ವಿಷಯದ ವಿವರಗಳಿಗೆ ದಾಟಿರಿ

Posts from the ‘ಭಾರತ’ Category

15
ಜೂನ್

ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೩ )

ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)

ಭಾಗ – ೧

ಭಾಗ – ೨

ಒಂದು ಹೋಲಿಕೆ

ವಸಾಹತುಶಾಹಿ ಕಾಲದ ಭಾರತೀಯ ಬುದ್ಧಿಜೀವಿಗಳು ಈ ಕಥೆಯನ್ನು ಸಾರಾಸಗಟಾಗಿ ನಂಬಿದ್ದರು. (ಏಕೆ ಎಂಬುದು ಒಂದು ಮುಖ್ಯ ಪ್ರಶ್ನೆಯಾದರೂ, ಈ ಲೇಖನದಲ್ಲಿ ನಾನದನ್ನು ಚರ್ಚೆಗೆತ್ತಿಕೊಳ್ಳುವುದಿಲ್ಲ). ಇದು ಎರಡು ಪರಸ್ಪರ ವಿರುದ್ಧವಾದ ಪ್ರತಿಕ್ರಿಯೆಗಳಿಗೆ ದಾರಿಮಾಡಿತು: ಒಂದೆಡೆ ಕೆಲವು ಜನರು ಹಿಂದುಗಳ ರಿಲಿಜನ್ನಿನ ಪುನರುತ್ಥಾನಕ್ಕಾಗಿ ಪರಿಶ್ರಮಿಸಿದರು. ವೇದ ಉಪನಿಷತ್ತುಗಳಲ್ಲಿರುವ ಶುದ್ಧವಾದ ರಿಲಿಜನ್ನಿಗೆ ಹಿಂದಿರುಗಬೇಕು ಎಂದು ಅವರು ವಾದಿಸಿದರು. ಇನ್ನೊಂದೆಡೆಯಲ್ಲಿ ಹಿಂದೂಯಿಸಂ ಈಗ ಹೇಗಿದೆಯೋ ಅದೇ ಸರಿ ಎಂದು ಗಂಟಾಘೋಷವಾಗಿ ಸಮರ್ಥಿಸುವವರೂ ಇದ್ದರು. ಈ ಎರಡು ತುದಿಗಳ ನಡುವೆ ಹಲವು ವಿವಿಧ ನಿಲುವುಗಳೂ ನಿಧಾನವಾಗಿ ಹರಳುಗಟ್ಟಿದ್ದವು. ಮತ್ತಷ್ಟು ಓದು »

13
ಜೂನ್

ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೨ )

ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)

ಭಾಗ ೧

ಹಿನ್ನೆಲೆ:

