ ಇತ್ತು. ಆದರೂ ಆತ ಏಕೆ ಸತ್ತ ಎನ್ನುವ ಪ್ರಶ್ನೆಗೆ ನನ್ನ ಬಳಿ ಉತ್ತರವಿರಲಿಲ್ಲ. ನಿಜ ಹೇಳಬೇಕೆಂದರೆ ಅಂಥದ್ದೊಂದು ಪ್ರಶ್ನೆಗೆ ಉತ್ತರ ವೈದ್ಯಕೀಯ ಲೋಕಕ್ಕೂ ಇದುವರೆಗೆ ಸಿಕ್ಕಿಲ್ಲ. ಅದೊಂದು ಪ್ರಶ್ನೆ ನನ್ನನ್ನು ತುಂಬ ಕಾಲ ಬೆನ್ನುಬಿಡದೇ ಕಾಡಿತ್ತು. ‘ಏಕೆ’ ಎನ್ನುವ ಸಂಕೀರ್ಣ ಪ್ರಶ್ನೆಯೇ ನನ್ನನ್ನು ತತ್ವಶಾಸ್ತ್ರ, ಧರ್ಮ, ವೇದಾಂತಗಳತ್ತ ಆಕರ್ಷಿಸಿತ್ತು. ಅಂತಹ ಸವಾಲಿನ ಜವಾಬು ಹುಡುಕುತ್ತ ಹೊರಟ ನನಗೆ ಆಧುನಿಕ ವೈದ್ಯ ಲೋಕದ ದೌರ್ಬಲ್ಯಗಳ ಪರಿಚಯವೂ ಆಯಿತು” ಮತ್ತಷ್ಟು ಓದು »

10
ಜುಲೈ

ನವಿಲುಗರಿ…..

– ಮಯೂರಲಕ್ಷ್ಮೀ
imagesಮುಖಪುಸ್ತಕದ ಅಭಿವ್ಯಕ್ತ ಮನಸುಗಳು…….
ದೈನಂದಿನ ಯಾಂತ್ರಿಕ ಬದುಕಿನ ಏಕತಾನತೆಯಿಂದ ಹೊರಬಂದು ಮನದಲ್ಲಿ ಹಾದು ಹೋಗುವ ಹಲವು ಭಾವನೆಗಳನ್ನು ವ್ಯಕ್ತಪಡಿಸಲು ಎಲ್ಲರಿಗೂ ಎಲ್ಲಾ ಸಮಯದಲ್ಲೂ ಸಿಗುವ ಸಾಧನಗಳಲ್ಲಿ ಇಂದು ಮುಖಪುಟವೂ (ಫೇಸ್‍ಬುಕ್) ಮುಖ್ಯ ಪಾತ್ರ ವಹಿಸುತ್ತಿದೆ. ಹಲವರಿಗೆ ಮುಖಪುಸ್ತಕದ ಸಂವಾದಗಳಲ್ಲಿ ತಮ್ಮ ವಿಚಾರಧಾರೆಗಳನ್ನು ಎಲ್ಲರೊಡನೆ ಹಂಚಿಕೊಳ್ಳುವ ಬಹುಮುಖ್ಯ ತಾಣಗಳು… ತಮಗಾದ ಹತಾಶೆ ಮತ್ತು ಸೋಲುಗಳಿಂದ ಹೊರಬಂದ ಮತ್ತೊಬ್ಬರಲ್ಲಿ ಕಂಡು ಗೆಲುವಿನ ಹಾದಿಯನ್ನು ಅರಸುವ ಹೃದಯಗಳು…ಇಂದಿನ ಮಾಹಿತಿ ಯುಗದಲ್ಲಿ ಐತಿಹಾಸಿಕ ಗತವೈಭವದ ಹಿರಿಮೆಯನ್ನು ಸಾರುವ ಬರಹಗಳು… ದೇಶ-ದೇಶಗಳ ಸಂಸ್ಕೃತಿಯನ್ನು ಕುರಿತು ದಾಖಲೆಗಳನ್ನು ನೀಡುವ ಪ್ರಾಜ್ಞ ದೃಷ್ಟಿಕೋನಗಳು… ಶಿಲಾಯುಗದಿಂದ ಸೈಬರ್‍ಯುಗದವರೆಗೂ ಅರಿವಿನ ಹಂದರವನ್ನು ಒರೆಹಚ್ಚುವ ವೈಜ್ಞಾನಿಕ ಸಿದ್ಧಾಂತಗಳು… ಪ್ರಚಲಿತ ವಿದ್ಯಮಾನಗಳನ್ನು ವಿಶ್ಲೇಷಿಸಿ BURNING ISSUE ಗಳನ್ನು ಕುರಿತು ಗಂಭೀರ ಚರ್ಚೆಗಳಲ್ಲಿ ಭಾಗವಹಿಸಿ ತಮ್ಮ ತಮ್ಮ ವಾದಗಳನ್ನು ವ್ಯಕ್ತಪಡಿಸುವ ಮನಸುಗಳು… ಸಕಾರಾತ್ಮಕ ನಿಲುವುಗಳನ್ನು ಪಾಸಿಟೀವ್ ದೃಷ್ಟಿಕೋನದಲ್ಲಿ ಭಿತ್ತರಿಸುವ ಚಿತ್ರ ಸಂದೇಶಗಳನ್ನು ಕಂಡ ಕೂಡಲೇ ತಮ್ಮ ಗೋಡೆಯ ಮೇಲೆ ಲಗತ್ತಿಸುವ ಕೈಗಳು… ಯಾರಿಗೋ ಎಲ್ಲೋ ಕಷ್ಟವಾದಲ್ಲಿ ಆ ಕಷ್ಟವು ತಮಗೇ ಬಂದಂತೆ ಕೂಡಲೇ ಪರಿತಿಪಿಸಿ ಪ್ರತಿಕ್ರಯಿಸುವ ಶುದ್ಧಾತ್ಮಗಳು… ಪ್ರಕೃತಿಯ ವಿಸ್ಮಯಗಳನ್ನು ತಮ್ಮ ಕ್ಯಾಮೆರಾಗಳಲ್ಲಿ ಸೆರೆಹಿಡಿದು ಸಂರಕ್ಷಿಸುವ ಛಾಯಾಚಿತ್ರ ಶೀರ್ಷಿಕೆಗಳು…ಇಂತಹ ನೂರಾರು ಸಾವಿರಾರು ಜನರು ದಿನನಿತ್ಯ ಫೇಸ್‍ಬುಕ್‍ನ ಜಾಲತಾಣದಲ್ಲಿ ಸಂವಹನಶೀಲರಾಗಿರುತ್ತಾರೆ. ತಿಳಿದೋ ತಿಳಿಯದೆಯೋ ನಾವು ಈ ಅಂತರ್‍ಜಾಲವೆಂಬ ತಾಣವಲ್ಲದ ತಾಣದಲ್ಲಿ ಕಳೆದು ಹೋಗುತ್ತಿರುತ್ತೇವೆ….. ಮತ್ತಷ್ಟು ಓದು »

9
ಜುಲೈ

ವಿದ್ಯಾರ್ಥಿ ರಾಜಕೀಯ ಕ್ರಿಯಾಶೀಲತೆ ಮುಂದಿರುವ ಸವಾಲುಗಳು

ಬಿ.ಜಿ. ಕುಲಕರ್ಣಿ
ಸಹಾಯಕ ಪ್ರಾಧ್ಯಾಪಕರು
ರಾಜ್ಯಶಾಸ್ತ್ರ ವಿಭಾಗ
ಬಸವಪ್ರಭು ಕೋರೆ ಮಹಾವಿದ್ಯಾಲಯ
ಚಿಕ್ಕೋಡಿ. ಜಿಲ್ಲಾ: ಬೆಳಗಾವಿ

poverವಿದ್ಯಾರ್ಥಿ ರಾಜಕೀಯ ಕ್ರೀಯಾಶಿಲತೆ ಕುರಿತು ಚರ್ಚಿಸುವಾಗ ಉದ್ಭವವಾಗುವ ಮೊದಲ ಪ್ರಶ್ನೆಯೆಂದರೆ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕೆ ಅಥವಾ ಬೇಡವೇ ? ಈ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಪಂಥಗಳಿವೆ. ಮೊದಲನೆಯ ಪಂಥದ ಅಭಿಪ್ರಾಯವೆನೆಂದರೆ ವಿದ್ಯಾರ್ಥಿಗಳ ಮೊದಲ ಆದ್ಯತೆ ಅಧ್ಯಯನ. ಆದ್ದರಿಂದ ವಿದ್ಯಾರ್ಥಿಗಳು ಅಧ್ಯಯನದಲ್ಲಿ ನಿರತರಾಗಬೇಕು. ಆ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ವಾದಿಸುತ್ತಾರೆ. ಎರಡನೆ ಪಂಥವು ವಿದ್ಯಾರ್ಥಿಗಳೂ ಜನ ಸಮೂಹದ ಭಾಗವಾಗಿರುವುದರಿಂದ, ರಾಜಕೀಯ ಸಮಾಜ ಬಿಟ್ಟು ಇಲ್ಲವಾದ್ದರಿಂದ, ರಾಜಕೀಯ ನಿರ್ಧಾರಗಳು ವಿದ್ಯಾರ್ಥಿಗಳ ಮೇಲೂ ಪ್ರಭಾವ ಬೀರುವುದರಿಂದ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕು ಎಂಬ ವಾದ ಮಂಡಿಸುತ್ತಾರೆ. ವಿದ್ಯಾರ್ಥಿಗಳು ರಾಜಕೀಯದಲ್ಲಿ ಏಕೆ ಭಾಗವಹಿಸಬೇಕು ಎಂಬ ವಾದಕ್ಕೆ ಪ್ರಬಲ ಕಾರಣಗಳನ್ನು ಇಲ್ಲಿ ಚರ್ಚಿಸಲಾಗಿದೆ. ಮತ್ತಷ್ಟು ಓದು »

7
ಜುಲೈ

“ಮಿಡಿದ ಹೃದಯಗಳು”

ಪ್ರವೀಣ್ .ಎಸ್

impossibly-cute-puppy-8ಜೂನ್ ತಿಂಗಳ ಮುಂಜಾನೆಯ ಮಳೆ, ನಾನು ಆಫೀಸ್ಗೆ ಪ್ರಯಾಣಿಸಲು ದ್ವಿಚಕ್ರ ವಾಹನವನ್ನು ತರಾತುರಿಯಲ್ಲಿ ಹೊರ ತೆಗೆಯಲು ಸಾಹಸ ಪಡುತ್ತಿದ್ದೆ ಆದದ್ದೇನು?…ಅನಿರೀಕ್ಷಿತ ತಾಂತ್ರಿಕ ದೋಷ!, ಪೆಚ್ಚು ಮೊರೆ ಹಾಕಿಕೊಂಡು ಅದೃಷ್ಟವನ್ನು ಬಯ್ಯುತ್ತ, ಇಂದು ಮಹಾ ನಗರ ಪಾಲಿಕೆಯ ಬಸ್ಸೇ ಗತಿಯೆಂದು, ಕೈ ಗೆ ಸಿಕ್ಕ ಛತ್ರಿ ಹಿಡಿದು, ಬ್ಯಾಗನ್ನು ಬೆನ್ನಿಗೇರಿಸಿ, ಪ್ಯಾಂಟನ್ನು ಅರ್ಧ ಅಡಿ ಮಡಿಸಿ, ಹಳ್ಳ ಕೊಳ್ಳಗಳ ರಸ್ತೆಯಲ್ಲಿ ಹೆಜ್ಜೆ ಹಾಕುತ್ತ ಆತುರವಾಗಿ ಬಸ್ ಸ್ಟಾಪಿನೆಡೆಗೆ ಪ್ರಯಾಣಿಸಿದೆ. ಅಂತೂ ಇಂತು ತುಂತುರು ಮಳೆಯ ಫಲಿತಾಂಶವೋ ಎಂಬ ಟ್ರಾಫಿಕ್ ಜಂಜಾಟಕ್ಕೆ ಸಿಲುಕಿ ಬಸವಳಿದ ಬಸ್ ಬಂದೆ ಬಿಟ್ಟಿತು, ಇನ್ನು ಚಾಲಕರು ಮತ್ತು ನಿರ್ವಾಹಕರು ಒಂದು ಕಾಪಿ ಹೀರಲೋ / ಬೀಡಿ ಹಚ್ಚಲೋ ಕೆಳಗಿಳಿದರು, ಆಗಲೇ ಸಮಯ 8 ಕ್ಕೆ ಹತ್ತು ನಿಮಿಷ. ಬಸ್ ಏರಿ ಸಾಮಾನ್ಯವಾಗಿಯೇ ಕಿಟಕಿ ಪಕ್ಕದ ಸೀಟ್ನಲ್ಲಿ ಕೂರುವ ಜನ ಇಂದು ಯಾರೂ ಆ ಸೀಟ್ಗಳ ಹಿಡಿಯುತ್ತಿಲ್ಲ, ಕಾರಣ ನಿಮಗೆ ಗೊತ್ತೇ ಇದೆ! ಎಷ್ಟು ಪ್ರಮಾಣದ ಮಳೆ ಹೊರಗೆ ಆಗಿದೆ ಎಂದು ತಿಳಿಯಲು ನಮ್ಮೂರಿನ ಬಸ್ಸಿನೊಳಗೆ ಹೊಕ್ಕರೆ ಸಾಕು (ಮಳೆ ಅಳೆಯುವ ಸಾಧನವಿಟ್ಟು ಅಳೆವುದೊಂದೇ ಬಾಕಿ, ಹವಾಮಾನ ಇಲಾಖೆಗೆ) ಆ ವಿಷಯ ಇರಲಿ ಬಿಡಿ; ಅಂತೂ ನನಗೂ ಒಂದು ಸೀಟು ದೊರಕಿತು. ಮತ್ತಷ್ಟು ಓದು »

