ಅಪ್ಪನ ಪತ್ರ
– ರೋಹಿತ್ ಚಕ್ರತೀರ್ಥ
ಮಗನನ್ನು ಬದುಕಿನ ಬೆಟ್ಟ ಹತ್ತಿ ತೋರಿಸುವ ಅಪ್ಪ
ಪ್ರೀತಿಯ ಅಶ್ವಿನ್,
ಬಹಳ ದಿನಗಳಿಂದ ನಿನಗೆ ಪತ್ರ ಬರೆದಿರಲಿಲ್ಲ. ಬರೆದು ಹೇಳುವಂಥಾದ್ದೇನೋ ಬಹಳ ಇತ್ತೆನ್ನೋಣ. ಆದರೆ, ನನ್ನ ಪತ್ರಗಳಿಂದ ನಿನ್ನ ಓದಿಗೆಲ್ಲಿ ಕಿರಿಕಿರಿಯಾದೀತೋ ಅಂತ ಸ್ವಲ್ಪ ಸಮಯ ಪೆನ್ನಿಗೂ ಅಂಚೆಯಣ್ಣನಿಗೂ ವಿಶ್ರಾಂತಿ ಕೊಟ್ಟಿದ್ದೆ. ಅಂದ ಹಾಗೆ, ಪರೀಕ್ಷೆ ಹೇಗೆ ಮಾಡಿದ್ದೀಯ? ನಿನ್ನಮ್ಮ ಇಲ್ಲಿ ಮೂರು ಹೊತ್ತು ಕೈ ಮುಗಿಯುವ ರಾಘವೇಂದ್ರ ಸ್ವಾಮಿಗಳಿಗೆ ನೀನು ನಿರಾಸೆ ಮಾಡುವುದಿಲ್ಲವೆಂದು ನಂಬುತ್ತೇನೆ! ಮತ್ತಷ್ಟು ಓದು 
ಬರಹಗಾರನ ತಲ್ಲಣಗಳು
ಹಚ್ಚಿದರೆ ದೀಪ ಹಚ್ಚು, ಬೆಂಕಿ ಹಚ್ಚಬೇಡ; ಆರಿಸಿದರೆ ಬೆಂಕಿ ಆರಿಸು, ದೀಪ ಆರಿಸಬೇಡ – ದಿನಕರ ದೇಸಾಯಿ
ತೀರ ಬೇಸರ, ಅವಮಾನದ ಸಂದರ್ಭ, ಖಿನ್ನತೆ ಮನಸ್ಸನ್ನು ಆವರಿಸಿದಾಗ ಆ ಘಳಿಗೆ ನಾನು ಓದಿನ ಮೊರೆ ಹೋಗುತ್ತೇನೆ. ಓದುತ್ತ ಹೋದಂತೆ ಬರಹಗಾರನ ತಲ್ಲಣಗಳೆದುರು ನನ್ನ ವೈಯಕ್ತಿಕ ಸಂಕಟಗಳೆಲ್ಲ ತೀರ ಸಣ್ಣ ಸಂಗತಿಗಳೆನಿಸಿ ಆ ಕ್ಷಣ ಮನಸ್ಸನ್ನು ಆವರಿಸಿದ ಖಿನ್ನತೆಯ ತೆರೆ ಸರಿದು ಹೋಗುತ್ತದೆ. ಬರಹಗಾರರ ಸಮಾಜಮುಖಿ ತಲ್ಲಣಗಳ ಎದುರು ನನ್ನ ವೈಯಕ್ತಿಕ ತಲ್ಲಣಗಳು ಸೋತು ನೆಲಕಚ್ಚುತ್ತವೆ. ಈ ದೃಷ್ಟಿಯಿಂದ ನಾನು ಬರಹಗಾರರಿಗೆ ಮತ್ತು ಅವರೊಳಗಿನ ತಲ್ಲಣಗಳಿಗೆ ಹೆಚ್ಚು ಕೃತಜ್ಞನಾಗಿದ್ದೇನೆ. ನನ್ನನ್ನಾವರಿಸುವ ಬೇಸರದಿಂದ ಹೊರಬರಲು ಓದು ನನಗೆ ಪರ್ಯಾಯ ಮಾರ್ಗವಾಗಿ ತೋರುತ್ತದೆ. ಮನುಷ್ಯ ಸಂಬಂಧಗಳಿಂದ ಮನಸ್ಸು ಘಾಸಿಗೊಂಡಾಗ ನಾನು ಕಾಫ್ಕಾನ ಮೆಟಾಮಾರ್ಫಸಿಸ್ ಕಥೆಯನ್ನು ಮತ್ತೆ ಮತ್ತೆ ಓದಿಗೆ ಕೈಗೆತ್ತಿಕೊಳ್ಳುತ್ತೇನೆ. ಮನುಷ್ಯ ಸಂಬಂಧಗಳು ಸಂದರ್ಭದ ಕೈಗೆ ಸಿಲುಕಿ ಹೇಗೆ ಬದಲಾಗುತ್ತ ಹೋಗುತ್ತವೆ ಎನ್ನುವುದನ್ನು ಗ್ರೇಗರ್‍ನ ಪಾತ್ರದ ಮೂಲಕ ಕಾಫ್ಕಾ ತುಂಬ ಅನನ್ಯವಾಗಿ ಹೇಳುತ್ತಾನೆ. ಕಥೆ ಕಾಲ್ಪನಿಕವಾಗಿದ್ದರೂ ಅಲ್ಲಿ ಮನುಷ್ಯ ಸಂಬಂಧಗಳನ್ನು ಬದಲಾದ ಸನ್ನಿವೇಶದಲ್ಲಿ ನೋಡುವ ಕಾಫ್ಕಾನ ತಲ್ಲಣಗಳಿವೆ. ಅನಂತಮೂರ್ತಿ ಅವರ ಕಥೆಗಳು, ಭೈರಪ್ಪನವರ ಕಾದಂಬರಿಗಳು, ಮಹಾದೇವರ ಲೇಖನಗಳನ್ನು ಓದುವಾಗಲೆಲ್ಲ ಈ ಬರಹಗಾರರ ತಲ್ಲಣಗಳು ಒಬ್ಬ ಓದುಗನಾಗಿ ನನಗೆ ಅನೇಕ ಸಲ ಎದುರಾದದ್ದುಂಟು. ಮತ್ತಷ್ಟು ಓದು 
ಭಿಕ್ಷೋದ್ಯಮ ಕ್ಷೇತ್ರದಲ್ಲೂ ಮೀಸಲಾತಿಗಾಗಿ ಬಡಿದಾಡಿ: ಕಾಣೇಶ್ ಜಲ್ಲಿಕಟ್ಟು ಸಲಹೆ (ಸುಳ್ಸುದ್ದಿ)
ಕಡಿಮೆ ಸಂಖ್ಯೆಯಲ್ಲಿರುವ ಸರಕಾರೀ ಹುದ್ದೆಗಳಿಗಾಗಿ ಹೊಡೆದಾಡುತ್ತಾ ಕುಳಿತರೆ ಉತ್ತಮ ಲಾಭವಿರುವ ಭಿಕ್ಷೋದ್ಯಮ ಬಲಾಢ್ಯರ ಪಾಲಾಗುತ್ತದೆ. ಆದ್ದರಿಂದ ಭಿಕ್ಷೋದ್ಯಮ ಕ್ಷೇತ್ರದತ್ತಲೂ ಗಮನ ಹರಿಸಿ, ಅಲ್ಲಿಯೂ ಮೀಸಲಾತಿ ಜಾರಿಗೆ ಹೋರಾಟ ನಡೆಸುವ ಮೂಲಕ ಶೋಷಿತರು ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಬೇಕು ಎಂದು ಹಿರಿಯ ಬುದ್ದಿಜೀವಿ ಪತ್ರಕರ್ತ ರಾಜಕಾರಣಿ ಶ್ರೀ ಕಾಣೇಶ್ ಜಲ್ಲಿಕಟ್ಟು ಸಲಹೆ ನೀಡಿದರು. ಅವರು ಶಿವಮೊಗ್ಗದಲ್ಲಿ ನಿನ್ನೆ ‘ಪ್ರಗತಿಪರ ಬರ್ನ್ ಆಲ್ ವೇದಿಕೆ’ ಹಮ್ಮಿಕೊಂಡಿದ್ದ “ಮೋದಿ ವಿರೋಧಿಗಳ ತವಕ ತಲ್ಲಣಗಳು” ಎನ್ನುವ ವಿಚಾರಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಮತ್ತಷ್ಟು ಓದು 
ಗೂಂಡಾಗಿರಿ ಎಂದು ಕರೆಯುವ ಭಂಡತನ
ಸಂಶೋಧಕರಾದ(?!!) ಭಗವಾನ್ ಅವರ ಶಂಕರಾಚಾರ್ಯ ಮತ್ತು ಪ್ರತಿಗಾಮಿತನ ಪುಸ್ತಕದ ಎರಡನೆಯ ಅಧ್ಯಾಯ “ಶಂಕರಾಚಾರ್ಯನ ಗೂಂಡಾಗಿರಿ ಮತ್ತು ವೈದಿಕ ಸಂಸ್ಕೃತಿ” ಲೇಖನದ ಶೀರ್ಷಿಕೆಯನ್ನು ಸಾಬೀತು ಪಡಿಸಲು ಸಂಶೋಧಕರು ಹಾಕಿರುವ ತಿಪ್ಪರಲಾಗ ಮತ್ತು ಬಿಟ್ಟ ಸತ್ಯವಿಚಾರಗಳು ಬೃಹದಾಕಾರವಾಗಿವೆ. ಸದ್ಯ, ಇವರುಗಳು ಗಣಿತ, ರಸಾಯನ ಶಾಸ್ತ್ರ ಮುಂತಾದುವುಗಳನ್ನು ಓದಿಲ್ಲ. ಇಲ್ಲದೇ ಹೋಗಿದ್ದರೆ ಅಲ್ಲಿ ಇವರು ಹುಟ್ಟುಹಾಕಬಹುದಾಗಿದ್ದ ಪ್ರಮೇಯಗಳಿಂದ ಎಷ್ಟು ವಿಜ್ಞಾನಿಗಳ ಆತ್ಮಗಳು ಅಕಾಲ ಮೃತ್ಯುವನ್ನಪ್ಪಿ ಪ್ರೇತಗಳಾಗುತ್ತಿದ್ದವೋ ಗೊತ್ತಿಲ್ಲ. ವಿಜ್ಞಾನ ಉಳ್ಕೊಂಡ್ರೂ ಸಮಾಜ ವಿಜ್ಞಾನವನ್ನು ಮನಕ್ಕೆ ಬಂದ ತರ್ಕ, ಊಹೆಗಳನ್ನು ವೈಜ್ಞಾನಿಕವೆಂದು ಒರಲುತ್ತಾ ಬುಡವಿಲ್ಲದ ಸಿದ್ಧಾಂತ ಮಂಡನೆ ಮತ್ತು ಬ್ರಾಹ್ಮಣರ ಖಂಡನೆಯಿಂದ ಪ್ರಚಂಡನಾಗುವ ಕೌಶಲವು ಬುದ್ಧಿಜೀವಿಗಳು ಎಂದೆನಿಸಿಕೊಳ್ಳಬೇಕಾದರೆ ಕಲಿಯಬೇಕಾದ ಕಸರತ್ತಾದ್ದರಿಂದ, ಆ ವಿಷಯದಲ್ಲಿ ಅಸಾಮಾನ್ಯ ಪ್ರತಿಭೆಯನ್ನು ಮೆರೆದಿದ್ದಾರೆ. ಕಳೆದ ಅಧ್ಯಾಯದಲ್ಲಿ ಶಂಕರಾಚಾರ್ಯರಿಂದ ಶುರುಮಾಡಿದ ಪ್ರಲಾಪವನ್ನು ಕಡೆಯಾಗುವಾಗ ನೌಕರಿ ಮಾಡುವ ಜನರವರೆಗೂ ವಿಸ್ತರಿಸಿದ್ದು ಇವರ ಪ್ರತಿಭೆಗೆ ಸಾಕ್ಷಿ. ಇಲ್ಲಿಯೂ ಅಷ್ಟೆ; ಯುಗ ಯುಗಗಳನ್ನು ಲೀಲಾಜಾಲವಾಗಿ ಹಾರಿ ನೆಗೆದು ಒಂದೆರಡು ಉದಾಹರಣೆಗಳಿಂದ ಇಡೀ ಗ್ರಂಥದ ಆಶಯವನ್ನೇ, ಆ ಜನಪದದ ಸಾಮಾರ್ಥ್ಯವನ್ನೇ ದಿಕ್ಕಾಪಾಲು ಮಾಡುವ ಅಮೋಘ ವಾದಲಹರಿಯಲ್ಲಿ ಮುಳುಗಿ ತೇಲಿದ್ದಾರೆ. ಆದರೆ ಇತಿಹಾಸವನ್ನು ತಿರುಚಿ ಬರೆಯಬಹುದಾದರೂ ಐತಿಹಾಸಿಕ ಸತ್ಯಗಳನ್ನು ನಾಶಮಾಡಲು ಸಾಧ್ಯವಿಲ್ಲವಾದ್ದರಿಂದ ವಿಚಾರಗಳ ಸತ್ಯಾಂಶಗಳನ್ನು ಪ್ರಸ್ತುತಪಡಿಸುವಲ್ಲಿ ದಯನೀಯವಾಗಿ ಸೋತಿದ್ದಾರೆ. ಈ ಅಧ್ಯಾಯದಲ್ಲಿ ಮುಖ್ಯವಾಗಿ ಆಪಾದಿಸಿರುವ ನಾಗಾರ್ಜುನಕೊಂಡದ ಬೌದ್ಧ ಮಂದಿರಗಳು ಶಂಕರಾಚಾರ್ಯರ ನೇತೃತ್ವದಲ್ಲಿ ಧ್ವಂಸವಾಗಿದ್ದು ಎಂಬುದರ ಮತ್ತು ಇನ್ನಿತರ ಐತಿಹಾಸಿಕ ವಿಚಾರಗಳೆಡೆಗೆ ನೋಡೋಣ. ಉಳಿದಂತೆ ಅದೇ ಬ್ರಾಹ್ಮಣ, ಪುರೋಹಿತಶಾಹಿ, ಹಿಂದೂ ಧರ್ಮ ಮುಂತಾದ ಪದಪುಂಜಗಳಿಂದ ಅರೋಪ ಮಾಡುತ್ತ ಪುಟಭರ್ತಿ ಮಾಡುವ ಕೆಲಸ ಮಾಡಿದ್ದಾರಾದ್ದರಿಂದ ಮತ್ತೆ ಮತ್ತೆ ಅದನ್ನು ಪರಿಶೀಲಿಸುವ ಅಗತ್ಯವಿಲ್ಲ. ಮತ್ತಷ್ಟು ಓದು 
