ಶಿಲೆಯೊಂದು ಶಿಲ್ಪವಾಗಿ, ಪರಕಾಯ ಪ್ರವೇಶವಾಗಿ, ಸಮರಭೂಮಿಗೆ ಸಿದ್ಧವಾಗುವ ರಾಷ್ಟ್ರಶಕ್ತಿ
– ಸಂತೋಷ್ ತಮ್ಮಯ್ಯ
೧೯೪೯ರ ಜನವರಿ ೧೫ ರಂದು ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪನವರು ಭಾರತೀಯ ಸೇನೆಯ ಪ್ರಥಮ ಮಹಾದಂಡನಾಯಕರಾಗಿ ಅಧಿಕಾರ ವಹಿಸಿಕೊಂಡ ದಿನವನ್ನು ‘ಭಾರತೀಯ ಸೈನ್ಯ ದಿನಾಚರಣೆ ಎಂದು ಆಚರಿಸಲಾಗುತ್ತವೆ. ‘ಭಾರತದ ಗೌರವವನ್ನು ರಕ್ಷಿಸಿದ, ವಿದೇಶಗಳಿಂದಲೂ ಹೊಗಳಿಸಿಕೊಂಡ, ಬೃಹತ್ ಪಡೆಗಳನ್ನ್ನು ಹೊಂದಿರುವ ‘ಭಾರತೀಯ ಸೇನೆ ವಿಶ್ವದ ಹಲವು ದೇಶಗಳ ಮಿಲಿಟರಿಗೆ ಮಾರ್ಗದರ್ಶನ ನೀಡಿದ ಹಿರಿಮೆಯಿದೆ. ವಿಶ್ವದ ಹಲವು ಸವಾಲುಗಳನ್ನು ‘ಭಾರತೀಯ ಸೇನೆ ಎದುರಿಸಿದೆ. ವಿಶ್ವ ಶಾಂತಿಗೆ ಭಾರತೀಯ ಸೇನೆಯ ಕೊಡುಗೆಯನ್ನು ವಿಶ್ವಸಂಸ್ಥೆ ಇಂದಿಗೂ ಕೊಂಡಾಡುತ್ತಿದೆ. ಅವೆಲ್ಲಕ್ಕೂ ಕಾರಣ ಸೈನ್ಯದ ಅಸಲಿ ಶಕ್ತಿಯಾದ ‘ಭಾರತೀಯ ಯೋಧ‘ರು. ಅವರಿಗೆ ನಮ್ಮ ನಮನ. ಮತ್ತಷ್ಟು ಓದು 
ಮೋದಿ ಭಕ್ತರೇನು ಮುಟ್ಟಾಳರೇ..?
– ಸಂತೋಷಕುಮಾರ ಮೆಹೆಂದಳೆ.
( ತನ್ನ ನಂಬಿ ಹಿಂದೆ ಕರೆದೊಯ್ಯುವವನು ನಾಯಕನಾಗುವುದು ಸಹಜ. ಆದರೆ ಕ್ರಮೇಣ ಸಿದ್ಧಾಂತದಲ್ಲಿ ವೈಪರಿತ್ಯಗಳುಂಟಾಗಿ ಆ ನಾಯಕತ್ವ ಸಹಜವಾಗೇ ಕುಸಿಯುತ್ತದೆ. ಆದರೆ ತನ್ನ ನಂಬಿಕೆಗಳನ್ನು ಸಂಪೂರ್ಣ ಸಮೂಹದ ನಂಬಿಕೆಯನ್ನಾಗಿ ಪರಿವರ್ತಿಸೋದಿದೆಯಲ್ಲ ಅಂಥವನು ಶಾಶ್ವತವಾಗಿ ನಾಯಕನಾಗುತ್ತಾನೆ ಮತ್ತು ಆ ಸ್ಥಾನ ಅಬಾಧಿತ. ಹಾಗೆ ಜನರ ನಂಬುಗೆ ಮತ್ತು ವಿಶ್ವಾಸ ಎರಡನ್ನೂ ಗಳಿಸುವವನು ಮಿತ್ರರಷ್ಟೇ ಶತ್ರುಗಳನ್ನೂ ಗಳಿಸುತ್ತಾನೆ. ಕಾರಣ ಯಶಸ್ಸು ಎನ್ನುವುದು ಎಂಥವನ ನಿಯತ್ತನ್ನೂ ಹಾಳು ಮಾಡಿಬಿಡುತ್ತದೆ ) ಮತ್ತಷ್ಟು ಓದು 
ಮೋದಿಯಂತವರು ರಾಜಕೀಯಕ್ಕೆ ಬರಬೇಕು..
