ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

17
ಆಗಸ್ಟ್

ಸ್ವಾತಂತ್ರ್ಯದ ಒಕ್ಕೊರಲ ರಾಗ “ರಾಗ್ ದೇಶ್”

– ಶ್ರೇಯಾಂಕ ಎಸ್ ರಾನಡೆ.

ಭಾರತ ದೇಶಕ್ಕೆ ಸ್ವಾತಂತ್ರ್ಯ ಹೇಗೆ ಬಂತು? ಈ ಪ್ರಶ್ನೆಯನ್ನು ನಿಮ್ಮ ಆಪ್ತರ, ಸಹೋದ್ಯೋಗಿಗಳ ಹಾಗೂ ಯಾವುದೇ ವಿದ್ಯಾರ್ಥಿಗಳ ಬಳಿ ಕೇಳಿ ನೋಡಿ. ಅದಕ್ಕೆ ನಿಮಗೆ ಸಿಗುವ ಉತ್ತರ ಗಾಂಧೀಜಿ ಕೇಂದ್ರಿತವಾಗಿರುತ್ತದೆ. ಖಂಡಿತವಾಗಿಯೂ ಸ್ವಾತಂತ್ರ್ಯ ಚಳುವಳಿಯ ಕೊನೆಯ ಘಟ್ಟದಲ್ಲಿ 1915-1947 ಗಾಂಧೀಜಿಯ ಪಾಲು ಬಹುಮುಖ್ಯವಾದದ್ದು. ಆದರೆ ಈ ದೇಶದ ಜನರ ಆಸ್ಥೆ, ಗಾಂಧೀಜಿಯ ಅಹಿಂಸಾ ಸತ್ಯಾಗ್ರಹ ಮಾತ್ರವೇ ದಪ್ಪ ಚರ್ಮದ ಬ್ರಿಟಿಷರ ಸೊಕ್ಕು ಮುರಿಯಲಿಲ್ಲ. ಅನೇಕ ಕ್ರಾಂತಿಕಾರಿಗಳು, ಸಣ್ಣ-ಪುಟ್ಟ ಹಳ್ಳಿ, ಪ್ರಾಂತ್ಯ-ಪ್ರದೇಶಗಳಲ್ಲಿ ರೈತ, ಬುಡಕಟ್ಟು ಹೀಗೆ ಅಸಂಖ್ಯಾತ ಜನರು ಆಗಾಗ್ಗೆ ಇಂಗ್ಲೀಷರ ಅಹಂಕಾರಕ್ಕೆ ಪೆಟ್ಟುಕೊಟ್ಟರೆ; ಹೊರಗಿನಿಂದ ನೇರವಾಗಿ ಹಾಗೂ ಒಳಗಿನಿಂದ ಪರೋಕ್ಷವಾಗಿ ಬ್ರಿಟಿಷರ ಸೊಕ್ಕನ್ನು, ಅವರ ಬೃಹತ್ ವಸಾಹತು ಸಾಮ್ರಾಜ್ಯದ ಅಸ್ಮಿತೆಯನ್ನೇ ಕಂಪಿಸುವಂತೆ ಮಾಡಿದ್ದು, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕೆಂದು ಹೊರಟಿದ್ದು ಸುಭಾಷ್ ಚಂದ್ರ ಬೋಸ್‍ರ ಇಂಡಿಯನ್ ನ್ಯಾಷನಲ್ ಆರ್ಮಿ. ಮತ್ತಷ್ಟು ಓದು »

17
ಆಗಸ್ಟ್

ಉಪರಾಷ್ಟ್ರಪತಿ ಹುದ್ದೆಯ ಆಯ್ಕೆ ಮತ್ತವರ ಕರ್ತವ್ಯಗಳು…

– ಶ್ರೇಯಾಂಕ ಎಸ್ ರಾನಡೆ

ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯ 13ನೇ ಉಪರಾಷ್ಟ್ರಪತಿ ಚುನಾವಣೆ ನಡೆದಿದೆ. ನಿರೀಕ್ಷೆಯಂತೆ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿ ಮಾನ್ಯ ವೆಂಕಯ್ಯನಾಯ್ಡು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಗೋಪಾಲಕೃಷ್ಣ ಗಾಂಧಿಯವರನ್ನು ಬಹು ಅಂತರದಿಂದ ಸೋಲಿಸಿದ್ದಾರೆ. ಅದಕ್ಕಾಗಿ ಅವರಿಗೂ, ಅವರನ್ನು ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಮಾಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೂ ಶುಭಾಶಯಗಳು. ಈ ಹೊತ್ತಿನಲ್ಲಿ ರಾಷ್ಟ್ರಪತಿಗಳ ಕೆಲಸ, ಕರ್ತವ್ಯ ಹಾಗೂ ಇನ್ನಿತರ ಸಂಗತಿಗಳ ಕುರಿತು ಬೆಳಕು ಚೆಲ್ಲುವ ಬರಹ. ಮತ್ತಷ್ಟು ಓದು »

