ಯಡ್ಯೂರಪ್ಪಂಗೆ ನೊಬೇಲ್ ಅವಾರ್ಡು…!
– ವಿಜಯ್ ಹೆರಗು
ಎಂದಿನಂತೆ ನಮ್-ವಿಜಯ್ ಹೆರಗುಮ ಕೆಂಚ, ಸೀನ, ಸಿದ್ದ, ನಾಣಿ ಎಲ್ಲಾರೂ ಬಂದು ಅವರ ಮಾಮೂಲಿ ‘ಅಡ್ಡಾ’ ರಾಮಣ್ಣನ ಟೀ ಅಂಗಡಿ ಮುಂದೆ ಕೂತ್ಕೊಂಡು ಹರಟೆ ಹೊಡೀತಾ ಇದ್ರು. ನಮ್ ಸಿದ್ದ ಅಲ್ಲಿ ಇದ್ದ ಅಂದ್ಮೇಲೆ ರಾಜಕೀಯದ ಮಾತು ಬರ್ಲೇಬೇಕು.
ಸಿದ್ದ : ಲೇ ಕೆಂಚ ಇವತ್ತು ಪೇಪರ್ ನೋಡ್ದೆನ್ಲಾ ?
ಕೆಂಚ : ಹೂ ಕನ್ಲಾ ನೋಡ್ದೆ, ಪಾಪ ನಮ್ ಯಡ್ಯೂರಪ್ನೋರಿಗೆ ಶ್ಯಾನೆ ಕಾಟ ಕೊಡ್ತಾವ್ರೆ. ಈ ಸಂತೋಷ್ ಹೆಗ್ಡೆ ಲೋಕಾಯುಕ್ತ ಆದಾಗಿಂದ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಸಂತೋಷಾನೇ ಕಾಣಾಕಿಲ್ಲ………ಸದ್ಯ ಇನ್ನೊಂದು ವಾರಕ್ಕೆ ಆವಯ್ಯ ರಿಟೈರ್ ಆಯ್ತಾರೆ ಇನ್ನಾರಾ ನಮ್ ಸಿಎಮ್ಮು ಸುಖವಾಗಿ ಇರ್ಬೌದು ಅಂದ್ಕೊಂಡ್ರೆ ಅದೇನೋ “ಗಣಿ ಬಾಂಬ್” ಹಾಕ್ಬಿಟ್ರಲ್ಲ ಅವ್ರು.
ಸೀನ : ಅಲ್ಲಲೇ ಕೆಂಚ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಯಾವಾಗ್ಲಾ ಸಂತೋಷ ನೋಡಿದ್ದೇ ನೀನು!? ಆವಯ್ಯ ಯಾವಾಗಲೂ ಮುಖ ಗಂಟ್ ಹಾಕ್ಕಂಡೆ ಇರ್ತಾರೆ…….
ಸಿದ್ದ : ನಿಜ ಕಣ್ಲಾ ಸೀನ……ಆವಯ್ಯ ನಗೋದೇ ಕಷ್ಟ ಕಣ್ಲಾ ಅದ್ಕೆ ಅವ್ರು ಸದಾನಂದ ಗೌಡ್ರುನ್ನ ಪಕ್ಕಕ್ಕೆ ಇಟ್ಕಂಡಿದ್ರು…..ಸದಾನಂದ ಗೌಡ್ರು ಯಾವಾಗ್ಲೂ ನಗ್ತಾ ಇರ್ತಾರೆ, ಆದ್ರೆ ಈಶ್ವರಪ್ಪ ಬಂದು ಸದಾನಂದ ಗೌಡ್ರುನ್ನ ಎಬ್ಬಿಸಿ ಅವ್ರ ಸೀಟ್ನಾಗೆ ಇವ್ರು ಕುಂತ್ಕಂಬುಟ್ರು.
ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ…!?
– ಕುಮಾರ ರೈತ
ಶೀರ್ಷಿಕೆ ಓದಿದಾಗ ಆಶ್ವರ್ಯ-ಪ್ರಶ್ನಾರ್ಥಕ ಭಾವಗಳು ಮೂಡುವುದು ಸಹಜ. ಆದರೆ ‘ಕನ್ನಡದ ಕತ್ತು ಹಿಚುಕುತ್ತಿರುವ ಕೇರಳ ಸರಕಾರ ಎನ್ನುವುದು ಅಕ್ಷರಶಃ ಸತ್ಯ. ಗಡಿ ಅಂಚಿನ ಕಾಸರಗೋಡಿನಿಂದ ಕನ್ನಡಕ್ಕೆ ಸ್ಥಾನವೇ ಇಲ್ಲದಂತೆ ಮಾಡುವ ನಿಟ್ಟಿನಲ್ಲಿ ಆ ಸರಕಾರ ನಾನಾ ಬಗೆಯ ತಂತ್ರಗಾರಿಕೆಯನ್ನು ಮಾಡುತ್ತಲೇ ಬಂದಿದೆ. ಭಾಷಾವಾರು ಪ್ರಾಂತ್ಯ ರಚನೆಯಾಗಿ 54 ವರ್ಷ ಸಂದರೂ ಕಾಸರಗೋಡಿನಲ್ಲಿ ಕನ್ನಡ ಉಳಿದಿರುವುದನ್ನು ಕಂಡು ಈ ಬಾರಿ ಪ್ರಬಲ ಅಸ್ತ್ತ ಪ್ರಯೋಗಿಸಿದೆ. ಇದಕ್ಕೆ ತಕ್ಕ ಪ್ರತ್ಯಸ್ತ್ರ ಹೂಡದೇ ಇದ್ದರೆ ಸಂಭವಿಸುವ ಅಪಾಯಗಳು ಅನೇಕ. ಅವುಗಳೇನು…..?
ಸಂಸ್ಕೃತಿ ಸಂಕಥನ – ೨
-ರಮಾನಂದ ಐನಕೈ
ಸಂಸ್ಕೃತಿ ಸಂಕಥನ – ೧
ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ಸ್ಮೃತಿ ವಿಸ್ಮೃತಿಯಾಗಿದೆ. ಇದಕ್ಕೆ ಕಾರಣವೇನು ಈ ಮರೆವನ್ನು ಪುನಃ ನೆನಪಿಸಿಕೊಳ್ಳುವುದು ಹೇಗೆ? ಸಂಸ್ಕೃತಿಯನ್ನು ಮರೆತದ್ದರಿಂದ ಆದ ಪರಿಣಾಮಗಳೇನು? ಹೀಗೆ ಯೋಚಿಸಲು ಹೋದರೆ ನಮ್ಮೆದುರು ನೂರಾರು ಪ್ರಶ್ನೆಗಳುಂಟು. ಭಾರತೀಯರು ತಮ್ಮ ಸಂಸ್ಕೃತಿಯ ಕುರಿತಾಗಿ ಕೇಳುತ್ತಿರುವ, ಓದುತ್ತಿರುವ, ನಂಬಿಕೊಂಡಿರುವ ಹಲವು ಸಂಗತಿಗಳು ತಪ್ಪು ತಿಳುವಳಿಕೆಂದ ಕೂಡಿದ್ದರಿಂದ ವರ್ತಮಾನದ ಭಾರತದಲ್ಲಿ ಅನೇಕಾನೇಕ ಸಮಸ್ಯೆಗಳು ಜೀವಪಡೆಯುತ್ತಲೇ ಇವೆ. ಈ ಸತ್ಯ ಅರ್ಥವಾಗಬೇಕಾದರೆ ಇತ್ತೀಚೆಗೆ ಪ್ರಕಟಗೊಂಡ ಎರಡು ಕನ್ನಡದ ಪುಸ್ತಕಗಳನ್ನು ಪ್ರತಿಯೊಬ್ಬರೂ ಓದಲೇಬೇಕು.
ಒಂದು ಸ್ಮೃತಿ-ವಿಸ್ಮೃತಿ ಭಾರತೀಯ ಸಂಸ್ಕೃತಿ ಎಂಬ ಪುಸ್ತಕ ಇದು ಪ್ರೊ. ಬಾಲಗಂಗಾಧರರ ಸಂಶೋಧನಾ ಗ್ರಂಥ ಇದನ್ನು ಪ್ರೊ. ರಾಜಾರಾಮ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದಾರೆ. ಇನ್ನೊಂದು ಪುಸ್ತಕ ಪೂರ್ವಾವಲೋಕನ. ಇದು ಬಾಲಗಂಗಾಧರರ ಬಿಡಿ ಲೇಖನಗಳ ಅನುವಾದಗಳ ಸಂಗ್ರಹ. ಇವೆರಡೂ ಕೂಡಾ ಭಾರತೀಯ ಸಮಾಜ ವಿಜ್ಞಾನವನ್ನು ಪುನರ್‌ಪರಿಶೀಲನೆಗೆ ಹಚ್ಚುವ ಮಹತ್ವದ ಕೃತಿಗಳು.
ಅಯೊಡಿನ್ ಹೆಸರಿನ ಮಹಾದ್ರೋಹ.!!!
-ಶ್ರೀ ಹರ್ಷ ಸಾಲೀಮಠ
ಅಯೊಡಿನ್‍ಯುಕ್ತ ಉಪ್ಪಿನ ಬಗ್ಗೆ ಸಾಕಷ್ಟು ಪ್ರಚಾರ ನಡೆದಿದೆ. ಇದಕ್ಕೆ ಸರ್ಕಾರದ ಕುಮ್ಮಕ್ಕೂ ಸಾಕಷ್ಟಿದೆ. ಸರ್ಕಾರದ ಈ ಕುಮ್ಮಕ್ಕಿನ ಹಿಂದೆ ಅನೇಕ ದುಷ್ಟ ಕೈಗಳ ಕೈವಾಡವಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.ಅಯೊಡಿನ್ ನಮ್ಮ ದೇಹಕ್ಕೆ ಮೈಕ್ರೊ ಪ್ರಮಾಣದಲ್ಲಿ ಬೇಕಾದ ಅಂಶ. ಅಯೋಡಿನ್ ಅಂಶ ನಮ್ಮ ದೇಹದಲ್ಲಿ ಕಡಿಮೆಯಾದಾಗ ಥೈರಾಯಿಡ್ ಗ್ರಂಥಿ ಅಯೋಡಿನ್ ಅನ್ನು ಹೆಚ್ಚಾಗಿ ಹೀರಿಕೊಳ್ಳಲು ಊದಿಕೊಳ್ಳತೊಡಗುತ್ತದೆ. ಇದೇ ಗಾಯ್ಟರ್ ರೋಗ.
ಗಾಯ್ಟರ್ ಅಥವಾ ಗಳಗಂಡ ರೋಗ ನಮ್ಮ ದೇಶದಲ್ಲಿ ಕಂಡುಬರುವುದೇ ವಿರಳ. ಅಯೋಡಿನ್ ಕೊರತೆಯನ್ನು ದೊಡ್ಡ ಗಂಡಾಂತರವೆಂಬಂತೆ ಬಿಂಬಿಸಿ ಅಯೋಡೀಕರಿಸಿದ ಉಪ್ಪನ್ನು ಬಲವಂತವಾಗಿ ಎಲ್ಲರಿಗೂ ತಿನ್ನಿಸಲಾಗುತ್ತಿದೆ. ಗಳಗಂಡ ರೋಗ ನಮ್ಮ ದೇಶದಲ್ಲಿ ಕಂಡು ಬರುವುದು ಲಡಾಕ್, ಶಿಮ್ಲಾ ರೀತಿಯ ಅತಿ ಹೆಚ್ಚಿನ ಮಣ್ಣಿನ ಸವೆತ ಇರುವ ಗುಡ್ಡಗಾಡು ಪ್ರದೇಶಗಳಲ್ಲಿ ಮಾತ್ರ. ಎಲ್ಲಾ ಸೇರಿದರೇ ಅಯೋಡಿನ್ ಕೊರತೆಯನ್ನು ಎದುರಿಸುತ್ತಿರುವುದು ಶೇ.೨ ರಷ್ಟು ಜನರು ಮಾತ್ರ. ಶೇ.೨ರ ಕೊರತೆಯನ್ನು ನೀಗಿಸುವುದಕ್ಕಾಗಿ ಉಳಿದ ಶೇ.೯೮ ರಷ್ಟು ಜನರಿಗೆ ಅಯೋಡಿನ್ ತಿನ್ನಿ ಎಂದು ಪ್ರಚಾರ ಮಾಡಲಾಗುತ್ತಿದೆ.
ಅನೇಕ ವ್ಯಕ್ತಿಗಳಲ್ಲಿ ಅಯೋಡಿನ್ ಅಲರ್ಜಿ ಇರುತ್ತದೆ. ಗಳಗಂಡ ಚಿಕಿತ್ಸೆಗಾಗಿ ಅಯೋಡಿನ್ ನೀಡಬೇಕಾದರೂ ಈ ಅಲರ್ಜಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅಲರ್ಜಿ ಇರುವ ವ್ಯಕ್ತಿಗಳಲ್ಲಿ ಚಿಕ್ಕ ಪ್ರಮಾಣದ ಅಯೋಡಿನ್ ಸಹ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡಬಲ್ಲುದು. ಇದಲ್ಲದೇ ದೇಹದಲ್ಲಿ ಅಯೋಡಿನ್‍ನ ಅನವಶ್ಯಕ ಹೆಚ್ಚಳದಿಂದಾಗಿ ಖಿನ್ನತೆ, ಉಸಿರಾಟದ ತೊಂದರೆಗಳು ನಪುಂಸಕತ್ವ, ಕೂದಲುದುರುವಿಕೆ,ಚರ್ಮದ ರೋಗಗಳು , ಗಳಗಂಡ ನಿಶ್ಯಕ್ತಿ ಇತ್ಯಾದಿ ಆರೋಗ್ಯಕ್ಕೆ ಹಾನಿಕಾರಕ ತೊಂದರೆಗಳು ಉಂಟಾಗುವ ಸಾಧ್ಯತೆಗಳಿವೆ. ಅಯೋಡಿನ್ ತಿನ್ನುವುದನ್ನು ಕಡಿಮೆ ಮಾಡುವುದರಿಂದ ಗಂಟಲಿನ ಕ್ಯಾನ್ಸರ್ ಕಡಿಮೆಯಾಗುವ ಸಾಧ್ಯತೆಯ ಬಗ್ಗೆ ಜಪಾನ್‍ನಲ್ಲಿ ಸಂಶೋಧನೆಗಳು ತಿಳಿಸುತ್ತವೆ. ಅಯೋಡಿನ್ ಕೊರತೆ ಇರುವ ಜರ್ಮನಿ ದೇಶದಲ್ಲಿ ಗಂಟಲು ಕ್ಯಾನ್ಸರ್ ಕೂಡ ಕಡಿಮೆಯೆ. ಅಲ್ಲದೇ ಗರ್ಭಿಣಿ ಸ್ತ್ರೀಯರಿಗೂ ಅಯೋಡಿನ್ ಅಪಾಯ ಉಂಟುಮಾಡುತ್ತದೆ. ಮತ್ತಷ್ಟು ಓದು 