ಖಾಸಗಿ ಕಾಲೇಜಿನ ಕಲಿಕೆ- ಬರೀ ಗಿಲೀಟಿನ ಬುಡುಬುಡಿಕೆ
ಶ್ರದ್ಧಾಹಿ ಪರಮಾಗತಿಃ-
● ನನ್ನ ಆಟೋ ಮಾರಿದರು ಮಗಳಿಗೆ ಪ್ರವೇಶ ದೊರೆಯಲಿಲ್ಲ
● ೯೫% ಅಂಕ ಪಡೆದರೂ ಕಾಲೇಜಿನಲ್ಲಿ ಸೀಟಿಲ್ಲ
● ಹಿಂದೂ ಧರ್ಮದ ಮಕ್ಕಳಿಗೆ ಪ್ರವೇಶವಿಲ್ಲ; ನಮ್ಮ ಕೋಮಿನ ಮಕ್ಕಳಿಗೆ ಆದ್ಯತೆ
● ಪೋಷಕರು ಭರಿಸಲಾಗದಷ್ಟು ಕಾಲೇಜುಗಳು ದುಬಾರಿ
● ದುಬಾರಿ ಕಾಲೇಜಿಗೆ ಸೇರಿಸಿದರೂ ಟ್ಯೂಷನ್ ಹೇಳಿಸಲೇಬೇಕು – ಸಾವಿರಾರು ರೂಪಾಯಿಗಳ ಧಂಧೆ
● ದುಬಾರಿ ಕಾಲೇಜಿಗೆ ಸೇರಿಸುವ ಕುಟುಂಬಗಳಲ್ಲಿ ಆದಾಯದ ಬಹು ಭಾಗ ಶುಲ್ಕಕ್ಕೆ ಹೋಗುವ ಕಾರಣ ಜೀವನದ ಹಲವು ಅಗತ್ಯತೆಗಳನ್ನು ಕಡಿತಗೊಳಿಸಿಕೊಂಡು ಮನೆಯ/ಮನಸ್ಸಿನ/ದೇಹದ ಆರೋಗ್ಯಕ್ಕೆ ಸಂಚಾಕಾರ ತಂದುಕೊಳ್ಳುವ ಸಾಧ್ಯತೆ ಹೆಚ್ಚು.
● ಇಷ್ಟೆಲ್ಲಾ ಕಷ್ಟ ಪಡುವ ತಾಯಿತಂದೆಯರಿಂದ ಅಥವಾ ಮಗುವೇ ಸಂವೇದನಾಶೀಲನಾಗಿದ್ದರೆ ಅದಕ್ಕೆ ಕಷ್ಟಗಳು ತಿಳಿದು ನೇರ ಅಥವಾ ಪರೋಕ್ಷ ಒತ್ತಡಕ್ಕೆ ಒಳಗಾಗಿ ವಿದ್ಯಾಭ್ಯಾಸಕ್ಕೆ ಆಡ್ದಿಯಾಗಬಹುದು.
● ಇದು ಒಂದು ಆರೋಗ್ಯಕರ ಬೆಳವಣಿಗೆ ಅಲ್ಲ.
● ಕ್ರಿಶ್ಚಿಯನ್ ಅಥವಾ ಮುಸಲ್ಮಾನರ ವಿದ್ಯಾ ಸಂಸ್ಥೆಗಳಿಗೆ ಸೇರಿ ಅಲ್ಲಿ ಹೂವು ಮುಡಿಯುವಂತಿಲ್ಲ, ಹಣೇ ಕುಂಕುಮ ಇಡುವಂತಿಲ್ಲ, ಸೀರೆ ಉಡುವಂತಿಲ್ಲ, ಬಳೆ ತೊಡುವಂತಿಲ್ಲ ಎಂಬ ತಲೆಹರಟೆ ಅಸಹಿಷ್ಣತೆಯ ಪರಮಾವಧಿಯ ನಿಷೇಧಗಳನ್ನು ಅನುಭವಿಸಬೇಕು. ಇನ್ನು ಲವ್ ಜಿಹಾದು/ಪ್ರೇಮಕ್ಕೆ ಒತ್ತಡ ಹಾಕುವುದು ಇತ್ಯಾದಿ ಸಮಸ್ಯೆಗಳು ಸೇರಿ ‘ಕಾಸು ಹಾಳು ತಲೆಯು ಬೋಳು’ ಎಂಬ ಗಾದೆಯಂತೆ ಆಗುವುದೊಂದು ಅಭಾಸ.
