ಗಡಾಫಿಯಿಲ್ಲದ ಲಿಬಿಯಾ
-ಉದಯ್ ಇಟಗಿ
ಲಿಬಿಯಾದಲ್ಲಿ ಎದ್ದ ಕ್ರಾಂತಿ ಗಡಾಫಿ ಹತ್ಯೆ, ಹಾಗೂ ಆತನ ಮಗ ಸೈಫ್‍ನ ಬಂಧನದಲ್ಲಿ ಕೊನೆಯಾದ ಮೇಲೆ NTC (National Transition Council) ಗೆ ಇದ್ದ ಎಲ್ಲ ಕಂಟಕಗಳು ಮುಗಿದು ನೆಮ್ಮದಿಯ ನಿಟುಸಿರು ಬಿಟ್ಟಿತ್ತು. ಇದರ ಬೆನ್ನಹಿಂದೆಯೇ ತಾತ್ಕಾಲಿಕವಾಗಿ ಹಂಗಾಮಿ ಸರಕಾರವೊಂದನ್ನು ರಚಿಸಿ ತತ್‍ಕ್ಷಣದ ಸವಾಲುಗಳನ್ನು ಎದುರಿಸುವದೇ ಅದರ ಮುಂದಿನ ಗುರಿಯಾಗಿತ್ತು. ಅದರಲ್ಲೂ ಬಹುಮುಖ್ಯವಾಗಿ ವೈದ್ಯಕೀಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿನ ಸವಾಲುಗಳನ್ನು ಎದುರಿಸುವದು ಮೊದಲ ಆದ್ಯತೆಯಾಗಿತ್ತು. ಹೀಗಾಗಿ ಕ್ರಾಂತಿಯ ಸಮಯದಲ್ಲಿ ಇಲ್ಲಿಂದ ತೆರೆವುಗೊಳಿಸಲಾದ ಬಹಳಷ್ಟು ವಿದೇಶಿ ವೈದ್ಯರುಗಳನ್ನು ಹಾಗೂ ವಿದೇಶಿ ಉಪನ್ಯಾಸಕರುಗಳನ್ನು ಮತ್ತೆ ವಾಪಾಸು ಕರೆಸಿಕೊಳ್ಳಬೇಕೆಂದು ಹಂಗಾಮಿ ಸರಕಾರ ಫರ್ಮಾನು ಹೊರಡಿಸಿತ್ತು. ಆ ಪ್ರಕಾರ ನನಗೆ ವೀಸಾ ಸಿಕ್ಕು ನಾನು ಜನೇವರಿ ೧೦ಕ್ಕೆ ಬೆಂಗಳೂರಿನಿಂದ ಲಿಬಿಯಾಕ್ಕೆ ಹಾರಿ ಬಂದಿದ್ದೆ. “ಎಮಿರೇಟ್ಸ್ ಏರ್ಲೈನ್ಸ್” ಲಿಬಿಯಾಕ್ಕೆ ಇನ್ನೂ ತನ್ನ ಸಂಚಾರವನ್ನು ಆರಂಭಿಸದೇ ಇದ್ದ ಕಾರಣ ನಾನು ಕೈರೋಗೆ ಬಂದು ಅಲ್ಲಿಂದ ‘ಈಜಿಪ್ಟ್ ಏರ್’ ಮೂಲಕ ನೇರವಾಗಿ ಬೆಂಗಾಜಿಗೆ ಬಂದಿಳಿದಿದ್ದೆ.
ಈ ಬೆಂಗಾಜಿ ಇಡಿ ಲಿಬಿಯಾದಲ್ಲಿಯೇ ಮೊಟ್ಟಮೊದಲ ಬಾರಿಗೆ ಮೌಮರ್ ಗಡಾಫಿಯ ವಿರುದ್ಧ ಕ್ರಾಂತಿಯ ಕಹಳೆಯನ್ನು ಊದಿದ ನೆಲ. ಇಲ್ಲಿಯ ಜನ ೨೦೦೬ ಫೆಬ್ರುವರಿ ೧೭ ರಂದು ಗಡಾಫಿಯ ವಿರುದ್ಧ ಬಂಡೆದ್ದಿದ್ದರು. ಆದರೆ ಆ ಹೋರಾಟವನ್ನು ಹತ್ತಿಕ್ಕುವಲ್ಲಿ ಗಡಾಫಿ ಯಶಸ್ವಿಯಾಗಿದ್ದ. ಆದರೆ ಮತ್ತೆ ಐದು ವರ್ಷಗಳ ನಂತರ ಅದೇ ನೆಲದ ಜನ ಅಂದರೆ ೨೦೧೧ ಫೆಬ್ರುವರಿ ೧೭ ರಂದು ಗಡಾಫಿ ವಿರುದ್ಧ ಹೋರಾಟಕ್ಕೆ ಇಳಿದರು. ಈ ಬಾರಿ ತಮ್ಮ ಹೋರಾಟವನ್ನು ಇಡಿ ಲಿಬಿಯಾದ ತುಂಬಾ ಒಂದು ದೊಡ್ಡಮಟ್ಟದ ಕ್ರಾಂತಿಯನ್ನಾಗಿ ತೀವ್ರಗೊಳಿಸುವಲ್ಲಿ ಯಶಸ್ವಿಯಾಗಿ ಬಲಿಷ್ಠ ಸರ್ವಾಧಿಕಾರಿ ಮೌಮರ್ ಗಡಾಫಿಯನ್ನು ಹೇಳಹೆಸರಿಲ್ಲದಂತೆ ನಾಶಮಾಡಿದರು. ಮತ್ತಷ್ಟು ಓದು 
ಅವರು ನಿಷ್ಕ್ರಿಯರ ‘ಗಾಂಧಿ’ ಆಗಿರಲಿಲ್ಲ.. ಕ್ರೀಯಾಶೀಲರ ‘ನೇತಾಜಿ’ ಆಗಿದ್ದರು…
-ಅಶ್ವಿನ್ ಅಮೀನ್
ಭಾರತದ ಸ್ವಾತಂತ್ರ ಸಂಗ್ರಾಮದ ಇತಿಹಾಸವನ್ನು ಹೇಳ ಹೊರಟರೆ ಅದು ಇಂದು ನಾಳೆಗೆ ಮುಗಿಯುವಂತದ್ದಲ್ಲ.. ಆ ಪ್ರವಾಹೋಪಾದಿಯ ಘಟನೆಗಳೇ ಹಲವು ಕೋಟಿ ಪುಟಗಳ ಮಹಾ ಗ್ರಂಥವಾದೀತು.! ಆ ಸಮಯದಲ್ಲಿ ಭಾರತ ಮಾತೆಯ ಬಿಡುಗಡೆಗಾಗಿ ಹೋರಾಡಿದ ಮಹಾನ್ ನಾಯಕರುಗಳೆಷ್ಟೋ, ಹೋರಾಟಗಾರರೆಷ್ಟೋ.. ಅಂತಹ ಹಲವರ ಮದ್ಯೆ ಭಿನ್ನವಾಗಿ ನಿಲ್ಲುವ, ಅಹಿಂಸಾವಾದವನ್ನು ಬಹಿರಂಗವಾಗಿ ವಿರೋಧಿಸಿದ, ಭಗವದ್ಗೀತೆಯ ತಿರುಳಾದ ದುಷ್ಟದಮನ ಶಿಷ್ಟಪಾಲನವನ್ನು ಅನುಷ್ಠಾನಕ್ಕೆ ತರಲು ಯತ್ನಿಸಿದ ಧೀಮಂತ ನಾಯಕ, ಕ್ರಾಂತಿ ಪುರುಷ ನೇತಾಜಿ ಸುಭಾಶ್ ಚಂದ್ರ ಬೋಸ್ ರ ಜನ್ಮ ದಿನ (ಜನವರಿ 23).