16
ಆಗಸ್ಟ್

ಡೊಕ್ಲಮ್ ಸದ್ದು, ಚೀನಾ ದರ್ದು: ಭಾರತ-ಚೀನ ಪ್ರಚಲಿತ ಕಥನ

– ಶ್ರೇಯಾಂಕ ಎಸ್ ರಾನಡೆ

ಡೊಕ್ಲಮ್ ಒಳಗಿರ್ದುಂ ಬೆವರ್ದನಾ ಡ್ರ್ಯಾಗನ್ ಪತಾಕಂ

ನಾವು ನಮ್ಮ ಸ್ನೇಹಿತರನ್ನು ಆಯ್ಕೆಗೆ ತಕ್ಕಂತೆ ಬದಲಾಯಿಸಬಹುದು ಆದರೆ ಭೌಗೋಳಿಕವಾಗಿ ಬೆಸೆದುಕೊಂಡಿರುವ ನೆರೆಹೊರೆಯ ದೇಶ-ಪ್ರದೇಶಗಳನ್ನಲ್ಲ. “ನಾ ಕೊಡೆ ಎನ್ನುವ ಭಾರತ, ತಾ ಬಿಡೆ ಎನ್ನುವ ಚೀನಾ ಹಠ. ಮಧ್ಯದಲ್ಲಿ ಬಿಕ್ಕಟ್ಟಿಗೆ ಸಿಲುಕಿರುವ ಡೊಕ್ಲಮ್ ಪ್ರದೇಶದ ವಾರಸುದಾರ ಭೂತಾನ್”. 1962ರ ಪರಿಸ್ಥಿತಿ ಈಗಿಲ್ಲ. ಎರಡೂ ಪರಮಾಣುಶಕ್ತಿಯ ಶಕ್ತಿಶಾಲಿ ದೇಶಗಳು. ಅದೇ ಹೊತ್ತಿಗೆ ಇಬ್ಬರೂ ನ್ಯೂಕ್ಲಿಯರ್ ಶಸ್ತ್ರಗಳ “ಮೊದಲ ಬಳಕೆ ಇಲ್ಲ”(ನೋ ಫಸ್ಟ್ ಯೂಸ್) ಎಂಬ ತತ್ವ ಪಾಲಿಸುವ ಜವಾಬ್ದಾರಿ ಹೊತ್ತಿವೆ. ಅಂದಿಗೆ “ಹುಲ್ಲುಕಡ್ಡಿಯೂ ಬೆಳೆಯದ ಬರಡು ಭೂಮಿ”(1962, ಅಂದಿನ ಪ್ರಧಾನ ಮಂತ್ರಿ, ನೆಹರೂ ಜವಾಹರ್ ಲಾಲ್ ಮಾತುಗಳು, ಚೀನಾದ ಅತಿಕ್ರಮಣ ಪ್ರವೇಶಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿನ ಹೇಳಿಕೆ) ಎಂದು ನಿರ್ಲಕ್ಷಿಸಲಾಗಿದ್ದ, ಆದರೆ ಇಂದಿಗೆ ಚೀನಾದ ಸಾರ್ವಭೌಮತೆಯ ಪ್ರತಿಷ್ಟೆ ಹಾಗೂ ಭಾರತದ ಆಂತರಿಕ ಭದ್ರತೆಯ ಅನಿವಾರ್ಯತೆಯ ದೃಷ್ಟಿಯಿಂದ ಅಸ್ಪಷ್ಟ ಗಡಿಯಲ್ಲಿನ ಆಯಕಟ್ಟಿನ ಪ್ರದೇಶಗಳು ಈವರೆಗಿನ ಭಾರತ-ಚೀನಾ ಗಡಿ ವಿವಾದದ ಜ್ವಲಂತತೆಗೆ ಮೂಲ. ಅದೀಗ “ಡೊಕ್ಲಮ್” ಕಾರಣದಿಂದ ಮತ್ತೆ ಮುನ್ನೆಲೆಗೆ ಬಂದಿದೆ. ಬೂದಿಮುಚ್ಚಿದ ಕೆಂಡದಂತಿರುವ ಈ ಸರ್ವಋತು ಸಮಸ್ಯೆ 52 ದಿನಗಳ ಬಿಗಿ ಸಂಘರ್ಷಾತ್ಮಕ ವಾತಾವರಣದಿಂದ ಬದಲಾವಣೆಯ ಮುಂದಿನ ದಾರಿಕಾಣದೆ ವಿಚಲಿತವಾಗಿದೆ. ಮತ್ತಷ್ಟು ಓದು »