ಈ ಸಮಸ್ಯೆಗಳು ಎಂದಿಗೂ ಇದ್ದಂತಹವೇ.ಆದರೆ ಇತ್ತೀಚೆಗೆ ಅದರ ವ್ಯಾಪ್ತಿ, ಗಹನತೆ ಹೆಚ್ಚಾಗಿದೆ. ಮತ್ತಷ್ಟು ಓದು 
“ನೆಟ್ಟಿ”ಗೇರಿದ ಪಠ್ಯ @ ನೆತ್ತಿಗೇರುವುದೇ?
-ಸುದರ್ಶನ ರಾವ್
ಅಂತರ್ಜಾಲದಲ್ಲಿ ಕನ್ನಡ ಮಾಧ್ಯಮ ಶಾಲಾ ಪಠ್ಯಗಳು
ನಾವು ಶಾಲೆಯಲ್ಲಿ ಓದುತ್ತಿರುವಾಗ ಒಂದು ತರಗತಿಯಿಂದ ಉತ್ತೀರ್ಣರಾಗಿ ಇನ್ನೊಂದು ತರಗತಿಗೆ ಹೋಗುವುದರ ಜೊತೆಗೆ ಮುಂದಿನ ತರಗತಿಯ ಪಠ್ಯ ಪುಸ್ತಕಗಳ ಬೇಟೆಯೂ ಶುರುವಾಗುತ್ತಿತ್ತು. ಏಪ್ರಿಲ್ ಹತ್ತನೇ ತಾರೀಖು ನಮ್ಮ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಿ ಅಧಿಕೃತವಾಗಿ ಪಾಸಾಗಿದ್ದೇವೆಂದು ಘೋಷಣೆಯಾಗುತ್ತಿದ್ದಂತೆ ನಮಗಿಂತ ಒಂದು ವರ್ಷ ಮುಂದಿನ ವಿದ್ಯಾರ್ಥಿಗಳೊಂದಿಗೆ ನಮ್ಮ ಮಾತುಕತೆ ಶಾಲಾ ಆವರಣದಲ್ಲೇ ಶುರುವಾಗುತ್ತಿತ್ತು. . ಮತ್ತಷ್ಟು ಓದು 
ಸಾಮಾಜಿಕ ಪ್ರಜ್ಞೆ ಮತ್ತು ನಾವು
-ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ
ಒಮ್ಮೆ ಹೀಗಾಯ್ತು, ಮನೆಗೆ ಬರುತ್ತಿರುವಾಗ ದಾರಿಯಲ್ಲಿ ನನ್ನ ಸ್ನೇಹಿತ ಜಗಳವಾಡಿದ. ಅವನ ಜಗಳಕ್ಕೂ ಕಾರಣವಿತ್ತು. ಮನೆಕಟ್ಟಿಸುತ್ತಿದ್ದ ಯಜಮಾನರೊಬ್ಬರು ರಸ್ತೆ ಬದಿಯ ಚರಂಡಿಗೆ ಮರಳು, ಜಲ್ಲಿಕಲ್ಲುಗಳನ್ನು ತುಂಬಿಬಿಟ್ಟಿದ್ದರು. ಕೊಳಚೆ ನೀರು ಹರಿದು ಹೋಗದೆ ಚರಂಡಿ ತುಂಬಿ ನಿಂತಿತ್ತು. ಅಂಥದ್ದೊಂದು ಘಟನೆ ಅವನ ಆಕ್ರೋಶಕ್ಕೆ ಕಾರಣವಾಗಿತ್ತು. ಚರಂಡಿಯಲ್ಲಿ ತುಂಬಿರುವ ಮರಳು ಮತ್ತು ಜಲ್ಲಿಕಲ್ಲುಗಳನ್ನು ಕೂಡಲೇ ತೆಗೆದುಹಾಕುವಂತೆ ಅಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರಿಗೆ ಹೇಳಿದ. ಅಲ್ಲೇ ಸಮೀಪದಲ್ಲಿ ನಿಂತಿದ್ದ ಯಜಮಾನರು ಮನೆ ಕೆಲಸ ಪೂರ್ಣಗೊಳ್ಳುವವರೆಗೆ ಅದು ಸಾಧ್ಯವಿಲ್ಲವೆಂದು ಬಿರುಸಾಗಿಯೇ ನುಡಿದರು. ಮಾತಿಗೆ ಮಾತು ಬೆಳೆಯಿತು. ಗಲಾಟೆ ಕೇಳಿ ಸುತ್ತಮುತ್ತಲಿನ ಮನೆಯವರು ಹೊರಗೆ ಬಂದರು. ಆಶ್ಚರ್ಯವೆಂದರೆ ಯಾರೊಬ್ಬರೂ ನನ್ನ ಗೆಳೆಯನ ಬೆಂಬಲಕ್ಕೆ ನಿಲ್ಲಲಿಲ್ಲ. ಅವನನ್ನೆ ವಿಚಿತ್ರ ಎನ್ನುವಂತೆ ನೋಡಿದರು. ಆದ ತಪ್ಪನ್ನು ತಪ್ಪು ಎಂದು ಹೇಳುವ ಧೈರ್ಯ ಅಲ್ಲಿದ್ದ ಯಾರೊಬ್ಬರಲ್ಲೂ ಇರಲಿಲ್ಲ. ಅಷ್ಟಕ್ಕೂ ಅದು ತಪ್ಪೆಂದು ಜಗಳಕ್ಕೆ ನಿಂತವನು ಅಸಲಿಗೆ ಆ ಕಾಲೋನಿಯವನೂ ಆಗಿರಲಿಲ್ಲ. ಆ ನಿಂತ ನೀರಿನ ಪಕ್ಕದ ಮನೆಯೂ ಅವನದಾಗಿರಲಿಲ್ಲ. ಆದರೂ ಆ ಸಂದರ್ಭ ಅವನಲ್ಲಿನ ಸಾಮಾಜಿಕ ಪ್ರಜ್ಞೆ ಜಾಗೃತಗೊಂಡಿತ್ತು. ತಪ್ಪನ್ನು ಸರಿಪಡಿಸಲು ಪ್ರಯತ್ನಿಸಿದ. ಯಾರು ಸಮಸ್ಯೆಯ ಸಮೀಪದಲ್ಲಿದ್ದರೋ ಅವರಲ್ಲಿ ಮಾತ್ರ ಸಾಮಾಜಿಕ ಸಮಸ್ಯೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿತ್ತು. ಆದರೆ ಅದೇ ಜನ ಅಣ್ಣಾ ಹಜಾರೆ ಹೆಸರಿನ ಟೊಪ್ಪಿಗೆ ಧರಿಸಿ ಭೃಷ್ಟಾಚಾರ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ್ದು ವ್ಯವಸ್ಥೆಯೊಂದರ ವ್ಯಂಗ್ಯಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಮತ್ತಷ್ಟು ಓದು 
ಜೀವಮಾನದ ಸಿದ್ಧಿ ಮತ್ತು ಹದಿನೈದು ನಿಮಿಷಗಳ ಪ್ರಸಿದ್ಧಿ
– ರೋಹಿತ್ ಚಕ್ರತೀರ್ಥ
1966ರಲ್ಲಿ ನಡೆದ ಸಣ್ಣ ಘಟನೆ ಅದು. ಆಂಡಿ ವಾರ್ಹಲ್ ಎಂಬ ಪ್ರಸಿದ್ಧ ಅಮೆರಿಕನ್ ಕಲಾವಿದನನ್ನು ನ್ಯಾಟ್ ಫಿಂಕಲ್‍ಸ್ಟೀನ್ ಎಂಬ ಫೋಟೋಗ್ರಾಫರ್ ಸೆರೆ ಹಿಡಿಯುತ್ತಿದ್ದಾಗ, ಆಂಡಿಯ ನೂರಾರು ಅಭಿಮಾನಿಗಳು ತಾವೂ ಕ್ಯಾಮೆರಾ ಫ್ರೇಮಿನಲ್ಲಿ ಬರಬೇಕೆಂದು ಆತನ ಹಿಂಬದಿಯಲ್ಲಿ ಮುಖ ತೂರಿಸುವುದೋ ಸುಮ್ಮಸುಮ್ಮನೆ ಅಡ್ಡ ಹಾಯುವುದೋ ಮಾಡುತ್ತಿದ್ದರಂತೆ. ಆಗ ಆಂಡಿ ನ್ಯಾಟ್‍ಗೆ “ನೋಡಯ್ಯ, ಪ್ರತಿಯೊಬ್ಬರೂ ಪ್ರಸಿದ್ಧರಾಗಲು ಬಯಸುತ್ತಿದ್ದಾರೆ” ಎಂದ. ನ್ಯಾಟ್, “ಹೌದು