4
ಜುಲೈ

ಯಡಿಯೂರಪ್ಪನವರಿಂದ ಜನರು ನಿರೀಕ್ಷಿಸುತ್ತಿರುವುದೇನು?

– ರಾಕೇಶ್ ಶೆಟ್ಟಿ

800x480_IMAGE55065639ಸಂಸತ್ತಿನ ಸೆಂಟ್ರಲ್ ಹಾಲಿನಲ್ಲಿ ಪ್ರಧಾನಿ ಮೋದಿಯವರ ಭಾಷಣದಿಂದ ಪ್ರೇರಿತರಾಗಿ, ತಾನು ಸ್ವಇಚ್ಚೆಯಿಂದ ಕರ್ನಾಟಕ ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ತೊಡಗಿಸಿಕೊಳ್ಳುವುದಾಗಿ ಹೇಳಿಕೊಂಡು ೨೦೧೪ರ ಮೇ ೨೨ನೇ ತಾರೀಖಿನಂದು ಯಡ್ಯೂರಪ್ಪನವರು ಮೋದಿಯವರಿಗೊಂದು ಪತ್ರ ಬರೆದಿದ್ದರು.

ಆ ಪತ್ರ ಬರೆದು ಸುಮಾರು ೨ ವರ್ಷಗಳ ನಂತರ ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಹುದ್ದೆ ಯಡ್ಯೂರಪ್ಪನವರಿಗೆ ಒಲಿಯಿತು. ಈ ಬೆಳವಣಿಗೆಗೆ ಪಕ್ಷದೊಳಗೆ ಹಾಗೂ ಹೊರಗೆ ಭರ್ಜರಿ ಸ್ವಾಗತವೇ ಸಿಕ್ಕಿತು. ಅಧ್ಯಕ್ಷರಾಗುತ್ತಿದ್ದಂತೆ ‘ಎಲ್ಲರನ್ನೂ ವಿಶ್ವಾಸಕ್ಕೆ’ ತೆಗೆದುಕೊಂಡು ಮುನ್ನಡೆಯುತ್ತೇನೆ ಎಂದಿದ್ದರು ಯಡ್ಯೂರಪ್ಪ. ಮುಖ್ಯಮಂತ್ರಿಯಾಗಿದ್ದಾಗ ಸ್ವಯಂಕೃತಾಪರಾಧದ ಜೊತೆಗೆ, ಬೆನ್ನಿಗಂಟಿಕೊಂಡಿದ್ದ ಭಟ್ಟಂಗಿಗಳು, ಕಿಂಕರರಂತೆ ಆಜೂ-ಬಾಜೂ ಕಾಣಿಸಿಕೊಳ್ಳುತ್ತಿದ್ದವರು, ಪಕ್ಷದೊಳಗಿನ ಮೀರ್ ಸಾಧಿಖರ ಕುತಂತ್ರವೂ ಸೇರಿ ಅಧಿಕಾರವನ್ನೂ ಕಳೆದುಕೊಂಡು, ಕಾನೂನಿನ ಪೆಟ್ಟನ್ನು ತಿಂದು, ಕಡೆಗೆ ನ್ಯಾಯಾಲಯದಲ್ಲಿ ಜಯಿಸಿ ಸಾಕು ಸಾಕೆನಿಸುವಷ್ಟು ಹೈರಾಣಾದ ನಂತರ ದೊರೆತ ರಾಜ್ಯಾಧಕ್ಷ್ಯ ಹುದ್ದೆಯನ್ನು ಯಡ್ಯೂರಪ್ಪನವರು ಸರಿಯಾಗಿ ನಿರ್ವಹಿಸಿದ್ದಾರೆಯೇ? ಮತ್ತಷ್ಟು ಓದು »

