ರಾಮದೇವ್,ಮೀಡಿಯಾ ಮತ್ತು ಸಂಪಾದಕೀಯ
– ಮಹೇಶ ಪ್ರಸಾದ ನೀರ್ಕಜೆ
ಸಂಪಾದಕೀಯ ತಂಡ ಬರೆದ “ಸಂವಿಧಾನವನ್ನೇ ಒಪ್ಪದ ರಾಮದೇವ ಸತ್ಯಾಗ್ರಹಕ್ಕೆ ಇಳಿದಿದ್ದಾರೆ… ಜೈ ಹೋ! ” ಈ ಲೇಖನದ ಬಗ್ಗೆ ನನ್ನ ಕೆಲವು ಅನಿಸಿಕೆಗಳು. ಇವು ಒಟ್ಟಾರೆಯಾಗಿ ಮಾಧ್ಯಮಗಳ ಬೇಜವಾಬ್ದಾರಿತನದ ಬಗ್ಗೆ ನನ್ನ ಕೆಲವು ಟಿಪ್ಪಣಿಗಳು ಕೂಡ ಹೌದು. ಸದಾ ಮಾಧ್ಯಮದ ತಪ್ಪು ಒಪ್ಪುಗಳನ್ನು ಪ್ರಕಟಿಸುವ ತಂಡ ಅದರ ಜೊತೆಜೊತೆಗೆ ಬೇರೆ ಕೆಲವು ವಿಚಾರಗಳನ್ನು ಕೂಡ ಬರೆಯುತ್ತದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಸಂಪ್ರದಾಯವಾದಿಗಳ ಬಗ್ಗೆ, ಮೂಢ ನಂಬಿಕೆಗಳ ಬಗ್ಗೆ ಸಾಕಷ್ಟು ಬರಹಗಳನ್ನು ಬರೆದಿದ್ದಾರೆ. ಅವರ ಕೆಲವು ಪ್ರಯತ್ನಗಳ ಬಗೆಗೆ ನನಗೆ ಹೆಮ್ಮೆಯಿದೆ. ಅದರಲ್ಲೂ ಜಿ ಕನ್ನಡ ವಾಹಿನಿಯಲ್ಲಿ ನಡೆಯುತ್ತಿದ್ದ ಬೃಹತ್ ಬ್ರಹ್ಮಾಂಡ ಕಾರ್ಯಕ್ರಮದ ಬಗೆಗಿನ ವಿರೋಧ ಎಲ್ಲರ ಗಮನ ಸೆಳೆದಿತ್ತು. ಆದರೆ ಮೊದಲಿನಿಂದಲೂ ಕೂಡ ನನಗೆ ಸಂಪಾದಕೀಯ ತಂಡದ ಬಗೆಗೆ ಕೆಲವು ಅನುಮಾನಗಳಿವೆ. ಮೊದಲನೆಯದಾಗಿ ತನ್ನ TRP ಹೆಚ್ಚಿಸಿ ಕೊಳ್ಳಲೋ ಎಂಬಂತೆ ಬ್ಲಾಗಿನಲ್ಲಿ ಎಲ್ಲೆಂದರಲ್ಲಿ ಅನಾಮಿಕ ಪ್ರತಿಕ್ರಿಯಗಳ ಮಹಾಪೂರ. ಈ ಪ್ರತಿಕ್ರಿಯೆಗಳನ್ನು ಯಾರು ಬರೆಯುತ್ತಾರೆ, ಅವರ ಪ್ರತಿಕ್ರಿಯೆಗಳಲ್ಲಿ ಏನಾದರು ಕುತ್ಸಿತ ಉದ್ದೇಶಗಳಿವೆಯೇ ಇತ್ಯಾದಿ ಪ್ರಶ್ನೆಗಳು ನನಗೆ ಮೊದಲಿನಿಂದಲೂ ಇವೆ. ಅಲ್ಲದೆ ಮೂಢ ನಂಬಿಕೆಯನ್ನು ವಿರೋಧಿಸುವ ನೆಪದಲ್ಲಿ ಎಲ್ಲಾ ಅಧ್ಯಾತ್ಮಿಕ ವ್ಯಕ್ತಿಗಳನ್ನು ಟೀಕಿಸುವ ಹುನ್ನಾರವೋ ಎಂದು ಕೂಡ ಸಂಶಯವಿದೆ. ಆದರೆ ಕೆಲವು ಬರಹಗಳಲ್ಲಿ ಉತ್ತಮ ಅಧ್ಯಾತ್ಮಿಕ ಮೌಲ್ಯಗಳನ್ನು ಅದರಲ್ಲೂ ವಿವೇಕಾನಂದ, ಬುಧ್ಧ ಗಾಂಧೀಜಿ ಬಗ್ಗೆ ಬರೆದಿದ್ದೂ ಹೌದು. ಒಟ್ಟಿನಲ್ಲಿ ನನ್ನ ಮಟ್ಟಿಗೆ ಸಂಪಾದಕೀಯ ವಿರೋಧಾಭಾಸಗಳ ಗೂಡು. ಇರಲಿ, ಈಗ ಪ್ರಸ್ತುತ ಲೇಖನದ ಬಗ್ಗೆ ಹೇಳುವುದಾದರೆ ನನ್ನ ಪ್ರಕಾರ ಇದರಲ್ಲಿ ಹಲವಾರು ತಪ್ಪುಗ್ರಹಿಕೆಗಳು, ಮತ್ತು ತಪ್ಪು ಮಾಹಿತಿಗಳು ಕಾಣಸಿಗುತ್ತವೆ. ಅವುಗಳನ್ನು ಪಟ್ಟಿ ಮಾಡಿ, ನಿಜ ಸಂಗತಿಯನ್ನು ಹೊರಗೆಡಹುವ ಒಂದು ಪ್ರಯತ್ನ ಇದು.