ನೇತಾಜಿಯವರ ಹೋರಾಟದ ದಿನಗಳು ರಾಷ್ಟ್ರೀಯ ಕಾಂಗ್ರೆಸ್ ನಿಂದ ಆರಂಭವಾಯಿತು. ಆಗ ಗಾಂಧೀಜಿಯವರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿತ್ತು. ಆದರೆ ಗಾಂಧೀಜಿ ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ತಮ್ಮ ನಾಯಕತ್ವದ ಚಳುವಳಿಗಳಲ್ಲಿ ಎಲ್ಲಾದರೂ ಹಿಂಸಾ ಘಟನೆಗಳು ನಡೆದರೆ ಅದನ್ನು ವಿರೋಧಿಸುತ್ತಿದ್ದರು. ಯಾಕೆಂದರೆ ಬ್ರಿಟಿಷರಿಗೆ ನೋವಾಗುವುದು ಗಾಂಧೀಜಿಯವರಿಗೆ ಇಷ್ಟವಿರಲಿಲ್ಲ. !!!! ಗಾಂಧೀಜಿಯವರ ಪ್ರತಿಯೊಂದು ಚಳುವಳಿಗಳಲ್ಲೂ ಇದು ಎದ್ದು ಕಾಣುತ್ತದೆ.! ಇದು ಬಿಸಿ ರಕ್ತದ ಯುವಕ ಸುಭಾಷ್ ಚಂದ್ರ ಬೋಸ್ ರಿಗೆ ಸಹ್ಯವಾಗಲಿಲ್ಲ. ಅದನೆಲ್ಲ ಒಪ್ಪಿಕೊಳ್ಳಲು ಅವರು ಗಾಂಧಿಯಾಗಿರಲಿಲ್ಲ..! ಅವರು ಸುಭಾಶ್ ಚಂದ್ರ ಬೋಸ್ ಆಗಿದ್ದರು..! ಕ್ರಾಂತಿ ಕ್ರಾಂತಿ ಎಂದು ಜಪಿಸುತಿದ್ದ ನೇತಾಜಿಯವರ ಮನಸ್ಸು ಈ ಗಾಂಧಿಯ ಶಿಖಂಡಿತನವನ್ನು ಒಪ್ಪಿಕೊಳ್ಳುವುದಾದರೂ ಹೇಗೆ..?! ಮುಂದೆ ಕಾಂಗ್ರೆಸ್ಸಿನ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದರೂ ಗಾಂಧೀಜಿ ಸುಭಾಷರ ಜಯವನ್ನು ಒಪ್ಪದ ಕಾರಣ ಹಾಗು ತನ್ನ ಮನಸ್ಸಿಗೆ ವಿರುದ್ಧವಾದ ಭಾವನೆ ಹೊಂದಿರುವ ಗಾಂಧೀಜಿಯೊಡನೆ ಮುಂದುವರಿಯಲು ಸಾಧ್ಯವಾಗದ ಕಾರಣ ನೇತಾಜಿ ಕಾಂಗ್ರೆಸ್ ನಿಂದ ಅನಿವಾರ್ಯವಾಗಿ ಹೊರಬಂದರು. ಅಲ್ಲಿಂದ ಸುಭಾಷರ ಕ್ರಾಂತಿಯ ಜೀವನ ಆರಂಭವಾಯಿತು. ಜೊತೆಗೆ ಭಾರತದ ಕ್ರಾಂತಿಯ ಪುಟಕ್ಕೆ ಹೊಸ ತಿರುವು ಕೂಡ..!
ವಿವೇಕಾನಂದರು ನಮಗೆಷ್ಟು ಗೊತ್ತು?
-ಹೇಮಾ ಪವಾರ್
ಈಗಾಗಲೇ ಕಾಂಟ್ರಾವರ್ಷಿಯಲ್ ನ ಉತ್ತುಂಗದಲ್ಲಿರುವ ವಿವೇಕಾನಂದರ ಬಗ್ಗೆ ಅವಹೇಳನಕಾರಿಯಾಗಿ ಹೇಳಲಾಗಿದೆ ಎನ್ನಲಾದ ದಿನೇಶ್ ಅಮಿನ್ ಮಟ್ಟುರವರ ಲೇಖನದ ರೆಫರೆನ್ಸ್ ಇಟ್ಟುಕೊಂಡೇ ಬರೆಯುತ್ತಿದ್ದೇನೆ. ಶಾಲೆಯ ದಿನಗಳಲ್ಲಿ ನನಗೆ ವಿವೇಕಾನಂದರು ಅಮೇರಿಕಾದಲ್ಲಿ ಭಾಷಣ ಮಾಡಿದವರು, ಹೊರದೇಶದಲ್ಲಿ ಭಾರತದ ಬಗ್ಗೆ ಮಾತನಾಡಿ ಮನ್ನಣೆ ಪಡೆದವರು ಎಂಬಂತಹ ಬೇಸಿಕ್ ಮಾಹಿತಿಗಳನ್ನು ಬಿಟ್ಟರೆ ಹೆಚ್ಚೇನು ತಿಳಿದಿರಲಿಲ್ಲ. ಕಾಲೇಜಿನ ದಿನಗಳಲ್ಲಿ ವಿವೇಕಾನಂದರ ಬಾಲ್ಯದ ಹೆಸರು ನರೇಂದ್ರ, ಬಡವರ ಬಗ್ಗೆ ಅತೀವ ಕಾಳಜಿ ತೋರಿಸುತ್ತಿದ್ದ ಅವರನ್ನು ಕೋಣೆಯೊಂದರಲ್ಲಿ ಕೂಡಿ ಹಾಕಿದರೂ ಕಿಟಕಿಯಿಂದ ಕೈಗೆ ಸಿಕ್ಕಿದ್ದನ್ನು ಬಿಕ್ಷುಕರಿಗೆ ದಾನ ಮಾಡಿಬಿಡುತ್ತಿದ್ದರು ಎಂದೆಲ್ಲಾ ಉರು ಹಚ್ಚಿ ಭಾಷಣಗಳಲ್ಲಿ ಒಪ್ಪಿಸುತ್ತಿದ್ದದ್ದೇ ಹೊರತು ಒಬ್ಬ ವ್ಯಕ್ತಿಯಾಗಿ, ಸಾಧಕರಾಗಿ, ಅದೆಷ್ಟೋ ಜನರಿಗೆ ಪ್ರೇರಕ ಶಕ್ತಿಯಾದ ವಿವೇಕಾನಂದರ ಚಿಂತನೆಗಳನ್ನು ನಿಲುವುಗಳನ್ನು ಬಿಂಬಿಸುವಂತಹ ಮಾಹಿತಿ ಶಾಲೆ ಅಥವಾ ಕಾಲೇಜಿನ ದಿನಗಳಲ್ಲಿ ದಕ್ಕುವುದು ವಿರಳವಾಗಿತ್ತು.
