ಇಂದಿನವರೆಗೂ ಬುದ್ದಿಜೀವಿಗಳ ಬುದ್ಧಿ ನೆಟ್ಟಗಾಗಿಲ್ಲ. ಮುಂದಾದರೂ ಆದೀತಾ?
-ಶ್ರೀಕಾಂತ್ ಆಚಾರ್ಯ
ಇಲ್ಲೇ ಹುಟ್ಟಿ, ಇಲ್ಲೇ ಬೆಳೆದು ಈ ದೇಶದ ಅಷ್ಟೂ ಸವಲತ್ತನ್ನ ಚಪ್ಪರಿಸಿಕೊಂಡು ಅನುಭವಿಸಿದವರಿಂದ ಭಾರತದ ‘ಬರ್ಬಾದಿಗೆ’ ಜಂಗ್(?) ಶುರುವಾಯ್ತಲ್ಲ. ಆಶ್ಚರ್ಯ ಅನ್ನಿಸಿತಾ? ಬಹುಶಃ ಇರಲಿಕ್ಕಿಲ್ಲ. ಈ ದೊಂಬರಾಟಗಳನ್ನ ನಾವೆಲ್ಲಾ ಕಂಡವರೇ. ಬದುಕಿನಲ್ಲಿ ತನಗೊಂದು ‘ಐಡೆಂಟಿಟಿ’ಯೇ ಇಲ್ಲದೇ ಪರಿತಪಿಸುವ ಮಂದಿ ಬಹಳಷ್ಟು ಬಾರಿ ಹೀಗೆಲ್ಲ ಮಾಡಿಯೇ ಹೆಸರಿಗೆ ಬರೋದಿದೆ. ಹಾಗಂತ ಇವರನ್ನ ಅಸಡ್ಡೆ ಮಾಡಿ ಬದಿಗಿಡುವಂತಿಲ್ಲ. ಯಾಕೆಂದರೆ ಇವರೆಲ್ಲರ ಹೋರಾಟ ಇರೋದು ಕೆಟ್ಟದರ ಬಗ್ಗೆಯಲ್ಲ, ಈ ದೇಶಕ್ಯಾವುದೋ ಮಾರಕವಾಗಿದ್ದರೆ ಅದರ ಬಗ್ಗೆಯೂ ಅಲ್ಲ. ಇವರ ‘ಜಂಗ್’ ಇರೋದು ಈ ದೇಶದ ಸಮಗ್ರತೆಯ ಬಗ್ಗೆ. ಈ ದೇಶದ ಸನಾತನತೆಯ ಬಗ್ಗೆ. ಒಟ್ನಲ್ಲಿ ಈ ದೇಶದ ಬಗ್ಗೆಯೇ. ಇವೆಲ್ಲಾ ‘ಬುದ್ಧಿಮಾಂದ್ಯ’ ಜೀವಗಳಿಗೆ ಹೆಗಲಾಗಿ ನಿಂತು ಪೋಷಿಸುತ್ತಿರುವುದು ಇಲ್ಲಿನ ಬುದ್ಧಿ ಜೀವಿಗಳೆಂಬ ಅಡಕಸುಬಿಗಳು. ಅದಲ್ಲದೇ ಇನ್ನೇನು? ಮತಿ ತಪ್ಪಿದವ ಮಾಡಿದ ತಪ್ಪನ್ನ, ತಪ್ಪು ಅನ್ನೋದು ಬಿಟ್ಟು ಅವರೊಲ್ಲಬ್ಬರಾಗಿ ನಿಂತು ಗುರಾಣಿ ಹಿಡಿದು ಮತ್ತಷ್ಟು ಇನ್ನಷ್ಟು ಪ್ರಪಾತಕ್ಕೆ ಇಳಿಯೋಕೆ, ಎಳೆಯೋಕೆ ತಯಾರಾದರೆ? ಮತ್ತಷ್ಟು ಓದು 
ಭಾರತದಲ್ಲಿ ಶೂದ್ರರ ಶೋಷಣೆ ನಡೆದಿದೆಯೇ??