ಇದು ಹಿಂದಿ ಹೇರಿಕೆ ಬೂತದ ಕೈಚಳಕ
ಸರಕಾರ ತನ್ನ ಕಾರ್ಯಗಳು ಜನರಿಗೆ ತಲುಪಿಸೊಕ್ಕೆ ಪತ್ರಿಕೆಗಳನ್ನ ಅವಲಂಬಿಸಿದೆ. ಕೆಲವು ಪ್ರಮುಕ ಕಾರ್ಯಗಳನ್ನ/ ಸೌಲಬ್ಯಗಳನ್ನ ಪತ್ರಿಕೆಗಳಲ್ಲಿ ಜಾಹಿರಾತು ನೀಡಿತ್ತೆ. ಪತ್ರಿಕೆಗಳಲ್ಲಿ ಜಾಹಿರಾತನ್ನ ನೋಡೊ ಜನ, ಆ ಕಾರ್ಯ/ಸೌಲಬ್ಯದ ಲಾಬ ಪಡೆದುಕೊಳ್ಳಬೇಕು ಅನ್ನೊದು ಉದ್ದೇಶ(?).ಆದರೆ ಸರಕಾರ ಈ ಜಾಹಿರಾತು ನೀಡೋ ವಿಶಯದಲ್ಲೂ ತಾರತಮ್ಯ ಮಾಡಿ ತನ್ನ ಕಾರ್ಯ/ ಸೌಲಬ್ಯ ಗಳು ಕನ್ನಡಿಗರಿಗೆ ಸಿಗಬಾರ್ದು ಅನ್ನೊ ತರ ನಡೆದುಕೊಳ್ತಿರೋದು ಮಾತ್ರ ನಿಗೂಡ! ಇದೋ ಹೀಗೆ ಅಂತೀರ- ಕನ್ನಡ ಪತ್ರಿಕೆಗಳಲ್ಲಿ ಕನ್ನಡವಲ್ಲದ, ಕನ್ನಡಿಗರಿಗೆ ಅರಿವಿಲ್ಲದ ಹಿಂದಿ ಬಾಶೆಯಲ್ಲಿ ಜಾಹಿರಾತು ನೀಡೋದು.
ಈ ಕೆಲ್ಸವನ್ನ ಸರಕಾರ ಬಹಳ ವ್ಯವಸ್ತಿತವಾಗಿ ಮಾಡ್ತಿದೆ. ಇದರ ಕೆಲವು ಕೆಲವು ಸ್ಯಾಂಪಲ್ ಗಳು-
೧. ಕೆಲವು ವರ್ಶಗಳ ಹಿಂದೆ ನೈರುತ್ಯ ರೈಲ್ವೆ ,ಡಿ ದರ್ಜೆ ನೌಕರರಿಗೆ(೭ ಅತವಾ ೮ ನೇ ತರಗತಿ ಪಾಸಾದವರಿಗೆ) ಅರ್ಜೆಗೆ ಅಹ್ವಾನಿಸಿ, ಕನ್ನಡವಲ್ಲದ ಬಾಶೆಯಲ್ಲಿ ಯಾವುದೋ ಒಂದೆರಡು ಚಿಕ್ಕ ಪತ್ರಿಕೆಗಳಲ್ಲಿ ಜಾಹಿರಾತು ನೀಡಿತ್ತಂತೆ. ಆ ಜಾಹಿರಾತು ಓದೋಕ್ಕೆ ಆಗದ ಕನ್ನಡದವರು ಅರ್ಜಿ ಹಾಕಿದ್ದೆ ಕಡಿಮೆ ಜನ. ಎಂತಾ ದುರಂತ.