ಭಾರತದ ಹಲವು ಪ್ರದೇಶಗಳ ಮೇಲೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯು ತನ್ನ ಹಿಡಿತವನ್ನು ಬಿಗಿಗೊಳಿಸಿ, ಅದರ ಆಡಳಿತಾಧಿಕಾರಿಗಳು ಆಳುವವರ ಸ್ಥಾನಕ್ಕೆ ಬಂದಾಗ, ಭಾರತೀಯ ಸಂಪ್ರದಾಯಗಳ ಕುರಿತಂತೆ ಒಂದು ವಿಶೇಷ ಹಗೆತನವು ವಸಾಹುತು ಆಡಳಿತ ನೀತಿಯ ಹೆಗ್ಗುರುತಾಯಿತು. ಈ ಹಗೆತನಕ್ಕೆ ಬಹಳ ಪುರಾತನ ಇತಿಹಾಸವಿರುವುದು ನಿಜ. ಹಿಂದೂಗಳ ‘ರಿಲಿಜನ್’ ಆದ ‘ಹಿಂದೂಯಿಸಂ’ನ ಪ್ರತಿ ಅಂಶವೂ ಅವರಿಗೆ ಆಕ್ಷೇಪಾರ್ಹ ಮತ್ತು ಅಸಂಗತವಾಗಿ ಕಂಡಿದ್ದು ಹಳೆಯ ವಿಚಾರ. ಬಾಲ್ಯವಿವಾಹ, ಸತಿ ಪದ್ಧತಿ ಮುಂತಾದ ಅಸಹನೀಯ ಮತ್ತು ಅನೈತಿಕ ಆಚರಣೆಗಳನ್ನು ಅವರು ಭಾರತದಲ್ಲಿ ‘ಕಂಡುಕೊಂಡಿದ್ದರಿಂದ’ ಮಾತ್ರವೇ ಈ ಹಗೆತನವು ಬೆಳೆದದ್ದಲ್ಲ. ಅವರ ಹಗೆತನಕ್ಕೆ ಸಾಕಷ್ಟು ಆಳವಾದ ಬೇರುಗಳಿವೆ: ತಮ್ಮ ರಿಲಿಜನ್ನಿನ ಕನ್ನಡಕದಿಂದ ನೋಡಿದಾಗ, ಇಂತಹ ವಿಕೃತ ಆಚರಣೆಗಳು ಸುಳ್ಳು ರಿಲಿಜನ್ಗಳ ಅವಿಭಾಜ್ಯ ಅಂಗಗಳು ಎಂದು ಅವರಿಗೆ ಅನಿಸಿತ್ತು. ‘ಹಿಂದೂಯಿಸಂ’ ಎನ್ನುವುದು ಸುಳ್ಳು ಮತ್ತು ಅವನತಿ ಹೊಂದಿದ ರಿಲಿಜನ್ನಾದ್ದರಿಂದ, ಇಂತಹ ಅರ್ಥಹೀನ ವಿಕೃತ ಆಚರಣೆಗಳು ಕೇವಲ ಆಕಸ್ಮಿಕಗಳಲ್ಲ, ಬದಲಿಗೆ ಅದರ ಅಗತ್ಯ ಲಕ್ಷಣಗಳು ಎಂದು ಅವರು ನಂಬಿದ್ದರು. ಮತ್ತಷ್ಟು ಓದು »

12
ಜೂನ್

ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೧ )

ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)

ನನ್ನ ಅನುಭವವೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಮೂಲಕ ಈ ಲೇಖನವನ್ನು ಪ್ರಾರಂಭಿಸುತ್ತೇನೆ. ಅಮೇರಿಕಾದಲ್ಲಿರುವ ಅನಿವಾಸಿ ಭಾರತೀಯರ ಬಾಯಲ್ಲಿ ನಾನು ಈ ಕೆಳಗಿನ ಮಾತುಗಳನ್ನು ಪದೇ ಪದೇ ಕೇಳಿದ್ದೇನೆ: “ನಾನು ಹಲವು ದಶಕಗಳ ಹಿಂದೆ ಅಮೇರಿಕಕ್ಕೆ ಬಂದಾಗ ನನಗೆ ಹಿಂದೂಯಿಸಂನ ಕುರಿತು ಅಷ್ಟಾಗಿ ತಿಳಿದಿರಲಿಲ್ಲ. ನನ್ನ ಈ ಅಜ್ಞಾನದ ಕುರಿತು ನನಗೆ ಅರಿವು ಮೂಡಿದ್ದೇ ನನ್ನ ಮಕ್ಕಳು ಹಿಂದೂಯಿಸಂ ಎಂದರೆ ಏನು ಎಂದು ಪ್ರಶ್ನಿಸಲು ಆರಂಭಿಸಿದಾಗ. ನಾನು ಅವರಿಗೆ ಹಿಂದೂಯಿಸಂ ಎಂದರೇನು ಎಂದು ಕಲಿಸಬೇಕಿತ್ತು, ಆದ್ದರಿಂದ ನಾನೂ ಹಿಂದೂಯಿಸಂ ಕುರಿತು ಭಾರತದಲ್ಲಿದ್ದಾಗ ತಿಳಿದುಕೊಂಡದ್ದಕ್ಕಿಂತ ಹೆಚ್ಚು ಅಮೆರಿಕೆಯಲ್ಲಿ ಕುಳಿತು ತಿಳಿದುಕೊಂಡೆ. (ಈ ವಿಚಾರದಲ್ಲಿ ಆ ಸ್ವಾಮಿ ಅಥವಾ ಈ ಸಂಘಟನೆ ನನಗೆ ಸಹಾಯ ಮಾಡಿತು. ಅವರಿಗೆ ನನ್ನ ಕೃತಜ್ಞತೆಗಳು).” ಮತ್ತಷ್ಟು ಓದು »

19
ಮೇ

ಕೈ ಜಾರುತ್ತಿರುವ ಜಮ್ಮುಕಾಶ್ಮೀರ ; ನೆನಪಾಗುವ ಜಗಮೋಹನ್

– ರಾಕೇಶ್ ಶೆಟ್ಟಿ

ಕಳೆದ 5 ತಿಂಗಳಿನಲ್ಲಿ ಸೇನೆಯ ಮೇಲೆ 7 ದಾಳಿಗಳು ; ಮೇ 2ನೇ ತಾರೀಖು ಇಬ್ಬರು ಭಾರತೀಯ ಯೋಧರ ತಲೆಕಡಿಯಲಾಯಿತು;2 ಬ್ಯಾಂಕುಗಳ ದರೋಡೆ,ಹತ್ಯೆಗಳು; ರಾಜ್ಯ ಸರ್ಕಾರವೇ ಭದ್ರತಾ ದೃಷ್ಟಿಯಿಂದ 40 ಬ್ಯಾಂಕುಗಳಲ್ಲಿ ನಗದು ವ್ಯವಹಾರ ಮಾಡದಂತೆ ಸೂಚಿಸಿದ್ದು; ಸಹೋದರಿಯ ಮದುವೆಗೆಂದು ರಜೆಯಲ್ಲಿ ಮನೆಗೆ ಬಂದಿದ್ದ ಯೋಧನನ್ನು ಅಪಹರಿಸಿ,ಚಿತ್ರಹಿಂಸೆ ನೀಡಿ ಹತ್ಯೆ;ಹುತಾತ್ಮ ಯೋಧನ ಶವಯಾತ್ರೆಯಲ್ಲಿ ಕಲ್ಲು ತೂರಾಟ;ಎನ್ಕೌಂಟರಿನಲ್ಲಿ ಸತ್ತ ಉಗ್ರನ ಶವಯಾತ್ರೆಯಲ್ಲಿ ಪ್ರತ್ಯಕ್ಷವಾದ ಉಗ್ರರಿಂದ ಗಾಳಿಯಲ್ಲಿ ಗುಂಡು,ಪ್ರತೀಕಾರದ ಕೂಗು;ಆಡಳಿತಾರೂಢ ಪಿಡಿಪಿ ಪಕ್ಷದ ಪುಲ್ವಾಮ ಜಿಲ್ಲಾಧ್ಯಕ್ಷನನ್ನು ಗುಂಡಿಕ್ಕಿ ಕೊಲ್ಲಲಾಯಿತು.

ಇವೆಲ್ಲ ಘನಂಧಾರಿ ಸಾಧನೆಗಳಾಗಿರುವುದು ಆಗುತ್ತಿರುವುದು ಜಮ್ಮುಕಾಶ್ಮೀರ ರಾಜ್ಯದಲ್ಲಿ.ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಉಗ್ರ ಬರ್ಹಾನ್ ವನಿಯ ಹತ್ಯೆಯ ನಂತರ ಭುಗಿಲೆದ್ದ ಹಿಂಸಾಚಾರ, Demonetization ಮತ್ತು ಸರ್ಜಿಕಲ್ ಸ್ಟ್ರೈಕ್ ನಂತರ ತಾತ್ಕಾಲಿಕವಾಗಿ ತಣ್ಣಗಾಗಿತ್ತಾದರೂ ಈಗ ಭೀಕರ ಹಂತಕ್ಕೆ ಹೊರಟಿರುವಂತೆ ತೋರುತ್ತಿದೆ.ಜಮ್ಮುಕಾಶ್ಮೀರ ರಾಜ್ಯದಿಂದ ಈಗ ಬರುತ್ತಿರುವ ಸುದ್ದಿಗಳು 90ರ ದಶಕವನ್ನು ಮತ್ತೊಮ್ಮೆ ನೆನಪಿಸುತ್ತಿರುವುದು ಸುಳ್ಳಲ್ಲ. 90ರ ದಶಕದಲ್ಲೂ ಹೀಗೆ ಕಾನೂನು-ಸುವ್ಯವಸ್ಥೆಯೆನ್ನುವುದು ಹಾಳು ಬಿದ್ದು ಹೋಗಿತ್ತು.ಆಗಲೂ ಹೀಗೆ ಉಗ್ರಗಾಮಿಗಳು ಕಾಶ್ಮೀರಿಗಳ ಮನೆಬಾಗಿಲು ತಟ್ಟುತ್ತಿದ್ದರು,ಅನಾಮತ್ತಾಗಿ ಮನೆಯಿಂದ ಎತ್ತಾಕಿಕೊಂಡು ಹೋಗಿ ಚಿತ್ರಹಿಂಸೆ ಕೊಟ್ಟು ಕೊಲ್ಲುತ್ತಿದ್ದರು.ಈಗ ಹೊತ್ತಿ ಉರಿಯುತ್ತಿರುವ ದಕ್ಷಿಣ ಕಾಶ್ಮೀರದ ಸ್ಥಿತಿ ಮತ್ತೆ 90ರ ದಶಕಕ್ಕೆ ಹೊರಳಿ ನಿಂತಂತಿದೆ.

