ಇಸ್ರೇಲಿನಲ್ಲಿ ಮೈಸೂರಿನ ಅಶ್ವಾರೂಢರ ಅಟ್ಟಹಾಸ
– ವಿಂಗ್ ಕಮಾಂಡರ್ ಸುದರ್ಶನ
sudarshanbadangod@gmail.com
1914 ರಲ್ಲಿ ಮೈಸೂರಿನ ಮಹರಾಜರಾದ ನಾಲ್ಮಡಿ ಕೃಷ್ಣರಾಜ ಒಡೆಯರ ಸೈನ್ಯದಲ್ಲಿ ಒಂದು ವಿಶೇಷ ಅಶ್ವಾರೂಢರ ದಳವಿತ್ತು. 29 ಸೈನ್ಯಾಧಿಕಾರಿಗಳ, 444 ಅಶ್ವಯೋಧರೊಂದಿಗೆ 526 ಶ್ರೇಷ್ಠ ಅರಬ್ಬೀ ಕುದುರೆಗಳ ಈ ಪಡೆಗೆ ವಿಶೇಷ ಗೌರವವಿತ್ತು. ಆಗಾಗಲೇ ಫಿರಂಗಿಗಳ, ಮಷೀನುಗನ್ನುಗಳ ಆಗಮನವಾಗಿ, ಕುದುರೆಗಳ ನಾಗಾಲೋಟದ, ಖರಪುಟದ ಶಬ್ದದ ಕಾಲ ಮುಗಿದೇ ಬಿಡ್ತೇನೋ ಎನ್ನುವ ಸಮಯವದು. ಹೈದ್ರಾಬಾದಿನ ನಿಜಾಮರ ಮತ್ತು ರಾಜಾಸ್ಥಾನದ ರಾಜರ ಸೈನ್ಯಗಳನ್ನು ಹೊರತು ಪಡಿಸಿದರೆ ಬೇರೆಲ್ಲೆಡೂ ಆಶ್ವಾರೂಢದ ದಳವೇ ಇರಲಿಲ್ಲ. ಮತ್ತಷ್ಟು ಓದು 
ರಾಜೀವ್ ಮಲ್ಹೋತ್ರ ಸಂವಾದ : ಭಾಗ ೨
ಆಂಗ್ಲಮೂಲ : ಶ್ರೀ ರಾಜೀವ್ ಮಲ್ಹೋತ್ರ
ಕನ್ನಡ ಅನುವಾದ : ಶ್ರೀ ಹುಲ್ಲುಮನೆ ಶ್ರೀಧರ
ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1
ಉದಾರವಾದಿಗಳು ಮತ್ತು ಕ್ರಿಶ್ಚಿಯನ್ ಮತಕ್ಕೆ ಸೇರಿಸಿಕೊಳ್ಳುವ/ ಪ್ರಚಾರಕರ (ಇವಾನ್ಜಲಿಸ್ಟ್‌ಗಳ) ನಡುವೆ ಹೊಂದಾಣಿಕೆ:
ಬ್ರಿಟಿಷ್ ಸಂಸತ್ತಿನಲ್ಲಿ ಎಡ್ವಿನ್ ಬೆರ್ಕ್ ಸ್ಪಷ್ಟವಾಗಿ ಹೇಳಿದ್ದಿದೆ- ’ಓಕ್ ಮರಗಳನ್ನು ಥೇಮ್ಸ್ ನದಿಯ ದಂಡೆಯಿಂದ ತೆಗೆದುಕೊಂಡು ಹೋಗಿ ಗಂಗಾನದಿಯ ದಂಡೆಯುದ್ದಕ್ಕೂ ನೆಡಲಾಗದು’ ಎಂದು. ಭಾರತೀಯ ಸಂಸ್ಥಾನಗಳು ಭಾರತೀಯರ ಅಗತ್ಯಗಳನ್ನು ಪೂರೈಸುತ್ತಿದ್ದವು. ಆ ಸಂಸ್ಥೆಗಳಲ್ಲಿ ಪುನರುಜ್ಜೀವನದ ಅಗತ್ಯವಿತ್ತೇ ವಿನಃ ಅವುಗಳನ್ನು ಬದಲಿಸುವ ಅಗತ್ಯವಿರಲಿಲ್ಲ. ಆಂಗ್ಲರಲ್ಲಿ, ಸಂಸತ್ತಿನಲ್ಲಿ ಹಾಗೂ ಭಾರತದ ಆಂಗ್ಲ ಅಧಿಕಾರಿಗಳಲ್ಲಿ ಒಂದು ಬಲವಾದ ಗುಂಪಿದ್ದು ಅವರು ಭಾರತೀಯ ಸಂಸ್ಥಾನಗಳನ್ನು ಮರುನಿರ್ಮಾಣ ಮಾಡಲಿಚ್ಛಿಸಿದ್ದರು. ನಮ್ಮ ಕುತೂಹಲಕ್ಕೆ ’ಸಂಪ್ರದಾಯವಾದಿಗಳು’ (ಕನ್ಸರ್ವೇಟಿವ್‌ಗಳು) ಗಂಭೀರತೆಯಿಂದ ಭಾರತೀಯ ಸಂಸ್ಥಾನಗಳನ್ನು ಹೇಗಿದ್ದವೋ ಹಾಗೆಯೇ ಬಿಡಬೇಕೆನ್ನುತ್ತಿದ್ದರು. ’ಆಂಗ್ಲ ಉದಾರವಾದಿಗಳು’ ಭಾರತದ ಸಂಸ್ಥಾನಗಳನ್ನು ಗೊಂದಲಮಯವಾಗಿಸಲು/ ಅವ್ಯವಸ್ಥಿತಗೊಳಿಸಲು ಇಚ್ಛಿಸಿದ್ದರು. ಮತ್ತಷ್ಟು ಓದು 
ಅನಾಣ್ಯೀಕರಣ, ಎಡಪಂಥೀಯ ಬುದ್ಧಿಜೀವಿಗಳು ಮತ್ತು ಮಾಧ್ಯಮಗಳು
ಜಿ. ಪದ್ಮನಾಭನ್
ಸಹಾಯಕ ಪ್ರಾಧ್ಯಾಪಕ
ತಮಿಳು ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗ
ದ್ರಾವಿಡ ವಿಶ್ವವಿದ್ಯಾಲಯ,
ಕುಪ್ಪಂಆಂಧ್ರ ಪ್ರದೇಶ.
[ತಮಿಳಿನ ಖ್ಯಾತ ಸಾಹಿತಿ, ಚಿಂತಕ ಬಿ.ಜಯಮೋಹನ್‍ರವರು, ಈ ಹಿಂದೆ ತಮ್ಮ ವೆಬ್‍ಸೈಟ್‍ನಲ್ಲಿ ಅನಾಣ್ಯೀಕರಣ ಮತ್ತು ಬುದ್ಧಿಜೀವಿಗಳ ದ್ವಿಮುಖ ನೀತಿಯ ಬಗೆಗಿನ ಲೇಖನವೊಂದನ್ನು ಪ್ರಕಟಿಸಿದ್ದರು. ಅದನ್ನು ದ್ರಾವಿಡ ವಿಶ್ವವಿದ್ಯಾಲಯದ, ತಮಿಳು ಬಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ, ಸಹಾಯಕ ಪ್ರಾಧ್ಯಾಪಕ ಶ್ರೀ ಜಿ.ಪದ್ಮನಾಭನ್ ಅವರು ಕನ್ನಡಕ್ಕೆ ತಂದಿದ್ದಾರೆ. ಅನಾಣ್ಯೀಕರಣಕ್ಕೆ ಒಂದು ವರ್ಷ ಸಂದ ಹಿನ್ನೆಲೆಯಲ್ಲಿ ಈ ಲೇಖನ ಮತ್ತೆ ಚರ್ಚೆಯಾಗುತ್ತಿದೆ.] ಮತ್ತಷ್ಟು ಓದು 
ಉತ್ತರ ಸಿಗದ ನನ್ನ ಪ್ರಶ್ನೆಗಳು
– ವಿದ್ಯಾ ಕುಲಕರ್ಣಿ
ಜಿಜ್ಞಾಸು, ಪ್ರಬುದ್ಧರ ಚಿಂತನೆ, ಕುಲುಮೆ, ನಿಲುಮೆ ಈ ಗುಂಪುಗಳಲ್ಲಿ ನಾನು ಕೆಲವು ಪ್ರಶ್ನೆಗಳನ್ನು ಕೇಳುತ್ತಲೇ ಬಂದಿದ್ದೇನೆ. ಅವುಗಳಿಗೆ ಯಾರೂ ಸಮರ್ಪಕ ಉತ್ತರ ಕೊಡದೇ ಪುನಃ ಬೇರೆ ಬೇರೆ ಪ್ರಶ್ನೆ ಕೇಳುತ್ತಲೇ ಹೋಗುತ್ತಾರೆ.