ಮತ್ತಷ್ಟು ಓದು 
ಬೆಂಗಳೂರಿನಲ್ಲಿ ನಡೆದ ಭ್ರಷ್ಟಾಚಾರ ವಿರೋಧಿ ಆಂದೋಲನ…
– ಚೇತನ್ ಜೀರಾಳ್
ಬಹುಷಃ ಕಳೆದ ಕೆಲವು ತಿಂಗಳಿಂದ ದೇಶದ ಪ್ರತಿಯೊಬ್ಬ ಪ್ರಜೆಯು ಮಾತನಾಡುತ್ತಿರುವುದು ದೇಶದಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರದ ಬಗ್ಗೆ. ಈ ಭ್ರಷ್ಟಾಚಾರ ಅನ್ನೋ ಮಹಾಮಾರಿ ಪ್ರತಿಯೊಂದು ಕ್ಷೇತ್ರದಲ್ಲೂ ತನ್ನ ಕರಾಳ ಬಾಹುವನ್ನು ಚಾಚಿದೆ. ಭ್ರಷ್ಟಾಚಾರ ಸಮಾಜದ ನೈತಿಕತೆಯ ಜೊತೆಗೆ , ಇಡೀ ನಾಡನ್ನೇ ಅಧೋಗತಿಯತ್ತ ಕೊಂಡ್ಯೊಯುತ್ತದೆ. ಇಂದು ಭ್ರಷ್ಟಾಚಾರ ಅನ್ನುವುದು ಜಾತಿ, ಮತ, ಧರ್ಮ, ಭಾಷೆ ಹೀಗೆ ಎಲ್ಲವನ್ನು ಮೀರಿ ಬೆಳೆದು ನಿಂತು ನಮ್ಮ ನಾಡಿನ ಏಳಿಗೆಗೆ ಮಾರಕವಾಗಿ ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಅನ್ನೋ ಭೇದವಿಲ್ಲದೇ ಭ್ರಷ್ಟಾಚಾರ ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ನೆಲೆಗೊಂಡಿದೆ. ಭ್ರಷ್ಟಾಚಾರ ಅಳಿಯದ ಹೊರತು ನಮ್ಮ ರಾಜ್ಯ ಏಳಿಗೆ ಕಾಣುವುದಕ್ಕೆ ಸಾಧ್ಯವೇ ಇಲ್ಲಾ. ಈ ಭ್ರಷ್ಟಾಚಾರ ಎಂಬ ರಕ್ಷಸವನ್ನು ನಾವೆಲ್ಲಾ ಸೇರಿ ಹೊಡೆದು ಹಾಕಲೇ ಬೇಕು.
ಕನ್ನಡ ಟಿವಿ ವಾಹಿನಿಗಳು ಹಾಗೂ ಮೂಢನಂಬಿಕೆಗಳ ಪ್ರಸಾರ
ಕನ್ನಡದ ಎಲ್ಲ ಟಿವಿ ವಾಹಿನಿಗಳೂ ಜ್ಯೋತಿಷ್ಯವೆಂಬ ಅವೈಜ್ಞಾನಿಕ ಹಾಗೂ ಮೂಢನಂಬಿಕೆಗಳನ್ನು ಬಲಪಡಿಸುವ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದು ಇದು ಮಾಧ್ಯಮಗಳಿಗೆ ಇರಬೇಕಾದ ಜವಾಬ್ದಾರಿಗೆ ವಿರುದ್ಧವಾದುದು. ವಿಜ್ಞಾನದ ಆವಿಷ್ಕಾರವಾದ ಟಿವಿಯನ್ನು ತಮ್ಮವ್ಯಾಪಾರ ಹೆಚ್ಚಿಸಿಕೊಳ್ಳಲು ಜ್ಯೋತಿಷಿಗಳಿಗೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿರುವ ಟಿವಿ ವಾಹಿನಿಗಳು ಯಾವುದೇ ನಾಚಿಕೆ ಇಲ್ಲದೆ ಈ ಕೆಲಸದಲ್ಲಿ ತೊಡಗಿವೆ. ವಿಜ್ಞಾನಿಗಳು ಶ್ರಮ ವಹಿಸಿ ಸಂಶೋಧಿಸಿದ ಟಿವಿ ಮಾಧ್ಯಮ ಇಂದು ಅವೈಜ್ಞಾನಿಕ ವಿಚಾರಗಳು ಹಾಗೂ ಮೂಢನಂಬಿಕೆಗಳನ್ನು ಬಲಪಡಿಸಲು ದುರುಪಯೋಗವಾಗುತ್ತಿದೆ. ಇದನ್ನು ಪ್ರಜ್ಞಾವಂತರು ವಿರೋಧಿಸಬೇಕಾಗಿದೆ. ಮಾಧ್ಯಮಗಳಿಗೆ ಜನರನ್ನು ವಿಚಾರವಂತರನ್ನಾಗಿ ಮಾಡುವ ಮಹತ್ತರ ಜವಾಬ್ದಾರಿ ಇದೆ. ಇದನ್ನು ಕಡೆಗಣಿಸಿ ೨೧ ಶತಮಾನದಲ್ಲೂ ಜ್ಯೋತಿಷ್ಯ, ವಾಸ್ತು ಎಂಬ ವೈಜ್ಞಾನಿಕ ಆಧಾರಗಳಿಲ್ಲದ ಪುರೋಹಿತಶಾಹಿ ವಿಚಾರಗಳನ್ನು ಜನರ ಮೇಲೆ ಹೇರಲು ಯತ್ನಿಸುತ್ತಿರುವ ಟಿವಿ ವಾಹಿನಿಗಳ ಧೋರಣೆಯನ್ನು ವಿಚಾರವಂತರು, ಸಾಹಿತಿಗಳು, ವಿಜ್ಞಾನಿಗಳು, ತಂತ್ರಜ್ಞರು, ಪ್ರಜ್ಞಾವಂತರು ವಿರೋಧಿಸಬೇಕಾಗಿದೆ.
ಇಂದು ದೇಶಾದ್ಯಂತ ಭ್ರಷ್ಟಾಚಾರದ ವಿರುದ್ಧ ಹೋರಾಟ ರೂಪುಗೊಳ್ಳುತ್ತಿರುವ ಹೊತ್ತಿನಲ್ಲಿ ಮೂಢನಂಬಿಕೆಗಳನ್ನು ಬಲಪಡಿಸುವ ಪುರೋಹಿತಶಾಹಿ ಕುತಂತ್ರದ ವಿರುದ್ಧವೂ ಹೋರಾಟ ನಡೆಯಬೇಕಾದ ಅಗತ್ಯ ಇದೆ. ಕಷ್ಟಪಟ್ಟು ದುಡಿದು ತಿನ್ನುವುದರ ಬದಲು ಕೆಲವು ಪುರೋಹಿತಶಾಹಿಗಳು ಜ್ಯೋತಿಷ್ಯ, ವಾಸ್ತುವಿನ ಹೆಸರಿನಲ್ಲಿ ಜನರ ನಂಬಿಕೆಗಳನ್ನು, ಜನರ ಭಯವನ್ನು ತಮ್ಮ ಜೇಬು ತುಂಬಿಸಿಕೊಳ್ಳಲು ಸುಲಭೋಪಾಯವಾಗಿ ಬಳಸಿಕೊಳ್ಳುತ್ತಿರುವುದೂ ಒಂದು ರೀತಿಯ ಭ್ರಷ್ಟಾಚಾರವಲ್ಲವೇ? ಇಂಥ ಭ್ರಷ್ಟಾಚಾರಕ್ಕೆ ಟಿವಿ ವಾಹಿನಿಗಳು ಕೈಗೂಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸಮಂಜಸವೆಂದು ಟಿವಿ ವಾಹಿನಿಗಳನ್ನು ನಡೆಸುವವರು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಅಗತ್ಯ ಇದೆ. ಜ್ಯೋತಿಷ್ಯ, ವಾಸ್ತು ಇಲ್ಲದೆ ಪಾಶ್ಚಾತ್ಯ ರಾಷ್ಟ್ರಗಳು ಅಭಿವೃದ್ಧಿ ಸಾಧಿಸಿವೆ. ಹೀಗಿರುವಾಗ ನಮ್ಮ ಟಿವಿ ವಾಹಿನಿಗಳು ಜ್ಯೋತಿಷ್ಯ, ವಾಸ್ತುಗಳನ್ನು ತಲೆಯ ಮೇಲೆ ಹೊತ್ತುಕೊಂಡು ಮೆರೆಸುತ್ತ್ತಿರುವುದು ಯಾವ ಪುರುಷಾರ್ಥ ಸಾಧನೆಗಾಗಿ ಎಂದು ನಾವು ಕೇಳಬೇಕಾಗಿದೆ. ಮತ್ತಷ್ಟು ಓದು 
ಬಸವನ ಗುಡಿಯಲ್ಲಿ ‘ಕರಪ್ಷನ್ ಸಾಕು’ ಆ೦ದೋಲನ. ನಾ ಕ೦ಡ೦ತೆ
– ಹರೀಶ್ ಆತ್ರೇಯ
ಕಿರಣ್ ಬೇಡಿ ಸ್ವಾಮಿ ಅಗ್ನಿವೇಶ್ ರ ಪ್ರಚೋದಕನಕಾರಿ ಭಾಷಣ, ಶ್ರೀ ಬಾಲಸುಬ್ರಹ್ಮಣ್ಯ೦ ರ ನಿರೂಪಣೆ ಮತ್ತು ಗಣ್ಯರ ಭಾಷಣದ ಅನುವಾದ, ಅರವಿ೦ದ್ ಖೇಜ್ರಿವಾಲರ ಜನಲೋಕಪಾಲ್ ಕಾನೂನು ಪಾಠ, ಕೆಲ ಕಾರ್ಯತಕರ್ತರ ಉತ್ಸಾಹ, ನೈಜ ಕಾಳಜಿ. ಇನ್ನೂ ಕೆಲವರ ಶೋ, ವಾಲ೦ಟೀರ್ ಟೀ ಶರ್ಟ್ ಮೇಲೆ ಎಲ್ಲರ ಕಣ್ಣು, ಮಾಸ್ಟರ್ ಹಿರಣ್ಣಯ್ಯರನವರ ಅನುಭವದ ಮಾತು, ಅಣ್ಣಾ ಹಜಾರೆಯವರ ಮುಗ್ಧ ನುಡಿಗಳು, ರಾಜಕಾರಣಿಗಳ/ ಸರ್ಕಾರಿ ಅಧಿಕಾರಿಗಳ ಮೋಸದಿ೦ದ ಬೇಸತ್ತ ಜನರ ಹತಾಶ ನುಡಿಗಳು, ಜೈಕಾರ, ಗಲೀ ಗಲೀಮೆ ಶೋರ್ ಹೈ ಸಾರೆ ನೇತ ಚೋರ್ ಹೈ ಎನ್ನುವ ಘೋಷಣೆಗಳು, ಇನ್ನೂ ಕೆಲವರಿಗೆ ಇಲ್ಲೇನ್ ನಡೀತಿದೆ ಅ೦ತ್ಲೇ ಗೊತ್ತಿಲ್ದೆ ಇರೋ ಅಮಾಯಕತೆ (?) ಇದೆಲ್ಲರ ನಡುವೆ ನಮ್ ಯಡ್ಯೂರಪ್ಪನವರ ಪರ ಅದ್ಯಾರೋ ನರಸಿ೦ಹ (ಮು. ಮುಖ್ಯಮ೦ತ್ರಿ) ಎ೦ಬುವವನ ಪ್ರಚಾರ, ಸ್ವರಾತ್ಮ ತ೦ಡದ ಪಾಪ್ ರೀತಿಯ ಸ೦ಗೀತ ಅದಕ್ಕೆ ಜನರು ತಲೆದೂಗಿದ್ದು, ಇವು ನಿನ್ನೆಯ ಆ೦ದೋಲನದ ಹೈಲೈಟ್.
