ಜಮ್ಮು-ಕಾಶ್ಮೀರ (ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು)
ನಿಲುಮೆ ತಂಡ ನಡೆಸಿದ ಕಾಶ್ಮೀರದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪ್ರೊ.ಪ್ರೇಮಶೇಖರವರ ಮಾತುಗಳನ್ನು ಶೋಭ ರಾವ್ ರವರು ಅಕ್ಷರ ರೂಪಕ್ಕಿಳಿಸಿದ್ದಾರೆ. ಅಂದಿನ ಕಾರ್ಯಕ್ರಮದ ವಿಚಾರಗಳು ಈಗ ನಿಲುಮೆಯ ಓದುಗರ ಮುಂದೆ..
ಕಾಶ್ಮೀರದ ಬಗ್ಗೆ ಇಂದು ಹಲವಾರು ಜನ ತಮ್ಮ ಅಲ್ಪಜ್ಞಾನದಿಂದ ಹಲವಾರು ತರಹ ಮಾತಾಡುತ್ತಾರೆ. ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ದುರಂತವೆಂದರೆ ಅದನ್ನು ಕೇಳಲು ಕೂಡ ಬಹಳಷ್ಟು ಜನರಿದ್ದಾರೆ. ನಾವು ಅವರ ಬಳಿ ಹೋಗಿ ಬೀದಿ ಜಗಳ ಮಾಡಬೇಕಿಲ್ಲ. ವಸ್ತುನಿಷ್ಠ ಚರ್ಚೆಯನ್ನು ಏರ್ಪಡಿಸಿ ನಿಜಸಂಗತಿಗಳನ್ನ ತಿಳಿಸಿದರೆ ಸಾಕು. ಕಾಶ್ಮೀರ ನಮ್ಮದೂ ಎಂದು ಭಾರತವೂ ಹೇಳುತ್ತೆ, ಪಾಕಿಸ್ತಾನವೂ ಹೇಳುತ್ತೆ. ನಾವು ಇವೆರೆಡಕ್ಕೂ ಸೇರಿಲ್ಲ ಎಂದು ಮತ್ತೊಂದು ಗುಂಪು ಕೂಡ ಹೇಳುತ್ತೆ. ಇದೇ ಕಾಶ್ಮೀರದ ನಿಜವಾದ ಸಮಸ್ಯೆ. ಮತ್ತಷ್ಟು ಓದು 
ಅಂತ್ಯದ ಬೆನ್ನೇರಿ…!
-ವಿನಾಯಕ ಪೈ ಬಿ
ಒಂದು ಸುಸಂಸ್ಕೃತ ಸಮಾಜ ಎಂದರೆ ವ್ಯಕ್ತಿಗತ ಚಿಂತನೆಗಳ, ಸಾಮಾಜಿಕ ಸ್ಥಿತ್ಯಂತರಗಳ, ಧಾರ್ಮಿಕ ಆಚರಣೆ, ಆಧ್ಯಾತ್ಮಿಕ ನಂಬಿಕೆಗಳ ಮತ್ತು ಅದರ ಕಾಲಾಂತರ್ಗತ ಪರಿಷ್ಕರಣೆಗಳ ಸಮ್ಮಿಲನವೇ ಆಗಿದೆ. ಈ ಸಮ್ಮಿಲನದಲ್ಲಿ ಯಾವುದಾದರು ಒಂದನ್ನು ನಿರ್ಲಕ್ಷಿಸಿದರು, ಸುಜ್ಞಾನದ ಕೊರತೆ ಸಮಾಜದ ಬೆಳವಣಿಗೆಯ ಮೇಲೆ ತೀವ್ರವಾಗಿ ಪ್ರತಿಫಲಿಸುತ್ತದೆ. ಮಾನವೀಯ ಮೌಲ್ಯಗಳು, ಸದ್ವಿಚಾರಗಳ ಸಾಂಗತ್ಯವೇ ನಮ್ಮ ಸಮೂಹದ ಅಂತಃಸತ್ವ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳೇ ಸಮಾಜಕ್ಕೆ ಭದ್ರಬುನಾಧಿಯನ್ನು ಒದಗಿಸಿ, ಸಾಮಾಜಿಕ ಚಿಂತನೆಗಳು ಸದ್ಭಾವನೆಯ ಮೆಟ್ಟಿಲುಗಳಾಗಿ, ಮನುಕುಲವನ್ನು ಏಳಿಗೆಯತ್ತ ಕೊಂಡೊಯ್ಯುತ್ತದೆ . ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 23:
ಮದನ್ ಲಾಲ್ ಧಿಂಗ್ರಾ
– ರಾಮಚಂದ್ರ ಹೆಗಡೆ
ಪರದೇಶಿ ಬ್ರಿಟಿಷರು ಭಾರತದ ನೆಲಕ್ಕೆ ಬಂದು ದಬ್ಬಾಳಿಕೆ ನಡೆಸುತ್ತಿದ್ದ ಕಾಲದಲ್ಲಿ ಅವರ ನೆಲಕ್ಕೇ ಹೋಗಿ ಇಂಗ್ಲೆಂಡಿನಲ್ಲೇ ಕ್ರಾಂತಿ ಚಟುವಟಿಕೆ ನಡೆಸಿ ಬ್ರಿಟಿಷರನ್ನೇ ಬೆಚ್ಚಿಬೀಳಿಸಿದ, ವಿದೇಶಿ ನೆಲದಲ್ಲಿ ಭಾರತಕ್ಕಾಗಿ ಮೊದಲ ಬಲಿದಾನ ಮಾಡಿದ ಕೆಚ್ಚೆದೆಯ ವೀರ ಮದನ್ ಲಾಲ್ ಧಿಂಗ್ರಾ. ಪಂಜಾಬಿನ ಅಮೃತಸರದ ಶ್ರೀಮಂತ ಕುಟುಂಬದ ಮದನ್ ಲಾಲ್ ಇಂಜಿನೀಯರಿಂಗ್ ಓದಲಿಕ್ಕೆಂದು ಲಂಡನ್ ಗೆ ಹೋಗಿದ್ದವನು. ಸ್ವಭಾವತಃ ಶೋಕಿಲಾಲ. ಮನೆಯವರೆಲ್ಲ ಬ್ರಿಟಿಷರ ಪರಮ ಭಕ್ತರು. ಇಂಗ್ಲೆಂಡ್ ನ ವಿಲಾಸೀ ಸಂಸ್ಕೃತಿಗೆ ಮಾರುಹೋದ ಮದನ್ ಬೆಲೆಬಾಳುವ ಸೂಟು ಬೂಟುಗಳನ್ನು ಹಾಕಿಕೊಂಡು ಶೋಕಿಲಾಲನಾಗಿ ಇಂಗ್ಲೆಂಡಿನ ರಸ್ತೆಗಳಲ್ಲಿ ಹಾಡುತ್ತಾ, ಕುಣಿಯುತ್ತಾ ಯುವತಿಯರೊಂದಿಗೆ ಚಕ್ಕಂದವಾಡುತ್ತ ಕಾಲಕಳೆಯುತೊಡಗಿದ್ದ. ಮತ್ತಷ್ಟು ಓದು 
ಕಾಶ್ಮೀರ ಸಮಸ್ಯೆಯ ವರ್ತಮಾನ
– ಪ್ರೊ. ರಾಜಾರಾಮ ಹೆಗಡೆ
ಕಾಶ್ಮೀರವು ಇಂದು ಕೇವಲ ಭಾರತ ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳ ನಡುವಿನ ಹಗೆಯ ಕಾರಣವಷ್ಟೇ ಅಲ್ಲ, ಭಾರತದಲ್ಲೇ ಆಂತರಿಕ ಹಗೆಯ ಹೊಗೆಯೆಬ್ಬಿಸುತ್ತಿರುವ ಒಂದು ವರ್ತಮಾನದ ಸಮಸ್ಯೆಯಾಗಿದೆ. ಹಾಗಾಗಿ ಕಾಶ್ಮೀರ ವಿವಾದವು ಹೇಗೆ ಪ್ರಾರಂಭವಾಯಿತು, ನಮ್ಮ ಮುತ್ಸದ್ದಿಗಳು ಎಲ್ಲಿ ಎಡವಿದರು ಎಂಬ ಹಿಸ್ಟರಿಗಿಂತ ಅದರ ತೆಕ್ಕೆಯೊಳಗೆ ಬರಲು ಸೋಲುವ ಅಥವಾ ನಿರಾಕರಿಸುವ ವರ್ತಮಾನದ ಆಯಾಮಗಳು ನನಗೆ ಸೋಜಿಗ ಹುಟ್ಟಿಸುತ್ತಿವೆ. ಇಂದು ಕಾಶ್ಮೀರವು ಭಾರತ ಪಾಕಿಸ್ತಾನಗಳ ಗಡಿ ಸಮಸ್ಯೆಯಾಗಿ ಉಳಿದಿಲ್ಲ, ಬದಲಾಗಿ ಅದು ದೇಶದ ಸಮಸ್ತ ಪ್ರಗತಿಪರ ಹೋರಾಟಗಾರರಿಗೂ, ಆಜಾದಿಯ ಕರೆಯಾಗಿ ಕಾಣಿಸುತ್ತಿದೆ ಎಂಬುದನ್ನು ಗಮನಿಸುವುದು ಅಗತ್ಯ. ಕೇವಲ ಮುಸ್ಲಿಂ ಸಂಘಟನೆಗಳೊಂದೇ ಅಲ್ಲ ಭಾರತದ ಪ್ರಗತಿಪರ ಸಂಘಟನೆಗಳೂ, ಕಾಶ್ಮೀರಿ ಮುಸ್ಲಿಂ ಹೋರಾಟಗಾರರ ಜೊತೆಗೆ ಆಜಾದಿಯ ಘೋಷಣೆ ಕೂಗುತ್ತಿವೆ. ದೇಶದ ಬರ್ಬಾದಿಯ ಕುರಿತು ಮಾತನಾಡುವುದು ಈ ಸಂಘಟನೆಗಳಿಗೆ ರಾಷ್ಟ್ರೀಯತೆಯ ಸಮಸ್ಯೆಯಾಗಿ ಕಾಣಿಸುತ್ತಿಲ್ಲ. ಬದಲಾಗಿ ಬಿಡುಗಡೆಯ ಕರೆಯಾಗಿ ಕಾಣಿಸುತ್ತಿದೆ. ಇಂಥ ಚಳವಳಿಗಳನ್ನು ಬೆಂಬಲಿಸುವ ಬುದ್ಧಿಜೀವಿಗಳಿಗೆ ಇಂಥ ಘೋಷಣೆಗಳು ನ್ಯಾಯಯುತವೆನಿಸತೊಡಗಿವೆ. ಈ ಪರಿಸ್ಥಿತಿಯು ನಮಗೆ ಎರಡು ಸವಾಲುಗಳನ್ನು ಸೃಷ್ಟಿಸಿದೆ: ಮತ್ತಷ್ಟು ಓದು 
ಪ್ರೇತದ ಆತ್ಮ ಚರಿತೆ! (ಭಾಗ ೧)
– ಶ್ರೀಕಾಂತ್ ಶೆಟ್ಟಿ
ಒಂದು ಪ್ರೇತದ ಕತೆ. ಆ ಒಂದು ಪ್ರೇತ ಮಾಡಿದ ಆವಾಂತರಕ್ಕೆ ಇತಿಹಾಸವೇ ಹೊಸ ತಿರುವು ಪಡೆದುಕೊಂಡು ಬಿಟ್ಟಿತು. ಈ ಭೂತ ಪ್ರೇತ ಇದೆಲ್ಲಾ ಇದೆಯೋ ಇಲ್ಲವೋ, ಇದ್ದರೆ ವೈಜ್ಞಾನಿಕ ಕಾರಣ ಕೊಡಿ. ಅದರ ಇರುವನ್ನು ಸಾಬೀತು ಮಾಡಿ ಎನ್ನುವವರಿಗೆ ಈ ಕತೆ ಹೇಳಿ ಮಾಡಿಸಿದ್ದಲ್ಲ. ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ಉಳಿದುಕೊಂಡು ಬಂದಿರುವ ದಂತಕತೆಯನ್ನು ಆಧಾರವಾಗಿಟ್ಟುಕೊಂಡು ಈ ಸರಣಿಯನ್ನು ಬರೆಯುತ್ತಿದ್ದೇನೆ. ಇದರಲ್ಲಿ ಕೇವಲ ಪ್ರೇತ ಮಾತ್ರ ಬಂದು ಹೋಗುವುದಿಲ್ಲ. ಹದಿನೆಂಟನೇ ಶತಮಾನದಲ್ಲಿ ಭೂಮಿ ನಡುಗಿಸುವಷ್ಟು ಸೇನೆ ಕಟ್ಟಿಕೊಂಡು, ಮೊಘಲರನ್ನು ಬೇರು ಸಮೇತ ಕಿತ್ತೊಗೆದ ಮರಾಟಾ ಪೇಶ್ವಾಗಳು ಬರುತ್ತಾರೆ. ಉತ್ತರದ ಹಿಮಾಲಯದಿಂದ ದಕ್ಷಿಣದ ಕೃಷ್ಣಾ ನದಿ ದಂಡೆಯವರೆಗೆ ಪೇಶ್ವಾಗಳ ಕತ್ತಿಯ ಅಬ್ಬರ, ಕುದುರೆಗಳ ಹೇಷಾರವ, ಮದೋನ್ಮತ್ತ ಆನೆಗಳ ಹೂಂಕಾರ.. ನಭವನ್ನೇ ನಡುಗಿಸುವ ಮರಾಠಾ ಮಾವಳಿಗಳ ಹರಹರಾ ಮಹಾದೇವ ರಣಘರ್ಜನೆ.. ಚಿತ್ಪಾವನ ಬ್ರಾಹ್ಮಣ ರಣಕಲಿಗಳ ಅಪ್ರತಿಮ ರಣತಂತ್ರ.. ಒಂದು ಶತಮಾನ ಕಾಲ ವಿಜೃಂಭಿಸಿದ ಮರಾಠ ಶಕ್ತಿಯ ವಿವಿಧ ಮುಖ ಪರಿಚಯ ಇಲ್ಲಿ ನಿಮಗಾಗಲಿದೆ.
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 22
ಚಿದಂಬರಂ ಪಿಳ್ಳೈ
– ರಾಮಚಂದ್ರ ಹೆಗಡೆ
ಭಾರತ-ಶ್ರೀಲಂಕಾ ನಡುವಿನ ಸಮುದ್ರದಲ್ಲಿ ನೌಕಾಯಾನದ ಹೆಸರಿನಲ್ಲಿ ಜನರ ಸುಲಿಗೆ ಮಾಡುತ್ತಿದ್ದ ಬ್ರಿಟಿಷರ ಆಟಾಟೋಪಕ್ಕೆ ಉತ್ತರವಾಗಿ ‘ಸ್ವದೇಶಿ ನ್ಯಾವಿಗೇಷನ್ ಕಂಪೆನಿ’ ಹುಟ್ಟುಹಾಕಿದ ಧೀರ ಸಾಹಸಿ ತಮಿಳುನಾಡಿನ ಚಿದಂಬರಂ ಪಿಳ್ಳೈ. ತಮ್ಮದೇ ಆದ ಸಂಪೂರ್ಣ ಸ್ವದೇಶಿ ನೌಕಾಯಾನ ಸಂಸ್ಥೆಯನ್ನು 1906 ರ ಸಮಯದಲ್ಲೇ ಹುಟ್ಟುಹಾಕಿ ಈಸ್ಟ್ ಇಂಡಿಯಾ ಕಂಪನಿಯೇ ಪತರಗುಟ್ಟುವಂತೆ ಮಾಡಿದ, ಭಾರತೀಯರ ಪ್ರತಿರೋಧ ಕೇವಲ ಯುದ್ಧ ಬಲಿದಾನಗಳಲ್ಲಷ್ಟೇ ಅಲ್ಲ ಎಂದು ನಿರೂಪಿಸಿದ ಅಪ್ರತಿಮ ದೇಶಭಕ್ತ ಪಿಳ್ಳೈ. ಆಗಿನ ಕಾಲದಲ್ಲಿ ತಮಿಳುನಾಡಿನಲ್ಲಿ ಸ್ವರಾಜ್ಯ ಎಂಬ ಶಬ್ದವನ್ನು