1
ಜುಲೈ

ಕ್ಯೂಬಾದಂತೆ ಕಾಣುವ ಪಿಣರಾಯಿ

– ಸಂತೋಷ್ ತಮ್ಮಯ್ಯ

skulls communism russians 1920x1200 wallpaper_www.wallpapername.com_18

ನಾಳೆ ಸಮಸ್ತ ಕೇರಳಕ್ಕೂ ಇದೇ ಗತಿ
ಬಹುಶಃ ಇದುವರೆಗೆ ಇಷ್ಟೊಂದು ಕಡಿಮೆ ಅವಧಿಯಲ್ಲಿ ಯಾವ ಸರ್ಕಾರಗಳೂ ಇಷ್ಟೊಂದು ಸಾಧನೆಯನ್ನು ಮಾಡಿರಲಾರರು. ಅದೂ ಒಂದು ತಿಂಗಳೊಳಗಾಗಿ ತನ್ನ ಕೆಲಸವನ್ನು ಅಷ್ಟೊಂದು ಶೀಘ್ರವಾಗಿ, ಅಚ್ಚುಕಟ್ಟಾಗಿ ಮಾಡಲು ಸಾಧ್ಯವಾಗುವುದು ಕಮ್ಯುನಿಸ್ಟರಿಗೆ ಮಾತ್ರ. ಕೇರಳದಲ್ಲಿ ಅವರ ಈ ಒಂದು ತಿಂಗಳಿನ ಸಾಧನೆಯನ್ನು ನೋಡಿದರೆ ಮುಂದಿನ ಐದು ವರ್ಷಗಳ ‘ಸಾಧನೆ’ ಇನ್ನೆಷ್ಟಿರಬಹುದು ಎಂಬ ಅಂದಾಜು ಸಿಗುತ್ತದೆ. ಮುಂದಿನ ಐದು ವರ್ಷಗಳಲ್ಲಿ ಕೇರಳ ಕೇರಳವಾಗಿಯೇ ಉಳಿಯುತ್ತದೆಯೋ ಎಂಬ ಸಂಶಯವೂ ಬರುತ್ತದೆ.
ಕೇರಳದಲ್ಲಿ ಕಮ್ಯುನಿಸ್ಟರು ಅಡಳಿತ ಆರಂಭಿಸಿ ನಿನ್ನೆಗೆ ಒಂದು ತಿಂಗಳಾಯಿತು. ಈ ಒಂದು ತಿಂಗಳಿನಲ್ಲಿ ಎದೆ ನಡುಗಿಸುವ ಹಲವು ಘಟನೆಗಳು ನಡೆದವು. ಆದರೂ ಬಿಜೆಪಿ ಆಡಳಿತವನ್ನು ಎರಡೇ ದಿನಗಳಲ್ಲಿ ವಿಮರ್ಶೆಗೆ ಒಡ್ಡುವಂತೆ ಯಾರೂ ಕಮ್ಯುನಿಸ್ಟ್ ಅಡಳಿತವನ್ನು ವಿಮರ್ಶೆ ಮಾಡಲಿಲ್ಲ. ಅಚ್ಯುತಾನಂದರನ್ನು ಪಿಣರಾಯಿ ವಿಜಯನ್ ಮೂಲೆಗುಂಪು ಮಾಡಿದ ಎಂಬ ಎಂಬ ಒಂದು ಸಂಗತಿಯನ್ನು ಮಾಧ್ಯಮಗಳು ಇನ್ನೂ ಗುನುಗುತ್ತಿವೆ. ಈ ಒಂದು ತಿಂಗಳಲ್ಲಿ ನಡೆದ ಘಟನೆಗಳನ್ನು ಯಾವ ಚಿತ್ರನಟನೂ ಅಸಹಿಷ್ಣುತೆ ಎಂದು ಕರೆಯಲಿಲ್ಲ, ಯಾವ ಪತ್ರಕರ್ತನೂ ಅರಾಜಕತೆ ಎಂದು ಬಣ್ಣಿಸಲಿಲ್ಲ. ಹಾಗಾದರೆ ಕೇರಳ ಕಮ್ಯುನಿಸ್ಟರ ತಿಂಗಳ ಸಾಧನೆ ಏನು? ಮತ್ತಷ್ಟು ಓದು »

