ವಿಷಯದ ವಿವರಗಳಿಗೆ ದಾಟಿರಿ

Posts from the ‘ರಾಜಕೀಯ’ Category

31
ಮೇ

ಅಮಿತ್ ಷಾ ಲಕ್ಷದ್ವೀಪ ಪ್ರವಾಸ ವಿಸ್ತಾರದ ಮತ್ತೊಂದು ಮಜಲು…

ಸಂತೋಷ್ ಬಿ.ಎಲ್
ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ
ಭಾಜಪ

ವಿಸ್ತಾರ-ವಿಕಾಸ ಬಿಜೆಪಿಗೆ ಒಂದೇ ನಾಣ್ಯದ ಎರಡು ಮುಖಗಳು. ಬಹುಮತದಲ್ಲಿ ನಿಲ್ಲದೇ ಸರ್ವವ್ಯಾಪಿಯಾಗಬೇಕು.. ಸರ್ವಸ್ಪರ್ಶಿಯಾಗಬೇಕು ಎಂಬುದು ಬಿಜೆಪಿಯ ಗುರಿ. ವಿಚಾರ-ವಿಕಾಸ-ಸಂಘಟನೆ ನಮ್ಮ ಬೆಳವಣಿಗೆಯ ಮೂರು ಆಯಾಮಗಳು. ವಿಕಾಸ ಪುರುಷ ನರೇಂದ್ರ ಮೋದಿಯವರ ನೇತೃತ್ವ ವಿಸ್ತಾರ ಪುರುಷ ಅಮಿತ್ ಷಾರವರ ಸಾರಥ್ಯ ಇಂದು ಬಿಜೆಪಿಯನ್ನು ದೇಶದ ಮೂಲೆ ಮೂಲೆಗಳಿಗೆ ಕೊಂಡೊಯ್ಯುತ್ತಿದೆ. ಪ್ರತೀ ಮನೆ-ಮನವನ್ನು ಮುಟ್ಟುವ ಯೋಜನೆಯೊಡನೆ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ಎಂಬ ಗುರಿಯೊಡನೆ ಬಿಜೆಪಿಯ ಯಾತ್ರೆ ಭರದಿಂದ ಸಾಗಿದೆ. ಪಂ.ದೀನದಯಾಳ ಉಪಾಧ್ಯಾಯ ಜನ್ಮಶತಾಬ್ದಿ ವರ್ಷ ಈ ಯಾತ್ರೆಗೆ ಇನ್ನಷ್ಟು ಹುರುಪು ತುಂಬಿದೆ. 3 ಸಾವಿರಕ್ಕೂ ಮಿಕ್ಕಿ 1 ವರ್ಷದ ‘ವಿಸ್ತಾರಕ’ರು ಹಾಗೂ 4 ಲಕ್ಷಕ್ಕೂ ಹೆಚ್ಚು 15 ದಿನ ಸಮಯ ನೀಡುವ ‘ವಿಸ್ತಾರಕ’ರನ್ನು ಹೊರಡಿಸುವುದು ನಮ್ಮ ಗುರಿ. ಆ ಗುರಿಗೆ ಚೈತನ್ಯ ತುಂಬಲು ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾರವರು ಸ್ವತಃ ತಾವು 15 ದಿನ ವಿಸ್ತಾರಕರಾಗಿ ‘ವಿಸ್ತಾರ ಯಾತ್ರೆ’ ಘೋಷಣೆ ಮಾಡಿದರು. ಪಶ್ಚಿಮ ಬಂಗಾಲ, ಓರಿಸ್ಸಾ, ತೆಲಂಗಾಣ, ಲಕ್ಷದ್ವೀಪ ಹಾಗೂ ಗುಜರಾತ್‌ನಲ್ಲಿ 3 ದಿನ ಕೆಲಸ ಮಾಡುವ ಸಂಕಲ್ಪ ಘೋಷಿಸಿದರು. ಈ ಘೋಷಣೆಯೇ ಪಕ್ಷದ ಒಳಗೆ ವಿದ್ಯುತ್ ಸಂಚಾರ ಮೂಡಿಸಿತು. ಮತ್ತಷ್ಟು ಓದು »