ಉಚ್ಚಾರ ಮಾಡಲೂ ಜನರು ಹೆದರುತ್ತಿದ್ದರು. ‘ಸ್ವಾತಂತ್ಯ್ರ’ ಎಂದು ಅಪ್ಪಿ ತಪ್ಪಿ ಹೇಳಿದರೆ ಅದು ರಾಜದ್ರೋಹವಾಗುತ್ತದೆ ಎಂದು ಜನರಿಗೆ ಅಂಜಿಕೆ. ಅಂಥ ಒಂದು ಕಾಲದಲ್ಲಿ ಚಿದಂಬರಂ ಪಿಳ್ಳೈಯವರು ತಮಿಳುನಾಡಿನಲ್ಲಿ ‘ವಂದೇ ಮಾತರಂ’ ಎಂದು ಘೋಷಣೆ ಕೂಗಿದರು. ಬ್ರಿಟಿಷರ ಚಕ್ರಾಧಿಪತ್ಯದ ವಿರುದ್ಧ ಜನರನ್ನು ಎತ್ತಿಕಟ್ಟಿದರು. ಸಹಸ್ರಾರು ಸ್ವಾತಂತ್ಯ್ರ ವೀರರನ್ನು ಹುರಿಗೊಳಿಸಿದ ಚಿದಂಬರಂ ಪಿಳ್ಳೈಯವರು ರಾಜದ್ರೋಹದ ಆಪಾದನೆ ಹೊತ್ತು ಆರು ವರ್ಷಗಳ ಕಾಲ ಸೆರೆಮನೆಯಲ್ಲಿ ಕಷ್ಟಪಟ್ಟರು. ಮತ್ತಷ್ಟು ಓದು 
ಫ್ರಾನ್ಸಿನ ಸೆಕ್ಯುಲರಿಸಂ ಮತ್ತು ಇಸ್ಲಾಮಿನ ಜಗಳದಲ್ಲಿ ಭಾರತಕ್ಕೇನು ಪಾಠ?
– ವಿನಾಯಕ ಹಂಪಿಹೊಳಿ
ಸದ್ಯಕ್ಕೆ ಫ್ರಾನ್ಸಿನಲ್ಲಿ ಬುರ್ಕ ಬ್ಯಾನ್ ಕುರಿತು ಚರ್ಚೆ ನಡೆಯುತ್ತಿದೆ. ಬುರ್ಕಾ ಬ್ಯಾನ್ ತುಂಬಾ ಹಿಂದೆಯೇ ಆಗಿದೆ. ಈ ರೀತಿಯ ನಿಷೇಧಗಳಿಗೆ ಫ್ರಾನ್ಸ್ ಕೊಡುತ್ತಿರುವ ಕಾರಣ ರಿಲಿಜನ್ನುಗಳು ಪ್ರತಿಪಾದಿಸುವ ವಸ್ತ್ರಸಂಹಿತೆಯನ್ನು ಪಬ್ಲಿಕ್ ವಲಯದಲ್ಲಿ ಪಾಲಿಸುವುದು ಅಲ್ಲಿನ ಸೆಕ್ಯುಲರಿಸಂ ಐಡಿಯಾಲಜಿಯೊಂದಿಗೆ ಸರಿಹೊಂದದಿರುವದು. ಫ್ರಾನ್ಸಿನಲ್ಲಿ ಪ್ರಜಾಪ್ರಭುತ್ವದ ಆಡಳಿತವನ್ನು ಚರ್ಚಿನಿಂದ ಪ್ರತ್ಯೇಕಿಸುವ ಪ್ರಕ್ರಿಯೆ ತುಂಬ ಕಟ್ಟುನಿಟ್ಟಾಗಿತ್ತು. ಫ್ರಾನ್ಸಿನ ಸೆಕ್ಯುಲರಿಸಂ ರಿಲಿಜನ್ನನ್ನು ಕೇವಲ ರಾಜಕೀಯದಿಂದಷ್ಟೇ ಪ್ರತ್ಯೇಕಿಸುವದಷ್ಟೇ ಅಲ್ಲ, ಫ್ರಾನ್ಸ್ ದೇಶವು ಯಾವ ರಿಲಿಜನ್ನಿನೊಂದಿಗೂ ಗುರುತಿಸಿಕೊಳ್ಳಬಾರದು ಎನ್ನುವದು ಅದರ ಆಶಯ. ಆದ್ದರಿಂದ ಫ್ರಾನ್ಸ್ ದೇಶವು ತನ್ನನ್ನು ತಾನು ರಿಪಬ್ಲಿಕ್ ಮತ್ತು ಸೆಕ್ಯುಲರ್ ದೇಶವೆಂದು ಘೋಷಿಸಿಕೊಂಡಿತ್ತು. ಈ ರೀತಿಯ ಲಿಬರಲ್ ಸೆಕ್ಯುಲರಿಸಂ ಅನ್ನು ಬರೀ ಕ್ರಿಶ್ಚಿಯನ್ನರೇ ತುಂಬಿಕೊಂಡಿದ್ದ ದೇಶದಲ್ಲಿ ಈ ರೀತಿಯ ಸೆಕ್ಯುಲರಿಸಂ ಅನ್ನು ಜಾರಿಗೆ ತರುವದು ಅಷ್ಟು ಕಷ್ಟವಾಗಿರಲಿಲ್ಲ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 21:
ಲಾಲಾ ಹರದಯಾಳ್
– ರಾಮಚಂದ್ರ ಹೆಗಡೆ
‘ಬೇಕಾಗಿದ್ದಾರೆ – ಭಾರತದಲ್ಲಿ ಬಂಡಾಯವೆಬ್ಬಿಸಲು ಸೈನಿಕರು.
ವೇತನ – ಸಾವು
ಬಹುಮಾನ – ಹುತಾತ್ಮತೆ
ಪೆನ್ಷನ್ – ಸ್ವಾತಂತ್ರ್ಯ
ಯುದ್ಧ ಕ್ಷೇತ್ರ – ಭಾರತ’
ಹೀಗೆ ದಪ್ಪ ದಪ್ಪ ಅಕ್ಷರಗಳಲ್ಲಿ ಈ ಜಾಹೀರಾತು, 1914ರ ಸೆಪ್ಟೆಂಬರ್ ತಿಂಗಳಲ್ಲಿ ಹೊರಬಿದ್ದ “ಗದರ್” ಪತ್ರಿಕೆಯ ಮುಖಪುಟದಲ್ಲಿ ಅಚ್ಚಾಗಿತ್ತು. ಗದರ್ (ಬಂಡಾಯ) ಪಕ್ಷ, ಗದರ್ ಪತ್ರಿಕೆ – ಮೊದಲನೆಯ ಮಹಾಯುದ್ಧ ಆರಂಭವಾಗುವುದಕ್ಕೆ ಸ್ವಲ್ಪ ಮುಂಚೆ ಸ್ಥಾಪಿತವಾಗಿ, ಸಶಸ್ತ್ರ ಬಂಡಾಯವೆಬ್ಬಿಸಿ ಭಾರತವನ್ನು ಸ್ವತಂತ್ರಗೊಳಿಸಲು ಮಹಾನ್ ಪ್ರಯತ್ನ ನಡೆಸಿದವು. ಈ ಕ್ರಾಂತಿಯ ಉರಿಯೆಬ್ಬಿಸಿದ ಸಾಹಸಿ ಲಾಲಾ ಹರದಯಾಳ್. ವಿದೇಶದಲ್ಲಿರುವ ಭಾರತೀಯರನ್ನು ಸಂಘಟಿಸಿ ಅವರಲ್ಲಿ ತಾಯ್ನಾಡಿನ ಸ್ವಾತಂತ್ರ್ಯ ಭಾವನೆ ಅರಳಿಸಿ ಅವರೆಲ್ಲರೂ ಸ್ವದೇಶಕ್ಕೆ ತೆರಳಿ ದಂಗೆಯೇಳುವಂತೆ ಮಾಡಬೇಕು ಎಂಬುದು ಲಾಲನ ಅಪೇಕ್ಷೆಯಾಗಿತ್ತು. 1884 ರಲ್ಲಿ ಜನಿಸಿದ ಹರದಯಾಳ್ ಚಿಕ್ಕಂದಿನಲ್ಲೇ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ತಮ್ಮ ತಂದೆ ತಾಯಿಯಿಂದ ಕೇಳಿ ತಿಳಿದಿದ್ದರು. ಬ್ರಿಟಿಷ್ ಸರ್ಕಾರದಿಂದಲೇ ವಿದ್ಯಾರ್ಥಿ ವೇತನ ಪಡೆದು ಉನ್ನತ ವ್ಯಾಸಂಗಕ್ಕಾಗಿ ಆಕ್ಸ್ಫರ್ಡ್ ಗೆ ತೆರಳಿದ ಲಾಲಾ ಅಲ್ಲಿ ಸಾವರ್ಕರ್, ಶ್ಯಾಮಜಿ ಕೃಷ್ಣವರ್ಮ, ಭಾಯಿ ಪರಮಾನಂದರ ಸಂಪರ್ಕಕ್ಕೆ ಬಂದು ಭಾರತ ಭಕ್ತರಾಗಿ ಬದಲಾದರು. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 20:
ಬಿನೋಯ್ ಬಾದಲ್ ದಿನೇಶ್:
– ರಾಮಚಂದ್ರ ಹೆಗಡೆ
ಭಾರತ ಸ್ವಾತಂತ್ರ್ಯ ಸಮರದ ಪುಟಗಳನ್ನು ತೆರೆಯುತ್ತಾ ಹೋದಂತೆ ಅಲ್ಲಿ ಒಂದಕ್ಕಿಂತ ಒಂದು ರೋಚಕ ಅಧ್ಯಾಯವನ್ನು ಕಾಣುತ್ತ ಹೋಗಬಹುದು. ದೇಶವನ್ನು ದಾಸ್ಯದ ಕಪಿಮುಷ್ಟಿಯಿಂದ ರಕ್ಷಿಸಲು ಈ ದೇಶದ ಬಿಸಿರಕ್ತದ ಯುವಕರು ಜೀವ ನೀಡಲಿಕ್ಕೂ ಹಿಂದೇಟು ಹಾಕದ ಸ್ಪೂರ್ತಿದಾಯಕ ಸಾಹಸಗಾಥೆ ನಮಗಲ್ಲಿ ಸಿಗುತ್ತವೆ. ದೇಶದ ರಕ್ಷಣೆಯ ವಿಚಾರ ಬಂದಾಗ ರಕ್ತವೇನು, ಜೀವವನ್ನೂ ಕೊಟ್ಟೇವು ಎಂದಿದ್ದಷ್ಟೇ ಅಲ್ಲ, ಸ್ವಯಂ ತಮ್ಮನ್ನು ಅರ್ಪಿಸಿಕೊಂಡು ನಗುನಗುತ್ತಾ ನೇಣುಗಂಬವೇರಿದ ರೋಮಾಂಚಕಾರಿ ಸಾಹಸಗಳು ಸ್ವಾತಂತ್ರ್ಯ ಸಮರದ ಇತಿಹಾಸವನ್ನು ರಕ್ತರಂಜಿತವಾಗಿ, ವರ್ಣರಂಜಿತವಾಗಿ ಮಾಡಿವೆ. ಬಂಗಾಳದ ಈ ಮೂವರು ಬಿಸಿರಕ್ತದ ದೇಶಪ್ರೇಮಿ ತರುಣರು ಬಿನೋಯ್ ಬಸು, ಬಾದಲ್ ಗುಪ್ತಾ, ದಿನೇಶ್ ಗುಪ್ತಾ ಹಾಗೆ ಸ್ವಾತಂತ್ರ್ಯದ ಕನಸಿನಲ್ಲಿ ಕ್ರಾಂತಿಯ ಕಹಳೆ ಊದಿ ಸಾವಿನ ಕದ ತಟ್ಟಿದಾಗ ಅವರಿಗಿನ್ನೂ 22, 19, 18 ವರ್ಷಗಳಷ್ಟೇ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 19:
ಸುಬ್ರಮಣ್ಯ ಭಾರತಿ
– ರಾಮಚಂದ್ರ ಹೆಗಡೆ