ಮತ್ತಷ್ಟು ಓದು »

29
ಏಪ್ರಿಲ್

ಅಕ್ಷ ತೃತೀಯ – ವೈಶಿಷ್ಟ್ಯ

ಮಯೂರಲಕ್ಷ್ಮೀ

imagesಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಮನುಷ್ಯನ ಆವಿಷ್ಕಾರದೊಡನೆ ಬದಲಾಗುವ ಋತು ಋತುಗಳೊಡನೆ ಸರ್ವತೋಮುಖ ಅಭಿವೃದ್ಧಿಯಲ್ಲಿ ಪರಿಪೂರ್ಣತೆಯತ್ತ ಕೊಂಡೊಯ್ಯಲು  ಅತ್ಯಂತ ಮಹತ್ತರ ಪಾತ್ರ ವಹಿಸುತ್ತದೆ. ಹೊಸ ಸಂವತ್ಸರದೊಡನೆ  ಯುಗಾದಿಯಿಂದ ಆರಂಭವಾಗಿ ಚೈತ್ರ ಮಾಸ, ಶುಕ್ಲ ಪಕ್ಷ, ವಸಂತ ಋತುವಿನಲ್ಲಿ ದೇಶದಾದ್ಯಂತ ಸಂಭ್ರಮದಿಂದ ಆಚರಿಸಲ್ಪಡುವ  “ಅಕ್ಷ ತೃತೀಯ”  ಅತ್ಯಂತ ಮುಖ್ಯವಾದದು.

ಅಕ್ಷ ತೃತೀಯ ಎಂದರೇನು? ಮತ್ತಷ್ಟು ಓದು »

29
ಏಪ್ರಿಲ್

ಯೋಧನ ಮಾತುಗಳಲ್ಲಿ…

ಸುರೇಶ್ ಮುಗ್ಬಾಳ್

ತಿಪಟೂರು

downloadಛತ್ತೀಸಘಡದಲ್ಲಿನ ನಕ್ಸಲರ ಕ್ರೌರ್ಯಕ್ಕೂ, ಹತ್ಯೆಯಾದ 25 ಯೋಧರಿಗೂ ಅದೇನು ದ್ವೇಷಗಳಿತ್ತೋ ಏನೋ ಯಾರಿಗೂ ಗೊತ್ತಿಲ್ಲ. ಆದರೆ 300 ಜನ ನಕ್ಸಲರ ಗುಂಪು ಏಕಾ-ಏಕಿ CRPF ಯೋಧರಿದ್ದಲ್ಲಿಗೆ ನುಗ್ಗಿ ಒಂದೇ ಸಮನೆ ಗುಂಡು ಹಾರಿಸಿಬಿಟ್ಟಿದ್ದರು. ಕಾರಣ; ಗುಂಡುಹಾರಿಸಿಕೊಂಡು ಸತ್ತವರೆಲ್ಲಾ ಯೋಧರಾಗಿದ್ದರು, ಸೇನಾ ಸಮವಸ್ತ್ರದಲ್ಲಿದ್ದರು ಮತ್ತು ಸರ್ಕಾರದ ಪರ ಕೆಲಸ ಮಾಡುವವರಾಗಿದ್ದರು ಅಷ್ಟೇ. ವೈಯಕ್ತಿಕ ದ್ವೇಷ ಖಂಡಿತ ಯಾರಿಗೂ ಇದ್ದಿರಲಿಕ್ಕಿಲ್ಲ. ಮತ್ತಷ್ಟು ಓದು »

4
ಏಪ್ರಿಲ್

ಚೆನಾನಿ – ನಶ್ರಿ ಏಷ್ಯಾದ ಅತೀ ದೊಡ್ಡ ಹಾಗೂ ಭಾರತದ ಅತೀ ಉದ್ದದ ಸುರಂಗ ಮಾರ್ಗ…

-ಶ್ರೇಯಾಂಕ ಎಸ್ ರಾನಡೆ.
ಈ ಕಣಿವೆ ಜಮ್ಮು ಕಾಶ್ಮೀರದ ಜೀವಸೆಲೆ; ಭಾರತದ ಇಂಜಿನಿಯರಿಂಗ್ ಅದ್ಭುತಕ್ಕೆ ಸಾಕ್ಷಿ.

– ಏಪ್ರಿಲ್ 2ರಂದು ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭಾರತದ ಅತೀ ಉದ್ದದ, ಏಷ್ಯಾದ ಅತೀ ದೊಡ್ಡ, ಎಲ್ಲಾ ರೀತಿಯ ಹವಾಮಾನಗಳಿಗೂ ಒಪ್ಪುವ ದ್ವಿಮುಖ ಸಂಚಾರ ವ್ಯವಸ್ಥೆಯಿರುವ ಸುರಂಗ ರಸ್ತೆ ಮಾರ್ಗವನ್ನು ಲೋಕಾರ್ಪಣೆಗೊಳಿಸಿದ್ದರು. ಕಳೆದ ಐದು ವರ್ಷ ಐದು ತಿಂಗಳ ಅವಧಿಯಲ್ಲಿ 3,720 ಕೋಟಿ ವೆಚ್ಚದಲ್ಲಿ ಈ ಸುರಂಗ ಮಾರ್ಗವನ್ನು ತಯಾರಿಸಲಾಗಿದೆ. ಕಲೆ ಮತ್ತು ವಿಜ್ಞಾನದ ಇಂಜಿನಿಯರಿಂಗ್ ತಾಂತ್ರಿಕತೆಯನ್ನು ಬಳಸಿಕೊಂಡು ನಿರ್ಮಿಸಲಾಗಿರುವ ಈ ಸುರಂಗ ಮಾರ್ಗ ಅನೇಕ ಕಾರಣಗಳಿಂದ ವಿಶೇಷವಾಗಿದೆ. ಮತ್ತಷ್ಟು ಓದು »

27
ಮಾರ್ಚ್

ನಿಮ್ಮ ಮಕ್ಕಳನ್ನು ಗಿಣಿಯಂತೆ ಸಾಕಿ ಪ್ರಗತಿಪರರ ಕೈಗೊಪ್ಪಿಸಬೇಡಿ..

– ಪ್ರವೀಣ್ ಕುಮಾರ್ ಮಾವಿನಕಾಡು

ಆಕೆ ನನಗಿಂತಾ ಎರಡು ಮೂರು ವರ್ಷ ದೊಡ್ಡವಳು. ನನ್ನದೇ ಶಾಲೆಯಲ್ಲಿ ನನ್ನ ಹಿರಿಯ ವಿದ್ಯಾರ್ಥಿಯಾಗಿದ್ದವಳು. ನನ್ನಂತೆಯೇ ನಾಲ್ಕೈದು ಮೈಲಿ ದೂರದಿಂದ ಗದ್ದೆ, ಬಯಲು, ಗುಡ್ಡ, ಹಾಡ್ಯ, ಒಳ ದಾರಿಗಳನ್ನು ದಾಟಿ ಶಾಲೆಗೆ ಬರುತ್ತಿದ್ದಳು. ನನಗೆ ಪಾಠ ಮಾಡಿದ ಶಿಕ್ಷಕರೇ ಆಕೆಗೂ ಪಾಠ ಮಾಡಿದ್ದರು. ಆದರೆ ಆಕೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳೆರಡರಲ್ಲೂ ನನಗಿಂತಲೂ ತುಂಬಾ ಚುರುಕಾಗಿದ್ದಳು. ಆದರೆ ನಾನಿನ್ನೂ ಬದುಕಿದ್ದೇನೆ. ಆಕೆ ಪೊಲೀಸರ ಗುಂಡಿಗೆ ಬಲಿಯಾಗಿ ಒಂದು ದಶಕವೇ ಕಳೆದಿದೆ!