19
ಮೇ

ಕೈ ಜಾರುತ್ತಿರುವ ಜಮ್ಮುಕಾಶ್ಮೀರ ; ನೆನಪಾಗುವ ಜಗಮೋಹನ್

– ರಾಕೇಶ್ ಶೆಟ್ಟಿ

ಕಳೆದ 5 ತಿಂಗಳಿನಲ್ಲಿ ಸೇನೆಯ ಮೇಲೆ 7 ದಾಳಿಗಳು ; ಮೇ 2ನೇ ತಾರೀಖು ಇಬ್ಬರು ಭಾರತೀಯ ಯೋಧರ ತಲೆಕಡಿಯಲಾಯಿತು;2 ಬ್ಯಾಂಕುಗಳ ದರೋಡೆ,ಹತ್ಯೆಗಳು; ರಾಜ್ಯ ಸರ್ಕಾರವೇ ಭದ್ರತಾ ದೃಷ್ಟಿಯಿಂದ 40 ಬ್ಯಾಂಕುಗಳಲ್ಲಿ ನಗದು ವ್ಯವಹಾರ ಮಾಡದಂತೆ ಸೂಚಿಸಿದ್ದು; ಸಹೋದರಿಯ ಮದುವೆಗೆಂದು ರಜೆಯಲ್ಲಿ ಮನೆಗೆ ಬಂದಿದ್ದ ಯೋಧನನ್ನು ಅಪಹರಿಸಿ,ಚಿತ್ರಹಿಂಸೆ ನೀಡಿ ಹತ್ಯೆ;ಹುತಾತ್ಮ ಯೋಧನ ಶವಯಾತ್ರೆಯಲ್ಲಿ ಕಲ್ಲು ತೂರಾಟ;ಎನ್ಕೌಂಟರಿನಲ್ಲಿ ಸತ್ತ ಉಗ್ರನ ಶವಯಾತ್ರೆಯಲ್ಲಿ ಪ್ರತ್ಯಕ್ಷವಾದ ಉಗ್ರರಿಂದ ಗಾಳಿಯಲ್ಲಿ ಗುಂಡು,ಪ್ರತೀಕಾರದ ಕೂಗು;ಆಡಳಿತಾರೂಢ ಪಿಡಿಪಿ ಪಕ್ಷದ ಪುಲ್ವಾಮ ಜಿಲ್ಲಾಧ್ಯಕ್ಷನನ್ನು ಗುಂಡಿಕ್ಕಿ ಕೊಲ್ಲಲಾಯಿತು.

ಇವೆಲ್ಲ ಘನಂಧಾರಿ ಸಾಧನೆಗಳಾಗಿರುವುದು ಆಗುತ್ತಿರುವುದು ಜಮ್ಮುಕಾಶ್ಮೀರ ರಾಜ್ಯದಲ್ಲಿ.ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಉಗ್ರ ಬರ್ಹಾನ್ ವನಿಯ ಹತ್ಯೆಯ ನಂತರ ಭುಗಿಲೆದ್ದ ಹಿಂಸಾಚಾರ, Demonetization ಮತ್ತು ಸರ್ಜಿಕಲ್ ಸ್ಟ್ರೈಕ್ ನಂತರ ತಾತ್ಕಾಲಿಕವಾಗಿ ತಣ್ಣಗಾಗಿತ್ತಾದರೂ ಈಗ ಭೀಕರ ಹಂತಕ್ಕೆ ಹೊರಟಿರುವಂತೆ ತೋರುತ್ತಿದೆ.ಜಮ್ಮುಕಾಶ್ಮೀರ ರಾಜ್ಯದಿಂದ ಈಗ ಬರುತ್ತಿರುವ ಸುದ್ದಿಗಳು 90ರ ದಶಕವನ್ನು ಮತ್ತೊಮ್ಮೆ ನೆನಪಿಸುತ್ತಿರುವುದು ಸುಳ್ಳಲ್ಲ. 90ರ ದಶಕದಲ್ಲೂ ಹೀಗೆ ಕಾನೂನು-ಸುವ್ಯವಸ್ಥೆಯೆನ್ನುವುದು ಹಾಳು ಬಿದ್ದು ಹೋಗಿತ್ತು.ಆಗಲೂ ಹೀಗೆ ಉಗ್ರಗಾಮಿಗಳು ಕಾಶ್ಮೀರಿಗಳ ಮನೆಬಾಗಿಲು ತಟ್ಟುತ್ತಿದ್ದರು,ಅನಾಮತ್ತಾಗಿ ಮನೆಯಿಂದ ಎತ್ತಾಕಿಕೊಂಡು ಹೋಗಿ ಚಿತ್ರಹಿಂಸೆ ಕೊಟ್ಟು ಕೊಲ್ಲುತ್ತಿದ್ದರು.ಈಗ ಹೊತ್ತಿ ಉರಿಯುತ್ತಿರುವ ದಕ್ಷಿಣ ಕಾಶ್ಮೀರದ ಸ್ಥಿತಿ ಮತ್ತೆ 90ರ ದಶಕಕ್ಕೆ ಹೊರಳಿ ನಿಂತಂತಿದೆ.