ಇಂತಹ ಪುಸ್ತಕದಲ್ಲಿ, ಹೀಗೆ, ಇಂತಹವರು ಹೇಳಿದ್ದಾರೆ ಎಂದು ಇಡೀ ಪುಸ್ತಕವನ್ನೇ ಇಂಡೆಕ್ಸ್ ಮಾಡಿಕೊಂಡಿದ್ದ ಖ್ಯಾತ ಕಾದಂಬರಿಯೊಂದನ್ನು ಓದಿ ವಿವೇಕಾನಂದರ ನಿಜದ ನಿಲುವು ಹೀಗಿತ್ತೇ ಎಂದು ಗೊಂದಲಕ್ಕೊಳಗಾಗಿ ಅವರ ಬಗ್ಗೆ ಓದಲು ತೊಡಗಿದೆ. ಸೆಂಟ್ರಲ್ ಲೈಬ್ರರಿಯ ಹತ್ತಾರು ಪುಸ್ತಕಗಳ ನಡುವೆ ಆಸಕ್ತಿಕರ ಎನಿಸಿದ ಪುಸ್ತಕ ‘Swami Vivekananda On Himself’, ಆತ್ಮ ಕಥೆ ಎಂದು ಹೇಳಲು ಬರದಿದ್ದರೂ ಆ ಪುಸ್ತಕದಲ್ಲಿದ್ದದ್ದೆಲ್ಲಾ ವಿವೇಕಾನಂದರ ಬರಹಗಳೇ, ಅವರ ಡೈರಿಯಿಂದ ಹೆಕ್ಕಿದ್ದು, ಹಲವರ ಜೊತೆ ಹಂಚಿಕೊಂಡ ಪತ್ರಗಳು ಹೀಗೆ ಅವರ ವಿಚಾರಗಳನ್ನು ಹಿಡಿಯಾಗಿ ಬಿಂಬಿಸುವಂತಹ ಪುಸ್ತಕವದು. ಓದಿ ಮುಗಿಸುವಷ್ಟರಲ್ಲಿ ಅವರ ಚಿಂತನೆಗಳಿಂದ ತೀವ್ರ ಪ್ರಭಾವಿತಳಾಗಿದ್ದೆ. ವಿವೇಕಾನಂದರು ಮತ್ತವರ ಚಿಂತನೆಗಳು ಎಲ್ಲಾ ಕಾಲಕ್ಕು ಅನ್ವಯವಾಗುವಂತವು. ತಮ್ಮ ಬರಹಕ್ಕೆ ಬೆಂಬಲಿಸುವಂತದ್ದಷ್ಟೇ ಮುಖ್ಯವಾಗಿಸಿಕೊಂಡು ಅವರು ಹೀಗಿದ್ದರು ನೋಡಿ ನಾನು ಹೇಳುತ್ತಿರುವುದೂ ಅದನ್ನೇ ಎಂದು ತಮ್ಮ ವಿಕೃತಿಯನ್ನು ವಿವೇಕಾನಂದರ ಮೇಲೆ ಹೇರಲೆತ್ನಿಸಿದ ಆ ಖ್ಯಾತ ಕಾದಂಬರಿಕಾರರ ಬಗ್ಗೆ ಯೋಚಿಸಿ ನಗು ಬಂದಿತ್ತು.
ಪ್ರೀತಿಯ ಮಟ್ಟು ಸರ್, ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.
– ಪೂರ್ಣಚಂದ್ರ
(ಇತ್ತೀಚಿಗೆ ದಿನೇಶ್ ಅಮಿನ್ ಮಟ್ಟು ಅವರು ಬರೆದ ಬಹುಚರ್ಚಿತ ಲೇಖನಕ್ಕೆ ಪೂರ್ಣಚಂದ್ರ ಅವರು ಪ್ರತಿಕ್ರಿಯಯನ್ನು ಕಳುಹಿಸಿದ್ದಾರೆ. ಓದಿ..)
ಪ್ರೀತಿಯ ಮಟ್ಟು ಸರ್,
ನಿಮಗೊಂದು ಪ್ರೀತಿಯ ಬಹಿರಂಗ ಪತ್ರ.
ನಮಸ್ಕಾರಗಳು. ನನ್ನ ಪರಿಚಯ ನಿಮಗೆ ಇಲ್ಲ ಎಂದು ಕಾಣುತ್ತೆ. ಆದರೆ, ನಿಮ್ಮ ಪರಿಚಯ ನನಗೆ ೧೦ ವರ್ಷದ್ದು. ನಿಮ್ಮ ಅಂಕಣಗಳನ್ನು ಓದುತ್ತಾ ಬೆಳೆದವನು ನಾನು.
ವಿವೇಕಾನಂದರ ಬಗ್ಗೆ ನೀವು ಬರೆದ ಲೇಖನ ಓದಿದ ಬಳಿಕ, ನನಗನಿಸಿದ್ದನ್ನು ನಿಮ್ಮೊಂದಿಗೆ ಹಂಚಿಕೊಳ್ಳಬೇಕು ಅನಿಸಿತು. ಅಷ್ಟರಲ್ಲಿಯೇ ವಿವೇಕಾನಂದರ ಪರ ಎಂದು ಭ್ರಮಿಸಿರುವ, ಭಾವಿಸಿಕೊಂಡಿರುವ ಬಲಪಂಥೀಯ ಮೂಲಭೂತವಾದಿಗಳು ನಿಮ್ಮ ವಿರುದ್ಧ ಕತ್ತಿ ಬೀಸಲಾರಂಭಿಸಿದರು.
ಇದಕ್ಕೆ ಪ್ರತಿಯಾಗಿ, ತಾವು ಮಟ್ಟು ಪರ(ವಿವೇಕನಂದ ಪರ ಅಲ್ಲ) ಎಂದು ಭ್ರಮಿಸಿರುವ ಎಡಪಂಥೀಯ ಹಾಗೂ ಪ್ರಗತಿಪರ ಮೂಲಭೂತವಾದಿಗಳು ಕೂಡ ತಮ್ಮ ಕತ್ತಿಗೆ ಸಾಣೆ ಹಿಡಿಯಲಾರಂಭಿಸಿದರು.