– ರಾಕೇಶ್ ಶೆಟ್ಟಿ
ದೇಶದ ಪಾಲಿಗೆ ಮಹತ್ವದ ದಿನಗಳಾಗಿ ಇತಿಹಾಸದ ದಿಕ್ಕು ದೆಸೆಯನ್ನೇ ಬದಲಿಸಿದ ಆಗಸ್ಟ್ ೧೫, ಜನವರಿ ೨೬, ಅಕ್ಟೋಬರ್ ೨, ಜನವರಿ ೨೩ರ ಸಾಲಿಗೆ ನಿಶ್ಚಿತವಾಗಿ ನವೆಂಬರ್ ೮ರ ದಿನವನ್ನು ಸೇರಿಸಬಹುದೆನಿಸುತ್ತದೆ. ನವೆಂಬರ್ ೮ರ ಮಧ್ಯರಾತ್ರಿಯಿಂದ ೫೦೦, ೧೦೦೦ ರೂಪಾಯಿಗಳ ಹಳೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳುವ ಮೂಲಕ ದೇಶದ ಆರ್ಥಿಕ ವ್ಯವಸ್ಥೆಯ ಮಗ್ಗಲು ಬದಲಿಸಲು ಹೊರಟ ದಿನ. ಮತ್ತಷ್ಟು ಓದು 
ಜಲಿಯನ್ವಾಲಾ ಬಾಗ್ ಸೇಡಿಗಾಗಿ 21 ವರ್ಷ ಕಾದಿದ್ದ ಕ್ರಾಂತಿಕಾರಿ
ಮಯೂರಲಕ್ಷ್ಮೀ
(ಲೇಖಕರು ಉಪನ್ಯಾಸಕರು)
ಮಾರ್ಚ್ 13, 1940. ಲಂಡನ್ನ ಕಾಕ್ಸ್ಟನ್ ಹಾಲ್. ಈಸ್ಟ್ ಇಂಡಿಯಾ ಅಸೋಸಿಯೇಷನ್ ಮತ್ತು ರಾಯಲ್ ಸೆಂಟ್ರಲ್ ಏಷಿಯಾ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ ಸಭೆ ನಡೆದಿತ್ತು. ಬ್ರಿಗೇಡಿಯರ್ ಜನರಲ್ ಸರ್ ಪಿ. ಸ್ಕೈಸ್ ಪ್ರಸ್ತುತ ಜಗತ್ತಿನ ವಿದ್ಯಮಾನಗಳ ಕುರಿತು ಮಾತನಾಡುತ್ತಿದ್ದರು. ಅನೇಕ ಗಣ್ಯರು ಅಲ್ಲಿದ್ದರು. ಅಂದು ಓರ್ವ ಪ್ರಮುಖನ ಭಾಷಣ ಮತ್ತು ಸನ್ಮಾನವಿತ್ತು. ಆತ ಭಾರತದಲ್ಲಿನ ತನ್ನ ಸೇವೆಯ ಅವಧಿಯ ಸಾಧನೆಗಳನ್ನು ಕುರಿತು ಮಾತನಾಡಿದ. ಕಾರ್ಯಕ್ರಮದ ನಂತರ ಜನರು ಹೊರನಡೆಯತೊಡಗಿದರು. ಆ ಪ್ರಮುಖನೂ ಹೊರಟ. ಇದ್ದಕ್ಕಿದ್ದಂತೆಯೇ ಅವನಿಂದ ಸುಮಾರು ಮೂರು ಗಜಗಳಷ್ಟು ಅಂತರದಲ್ಲಿದ್ದ ಯುವಕನೋರ್ವ ಮಿಂಚಿನವೇಗದಲ್ಲಿ ಅವನೆದುರಾಗಿ ನಿಂತು ತನ್ನ ಪಿಸ್ತೂಲಿನಿಂದ ಗುಂಡು ಹಾರಿಸಿದ. ಮತ್ತಷ್ಟು ಓದು 
ಇದು ಆರಂಭ ಅಷ್ಟೇ; ಕಾದು ನೋಡೋಣ
– ಮು ಅ ಶ್ರೀರಂಗ
‘ಹಳ್ಳಿಗಳ ಮನೆಯಲ್ಲಿನ ಹೆಂಗಸರು’ ಆಪದ್ಧನ ಎಂದು ಕೂಡಿಡುವ ಹಣ ಸಾವಿರಾರು ರೂಪಾಯಿಗಳು ಇರಬಹುದು. ಆದರೆ ಲಕ್ಷಾಂತರ ರೂಪಾಯಿಗಳ ತನಕ ಇರುತ್ತದೆ ಎಂಬುದು ಕೇವಲ ಉತ್ಪ್ರೇಕ್ಷೆ. ಇದಕ್ಕೆ ಕಾರಣಗಳು ಹೀಗಿವೆ..
(೧). ಹಿಂದಿದ್ದಂತೆ ಈಗ ಹಳ್ಳಿಗಳಲ್ಲಿ ಅವಿಭಕ್ತ ಕುಟುಂಬಗಳು ಇಲ್ಲ. ತಾವು ಪಟ್ಟ ಹಳ್ಳಿಯ ಕಷ್ಟಗಳು ತಮ್ಮ ಮಕ್ಕಳಿಗೆ ಬೇಡ ಎಂದು ತಾಯಿತಂದೆಯರೇ ತಮ್ಮ ಮಕ್ಕಳನ್ನು ಓದು, ಕೆಲಸ ಎಂದು ಪಟ್ಟಣಕ್ಕೆ ಕಳಿಸುತ್ತಿದ್ದಾರೆ ಅಥವಾ ಮಕ್ಕಳೇ ಸ್ವತಃ ಹುಟ್ಟಿದೂರನ್ನು ಬಿಟ್ಟು ಪಟ್ಟಣಕ್ಕೆ ವಲಸೆ ಹೋಗಿಯಾಗಿದೆ. ಅವರು ಮತ್ತೆ ಬಂದು ಹಳ್ಳಿಯಲ್ಲಿ ತಮ್ಮಂತೆ ವ್ಯವಸಾಯ ಮಾಡಿಕೊಂಡಿರುವುದಿಲ್ಲ ಎಂದು ತಾಯಿ-ತಂದೆಯರಿಗೂ ಗೊತ್ತು; ಊರು ಬಿಟ್ಟು ಬಂದ ಮಕ್ಕಳು ಒಮ್ಮೆ ಪಟ್ಟಣ ವಾಸದ ರುಚಿ ಹತ್ತಿದ ಮೇಲೆ ಹಳ್ಳಿಗೆ ಹೋಗುವುದು ವರ್ಷಕ್ಕೊಮ್ಮೆ ಊರ ಜಾತ್ರೆಗೋ ಅಥವಾ ತಾಯಿ ತಂದೆಯರು ತೀವ್ರವಾದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂಬ ಸುದ್ದಿ ಬಂದ ಮೇಲೆ ಅಷ್ಟೇ. ಮತ್ತಷ್ಟು ಓದು 
ಪರ ವಿರೋಧಗಳ ನಡುವೆ ನೋಟುಗಳ ಸಮಸ್ಯೆ
– ಮು ಅ ಶ್ರೀರಂಗ
ಪ್ರಜಾಪ್ರಭುತ್ವದಲ್ಲಿ ‘ಪಾಸಿಟಿವ್ ಆದ ವಾತಾವರಣ’ ಎಂಬುದು ಒಂದು ಆದರ್ಶವಾಗಬಹುದಷ್ಟೇ ಹೊರತು ವಾಸ್ತವ ಆಗಲಾರದು. ಹೀಗಾಗಿ ಕೆಲವೊಂದು ಸುಧಾರಣೆಗಳನ್ನು ಮುಂದಿನ ದಿನಗಳ ಒಳಿತಿಗಾಗಿ, ಕೆಲವರಿಗೆ ಸದ್ಯಕ್ಕೆ ಅನಾನುಕೂಲವೆನಿಸಿದರೂ, ಇದು ಪಾಸಿಟಿವ್ ಆದ ವಾತಾವರಣ ಅಲ್ಲ ಎಂದು ಅನಿಸಿದರೂ ತರಲೇಬೇಕಾಗುತ್ತದೆ. ಹಿಂದೆ ಭಾರತದಲ್ಲಿ ಭೂಸುಧಾರಣಾ ಕಾನೂನು, ಬ್ಯಾಂಕುಗಳ ರಾಷ್ಟ್ರೀಕರಣ, ರಾಜಧನ ರದ್ದತಿ ಇವುಗಳನ್ನು ಜಾರಿಗೆ ತಂದಾಗಲೂ ‘ಎಲ್ಲೂ, ಎಲ್ಲರಲ್ಲೂ ಪಾಸಿಟಿವ್ ಆದ ವಾತಾವರಣ’ ಇರಲಿಲ್ಲ. ಭಾರತದಲ್ಲಿ ಅನಕ್ಷರಸ್ಥರೇ ಜಾಸ್ತಿ; ಇಡೀ ದೇಶದಲ್ಲಿ ಅಕ್ಷರಸ್ಥರು ಜಾಸ್ತಿ ಇರುವ ರಾಜ್ಯವಾದ ಕೇರಳದಲ್ಲಿ ಸಹ ‘ನಗದು’ ವ್ಯವಹಾರವೇ ಜಾಸ್ತಿ; ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, Paytm ಇತ್ಯಾದಿಗಳ ಮೂಲಕ ವ್ಯವಹಾರ ಕಡಿಮೆ. ಹೀಗಾಗಿ ಇಡೀ ಭಾರತದಲ್ಲಿ ಈ ವ್ಯವಸ್ಥೆಯನ್ನು ಶೇಕಡಾ ಐವತ್ತರಷ್ಟು ಜಾರಿಗೆ ತರುವುದೂ ಅಸಾಧ್ಯ ಎಂದು ಹೇಳಲು ಕೆಲವರು ಕೊಡುವ ಅಂಕಿ-ಅಂಶಗಳ ಬಗ್ಗೆ ನನ್ನ ತಕರಾರೇನೂ ಇಲ್ಲ. ಯಾವುದಾದರೂ ಒಂದೆರೆಡು ಸಂಸ್ಥೆಗಳು ಅಂತಹ sample surveyಗಳನ್ನು ಮಾಡಿರುತ್ತವೆ. ಅವುಗಳ ಆಧಾರದ ಮೇಲೆ ಹೇಳಿರುತ್ತಾರೆ. ಚುನಾವಣೆಯ ಫಲಿತಾಂಶಗಳು, ಯಾವುದೋ ಒಂದು ಸಾಮಾಜಿಕ ಸಮಸ್ಯೆ ಇವುಗಳ ಬಗೆಗಿನ ಇಂತಹ ಅಂಕಿ-ಅಂಶಗಳು ‘ಬಿಚ್ಚಿಡುವುದಕ್ಕಿಂತ ಮುಚ್ಚಿಡುವುದೇ ಜಾಸ್ತಿ’. ಈಗಂತೂ ಸುದ್ದಿ ವಾಹಿನಿಗಳು yes or no ಎಂಬ ಎರಡು ಪದಗಳ sms ಮೂಲಕ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿವೆ! ಅಲ್ಲಿಗೆ ಮುಗಿಯಿತು. ಅದೇ ಸತ್ಯ, ದೂಸರಾ ಮಾತಿಲ್ಲ. ಮತ್ತಷ್ಟು ಓದು 
ಆ ಯೋಧನ ಸಾವೂ ಕೂಡಾ ಚಿಲ್ಲರೆ ಸಂಗತಿಯಲ್ಲಿ ಹೂತುಹೋಯಿತು..!