ಮತ್ತಷ್ಟು ಓದು »

4
ಮೇ

ಸಿದ್ಧಾಂತಕ್ಕಾಗಿ ಬದುಕುವ ಜೀವನ ಯಾವ ಸಂತರಿಗೂ ಕಡಿಮೆಯದ್ದಲ್ಲ..

– ಅರುಣ್ ಬಿನ್ನಡಿ

೨೫ ವರ್ಷಗಳ ಪ್ರಚಾರಕ್ ಜೀವನದಲ್ಲಿ ಗಳಿಸಿದ ಆಸ್ತಿ ಮೂರೂ ಜೊತೆ ಪಂಚೆ,ಎರಡು ಜುಬ್ಬ, ಎರಡು ಮೊಬೈಲ್, ಪುಸ್ತಕಗಳು ಜೊತೆಗೆ ಪ್ರಾಣಕೊಡುವ ಅಸಂಖ್ಯಾತ ಕಾರ್ಯಕರ್ತರು….

ಕೆಲವೊಮ್ಮೆ ಇಂದಿನ ಕರ್ನಾಟಕ ಬಿಜೆಪಿ ಯ ಸೈದ್ಧಾಂತಿಕ ತಿಕ್ಕಾಟಗಳಿಗೆ ನರೇಂದ್ರ ಮೋದಿಯೆ ಕಾರಣ ಎನ್ನಿಸಿ ಬಿಡುತ್ತದೆ, ಯುವ ಸಮುದಾಯವನ್ನು ಕಾಂಗ್ರೆಸಿನ ಪಾರಂಪರಿಕ ಓಲೈಕೆ ಹಾಗು ಜಾತಿ ರಾಜಕಾರಣದಿಂದ ರಾಷ್ಟ್ರೀಯತೆಯ ಸೈದ್ಧಾಂತಿಕ ರಾಜಕಾರಣಕ್ಕೆ, ಅಭಿವೃದ್ಧಿ ರಾಜಕಾರಣಕ್ಕೆ, ನೈತಿಕ ರಾಜಕಾರಣಕ್ಕೆ ಬದಲಾಯಿಸಿದ್ದೆ ದೊಡ್ಡ ಅಪರಾಧವಾಗಿಬಿಟ್ಟಿದೆ ಎನ್ನಬಹುದು. ಮತ್ತಷ್ಟು ಓದು »

1
ಮೇ

ಯಾರು ಹಿತವರು ಯಡ್ಯೂರಪ್ಪನವರಿಗೆ..?

ರಾಕೇಶ್ ಶೆಟ್ಟಿ

“ಕೊಟ್ಟ ಕುದುರೆಯನೇರಲರಿಯದೆ…” ವಚನದ ಸಾಲುಗಳು ಕರ್ನಾಟಕ ಬಿಜೆಪಿಯ ನಾಯಕರಿಗೆ ಸರಿಯಾಗಿ ಅನ್ವಯಿಸುತ್ತದೆ. ಎಪಿಎಂಸಿ,ಪಾಲಿಕೆ ಚುನಾವಣೆಗಳೆನ್ನದೇ ದೇಶದ ಮೂಲೆ ಮೂಲೆಯಲ್ಲೂ ಬಿಜೆಪಿ ಗೆದ್ದು ಬರುತ್ತಿರುವ ಕಮಲ ಪಕ್ಷದ ಸುವರ್ಣ ಸಮಯದಲ್ಲೂ, ರಾಜ್ಯ ಬಿಜೆಪಿ ನಾಯಕರು ಉಪಚುನಾವಣೆಯಲ್ಲಿ ಮಕಾಡೆ ಮಲಗಿ ಕಿರಗೂರಿನ ಗಯ್ಯಾಳಿಗಳಂತೆ ಕಾದಾಟಕ್ಕಿಳಿದಿದ್ದಾರೆ. ನಿನ್ನೆಯ ಸಂಘಟನೆ ಉಳಿಸಿ ಹೆಸರಿನ ಸಭೆ, ಅದಕ್ಕೆ ಪ್ರತಿಯಾಗಿ ನಡೆದ ಬೆಂಗಳೂರಿನ ಶಾಸಕ, ಸಂಸದರ ಪತ್ರಿಕಾಗೋಷ್ಟಿ, ನಾಯಕರೆನಿಸಿಕೊಂಡವರ ಏಕವಚನ ಪ್ರಯೋಗ, ಆರೋಪ-ಪ್ರತ್ಯಾರೋಪಗಳಿಂದಾಗಿ ನಿನ್ನೆ ಎಷ್ಟು ಮೆಗಾಧಾರವಾಹಿಗಳ ಟಿಆರ್ಪಿ ಕಡಿಮೆಯಾಯಿತೋ!

ದೇಶದ ಉಳಿದ ರಾಜ್ಯಗಳ ಬಿಜೆಪಿ, ನರೇಂದ್ರ ಮೋದಿಯವರ ಅಭಿವೃದ್ಧಿ ರಾಜಕಾರಣ ಮತ್ತು ಯುವ ಮನಸ್ಸುಗಳ ಆಲೋಚನಾ ಶಕ್ತಿಯಿಂದ ಮುಂದುವರೆಯುತ್ತಿದ್ದರೆ, ರಾಜ್ಯ ಬಿಜೆಪಿ ಮಾತ್ರ ಪುರಾತನ  ಜಾತಿ ಮತ್ತು ಓಲೈಕೆ ರಾಜಕಾರಣವನ್ನೇ ನೆಚ್ಚಿಕೊಂಡಿದೆ.ಈಶ್ವರಪ್ಪನವರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಮುಖಂಡರೊಬ್ಬರು, ಕುರುಬರಿಗಾಗಿ ಈಶ್ವರಪ್ಪ ಏನು ಮಾಡಿದ್ದಾರೆ? ಯಡ್ಯೂರಪ್ಪನವರೇ ಕನಕ ಜಯಂತಿ ಆರಂಭಿಸಿದ್ದು ಎಂದು ಹೇಳುತ್ತಿರುವುದನ್ನು ಕೇಳಿದೆ. ಆಗಾಗ್ಗೆ ಬರುವ ಜಯಂತಿಗಳ ನೆಪದಲ್ಲಿ ರಜೆಗಳನ್ನು ಕೊಟ್ಟು ಸರ್ಕಾರಿ ಯಂತ್ರವನ್ನು ನಿಲ್ಲಿಸುವ ಪರಿಪಾಠಗಳು ಕೊನೆಯಾಗಬೇಕೆಂಬ ಉದ್ದೇಶದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಂತವರು ‘ಜಯಂತಿ ರಜೆ’ಗಳನ್ನೇ ಕಿತ್ತೊಗೆಯುವಂತಹ ಕೆಲಸ ಮಾಡುತ್ತಿರುವಾಗ, ರಾಜ್ಯ ಬಿಜೆಪಿಯ ನಾಯಕರ ಮನಸ್ಥಿತಿ ಇನ್ನೂ ಜಯಂತಿ ರಾಜಕಾರಣದಲ್ಲೇ ಇರುವುದು ಇವರ ಯೋಚನಾ ಲಹರಿ ಯಾವ ಕಾಲದಲ್ಲಿದೆ ಎಂದು ಸೂಚಿಸುತ್ತದೆ. ಹಾಗೆ ನೋಡಿದರೇ ಕಾಂಗ್ರೆಸ್ಸಿನ ‘ಭಾಗ್ಯ’ ರಾಜಕಾರಣಕ್ಕೂ, ಬಿಜೆಪಿಯ ‘ಜಯಂತಿ’ ರಾಜಕಾರಣಕ್ಕೂ ಯಾವ ವ್ಯತ್ಯಾಸವಿದೆ ? ಇವೆಲ್ಲವನ್ನೂ ಪ್ರಶ್ನಿಸಬೇಕಾದ ಪತ್ರಿಕೆಗಳು ಮಾಡುತ್ತಿರುವುದಾದರೂ ಏನು?