ಹನ್ನೊ೦ದು ಗ೦ಟೆಯಿ೦ದ ೨:೫೦ರ ತನಕ ಕಾರ್ಯಕರ್ತರ ಜನಗಳ ಮತ್ತು ಅಲ್ಲಿ ಆಡುತ್ತಿದ್ದ ಯುವಕರ ಮುಖಗಳನ್ನು ಗಮನಿಸುತ್ತಾ ಬ೦ದೆ. ಅಣ್ಣಾ ಹಜಾರೆಯವ್ರು ಬ೦ದದ್ದು ೨:೫೦ ಕ್ಕೆ. ಅಲ್ಲಿಯವರೆಗೂ ಒ೦ದೆರಡು ಬಾರಿ ಸ್ಟೇಜಿನ ಹತ್ರ ಸುತ್ತ ಮುತ್ತ ಓಡಾಡ್ತಾ ಎಲ್ಲರ ಅಭಿಪ್ರಾಯಗಳನ್ನ ಸ೦ಗ್ರಹಿಸುತ್ತಾ ನಿ೦ತೆ. ಕಾರ್ಯಕರ್ತನೊಬ್ಬ “ನೀವು ವಾಲ೦ಟೀರಾ”? ಅ೦ತ ಕೇಳಿದ “ಅಲ್ಲಪ್ಪ” ಅ೦ದೆ “ಹೀಗೆಲ್ಲಾ ಓಡಾಡ್ಬೇಡಿ ಸರ್ ಬಾ೦ಬ್ ಥ್ರೆಟ್ ಇದೆ “ಅ೦ದ ಆಯ್ತಣ್ಣ ಅ೦ತ ಒ೦ಕಡೆ ಕೂತು ಅವರ ಕೆಲ್ಸಾನ ಗಮನಿಸುತ್ತಾ ಬ೦ದೆ. ಮನೇಲಿ ಇರಕ್ಕೆ ಬೋರ್ ಆಗಿ ನಾವೂ ಟಿ ವೀಲಿ ಕಾಣ್ತೀವಲ್ಲ ಅ೦ತ ಯೋಚಿಸ್ಕೊ೦ಡ್ ಬ೦ದು ಟೈಟ್ಸ್, ಅರೆ ತೋಳಿನ ಟಾಪ್ (ಇನ್ನೂ ಕೆಲವರು ಬನೀನ್ ಥರದ್ದು, ಬೇಡ ಬಿಡಿ) ಹಾಕ್ಕೊ೦ಡ್ “ಹೇ ಇಟ್ಸ್ ವೆರಿ ಫನ್ನಿ ಯೋ ನೋ, ಐ ಅಯಾಮ್ ಆಲ್ಸೋ ಎ ವಾಲ೦ಟೀರ್ ಹಿಯರ್, ಇಲ್ಲಿ ಸಕ್ಕತ್ತಾಗಿದೆ, ಐ ವಾನ ವೇರ್ ದಿಸ್ ಟಿ ಶರ್ಟ್, ಹ್ಮ್ ಲೆಟ್ಸ್ ಗೋ ಇನ್ ಸೈಡ್ ದಿ ವಾನ್ ” ಅ೦ತ ಹೋದವರು ಅರ್ಧ ಗ೦ಟೆಯನ೦ತರ ಸರ್ವಾ೦ಗ ಸು೦ದರಿಯರಾಗಿ ಬ೦ದರು.
ಒಂದು ತುತ್ತು ಅನ್ನ… ಎರಡು ತೊಟ್ಟು ಕಣ್ಣೀರು…!