ಅವರ ಹಿಂಸೆಗೆ ನನ್ನಲ್ಲಿ ಉತ್ತರವಿರಲಿಲ್ಲ
– ಚಿತ್ರಾ ಸಂತೋಷ್
ನನ್ನ ಕಳೆದೆರಡು ಅಂಕಣದಲ್ಲಿ ಅನ್ಯಾಯದ ಕುಲುಮೆಯಲ್ಲಿ ಬೆಂದ ಹೆಣ್ಣು ಮಕ್ಕಳಿಬ್ಬರ ಕಥೆ ಹೇಳಿದ್ದೆ. ಈಗ ಮತ್ತೊಂದು ಕಥೆ ಹೇಳುತ್ತಿದ್ದೇನೆ. ಹೆಣ್ಣು ಮುಂದುವರಿದರೂ ಆಕೆಯ ಮೇಲಿನ ಅನ್ಯಾಯಗಳಿನ್ನೂ ಕೊನೆಯಾಗಲಿಲ್ಲ. ಈಕೆಯ ಹೆಸರು ಸುಲೇಖಾ ಮಹಿಪಾಲ್ . ಊರು ಡೆಹ್ರಾಡೂನ್. ಹುಟ್ಟಿದ್ದು ಜಾಡಮಾಲಿ ಕುಟುಂಬದಲ್ಲಿ. ಅಪ್ಪ ಅಮ್ಮನನ್ನು ವಿಷ ನೀಡಿ ಕೊಂದಾಗ ಸುಲೇಖಾಳಿಗೆ ಇನ್ನೂ ೧೩ ವರ್ಷ. ಅಪ್ಪನಿಂದ ದೂರಾದ ಸುಲೇಖಾಳ ಬದುಕು ಪ್ರತಿಕ್ಷಣವೂ ಶೋಷಣೆಗೊಳಗಾಯಿತು. ಭರವಸೆ ಕಳೆದುಕೊಂಡ ಅವಳ ಬದುಕಿನಲ್ಲಿ ಮತ್ತೆ ಭರವಸೆ ತುಂಬಿದ್ದು ಸಮಾಧಾನ್ ಎಂಬ ಸರ್ಕಾರೇತರ ಸಂಸ್ಥೆ ಮತ್ತು ತನ್ನ ಭಾ ಪತಿ. ಈಗ ಅನ್ಯಾಯದ ವಿರುದ್ಧ ಸುಲೇಖಾ ಹೋರಾಟಕ್ಕೆ ಭಾ ಪತಿಯೂ ಕೈ ಜೋಡಿಸಿದ್ದಾರೆ.
ಅಮ್ಮನನ್ನು ಉಳಿಸಿಕೊಳ್ಳಲು ಆಕೆಯಿಂದ ಸಾಧ್ಯವಾಗಲಿಲ್ಲ. ಅಪ್ಪನ ರೌದ್ರವತಾರೆದುರು ಮಗಳು ಅಸಹಾಯಕಳಾಗಿ ಮೌನವಾಗಿದ್ದಳು. ಆಕೆಗಿನ್ನೂ ೧೩ ವರ್ಷ. ಆ ಪುಟ್ಟ ಹೆಣ್ಣು ಮಗಳ ಎದುರು ಅಮ್ಮ ಹತಳಾದಳು.
ಕಲಾವಿದರೊಳಗಿನ ವಿವಾದಗಳ ಬ್ರಾಂಡ್ ಅಂಬಾಸಿಡರ್
–ಮಂಸೋರೆ ಬೆಂಗಳೂರು
ಈ ಲೇಖನವನ್ನು ನಾನೊಬ್ಬ ಕಲಾವಿದ ಎಂಬ ದೃಷ್ಟಿಕೋನದಿಂದಲೇ ಓದುತ್ತಾರೆ ಎಂಬ ಅರಿವಿನೊಂದಿಗೆ ಬರೆಯುತ್ತಿದ್ದೇನೆ.
ನಾನೀಗ ಬರೆಯುತ್ತಿರುವ ವಿಷಯದ ವ್ಯಕ್ತಿಯ ಕುರಿತಂತೆ ಸಾಕಷ್ಟು ಚರ್ಚೆಗಳಾಗಿವೆ. ಈ ಲೇಖನ ಆ ಚರ್ಚೆ, ಲೇಖನಗಳನ್ನು ವಿರೋದಿಸುವುದೂ ಅಲ್ಲ, ಸಮರ್ಥಿಸಿಕೊಳ್ಳುವುದು ಅಲ್ಲ. ಇದು ನನ್ನ ಸ್ವವಿಚಾರವಷ್ಟೇ.