ಆ ವರ್ಷ ನಮ್ಮ ಪ್ರೌಢಶಾಲೆಯ ಬೆಳ್ಳಿ ಹಬ್ಬ. ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ನೂರಾರು ವಿದ್ಯಾರ್ಥಿಗಳು ಏಳನೇ ತರಗತಿ ಮುಗಿಸಿದ ನಂತರ ಸೇರುತ್ತಿದ್ದುದು ಅದೇ ಪ್ರೌಢಶಾಲೆಗೆ. ಹಾಗಾಗಿ ಹತ್ತಾರು ಹಳ್ಳಿಗಳಲ್ಲೂ ಬೆಳ್ಳಿ ಹಬ್ಬದ ಸಂಭ್ರಮ. ಬೆಳ್ಳಿ ಹಬ್ಬದ ಸಂಭ್ರಮವನ್ನು ಸ್ಮರಣೀಯಗೊಳಿಸಲು ಶಾಲೆಯಿಂದ ವಿದ್ಯಾರ್ಥಿಗಳ ಬರಹಗಳೇ ತುಂಬಿರುವ ಸ್ಮರಣಸಂಚಿಕೆಯೊಂದನ್ನು ಹೊರತರಲಾಯಿತು. ಆ ಸ್ಮರಣಸಂಚಿಕೆಯಲ್ಲಿ ಕೆಲವು ಮಕ್ಕಳು ನಗೆ ಹನಿಗಳನ್ನು ಬರೆದರೆ ಇನ್ನು ಕೆಲವು ವಿದ್ಯಾರ್ಥಿಗಳು ಮಲೆನಾಡಿನ ಸೊಬಗನ್ನು ವರ್ಣಿಸಿ ಬರೆದಿದ್ದರು. ಕೆಲವು ವಿದ್ಯಾರ್ಥಿಗಳು ಶಾಲೆಯ ಅನುಭವಗಳನ್ನು ಬರೆದರೆ ಇನ್ನು ಕೆಲವು ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಬೆಳಕು ಚೆಲ್ಲುವ ಬರಹಗಳನ್ನು ಬರೆದಿದ್ದರು. ಬುದ್ದಿವಂತೆ ಎಂದು ಗುರುತಿಸಿಕೊಂಡಿದ್ದ ಆಕೆ ಮಾತ್ರ ಬಡತನ, ಶೋಷಣೆ, ಜಮೀನ್ದಾರೀ ಪದ್ಧತಿಯ ಬಗ್ಗೆ ತನಗನ್ನಿಸಿದ ರೀತಿಯಲ್ಲಿ ಹಲವು ಬರಹಗಳನ್ನು ಬರೆದಿದ್ದಳು. ಮತ್ತಷ್ಟು ಓದು »

23
ಮಾರ್ಚ್

ಮೇರಾ ರಂಗ್ ದೇ ಬಸಂತಿ ಚೋಲಾ…

ಶಿವಾನಂದ ಶಿವಲಿಂಗಪ್ಪ ಸೈದಾಪೂರ (ಎಂ.ಎ.ವಿದ್ಯಾರ್ಥಿ)
ರಾಜ್ಯ ಕಾರ್ಯಕಾರಣಿ ಸದಸ್ಯರು
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್
ರಾಣಿಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ

ಸುಮಾರು ನೂರಾರು ವರ್ಷಗಳ ಕಾಲ ಪರಾಧೀನತೆಯನ್ನು ಕಿತ್ತೊಗೆಯಲು ಲಕ್ಷಾಂತರ ಜನ ತಮ್ಮ ಬಿಸಿ ನೆತ್ತರವನ್ನು ನೀರಾಗಿ ಹರಿಸಿ ನಮಗಾಗಿ, ನಮ್ಮ ಉಳಿವಿಗಾಗಿ ಹೋರಾಡಿ ಜೀವವನ್ನೇ ತೆತ್ತು ಇಂದಿನ ಸುಭದ್ರತೆಗೆ ಕಾರಣರಾದರು. 1857ರ ಮಹಾ ಸಂಗ್ರಾಮದಿಂದ 1947 ರ ವರೆಗೆ ಅನೇಕಾನೇಕ ಕ್ರಾಂತಿಕಾರಿ ಮಹನೀಯರು ಕಾರಣೀಕರ್ತರಾಗಿದ್ದಾರೆ. ಅಂತಹವರಲ್ಲಿ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಹೊಸ ಅಧ್ಯಾಯವನ್ನೇ ಬರೆದ ಮಹಾನ್ ಹೋರಾಟಗಾರರೆಂದರೆ ಅದು ಭಗತ್ ಸಿಂಗ್, ಸುಖದೇವ್, ರಾಜಗುರುರವರು. ಕ್ರಾಂತಿಯ ಇತಿಹಾಸದಲ್ಲಿ ಅವರ ಆತ್ಮ ಬಲಿದಾನವೇ ಅತ್ಯಂತ ಪ್ರಮುಖದೆಂದು ಹೇಳಬಹುದು. ದಾಸ್ಯ ಮುಕ್ತಿಗಾಗಿ, ತಮ್ಮ ಜೀವನದ ಅಂತಿಮ ಹೊತ್ತಿನಲ್ಲಿಯೂ ಕೂಡ ನಗು ನಗುತ ತಾಯಿ ಭಾರತಮಾತೆಯನ್ನು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತ ಉರುಳನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ್ದರು.

ಅಂತಹ ಮಹಾನ್ ಹೋರಾಟಗಾರರ ಬಲಿದಾನವಾಗಿ 87 ವರ್ಷ ಉರುಳಿದವು. ಅದರ ಸ್ಮರಣೆಯೇ ಈ ಲೇಖನ. ಮತ್ತಷ್ಟು ಓದು »

27
ಫೆಬ್ರ

ಛಡಿ ಏಟಿನಿಂದ ಕ್ರಾಂತಿಯ ಕಿಡಿಯವರೆಗೆ…!

– ಶಿವಾನಂದ ಶಿ ಸೈದಾಪೂರ
(ಎಂ. ಎ. ವಿದ್ಯಾರ್ಥಿ )
ABVP ರಾಜ್ಯ ಕಾರ್ಯಕಾರಿಣಿ ಸದಸ್ಯ .