-ರವಿ ಮೂರ್ನಾಡು
ಮದುವೆಗೆ ಗೆಳತಿಯ ಆಮಂತ್ರಣ ಬಂದಿತ್ತು.ಆ ಮದುವೆ ಶುಭದಿನ ಹೊಸ ಜಗತ್ತೊಂದನ್ನು ಚಿತ್ತಪಟದಲ್ಲಿ ಮುದ್ರೆಯೊತ್ತುತ್ತದೆ ಅಂತ ತಿಳಿದಿರಲಿಲ್ಲ. ಜೀವವಿರುವ ಪ್ರತಿಯೊಂದು ಜೀವಿಗೂ ತನ್ನದೇ ಆದ ಕವಚವೊಂದು ಬದ್ಧತೆಯನ್ನು ನಿರ್ಮಿಸಿ ಕೊಡುತ್ತದೆ ಅಂತ ಗೊತ್ತಿತ್ತು. ಅದನ್ನು ಮೀರಿ ಮನುಷ್ಯನ ಮನಸ್ಸಿಗೇ ಸವಾಲೊಡ್ಡುವ ಶಾರೀರಿಕ ತಲ್ಲಣದ ಸನ್ನಿವೇಶಕ್ಕೆ ಎದೆಯನ್ನೊಮ್ಮೆ ಮುಟ್ಟಿ ನೋಡುತ್ತೇನೆ. ಹಸಿವಿನ ಪ್ರಪಂಚದ ನದಿಯ ಪ್ರವಾಹಕ್ಕೆ ಕೊಚ್ಚಿ ಹೋಗುತ್ತೇನೆ. ಈ ಕಡಲ ಅಲೆಗಳಲ್ಲಿ ದಡ ಸೇರಲು ಹವಣಿಸುವ ಪುಟ್ಟ ದೋಣಿಯೆಂದು ಗೊತ್ತಿರಲಿಲ್ಲ. ಅಲೆಗಳು ಹಾಗೇ ಬಡಿಯುತ್ತಲೆ ಇವೆ…..ತಡಿಯಲ್ಲಿ ಮೂಡಿಸಿದ ಹೆಜ್ಜೆಗಳ ಅಳಿಸುತ್ತಲೇ ಇದೆ….! ಹೆಜ್ಜೆಗಳು ಮೂಡುತ್ತಲೇ ಇವೇ…
ಮದುವೆ ಇದ್ದದ್ದು ಬೆಂಗಳೂರಿನಲ್ಲಿ. 500 ರೂಪಾಯಿಯೊಂದಿಗೆ ನನ್ನ ಪ್ರಯಾಣ.ಎಂದಿಗೂ ಎಲ್ಲಿಗೂ ಹೊರಡುವಾಗ ಒಂದಷ್ಟು ಸಾಹಿತಿಗಳ ಪುಸ್ತಕ, ಪತ್ರಕರ್ತನಾಗಿದ್ದರಿಂದ ಒಂದೆರಡು ಲೇಖನಗಳ ಟಿಪ್ಪಣಿ. ಜೋಳಿಗೆ ಹೆಗಲಿಗೆ ಭಾರವಾಗುತ್ತಿರಲಿಲ್ಲ. ಬಸ್ಸಿನಲ್ಲಿ ಮಡಿಕೇರಿಯಿಂದ ಬೆಂಗಳೂರುವರೆಗೆ ಆರು ಗಂಟೆಗಳ ಕಾಲ ಕೂರಬೇಕಲ್ಲ. ಸುಮ್ಮನೇ ಕುಳಿತಾಗ ಸಮಯದ ಗೈರು ಹಾಜರಿಯ ಕೊರತೆಯನ್ನು ಈ ಪುಸ್ತಕಗಳು ನೀಗಿಸುತ್ತಿದ್ದವು. ನನ್ನೊಂದಿಗೆ ಮಾತಾಡುತ್ತಿದ್ದವು.
ಹಾಗೇ ದ.ರಾ.ಬೆಂದ್ರೆ, ಎಂ.ಟಿ.ವಾಸುದೇವನ್ ನಾಯರ‍್, ಪ್ರೇಮ್‍ಚಂದ್., ಜಿ.ಎಸ್. ಶಿವರುದ್ರಪ್ಪ.. ಇತ್ಯಾದಿ…! ಅದರಲ್ಲಿ ವಾಸುದೇವನ್ ನಾಯರರ ಒಂದು ಕಥೆ ಹಸಿವಿನ ಕ್ಷಣಗಳನ್ನು ಕದಕಿದಂತಾಯಿತು. ಕಥೆ ” ಕರ್ಕಟಕ ಮಾಸ”. ಕೇರಳದಲ್ಲಿ ” ಕಕ್ಕಡ ಮಾಸಂ” ಅಂತ ಕರೀತಾರೆ.ಕೃಷಿಕರಿಗೆ ತುಂಬಾ ಕಷ್ಟದ ತಿಂಗಳು ಇದು. ಈ ನಕ್ಷತ್ರದಲ್ಲಿ ಹುಟ್ಟಿದವರಿಗೆ ಅಶುಭ ಅಂತ ಪ್ರತೀತಿ.ಜ಼ಾನಪೀಠ ಪ್ರಶಸ್ತಿ ವಿಜೇತ ಎಂ.ಟಿ.ವಾಸುದೇವನ್ ನಾಯರರ ಹುಟ್ಟಿದ ನಕ್ಷತ್ರ ಇದು. ಅದರಲ್ಲಿ ಅವರ ಹುಟ್ಟುಹಬ್ಬದ ದಿನವನ್ನು ಅವರ ತಾಯಿ ಹೇಗೆ ಆಚರಿಸಿದರು ಅಂತ ವಿವರಿಸುತ್ತಾರೆ. ಖಾಧ್ಯಾನ್ನಗಳ ವಿಚಾರದಲ್ಲಿ ಕೇರಳ ಸ್ವಾವನಂಭಿಯಲ್ಲ ಎಂದೂ ವ್ಯಂಗ್ಯವಾಡುತ್ತಾರೆ. ಮತ್ತಷ್ಟು ಓದು 
ಉಗ್ರರ ಉಪದ್ರವಕ್ಕೆ ಪರಿಹಾರವಿಲ್ಲವೇ?