– ವಲವಿ ವಿಜಯಪುರ
ಸಾಮಾನ್ಯವಾಗಿ ಭಾರತದಲ್ಲಿ ಮನುಸ್ಮೃತಿಯು ಶೂದ್ರರಿಗೆ ವೇದಗಳನ್ನು ಕಲಿಯುವ ಅಧಿಕಾರ ನೀಡಲಿಲ್ಲ. ಅವರಿಗೆ ಸಂಸ್ಕೃತದ ಜ್ಞಾನವನ್ನು ಕೊಡಲಿಲ್ಲ. ವಿದ್ಯೆಯನ್ನು ಶೂದ್ರರಿಂದ ಮುಚ್ಚಿಡಲಾಯಿತು. ಮೇಲ್ವರ್ಗದವರ ಮನೆಯ ಸಗಣಿಯನ್ನು ಬಾಚುವದೇ ಅವರ ಕೆಲಸವಾಗಿತ್ತು. ಯಾವುದೇ ಉನ್ನತ ಹುದ್ದೆಗಳನ್ನು ನೀಡದೇ ಅವರನ್ನು ವಂಚಿಸಲಾಯಿತು. ಮತ್ತು ಈ ವಂಚನೆಯಲ್ಲಿ ಅಧಿಕವಾಗಿ ಬ್ರಾಹ್ಮಣರು ಭಾಗೀದಾರರು. ಸಮಾಜವೆಂಬ ಪಿರಮಿಡ್ ಆಕೃತಿಯಲ್ಲಿ ಅತ್ಯಂತ ಮೇಲೆ ಬ್ರಾಹ್ಮಣನಿದ್ದರೆ ಅತ್ಯಂತ ಕೆಳಸ್ತರದಲ್ಲಿ ಶೂದ್ರನಿದ್ದಾನೆ ಮತ್ತು ಅವನನ್ನು ವಿಶೇಷವಾಗಿ ಬ್ರಾಹ್ಮಣರು ಶೋಷಣೆ ಮಾಡಿದ್ದಾರೆ ಅನ್ನುವದು ಆಧುನಿಕ ಶಿಕ್ಷಣ ಪಡೆದವರ ವಾದವಾಗಿದೆ. ಮತ್ತಷ್ಟು ಓದು 
ಭಾನುಮತಿ ನೀ ಸುಮತಿ.
– ನಾಗೇಶ ಮೈಸೂರು
ಮಹಾಭಾರತದಲ್ಲಿ ನಿರ್ಲಕ್ಷ್ಯಕ್ಕೊಳಪಟ್ಟು ನೇಪಥ್ಯಕ್ಕೆ ಸರಿಸಲ್ಪಟ್ಟ ಅನೇಕ ಸ್ತ್ರೀ ಪಾತ್ರಗಳಲ್ಲೊಂದು ಪ್ರಮುಖ ಪಾತ್ರ ಕೌರವೇಶ ದುರ್ಯೋಧನನ ಪತ್ನಿ ಭಾನುಮತಿಯದು. ಭೂಮಂಡಲವನ್ನಾಳುವ ಒಡೆಯನಾದ ಕೌರವೇಶನ ಸತಿಯಾದರೂ ಯಾಕೊ ಅವಳ ಉಲ್ಲೇಖ ಅಲ್ಲಿಲ್ಲಿ ತುಸು ಮೆಲುವಾಗಿ ಹೆಸರಿಸಿದ್ದು ಬಿಟ್ಟರೆ ಗಾಢವಾದ ವಿವರಣೆ ಕಾಣಿಸುವುದಿಲ್ಲ. ಬಹುಶಃ ಸುಯೋಧನನಿಗೆ ಆರೋಪಿಸಿದ ಋಣಾತ್ಮಕ, ಖಳನಾಯಕ ಪಟ್ಟದಿಂದಲೋ ಅಥವಾ ಚತುಷ್ಟಯದ ಚಟುವಟಿಕೆಗಳಿಗೆ ಕೊಟ್ಟಷ್ಟೇ ಗಮನ ಅವನ ಖಾಸಗಿ ಜೀವನಕ್ಕೆ ಕೊಡಲಿಲ್ಲವೆಂದೊ – ಒಟ್ಟಾರೆ ಭಾನುಮತಿ ಹೆಚ್ಚಾಗಿ ತೆರೆಮರೆಯ ಅಪ್ರತ್ಯಕ್ಷ ಪ್ರಭಾವ ಬೀರುವ ಪಾತ್ರವಾಗಷ್ಟೆ ಆಗಿ ಗೌಣವಾಗಿಬಿಡುತ್ತಾಳೆ. ಈಗಲೂ ಅಂತರ್ಜಾಲ ಹುಡುಕಿದರೆ ಅವಳ ಕುರಿತಾದ ವಿವರ ಸಿಗುವುದು ತೀರಾ ಅಲ್ಪವೇ. ಮತ್ತಷ್ಟು ಓದು 