– ಸಂತೋಷ್ ತಮ್ಮಯ್ಯ
ಅಂದು ಭಾರತೀಯ ಮಿಲಿಟರಿ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆಯೊಂದುನಡೆದುಹೋಗಿತ್ತು. ದೇಶಾದ್ಯಂತ ಅಚ್ಚರಿ, ಕೆಲವರಿಗೆ ಆಘಾತ. ಇದೇಕೆ ಹೀಗೆ ಎಂಬ ಉದ್ಗಾರ. ಆರ್ಮಿ ಕೇಂದ್ರಕಛೇರಿಯ ಸೌತ್‌ಬ್ಲಾಕ್‌ನಲ್ಲಿ ತಿಂಗಳುಗಟ್ಟಲೆ ಗಾಸಿಫ್‌ಗಳು. ಎಮರ್ಜೆನ್ಸಿ ಇನ್ನೂ ಹೋಗಿಲ್ಲವೇ? ಇಂದಿರಾ ಸರ್ವಾಧಿಕಾರಕ್ಕೆ ಇದಕ್ಕಿಂತ ಇನ್ನೇನು ಉದಾಹರಣೆ ಬೇಕು ಎಂದು ವಿರೋಧ ಪಕ್ಷಗಳ ಆರೋಪ.
ಅಂದು ನಡೆದಿದ್ದು ಇಷ್ಟು:
ಆರ್ಮಿಯ ೧೧ನೇ ಚೀಫ್ ಆಫ್ ಆರ್ಮಿ ಸ್ಟಾಫ್ ಕೆ.ವಿ ಕೃಷ್ಣರಾವ್ ೧೯೮೩ರ ಮೇ ಕೊನೆಯಲ್ಲಿ ನಿವೃತ್ತರಾಗುವವರಿದ್ದರು. ಕೆಲವು ದಿನಗಳ ಹಿಂದಿನಿಂದಲೇ ಸೌತ್ ಬ್ಲಾಕ್ ಹೊಸ ಜನರಲ್‌ನ ನೇಮಕದ ಪ್ರಕ್ರಿಯೆಯಲ್ಲಿ ನಿರತವಾಗಿತ್ತು. ಹೊಸ ಜನರಲ್ ಯಾರೆಂಬ ಬಗ್ಗೆ ಆರ್ಮಿಗಾಗಲಿ, ಜನರಿಗಾಗಲೀ ಯಾವುದೇ ಗೊಂದಲಗಳಿರಲಿಲ್ಲ. ಏಕೆಂದರೆ ಕೃಷ್ಣರಾವ್ ಚೀಫ್ ಆಗಿದ್ದಾಗ ವೈಸ್ ಚೀಫ್ ಆಫ್ ಆರ್ಮಿ ಸ್ಟಾಫ್ ಆಗಿದ್ದವರು ಮಹಾ ಮೇಧಾವಿ ಯೋಧ ಶ್ರೀನಿವಾಸ್ ಕುಮಾರ್ ಸಿನ್ಹಾ. ಮಿಲಿಟರಿಯ ಸೇವಾರ್ಹತೆಯಲ್ಲಿ ಸದ್ಯಕ್ಕಿದ್ದ ಹಿರಿಯರು ಅವರೇ. ಅಲ್ಲದೆ ಅವರು ಪ್ರಥಮ ಮಹಾದಂಡನಾಯಕ ಜನರಲ್ ಕಾರ್ಯಪ್ಪನವರಿಗೆ adc-aide de corps ಅಗಿದ್ದ ಅನುಭವಸ್ಥರು. ಜನರಲ್ ಆಯ್ಕೆಗೆ ಇನ್ನು ಅಧಿಕೃತ ಪ್ರಕಟಣೆಯೊಂದು ಮಾತ್ರ ಉಳಿದಿತ್ತು. ಜ.