ಮತ್ತಷ್ಟು ಓದು »

29
ಏಪ್ರಿಲ್

ಯೋಧನ ಮಾತುಗಳಲ್ಲಿ…

ಸುರೇಶ್ ಮುಗ್ಬಾಳ್

ತಿಪಟೂರು

downloadಛತ್ತೀಸಘಡದಲ್ಲಿನ ನಕ್ಸಲರ ಕ್ರೌರ್ಯಕ್ಕೂ, ಹತ್ಯೆಯಾದ 25 ಯೋಧರಿಗೂ ಅದೇನು ದ್ವೇಷಗಳಿತ್ತೋ ಏನೋ ಯಾರಿಗೂ ಗೊತ್ತಿಲ್ಲ. ಆದರೆ 300 ಜನ ನಕ್ಸಲರ ಗುಂಪು ಏಕಾ-ಏಕಿ CRPF ಯೋಧರಿದ್ದಲ್ಲಿಗೆ ನುಗ್ಗಿ ಒಂದೇ ಸಮನೆ ಗುಂಡು ಹಾರಿಸಿಬಿಟ್ಟಿದ್ದರು. ಕಾರಣ; ಗುಂಡುಹಾರಿಸಿಕೊಂಡು ಸತ್ತವರೆಲ್ಲಾ ಯೋಧರಾಗಿದ್ದರು, ಸೇನಾ ಸಮವಸ್ತ್ರದಲ್ಲಿದ್ದರು ಮತ್ತು ಸರ್ಕಾರದ ಪರ ಕೆಲಸ ಮಾಡುವವರಾಗಿದ್ದರು ಅಷ್ಟೇ. ವೈಯಕ್ತಿಕ ದ್ವೇಷ ಖಂಡಿತ ಯಾರಿಗೂ ಇದ್ದಿರಲಿಕ್ಕಿಲ್ಲ. ಮತ್ತಷ್ಟು ಓದು »

27
ಏಪ್ರಿಲ್

ದೆಹಲಿ ಪಾಲಿಕೆಯ ಫಲಿತಾಂಶದಲ್ಲಿ ಕರ್ನಾಟಕ ಬಿಜೆಪಿಗೇನು ಪಾಠ?

– ವಿನಾಯಕ ಹಂಪಿಹೊಳಿ

ಕಳೆದ ಹತ್ತು ವರ್ಷಗಳಿಂದ ದೆಹಲಿಯ ಮಹಾನಗರ ಪಾಲಿಕೆಯು ಬಿಜೆಪಿಯ ಕೈಯಲ್ಲಿದೆ. ಇಂದು ಸತತ ಮೂರನೇ ಬಾರಿ ಜಯ ಸಾಧಿಸುವ ಮೂಲಕ ಹ್ಯಾಟ್ರಿಕ್ ನಿರ್ಮಿಸಿದೆ. ಆದರೆ ಹತ್ತು ವರ್ಷಗಳ ಆಡಳಿತದ ಕುರಿತು ಜನರಿಗೇನೂ ಒಳ್ಳೆಯ ಅಭಿಪ್ರಾಯವಿಲ್ಲ. ಮಹಾನಗರ ಪಾಲಿಕೆಗೆ ಆಯ್ಕೆಯಾದ ಬಿಜೆಪಿಗರಲ್ಲಿ ಹತ್ತು ವರ್ಷ ಭ್ರಷ್ಟಾಚಾರವೂ ವ್ಯಾಪಕವಾಗಿಯೇ ನಡೆದಿತ್ತು. ಎರಡು ವರ್ಷಗಳ ಹಿಂದೆ ರಾಜ್ಯ ಚುನಾವಣೆಯಲ್ಲಿ ಆಪ್ ಪಕ್ಷವು ಪ್ರಚಂಡ ಬಹುಮತದಿಂದ ಗೆದ್ದಿತ್ತು. ೨೦೧೩ ಹಾಗೂ ೨೦೧೫ರಲ್ಲಿ ಆಪ್ ಪಕ್ಷಕ್ಕೆ ದೆಹಲಿಯ ಜನತೆ ವೋಟಿನ ಜೊತೆ ಪ್ರೀತಿಯನ್ನೂ ನೀಡಿತ್ತು.