ತಲೆಕೆಟ್ಟ ಕಾನೂನುಗಳು ಮತ್ತು ಸ್ವಂತ ಬುದ್ಧಿಯಿಲ್ಲದ ಜೀವಿಗಳು
– ರಾಕೇಶ್ ಶೆಟ್ಟಿ
ಇತ್ತೀಚೆಗೆ ಮತ್ತೂರಿನಲ್ಲಿ ನಡೆದ ಸೋಮಯಾಗದಲ್ಲಿ ಸಂಕೇತಿ ಬ್ರಾಹ್ಮಣರು ಮೇಕೆ ಬಲಿ ಕೊಟ್ಟು ತಿಂದರಂತೆ, ಸೋಮರಸ ಕುಡಿದರಂತೆ ಅಂತ ಪ್ರಗತಿಪರರ ವಾಣಿಯೊಂದು ಸುಳ್ಳು ಸುದ್ದಿ ಬರೆಯಿತು. ಈ ಸುದ್ದಿಯಿಂದಾಗಿ ಟೌನ್ ಹಾಲ್ ಮುಂದೆ ನಿಂತು ದನ ತಿನ್ನುವುದನ್ನು ಬೆಂಬಲಿಸುವ ಕಬಾಬ್ ಕ್ರಾಂತಿಕಾರಿಗಳಿಗೂ ಹೊಟ್ಟೆನೋವು ಕಾಣಿಸಲಾರಂಭಿಸಿತು. ಇವರನ್ನು ಕರೆಯದೇ ತಿಂದರೂ ಎಂದು ಹೊಟ್ಟೆ ನೋವಾಗಿತ್ತೋ ಏನೋ. PhD ಮಹಾಶಯನೊಬ್ಬ ಬ್ರಾಹ್ಮಣರು ಮಾಂಸ ತಿನ್ನಲು ಶುರು ಮಾಡಿದರೆ ರೇಟ್ ಜಾಸ್ತಿಯಾಗುತ್ತೆ ಅಂತ ಅಳ್ತಾ ಇದ್ದ. ಎಂತೆಂತವರೆಲ್ಲ ವಿವಿಗಳಲ್ಲಿ ಪಾಠ ಮಾಡುತ್ತಾರಪ್ಪಾ ಅನಿಸಿತು. ಎಲ್ಲಾ (ಜಾತಿ/ಪಂಗಡದ) ಬ್ರಾಹ್ಮಣರು ಸಸ್ಯಹಾರಿಗಳು ಅನ್ನೋದು “ಮೂಢನಂಬಿಕೆ”. ಸಿದ್ರಾಮಯ್ಯನವರಿಗೆ ಹೇಳಿ ಮೌಢ್ಯ ನಿಷೇಧ ಕಾಯ್ದೆಯ ಮೂಲಕ ಈ ಮೂಢನಂಬಿಕೆಯನ್ನು ನಿಷೇಧಿಸಬೇಕು. ಕಾಶ್ಮೀರಿ ಪಂಡಿತರಿಗೆ ಶಿವರಾತ್ರಿ ಹಬ್ಬದಂದು ಮಾಂಸದಡುಗೆಯೇ ವಿಶೇಷವಾದದ್ದು. ಬಂಗಾಳಿ, ಓಡಿಶಾದ ಬ್ರಾಹ್ಮಣರೂ, ಗೌಡ ಸಾರಸ್ವತ ಬ್ರಾಹ್ಮಣರಲ್ಲೂ ಮಾಂಸಹಾರಿಗಳಿದ್ದಾರೆ. ಮತ್ತಷ್ಟು ಓದು 
ಅರುಣಾ ಶಾನಭಾಗ: ಸ್ತ್ರೀ ಶೋಷಣೆಯ ಇನ್ನೊಂದು ಮುಖ
-ರಾಜಕುಮಾರ.ವ್ಹಿ.ಕುಲಕರ್ಣಿ,
ಮುಖ್ಯಗ್ರಂಥಪಾಲಕರು
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ
(ಅರುಣಾ ಶಾನಭಾಗ ನಿಧನಹೊಂದಿ ಮೇ 18 ಕ್ಕೆ ಒಂದು ವರ್ಷವಾಯಿತು. ಅವರ ನೆನಪಿನಲ್ಲಿ ಈ ಲೇಖನ)
ಆಕಾಶದ ನೀಲಿಯಲ್ಲಿ
ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ
ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಅಂದರೆ ಅಷ್ಟೆ ಸಾಕೇ?