– ಮುರಳೀಧರ ದೇವ್
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷಗಳಿಗೆ ಏನಾಗಿದೆ? ಒಂದಾದ ಮೇಲೆ ಒಂದರಂತೆ ಹಗರಣಗಳು, ಅವಾಂತರಗಳು, ಒಟ್ಟಿನಲ್ಲಿ ಇಡೀ ಭಾರತ ದೇಶ ವಿಶ್ವಡೆದುರು ತಲೆ ತಗ್ಗಿಸುವ ಹಾಗೆ ಆಗಿದೆ. ಕಾಮನ್ ವೆಲ್ತ್ ಕ್ರೀಡೆಯ ಹಗರಣದಿಂದ ಸರ್ಕಾರದ ಮಹತ್ವದ ಹುದ್ದೆಗಳಲ್ಲಿರುವವರೆಲ್ಲರೂ ಭಾಗಿಗಳು ಅಂತ ಕಾಣ್ಸುತ್ತೆ. ಈಗ ಕೇಂದ್ರದ ಮತ್ತೊಂದು ಅವಾಂತರ, ಇತ್ತೀಚೆಗೆ ಕೇಂದ್ರೀಯ ತನಿಖಾ ದಳ ಪಾಕಿಸ್ತಾನಕ್ಕೆ ರವಾನಿಸಿದ ಪಟ್ಟಿಯಲ್ಲಿ ಕೆಲವರು ಭಾರತದ ಜೈಲಿನಲ್ಲಿ ಇದ್ದಾರೆ. ಅಲ್ಲದೇ ಆ ಪಟ್ಟಿಯಲ್ಲಿರುವವರನ್ನು ತನಿಖಾದಳವೆ ವಿಚಾರಣೆ ನಡೆಸಿದೆ ಹಾಗಿದ್ದೂ ಇಂತಹ ಲೋಪ ಆಗೋಕೆ ಹೇಗೆ ಸಾಧ್ಯ? ಕಡೆ ಪಕ್ಷ ರೆಡ್ ಕಾರ್ನರ್ ನೋಟೀಸ್ ಜಾರಿ ಮಾಡುವಾಗಲಾದ್ರೂ ಪಟ್ಟಿಯನ್ನು ಸರಿಯಾಗಿ ಪರಿಶೀಲನೆ ಮಾಡೋಕೆ ಆಗೋಲ್ವಾ? ತನಿಖಾ ಸಂಸ್ಥೆಗಳ ನಡುವೆ ಅಷ್ಟೂ ಸಮನ್ವಯ ಸಾಧಿಸೋಕೆ ಆಗೋಲ್ವಾ? ಇತ್ತೀಚಿನ ಬೆಳವಣಿಗೆಗಳಿಂದ ಭಾರತ ವಿಶ್ವ ಸಮುದಾಯದೆದುರು ಅಪರಾಧಿ ಸ್ಥಾನದಲ್ಲಿ ನಿಲ್ಲುವ ಹಾಗೆ ಆಗಿದೆ.
ಈಗ ಪಾಕಿಸ್ತಾನ ಇದೆ ಅಂಶಗಳನ್ನು ಮುಂದಿಟ್ಟುಕೊಂಡು ತನ್ನಲ್ಲಿ ಯಾವುದೇ ಭಯೋತ್ಪಾದಕರಿಲ್ಲ ಅವರೆಲ್ಲ ಭಾರತದಲ್ಲೇ ಇದ್ದಾರೆ ಅಂತ ಹೊಸ ವಾದ ಮುಂದಿಟ್ಟರು ಆಶ್ಚರ್ಯವಿಲ್ಲ. ಅಲ್ಲದೇ ಈಗ ಹಿಡಿದಿರುವ ಉಗ್ರರಿಂದ ಸರ್ಕಾರ ಕಡೆದು ಕಟ್ಟೆ ಹಾಕಿದ್ದು ಅಷ್ಟರಲ್ಲೇ ಇದೆ. ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ಮಾಡಿದ, ಮುಂಬೈ ನಗರವನ್ನು ನಡುಗಿಸಿದ ಉಗ್ರಗಾಮಿಗಳಿಗೆ ನಮ್ಮ ಜೈಲುಗಳಲ್ಲಿ ಭಾರಿ ಅತಿಥಿ ಸತ್ಕಾರಗಳು ನಡೀತಾ ಇವೆ. ಇದನ್ನೆಲ್ಲ ನೋಡಿ ಪಾಕಿಸ್ತಾನದಲ್ಲಿರುವ ಉಗ್ರಗಾಮಿಗಳು ತಾವೇ ಶರಣಾಗಿ ಬಂದರು ಪಾಕಿಸ್ತಾನಕ್ಕಿಂತ ಹೆಚ್ಚಿನ ಅನುಕೂಲಗಳು ಇಲ್ಲೇ ಸಿಗುತ್ತವೆ. ಅಲ್ಲ ಆಡಳಿತ ನಡೆಸುವ ಪಕ್ಷಕ್ಕೆ ಉಗ್ರಗಾಮಿಗಳಲ್ಲೂ ವೋಟ್ ಬ್ಯಾಂಕ್ ರಾಜಕಾರಣ ಮಾಡೋಕೆ ನಾಚಿಕೆ ಆಗೋಲ್ವಾ? ಹೀಗೆ ಭಾರತದ ಮೇಲೆ ದಾಳಿ ಮಾಡುವ ಉಗ್ರರನ್ನು ಎಷ್ಟು ದಿನ ಅಂತ ತೆರಿಗೆದಾರರ ಹಣದಿಂದ ಸಾಕಬೇಕು.