ಈ ಎರಡೂ ವರ್ಗದ ಮೂಲಭೂತವಾದಿಗಳು ಶಿವಮೊಗ್ಗ ಮತ್ತು ಬೆಂಗಳೂರಿನ ಬೀದಿಗಳಲ್ಲಿ, ನಿಮ್ಮ ಕಚೇರಿ ಎದುರು, ಬ್ಲಾಗ್‌ಗಳಲ್ಲಿ ಕತ್ತಿ ಬೀಸಾಡುವಾಗ ಮಧ್ಯೆ ಪ್ರವೇಶಿಸಲು ಭಯವಾಯಿತು. ಯಾರದ್ದಾದರೂ ಕತ್ತಿ ನನ್ನನ್ನೇ ತಿವಿದುಬಿಡಬಹುದು ಎಂದು ಸುಮ್ಮನಾದೆ. ಈಟಿ, ಭರ್ಜಿ, ಕತ್ತಿ ಗುರಾಣಿಗಳ ಅಬ್ಬರ ಕಡಿಮೆಯಾಗಿದೆ. ಹಾಗಾಗಿ ಇದು ಸೂಕ್ತ ಸಮಯ ಎಂದು ನನಗನಿಸಿದ್ದ ಕೆಲ ಸಂಗತಿಗಳನ್ನು ಹೇಳಲು ಪ್ರಯತ್ನಿಸುವೆ. ಮತ್ತಷ್ಟು ಓದು 
ಮಿಡ್ನಾಪುರದಲ್ಲಿ ಕ್ರಾಂತಿಯ ಕಲರವ…
– ಭೀಮಸೇನ್ ಪುರೋಹಿತ್
ಬಂಗಾಳದ ತೋಟದಿಂದ, ತಾಯಿ ಭಾರತಿಗೆ ಪೂಜಿತಗೊಂಡ ಕ್ರಾಂತಿಯ ಹೂವುಗಳು ಅಸಂಖ್ಯ,ಅಂಥಾ ಒಬ್ಬ ಯುವಕನ ಸ್ಮರಣೆ ಇದು.
ಮಿಡ್ನಾಪುರ ಅನ್ನೋದು ಬಂಗಾಳದ ಒಂದು ಜಿಲ್ಲೆ. “ಅನುಶೀಲನ ಸಮಿತಿ”ಯ ಪ್ರಭಾವದಿಂದ ಅನೇಕ ಯುವಕ ಕ್ರಾಂತಿಕಾರಿಗಳು ಅಲ್ಲಿ ಬೆಳೆದಿದ್ರು..ಮಿಡ್ನಾಪುರದಲ್ಲಿ ಇದ್ದ ಆಂಗ್ಲ ಅಧಿಕಾರಿಗಳು ಅತಿಕ್ರೂರತನದಿಂದ ಆಳ್ವಿಕೆ ನಡೆಸ್ತಿದ್ರು.
ಅಲ್ಲಿನ ಮ್ಯಾಜಿಸ್ಟ್ರೇಟ್ ಗಳಂತೂ, ಕ್ರಾಂತಿಕಾರಿಗಳ ಮೇಲೆ ಕೇಸುಗಳನ್ನ ಹಾಕಿ, ವಿವಿಧ ಶಿಕ್ಷೆಗಳನ್ನ ವಿಧಿಸ್ತಿದ್ರು.ಹೀಗಾಗಿಯೇ, ಮಿಡ್ನಾಪುರದ ಯುವಕರು ಆಲ್ಲಿನ ಬ್ರಿಟಿಷರಿಗೆ ಒಂದು ಬಿಸಿ ಮುಟ್ಟಿಸಿದರು. ತಮ್ಮ ಜಿಲ್ಲೆಗೆ ಒಬ್ಬ ಭಾರತೀಯನನ್ನು ಮ್ಯಾಜಿಸ್ಟ್ರೇಟ್ ಮಾಡೋ ವರೆಗೂ, ಉಳಿದ ಆಂಗ್ಲ ಮ್ಯಾಜಿಸ್ಟ್ರೇಟ್ ಗಳನ್ನ ಕೊಲ್ತಿವಿ ಅಂತ..ಬ್ರಿಟಿಷರು ಇದನ್ನು ಅಷ್ಟೊಂದು ಪರಿಗಣಿಸಲಿಲ್ಲ.
ಆಗ ಅಲ್ಲಿಗೆ ‘ಜೇಮ್ಸ್ ಪ್ಯಾಡಿ’ ಅನ್ನೋನು ಮ್ಯಾಜಿಸ್ಟ್ರೇಟ್ ಆಗಿ ಬಂದ. ಪ್ರತಿಜ್ಞೆ ಮಾಡಿದ್ದ ಕ್ರಾಂತಿಕಾರಿಗಳು, ಅದೊಂದು ಸಮಾರಂಭದಲ್ಲಿ, ಅತಿಥಿಯಾಗಿ ಬಂದಿದ್ದ ಅವನನ್ನು ಗುಂಡು ಹಾರಿಸಿ ಕೊಂದೇ ಬಿಟ್ಟರು. ಬ್ರಿಟಿಷರು ಕಲ್ಕತ್ತೆಯಿಂದ ವೈದ್ಯರನ್ನು ಕರೆಸಿದರು. ವೈದ್ಯರು ಪ್ಯಾಡಿ ಯಾ ದೇಹದಿಂದ ಗುಂಡುಗಳನ್ನು ಹೊರತೆಗೆದರೂ, ಅವನನ್ನು ಬದುಕಿಸಲಾಗಲಿಲ್ಲ.. ಯುವಕರ ನಿಲುವು ಸ್ಪಷ್ಟವಾಗಿತ್ತು. ಆಂಗ್ಲರು ಈಗ ಸ್ವಲ್ಪ ಚಿನ್ತಿಸಲಾರಮ್ಭಿಸಿದರು..
ಆನಂತರ ‘ಡಾಗ್ಲಾಸ್’ ಎಂಬ ಆಂಗ್ಲನನ್ನು ಮತ್ತೆ ಮ್ಯಾಜಿಸ್ಟ್ರೇಟ್ ಆಗಿ ನಿಯೋಜಿಸಿದರು.. ಆತ ಮೊದಲಿಂದಲೂ ಹೆದರಿದ್ದ.ಅದೊಮ್ಮೆ “ಡಿಸ್ಟ್ರಿಕ್ಟ್ ಬೋರ್ಡ್” ನ ಸಭೆ ಇತ್ತು. ಸಂಜೆಯವರೆಗೂ ಶಾಂತಿಯುತವಾಗಿಯೇ ಇತ್ತು. ಆದರೆ ಗಂಟೆ ೫ ಆಗುತ್ತಿದ್ದಂತೆ ಇಬ್ರು ಯುವಕರು, ‘ಡಾಗ್ಲಾಸ್’ ನ ಹತ್ರ ಬಂದ್ರು. ನೋಡುನೋಡುತ್ತಲೇ ಆ ಆಂಗ್ಲನ ಮೇಲೆ ಗುಂಡು ಹಾರಿಸಲಾಯಿತು..ಆ ಅಧಿಕಾರಿ ಧರೆಗುರುಳಿದ.