30
ಜೂನ್

ಪ್ರತಿಭಾ ಪಲಾಯನ

-ಮಯೂರ ಲಕ್ಷ್ಮೀ

artಅದೊಂದು ಕಾಲದಲ್ಲಿ ನಳಂದಾ, ತಕ್ಷಶಿಲಾ ಮುಂತಾದ ವಿಶ್ವವಿಖ್ಯಾತ ವಿದ್ಯಾಲಯಗಳಿಂದ ಪ್ರಸಿದ್ಧಿಹೊಂದಿ ಎಲ್ಲೆಡೆಯಿಂದ ಎಲ್ಲರನ್ನೂ ಆಕರ್ಷಿಸಿ ಜ್ಞಾನದೇಗುಲವೆನಿಸಿದ್ದ ಭಾರತ ದೇಶವು ತನ್ನ ಹಿಂದಿನ ವೈಭವಗಳನ್ನು ಮರೆತುಹೋಗುವ ಸ್ಥಿತಿ ತಲುಪಿದ್ದಾದರೂ ಏಕೆ? ಯಾವುದೇ ಒಂದು ದೇಶವು ಆರ್ಥಿಕವಾಗಿ ಸಧೃಢವೆನಿಸಿಕೊಳ್ಳುವುದು ದೇಶದ ಬೆನ್ನೆಲುಬಾದ ಯುವಶಕ್ತಿಯಿಂದಾ ಮಾತ್ರ! ಜಗತ್ತಿಗೆ ಅರಿವು ನೀಡುವ ಜ್ಞಾನದೇಗುಲವೆನಿಸಿದ್ದ ಭಾರತ ಮೆಕಾಲೆಯ ಆಗಮನದಿಂದ ತನ್ನ ಮೌಲ್ಯಾಧರಿತ ಶಿಕ್ಷಣ ವ್ಯವಸ್ಥೆಯನ್ನೇ ಕಳೆದುಕೊಂಡಿತು. ಭಾರತವು ವಿಶ್ವಮಾನ್ಯವೆನಿಸಿದ್ದು ತನ್ನ ಜ್ಞಾನ-ವಿಜ್ಞಾನ, ತಂತ್ರಜ್ಞಾನಗಳಿಂದ ಪ್ರಪಂಚಕ್ಕೆ ನೀಡಿದ ಕೊಡುಗೆಯಿಂದ. ಮತ್ತಷ್ಟು ಓದು »