ಹುಸೇನ್ ನನಗೆ ಈ ಕಲಾವ್ಯಾಸಂಗಕ್ಕೆ ಬರುವ ಮೊದಲಿಂದಲೂ ಗೊತ್ತು. ಈ ವ್ಯಕ್ತಿಯ ಜೊತೆ ಜೊತೆಗೆ ನನಗೆ ಗೊತ್ತಿದ್ದ ಇನ್ನಿತರ ಕಲಾವಿದರೆಂದರೆ ಕೆ.ಕೆ.ಹೆಬ್ಬಾರ್ ಮತ್ತು ರವಿವರ್ಮ ಬಿ.ಕೆ.ಎಸ್.ವರ್ಮ. ಈ ನಾಲ್ವರ ಪರಿಚಯ ನನಗೆ ನಾಲ್ಕು ವಿಭಿನ್ನ ಕಾರಣಗಳಿಂದಾಗಿ ಪರಿಚಿತರಾಗಿದ್ದರು, ಹುಸೇನ್ ಪತ್ರಿಕೆಗಳಲ್ಲಿ ಆಗಾಗ ಬರುತ್ತಿದ್ದ ಸುದ್ದಿಗಳಿಂದಾಗಿ, ಬಿ.ಕೆ.ಎಸ್ ವರ್ಮ ದೂರದರ್ಶನದಲ್ಲಿ ಚಿತ್ರ ಗೀತೆ(ಹಿನ್ನಲೆಯಲ್ಲಿ ಪರಿಸರ ಕುರಿತಾದ ಹಾಡು ಬರುತ್ತಿದ್ದರೆ ಅದಕ್ಕೆ ತಕ್ಕಂತೆ ಪ್ರಾತ್ಯಕ್ಷಿಕೆ ನೀಡುವಂತೆ ಚಿತ್ರ ರಚಿಸುತ್ತಿದ್ದರು), ಕೆ.ಕೆ ಹೆಬ್ಬಾರ್ ಕುರಿತಂತೆ ಪಠ್ಯವೊಂದಿದ್ದ ಕಾರಣದಿಂದಾಗಿ, ರವಿವರ್ಮ ಹಾಡಿನ ಮೂಲಕ(ರವಿವರ್ಮನ ಕುಂಚದ ಕಲೆ). ಇವಿಷ್ಟೇ , ಇವರಿಷ್ಟೇ ನನಗೆ ಗೊತ್ತಿದ್ದ ಕಲಾವಿದರು ಕಲಾಕೃತಿಗಳು. ಮತ್ತಷ್ಟು ಓದು 
ಸಂಸ್ಕೃತಿ ಸಂಕಥನ – ೧
– ರಮಾನಂದ ಐನಕೈ
ಭಾರತೀಯ ಸಂಸ್ಕೃತಿಯ ವಿಷಯದಲ್ಲಿ ಇಂದಿಗೂ ಕೂಡಾ ಗೊಂದಲವಿದೆ. ನಮ್ಮ ಆಚರಣೆಗಳು ಅರ್ಥವಿಲ್ಲದ್ದು. ಮೌಢ್ಯದಿಂದ ಕೂಡಿದ್ದು…. ಇತ್ಯಾದಿ. ನಮ್ಮ ಸುಶೀಕ್ಷಿತ ಜನರೂ ಕೂಡ ಇದನ್ನೇ ಪುನರುಚ್ಚರಿಸುತ್ತಿದ್ದಾರೆ. ಆದರೆ ಇದು ನಿಜ ಅಲ್ಲ. ಇವು ಕೇವಲ ಪಾಶ್ಚಾತ್ಯರಿಗೆ ನಮ್ಮ ಸಂಸ್ಕೃತಿಯ ಕುರಿತಾದ ಅನುಭವಗಳು. ಅವರ ಅನುಭವಗಳೇ ನಮಗೆ ಆದರ್ಶವಾಗಿದೆ.ಬೆಲ್ಜಿಯಂನ ಗೆರಿಟ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಾಲಗಂಗಾಧರ ಅವರು ಈ ಕುರಿತು ದೀರ್ಘ ಸಂಶೋಧನೆ ಮಾಡಿದ್ದಾರೆ. ಇವರ ಸಂಶೋಧನೆ ಭಾರತೀಯ ಸಂಸ್ಕೃತಿಯ ಮೇಲೆ ಹೊಸ ಬೆಳಕು ಚೆಲ್ಲಲಿದೆ.
ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ತಪ್ಪು ತಿಳುವಳಿಕೆ ಹೇಗೆ ಜೀವನದ ಬೇರೆ ಬೇರೆ ರಂಗದ ಮೇಲೆ ಅಡ್ಡ ಪರಿಣಾಮ ಮಾಡಿದೆ ಎಂಬ ಬಾಲಗಂಗಾಧರರ ವಾದವನ್ನು ಸರಳವಾಗಿ ಅನುಭವಕ್ಕೆ ದಕ್ಕುವಂತೆ ನಿರೂಪಿಸಲಿದ್ದಾರೆ ರಮಾನಂದ ಐನಕೈ. ಹೊಸ ಅಂಕಣ ‘ಸಂಸ್ಕೃತಿ ಸಂಕಥನ’ ಆರಂಭವಾಗಲಿದೆ.
ಇದು ಹೇಳುವಷ್ಟು ಸುಲಭವಲ್ಲ. ಆದರೂ ಒಂದು ಕ್ಷಣ ವರ್ತಮಾನದ ನಮ್ಮ ಸಿದ್ಧ ನಂಬಿಕೆಗಳನ್ನು ಪೂರ್ವಾಗ್ರಹಗಳನ್ನು ಬದಿಗಿಟ್ಟು ಮುಂದುವರಿಯೋಣ.