ಇಂಥ ಜನಪ್ರಿಯ ಸರ್ಕಾರದ ಜೊತೆ ಬಿಜೆಪಿಯ ಹಿಡಿತದಲ್ಲಿದ್ದ ಮಹಾನಗರ ಪಾಲಿಕೆಯು ಜಗಳಕ್ಕಿಳಿಯಿತು. ದೆಹಲಿ ಸರ್ಕಾರವು ಪಾಲಿಕೆಗೆ ಹಣ ಬಿಡುಗಡೆ ಮಾಡುವಲ್ಲಿ ನಿಧಾನಗತಿ ತೋರಿಸುತ್ತಿದೆ ಹಾಗೂ ವೇತನ ಬಿಡುಗಡೆ ಮಾಡದೇ ತಡೆಹಿಡಿದಿದೆ ಎಂದು ಪಾಲಿಕೆ ಆರೋಪಿಸಿತು. ಹಾಗೆಯೇ, ಪಾಲಿಕೆಯ ಕೆಲಸಗಾರರು ಕೆಲಸ ನಿಲ್ಲಿಸಿ ಪ್ರತಿಭಟಿಸಿದ್ದರಿಂದ ಇಡೀ ಊರು ಸ್ವಚ್ಛತೆಯನ್ನು ಕಾಣದೇ ದುರ್ನಾತ ಹಿಡಿಯಿತು. ಪಾಲಿಕೆಯು ೧೦ ವರ್ಷಗಳಲ್ಲಿ ಜನರಿಂದ ಪ್ರಶಂಸೆಗೆ ಒಳಗಾಗುವಂತಹ ಶ್ರೇಷ್ಠ ಸಾಧನೆಯನ್ನೇನೂ ಮಾಡಿರಲಿಲ್ಲ. ಪ್ರಗತಿ ಕಾರ್ಯಗಳ ವೇಗ ಅಷ್ಟಕ್ಕಷ್ಟೇ ಇತ್ತು.

ಮತ್ತಷ್ಟು ಓದು »

25
ಏಪ್ರಿಲ್

ಪ್ರಧಾನಿಗಳಿಗೇಕೆ ಭದ್ರತೆ..?

– ಸುರೇಶ್ ಮುಗ್ಬಾಳ್
ತಿಪಟೂರು

ನಾಯಕರ ಭದ್ರತೆಯ ವಿಚಾರದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಡೆದ ಎರಡು ಘಟನೆಗಳು

ಒಂದು “ಪ್ರಧಾನಿಗಳಿಗೇಕೆ ಭದ್ರತೆ..? ಜೀವ ಬೆದರಿಕೆ ಇದ್ದರೆ ಸತ್ತರೆ ಸಾಯಲಿ ಬಿಡಿ” ಎಂದು ಹೇಳಿದ ಬಸವರಾಜ ರಾಯರೆಡ್ಡಿಯವರ ಘಟನೆ. ಮತ್ತೊಂದು ಮಂಡ್ಯ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಎದುರಾಗಿ ಕಪ್ಪು ಬಟ್ಟೆ ಪ್ರದರ್ಶಿಸಿದ ಪ್ರತಿಭಟನಾಕಾರರನ್ನು ಮಂಡ್ಯ ಎಸ್.ಪಿ. ‘ಸುಧೀರ್ ಕುಮಾರ್ ರೆಡ್ಡಿ’ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಕಾರ್ಯಕ್ರಮದ ವೇದಿಕೆಯ ಮೇಲೆ ರೆಡ್ಡಿಯವರನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡ ಘಟನೆ. ಮತ್ತಷ್ಟು ಓದು »

21
ಏಪ್ರಿಲ್

ಕರ್ನಾಟಕ ಬಿಜೆಪಿಯ ಪ್ರತೀ ನಾಯಕನು ತಾವು ನಡೆದು ಬಂದ ಹಾದಿಯನ್ನು ಒಮ್ಮೆ ಹಿಂದೆ ತಿರುಗಿ ನೋಡುವ ಸಮಯ ಬಂದಿದೆ.!

– ಸಾಮಾನ್ಯ ಕಾರ್ಯಕರ್ತ.

