ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 10
ಹಲಗಲಿಯ ಬೇಡರು
– ರಾಮಚಂದ್ರ ಹೆಗಡೆ
ಬ್ರಿಟಿಷ್ ಸರ್ಕಾರದ ದೌರ್ಜನ್ಯ ದೇಶದಾದ್ಯಂತ ಆವರಿಸಿದ್ದ ಕಾಲ. ಅದಕ್ಕೆ ಉತ್ತರವಾಗಿ 1857 ರಲ್ಲಿ ದೇಶದ ವಿವಿದೆಡೆಗಳಲ್ಲಿ ಪ್ರಖರ ಹೋರಾಟ ಆರಂಭವಾಯಿತು. 1857 ರ ನವೆಂಬರ್ ನಲ್ಲಿ ಆಂಗ್ಲ ಸರ್ಕಾರ ‘ನಿಶ್ಶಸ್ತ್ರೀಕರಣ ಕಾನೂನನ್ನು’ ಜಾರಿಗೆ ತಂದು ದೇಶದ ಯಾರೂ ತಮ್ಮ ಬಳಿ ಯಾವುದೇ ಶಸ್ತ್ರಗಳನ್ನು ಹೊಂದುವಂತಿಲ್ಲ ಎಂಬ ಕರಾಳ ನಿಯಮವನ್ನು ಹೇರಿತು. ಅದರ ಪ್ರಕಾರ ಎಲ್ಲರೂ ತಮ್ಮಲ್ಲಿದ್ದ ಶಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕಾಯ್ತು. ಆದರೆ ಬೇಡರಿಗೆ ಆಯುಧಗಳೇ ಜೀವನೋಪಾಯದ ಆಧಾರಗಳು. ಹಾಗಾಗಿ ಆಯುಧಗಳನ್ನು ಹಿಂತಿರುಗಿಸುವುದಿಲ್ಲ ಎಂದು ಇದರ ವಿರುದ್ಧ ದಿಟ್ಟ ದನಿಯೆತ್ತಿ ಬ್ರಿಟಿಷ್ ಸರ್ಕಾರವನ್ನು ಬೆಚ್ಚಿ ಬೀಳಿಸಿ ಪ್ರಾಣಾರ್ಪಣೆಗೈದವರು ನಮ್ಮ ಕರ್ನಾಟಕದ ಹಲಗಲಿಯ ಬೇಡರು. ಮತ್ತಷ್ಟು ಓದು 
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!
– ತೇಜಸ್ವಿನಿ ಹೆಗಡೆ.
ಅದೊಂದು ಸುವಿಶಾಲ ಮನೆ. ಎಷ್ಟಂಕಣದ್ದು ಎಂದು ಹೇಳಲೂ ಆಗದಷ್ಟು ದೊಡ್ಡ ಮನೆ! ಆ ಮನೆಯೊಳಗೆ ಅಸಂಖ್ಯಾತ ಕೋಣೆಗಳು. ಗಾತ್ರದಲ್ಲಿ, ಆಕಾರಗಳಲ್ಲಿ, ಅಂದ ಚೆಂದಗಳಲ್ಲಿ ವಿವಿಧತೆಯನ್ನು, ವೈವಿಧ್ಯಗಳನ್ನು ಹೊಂದಿದ ಕೋಣೆಗಳು. ಅದೊಂದು ಬಹು ದೊಡ್ಡ ಒಟ್ಟು ಕುಟುಂಬ. ಕೆಲವು ಸದಸ್ಯರಿಗಂತೂ ಕೋಣೆಗಳೇ ಇಲ್ಲ. ಇದಕ್ಕಾಗಿ ಹೋರಾಟ ಮಾಡುತ್ತಿರುತ್ತಾರೆ. ಅವರ ಇದೇ ಅನಿವಾರ್ಯತೆಯನ್ನೇ ಬಂಡವಾಳ ಮಾಡಿಕೊಂಡು, ಅವರ ನೈಜ ಹೋರಾಟವನ್ನೇ ದಿಕ್ಕೆಡಿಸಿ, ತಮ್ಮ ಕುಟಿಲ ಸ್ವಾರ್ಥಕ್ಕಾಗಿಯೇ ಮನೆಯೊಡೆಯಲು ಕೆಲವೊಂದು ಸದಸ್ಯರು ಸಂಚು ಮಾಡುತ್ತಿರುತ್ತಾರೆ. ಕೆಲವು ನೆರಹೊರೆಯ ಕುಟುಂಬಗಳ ಕುಮ್ಮಕ್ಕೂ ಇದಕ್ಕೆ ಲಭಿಸುತ್ತಿರುತ್ತದೆ. ಹೀಗಾಗಿ ಕಚ್ಚಾಟ, ಜಗಳ, ಹೊಡೆದಾಟ ಪ್ರತಿದಿವಸವೂ ಅಲ್ಲಿ ನಡೆಯುತ್ತಿರುತ್ತದೆ ಮತ್ತು ಅದನ್ನು ಆ ಇಡೀ ಮನೆಯ ಜವಾಬ್ದಾರಿಯನ್ನು ಹೊತ್ತ ಯಜಮಾನ ಹಾಗೂ ಇನ್ನಿತರ ಹಿರಿಯ ಸದಸ್ಯರು ಬಗೆಹರಿಸಲು ಪ್ರಯತ್ನಿಸುತ್ತಲೇ ಇರುತ್ತಾರೆ. ಕಾಲ ಸರಿದಂತೇ, ಸ್ವಾರ್ಥಿಗಳ ಸತತ ತಲೆತುಂಬುವಿಕೆಯ ಪರಿಣಾಮದಿಂದ ಮನೆಯ ಕೆಲವೊಂದಿಷ್ಟು ಜನಕ್ಕೆ ಆಗಾಗ ಅನ್ನಿಸತೊಡಗುತ್ತದೆ.. ಈ ಮನೆಯೊಳಗೆ ಮಾತ್ರ ಸರಿಯಾದ ವ್ಯವಸ್ಥೆಯಿಲ್ಲ.. ಯಾವುದೂ ಸರಿಯಿಲ್ಲ.. ಭದ್ರತೆಯಿಲ್ಲ.. ಎಂಬಿತ್ಯಾದಿ ಕೊರಗು, ಕೂಗು ಎದ್ದೇಳುತ್ತಿರುತ್ತದೆ. ಮನೆಯನ್ನು ಒಂದಿಷ್ಟು ಪಾಲು ಮಾಡಿ ಹಂಚಿದರೇ ಪರಿಹಾರ ಎಂದು ಹೊರಟವರೂ ಹಲವರಿರುತ್ತಾರೆ. ಆದರೆ ಆ ಮನೆಯ ಹೊರಗೆ ಬಿದ್ದರೆ, ಅದರ ಅಕ್ಕ ಪಕ್ಕದ ಅಷ್ಟೇ ಮನೆಗಳೊಳಗಿನ ಸ್ಥಿತಿ-ಗತಿಯೂ ಬಹುಪಾಲು ಅದೇ ರೀತಿ ಇರುವುದು ಆ ಜನರಿಗೆ ಅರಿವಾಗಿರುವುದೇ ಇಲ್ಲ ಅಥವಾ ಕೆಲವರಿಗೆ ತಿಳಿದಿದ್ದರೂ ತಿಳಿಯದಂತೇ ನಟಿಸುತ್ತಿರುತ್ತಾರೆ. ಕ್ರಮೇಣ ಮನೆಯೊಳಗಿನ ಪ್ರತಿಯೊಂದು ಸಂಭ್ರಮದಲ್ಲೂ ಒಂದಲ್ಲಾ ಒಂದು ಕೊರಗು, ಕೆಡುಕು ತೆಗೆದು ಕಟಕಿಯಾಡುವ, ಮನೆಯನ್ನು, ಮನೆ ಮಂದಿಯನ್ನು ಹಳಿಯುತ್ತಲೇ, ಜರೆಯುತ್ತಲೇ ಸವೆಯುವ ಪ್ರಕ್ರಿಯೆ ಶುರುವಾಗುತ್ತದೆ. ಮತ್ತಷ್ಟು ಓದು 
“ಭಾರತ್ ಕಿ ಬರ್ಬಾದಿ” ಕೂಗಿನ ಹಿಂದಿರುವ ಕೈಗಳು ಯಾರದ್ದು?