1
ಆಗಸ್ಟ್

ಬಾಲಗಂಗಾಧರ ತಿಲಕರೆಂದರೆ ಸ್ವಾತಂತ್ರ್ಯ ಹೋರಾಟಗಾರ ಮಾತ್ರವಲ್ಲ ಧಾರ್ಮಿಕ ಸಾಮರಸ್ಯ ಮೂಡಿಸಿದ ಧೀಮಂತನಾಯಕ.

ಶಿವಾನಂದ ಶಿವಲಿಂಗ ಸೈದಾಪೂರ

ಬಾಲಗಂಗಾಧರ ತಿಲಕರೆಂದರೆ ಭಾರತದ ಸಂಪೂರ್ಣ ಸ್ವಾತಂತ್ರ್ಯ ಚಳುವಳಿಯ ಮೊದಲ ನಾಯಕ. “ಸ್ವರಾಜ್ಯವೇ ನನ್ನ ಜನ್ಮಸಿದ್ಧ ಹಕ್ಕು” ಎಂದು ಬ್ರಿಟನಿಯರ ವಿರುದ್ಧ ಘರ್ಜಿಸಿದ ಪ್ರಖರ ಹಿಂದೂ ರಾಷ್ಟ್ರವಾದಿ. ಧಾರ್ಮಿಕ ಹಬ್ಬಗಳಾದ ಶಿವಾಜಿ, ಸಾರ್ವಜನಿಕ ಗಣೇಶ ಉತ್ಸವಗಳ ಜನಕ. ಭಾರತೀಯರಲ್ಲಿ ಧಾರ್ಮಿಕ ಸಾಮರಸ್ಯ ಮೂಡಿಸಿ, ಅವರನ್ನು ಸ್ವಾತಂತ್ರ್ಯ ಹೋರಾಟಕ್ಕೆ ಅಣಿಗೊಳಿಸಿದ ಏಕೈಕ ಜನನಾಯಕ. ಸಮಸ್ತ ಭಾರತೀಯರ ಬಾಯಿಂದ “ಲೋಕಮಾನ್ಯ”ರೆಂದು ಕರೆಸಿಕೊಂಡವರು. ಮತ್ತಷ್ಟು ಓದು »

26
ಜುಲೈ

ಕಾರ್ಗಿಲ್ ಕಥನವೆಂದರೆ ಅದ್ಯಾವುದೋ ಹಾಲಿವುಡ್, ಬಾಲಿವುಡ್ ಸಿನೆಮಾ ಕಥೆಯಲ್ಲ!

– ಶಿವಾನಂದ ಶಿವಲಿಂಗ ಸೈದಾಪೂರ.

ಇಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿ ದಿನವು ಕಾಮೇಂಟ್ಸ್ ಚಕಮಕಿಗಳನ್ನು ಪ್ರತಿಯೊಬ್ಬರು ನೋಡಿಯೇ ನೋಡುತ್ತೆವೆ. ಸಾಕಷ್ಟು ದುಡ್ಡು ತೆಗೆದುಕೊಂಡು ನಟಿಸುವ ಹೆಸರಿಗೆ ಮಾತ್ರ ಹೀರೊಗಳಾಗಿರುವ ನಟರಿಗೆ ಇಂದು ಪ್ಯಾನ್ಸ್ ಕ್ಲಬ್‍ಗಳು ಬೇಕಾಬಿಟ್ಟಿಯಾಗಿ ಬೆಳೆದಿವೆ. ಒಬ್ಬ ನಟನ ಅಭಿಮಾನಿಗಳು ಮತ್ತೊಬ್ಬ ನಟನ ಮೇಲೆ ಎಗರಾಡುವುದು ಏರಾಡುವುದು ಮಿತಿ ಮಿರಿದೆ. ರೀಲ್ ಕಥೆಯ ನಾಯಕರಿಗೆ ರಿಯಲ್ ಬಿಲ್ಡಪ್ ಅಂತು ಅತಿಯಾಗಿದೆ. ಕಟೌಟ್ ಮೇಲೆ ಬೀಳುವ ಹಾಲಿನ ಕ್ಯಾನ್ ಗಳಿಗೇನು ಕೊರತೆಯಿಲ್ಲ. ಪ್ರತಿಯೊಂದು ಭಾಷೆಯಲ್ಲಿ ವಾರಕ್ಕೆ ಕನಿಷ್ಠ ಸುಮಾರು ಮೂರರಿಂದ ನಾಲ್ಕು ಸಿನೇಮಾ ಬಿಡುಗಡೆಯಾದರೂ ಕೂಡ ಸಾಮಾನ್ಯವಾಗಿ ಎಲ್ಲವನ್ನೂ ನೋಡುತ್ತೆವೆ. ಮತ್ತೆ ಮುಂದಿನ ವಾರದ ಹೋಸ ಸಿನೆಮಾ ಬರುವರೆಗೂ ಅದನ್ನು ಮೆಲುಕು ಹಾಕುತ್ತೆವೆ. ಬಿಡುಗಡೆಗೊಂಡ ಸಿನೇಮಾದ ನಾಯಕ, ನಾಯಕಿ, ಕಳನಾಯಕ, ನಿರ್ದೇಶಕ, ನಿರ್ಮಾಪಕನಿಂದ ಹಿಡಿದು ಪೋಷಕ ನಟನವರೆಗೂ ಎಲ್ಲರೂ ನೆನಪಿನಲ್ಲಿ ಉಳಿಯುತ್ತಾರೆ. ಆದರೆ…! ಮತ್ತಷ್ಟು ಓದು »

13
ಜುಲೈ

ನಮ್ಮೂರ ಹಬ್ಬ – ಋಷ್ಯಶೃಂಗೇಶ್ವರನ ರಥೋತ್ಸವ

– ಅಪರ್ಣ ಜಿ. ಸಿರಿಮನೆ

ಹಬ್ಬಗಳು ಸಾಮಾಜಿಕ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಅದರಲ್ಲೂ ಪಾರಂಪರಿಕವಾಗಿ ನಡೆದುಕೊಂಡು ಬರುವ ಊರ ಹಬ್ಬಗಳು ಸಾಮಾಜಿಕ ಒಗ್ಗಟ್ಟನ್ನು ಪ್ರತಿನಿಧಿಸುವುದರಲ್ಲಿ ಎರಡು ಮಾತಿಲ್ಲ. ಮಲೆನಾಡಿನ ದಟ್ಟ ಹಸಿರಿನ ನಡುವೆ ರಮಣೀಯತೆಯನ್ನೇ ಹಾಸಿ ಹೊದ್ದಿರುವ ಒಂದು ಪುಟ್ಟ ಗ್ರಾಮ ‘ಕಿಗ್ಗಾ’ ನಮ್ಮೂರು. ಪ್ರಾಕೃತಿಕ ಸೌಂದರ್ಯದಿಂದಲೇ ಜನರನ್ನು ತನ್ನೆಡೆಗೆ ಸೆಳೆಯುವ ನಮ್ಮೂರು ಮಳೆದೇವರೆಂದೇ ಹೆಸರಾಗಿರುವ ಋಷ್ಯಶೃಂಗೇಶ್ವರ ನೆಲೆಸಿರುವ ಪುಣ್ಯಕ್ಷೇತ್ರ. ಪ್ರತಿವರ್ಷವೂ ನಡೆಯುವ ಋಷ್ಯಶೃಂಗೇಶ್ವರನ ರಥೋತ್ಸವ ನಮ್ಮೂರಿನ ಪ್ರಮುಖ ಹಬ್ಬ. ಮತ್ತಷ್ಟು ಓದು »

11
ಜುಲೈ

ನಮ್ಮೂರ ಹಬ್ಬ ( ಮೈಸೂರು )

– ವಿಜಯ ನಂಜುಂಡಯ್ಯ

ಭಾರತೀಯರಿಗೆ ಹಬ್ಬ, ಹರಿದಿನಗಳು ಹೊಸದೇನೂ ಅಲ್ಲ. ಹಬ್ಬಗಳು ಹೆಸರೇ ಸೂಚಿಸುವಂತೆ, ಸಂತೋಷ, ಸಡಗರದ ಸಂಕೇತ ವಾಗಿದೆ. ಈ ಹಬ್ಬ, ಸಂತೋಷವನ್ನುಂಟು ಮಾಡುತ್ತದೆ ಎಂದರೆ ನೀವೇ ನೋಡಿ.