ಕಳೆದ ೬೦ ವರ್ಷಗಳ ನಮ್ಮ ಸ್ವತಂತ್ರ ಭಾರತದಲ್ಲಿ ನೂರಾರು ರೀತಿಯ ಮನಸ್ಸುಗಳು ಬೆಳೆಯುತ್ತ ಬಂದಿವೆ. ಪ್ರತಿಯೊಂದು ಮನಸ್ಸೂ ತನ್ನದೇ ರೀತಿಯ ವೈಚಾರಿಕ ಹಾಗೂ ಮಾನಸಿಕ ಸಾಮ್ರಾಜ್ಯವನ್ನು ಕಟ್ಟಿಕೊಂಡಿದೆ ಹಾಗೂ ಅದೇ ಅಂತಿಮ ಸತ್ಯ ಎಂದು ಪ್ರತಿಪಾದಿಸುತ್ತಲಿದೆ.ಈ ಕಾರಣಕ್ಕಾಗೇ ದೇಶದಲ್ಲಿ ಅಸಂಖ್ಯಾತ ವೈವಿಧ್ಯಮಯ ಸಮಸ್ಯೆಗಳು ಇನ್ನೂ ಜೀವಂತವಾಗಿವೆ. ಇವುಗಳನ್ನೆಲ್ಲ ಸೇರಿಸಿ ನಾವು ಮುಖ್ಯವಾಗಿ ಎರಡು ರೀತಿಯ ಮನಸ್ಸುಗಳನ್ನು ಗುರುತಿಸೋಣ.
ಅಷ್ಟಕ್ಕೂ,ಈ ಪ್ರಜಾಪ್ರಭುತ್ವ ಅಂದರೇನು!?
– ರಾಕೇಶ್ ಶೆಟ್ಟಿ
ಮನಮೋಹನರಿಗಿಂತ ಅಡಾಲ್ಫ್ ಹಿಟ್ಲರ್ ಮೇಲು…!
ದೇಶಕ್ಕಾದ ಅವಮಾನಕ್ಕೆ ಪ್ರತಿಯಾಗಿ ನಂಜು ಕಾರುತಿದ್ದ ಅಡಾಲ್ಫ್ ಹಿಟ್ಲರ್ ಅನ್ನುವ ರಕ್ತ ಪಿಪಾಸು ಸರ್ವಾಧಿಕಾರಿಯನ್ನ, ದೇಶ ಭ್ರಷ್ಟಚಾರದಲ್ಲಿ ಮುಳುಗೇಳುತಿದ್ದರೂ ಸಂಬಂಧವೇ ಇಲ್ಲದಂತಿರುವ,ಕಣ್ಣೆದುರೇ ಅನಾಚಾರ ನಡೆಯುತಿದ್ದರು ಕಣ್ಮುಚ್ಚಿ ಕುಳಿತಿರುವ ಪ್ರಾಮಾಣಿಕ ಪ್ರಧಾನಿ ಮನಮೋಹನರಿಗೆ ಹೋಲಿಸಿದ್ದು ಅತಿಯಾಯ್ತು ಅನ್ನಿಸುತ್ತೆ ಅಲ್ವಾ?
ಹಾಗಿದ್ರೆ, ಅಣ್ಣಾ ಸತ್ಯಾಗ್ರಹ ಮಾಡಿ ಮೊಂಡ ಸರ್ಕಾರವನ್ನ ಮಂಡಿಯೂರಿಸಿದಾಗ ’ಓ! ಸರ್ಕಾರ ಈ ತರ ಬಗ್ಗಿದರೆ, ಎಲ್ಲರೂ ಸತ್ಯಾಗ್ರಹ ಮಾಡಿ ಸರ್ಕಾರವನ್ನ ಬ್ಲಾಕ್ ಮೇಲ್ ಮಾಡಲು ಶುರು ಮಾಡುತ್ತಾರೆ!’ ಅಂತ ಆತಂಕ ಪಡುವವರನ್ನ ಕಂಡಾಗ; ’ಪ್ರಜಾಪ್ರಭುತ್ವವಲ್ಲದ ಭ್ರಷ್ಟಚಾರ ಮುಕ್ತ ಸರ್ಕಾರಕ್ಕಿಂತ, ಭ್ರಷ್ಟಚಾರವಿರುವ ಪ್ರಜಾಪ್ರಭುತ್ವ ಸರ್ಕಾರವೇ ಮೇಲು’ ಅನ್ನುವಂತ ಲೇಖನವನ್ನ ಓದಿದಾಗ; ಪ್ರಬಲ ಜನಲೋಕಪಾಲ ಮಸೂದೆಗಾಗಿ ನಡೆಯುತ್ತಿರುವ ಹೋರಾಟ ’ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸುತ್ತಿದೆ’ ಅಂತ ಕೆಲ ಮಂದಿ ಗುಲ್ಲೆಬ್ಬಿಸುತ್ತಿರುವುದನ್ನ ನೋಡಿದಾಗ ಇದೂ ಅತಿಯಾಯ್ತು ಅನ್ನಿಸುವುದಿಲ್ವಾ?