ಕೃಷ್ಣರಾವ್ ನಿವೃತ್ತರಾಗುವ ಕೇವಲ ಮೂರು ದಿನಗಳ ಹಿಂದೆ ಆ ಅಧಿಕೃತ ಪ್ರಕಟಣೆ ಹೊರಬಿತ್ತು. ದೇಶವನ್ನು ಆಘಾತಕ್ಕೆ ದೂಡಿದ್ದು ಆ ಪ್ರಕಟಣೆಯೇ. ಏಕೆಂದರೆ ಎಸ್. ಕೆ. ಸಿನ್ಹಾ ಅವರಿಗಿಂತ ವಯಸ್ಸಿನಲ್ಲೂ, ಸೇವಾವಧಿಯಲ್ಲೂ ಕಿರಿಯರಾಗಿದ್ದ ಲೆ.ಜ ಎ.ಎಸ್. ವೈದ್ಯ ಅವರನ್ನು ಭೂಸೇನೆಯ ದಂಡನಾಯಕ ಎಂದು ಘೋಷಣೆ ಮಾಡಲಾಗಿತ್ತು. ಈ ಎ.ಎಸ್ ವೈದ್ಯ ಎಂಥ ಮಹಾ ಯೋಧರೆಂದರೆ ಮಹಾವೀರ ಚಕ್ರವನ್ನು ಎರಡೆರಡು ಬಾರಿ ಪಡೆದು mahavirachakra bar ಎಂದು ಹೆಸರು ಪಡೆದಿದ್ದವರು. ಅಂದರೆ ಎಸ್. ಕೆ ಸಿನ್ಹಾರನ್ನು ಸೂಪರ್ ಸೀಡ್ ಮಾಡಲಾಗಿತ್ತು! ಮತ್ತಷ್ಟು ಓದು 
ನೋಟುಗಳ ಅಮಾನ್ಯೀಕರಣ – ಭಾರತೀಯರ ಪ್ರತಿಸ್ಪಂದನೆ
– ವಿನಾಯಕ ಹಂಪಿಹೊಳಿ
ಪಾಶ್ಚಿಮಾತ್ಯರಿಂದ ಆಮದು ಮಾಡಿಕೊಂಡಿರುವ “ಸಿಸ್ಟಂ”ಗಳ ಜೊತೆ ನಾವು ಭಾರತೀಯರು ಮುಂಚಿನಿಂದಲೂ ಅಗತ್ಯವಿದ್ದರೆ ಮಾತ್ರ ಹೊಂದಿಸಿಕೊಳ್ಳುವ ಗುಣವನ್ನು ಹೊಂದಿದ್ದೇವೆ. ಇದು ವಾಸ್ತವವಾಗಿ ನಮ್ಮ ತಪ್ಪಲ್ಲ. ಸಿಸ್ಟಂನ ತಪ್ಪೂ ಅಲ್ಲ. ಭಾರತೀಯ ಸಮಾಜಗಳ ಸಂರಚನೆಗೆ ಪಾಶ್ಚಿಮಾತ್ಯರ “ಸಿಸ್ಟಂ” ಸಂಪೂರ್ಣ ಸಾಂಗತ್ಯವನ್ನು ಹೊಂದಿಲ್ಲ. ಯಾವುದೇ ಸಿಸ್ಟಂನ ಜೊತೆಗೆ ನಾವು ವರ್ತಿಸುವ ರೀತಿಯನ್ನು ಗಮನಿಸಿದರೆ ನಮಗಿದು ಅರ್ಥವಾಗುತ್ತದೆ.