ಕೆಲವು ವಸ್ತುಗಳೂ, ವಿಷಯಗಳೂ ಮನಸ್ಸಿಗೆ ಹತ್ತಿರವಾಗಿ ಖುಷಿ ತಂದರೆ,,ಸೌಂದರ್ಯ, ಶೃಂಗಾರ ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತದೆ.ಹಾಗೇ ಇಂಪಾದ, ತಂಪಾದ ಪ್ರೀತಿಯ ಮಾತುಗಳು, ಮಧುರವಾದ ಸ್ವರ, ಸಂಗೀತಗಳು ಕಿವಿಗೆ ಹಬ್ಬವನ್ನುಂಟು ಮಾಡುವುದರಲ್ಲಿ ಆಶ್ಚರ್ಯವಿಲ್ಲ. ರುಚಿ, ರುಚಿಯಾದ ತಿಂಡಿ ತೀರ್ಥಗಳು ಬಾಯಿಗೆ ಹಬ್ಬವನ್ನುಂಟು  ಮಾಡುತ್ತದೆ.. ಮತ್ತಷ್ಟು ಓದು »

10
ಜುಲೈ

ನಮ್ಮೂರ ಹಬ್ಬ.. ( ಶ್ರೀ ರಂಗನಾಥ ಸ್ವಾಮಿಯ ರಥೋತ್ಸವ )

ಯೋಗಾನಂದಾರಾಧ್ಯ
ನೇರಲವಾಡಿ, ಮಾಗಡಿ ತಾಲ್ಲೂಕು
ರಾಮನಗರ ಜಿಲ್ಲೆ

ಹಬ್ಬಗಳೆಂದರೆ ಸಾಮಾನ್ಯವಾಗಿ ಸಡಗರ ಸಂಭ್ರಮದಿಂದ ಕೂಡಿದ್ದು, ಬಂಧು ಬಾಂಧವರು, ಗೆಳೆಯರು, ಆಯಾ ಸಮುದಾಯದವರು ಒಟ್ಟಿಗೇ ಸೇರಿ ಆಚರಿಸುವ ಮನಶ್ಶಾಂತಿಯ ಮಹತ್ಕಾರ್ಯ..

ಇಂದು ಪ್ರಪಂಚದ ನಾನಾ ಭಾಗಗಳಲ್ಲಿ ಅವರದೇ ಆದ ಸಂಸ್ಕೃತಿಯ ವೈಶಿಷ್ಟ್ಯಗಳಿಂದ ಕೂಡಿದ ಹಲವಾರು ಹಬ್ಬಗಳನ್ನು ಆಚರಿಸುವುದನ್ನು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಾವು ಕಂಡಿದ್ದೇವೆ.. ಕೆಲವು ಹಬ್ಬಗಳನ್ನು ಜಾಗತಿಕ ಮಟ್ಟದಲ್ಲಿ ಆಚರಿಸಿದರೆ, ಮತ್ತೆ ಕೆಲವು ರಾಷ್ಟ್ರೀಯ ಮಟ್ಟದಲ್ಲಿ, ಇನ್ನೂ ಕೆಲವು ರಾಜ್ಯಮಟ್ಟದಲ್ಲಿ ಹಾಗೆಯೇ ಸಂಪ್ರದಾಯ, ಸಂಸ್ಕೃತಿಗಳ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕದ ಹಳ್ಳಿ ಹಳ್ಳಿಗಳಲ್ಲೂ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸುವುದು ಸರ್ವೇ ಸಾಮಾನ್ಯ… ಮತ್ತಷ್ಟು ಓದು »

5
ಜುಲೈ

ಸಿಡಿಲು ಸನ್ಯಾಸಿಯ ಐದು ನಿಮಿಷದ ಮಾತುಗಳು ಇಡೀ ಜಗತ್ತಿಗೆ ಸನಾತನ ಧರ್ಮದ ಶ್ರೇಷ್ಠತೆಯನ್ನು ಬಿತ್ತರಿಸಿದ್ದವು.