ಉಪಚುನಾವಣೆಯ ಪಲಿತಾಂಶವನ್ನು ನೆಪವಾಗಿ ಇಟ್ಟುಕೊಂಡು ಕರ್ನಾಟಕ ಬಿಜೆಪಿಗೆ ಕೆಲವು ಮಾತುಗಳನ್ನು ಹೇಳಲೇ ಬೇಕಿದೆ. ಜನಸಾಮಾನ್ಯನ ನಡುವೆ ಬದುಕುವ ಕಾರ್ಯಕರ್ತನ ಮಾತು ಜನರ ಮಾತೇ ಆಗಿರುತ್ತದೆ. ಅವರ ಮಾತನ್ನು ಕೇಳಿದರೆ ಉತ್ತಮ ಕೇಳದಿದ್ದರೆ ನಮ್ಮ ಕರ್ಮ ಅಷ್ಟೆ. ಯಡಿಯೂರಪ್ಪನವರ ಬಗ್ಗೆ ಪ್ರತಿ ಪದ ಬರೆಯುವಾಗ ನನ್ನ ಮನಸ್ಸಿನಲ್ಲಿ ಜಾಗ್ರತೆಯ ಭಾವ ಕಣ್ಣರಳಿಸಿ ಕೂರುತ್ತದೆ, ಯಡಿಯೂರಪ್ಪನವರೇ ಹೀಗೆ ಮಾಡಿ, ಹಾಗೆ ಮಾಡಿ ಎನ್ನಲು ನನಗಿರುವ ಯೋಗ್ಯತೆಯಾದರು ಏನು ಎಂದು ನನ್ನ ಮನಸ್ಸು ಯಾವಾಗಲು ಪ್ರಶ್ನಿಸುತ್ತದೆ. ಯಡಿಯೂರಪ್ಪನವರು ನನ್ನ ಪಕ್ಷದ ಬೆಳವಣಿಗೆಗೆ ಸವೆಸಿರುವ ಕಾಲ ಚರ್ಮದ ಮೂಲೆಯಲ್ಲಿರುವ ದೂಳಿಗೆ ಸಮನಲ್ಲ ಎನ್ನುವ ಶ್ರದ್ದೆ ಇಂದಿಗೂ ಎಂದಿಗೂ ನನ್ನ ಮನಸ್ಸಿನಲ್ಲಿ ಉಳಿಸಿಕೊಳ್ಳುತ್ತೇನೆ. ಆದರೆ ಒಂದಿಡೀ ಯುವ ಸಮೂಹ ತಾಯಿಭಾರತಿಯನ್ನು ವಿಶ್ವಗುರು ಸ್ಥಾನದಲ್ಲಿ ಕುಳ್ಳಿರಿಸಲು ಎಲ್ಲವನ್ನು ತೊರೆದು ದುಡಿಯುತ್ತಿರುವಾಗ, ಆ ಕಾರ್ಯ ಸಾಧನೆಗೆ ಪೂರಕವಾಗಿ ನೀವೊಂದಿಷ್ಟು ಜರೂರ್ ಕೆಲಸಗಳನ್ನು ಮಾಡಲೇಬೇಕಾಗಿರುವುದರಿಂದ ಹಾಗು ನೀವು ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಆಗಿರುವುದರಿಂದ ನಿಮ್ಮ ಬಳಿ ದೇಶದ ಯುವ ಸಮೂಹದ ಪರವಾಗಿ ಈ ಕೆಲಸಗಳನ್ನು ದಯಮಾಡಿ ಮಾಡಿ ಎಂದು ಕೇಳಿಕೊಳ್ಳುತ್ತೇನೆ. ಹಾಗು ಬಿಜೆಪಿಯ ನಾಯಕ ಪಟ್ಟ ಅಲಂಕರಿಸಿ ತಮ್ಮ ಸುತ್ತ ಕೋಟೆ ಕಟ್ಟಿಕೊಂಡಿರುವ ಹಲವು ಮಹಾಶಯರಿಗೂ ಬದಲಾಗುತ್ತಿರುವ ಭಾರತದ ರಾಜಕಾರಣವನ್ನೊಮ್ಮೆ ಕಣ್ಣು ಬಿಟ್ಟು ನೋಡಿ ಎಂದು ಹೇಳಲು ಬಯಸುತ್ತೇನೆ. ಮತ್ತಷ್ಟು ಓದು »