21
ಜೂನ್

ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿ

21-1434882123-raghavendra-swami2

-ರಾಮಚಂದ್ರ ಹೆಗಡೆ

ಇಂದು ಅಂತಾರಾಷ್ಟ್ರೀಯ ಯೋಗದಿನ. ಯೋಗಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ ಸಿಕ್ಕಿರುವ ಈ ಹೊತ್ತು ನಾವು ನೆನೆಯಲೇಬೇಕಾದ ಒಬ್ಬ ಸಾಧಕರೆಂದರೆ ಯೋಗಾಚಾರ್ಯ, ಅಭಿನವ ಧನ್ವಂತರಿ ಅಂತಲೇ ಪ್ರಸಿದ್ಧರಾದ , ಸುಮಾರು ೫೦ ವರ್ಷಗಳ ಹಿಂದೆಯೇ ಯೋಗದಲ್ಲಿ ಅಪಾರ ಸಾಧನೆ ಮಾಡಿ ಸಾವಿರಾರು ಶಿಷ್ಯರನ್ನು ತಯಾರು ಮಾಡಿ ರಾಜ್ಯದ ಮೂಲೆಮೂಲೆಗಳಿಗೆ ಯೋಗಸಂದೇಶ ತಲುಪಿಸಿದ ಮಹಾನುಭಾವ, ಯೋಗವೆಂದರೆ ಅವರು ಎಂಬಷ್ಟರ ಮಟ್ಟಿಗೆ ಮನೆಮಾತಾದ ಯೋಗಸಾಧಕ ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿ ಯವರು. ಮಲ್ಲಾಡಿಹಳ್ಳಿ ರಾಘವೇಂದ್ರ ಸ್ವಾಮೀಜಿಯವರು ತಾವೇ ಯೋಗದಲ್ಲಿ ಬಹುದೊಡ್ಡ ಸಾಧಕರಾಗಿದ್ದರು. ತಮ್ಮ ಗುರು ‘ಶಿವಾನಂದ’ರ ಪ್ರೇರಣೆಯಂತೆ, ಕರ್ನಾಟಕದ ಮೂಲೆ ಮೂಲೆಗಳಿಗೂ ಹಳ್ಳಿ ಹಳ್ಳಿಗೂ ಹೋಗಿ, ದಲಿತರು, ಬಡವರು, ಅಸಹಾಯಕರುಗಳನ್ನೂ ಉದ್ಧರಿಸುವ ಕಾಯಕವನ್ನು ಒಂದು ‘ಪೂಜೆ’ಯಾಗಿ ಸ್ವೀಕರಿಸಿ, ಅಲ್ಲಿ ಯೋಗ ಶಿಬಿರಗಳನ್ನು, ಆರೋಗ್ಯಕೇಂದ್ರಗಳನ್ನು, ಊರಿನ ನೈರ್ಮಲ್ಯೀಕರಣಗಳ ಕೆಲಸಗಳನ್ನು ಕೈಗೆತ್ತಿಕೊಂಡು ಗ್ರಾಮೀಣರಿಗೆ ಅರಿವು ಕೊಡುವುದರ ಮೂಲಕ, ಅಲ್ಲಿನ ಸರ್ವತೋಮುಖ ಪ್ರಗತಿಗಳಿಗೆ ಕಾರಣರಾದರು. 1943ರಲ್ಲಿ ಚಿತ್ರದುರ್ಗ ಜಿಲ್ಲೆ ಮಲ್ಲಾಡಿಹಳ್ಳಿಯ ಜನರ ಬೇಡಿಕೆಯನ್ನು ಪರಿಗಣಿಸಿ ಅಲ್ಲಿ ಬಂದವರು ತಮ್ಮ ಜೀವಿತದ ಉಳಿದ 50 ವರ್ಷಕ್ಕೂ ಹೆಚ್ಚು ಸಮಯವನ್ನು ಅಲ್ಲಿಯ ಏಳಿಗೆಗೆ ಮುಡುಪಾಗಿಟ್ಟರು. ತಾವು ನೀಡುತ್ತಿದ್ದ ಆಯುರ್ವೇದ ಔಷಧಿ ಯಿಂದ ಲಕ್ಷಾಂತರ ರೋಗಿಗಳ ಬದುಕಲ್ಲಿ ಬೆಳಕು ತಂದವರು. ಚಿತ್ರದುರ್ಗ ಜಿಲ್ಲೆಯ ಪುಟ್ಟ ಹಳ್ಳಿಯೊಂದನ್ನು ಯೋಗ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿಗೊಳಿಸಿದ ಸಾಧನೆ ಪೂಜ್ಯರದು. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿ ಮಲ್ಲಾಡಿಹಳ್ಳಿ ಆಶ್ರಮ ಮಾಡಿದ ಕ್ರಾಂತಿ ದೊಡ್ಡದು. ಮತ್ತಷ್ಟು ಓದು »