‘ಚಿತ್ತಗಾಂಗ್’ನಲ್ಲಿ ಸ್ವಾತಂತ್ರ್ಯ’ಸೂರ್ಯ’ನ ಉದಯ…!
– ಭೀಮಸೇನ್ ಪುರೋಹಿತ್
‘ಚಿತ್ತಗಾಂಗ್’ ಅನ್ನೋ ಹೆಸರು ಕೇಳಿದರೆ ಸಾಕು, ಸ್ವಾತಂತ್ರ್ಯ ಇತಿಹಾಸವನ್ನು ಓದಿದ ಪ್ರತಿಯೊಬ್ಬರಿಗೂ ಮೈನವಿರೇಳುತ್ತದೆ. ಅಂಥಾ ಚಮತ್ಕಾರ ನಡೆದ ಸ್ಥಳ ಅದು. ಕ್ರಾಂತಿಕಾರಿಗಳ, ದೇಶಪ್ರೇಮಿಗಳ ಪುಣ್ಯಕ್ಷೇತ್ರವದು.ಆದರೆ, ದೇಶ ವಿಭಜನೆಯಾದ ಮೇಲೆ, ಈಗ ಈ ಜಾಗ ‘ಬಾಂಗ್ಲಾದೇಶ’ದಲ್ಲಿದೆ..
ಅವನ ಹೆಸರು ‘ಸೂರ್ಯಸೇನ್’. ವೃತ್ತಿಯಿಂದ ಶಿಕ್ಷಕ.. ಎಲ್ಲ ವಿದ್ಯಾರ್ಥಿಗಳ ಪ್ರೀತಿಯ ‘ಮಾಸ್ಟರ್ ದಾ’.ಹುಟ್ಟಿದ್ದು ನೌಪರ ಎಂಬ ಗ್ರಾಮದಲ್ಲಿ, 1894 ರಲ್ಲಿ…ಅದಾಗಲೇ, ಬಂಗಾಳದ ಪ್ರಸಿದ್ಧ ಸಂಘಟನೆಗಳಾದ ‘ಅನುಶೀಲನ ಸಮಿತಿ’ ಮತ್ತು ‘ಜುಗಾಂತರ’ ದಿಂದ ಪ್ರಭಾವಿತನಾಗಿದ್ದ..
ಭಾರತದ ಸ್ವಾತಂತ್ರ್ಯ, ಚಿತ್ತಗಾಂಗ್ ಗ್ರಾಮದಿಂದಲೇ ಪ್ರಾರಂಭವಾಗಬೇಕೆಂಬ ಮಹತ್ವಾಕಾಂಕ್ಷೆ ಹೊದಿದ್ದ.. ಅದಕ್ಕಾಗಿ ಮಾಸ್ಟರ್ ದಾ, ಸಂಘಟನೆಯನ್ನೂ ಶುರು ಮಾಡಿದ್ರು.. ಶಿಕ್ಷಕರಾಗಿದ್ದರಿಂದ ಸಂಘಟನೆ ಮಾಡೋದು ಅಷ್ಟೇನೂ ಕಷ್ಟ ಆಗ್ಲಿಲ್ಲ. ಶಾಲೆಯಲ್ಲಿನ, ಕೇವಲ 14-15 ವರ್ಷದೊಳಗಿನ ಪುಟ್ಟ ವಿದ್ಯಾರ್ಥಿಗಳೂ ಸೂರ್ಯಸೇನನ ಜೊತೆ ಸಹಕರಿಸಲು ಮುಂದೆ ಬಂದ್ರು..
ನನ್ನ ಬದುಕು ಪರಿವರ್ತಿಸಿದ ಬಂಗಾರಪ್ಪ
“1992 ನೇ ಇಸ್ವಿ.ನಾನು ಆಗಷ್ಟೇ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆದು ಮುಗಿಸಿದ್ದೆ.ಫಲಿತಾಂಶ ಇನ್ನೂ ಬಂದಿರಲಿಲ್ಲ.ಅತ್ಯಂತ ಕಡು ಬಡತನದ ಕುಟುಂಬ ನಮ್ಮದು.ಒಂದು ಹೊತ್ತಿನ ತುತ್ತಿಗೂ ತತ್ವಾರ ಪಡುವಂತ ದಯನೀಯ ಮತ್ತು ಶೋಚನೀಯ ಸ್ಥಿತಿ.ತಂದೆ ನಾ ಮಗುವಾಗಿರುವಾಗಲೇ ಗತಿಸಿದ್ದರು.ಮೂರು ಜನ ಅಣ್ಣಂದಿರು, ಒಬ್ಬಳು ಸಹೋದರಿ.ದೊಡ್ಡಣ್ಣ 10-11ರ ಪ್ರಾಯದಲ್ಲಿಯೇ ಮನೆ ಬಿಟ್ಟು ಹೋದವನು ನಾಪತ್ತೆಯಾಗಿದ್ದ.ಅಮ್ಮ ಅವನಿಗಾಗಿ ಹುಡುಕಾಡಿ ಹುಡುಕಾಡಿ ಹೈರಾಣಾಗಿದ್ದರು.ಉಳಿದ ಇಬ್ಬರು ಅಣ್ಣಂದಿರಲ್ಲಿ ಒಬ್ಬ ಮಾತ್ರ ಅತ್ಯಂತ ಶ್ರಮಜೀವಿ.ಇಬ್ಬರೂ ಕೂಲಿ ಕೆಲಸ ಮಾಡಿ ತುತ್ತಿನ ಚೀಲ ತುಂಬಿಸುತ್ತಿದ್ದರು. ಅನ್ನಕ್ಕಾಗಿ ಹಾತೊರೆಯುವ ಪರಿಸ್ಥಿತಿ ಅದಾಗಿತ್ತು. ಅದಕ್ಕಾಗಿ ಒಮ್ಮೊಮ್ಮೆ ಅಕ್ಕ,ಅಣ್ಣಂದಿರೊಂದಿಗೆ ಜಗಳವಾಡಿದ್ದು ಇಂದಿಗೂ ನೆನಪಿದೆ. ಕೊನೆಯ ಮಗನಾದ ನನ್ನನ್ನು ಓದಿಸಬೇಕೆಂಬುದು ಅಮ್ಮನ ಮಹದಾಸೆ ಅಣ್ಣಂದಿರ ಹಿರಿಯಾಸೆಯಾಗಿತ್ತು.