22
ಫೆಬ್ರ

ದೇವರ ನಾಡಿನಲ್ಲಿ ಮರಣ ಮೃದಂಗ

– ಮಲ್ಲಿ ಶರ್ಮ

dna_illusಬೋಟ್ ಹೌಸ್, ಸರೋವರಗಳು, ಅರಬೀ ಸಮುದ್ರ, ತೆಂಗು ಅಡಿಕೆ ಕೃಷಿ, ಆಹಾ ಈ “GOD’S OWN COUNTRY” ಇದೆಯಲ್ಲಾ, ಅಲ್ಲಿಯ ಟೂರಿಸಂ ಕುರಿತ HD ವಿಡಿಯೋ ಯೂಟ್ಯೂಬಲ್ಲಿ ನೋಡೋವಾಗ ಆಹಾ!!! ಇದಪ್ಪಾ ಸ್ವರ್ಗ ಅಂದ್ರೆ, ಅಂತ ಉದ್ಘಾರ ತೆಗೆದುಬಿಡ್ತಾರೆ ಪ್ರತಿಯೊಬ್ಬರೂ. ಆದರೆ ದೇವರ ಸ್ವಂತ ನಾಡಾದ ಕೇರಳದಲ್ಲಿ ಭಯಾನಕ ರಾಕ್ಷಸರು ಬೀಡು ಬಿಟ್ಟಿರೋ ಸಂಗತಿ ನಿಮಗೆಷ್ಟು ಗೊತ್ತು? ಮತ್ತಷ್ಟು ಓದು »

16
ಫೆಬ್ರ

ಎತ್ತ ಸಾಗುತ್ತಿದೆ ಕನ್ನಡದ ಬೌದ್ಧಿಕ ಜಗತ್ತು..?

– ಡಾ. ಪ್ರವೀಣ ಟಿ. ಎಲ್
ಉಪನ್ಯಾಸಕರು
ಕುವೆಂಪು ವಿಶ್ವವಿದ್ಯಾನಿಲಯ

downloadಬೌದ್ಧಿಕವಲಯದಲ್ಲಿ ಮುಕ್ತ ಸಂವಾದಗಳು ಜ್ಞಾನದ ಬೆಳವಣಿಗೆಯ ದೃಷ್ಟಿಯಿಂದ ಅತ್ಯಂತ ಮುಖ್ಯ. ಅವುಗಳು ಹೆಚ್ಚೆಚ್ಚು ನಡೆಯಲೆಂದೇ ಯುಜಿಸಿಯಂತಹ ಸಂಸ್ಥೆಗಳು, ಸರ್ಕಾರಗಳು ಕೋಟಿಗಟ್ಟಲೇ ಹಣವನ್ನು ನೀಡುತ್ತವೆ. ವಿದ್ಯಾರ್ಥಿಗಳ ನಡುವೆ, ಚಿಂತಕರ ನಡುವೆ ಸಂವಾದಗಳು, ಚರ್ಚೆಗಳು ನಡೆದರೆ ಮಾತ್ರವೇ ತಮ್ಮ ತಿಳುವಳಿಕೆಯ ಮಿತಿಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಹಾಗೂ ಹೊಸ ಹೊಸ ಚಿಂತನೆಯ ಉಗಮಕ್ಕೆ ದಾರಿಯಾಗಲಿವೆ. ಆಗ ಅಲ್ಲಿನ ಬೌದ್ಧಿಕ ವಲಯವು ಹೆಚ್ಚು ಕ್ರಿಯಾಶೀಲವಾಗಿದೆ ಎಂದು ತೀರ್ಮಾನಿಸಬಹುದು. ಕರ್ನಾಟಕದ ಸಂದರ್ಭದಲ್ಲಿ ಬುದ್ಧಿಜೀವಿಗಳೆಂದರೆ ಸಾಹಿತಿಗಳು ಎಂಬಂತಾಗಿದೆ. ಕನ್ನಡ ಬೌದ್ಧಿಕ ವಲಯದಲ್ಲಿ ಇಂತಹ ಸಂವಾದಗಳು ನಡೆಯುತ್ತಿವೆಯೇ? ಎಂಬ ಮುಖ್ಯ ಪ್ರಶ್ನೆಯೊಂದನ್ನು ಕೇಳಿಕೊಳ್ಳಬೇಕಾದ ಸುಸಂದರ್ಭದಲ್ಲಿದ್ದೇವೆ. ಮತ್ತಷ್ಟು ಓದು »