48345_chandra-shekhar-azad-profileಆವತ್ತು ಒಂದು ದಿನ ಕಾಶಿಯಲ್ಲಿ ದೇಶ ಭಕ್ತರೆಲ್ಲರು ಸೇರಿ ವಂದೇಮಾತರಂ ಘೋಷಣೆ ಕೂಗುತ್ತಾ ಶಾಂತಿಯುತವಾಗಿ ಮೆರವಣಿಗೆ ಹೋಗುತ್ತಿದ್ದ ಸಂದರ್ಭ. ಇದ್ದಕಿದ್ದಂತೆ ದುರಳ ಬ್ರಿಟಿಷ್ ಪೋಲಿಸ್ ಅಧಿಕಾರಿಗಳು ದೇಶ ಭಕ್ತರ ಮೇಲೆ ಲಾಠಿ ಚಾರ್ಜ್ ಮಾಡಿದರು. ಶಾಂತಿಯುತವಾಗಿ ಮೆರವಣಿಗೆಯಲ್ಲಿದ್ದವರಿಗೆ ಮನ ಬಂದಂತೆ ತಳಿಸತೊಡಗಿದ್ದರು. ಇದನ್ನು ಗಮನಿಸಿದ ಕಾಶಿವಿದ್ಯಾಪೀಠದಲ್ಲಿ ಅಧ್ಯಯನ ಮಾಡುತಿದ್ದ ಪುಟ್ಟ ಬಾಲಕನೊಬ್ಬ ಬ್ರಿಟಿಷ್ ಪೊಲೀಸರಿಗೆ ಅಟ್ಟಾಡಿಸಿ ಕಲ್ಲು ಹೊಡೆದು ಪರಾರಿಯಾದ. ಆತನ ಬೆನ್ನಟ್ಟಿದ ಪೊಲೀಸರೆ ಓಡಿ ಓಡಿ ಸುಸ್ತಾದರೆ ಹೊರತು ಆತನೇನು ಆವತ್ತು ಸಿಗಲಿಲ್ಲ. ಮರುದಿನ ಯಾರದೋ ಮೊಸದ ಜಾಲದಿಂದ ಆ ಬಾಲಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಯ್ದರು. ಆತನ ಪ್ರತಿಯೊಂದು ಮಾತುಗಳನ್ನು ಕೇಳಿ ಜಡ್ಜನೇ ಹೌಹಾರಿದ. ಆ ಪುಟ್ಟ ಬಾಲಕನ ಬಾಯಿಂದ ಅಂತಹುದೆ ಮಾತುಗಳು ಬರುತ್ತಿದ್ದವು. ನಿನ್ನ ಹೆಸರು ಏನೆಂದು ಜಡ್ಜ ಕೇಳಿದರೆ ”ಅಜಾದ್” ಎಂದು ಅಬ್ಬರಿಸಿದ. ಎಲ್ಲಿ ನಿನ್ನ ಮನೆ ಎಂದರೆ ”ಜೈಲು..! ನನ್ನ ಮನೆ” ಎಂದು ಪ್ರತ್ಯುತ್ತರ ನೀಡಿದ ಆ ಬಾಲಕ. ಆ ಪುಟ್ಟ ಬಾಲಕನ ನಿಷ್ಟುರತೆಯನ್ನು ಕಂಡ ಕೋಪಿಷ್ಟ ಜಡ್ಜ ಸಾಹೇಬ್ ೧೫ ಛಡಿ ಏಟಿನ ಶಿಕ್ಷೆ ನೀಡಿದ. ಪ್ರತಿಯೊಂದು ಏಟು ಬಿದ್ದಾಗ ”ವಂದೇಮಾತರಂ”, ”ಭಾರತ್ ಮಾತಾ ಕೀ ಜೈ”, ”ಗಾಂಧೀಜಿ ಕೀ ಜೈ” ಎಂಬುವ ಘೋಷಣೆಗಳು ಆತನ ಬಾಯಿಂದ ಹೊರಡುತಿದ್ದವು. ಆ ಪುಟ್ಟ ಬಾಲಕನೆ ಚಂದ್ರಶೇಖರ್ ಅಜಾದ್. ಅಜಾದರು ತನ್ನ ಹದಿನಾಲ್ಕನೇ ವಯಸ್ಸಿನಲ್ಲಿ ಜೀವನದ ಮೊದಲ ಮತ್ತು ಕೊನೆಯ ಬಾರಿ ಬ್ರಿಟಿಷ್ ಜೈಲಿನ ಶಿಕ್ಷೆ ಅನುಭವಿಸಿದರು. ಆತನ ಸಾಹಸ ಗಾತೆಯನ್ನು ಕಂಡ ಜನತೆ ಒಂದು ಸಾರ್ವಜನಿಕ ಸಮಾರಂಭ ಏರ್ಪಡಿಸಿದ್ದರು. ಜನರನ್ನು ಉದ್ದೇಶಿಸಿ ಮಾತನಾಡುತ್ತ. ಅಜಾದ್ ”ದುಷ್ಮನೋಂಕಿ ಗೊಲಿಯೋಂ ಸೇ ಮೈ ಸಾಮ್ನಾ ಕರೂಂಗಾ. ಅಜಾದ್ ಹೂಂ ಮೇ ಅಜಾದ್ ಹೀ ರಹೂಂಗಾ” ಎಂದು ಅಬ್ಬರಿಸಿದರು. ಅಕ್ಷರಶ ಅದನ್ನೇ ಕೊನೆಯತನಕ ಪಾಲಿಸಿದ್ದರು. ಮತ್ತಷ್ಟು ಓದು »