ಬದಲಾವಣೆ ಬಯಸುವುದಾದರೆ ಬಸವನಗುಡಿಗೆ ಬನ್ನಿ…
– ರಾಕೇಶ್ ಶೆಟ್ಟಿ
ಬಸವನಗುಡಿಗೆ ಬಂದ ತಕ್ಷಣ ಬದಲಾವಣೆಯಾಗುತ್ತಾ? ಅನ್ನುವ ಪ್ರಶ್ನೆ ನಿಮ್ಮದಾದರೆ ನನ್ನ ಉತ್ತರ ’ಇಲ್ಲ’! ಅಂತಲೇ. ಭ್ರಷ್ಟಚಾರ ಅನ್ನುವ ಬ್ರಹ್ಮ ರಾಕ್ಷಸನ ವಿರುದ್ಧ ಅಣ್ಣ ಹಜ಼ಾರೆ ನೇತೃತ್ವದಲ್ಲಿ ಶುರುವಾಗಿರುವ ಈ ಹೋರಾಟವೇ ಅಂತಿಮವಲ್ಲ.ಇದು ಆರಂಭವಷ್ಟೆ ಅನ್ನುವುದು ನನ್ನ ಅಭಿಪ್ರಾಯ.
ಅಂತಿಮವಾಗುವುದಾದರೂ ಹೇಗೆ ಹೇಳಿ, ಭ್ರಷ್ಟಚಾರ ಅಂದಾಕ್ಷಣ ಎಲ್ಲರ ಕಣ್ಣು ಮೊದಲು ಬೀಳುವುದೂ ಕಳ್ಳ(ಎಲ್ಲ ಅಲ್ಲ) ರಾಜಕಾರಣಿಗಳ ಮೇಲೆ,ಆಮೇಲೆ ಸರ್ಕಾರಿ ಕಛೇರಿ ಮತ್ತು ಅಧಿಕಾರಿಗಳ ಮೇಲೆ.ತಪ್ಪೇನಿಲ್ಲ ಬಿಡಿ…! ಭ್ರಷ್ಟಚಾರ ಅನ್ನೋ ಪಿರಮಿಡ್ನ ತುತ್ತ ತುದಿಯಲ್ಲಿರೋ ಅವರ ಮೇಲೆ ಎಲ್ಲರ ಕಣ್ಣು ಬೀಳುವುದು ಸಹಜ.ಆದರೆ, ’ನಾವುಗಳೆಷ್ಟು ಸಾಚಾ?’ ಅಂತ ನಮ್ಮನ್ನೇ ನಾವ್ಯಾವತ್ತಾದರೂ ಕೇಳಿಕೊಂಡಿದ್ದೇವೆಯೇ?
ನರೇ೦ದ್ರ ಮೋದಿ ಎ೦ಬ ಭಾರತದ ಚಲಾವಣೆಯ ನಾಣ್ಯ !!
ರಾಘವೇಂದ್ರ ನಾವಡ ಕೆ ಎಸ್
ಎಲ್ಲರೂ ಮಹಾನ್ ವ್ಯಕ್ತಿಗಳಾಗಲು ಸಾಧ್ಯವಿಲ್ಲ.. ಎಲ್ಲರೂ ಮಹಾತ್ಮರಾದರೆ ಅತ೦ತ್ರರಾಗೋರ್ಯಾರು? ಎ೦ಬ ಉಡಾಪೆಯ ಮಾತೊ೦ದಿದೆ! ಸೂಕ್ತ ಸಮಯದಲ್ಲಿ ಸುಪ್ತವಾಗಿ ನಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಿ, ಜನ ಕಲ್ಯಾಣಕ್ಕಾಗಿ ಚಿ೦ತಿಸುವವರೆಲ್ಲಾ ಮಹಾತ್ಮರೇ ಆಗುತ್ತಾರೆ!
ಈ ಪ್ರಸ್ತುತ ಲೇಖನಕ್ಕೆ ಮತ್ತೊಮ್ಮೆ ನರೇ೦ದ್ರ ಮೋದಿಯೇ ಕಥಾವಸ್ತು! ನಿನ್ನೆ ನನ್ನ ಆತ್ಮೀಯ ಪ್ರಸ್ಕಾ ಕಳುಹಿಸಿದ ಮೊಬೈಲ್ ಸ೦ದೇಶವೇ ಮತ್ತೊಮ್ಮೆ ನನ್ನ ಲೇಖನಕ್ಕೆ ಆಧಾರವಾಗಿದೆ. ಮೋದಿ ಸರ್ಕಾರದ ಮತ್ತೊ೦ದು ಸಾಧನೆಯನ್ನೇ ಈ ಲೇಖನದಲ್ಲಿ ಬಿ೦ಬಿಸುತ್ತಿದ್ದೇನೆ. ಈ ಹಿ೦ದೆ ನರೇ೦ದ್ರ ಮೋದಿಯವರ ಬಗ್ಗೆ ಇಷ್ಟಕ್ಕೂನರೇ೦ದ್ರ ಮೋದಿ ಮಾಡಿರುವ ತಪ್ಪಾದರೂ ಏನು? ಎ೦ಬ ಲೇಖನದಲ್ಲಿ ಗುಜರಾತ್ ಯಶೋಗಾಥೆಯನ್ನು ಸಾದ್ಯ೦ತವಾಗಿ ವಿವರಿಸುವ ಪ್ರಯತ್ನ ಮಾಡಿದೆ.