– ರಾಕೇಶ್ ಶೆಟ್ಟಿ
ಉಗ್ರ ಬರ್ಹನ್ ವಾನಿಯ ಹತ್ಯೆಯಾಗಿ ಒಂದು ತಿಂಗಳು ಕಳೆದು ಕಾಶ್ಮೀರ ಕಣಿವೆಯ ಒಂದೆರಡು ಜಿಲ್ಲೆಗಳನ್ನು ಬಿಟ್ಟು ಉಳಿದೆಲ್ಲವೂ ತಣ್ಣಗಾಗಿದ್ದರೂ ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಬೆಂಬಲ ನೀಡುತ್ತಿರುವ ದೇಶದ್ರೋಹಿಗಳ ಕೂಗು ಇನ್ನು ತಣ್ಣಗಾಗಿಲ್ಲ. ಇಷ್ಟು ದಿನ ಶ್ರೀನಗರದಲ್ಲೋ, ದೆಹಲಿಯ JNUವಿನಲ್ಲೋ, ಉತ್ತರ ಭಾರತದಲ್ಲೆಲ್ಲೋ ಕಾಣಿಸಿಕೊಳ್ಳುತ್ತಿದ್ದ ಈ Urban Naxalರು ಈಗ ನಮ್ಮ ಬೆಂಗಳೂರಿಗೂ ಕಾಲಿಟ್ಟಿದ್ದಾರೆ. ಕಾಶ್ಮೀರದಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಗಲಭೆ ಶುರುವಾಗಿ ಒಂದು ವಾರ ಕಳೆಯುವಷ್ಟರಲ್ಲೇ (ಜುಲೈ15,16) We Stand with Kashmir ಎನ್ನುವ ಹೆಸರಿನೊಂದಿಗೆ ಬೆಂಗಳೂರಿನ ಟೌನ್ ಹಾಲ್ ಮುಂದೆ ನಿಂತು “ಕಾಶ್ಮೀರದ ಆಜಾದಿ” ಕೇಳಲು ಹೊರಟಿದ್ದ ಈ ಅರ್ಬನ್ ನಕ್ಸಲರ ಆಸೆಗೆ ನಾವೊಂದಿಷ್ಟು ಜನರು ಸೇರಿ ತಣ್ಣಿರೇರಚಿದ್ದೆವು. ಅದಾದ ನಂತರ, ‘ತಾತ್ಕಾಲಿಕವಾಗಿ’ ನಾವು ಅವರನ್ನು ತಡೆದಿದ್ದೇವೆ ಅಂತಲೇ ನಾನು ಬರೆದಿದ್ದೆ. ಆ ಆತಂಕ ನಿಜವೆಂಬಂತೆ ಮೊನ್ನೆ ಆಗಸ್ಟ್ 13ರಂದು ಅಮ್ನೆಸ್ಟಿ ಇಂಡಿಯಾ ಎಂಬ NGO ಹೆಸರಿನಡಿಯಲ್ಲಿ, ಕಳ್ಳರೆಲ್ಲಾ ಸಂತೆಯಲ್ಲಿ ಒಂದಾಗುವಂತೆ ಬಂದು ಸೇರಿಕೊಂಡಿದ್ದಾರೆ. ಮತ್ತಷ್ಟು ಓದು 
ಅಂದು ಜೆ ಎನ್ ಯು, ಇಂದು ಬೆಂಗಳೂರು
– ತನ್ಮಯೀ ಪ್ರೇಮ್ ಕುಮಾರ್