ಶಿವಾನಂದ ಶಿವಲಿಂಗ ಸೈದಾಪೂರ
(ಎಂ.ಎ.ವಿದ್ಯಾರ್ಥಿ.)
ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ.

ಸ್ವಾಮಿ ವಿವೇಕಾನಂದರ 115ನೇ ಪುಣ್ಯಸ್ಮರಣೆಯ  ವಿಶೇಷ ಲೇಖನ.

ಅದೊಂದು ತಮ್ಮ ಧರ್ಮ ಪ್ರಾಬಲ್ಯವನ್ನು ಜಗತ್ತಿನ ಇತರ ದೇಶದ ಮೇಲೆ ಹರಡಲು ನಡೆಸಿದ ಸಮಾರಂಭ. ಅದಕ್ಕೂ ಒಂದು ಇತಿಹಾಸ, ನೂರ ಐವತ್ತು ವರ್ಷಗಳ ಹಿಂದೆ ಕೊಲಂಬಸ್ ಶೋಧಿಸಿದ್ದು, ಅದರ ಸ್ಮರಣೆಯ ಹೆಸರಲ್ಲಿ ಕ್ರೈಸ್ತ ಧರ್ಮವನ್ನು ಜಗತ್ತಾದ್ಯಂತ ಬಿತ್ತಲು ಆಯೋಜನಗೊಂಡಿದ್ದೇ ವಿಶ್ವ ಸರ್ವಧರ್ಮ ಸಮ್ಮೇಳನ.. ಅದಕ್ಕೆ ಕಾರಣ ಒಂದು ಉದ್ದೇಶ ಹಲವು. ಅಷ್ಟೊತ್ತಿಗೆ ಕ್ರೈಸ್ತ ಧರ್ಮ ಜಗತ್ತಿನ ಹಲವಾರು ದೇಶಗಳನ್ನು ಆಕ್ರಮಿಸಿಕೊಂಡಿತ್ತು. ಅಂತಹ ಆಕ್ರಮಣಕ್ಕೆ ಒಳಗೊಂಡ ದೇಶಗಳಲ್ಲಿ ಭಾರತವು ಒಂದು. ಮತ ಸುಧಾರಣೆಗಾಗಿ ಬುದ್ಧ, ಬಸವ, ಮಹಾವೀರ, ಶಂಕರ, ಮದ್ವಾಚಾರ್ಯರು…. ಹೀಗೆ ಎಲ್ಲರು ಬಂದು ಹೋದರು. ಯಶಸ್ವಿಯು ಇಲ್ಲ, ವಿಫಲವು ಇಲ್ಲ. ಎಲ್ಲವೂ ಮಧ್ಯಂತರದಲ್ಲಿಯೇ ಸಾಗಿತ್ತೇ ಹೊರತು ಅವರ್ಯಾರು ಸಹ ದೇಶದ ಹೋರ ಹೋಗಿ ಸನಾತನ ಧರ್ಮವನ್ನು ಪ್ರಚಾರ ಮಾಡಲಿಲ್ಲ. ಸನಾತನ ಧರ್ಮದ ಮೇಲೆ ದಾಳಿ ಆದಾಗಲೆಲ್ಲ ತಕ್ಕ ಉತ್ತರಕ್ಕೆ ಸಿದ್ಧವಾಗಿಯೇ ಇತ್ತು ಭಾರತ. ತುರ್ಕರ ದಾಳಿಗೆ ವಿಜಯನಗರ, ಮರಾಠರಂತಹ ಮನೆಗಳು ಹುಟ್ಟುತ್ತಲೇ ಬಂದವು. ಮತ್ತಷ್ಟು ಓದು »

21
ಜೂನ್

ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು? ( ಭಾಗ – ೪ )

ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)

ಎರಡು ವಿಭಿನ್ನ ಮಾರ್ಗಗಳು :