-ಜಿ.ಎಸ್.ಶಿವರುದ್ರಪ್ಪ
ಸ್ತ್ರೀ ಶೋಷಿತಳು ಎನ್ನುವುದಕ್ಕೆ ಇತಿಹಾಸವೇ ಬಹುದೊಡ್ಡ ಸಾಕ್ಷಿ. ಇಲ್ಲಿ ಕಾನೂನಿನ ನಿಯಮಗಳು ಎಷ್ಟೇ ಕಠಿಣವಾಗಿದ್ದರೂ ಮಹಿಳೆಯನ್ನು ಶೊಷಣೆಯ ಪರಧಿಯಿಂದ ಹೊರತರಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಶೋಷಣೆಗೆ ಒಳಗಾಗುವ ಮಹಿಳೆ ಮಾನ ಮತ್ತು ಗೌರವಕ್ಕೆ ಹೆದರಿ ಕಾನೂನಿನ ನೆರವು ಪಡೆಯಲು ಮುಂದಾಗುತ್ತಿಲ್ಲವಾದ್ದರಿಂದ ಮಹಿಳಾ ಶೋಷಣೆ ಎನ್ನುವುದು ಅನೂಚಾನವಾಗಿ ಮುಂದುವರೆಯುತ್ತಿದೆ. ಈ ಸಂದರ್ಭ ಮಾಧ್ಯಮಗಳ ಪಾತ್ರವನ್ನು ನಾವು ಒಂದಿಷ್ಟು ಶ್ಲಾಘಿಸಲೇ ಬೇಕು. ಸ್ತ್ರೀ ದೌರ್ಜನ್ಯದ ಸಂದರ್ಭಗಳಲ್ಲೆಲ್ಲ ಪತ್ರಿಕಾ ಮಾಧ್ಯಮ ಕಾನೂನಿಗೆ ತನ್ನ ನೆರವನ್ನು ನೀಡುತ್ತ ಬಂದಿದೆ. ಅದರಲ್ಲೂ ವಿಶೇಷವಾಗಿ ಇತ್ತೀಚಿನ ದಿನಗಳಲ್ಲಿ ಪತ್ರಿಕಾ ಮಾಧ್ಯಮದಲ್ಲಿ ತಂತ್ರಜ್ಞಾನದ ಬಳಕೆಯ ಪರಿಣಾಮ ಮಹಿಳೆಯರ ಮೇಲಿನ ದೌರ್ಜನ್ಯ ಬಹುಬೇಗ ಜನರನ್ನು ಹೋಗಿ ತಲುಪುತ್ತಿದೆ. ಹೀಗೆ ಸುದ್ಧಿ ವಾಹಿನಿಗಳು ಮಹಿಳೆಯ ಮೇಲಾಗುತ್ತಿರುವ ದೌರ್ಜನ್ಯ ಹಾಗೂ ಶೋಷಣೆಯನ್ನು ಜನರಿಗೆ ಒಯ್ದು ತಲುಪಿಸುತ್ತಿರುವ ಸಂದರ್ಭ ನನಗೆ ಅರುಣಾ ಶಾನಭಾಗ ಎನ್ನುವ ನತದೃಷ್ಟ ಹೆಣ್ಣುಮಗಳು ನೆನಪಾಗುತ್ತಾಳೆ. ಒಂದು ವೇಳೆ 1970 ರ ದಶಕದಲ್ಲಿ ಸುದ್ದಿವಾಹಿನಿಗಳು ಈಗಿನಂತೆ ಕಾರ್ಯನಿರ್ವಹಿಸುತ್ತಿದ್ದರೆ ಆ ಹತಭಾಗ್ಯಳಿಗೆ ನಿಜಕ್ಕೂ ನ್ಯಾಯ ದೊರೆಯುತ್ತಿತ್ತು. ಮತ್ತಷ್ಟು ಓದು 
ನಂಜುಂಡೇಗೌಡರು ಮೋದಿಗೆ ಬರೆದ ಪತ್ರಕ್ಕೊಂದು ಆತ್ಮೀಯ ಪ್ರತಿಕ್ರಿಯೆ
– ವಿಜಯ್ ಪೈ
ಸನ್ಮಾನ್ಯ ಹೊನಕೆರೆ ನಂಜುಂಡೇಗೌಡರಿಗೆ ವಂದನೆಗಳು.