ಜೆಎನ್‌ಯುನಲ್ಲಿ ನಡೆದ ದೇಶದ್ರೋಹದ ಕೆಲಸಗಳು, ಘೋಷಣೆಗಳು, ಬೌದ್ಧಿಕ ದಾರಿದ್ರ್ಯತನವನ್ನು, ವೈಚಾರಿಕ ಗುಲಾಮಿತನದ ಪರಿಸ್ಥಿತಿ ಕಂಡು ಮರುಗಿದ್ದೆ. ಎಷ್ಟೋ ಅಸಹನೆಯ ರಾತ್ರಿಗಳನ್ನು ನಿದ್ದೆಯಿಲ್ಲದೆ ಕಳೆದಿದ್ದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಭಟನೆ, ವಿಚಾರ ಸಂಕಿರಣ, ಆಂದೋಲನದ ಭಾಗವಾಗಿದ್ದೆ ಕೂಡ. ಆದರೆ ಶಾಂತಿಪ್ರಿಯ ಬೆಂಗಳೂರಿನಲ್ಲಿ ಇಂಥದೇ ಘಟನೆ ನಡೆಯಬಹುದೆಂಬ ಕಲ್ಪನೆ ಕನಸಿನಲ್ಲೂ ಬಂದಿರಲಿಲ್ಲ. ಮೊನ್ನೆ ಜೆಎನ್‌ಯು ವಿವಿಯ ಸ್ನೇಹಿತೆಯೊಬ್ಬಳು ಸಿಕ್ಕಾಗಲೂ ಕರ್ನಾಟಕ ಇಂಥ ಘಟನೆಗಳಿಂದ ಮುಕ್ತವಾಗಿದೆ ಎಂಬ ಗರ್ವದಿಂದ ಮಾತನಾಡಿದ್ದೆ. ಮೊನ್ನೆಯವರೆಗೆ ಎಲ್ಲರ ನಂಬಿಕೆಯೂ ಅದೇ ಆಗಿತ್ತು. ಆದರೆ ಆಗಸ್ಟ್ 13ರ ಸಂಜೆ ಭಾರತ 70ನೇ ಸ್ವಾತಂತ್ರ್ಯ ಸಂಭ್ರಮದ ಹೊಸ್ತಿಲಲ್ಲಿ ನಿಂತ ಸಂದರ್ಭದಲ್ಲಿ ನಮ್ಮ ವಿಶ್ವಾಸಕ್ಕೆ, ನೆಮ್ಮದಿಯ ಬಾಳಿಗೆ ಕೊಡಲಿ ಪೆಟ್ಟು ಬೀಳುವಂತ ಘಟನೆ ನಡೆದಿದೆ. ಮತ್ತಷ್ಟು ಓದು 
ನಂಬಿಕೆ, ನಿಷೇಧ, ಆಚರಣೆಗಳಲ್ಲಿ ಆಹಾರ
ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು
ಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿ ಕುರಿತು ಬಹಳಷ್ಟು ಚರ್ಚೆ ರಾಷ್ಟ್ರಮಟ್ಟದಲ್ಲಿ ಆಗಾಗ ನಡೆಯುತ್ತದೆ. ದನ ಕದಿಯುವ ಹಾಗೂ ಅದನ್ನು ರಕ್ಷಿಸುವ ಗುಂಪುಗಳ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ಪ್ರಧಾನಿ ಮೋದಿ “ಸೋ ಕಾಲ್ಡ್ ಗೋರಕ್ಷಕರ” ವಿರುದ್ಧ ಗುಡುಗುತ್ತಿದ್ದಂತೆಯೇ ಮತ್ತೆ ಇಂಥ ಚರ್ಚೆ ಶುರುವಾಗಿದೆ. ಈ ಚರ್ಚೆಗಳಲ್ಲಿ ಮೇಲ್ನೋಟದಲ್ಲಿ ಬಹುಸಂಖ್ಯಾತರ ಆಹಾರ ಕ್ರಮವನ್ನು ಅಲ್ಪ ಸಂಖ್ಯಾತರ ಮೇಲೆ ಹೇರುವ ಹುನ್ನಾರ; ದಲಿತರು ಹಾಗೂ ಅಲ್ಪಸಂಖ್ಯಾತರ ಆಹಾರ ಪದ್ಧತಿಯನ್ನು ಪುರೋಹಿತಶಾಹಿ ವ್ಯವಸ್ಥೆ ಆಳುತ್ತಿರುವ ಸಂಕೇತ ಎಂದೂ, ಬ್ರಾಹ್ಮಣರನ್ನು ಬಿಟ್ಟರೆ ಬೇರೆ ಸಾವಿರಾರು ಜಾತಿ-ಸಮುದಾಯಗಳಿಗೆ ಆಹಾರ ಸಂಬಂಧಿ ವಿಧಿ-ನಿಷೇಧಗಳೇ ಇಲ್ಲ ಎಂಬಂತೆಯೂ ಬಿಂಬಿಸಲಾಗುತ್ತಿದೆ. ಅಷ್ಟೇ ಅಲ್ಲ, ಆಹಾರ ಸೇವಿಸುವಾಗಲೂ ಬ್ರಾಹ್ಮಣರು ಮಾತ್ರ ಅನ್ಯರನ್ನು ಸಹಪಂಕ್ತಿ ಭೋಜನದಲ್ಲಿ ಕೂರಿಸಿಕೊಳ್ಳುವುದಿಲ್ಲ, ಉಳಿದವರಲ್ಲಿ ಇಂಥ ಸಂಪ್ರದಾಯವಿಲ್ಲ ಎಂಬಂತೆಯೂ ಬಿಂಬಿಸುತ್ತ, ಇವೆಲ್ಲ ಜಾತಿಪದ್ಧತಿಯನ್ನು ಬಲಗೊಳಿಸುವ ಪುರೋಹಿತಶಾಹಿಯ ಹುನ್ನಾರ ಎಂದೂ ಸರಳವಾಗಿ ವಾದಿಸಲಾಗುತ್ತದೆ. ಆದರೆ ಇವೆಲ್ಲ ಹಾಗೆ ವಾದಿಸುವವರ ವಿವಿಧ ಸಮುದಾಯಗಳ ಆಹಾರ ಸಂಬಂಧಿ ಅಜ್ಞಾನವನ್ನು ತೋರಿಸುತ್ತದೆಯಲ್ಲದೇ ಇನ್ನೇನನ್ನೂ ಅಲ್ಲ. ಇಂಥ ತಿಳಿವಳಿಕೆಯನ್ನು ತಲೆಕೆಳಗಾಗಿಸುವ ಕ್ಷೇತ್ರಾಧಾರಿತ ಅಧ್ಯಯನದ ಫಲಿತ ಹಾಗೂ ವಾಸ್ತವ ಇಲ್ಲಿದೆ. ಇದು ತುಮಕೂರು ಜಿಲ್ಲೆಯ ಸಾಂಪ್ರದಾಯಿಕ ಆಹಾರ ಪದ್ಧತಿ ಕುರಿತ ಯೋಜನೆಯೊಂದನ್ನು ಆಧರಿಸಿದೆ. ಮತ್ತಷ್ಟು ಓದು 
ಹಸುವಿನ ಕೆಚ್ಚಲು ಹಿಂಡಿ ತೋಳನಿಗೆ ಹಾಲುಣಿಸುವವರು
– ರೋಹಿತ್ ಚಕ್ರತೀರ್ಥ
ದಡ್ಡ ವೈರಿಯನ್ನು ಗೆಲ್ಲುವುದು ಸುಲಭ. ಆದರೆ ಅತಿ ಬುದ್ಧಿವಂತ ಶತ್ರುವಿನದ್ದೇ ಸಮಸ್ಯೆ. ಕ್ರಿಸ್ಟೋಫರ್ ನೊಲನ್‍ನ ಡಾರ್ಕ್ ನೈಟ್ ಸಿನೆಮಾ ಸರಣಿಯನ್ನು ನೋಡಿದವರಿಗೆ ಜೋಕರ್‍ನ ಪರಿಚಯ ಚೆನ್ನಾಗಿಯೇ ಇರುತ್ತದೆ. ಈತ ಹೊಡೆ ಬಡಿ ಕೊಲ್ಲು ಎನ್ನುವಂಥ ನೇರಾನೇರ ವಿಲನ್ ಅಲ್ಲ. ನಾಯಕನ ಜೊತೆಗೇ ಇದ್ದು, ಆತನ ತಂತ್ರಗಳನ್ನೆಲ್ಲ ಕರಗತ ಮಾಡಿಕೊಳ್ಳಬಲ್ಲ; ಸಂದರ್ಭ ಬಂದರೆ ನಾಯಕನಿಗಿಂತ ಚೆನ್ನಾಗಿ ಅವನ್ನು ಪ್ರಯೋಗಿಸಬಲ್ಲ ಚತುರನೀತ. ಇಂಥವರನ್ನು ಸಂಭಾಳಿಸುವುದು