ಸಾಮಾನ್ಯವಾಗಿ ಪಶ್ಚಿಮದಲ್ಲಿ ನಮ್ಮ ಸಂಸ್ಕೃತಿಗೆ ಸಂಬಂಧಿಸಿದಂತೆ ಪದೇಪದೇ ಕೇಳಿಬರುವ ಈ ಪ್ರಶ್ನೆಗಳನ್ನು ಗಮನಿಸಿ. ನೀವು ಹಣೆಗೆ ತಿಲಕ ಇಡುವುದೇಕೆ? ಗೋಮಾಂಸವನ್ನು ನೀವೇಕೆ ತಿನ್ನುವುದಿಲ್ಲ? ನೀವು ಶಿಶ್ನವನ್ನು ಪೂಜೆ ಮಾಡುತ್ತೀರಂತೆ ಹೌದೆ? ಜಾತಿ ಪದ್ಧತಿಯ ಬಗ್ಗೆ ನಿಮ್ಮ ಅನಿಸಿಕೆಯೇನು? ಈಗಲೂ ಭಾರತದಲ್ಲಿ ವಿಧವೆಯರನ್ನು ಸುಡುತ್ತಾರೆಯೇ? ನಿಮ್ಮ ದೇವರುಗಳಿಗೇಕೆ ಆರೆಂಟು ಕೈಗಳು ಇರುತ್ತವೆ? ನಿಮ್ಮ ರಿಲಿಜನ್ನಿನ ಚಿಹ್ನೆ ಯಾವುದು? ನೀವು ದೇವಸ್ಥಾನದಲ್ಲಿ ಮೂರ್ತಿಪೂಜೆ/idolatry ಮಾಡುತ್ತೀರಾ? ನೀವು ದೇವರನ್ನು ನಂಬುತ್ತೀರಾ? Are you religious? ಇತ್ಯಾದಿ. ಈ ರೀತಿಯ ಪ್ರಶ್ನೆಗಳು ಎದುರಾದಾಗ ಯಾರಾದರೂ ಹೇಗೆ ಪ್ರತಿಕ್ರಿಯಿಸಬಹುದು? ಸ್ಥೂಲವಾಗಿ ಹೇಳುವುದಾದರೆ, ಇದಕ್ಕೆ ಎರಡು ವಿಧದಲ್ಲಿ ಪ್ರತಿಕ್ರಿಯಿಸಬಹುದು. ಮೊದಲನೆಯದು, ಈ ಪ್ರಶ್ನೆಗಳು ಗ್ರಹಿಸಲು ಸಾಧ್ಯವಾಗುವಂಥ ಮತ್ತು ನಮಗೆ ಅರ್ಥವಾಗುವ ಪ್ರಶ್ನೆಗಳು ಎಂಬ ಊಹೆಯೊಂದಿಗೆ ಈ ಪ್ರಶ್ನೆಗಳಿಗೆ ಉತ್ತರ ನೀಡುವುದು. ಸುಧಾರಣಾವಾದಿಗಳ ಕಾಲದಿಂದ ಇಂದಿನವರೆಗೆ ನಾವು ಅನುಸರಿಸಿದ ಮಾರ್ಗ ಇದೇ. ಆದರೆ ಅಮೆರಿಕೆಯಲ್ಲಿ ನೆಲೆಸುವ ಭಾರತೀಯರ [ಅಷ್ಟೇ ಏಕೆ, ಸಂಕುಚಿತಗೊಳ್ಳುತ್ತಿರುವ ಆ ಜಗತ್ತಿನಲ್ಲಿ, ಭಾರತದಲ್ಲಿನ ಭಾರತೀಯರ] ಪರಿಸ್ಥಿತಿ ಇಂದು ಬದಲಾಗಿದೆ: ಹಿಂದಿನ ಕಾಲದ ಸುಧಾರಕರು ಭಾರತೀಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು, ಆದರೆ ನಾವಿಂದು ಪಾಶ್ಚಾತ್ಯ ಸಂಸ್ಕೃತಿಯ ಸಂದರ್ಭದಲ್ಲಿ ನಿಂತು ಮಾತನಾಡುತ್ತಿದ್ದೇವೆ. ಬದಲಾದ ಈ ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ನಾವೂ ನಮ್ಮ ಸುಧಾರಣಾವಾದಿಗಳು ನಡೆದ ಮಾರ್ಗವನ್ನು ಅನುಸರಿಸಿದರೆ ಉಂಟಾಗುವ ಪರಿಣಾಮವನ್ನು ಗ್ರಹಿಸುವುದು ಬಹಳ ಮುಖ್ಯವಾಗಿದೆ. ಮತ್ತಷ್ಟು ಓದು »