ತಾವು ಪ್ರಧಾನ ಮಂತ್ರಿಗಳಿಗೆ ಪ್ರಜಾವಾಣಿ ಪತ್ರಿಕೆಯಲ್ಲಿ ಬರೆದ ‘ಆತ್ಮೀಯ’ ಪತ್ರವನ್ನು ಓದಿದ ನಂತರ ನಿಮಗೊಂದು ಆತ್ಮೀಯ ಪ್ರತಿಕ್ರಿಯೆ ನೀಡಬೇಕಾಯಿತು.
(ನಂಜುಂಡೇಗೌಡರ ಪತ್ರ : www.prajavani.net/columns/ಗೌರವಾನ್ವಿತ-ಪ್ರಧಾನಿಗೆ-ಆತ್ಮೀಯ-ಪತ್ರ )
ಮೋದಿ ಆಡಳಿತದಿಂದ ಈ ದೇಶದಲ್ಲಿ ಬಂದ ಒಂದು ಅತ್ಯುತ್ತಮ ಬದಲಾವಣೆಯೆಂದರೆ, ‘ಬುದ್ಧಿಜೀವಿ’ಗಳೆಂದು / ಪತ್ರಕರ್ತರೆಂಬ ಅಪಾದನೆಗೊಳಲ್ಪಟ್ಟವರು ಆಗಾಗ ಪ್ರಧಾನಿಗೆ ಪತ್ರ ಬರೆಯುವ, ಬುದ್ಧಿವಾದ ಹೇಳುವ/ ಎಚ್ಚರಿಸುವ ಕಾರ್ಯಕ್ರಮದಲ್ಲಿ ತೊಡಗಿಕೊಂಡಿರುವುದು. ದಶಕಗಳ ಕಾಲ ಕೋಮಾಕ್ಕೆ ಒಳಗಾಗಿದ್ದ ಇವರುಗಳು, ಈಗ ಮೋದಿ ಎಂಬ ಸಂಜೀವಿನಿಯಿಂದ ಮತ್ತೆ ಜೀವಂತಗೊಂಡು ಮತ್ತೆ ‘ಸಾಕ್ಷಿ ಪ್ರಜ್ಞೆ’ಗಳಾಗಿದ್ದಾರೆ ಎಂದು ಜನ ಭಾವಿಸಿದರೆ, ನೀವೂ ಕೂಡ ಅಲ್ಲಗೆಳೆಯುವುದಿಲ್ಲ ಅಂದುಕೊಳ್ಳುತ್ತೇನೆ. ಮೊನ್ನೆ-ಮೊನ್ನೆ ಬರವನ್ನು ಹೇಗೆ ನಿರ್ವಹಿಸಬೇಕು, ಈ ವಿಷಯದಲ್ಲಿ ಸರಕಾರದ ನ್ಯೂನತೆಗಳೇನು ಎಂಬ ಬಗ್ಗೆ ನಮ್ಮ ದೇಶ ಕಂಡ ಕೆಲವು ಬಹುಮುಖ್ಯ ಸಾಕ್ಷಿಪ್ರಜ್ಞೆಗಳು ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಈಗ ನೀವು ಕೂಡ ಸರಕಾರದ ಎರಡನೆಯ ವರ್ಷಾಚರಣೆಯ ಸಂದರ್ಭದಲ್ಲಿ ಪತ್ರ ಬರೆದಿದ್ದೀರಿ. ತಮ್ಮ ಕಾಳಜಿಗೆ ವಂದನೆಗಳು. ಮತ್ತಷ್ಟು ಓದು 
ಕಾಂಗ್ರೆಸ್‌ನ ವ್ಯಾಘ್ರ ದಾಳಿಗೆ ನಲುಗಿದ ಸಾಧ್ವಿ
– ಎಸ್.ಆರ್. ಅನಿರುದ್ಧ ವಸಿಷ್ಠ, ಭದ್ರಾವತಿ
ಮಾಲೇಗಾಂವ್ ಸ್ಪೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್‌ಗೆ ಕ್ಲೀನ್‌ಚಿಟ್ ನೀಡಿ ಆರೋಪಮುಕ್ತಗೊಳಿಸಲಾಗಿದೆ. ಹಾಗಾದರೆ, ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ನಿಜಕ್ಕೂ ಭಾಗಿಯಾದವರು ಯಾರು? ಸ್ಫೋಟದ ಹಿಂದಿರುವ ವ್ಯಕ್ತಿ ಹಾಗೂ ಸಂಘಟನೆಗಳು ಯಾರು ಎನ್ನುವುದರ ಕುರಿತು ಉನ್ನತ ಮಟ್ಟದ ತನಿಖೆ ನಡೆಯಬೇಕಿದ್ದು, ಈ ಕುರಿತಂತೆ ಸತ್ಯ ಹೊರಬರಬೇಕಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ.
ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣಕ್ಕೀಗ ತಾರ್ಕಿಕ ಅಂತ್ಯ ದೊರೆತಿದ್ದು, ಸಾಧ್ವಿ ಪ್ರಜ್ಞಾ ಸಿಂಗ್ ಸೇರಿದಂತೆ ಆರು ಜನರ ಮೇಲೆ ಹೇರಲಾಗಿದ್ದ ಮೋಕಾ ಪ್ರಕರಣದಲ್ಲಿ ಇವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ಚಾರ್ಜ್‌ಶೀಟ್ ಸಲ್ಲಿಸಿರುವ ತನಿಖಾ ಸಂಸ್ಥೆ ಎನ್‌ಐಎ ಆರೋಪಗಳಿಂದ ಕ್ಲೀನ್ ಚಿಟ್ ನೀಡಿದೆ.
ನಿಜಕ್ಕೂ ಇದು ಸತ್ಯಕ್ಕೆ ಸಂದ ಜಯ ಎಂದು ಸಂತಸ ಪಡುವ ವೇಳೆಯೇ ಈ ಸಂತಸವನ್ನು ಸಂಭ್ರಮಿಸುವ ಮನಸ್ಥಿತಿ ಹಾಗೂ ದೇಹಸ್ಥಿತಿಯಲ್ಲಿ ಸ್ವತಃ ಸಾಧ್ವಿ ಪ್ರಜ್ಞಾ ಸಿಂಗ್ ಇಲ್ಲ ಎನ್ನುವುದು ಇಡೀ ಪ್ರಜಾಪ್ರಭುತ್ವ ವ್ಯವಸ್ಥೆ ತಲೆ ತಗ್ಗಿಸಬೇಕಾದ ವಿಚಾರ. ಮತ್ತಷ್ಟು ಓದು 
ಸಿದ್ಧಾಂತಗಳ ಸಂಗ ಸಾಕಾಗಿದೆ; ದೇಶಭಕ್ತಿಯ ಸಂಘ ಬೇಕಾಗಿದೆ
– ರೋಹಿತ್ ಚಕ್ರತೀರ್ಥ
ಕನ್ನಡದಲ್ಲಿ “ತಾಯಿನಾಡು” ಪತ್ರಿಕೆಯನ್ನು ನಾಲ್ಕು ದಶಕಗಳ ಕಾಲ ನಡೆಸಿದ ಮತ್ತು ಬೆಂಗಳೂರಿನ ಬಸವನಗುಡಿ ಕ್ಷೇತ್ರದ ಮೊದಲ ಚುನಾಯಿತ ಶಾಸಕನಾಗಿದ್ದ ಪಿ.ಆರ್.ರಾಮಯ್ಯ ಬನಾರಸ್ ಹಿಂದೂ ವಿಶ್ವ ವಿದ್ಯಾಲಯದಲ್ಲಿ ಕಲಿಯುತ್ತಿದ್ದ ದಿನಗಳು. ಪದವಿಯ ಅಂತಿಮ ವರ್ಷದಲ್ಲಿದ್ದರು. ದೇಶದಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ದಿನದಿನಕ್ಕೆ ಏರುತ್ತಿದ್ದ ಹೊತ್ತು. ಗಾಂಧಿಯ ಮಾತುಗಳನ್ನು ಕೇಳಲು ಎಲ್ಲಿಂದ ಎಲ್ಲಿಯವರೆಗೂ ಕಾಲ್ನಡಿಗೆಯಲ್ಲೋ ರೈಲಿನಲ್ಲೋ ಹೋಗಿಬರಲು ತಯಾರಾಗಿದ್ದ ರಾಮಯ್ಯನವರಿಗೆ ಒಂದು ದಿನ ವಾರಾಣಸಿಯ ಪಕ್ಕದಲ್ಲೇ ಗಾಂಧಿ ಭಾಷಣ ಏರ್ಪಾಟಾಗಿದ್ದನ್ನು ಕಂಡು ಸಕ್ಕರೆ ಹಾಲು ಕುಡಿದಷ್ಟು ಸಂತೋಷವಾಯಿತು. ಅಂದಿನ ಭಾಷಣದಲ್ಲಿ ಗಾಂಧಿ, ಹೋರಾಟಕ್ಕೆ ಭೀಮಬಲ ಬರಬೇಕಾದರೆ ವಿದ್ಯಾರ್ಥಿಗಳೆಲ್ಲರೂ ತಮ್ಮ ಶಾಲಾ-ಕಾಲೇಜುಗಳಿಂದ ಹೊರಬಂದು ಹೋರಾಟದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಮಾತು ರಾಮಯ್ಯನವರ ಮೇಲೆ ಎಷ್ಟು ಪ್ರಭಾವ ಬೀರಿತೆಂದರೆ ಅವರು ತಕ್ಷಣ ತನ್ನ ಪದವಿ ವ್ಯಾಸಂಗವನ್ನು ಮೊಟಕುಗೊಳಿಸಿ ಚಳವಳಿಯಲ್ಲಿ ಭಾಗವಹಿಸಲು ನಿರ್ಧರಿಸಿಬಿಟ್ಟರು. ಇನ್ನೊಂದೆರಡು ವಾರಗಳು ಕಳೆದರೆ ಮುಖ್ಯಪರೀಕ್ಷೆಗಳು ಪ್ರಾರಂಭವಾಗುವುದರಲ್ಲಿದ್ದವು. ಈಗ ಏಕಾಏಕಿ ವಿಶ್ವವಿದ್ಯಾಲಯ ತೊರೆದರೆ ಗತಿಯೇನು ಎಂಬ ಸಣ್ಣದೊಂದು ಅಂಜಿಕೆಯೂ ಅವರ ಮನದ ಮೂಲೆಯಲ್ಲಿತ್ತು. ನೇರವಾಗಿ ವಿವಿಯ ಕುಲಪತಿಗಳಾಗಿದ್ದ ಮದನ ಮೋಹನ ಮಾಲವೀಯರಲ್ಲಿಗೆ ಹೋಗಿ ತನ್ನ ಇಬ್ಬಂದಿತನವನ್ನು ವಿವರಿಸಿ ಏನು ಮಾಡಲಿ ಎಂದು ಮಾರ್ಗದರ್ಶನ ಕೇಳಿದರು. ಮತ್ತಷ್ಟು ಓದು 
ಸೈಕಲ್ಲೇರಿದ ನಲ್ಲ, ದಾಟಿದ ಸಾವಿರ ಮೈಲಿಗಲ್ಲ!
– ರಾಘವೇಂದ್ರ ಸುಬ್ರಹ್ಮಣ್ಯ
ಒಬ್ಬ ಬಡ ಹುಡುಗ, ಒಂದು ದಿನ ಒಬ್ಬ ಶ್ರೀಮಂತ ಹುಡುಗಿಯನ್ನ ಭೇಟಿಯಾದ. ಇಬ್ಬರಲ್ಲೂ ಪ್ರೇಮಾಂಕುರವಾಯ್ತು. ಹುಡುಗಿ ವಾಪಾಸು ತನ್ನ ದೇಶಕ್ಕೆ ಹೊರಟುಹೋದಳು. ಹುಡುಗ ‘ನನ್ನ ಪ್ರೀತಿಯನ್ನ ಸಾಯೋಕೆ ಬಿಡಲ್ಲ. ಬರ್ತೀನಿ. ಒಂದಲ್ಲಾ ಒಂದು ದಿನ ನಿನ್ನ ಭೇಟಿಯಾಗುತ್ತೇನೆ’ ಅಂತಾ ಆಕೆಗೂ, ಆಕೆಯ ಜೊತೆಗೆ ತನಗೆ ತಾನೇ ಮಾತುಕೊಟ್ಕೊಂಡ. ಆದರೆ ಅವಳಿದ್ದಲ್ಲಿಗೆ ಹೋಗೋಣ ಅಂದ್ರೆ ಇವನ ಹತ್ರ ದುಡ್ಡಿಲ್ಲ. ಬೆಳಾಗಾದ್ರೆ ‘ಇವತ್ತು ಸಾಯಂಕಾಲ ಊಟಕ್ಕೆ ಏನು?’ ಅನ್ನುವಷ್ಟು ಬಡತನ. ಆದರೆ ಕಮಿಟ್ಮೆಂಟ್ ಕೊಟ್ಟಾಗಿದೆ. ಒಂದಿನ ಆ ಹುಡುಗ ‘ಇನ್ನು ಸುಮ್ನಿದ್ರೆ ಆಗಲ್ಲ. ಶುರು ಮಾಡೇಬಿಡೋಣ’ ಅಂತಾ ಹೇಳ್ಕಂಡು ಒಂದು ಸೈಕಲ್ ತಗಂಡು ಈ ಹುಡುಗಿಯನ್ನು ಭೇಟಿಯಾಗೋಕೆ ಹೊರಟೇ ಬಿಡ್ತಾನೆ. ಎಷ್ಟೂ ದೂರ ಸೈಕಲ್ ಹೊಡೆದ ಅಂತೀರಾ? ನೂರಲ್ಲ, ಐನೂರಲ್ಲ, ಸಾವಿರವೂ ಅಲ್ಲ. ಬರೋಬ್ಬರಿ 9350 ಕಿಲೋಮೀಟರ್ ದೂರ!! ಪ್ರೀತಿಯ ಆಳದ ಮುಂದೆ ಈ ದೂರ ಯಾವ ಲೆಕ್ಕ ಬಿಡ್ರೀ! ಮತ್ತಷ್ಟು ಓದು 
ಸಹಿಷ್ಣುತೆ-ಅಸಹಿಷ್ಣುತೆಗಳ ಸುತ್ತಾ…..