ಕಷ್ಟದ, ನಾಜೂಕಿನ, ಬುದ್ಧಿವಂತಿಕೆ ಮತ್ತು ಸಂಯಮ ಬೇಡುವ ಕೆಲಸ. ಸಿನೆಮಾದಲ್ಲಿ ಈತನ ಹಾವಭಾವ, ವೇಷಭೂಷಣಗಳನ್ನು ನೋಡಿಯಾದರೂ ವಿಲನ್ ಎನ್ನಬಹುದೇನೋ; ಆದರೆ ನಿಜಜೀವನದಲ್ಲಿ ಇವರು ನಮ್ಮ ನಿಮ್ಮಂತೆಯೇ ಇರುತ್ತಾರೆ. ನಮ್ಮ ಭಾಷೆಯನ್ನೇ, ನಮ್ಮ ಧಾಟಿಯಲ್ಲೇ ಮಾತಾಡುತ್ತಾರೆ. ನಮಗೇನೋ ಬಹಳ ದೊಡ್ಡ ಉಪಕಾರ ಮಾಡಲಿಕ್ಕೆಂಬಂತೆ ಹಿಂದೆ ಮುಂದೆ ಸುಳಿದಾಡಿಕೊಂಡಿರುತ್ತಾರೆ. “ನೀನೂ? ಬ್ರೂಟಸ್!” ಎಂದು ನಾವು ಕಂಗಾಲಾಗಿ ನೆಲಕ್ಕುರುಳುವಷ್ಟರಲ್ಲಿ ಕಾಲ ಮಿಂಚಿರುತ್ತದೆ. ಮತ್ತಷ್ಟು ಓದು 
ಆಜಾದ್ ಕಾಶ್ಮೀರವಾದಿಗಳಿಗೆ ಶಾಶ್ವತ “ಆಜಾದಿ” ಕೊಡಬೇಕಾದ ಕಠಿಣ ಸಮಯವಿದು
– ರಾಕೇಶ್ ಶೆಟ್ಟಿ
ಕಾಶ್ಮೀರದಲ್ಲಿ ಬರ್ಹನ್ ವನಿ ಎಂಬ ಭಯೋತ್ಪಾದಕ ರಕ್ಷಣಾ ಪಡೆಗಳ ಗುಂಡಿಗೆ ಬಲಿಯಾದ ನಂತರ ಶುರುವಾದ ಗಲಭೆಗೆ 42 (ಈ ಲೇಖನ ಬರೆಯುವ ಸಮಯಕ್ಕೆ) ಜನರು ಬಲಿಯಾಗಿ, 3000ದಷ್ಟು ಜನರು ಗಾಯಾಳುಗಳಾಗಿದ್ದಾರೆ ಎಂದು ವರದಿಯಾಗಿದೆ ಮತ್ತು 12ನೇ ದಿನಕ್ಕೂ ಕರ್ಫ್ಯೂ ಮುಂದುವರೆದಿದೆ! ಇಷ್ಟಕ್ಕೆಲ್ಲಾ ಕಾರಣವಾಗಿದ್ದು ಉಗ್ರನ ಶವ ಸಂಸ್ಕಾರಕ್ಕೆ ಅನುವು ಮಾಡಿಕೊಟ್ಟ ಕೇಂದ್ರ ಸರ್ಕಾರ ತಪ್ಪು ನಡೆ. ಉಗ್ರರು ಸತ್ತಾಗ ಅವರ ಕಳೆಬರವನ್ನು ಸಮುದ್ರಕ್ಕೋ, ನಾಯಿ-ನರಿಗಳಿಗೋ ಎಸೆಯುವುದು ಬಿಟ್ಟು ಕುಟುಂಬಸ್ಥರಿಗೆ ಕೊಟ್ಟಿದ್ದೇಕೆ? ಮುಂಬೈ ಸರಣಿ ಬಾಂಬ್ ಸ್ಪೋಟದ ಅಪರಾಧಕ್ಕಾಗಿ ನೇಣಿಗೇರಿದ ಯಾಕೂಬ್ ಮೆಮನ್ ಅಂತ್ಯಸಂಸ್ಕಾರದಲ್ಲಿ ಸೇರಿದ್ದ ಜನಸ್ತೋಮವನ್ನು ನೋಡಿಯಾದರೂ ಇವರು ಬುದ್ದಿ ಕಲಿಯಬಾರದಿತ್ತೇ? ಕನಿಷ್ಟ ಅಫ್ಜಲ್ ಗುರುವಿನ ಕಳೆಬರವನ್ನು ಕೊಡದೇ ಯುಪಿಎ ಸರ್ಕಾರ ತೋರಿದ ನಡೆಯನ್ನು ತೋರುವ ಜಾಣ್ಮೆಯನ್ನೇಕೆ ಕೇಂದ್ರದ ಬಿಜೆಪಿ ತೋರಿಸಲಿಲ್ಲ? ಮೈತ್ರಿ ಸರ್ಕಾರದ ಮರ್ಜಿಗೆ ಬಿದ್ದು ಈ ರೀತಿ ಮಾಡಿತೇ? ಇವರ ಈ ನೀತಿಯಿಂದಾಗಿ ಸಂಕಟ ಅನುಭವಿಸುತ್ತಿರುವುದು ಭದ್ರತಾಪಡೆಗಳು ಹಾಗೂ ಪೋಲಿಸರು. ಮತ್ತಷ್ಟು ಓದು 
ಅಂದು ಸಿದ್ದರಾಮಯ್ಯನವರನ್ನು ಪ್ರೋತ್ಸಾಹಿಸಿದ್ದಕ್ಕೆ ಹೆಗಡೆ ಅವರ ಆತ್ಮ ಇಂದು ಅದೆಷ್ಟು ನೊಂದುಕೊಳ್ಳುತ್ತಿದೆಯೋ
– ಶ್ರೀನಿವಾಸ್ ರಾವ್
ನಮ್ಮಲ್ಲಿ ವೀರರನ್ನು ಬಣ್ಣಿಸುವುದಕ್ಕೆ, ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಗುಣವನ್ನು ಬಣ್ಣಿಸಲು “ಹೇಳುವುದನ್ನೇ ಮಾಡುತ್ತಾನೆ” ಎಂಬ ಮಾತನ್ನು ಬಳಸುತ್ತೇವೆ, ಈಗ ಸಿದ್ದರಾಮಯ್ಯನವರನ್ನು ನೋಡಿದರೆ ಹಾಗೆಯೇ ಅನಿಸುತ್ತಿದೆ. ಈಗ್ಗೆ ಮೂರು ವರ್ಷಗಳ ಹಿಂದೆ ನವನಿರ್ಮಾಣ ವೇದಿಕೆ ಆಯೋಜಿಸಿದ್ದ ರಾಮಕೃಷ್ಣ ಹೆಗಡೆ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ “ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ಇದ್ದ ರಾಜಕಾರಣಕ್ಕೂ ಇಂದಿನ ರಾಜಕಾರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ” ನಾನು ನೂರಕ್ಕೆ ನೂರರಷ್ಟು ಪ್ರಾಮಾಣಿಕನಾಗಿದ್ದೇನೆ ಎಂದು ಹೇಳಿದರೆ ನನಗೆ ನಾನೇ ಸುಳ್ಳು ಹೇಳಿಕೊಂಡಂತೆ” ಎಂಬ ಅಣಿ ಮುತ್ತುಗಳನ್ನು ಉದುರಿಸಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಅಂದು ಹೇಳಿದ ಮಾತನ್ನು ಸತ್ಯ ಎಂದು ನಿರೂಪಿಸಲು ಅದೆಷ್ಟು ಕಷ್ಟ ಪಡುತ್ತಿದ್ದಾರೆ ಎಂಬುದು ಬಹುಶಃ ಅವರೊಬ್ಬರಿಗೇ ಗೊತ್ತಿರಬೇಕು. ಮತ್ತಷ್ಟು ಓದು 
ಹಳಿ ತಪ್ಪಿರುವ ಚಾಲಕನಿಗೆ ತಿಳಿಹೇಳುವವರು ಯಾರು?