ಅಷ್ಟಕ್ಕೂ,ಜನರಿಂದ ಆರಿಸಿ ಬಂದ ಸರ್ಕಾರ ತನ್ನ ಪಾಲಿನ ಕೆಲಸವನ್ನ ತಾನು ಸರಿಯಾಗಿ ಮಾಡುತಿದ್ದರೆ ಅಣ್ಣಾ ಹಜ಼ಾರೆ ಯಾಕೆ ಬರಬೇಕಿತ್ತು? ಕಫ್ಫು ಹಣದ ಕಳ್ಳರ ಹೆಸರನ್ನ ಬಾಯ್ಬಿಡಿ ಅಂದಾಗ ’ಅವೆಲ್ಲ ಆಗಲಿಕ್ಕಿಲ್ಲ’ ಅಂತ ವಿತ್ತ ಸಚಿವ ಅಂದ ಮೇಲೆ ತಾನೇ ಜನರ ಪಿತ್ತ ನೆತ್ತಿಗೇರಿದ್ದು? ಸುಪ್ರೀಂ ಕೋರ್ಟ್ ತಪರಾಕಿ ಹಾಕಿದ ಮೇಲೆಯೆ ತೆರಿಗೆ ಕಳ್ಳ ಹಸನ್ ಅಲಿಯನ್ನ ಬಂಧಿಸಿದ್ದೇಕೆ? ಕಳೆದ ಚುನಾವಣೆಗಿಂತಲೂ ಮೊದಲೇ 2G ಹಗರಣ ಬಾಯ್ತೆರೆದು ನಂತರವೂ ಅದೇ ರಾಜನನ್ನ ಮತ್ತೆ ಕರೆದು ಮತ್ತದೇ ಖಾತೆಯನ್ನ ವಹಿಸಿದ ಸರ್ಕಾರಕ್ಕೆ ನೈತಿಕತೆಯಿದಯೇ? ಈಗ ಆತಂಕ ಪಡುತ್ತಿರುವ ಪ್ರಜಾಪ್ರಭುತ್ವದ ಕಾವಲು ಭಟರೆಲ್ಲ ಆಗ ಏನು ಮಾಡುತಿದ್ದರು?ಎಲ್ಲಿದ್ದರು?
ದಿಲ್ಲಿಯ ’ಹುಳಿ ದ್ರಾಕ್ಷೆ’ ಹಿಡಿಯಲು ಹೋಗಿ
ದಿಲ್ಲಿ ಕನ್ನಡದ ಪತ್ರಕರ್ತರಿಗೆ ದೂರ. 3000 ಕಿ.ಮೀ. ಅಷ್ಟೇ ಅಲ್ಲ. ಅದರಾಚೆಗೂ ದೂರ. ಕನ್ನಡದ ಪತ್ರಕರ್ತರು ದಿಲ್ಲಿಯಲ್ಲಿ ಹೆಜ್ಜೆ ಗುರುತು ಮೂಡಿಸುವುದು ಸುಲಭದ ಮಾತಲ್ಲ. ಏರು ಬಿಸಿಲು ಅಥವಾ ತೀವ್ರ ಚಳಿಯಲ್ಲಿ ನಿರಂತರ ಆಲೂ ಪಲ್ಯವನ್ನೂ ಅರಗಿಸಿಕೊಳ್ಳುತ್ತಲೇ ಇರಬೇಕು.
ದಿಲ್ಲಿಯ ಆಡುಭಾಷೆ ಹಿಂದಿ – ಉರ್ದು ಮಾತ್ರ. ಇಂಗ್ಲೀಷು ಅಷ್ಟಕ್ಕಷ್ಟೆ. ಇನ್ನು ಕನ್ನಡದ ಕಥೆ? ಪತ್ರಿಕಾರಂಗವೇನು? ಸುಪ್ರೀಂ ಕೋರ್ಟು, ಪಾರ್ಲಿಮೆಂಟು, ಐಎ ಎಸ್ ಲಾಬಿಯಲ್ಲಿಯೂ ಕನ್ನಡದ ಧ್ವನಿ ಕ್ಷೀಣವೇ.
ಕನ್ನಡದ ಪತ್ರಿಕೋದ್ಯಮಕ್ಕೆ ‘ಕೊಂಬು-ಕಹಳೆ’ ಎಲ್ಲ ಆದವರೂ ದಿಲ್ಲಿಯಲ್ಲಿ ಏನೂ ಅಲ್ಲ.
ದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ಅಂದರೆ ಅದು ಅಡ್ವಾಣಿಯದ್ದೋ – ಪ್ರಕಾಶ್ ಕಾರಟರದ್ದೋ – ಚಿದಂಬರರದ್ದೋ – ಯಾವುದೇ ರಾಷ್ಟ್ರೀಯ ನಾಯಕರದ್ದಾಗಲಿ. ಅಂದೊಂದು ಮದುವೆ ಮನೆಯ ಬಾಬತ್ತು. ಬರೋಬ್ಬರಿ 600 ಜನ. ಇಂಗ್ಲೀಷ್ ಚಾನೆಲ್ ಗಳು, ಹಿಂದಿ ಚಾನೆಲ್ ಗಳು, ರಾಷ್ಟ್ರೀಯ ಪತ್ರಿಕೆಗಳು, ಅವರವರ ಕ್ಯಾಮರಾಮೆನ್ ಗಳು, ಮೈಕ್‍ಮೆನ್ ಗಳು, ಅದರಾಚೆಗೆ ಎಲ್ಲೋ ಕಳೆದು ಹೋಗುವ ಕನ್ನಡದ ಪತ್ರಕರ್ತ. ಪ್ರಶ್ನೆ ಕೇಳುವುದು, ಉತ್ತರ ಬರೆಯುವುದು ದೂರದ ಮಾತು. ಎಷ್ಟು ದೂರವೆಂದರೆ ದೆಲ್ಲಿಯ ನಮ್ಮ ಧ್ವನಿಗಳು ಆ ಬಾಬತ್ತಿನ ತನಕ ಹೋಗುವುದೇ ಇಲ್ಲ. ದಿಲ್ಲಿಯ ತಮ್ಮ ಮನೆಯಲ್ಲಿಯೇ ಕೂತು NDTVಯದೋ ಆಜ್ ತಕ್ ನದೋ Direct Rellay ನೋಡ್ತಾ ನೋಡ್ತಾನೇ ಇವರು ಸುದ್ದಿ ಕೊಟ್ಟು ಕೈತೊಳೆದುಕೊಳ್ಳುತ್ತಾರೆ. ಮತ್ತಷ್ಟು ಓದು 
ಜನರೆಂದರೆ ಯಾರ್ ಯಾರು ಕಾಗೇರಿಯವರೇ?
ಇವತ್ತಿನ (೦೩.೦೭.೨೦೧೧ರ) ಕನ್ನಡಪ್ರಭ ದಿನಪತ್ರಿಕೆಯ ಒಂಬತ್ತನೇ ಪುಟದಲ್ಲಿ ಮಾನ್ಯ ಶಿಕ್ಷಣಮಂತ್ರಿಗಳಾದ ಶ್ರೀ ವಿಶ್ವೇಶ್ವರಹೆಗ್ಡೆ ಕಾಗೇರಿಯವರ “ಬುಲೆಟ್ ಸಂದರ್ಶನ“ವೊಂದು ಪ್ರಕಟವಾಗಿದೆ. ಸರ್ಕಾರ ಇಂಗ್ಲೀಶ್ ಮಾಧ್ಯಮ ಶಾಲೆಗಳನ್ನು ತೆರೆಯುವ ಬಗ್ಗೆ ಚರ್ಚೆ ಆರಂಭಿಸಿರುವ ಹಿನ್ನೆಲೆಯಲ್ಲಿ ಇದು ಕುತೂಹಲಕರವಾಗಿದ್ದು, ಒಂದು ಥರ ಸರ್ಕಾರದ ಮುಂದಿನ ನಡೆಯ ದಿಕ್ಸೂಚಿಯೂ ಆಗಿದೆ. ಇಡೀ ಸಂದರ್ಶನದ ಪ್ರಮುಖ ಮಾತುಗಳು ಇಂತಿವೆ.
ಸಾಹಿತಿಗಳಷ್ಟೇ… ಜನತೆಯಲ್ಲ!
ತಮ್ಮ ಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳಲು ಯಾವ ಮಟ್ಟಕ್ಕಾದರೂ ಇಳಿಯಲು ತಾವು ಸಿದ್ಧ ಎಂಬುದನ್ನು ಮಂತ್ರಿಗಳು ಸಾಬೀತು ಮಾಡುತ್ತಿರುವಂತೆ ಇವರ ಮಾತುಗಳಿವೆ. ಇಂಗ್ಲೀಶ್ ಮಾಧ್ಯಮ ಶಾಲೆಗಳಿಗೆ ಸಾಹಿತಿಗಳು ಮಾತ್ರಾ ವಿರೋಧ ತೋರಿಸಿದ್ದಾರೆ, ಇವರಷ್ಟೇ ನಾಡಿನ ಜನತೆಯಲ್ಲ… ಹಳ್ಳಿಗಾಡಿನ ಜನರೂ ಕೂಡಾ ಅವರ ಅಭಿಪ್ರಾಯ ಹೇಳಲಿ… ಇತ್ಯಾದಿಯಾಗಿ ಮಂತ್ರಿಗಳು ಮಾತಾಡಿದ್ದಾರೆ. ಇದಲ್ಲದೆ ಮಾಧ್ಯಮಗಳಿಗೆ ಜನರ ಅಭಿಪ್ರಾಯ ನಿರೂಪಿಸುವ ಹೊಣೆಗಾರಿಕೆಯನ್ನೂ ವಹಿಸಿದ್ದಾರೆ. ಈ ಪ್ರಯತ್ನವು ಸಾಹಿತಿಗಳ ಬಾಯಿ ಮುಚ್ಚಿಸುವ “ನಿಮ್ಮ ಮಕ್ಕಳು ಇಂಗ್ಲೀಶ್ ಮಾಧ್ಯಮದಲ್ಲಿ ಓದಬಹುದು, ಬಡವರ ಮಕ್ಕಳು ಓದಬಾರದಾ?” ಎಂಬಂತಹ ಮತ್ತೊಂದು ಅಸ್ತ್ರವಾಗಿದೆ. ಇರಲಿ… ಕಾಗೇರಿಯವರು ಆಡಿರುವ ಮಾತುಗಳತ್ತ ನೋಡೋಣ.