ರಷ್ಯಾದಲ್ಲಿ ಭಗವದ್ಗೀತೆ ನಿಷೇಧಕ್ಕೆ ಯಾಕೀ ಕೂಗಾಟ ?
-ಅರವಿಂದ್
ಮಾಧ್ಯಮಗಳಲ್ಲಿ ಹಾಗೂ ಲೋಕಸಭೆಯಲ್ಲಿ ನೆನ್ನೆಯಿಂದಲೂ ಒಕ್ಕೊರಲಿಗಿನ ವಾದ-ವಿವಾದ. ಬಿಜೆಪಿ ಇನ್ನಿತರ ವಿರೋಧಪಕ್ಷಗಳು, ಹಿಂದೂ ಹೋರಾಟಗಾರರು, ಇಸ್ಕಾನು ಎಲ್ಲರದೂ ಒಂದೇ, ಮಾತು. ರಷ್ಯಾದಲ್ಲಿ ಭಗವದ್ಗೀತೆ ನಿಷೇಧ ಬೇಡವೆಂಬ ಕೂಗು. ಇದ್ಯಾಕೋ ಗೊತ್ತಾಗಲಿಲ್ಲ. ರಷ್ಯಾದಲ್ಲಿ ಭಗವದ್ಗೀತೆ ನಿಷೇಧಿಸಿದರೆ ಭಾರತಕ್ಕಾಗುವ ನಷ್ಟವೇನು ? ಹೇಳಿ ಕೇಳಿ ರಷ್ಯಾ ಕಮ್ಯೂನಿಷ್ಟ್ ದೇಶ. ಆ ದೇಶ ಭಾರತದಂತೆ ಯಾವುದೇ ಧರ್ಮ ತಳಹದಿಯ ಮೇಲೆ ನಿರ್ಮಾಣವಾದ ದೇಶವಲ್ಲ. ಅದು ಧರ್ಮವನ್ನು ಅಫೀಮು ಎಂದುಕೊಂಡ ದೇಶ. ಇಂಥ ದೇಶಕ್ಕೆ ಧರ್ಮಗಳಿಂದ ನಾಗರೀಕರನ್ನು ಉದ್ಧಾರ ಮಾಡುವ ರಾಜಕೀಯವೂ ಇಲ್ಲ. ಇಂಥ ದೇಶದಲ್ಲಿ ಭಗವದ್ಗೀತೆಯಾದರೇನು, ಖುರಾನಾದರೇನು ಇನ್ಯಾವುದೇ…. ಇದ್ದರೇನು ಧರ್ಮಗ್ರಂಥಗಳಿಗೆ ವಿಶೇಷ ಮಾನ್ಯತೆಯೂ ಇಲ್ಲ.
ರಷ್ಯಾಕ್ಕೆ ತನ್ನದೇ ಆದ ಇತಿಹಾಸವಿದೆ, ಕಮ್ಯೂನಿಷ್ಟ್ ಮ್ಯಾನಿಫೆಸ್ಟೋ ಅಲ್ಲಿನ ಧರ್ಮಗ್ರಂಥವಿದ್ದಂತೆ. ಇಂಥ ದೇಶದಲ್ಲಿ ಭಗವದ್ಗೀತೆ ನಿಷೇಧಿಸಬಾರದೆಂಬ ಕೂಗು, ಅದಕ್ಕೆ ಬೇಕಾದ ರಾಜತಾಂತ್ರಿಕತೆಯ ರಾಯಭಾರ ಭಾರತಕ್ಯಾಕೆ ಅಂತ ತಿಳಿಯುತ್ತಿಲ್ಲ. ಹೋರಾಟ ಇವೆಲ್ಲ ಅವಶ್ಯಕತೆ ಇದ್ಯಾ ? ಭಾರತದಲ್ಲಿ ಮುಸಲ್ಮಾನ, ಕ್ರ್ಯೆಸ್ತ ಅನುಯಾಯಿಗಳು ಆ ಧರ್ಮದ ಪ್ರಚಾರ ಕ್ಯೆಗೊಂಡರೆ ಅದು ಮತಾಂತರವಾದರೆ, ರಷ್ಯಾಗೂ ಅದು ಅನ್ವಯಿಸುವುದಿಲ್ಲವೇ ? ನಾನಿಲ್ಲಿ ಯಾವುದೇ ಧರ್ಮ ದೊಡ್ಡದು ವಿಶಾಲವಾದದ್ದೂ ಅನ್ನೋ ತುಲನೆಗೆ ಹೇಳುತ್ತಿಲ್ಲ. ಪ್ರತಿ ದೇಶಕ್ಕೂ ಅದರದ್ದೇ ಆದ ಸಂವಿಧಾನ ಕರಡು ಇರುತ್ತದೆ. ರಷ್ಯಾಕ್ಕೆ ಭಗವದ್ಗೀತೆಯ ಅವಶ್ಯಕತೆಯಿಲ್ಲ ಮತ್ತು ಅಲ್ಲಿ ಭಗವದ್ಗೀತೆಯ ಯಾವುದೋ ಅಧ್ಯಾಯದ ಯಾವುದೋ ಸಾಲು ಅಹಿಂಸೆಯನ್ನು ಸೃಷ್ಠಿಮಾಡುತ್ತದೆ ಎಂಬ ಆಲೋಚನೆಯಿದ್ದರೆ ಇರಲಿ ಬಿಡಿ, ಅದರಿಂದ ನಮಗ್ಯಾವ ನಷ್ಟವೂ ಇಲ್ಲ. ಭಗವದ್ಗೀತೆ ಭಾರತದ ಸಂಸ್ಕೃತಿಗೆ ತಳಹದಿಯಾದರೆ, ಅದು ಭಾರತಕ್ಕಾದೀತು. ರಷ್ಯಾವೂ ಭಾರತದಂತೆ ಪಾಲಿಸಬೇಕು ಅನ್ನುವ ಹಠ ಯಾಕೆ ? ಅದೇನೋ ಆಗಬಾರದ್ದು ಮಾಡಬಾರದ್ದು ಮಾಡುತ್ತಿರುವಂತೆ ಕೂಗಾಡುವ ಅವಶ್ಯಕತೆಯೇನಿದೆ. ಮತ್ತಷ್ಟು ಓದು 
ಗಾಂಧಿಬಂದ ವಿವಾದ : ಆತ್ಮಾವಲೋಕನೆಗೆ ಸುಸಂದರ್ಭ
-ಪ್ರವೀಣ್. ಟಿ. ಎಲ್
ನಾಗವೇಣಿಯವರ ‘ಗಾಂಧಿಬಂದ’ ಎಂಬ ಕಾದಂಬರಿಯ ಕುರಿತು ಬೇರೆ ಬೇರೆ ಪತ್ರಿಕೆಗಳಲ್ಲಿ ಇಂದು ವಿವಾದ ನಡೆಯುತ್ತಿದೆ. ಇದಕ್ಕೆ ರಾಜೇಂದ್ರ ಚೆನ್ನಿಯವರು 1-12-2011 ರಂದು ತಮ್ಮ ಪತ್ರಿಕೆಯಲ್ಲಿ ಗಾಂಧಿ ಬಂದ’ ಕೃತಿಯ ನಿಷೇಧಕ್ಕೆ ಒತ್ತಾಯ ತರವಲ್ಲ ಎಂಬ ಶೀರ್ಷಿಕೆಯಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯದ ಹಿನ್ನೆಲೆಯಲ್ಲಿ ನನ್ನ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಅದು ‘ಜಾತಿ ಸಂಸ್ಥೆಗಳು’ ವಿಶ್ವವಿದ್ಯಾನಿಲಯಗಳ ಮೇಲೆ ತರುತ್ತಿರುವ ‘ಅನೈತಿಕ ಒತ್ತಡ’ವಾಗಿದ್ದು, ಅವುಗಳನ್ನು ‘ಲಕ್ಷ’ಕ್ಕೆ ತೆಗೆದುಕೊಳ್ಳಬಾರದೆಂಬ ವಾದವನ್ನು ಮುಂದಿಟ್ಟರು. ಹಾಗೂ ಅವರ ವಾದವು ಮೇಲ್ನೋಟಕ್ಕೆ ಸಮಂಜಸವಾಗಿ ಕಾಣುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಇದು ಜಾತಿ ಸಂಸ್ಥೆಗಳ ರಾಜಕೀಯ ಎಂಬುದನ್ನು ಗುರುತಿಸಿದಾಗ ಈ ರಾಜಕೀಯದಲ್ಲಿ ಸಾಹಿತ್ಯವು ತಟಸ್ಥ ಪಕ್ಷವಾಗಿ ತನ್ನನ್ನು ಉಳಿಸಿಕೊಂಡಿದೆಯೆ? ಎಂಬ ಪ್ರಶ್ನೆ ಏಳುತ್ತದೆ.
ತಮಗೆ ಪಥ್ಯವಾಗದ ಯಾವುದೋ ವಿಚಾರವನ್ನು ಮಂಡಿಸಿದೆ ಎನ್ನುವ ಕಾರಣಕ್ಕಾಗಿ ಗ್ರಂಥಗಳನ್ನೇ ನಿಷೇಧಿಸಬೇಕೆಂಬ ಹಾಗೂ ಸಂಶೋಧನೆಗಳನ್ನೇ ನಿಲ್ಲಿಸಬೇಕೆಂದು ಒತ್ತಡ ತರುವ ಪೃವೃತ್ತಿಯು ಇತ್ತೀಚೆಗೆ ಹೆಚ್ಚಾಗುತ್ತಿದೆ ಎಂಬುದು ವಿಷಾದಕರ ಸಂಗತಿ ಹಾಗೂ ಖಂಡನೀಯ. ಇದು ನಮ್ಮ ಸಂಸ್ಕೃತಿಗೆ ತೀರ ಅಸಹಜವಾದ ಒಂದು ಬೆಳವಣಿಗೆ ಎಂಬುದರಲ್ಲಿ ಸಂದೇಹವಿಲ್ಲ. ಏಕೆಂದರೆ ಕೆಲವು ಜಾತಿಯ ಪಾತ್ರಗಳನ್ನು ಹಿಯ್ಯಾಳಿಸುವ, ವ್ಯಂಗ್ಯವಾಡುವ ಹಲವಾರು ಪ್ರದರ್ಶನ ಕಲೆಗಳು ಇಂದಿಗೂ ಯಾವ ‘ಜಾತಿಸಂಸ್ಥೆಗಳ’ ಕೆಂಗಣ್ಣಿಗೂ ಗುರಿಯಾಗದೇ ಮುಂದುವರೆದುಕೊಂಡು ಬರುತ್ತಿರುವುದನ್ನು ನಮ್ಮ ಸಮಾಜದಲ್ಲಿ ನೋಡಲು ಸಾಧ್ಯವಾಗುತ್ತಿದೆ. ಉದಾಹರಣೆಗೆ ಜಾನಪದೀಯ ಕಲೆಗಳಾದ, ‘ಯಕ್ಷಗಾನ’, ‘ತಾಳಮದ್ದಳೆ’, ‘ಶನಿಮಹಾತ್ಮನ ಆಟ’ ಇವುಗಳ ಸಂದರ್ಭದಲ್ಲಿ ಬ್ರಾಹ್ಮಣರಾದಿಯಾಗಿ ಎಷ್ಟೋ ಜಾತಿಗಳ ಪಾತ್ರಗಳನ್ನು(ಮಾಣಿಭಟ್ಟ, ಇತ್ಯಾದಿ) ಹಾಸ್ಯಕ್ಕೆ, ವಿಡಂಬಿಸುವುದಕ್ಕಾಗಿ ಸೃಷ್ಟಿಸಲಾಗಿರುತ್ತದೆ. ಅಂತಹ ಸಂದರ್ಭದಲ್ಲಿ ಅದೇ ಜಾತಿಯ ಜನರು ಅಂತಹ ಪ್ರದರ್ಶನಗಳನ್ನು ನೋಡಿ ಸಂತೋಷವನ್ನು ಪಡುತ್ತಾರೆ, ಕಲಾವಿದನ ಪ್ರತಿಭೆಯನ್ನು ಮೆಚ್ಚಿ ಹೊಗಳುತ್ತಾರೆ. ಜೊತೆಗೆ ಅಂತಹ ಪ್ರದರ್ಶನಗಳು ಪದೇ ಪದೇ ತಮ್ಮ ಊರುಗಳಲ್ಲಿ ನಡೆಯುವಂತೆ ಅಲ್ಲಿನ ಜನರು ಮತ್ತು ಈ ‘ಜಾತಿಸಂಸ್ಥೆಗಳೇ’ ನೋಡಿಕೊಳ್ಳುತ್ತವೆ. ಈ ಸಾಂಪ್ರದಯಿಕ ಕಲೆಯ ಸಂದರ್ಭದಲ್ಲಿ ಕಾಣದ ಪೃವೃತ್ತಿಯು ಆಧುನಿಕ ಸಾಹಿತ್ಯದ ಸಂದರ್ಭದಲ್ಲೇಕೆ ಹುಟ್ಟಿಕೊಳ್ಳಬೇಕು? ಆಧುನಿಕ ಸಾಹಿತ್ಯದ ಸಂದರ್ಭದಲ್ಲೂ ಕೂಡ ಚೆನ್ನಿಯವರು ಹೇಳುವಂತೆ ಈ ಪೃವೃತ್ತಿಯು ಜಾತಿ ರಾಜಕೀಯ ಸಂಸ್ಥೆಗಳಿಂದ ಪ್ರಚೋದಿತವಾದುದನ್ನೇ ಕಾಣುತ್ತೇವೆಯೇ ವಿನಃ ಸಾಮಾನ್ಯ ಓದುಗರಿಂದಲ್ಲ. ಹಾಗಾಗಿ ಈ ಪೃವೃತ್ತಿಗೂ ನಮ್ಮ ಸಾಂಪ್ರದಾಯಿಕ ಸಮಾಜಕ್ಕೂ ಸಂಬಂಧವಿಲ್ಲ ಎಂಬುದು ಸ್ಪಷ್ಟ. ಇದೊಂದು ಭಿನ್ನವಾದ ಸಾಮಾಜಿಕ ವಾಸ್ತವದಲ್ಲಿ ಹುಟ್ಟಿಕೊಂಡ ಸಮಸ್ಯೆಯಾಗಿದೆ. ಮತ್ತಷ್ಟು ಓದು 
ಗೆಂದಾಲಾಲ್ ದಿಕ್ಷಿತ್ — ಅಪರೂಪದ ಅಜ್ಞಾತ ಕ್ರಾಂತಿಕಾರಿ..!!!