ಆಂಡಿ! ಹದಿನೈದು ನಿಮಿಷಗಳ ಪ್ರಸಿದ್ಧಿಗಾಗಿ!” ಎಂದುತ್ತರಿಸಿದ. ಹಾಗೆ ಅಕಸ್ಮಾತ್ತಾಗಿ ಹುಟ್ಟಿದ ಈ “ಹದಿನೈದು ನಿಮಿಷಗಳ ಪ್ರಸಿದ್ಧಿ” ಎಂಬ ಪಡೆನುಡಿ ಅಮೆರಿಕನ್ ಸಂಸ್ಕೃತಿಯಲ್ಲಿ ಹದಿನೈದು ನಿಮಿಷಗಳಲ್ಲ, ಹಲವು ವರ್ಷಗಳ ಕಾಲ ಪ್ರಸಿದ್ಧವಾಗಿ ಚಾಲ್ತಿಯಲ್ಲಿತ್ತು. ಜಗತ್ತಿನಲ್ಲಿ ಮೊದಲೆಲ್ಲ ದೇಶದ ರಾಜರಾಣಿಯರು ಮತ್ತು ಬೆರಳೆಣಿಕೆಯಷ್ಟು ಸಚಿವರನ್ನು ಬಿಟ್ಟರೆ ಬೇರಾರೂ ಪ್ರಸಿದ್ಧಿಯ ಉತ್ತುಂಗಕ್ಕೆ ಏರುತ್ತಿರಲಿಲ್ಲ. ರಾಜಕೀಯದ ಸೋಂಕಿಲ್ಲದೆ ಪ್ರಸಿದ್ಧಿಗೆ ಬರಬೇಕೆಂದರೆ ಒಂದೋ ಸಾಹಿತಿ/ಕಲಾವಿದನಾಗಬೇಕಿತ್ತು ಇಲ್ಲವೇ ವಿಜ್ಞಾನಿಯಾಗಬೇಕಿತ್ತು. ಎರಡೂ ಹತ್ತುಹಲವು ವರ್ಷಗಳ ಕಠಿಣ ಪರಿಶ್ರಮ, ತಪಸ್ಸುಗಳನ್ನು ಬೇಡುವ ಕೆಲಸಗಳು. ದಿನಬೆಳಗಾಗುವುದರಲ್ಲಿ ಪ್ರಸಿದ್ಧರಾದರು ಎಂದು ಹೇಳುವ ವ್ಯಕ್ತಿಗಳು ಕೂಡ ಅಂಥದೊಂದು ಪ್ರಸಿದ್ಧಿಗಾಗಿ ಹಲವು ವರ್ಷಗಳ ದಿನ-ರಾತ್ರಿಗಳನ್ನು ವ್ಯಯ ಮಾಡುತ್ತಿದ್ದರು. ಕಾಲ ಮುಂದುವರಿದಂತೆ, ಪತ್ರಿಕೆ ರೇಡಿಯೋ ಟಿವಿ ಸಿನೆಮ ಇತ್ಯಾದಿ ಹಲವು ಮಾಧ್ಯಮಗಳು ಬಂದವು. ಇಂಥ ಹಲವು ಆಯ್ಕೆಗಳು ಸುಲಭಸಾಧ್ಯವಾದ ಮೇಲೆ ಯೇನಕೇನ ಪ್ರಕಾರೇಣ ಪ್ರಸಿದ್ಧ ಪುರುಷೋ ಭವ ಎಂಬ ಧ್ಯೇಯಮಾರ್ಗದಲ್ಲಿ ನಡೆಯುವವರೂ ಹೆಚ್ಚಾದರು. ಶಾಶ್ವತ ಸಿದ್ಧಿ ಬಯಸುವವರಿಗಿಂತ ಇಂದೋ ಈ ವಾರವೋ ತಪ್ಪಿದರೆ ಈ ಒಂದು ತಿಂಗಳು ಚಲಾವಣೆಯಲ್ಲಿದ್ದರೆ ಸಾಕು ಎಂಬ ಮನೋಭಾವದವರು ಹೆಚ್ಚಾದರು. ಇವೆಲ್ಲವನ್ನು ಮುಂಚಿತವಾಗಿ ಊಹಿಸಿಯೇ “ಮುಂದೊಂದು ದಿನ ಜನ ಕೇವಲ ಹದಿನೈದು ನಿಮಿಷಗಳ ಪ್ರಸಿದ್ಧಿಯನ್ನಷ್ಟೇ ಪಡೆಯುವ ಸಂದರ್ಭ ಬರಬಹುದು” ಎಂಬರ್ಥದಲ್ಲಿ ನ್ಯಾಟ್ ಆ ಮಾತುಗಳನ್ನು ಹೇಳಿದ್ದ. ಮತ್ತಷ್ಟು ಓದು 
ಇಂದಿನವರೆಗೂ ಬುದ್ದಿಜೀವಿಗಳ ಬುದ್ಧಿ ನೆಟ್ಟಗಾಗಿಲ್ಲ. ಮುಂದಾದರೂ ಆದೀತಾ?