ವಿದ್ಯಾರ್ಥಿ ಜೀವನವನ್ನೇ ತೆಗೆದುಕೊಳ್ಳಿ. ಎಜುಕೇಶನ್ ಸಿಸ್ಟಂ ನಡೆಸುವ ಪರೀಕ್ಷೆಗಳ ಜೊತೆಗೆ ನಾವು ಹೇಗೆ ವರ್ತಿಸಿದ್ದೇವೆ? ನೂರು ಜನ ವಿದ್ಯಾರ್ಥಿಗಳಲ್ಲಿ, ಅಂದಂದಿನ ಪಾಠವನ್ನು ಅಂದಂದಿಗೇ ಓದಿಕೊಂಡು, ಪರೀಕ್ಷೆಯ ಸಮಯದಲ್ಲಿ ಕೇವಲ ಕಣ್ಣಾಡಿಸಿಕೊಂಡಿರುವ ವಿದ್ಯಾರ್ಥಿಗಳು, ಕೇವಲ ಬೆರಳೆಣಿಕೆಯಷ್ಟು ಮಾತ್ರ. ಅದು ಬಿಟ್ಟರೆ ಉಳಿದೆಲ್ಲ ವಿದ್ಯಾರ್ಥಿಗಳು ಪರೀಕ್ಷೆ ಸಮೀಪಿಸುತ್ತಿದ್ದಂತೆ, ಅಭ್ಯಾಸದ ವೇಗವನ್ನು ಹೆಚ್ಚಿಸಿಕೊಳ್ಳುವವರೇ. ಶಿಕ್ಷಕರೂ ಹಾಗೆಯೇ. ಮೊದಲಿನ ಪಾಠಗಳನ್ನು ಎಳೆದೂ ಎಳೆದೂ ಕಲಿಸಿ, ಸೆಮಿಸ್ಟರ್ ಮುಗಿಯಲು ಬಂದಂತೆ, ಸ್ಪೆಷಲ್ ಕ್ಲಾಸುಗಳನ್ನು ಇರಿಸಿ, ಕೊನೆಯ ಪಾಠಗಳನ್ನೆಲ್ಲ ಮುಗಿಸುತ್ತಾರೆ. ಮತ್ತಷ್ಟು ಓದು 
ಸ್ಫೂರ್ತಿ ದಾರಿಯ ದೀಪಗಳು
– ಶಮಂತ್ ಬಿ ಎಸ್
‘ಜೀವನವೇ ದುಃಖ’ ಎಂಬ ಬುದ್ಧನ ಮಾತನ್ನು, ನಮ್ಮ ದೇಶವನ್ನು ಪ್ರತಿನಿಧಿಸಿದ ‘ಪ್ಯಾರಾಲಂಪಿಕ್ಗಳು’ ಗಂಭೀರವಾಗಿ ಪರಿಗಣಿಸಲಿಲ್ಲ. ಇವರ ಪ್ರತಿನಿತ್ಯದ ಜೀವನವೇ ಜ್ವಾಲೆಯ ಕೂಪವಾಗಿದ್ದರೂ, ಆತ್ಮಸ್ಥೈರ್ಯವನ್ನು ಮಾತ್ರ ಕಳೆದುಕೊಳ್ಳದಿರುವುದು ನಮ್ಮೆಲ್ಲರಿಗೂ ಸ್ಫೂರ್ತಿಯ ಸರಮಾಲೆಯೇ ಸರಿ. ಇತ್ತೀಚಿಗೆ ಮುಕ್ತಾಯಗೊಂಡ ಪ್ಯಾರಾಲಂಪಿಕ್ಸ್ ಸ್ಪರ್ಧೆಯಲ್ಲಿ ಭಾರತ ೪ ಪದಕಗಳನ್ನು ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ೪೩ನೇ ಸ್ಥಾನವನ್ನು ಪಡೆಯಿತು. ನಮ್ಮ ರಾಷ್ಟ್ರದಲ್ಲಿ ಕ್ರೀಡೆಗೆ ನೀಡುತ್ತಿರುವ ಅಲ್ಪ ಪ್ರೋತ್ಸಾಹಕ್ಕೆ ಹೋಲಿಸಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಸ್ಥಾನವನ್ನು ನಾವು ಹೆಮ್ಮೆಯಿಂದಲೇ ಪರಿಗಣಿಸಬೇಕು. ಮತ್ತಷ್ಟು ಓದು 
ಸದ್ಯದ ಸನ್ನಿವೇಶದಲ್ಲಿ ನಮ್ಮ ಮಾಧ್ಯಮಗಳ ನಡೆ ಸರಿಯಾಗಿದೆಯೇ..?