-ಭೀಮಸೇನ್ ಪುರೋಹಿತ್
ಭಾಳ ಅಂದ್ರೆ ಆ ಹುಡುಗನಿಗೆ 9-10 ವರ್ಷ ವಯಸ್ಸಿರಬಹುದು.. ಅವತ್ತೊಂದಿನ, ಬೆಳಗಿನ ನಸುಕಿನಲ್ಲಿಯೇ ಎದ್ದು, ತನ್ನೂರಿನಲ್ಲಿ ಹರಿಯುತ್ತಿದ್ದ ಯಮುನಾ ನದಿಗೆ ತೆರಳಿ ಸ್ನಾನ ಮಾಡಿ ಶುದ್ಧನಾದ. ಮಿಂದೆದ್ದು ಬಂದವನೇ, ದಡದ ಮೇಲಿದ್ದ ಕಾಳಿಯ ಗುಡಿಯೆಡೆ ಹೊರಟ.. ಪೂಜೆಗೆ ಹೋಗ್ತಾ ಇರಬಹುದೆಂದು ಎಲ್ಲರೂ ಅನ್ಕೊಂಡಿದ್ರು.. ಆದ್ರೆ ಅವನು ಹೋಗ್ತಿದ್ದಿದ್ದು ಪೂಜೆಗಲ್ಲ, ಪ್ರತಿಜ್ಞೆಗೆ..!!!!!!!!
” ತಾಯೆ, ಆಂಗ್ಲರ ದುರಾಡಳಿತದಲ್ಲಿ ನಲುಗುತಿರುವ ದೇಶದ ಸ್ವಾತಂತ್ರ್ಯವೇ ನನ್ನ ಜೀವನದ ಧ್ಯೇಯ.. ನನ್ನ ಕೊನೆ ಉಸಿರಿನವರೆಗೂ, ಕೊನೆ ರಕ್ತದ ಹನಿ ಪುಟಿಯುವವರೆಗೂ ಭಾರತಿಯ ಸೇವೆಗಾಗಿ ನನ್ನ ಬದುಕು ಮುಡಿಪು”, ಅಂತ ಆ ಸಣ್ಣ ಬಾಲಕ ಶಪಥಗೈದಿದ್ದ..!!!!
ಅವನ ಹೆಸರು “ಗೆಂದಾಲಾಲ್ ದಿಕ್ಷಿತ್”. 1888 ರಲ್ಲಿ, ಉತ್ತರಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಹಳ್ಳಿಯೊಂದರಲ್ಲಿ ಜನನ. ಸಣ್ಣವನಿಂದಲೂ ದೇಶಭಕ್ತಿಯನ್ನು ಮೈಗೂಡಿಸಿಕೊಂಡಿದ್ದವ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿದ ಮೇಲೆ, DAV ಶಾಲೆಯಲ್ಲಿ ಶಿಕ್ಷಕನಾಗಿ ಸೇರಿಕೊಂಡ..
ಅದು 1905. ‘ಒಡೆದು ಆಳುವ’ ನೀತಿಯನ್ನೇ ಅನುಸರಿಸುತ್ತಿದ್ದ ಆಂಗ್ಲರ ಅಧಿಕಾರಿ “ಲಾರ್ಡ್ ಕರ್ಜನ್” ಬಂಗಾಳವನ್ನು ವಿಭಜಿಸಿದ. ಅವನೇನೋ ಜನರನ್ನು ಒಡೆಯಲು ಹಾಗೆ ಮಾಡಿದ.. ಆದರೆ ಆದದ್ದೇ ಬೇರೆ. ಅವನ ಈ ಕೃತ್ಯಕ್ಕೆ ಇಡೀ ದೇಶವೇ ಎದ್ದು ನಿಂತಿತು. ಎಲ್ಲೆಲ್ಲೂ ಹರತಾಳ, ಮೆರವಣಿಗೆ, ಹೋರಾಟಗಳು ನಡೆದವು. ತಿಲಕರಂತೂ ತಮ್ಮ ಕೇಸರಿ ಪತ್ರಿಕೆಯಲ್ಲಿ ಪ್ರತಿದಿನ, ಬಂಗಾಳ-ವಿಭಜನೆಯ ವಿರುದ್ಧ ಬೆಂಕಿಯ ಬರಹಗಳನ್ನು ಪ್ರಕಟಿಸ್ತಿದ್ರು.. ಅದರ ಕಿಡಿ, ಗೆನ್ದಾಲಾಲನಿಗೂ ಬಡಿಯಿತು. ತಿಲಕರಿಂದ ತುಂಬಾ ಸ್ಫೂರ್ತಿಗೊಂಡ ಗೆಂದಾಲಾಲ್, ಅವರು ಶುರುಮಾಡಿದ ಶಿವಾಜಿ-ಉತ್ಸವ, ಸಾರ್ವಜನಿಕ ಗಣೇಶ-ಉತ್ಸವ ಇದರಿಂದಲೂ ಪ್ರಭಾವಿತನಾದ. ಶಿವಾಜಿಯ ಚರಿತೆಯನ್ನು ಓದಿ, ಆ ಛತ್ರಪತಿಯ ಸಂಘಟನಾ ಕೌಶಲ್ಯ, ಧೈರ್ಯಗಳಿಂದ ಉತ್ತೇಜಿತಗೊಂಡ. ಗೆಂದಾಲಾಲ್ ಸಣ್ಣವನಿದ್ದಾಗ ಮಾಡಿದ್ದ ಪ್ರತಿಜ್ಞೆ ಈಡೇರುವ ಕಾಲ ಆಗ ಬಂದಿತ್ತು.. ಅದರ ಫಲವೇ, ಭಾರತದ ಕ್ರಾಂತಿ ಇತಿಹಾಸದಲ್ಲಿ, ಮತ್ತೊಂದು ಕ್ರಾಂತಿ ಸಂಘಟನೆಯ ಜನನ..