-ಶ್ರೀಕಾಂತ್ ಆಚಾರ್ಯ
ಇಲ್ಲೇ ಹುಟ್ಟಿ, ಇಲ್ಲೇ ಬೆಳೆದು ಈ ದೇಶದ ಅಷ್ಟೂ ಸವಲತ್ತನ್ನ ಚಪ್ಪರಿಸಿಕೊಂಡು ಅನುಭವಿಸಿದವರಿಂದ ಭಾರತದ ‘ಬರ್ಬಾದಿಗೆ’ ಜಂಗ್(?) ಶುರುವಾಯ್ತಲ್ಲ. ಆಶ್ಚರ್ಯ ಅನ್ನಿಸಿತಾ? ಬಹುಶಃ ಇರಲಿಕ್ಕಿಲ್ಲ. ಈ ದೊಂಬರಾಟಗಳನ್ನ ನಾವೆಲ್ಲಾ ಕಂಡವರೇ. ಬದುಕಿನಲ್ಲಿ ತನಗೊಂದು ‘ಐಡೆಂಟಿಟಿ’ಯೇ ಇಲ್ಲದೇ ಪರಿತಪಿಸುವ ಮಂದಿ ಬಹಳಷ್ಟು ಬಾರಿ ಹೀಗೆಲ್ಲ ಮಾಡಿಯೇ ಹೆಸರಿಗೆ ಬರೋದಿದೆ. ಹಾಗಂತ ಇವರನ್ನ ಅಸಡ್ಡೆ ಮಾಡಿ ಬದಿಗಿಡುವಂತಿಲ್ಲ. ಯಾಕೆಂದರೆ ಇವರೆಲ್ಲರ ಹೋರಾಟ ಇರೋದು ಕೆಟ್ಟದರ ಬಗ್ಗೆಯಲ್ಲ, ಈ ದೇಶಕ್ಯಾವುದೋ ಮಾರಕವಾಗಿದ್ದರೆ ಅದರ ಬಗ್ಗೆಯೂ ಅಲ್ಲ. ಇವರ ‘ಜಂಗ್’ ಇರೋದು ಈ ದೇಶದ ಸಮಗ್ರತೆಯ ಬಗ್ಗೆ. ಈ ದೇಶದ ಸನಾತನತೆಯ ಬಗ್ಗೆ. ಒಟ್ನಲ್ಲಿ ಈ ದೇಶದ ಬಗ್ಗೆಯೇ. ಇವೆಲ್ಲಾ ‘ಬುದ್ಧಿಮಾಂದ್ಯ’ ಜೀವಗಳಿಗೆ ಹೆಗಲಾಗಿ ನಿಂತು ಪೋಷಿಸುತ್ತಿರುವುದು ಇಲ್ಲಿನ ಬುದ್ಧಿ ಜೀವಿಗಳೆಂಬ ಅಡಕಸುಬಿಗಳು. ಅದಲ್ಲದೇ ಇನ್ನೇನು? ಮತಿ ತಪ್ಪಿದವ ಮಾಡಿದ ತಪ್ಪನ್ನ, ತಪ್ಪು ಅನ್ನೋದು ಬಿಟ್ಟು ಅವರೊಲ್ಲಬ್ಬರಾಗಿ ನಿಂತು ಗುರಾಣಿ ಹಿಡಿದು ಮತ್ತಷ್ಟು ಇನ್ನಷ್ಟು ಪ್ರಪಾತಕ್ಕೆ ಇಳಿಯೋಕೆ, ಎಳೆಯೋಕೆ ತಯಾರಾದರೆ? ಮತ್ತಷ್ಟು ಓದು 
ಭಾರತದಲ್ಲಿ ಶೂದ್ರರ ಶೋಷಣೆ ನಡೆದಿದೆಯೇ??
– ವಲವಿ ವಿಜಯಪುರ
ಸಾಮಾನ್ಯವಾಗಿ ಭಾರತದಲ್ಲಿ ಮನುಸ್ಮೃತಿಯು ಶೂದ್ರರಿಗೆ ವೇದಗಳನ್ನು ಕಲಿಯುವ ಅಧಿಕಾರ ನೀಡಲಿಲ್ಲ. ಅವರಿಗೆ ಸಂಸ್ಕೃತದ ಜ್ಞಾನವನ್ನು ಕೊಡಲಿಲ್ಲ. ವಿದ್ಯೆಯನ್ನು ಶೂದ್ರರಿಂದ ಮುಚ್ಚಿಡಲಾಯಿತು. ಮೇಲ್ವರ್ಗದವರ ಮನೆಯ ಸಗಣಿಯನ್ನು ಬಾಚುವದೇ ಅವರ ಕೆಲಸವಾಗಿತ್ತು. ಯಾವುದೇ ಉನ್ನತ ಹುದ್ದೆಗಳನ್ನು ನೀಡದೇ ಅವರನ್ನು ವಂಚಿಸಲಾಯಿತು. ಮತ್ತು ಈ ವಂಚನೆಯಲ್ಲಿ ಅಧಿಕವಾಗಿ ಬ್ರಾಹ್ಮಣರು ಭಾಗೀದಾರರು. ಸಮಾಜವೆಂಬ ಪಿರಮಿಡ್ ಆಕೃತಿಯಲ್ಲಿ ಅತ್ಯಂತ ಮೇಲೆ ಬ್ರಾಹ್ಮಣನಿದ್ದರೆ ಅತ್ಯಂತ ಕೆಳಸ್ತರದಲ್ಲಿ ಶೂದ್ರನಿದ್ದಾನೆ ಮತ್ತು ಅವನನ್ನು ವಿಶೇಷವಾಗಿ ಬ್ರಾಹ್ಮಣರು ಶೋಷಣೆ ಮಾಡಿದ್ದಾರೆ ಅನ್ನುವದು ಆಧುನಿಕ ಶಿಕ್ಷಣ ಪಡೆದವರ ವಾದವಾಗಿದೆ. ಮತ್ತಷ್ಟು ಓದು 