ಮಹಾಕವಿ ಭಾರತಿಯಾರ್ ಎಂದೇ ಪ್ರಸಿದ್ಧರಾದ, ಭಾರತದ ಅತ್ಯುತ್ತಮ ಕವಿಗಳಲ್ಲಿ ಒಬ್ಬರು ಎಂಬ ಖ್ಯಾತಿಗೆ ಪಾತ್ರರಾದ ತಮಿಳುನಾಡಿನ ಕವಿ, ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕರು ಶ್ರೀ ಸುಬ್ರಮಣ್ಯ ಭಾರತಿ. ತಮ್ಮ ರಾಷ್ಟ್ರೀಯವಾದಿ ಸಾಹಿತ್ಯದ ಮೂಲಕ ಭಾರತೀಯ ಸ್ವಾತಂತ್ರ್ಯ ಸಂಗ್ರಾಮಕ್ಕೆ ದಕ್ಷಿಣ ಭಾರತದಲ್ಲಿ ಜನಸಮೂಹವನ್ನು ಸಂಘಟಿಸುವಲ್ಲಿ ಸುಬ್ರಮಣ್ಯ ಭಾರತಿಯವರ ಪಾತ್ರ ಬಲು ದೊಡ್ಡದು. ಆವರ ಹಲವಾರು ಕೃತಿಗಳು ಭಾರತೀಯ ಸ್ವಾತಂತ್ಯ ಆಂದೋಲನದ ಕಾಲದಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಜ್ವಾಲೆಯನ್ನು ಪ್ರಖರಗೊಳಿಸುವಲ್ಲಿ ನೆರವಾದವು ಹಾಗೂ ದೇಶಪ್ರೇಮವನ್ನು ಬಡಿದೆಬ್ಬಿಸಿದವು. 1882ರಲ್ಲಿ ತಮಿಳುನಾಡಿನ ಎತ್ತಯಾಪುರಂ ಎಂಬ ಗ್ರಾಮದಲ್ಲಿ ಜನಿಸಿದ ಸುಬ್ರಮಣ್ಯ ಭಾರತಿ ತಿರುನಲ್ವೇಲಿಯಲ್ಲಿ ಆರಂಭಿಕ ಶಿಕ್ಷಣ ನಂತರ ವಾರಣಾಸಿ ಯಲ್ಲಿ ಪ್ರೌಢ ಹಾಗೂ ಪದವಿ ಶಿಕ್ಷಣ ಪಡೆದರು. ಬಾಲ್ಯದಿಂದಲೇ ಅತ್ಯಂತ ಪ್ರತಿಭಾಶಾಲಿ ಕವಿಯಾಗಿದ್ದ ಭಾರತಿ ತಮ್ಮ 11ನೇ ವಯಸ್ಸಿನಲ್ಲೆ ಎತ್ತಯಾಪುರಂನ ಆಸ್ಥಾನ ಕವಿಗಳು ಹಾಗು ಸಂಗೀತಗಾರರ ಸಮ್ಮೇಳನಕ್ಕೆ ಆಹ್ವಾನಿತರಾಗಿದ್ದರು. ವಾರಣಾಸಿ ಯಲ್ಲಿ ನೆಲಸಿದ್ದ ಅವಧಿಯಲ್ಲಿ ಭಾರತಿಯವರು ಹಿಂದೂ ಆಧ್ಯಾತ್ಮಿಕತೆ ಹಾಗು ರಾಷ್ಟ್ರೀಯತೆಯ ಪ್ರಭಾವಕ್ಕೆ ಒಳಗಾದರು. ಜೊತೆಗೆ ಅವರು ಸಂಸ್ಕೃತ, ಹಿಂದಿ ಹಾಗು ಆಂಗ್ಲ ಭಾಷೆಗಳಲ್ಲಿ ಪರಿಣತಿಯನ್ನು ಹೊಂದಿದರು. ಡಿಸೆಂಬರ್ 1905ರಲ್ಲಿ, ಬನಾರಸ್ ನಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್ ಅಧಿವೇಶನದಲ್ಲಿ ಭಾರತಿ ಪಾಲ್ಗೊಂಡರು. ನಂತರ ಅವರು ವಿವೇಕಾನಂದರ ಮಾನಸ ಪುತ್ರಿ ಸೋದರಿ ನಿವೇದಿತಾರನ್ನು ಸಂಧಿಸಿದರು. ಮತ್ತಷ್ಟು ಓದು 