ನನ್ನ ಪ್ರಶ್ನೆಗಳಿಗೆ ಉತ್ತರಿಸಿ ಎಂದರೆ “ಉತ್ತರಿಸಿದ್ದೇನೆ. ನಿಮಗೆ ತಿಳಿಯದಿದ್ದರೆ ಏನು ಮಾಡಲಿ??” “ನಿಮಗೆ ಗ್ರಹಿಸುವ ಶಕ್ತಿ ಇಲ್ಲ ಏನು ಮಾಡಲಿ?” ಇತ್ಯಾದಿ ಹಾರಿಕೆಯ ಉತ್ತರ ಕೊಡುತ್ತಾರೆ. ಹಾಗಿದ್ದರೆ ನನ್ನ ಪ್ರಶ್ನೆಗಳಾದರೂ ಏನು??
ಪುನಃ ಅದೇ ಪ್ರಶ್ನೆಗಳನ್ನು ಕ್ರೋಢೀಕರಿಸಿ ನಂಬರ್ ಕೊಟ್ಟು ಕೇಳುತ್ತಿದ್ದೇನೆ. ಈಗಲಾದರೂ ಉತ್ತರಿಸುವ (ನಂಬರ್ ಪ್ರಕಾರ ಉತ್ತರಿಸುವ) ಸೌಜನ್ಯ ಯಾರಾದರೂ ತೋರಿಸುತ್ತೀರಾ?? ಮತ್ತಷ್ಟು ಓದು 
ಆಧ್ಯಾತ್ಮಿಕ ಪ್ರಗತಿ ಮತ್ತು ಭಾರತೀಯ ಸಂಸ್ಕೃತಿ
ಡಾ. ಸಂತೋಷ್ ಕುಮಾರ್ ಪಿ.ಕೆ
ಶಿವಮೊಗ್ಗ.
ದೀನ್ ದಯಾಳ್ ಉಪಾಧ್ಯಾಯ, ಪ್ರಾಯಶಃ ಇವರ ಹೆಸರನ್ನು ನಮ್ಮ ಪೀಳಿಗೆ ಹೆಚ್ಚಾಗಿ ಕೇಳಿಲ್ಲ ಎಂದರೂ ತಪ್ಪಾಗಲಾರದು. ಇಂದಿನ ಭಾರತೀಯ ಜನತಾ ಪಕ್ಷದ ಮೂಲ ಪಕ್ಷವಾದ ಜನಸಂಘವನ್ನು ಸ್ಥಾಪಿಸಿದ ಮಹಾ ನಾಯಕ ದೀನ್ ದಯಾಳ್ ರವರು. ಯಾವುದೋ ರಾಜಕೀಯ ಲಾಭ ಅಥವಾ ವೈಯುಕ್ತಿಕ ಹಿತಾಸಕ್ತಿಗೋಸ್ಕರ ರಾಜಕೀಯ ಪಕ್ಷವನ್ನು ಅವರು ಹುಟ್ಟುಹಾಕಲಿಲ್ಲ. ಬದಲಾಗಿ, ಅವರಲ್ಲಿದ್ದ ಅಧಮ್ಯ ರಾಷ್ಟ್ರಪ್ರೇಮ ಹಾಗೂ ರಾಜಕೀಯ ಸ್ಥಿತ್ಯಂತರಗಳನ್ನು ಸಕಾರಾತ್ಮಕ ದಿಕ್ಕಿಗೆ ತೆಗೆದುಕೊಂಡು ಹೋಗುವ ಇರಾದೆಯಿಂದ ರಾಜಕೀಯ ಪಕ್ಷವನ್ನು ಕಟ್ಟಿದರು. ಇಂದಿನ ಬಹುತೇಕ ರಾಜಕಾರಣಿಗಳಿಗೆ ರಾಜಕಾರಣ ಮಾಡುವುದರಲ್ಲಿ ಕೌಶಲ್ಯವಿದೆಯೇ ಹೊರತು, ರಾಜಕೀಯವನ್ನು ಏಕೆ ಮಾಡಬೇಕು, ಅದರ ಫಲಿತಾಂಶಗಳೇನು ಎನ್ನುವ ಸಮಗ್ರ ಜ್ಞಾನ ಇರುವುದು ಅಪರೂಪ. ಆದರೆ ಇದಕ್ಕೆ ವ್ಯತಿರಿಕ್ತ ಎನ್ನುವಂತೆ, ಬಹಳ ಸ್ಪಷ್ಟವಾಗಿ ಸಂಸ್ಕೃತಿ ಹಾಗೂ ರಾಜಕಾರಣದ ಕುರಿತು ಅಪಾರ ಜ್ಞಾನವನ್ನು ಹೊಂದಿದ್ದ ವ್ಯಕ್ತಿ ಎಂದರೆ ಉಪಾಧ್ಯಾಯರು. ಸಂಸ್ಕೃತಿಯ ಆಳ ಅಗಲಗಳನ್ನು ಅಮೂಲಾಗ್ರವಾಗಿ ಬಲ್ಲಂತಹ ಹಾಗೂ ನಿರ್ಧಿಷ್ಟವಾಗಿ ರಾಜಕೀಯ ವ್ಯವಸ್ಥೆಯ ಉದ್ದೇಶ ಹಾಗೂ ಅದು ತಲುಪಬೇಕಾದ ಗುರಿಗಳನ್ನು ಸ್ಪಷ್ಟೀಕರಿಸಿದ ಮೊದಲ ಭಾರತೀಯ ವ್ಯಕ್ತಿ ಎಂದರೂ ಅತಿಶಯೋಕ್ತಿಯಾಗಲಾರದು. ಈ ಪುಟ್ಟ ಬರವಣಿಗೆಯಲ್ಲಿ ಅವರ ಕೆಲವು ವಿಚಾರಧಾರೆಗಳನ್ನು ಪರಿಚಯಿಸುವ ಮೂಲಕ ನಮ್ಮ ರಾಜಕೀಯ ವ್ಯವಸ್ಥೆಯನ್ನು ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಲಾಗುತ್ತದೆ. ಮತ್ತಷ್ಟು ಓದು 
ಬುಲೆಟ್, ಬಾಂಬ್, ಕ್ಷಿಪಣಿಗಳ ಯುಗದಲ್ಲಿ ಭಾರತದಲ್ಲೊಂದು “ಬುಲೆಟ್ ಟ್ರೈನ್”.
-ಶ್ರೇಯಾಂಕ ಎಸ್ ರಾನಡೆ.
“ಬುಲೆಟ್” ಎಂಬ ಪ್ರಗತಿಯ ಪಟರಿ(Track):
ವಿಶ್ವದ ಬಹುತೇಕ ರಾಷ್ಟ್ರಗಳು, ಪ್ರದೇಶಗಳು ಒಂದಿಲ್ಲೊಂದು ಕಾರಣದಿಂದ ಬುಲೆಟ್, ಬಾಂಬ್, ಕ್ಷಿಪಣಿಗಳನ್ನು ಹಿಡಿದು ನಿಂತಿವೆ. ಕೆಲವು ಸಾಮ್ರಾಜ್ಯ ವಿಸ್ತರಣೆಗೆ ಅವನ್ನು ಹಿಡಿಯುತ್ತಿದ್ದರೆ ಮತ್ತೆ ಕೆಲವರು ಅವರನ್ನು ತಡೆಯುವುದಕ್ಕಾಗಿಯೋ ಅಥವಾ ತಮ್ಮ ಅಸ್ಮಿತೆಯ ರಕ್ಷಣೆಗಾಗಿಯೋ ಅಥವಾ ತಮ್ಮನ್ನು ನೆಚ್ಚಿದವರನ್ನು ಕಾಪಾಡಲೋ ಹೀಗೆ ಕಾರಣಗಳು ಹಲವಿದ್ದರೂ ಕೈಯಲ್ಲಿರುವುದು ವಿನಾಶಕಾರಿ ಆಯುಧಗಳು. ಸಿರಿಯಾ, ವೆನೆಜುವೆಲಾದಂತಹ ಕಡೆ ನಾಗರಿಕ ಯುದ್ಧವಾಗುತ್ತಿದ್ದರೆ; ಉತ್ತರ ಕೊರಿಯಾ, ಚೀನಾದಂತಹ ದೇಶಗಳು ಆಕ್ರಮಣಕ್ಕಾಗಿ ಸದಾ ಸಿದ್ಧವಾಗಿವೆ. ಭಯೋತ್ಪಾದನೆ, ಮತಾಂಧತೆಯಿಂದ ಮಧ್ಯಪ್ರಾಚ್ಯ, ಪಶ್ಚಿಮ ಏಷ್ಯಾದ ಪರಿಸ್ಥಿತಿ ರಕ್ತದ ಮಡುವಿನಲ್ಲಿ ಮುಳುಗುವಂತೆ ಮಾಡಿದೆ. ಹೀಗೆ ಒಂದಿಲ್ಲೊಂದು ಕಾರಣಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಯ ಬದಲಿಗೆ ಅಧಿಕಾರ ಕೇಂದ್ರಿತ “ಹಿಂಸೆ” ಶಕ್ತಿ ರಾಜಕಾರಣದ ಪ್ರಬಲ ಅಸ್ತ್ರವಾಗಿದೆ. ಮತ್ತಷ್ಟು ಓದು 
ಲಡಾಖ್ ಹಾಗು ಭಾರತೀಯ ಸೇನೆ
– ಪಲ್ಲವಿ ಭಟ್
ಬೆಂಗಳೂರು
ಇದೀಗಷ್ಟೇ ಸ್ವಾತಂತ್ರ್ಯ ದಿನ ಕಳೆದು ಹೋಗಿದೆ. ಪ್ರತಿ ವರುಷದಂತೆ ಈ ಬಾರಿಯೂ ಅದೇ ಸಂಭ್ರಮ ಸಡಗರದಿಂದ ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂಭ್ರಮಗಳೆಲ್ಲಾ ಮುಗಿಯುತ್ತಿದ್ದಂತೆ ಅದೊಂದು ವಾರ್ತೆ ನಮ್ಮ ವಾರ್ತಾಪತ್ರಿಕೆಗಳ ಮುಖಪುಟ ಸೇರಿಕೊಂಡಿತ್ತು. ಇನ್ನೂ ಮಾಸದ ನನ್ನ ಕೆಲ ಹೊಸ ನೆನಪುಗಳನ್ನು ಅದು ಕೆದಕತೊಡಗಿತು. “ಲಡಾಖ್’ನಲ್ಲಿ ಭಾರತ, ಚೀನಾ ಯೋಧರ ಸಂಘರ್ಷ: ಭಾರತದೊಳಗೆ ನುಗ್ಗಲು ಚೀನಾ ಸೈನಿಕರ ಯತ್ನ” ಎಂಬುದಾಗಿತ್ತು ಶೀರ್ಷಿಕೆ. ಲಡಾಖ್ ಪ್ರವಾಸ ಮುಗಿಸಿ ಇನ್ನೂ ೧೦ ದಿನಗಳಾಗಿಲ್ಲ. ಅಷ್ಟರಲ್ಲೇ ಇಂತಹ ವಾರ್ತೆಯನ್ನು ಓದಬೇಕಾಗಿ ಬಂತು. ಮತ್ತಷ್ಟು ಓದು 
ಕೇವಲ ಲಕ್ಷದಷ್ಟು ಇಂಗ್ಲಿಷ್ ಸೈನಿಕರು ಇಡೀ ಭರತಖಂಡವನ್ನು ಬುಗುರಿಯಂತೆ ಆಡಿಸಿದಾದರೂ ಹೇಗೆ?
– ಸುಜಿತ್ ಕುಮಾರ್
ಈಸ್ಟ್ ಇಂಡಿಯಾ ಕಂಪನಿಯಿಂದ ಬ್ರಿಟಿಷ್ ರಾಜ್ ವರೆಗಿನ ನಡೆ.
ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು ಭಾಗವನ್ನು ತನ್ನ ಹಿಡಿತಕ್ಕೆ ಒಳಪಡಿಸಿಕೊಂಡಿತ್ತು ಎಂಬುದೇ ಪ್ರೆಶ್ನೆ. ಇನ್ನು ನಮ್ಮ ಭಾರತದ ವಿಷಯಕ್ಕೆ ಬಂದರೆ ಸಾವಿರಾರು ಮೈಲುಗಳ ದೂರ ಹಡಗುಗಳಲ್ಲಿ ಕ್ರಮಿಸಿ ಭರತಖಂಡವೆಂಬ ವಿಶ್ವದ ಏಳನೇ ಅತಿ ದೊಡ್ಡ ದೇಶವನ್ನು ಒಳಹೊಕ್ಕು ಸುಮಾರು ಇಪ್ಪತೈದು ಕೋಟಿ ಜನರನ್ನು ಸುಮಾರು ಎರಡು ಶತಮಾನಗಳಿಗೂ ಹೆಚ್ಚಿನ ಕಾಲ ಹಿಂಡಿ ಹಿಪ್ಪೆಮಾಡಿಯಾಕಲು ಕೇವಲ ತೋಳ್ಬಲದ ಶಕ್ತಿಯೊಂದೇ ಸಾಕಾಗಿತ್ತೇ ಅಥವಾ ಕಾಲಕ್ಕೆ ತಕ್ಕಂತೆ ಹಂತ ಹಂತವಾಗಿ ಉಸಿರುಗಟ್ಟಿಸುವ ಬೇರೊಂದು ಯುಕ್ತಿಯೇ ಬೇಕಿತ್ತೆ? ಅಂತಹದೊಂದು ಕುತಂತ್ರಿ ಯುಕ್ತಿಯ ಪರಿಣಾಮವೇ ಅಂದು ಕೇವಲ ಲಕ್ಷದಷ್ಟು ಇಂಗ್ಲಿಷ್ ಸೈನಿಕರು ಇಡೀ ಭರತಖಂಡವನ್ನು ಬುಗುರಿಯಂತೆ ಆಡಿಸಲು ಸಾಧ್ಯವಾದದ್ದು. ಮತ್ತಷ್ಟು ಓದು 
ಭಾರತದ ಮುಂದಿರುವ ಡೊಕ್ಲಮ್ ಸವಾಲು…
– ಶ್ರೇಯಾಂಕ ಎಸ್ ರಾನಡೆ
ಡೊಕ್ಲಮ್, ಭಾರತ-ಭೂತಾನ್-ಚೀನಾ ಮೂರು ದೇಶಗಳ ನಡುವಿನ ಬಹು ಆಯಕಟ್ಟಿನ 89 ಚದರ ಕಿಲೋಮೀಟರ್‍ಗಳ ವ್ಯಾಪ್ತಿಯಲ್ಲಿರುವ ಸಂಕೀರ್ಣ ಪ್ರದೇಶ. ಇದು ಭೂತಾನ್‍ನ ಪಶ್ಚಿಮ ಗಡಿ ಭಾಗದಲ್ಲಿದೆ. ಅಂದರೆ ಟಿಬೆಟ್‍ನ ಆಗ್ನೇಯ ದಿಕ್ಕಿನಲ್ಲಿದೆ. ಮುಖ್ಯವಾಗಿ ಇದು ಭಾರತಕ್ಕೆ ಮುಖ್ಯವಾಗಿರುವ ಚುಂಬಿ ಕಣಿವೆಯ ಸಂಯೋಗ ಸ್ಥಾನದಲ್ಲಿದೆ. ಅದು ಅಧಿಕೃತವಾಗಿ ಭೂತಾನ್‍ನ ಭೂಭಾಗ. ಅನೇಕ ಕಾರಣಗಳಿಂದ ಮೂರು ದೇಶಗಳಿಗೂ ಬಹುಮುಖ್ಯ ಭೂಪ್ರದೇಶ. ಈ ಪ್ರದೇಶದ ಮೇಲೆ ಹಿಡಿತ ಸಾಧಿಸುವುದೆಂದರೆ ಸಿಕ್ಕಿಂನ ಬಹು ಮೌಲ್ಯಯುತ ಚುಂಬಿ ಕಣಿವೆ, ಭೂತಾನ್ ಹಾಗೂ ಇನ್ನೂ ಮುಖ್ಯವಾಗಿ ಸಿಲಿಗುರಿ ಕಾರಿಡಾರ್ ಮುಖೇನ ಈಶಾನ್ಯ ಭಾರತದ ಎಲ್ಲಾ ಚಟುವಟಿಕೆಗಳ ಪ್ರತ್ಯಕ್ಷ ನಿಗಾ ಹಾಗೂ ಪರೋಕ್ಷವಾಗಿ ತಮ್ಮ ಹಿತಾಸಕ್ತಿಗಳಿಂದ ಪ್ರಾದೇಶಿಕ ಪ್ರಾಬಲ್ಯ ಪಡೆದಂತಾಗುತ್ತದೆ. ಹಾಗಾಗಿಯೇ ಇದು ಕೇವಲ ಮೇವು ಬೆಳೆಯುವ ಖಾಲಿ ಗುಡ್ಡದ ನಿಸ್ತೇಜ ಜಾಗವಲ್ಲ. ಮೂರು ದೇಶಗಳ ಮೇಲೆ ಪ್ರಾಬಲ್ಯ ಸಾಧಿಸಬಲ್ಲ ಶಕ್ತಿಯುಳ್ಳ ಆರ್ಥಿಕ, ರಾಜಕೀಯ, ರಾಜತಾಂತ್ರಿಕ ಮತ್ತು ಮಿಲಿಟರಿ ಕಾರಣಗಳಿಂದ ಶಕ್ತಿಸಂಪನ್ನವಾಗಿರುವ ಸುರಕ್ಷಿತ, ಅನುಕೂಲಕರ ತಾಣ. ಈ ಮೂಲಭೂತ ಉದ್ದೇಶದಿಂದ ಇದರ ಮೇಲೆ ಚೀನಾ ಹಾಗೂ ಭಾರತ ಅಪಾರ ಆಸಕ್ತಿ ವಹಿಸಿವೆ. ಮತ್ತಷ್ಟು ಓದು 
ಚೀನಾದೊಂದಿಗೆ ಭಾರತಕ್ಕೆ ಯುದ್ಧ ಬೇಕೆ?
– ಶ್ರೇಯಾಂಕ ಎಸ್ ರಾನಡೆ
ಯುದ್ಧವಾಗಲಿದೆ. ಯುದ್ಧಕ್ಕೆ ಸನ್ನದ್ಧ. ಇನ್ನೇನು ಯುದ್ಧ ಆಗೇ ಬಿಟ್ಟಿತು. ನಾಳೆಯೇ ಯುದ್ಧ ಎಂಬಂತಹ ಪರಿಸ್ಥಿತಿಗಳು ಭಾರತ-ಚೀನಾದ ಮಧ್ಯೆ ಉದ್ಭವವಾಗಿರುವುದು ಇದೇ ಮೊದಲೇನಲ್ಲ. ಜನರ ಗಮನಕ್ಕಾಗಿ ಹಾತೊರೆಯುವ ಎರಡೂ ಕಡೆಯ ಆಕ್ರಮಣಕಾರಿ ಮಾಧ್ಯಮಗಳು, ಅವನ್ನೇ ನೆಚ್ಚಿಕೊಂಡು ವಾಸ್ತವತೆಯ ಕನಿಷ್ಟ ಮಾಹಿತಿಯೂ ಇಲ್ಲದ ದೇಶಭಕ್ತರು ಅದಾಗಲೇ ಯುದ್ಧಕ್ಕೆ ರಣಕಹಳೆಯನ್ನು ಮೊಳಗಿಸಿಯಾಗಿದೆ. ಇನ್ನು ಬಾಕಿಯಿರುವುದು ಕೇವಲ ಸೇನೆಗಳ ಗುಂಡಿನ ದಾಳಿಯಷ್ಟೇ! ಮತ್ತು ಭಾರತದ ಗೆಲುವಷ್ಟೇ. ಹೀಗೆ ಆಗಬೇಕೆನ್ನುವುದು ಎಲ್ಲಾ ಭಾರತೀಯರ ಆಸೆಯೂ ಕೂಡ. ಮತ್ತಷ್ಟು ಓದು 