– ಮು ಅ ಶ್ರೀರಂಗ
ದಿನ ನಿತ್ಯ ಮಾಮೂಲಾಗಿ ಸಾಗುತ್ತಿದ್ದ ಜೀವನಕ್ಕೆ ಸ್ವಲ್ಪ ತಡೆ ಉಂಟಾದಾಗ ಮನಸ್ಸಿಗೆ ಕಸಿವಿಸಿ ಆಗುವುದು ಸಹಜ. ೫೦೦ ಮತ್ತು ೧೦೦೦ ನೋಟುಗಳ ಚಲಾವಣೆಯ ನಿಷೇಧದ ಪರಿಣಾಮದಿಂದಲೂ ಹೀಗಾಗಿದೆ. ಬಸ್ಸು, ರೈಲು, ವಿಮಾನ, ನೀರು, ವಿದ್ಯುತ್ತು ಇವುಗಳ ದರ ಇಷ್ಟನೇ ತಾರೀಖಿನಿಂದ ಹೆಚ್ಚಾಗುತ್ತದೆ ಎಂದು ಮುಂಚಿತವಾಗಿ ಘೋಷಣೆ ಮಾಡಿದಂತೆ ನೋಟಿನ ವಿಷಯದಲ್ಲಿ ಮಾಡಲು ಸಾಧ್ಯವಿಲ್ಲ. ಹಾಗೆ ಮಾಡಿದರೆ ಅದರ ಹಿಂದಿನ ಉದ್ದೇಶವೇ ನಿರರ್ಥಕವಾಗುತ್ತದೆ. ಇದು ಸಾಮಾನ್ಯ ಜ್ಞಾನ. ಆ ಎರಡು ನೋಟುಗಳ ಬದಲಾವಣೆಗಾಗಿ ೫೦ ದಿನಗಳ ಕಾಲಾವಕಾಶವಿದೆ. ಆದರೆ ಹೆಚ್ಚಿನ ಪತ್ರಿಕೆ ಮತ್ತು ಟಿ ವಿ ಸುದ್ದಿ ಮಾಧ್ಯಮಗಳು ನೆಗೆಟಿವ್ ಧೋರಣೆಗೆ ಕೊಟ್ಟಷ್ಟು ಮಹತ್ವವನ್ನು ಧನಾತ್ಮಕ ಸುದ್ದಿಗಳಿಗೆ ಕೊಡದೆ ಇರುವುದು ಸಮಸ್ಯೆಯು ಜಟಿಲವಾಗುತ್ತಿದೆ ಎಂಬ ಭಾವನೆಯನ್ನು ಜನರಲ್ಲಿ ಹರಡುತ್ತಿದೆ. ಮತ್ತಷ್ಟು ಓದು 