– ಸಂಗೀತಾ ದೀಪಕ್
ಕಳೆದ ವರ್ಷವೆಲ್ಲಾ ಸುದ್ದಿ ಮಾಡಿದ, ದೇಶ ವಿದೇಶಗಳಲ್ಲಿ ತೀರ್ವ ಸಂಚಲನವನ್ನು ಉಂಟು ಮಾಡಿದ ಪದ ಅಸಹಿಷ್ಣುತೆ. ಇದಕ್ಕೆ ಅದೆಷ್ಟೋ ಪ್ರಶಸ್ತಿ, ಪುರಸ್ಕಾರಗಳ ಮರ್ಯಾದೆ ಬಲಿಯಾದವು, ಅದೆಷ್ಟೋ ತಾರಾಮಣಿಯರ, ವಿದ್ವಜ್ಜನರ ಪರ-ವಿರೋಧ ಹೇಳಿಕೆಗಳು ವಿವಾದಕ್ಕೀಡಾದವು. ಒಂದು ರಾಜ್ಯದ ರಾಜಕೀಯ ಭವಿಷ್ಯವನ್ನು ತಕ್ಕ ಮಟ್ಟಿಗೆ ಬದಲಾಯಿಸಿದ ಪದ ಅದು. ಅಸಹಿಷ್ಣುತೆ ಬಗ್ಗೆ ಬರೆಯುತ್ತಿರುವ ಲೇಖನವೆಂದರೆ, ಯಾವುದೋ ರಾಜಕೀಯ ಪಕ್ಷದ ಪರ ಅಥವ ವಿರುದ್ಧವಾಗಿಯೇ ಈ ಲೇಖನವೆಂದು ಎಲ್ಲಾ ಭಾವಿಸುವುದು ಸಹಜ, ಆದರೆ ಅಸಹಿಷ್ಣುತೆ ಮತ್ತು ಮಾನವನ ನಡುವಿನ ಸಂಬಂಧವನ್ನು ತಿಳಿಸುವುದಷ್ಟೇ ಈ ಲೇಖನದ ಉದ್ದೇಶ. ಇಲ್ಲಿ ಅಸಹಿಷ್ಣುತೆ, ಅದೂ ಭಾರತೀಯರಲ್ಲಿ ಎಂಬ ವಿಷಯವಂತೂ ರಾಜ್ಯ, ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗಿ ದಿನಗಟ್ಟಲೇ ಪತ್ರಿಕೆಗಳಿಗೆ ಹಾಗೂ ದೃಶ್ಯ ಮಾಧ್ಯಮಗಳಿಗೆ ಆಹಾರವನ್ನು ಒದಗಿಸಿದ್ದವು. ಈ ವಿಷಯದಲ್ಲಿ ಸಾಮಾಜಿಕ ತಾಣಗಳು ಕೂಡ ಹಿಂದೆ ಬಿದ್ದಿರಲಿಲ್ಲ, ತಾವೇನೂ ಕಡಿಮೆಯಿಲ್ಲವನ್ನುವಂತೆ ಜನರೂ ಮನಸೋ ಇಚ್ಛೆ ತಮ್ಮ ಅಭಿಪ್ರಾಯಗಳನ್ನು ಹರಿಯಬಿಟ್ಟಿದ್ದರು. ಮತ್ತಷ್ಟು ಓದು 