– ರೋಹಿತ್ ಚಕ್ರತೀರ್ಥ
ಮೂಕಂ ಕರೋತಿ ವಾಚಾಲಂ. ಹಾಗಾಗಿದೆ ನನಗೆ. ಬರೆಯಬೇಕಿದ್ದ ಕೈ ಓಡುತ್ತಿಲ್ಲ. ಮನಸ್ಸು ಹೆಪ್ಪುಗಟ್ಟಿ ಕೂತಿದೆ. ಏನು ಅಂತ ಬರೆಯಲಿ? ಏನನ್ನು ಹೇಳಲಿ? ಕತ್ತಲಿಗೆ ಹತ್ತೆ ತಲೆ? ನೂರಾರೆ? ಅದು ಅಸಂಖ್ಯ! ಕತ್ತರಿಸಿದರೆ ಬೆಳೆವ, ಬೆಳೆದು ಕತ್ತಿಗೆ ಬರುವ ಅನಾದಿ; ಕೋದಂಡದಂಡವೂ ಹೀಗೆ ದಂಡ ಎನ್ನುವ ಗೋಪಾಲಕೃಷ್ಣ ಅಡಿಗರ ಸಾಲುಗಳು ತಲೆಯೊಳಗೆ ಅಪ್ಪಾಲೆತಿಪ್ಪಾಲೆಯಂತೆ ಸುತ್ತುತ್ತಿವೆ. ಮಳೆಗಾಲದ ಕಾರ್ಮೋಡಗಳು ಸುತ್ತ ಇಳಿಬಿದ್ದಿರುವಂತೆ ಹೃದಯದ ತುಂಬೆಲ್ಲ ಕತ್ತಲೆ ತೂಗುತ್ತಿದೆ. ಮೈ ಮಂಜುಗಟ್ಟಿದೆ. ಬರೆಯುವುದನ್ನು ಉಸಿರಾಟದಷ್ಟೇ ಸಹಜವಾಗಿ ಮಾಡಬಲ್ಲ ನನಗೂ ಕೈಯನ್ನು ಯಾರೋ ಎಳೆದುಕಟ್ಟಿರುವಂಥ ಭಾವ. ಮತ್ತಷ್ಟು ಓದು 
ವಿದ್ಯಾರ್ಥಿ ರಾಜಕೀಯ ಕ್ರಿಯಾಶೀಲತೆ ಮುಂದಿರುವ ಸವಾಲುಗಳು
ಬಿ.ಜಿ. ಕುಲಕರ್ಣಿ
ಸಹಾಯಕ ಪ್ರಾಧ್ಯಾಪಕರು
ರಾಜ್ಯಶಾಸ್ತ್ರ ವಿಭಾಗ
ಬಸವಪ್ರಭು ಕೋರೆ ಮಹಾವಿದ್ಯಾಲಯ
ಚಿಕ್ಕೋಡಿ. ಜಿಲ್ಲಾ: ಬೆಳಗಾವಿ
ವಿದ್ಯಾರ್ಥಿ ರಾಜಕೀಯ ಕ್ರೀಯಾಶಿಲತೆ ಕುರಿತು ಚರ್ಚಿಸುವಾಗ ಉದ್ಭವವಾಗುವ ಮೊದಲ ಪ್ರಶ್ನೆಯೆಂದರೆ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕೆ ಅಥವಾ ಬೇಡವೇ ? ಈ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಪಂಥಗಳಿವೆ. ಮೊದಲನೆಯ ಪಂಥದ ಅಭಿಪ್ರಾಯವೆನೆಂದರೆ ವಿದ್ಯಾರ್ಥಿಗಳ ಮೊದಲ ಆದ್ಯತೆ ಅಧ್ಯಯನ. ಆದ್ದರಿಂದ ವಿದ್ಯಾರ್ಥಿಗಳು ಅಧ್ಯಯನದಲ್ಲಿ ನಿರತರಾಗಬೇಕು. ಆ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ವಾದಿಸುತ್ತಾರೆ. ಎರಡನೆ ಪಂಥವು ವಿದ್ಯಾರ್ಥಿಗಳೂ ಜನ ಸಮೂಹದ ಭಾಗವಾಗಿರುವುದರಿಂದ, ರಾಜಕೀಯ ಸಮಾಜ ಬಿಟ್ಟು ಇಲ್ಲವಾದ್ದರಿಂದ, ರಾಜಕೀಯ ನಿರ್ಧಾರಗಳು ವಿದ್ಯಾರ್ಥಿಗಳ ಮೇಲೂ ಪ್ರಭಾವ ಬೀರುವುದರಿಂದ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕು ಎಂಬ ವಾದ ಮಂಡಿಸುತ್ತಾರೆ. ವಿದ್ಯಾರ್ಥಿಗಳು ರಾಜಕೀಯದಲ್ಲಿ ಏಕೆ ಭಾಗವಹಿಸಬೇಕು ಎಂಬ ವಾದಕ್ಕೆ ಪ್ರಬಲ ಕಾರಣಗಳನ್ನು ಇಲ್ಲಿ ಚರ್ಚಿಸಲಾಗಿದೆ. ಮತ್ತಷ್ಟು ಓದು 




