ವಿಷಯದ ವಿವರಗಳಿಗೆ ದಾಟಿರಿ

Posts from the ‘ಶಿಕ್ಷಣ’ Category

19
ಜನ

ಕಾಲೇಜು – ವಿ.ವಿಗಳಲ್ಲಿ ಐಡಿಯಾಲಜಿ ಪ್ರಣೀತ ಹೋರಾಟಗಳು ಅವಶ್ಯಕವೇ?

– ಪ್ರವೀಣ ಟಿ.ಎಲ್
ಶಿವಮೊಗ್ಗ

519ಭಾರತೀಯ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಹಲವು ಪ್ರಬಂಧಗಳೇ ಮಂಡನೆಯಾಗಿವೆ. ಆದರೆ ಇತ್ತೀಚಿನ ಕೆಲವು ಘಟನೆಗಳು ನಮ್ಮನ್ನು ಹೊಸ ಸಮಸ್ಯೆಯತ್ತ ಗಮನಹರಿಸುವಂತೆ ಮಾಡಿದೆ. ಅಂತಹ ಘಟನೆಗಳೆಂದರೆ;

  • ರೋಹಿತ್ ವೇಮುಲಾ ಎಂಬ ಸಂಶೋಧನಾ ವಿದ್ಯಾರ್ಥಿಯ ಆತ್ಮಹತ್ಯೆಯ ಸುತ್ತ ನಡೆದ ಪ್ರಹಸನ. ಆತ ವಿವಿಯಲ್ಲಿ ಸಕ್ರಿಯವಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಕಾರಣಕ್ಕೆ ಆತನ ಆತ್ಮಹತ್ಯೆಯನ್ನು ಕೇಂದ್ರ ಸರ್ಕಾರವೇ ವ್ಯವಸ್ಥಿತವಾಗಿ ನಡೆಸಿದೆ ಎಂಬ ಆರೋಪ.

ಮತ್ತಷ್ಟು ಓದು »

6
ಜನ

ಬಡವರ ಮಕ್ಕಳ ಭವಿಷ್ಯದ ಜೊತೆಗೆ ಬರಗೂರು ಭಂಡಾಟ

– ರಾಕೇಶ್ ಶೆಟ್ಟಿ

baraguruಕಾಲಕ್ಕೆ ತಕ್ಕಂತೆ ಮನುಷ್ಯ Update ಆಗಲಿಲ್ಲಾಂದ್ರೆ Outdated ಆಗಿಬಿಡ್ತಾನೆ ಎನ್ನುವುದಕ್ಕೆ ರಾಜ್ಯದ ಬುದ್ಧಿಜೀವಿಗಳೇ ಸಾಕ್ಷಿ. ಉದಾಹರಣೆಗೆ, ಪಠ್ಯಪುಸ್ತಕ ಪುನರ್ ರಚನಾ ಸಮಿತಿಯ ಅಧ್ಯಕ್ಷರಾಗಿರುವ ಬರಗೂರು ರಾಮಚಂದ್ರಪ್ಪ ಅವರನ್ನೇ ತೆಗೆದುಕೊಳ್ಳಬಹುದು. ಬರಗೂರು ಅವರೇ ಯಾಕೆಂದರೆ, ಸಿದ್ಧರಾಮಯ್ಯನವರ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ,ಬಿಜೆಪಿಯ ಕಾಲದಲ್ಲಿ ಪಠ್ಯಪುಸ್ತಕಗಳ ಕೇಸರಿಕರಣವಾಗಿದೆ ಎಂಬ ಬುದ್ಧಿಜೀವಿಗಳ ಹುಯಿಲನ್ನು ಬೆಂಬಲಿಸಿ, ತಮ್ಮ ಆಸ್ಥಾನ ಸಾಹಿತಿಗಳಲ್ಲೊಬ್ಬರಾದ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ೨೦೧೪ರಲ್ಲಿ ರಚಿಸಿದ್ದರು.ಈ ಸಮಿತಿಯ ಕೆಲಸ ಮುಗಿಯಬೇಕಾದ ಸಮಯಕ್ಕೆ ಮುಗಿದ್ದರಿಂದ ಅವಧಿಯ ವಿಸ್ತರಣೆಯನ್ನೂ ಮಾಡಲಾಯಿತು. ಸಮಿತಿಯೊಂದರ ಅವಧಿಯ ವಿಸ್ತರಣೆಯಾಗುವಾಗ ಅಲ್ಲಿಯವರೆಗೂ ಆಗಿರುವ ಕಾರ್ಯಗಳ ವರದಿ ನೀಡುವುದು ವಾಡಿಕೆ.ಆದರೆ,ಮುಖ್ಯಮಂತ್ರಿಗಳ ಆಸ್ಥಾನ ಸಾಹಿತಿಗಳ ನೇತೃತ್ವದ ಈ ಸಮಿತಿಯನ್ನು ಹಾಗೆಲ್ಲ ಪ್ರಶ್ನಿಸಲಾದೀತೆ? ಈ ಸಮಿತಿ ರಚನೆಯಾದ ನಂತರ, ಹಿಂದಿನ ಪಠ್ಯಗಳಲ್ಲಿನ ಯಾವೆಲ್ಲ ಲೋಪದೋಷಗಳನ್ನು ಪತ್ತೆ ಮಾಡಲಾಗಿದೆ,ಏನನ್ನು ಪುನರ್ ರಚನೆ ಮಾಡುತ್ತಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ಕೊಡದೆ ಎಲ್ಲವನ್ನೂ ನಿಗೂಢವಾಗಿಡಲಾಗುತ್ತಿದೆ.

ಈ ಪರಿ ನಿಗೂಢತೆಯನ್ನಿಟ್ಟುಕೊಂಡು ಬರಗೂರು ರಾಮಚಂದ್ರಪ್ಪನವರೇನು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ಹೊರಟಿದ್ದಾರೆಯೇ? ಎಲ್ಲಾ ಪಠ್ಯ ಪುಸ್ತಕಗಳ ಪರಿಷ್ಕರಣೆಯಾದರೂ ಆಗಿದೆಯೇ ಎಂದರೆ ಅದೂ ಇಲ್ಲ ಜನವರಿ ೧೫ರೊಳಗೆ ನೀಡುತ್ತಾರಂತೆ.ಬಹುಶಃ ಎಲ್ಲಾ ಪ್ರಿಂಟ್ ಆದ ನಂತರವೇ ಬರಗೂರರ ನಿಗೂಢ ಪ್ರಪಂಚದಿಂದ ಈ ಪುಸ್ತಕ ಹೊರಬರುತ್ತದೆನಿಸುತ್ತದೆ. ಇಂತಹ ನಿಗೂಢತೆಯನ್ನಿಟ್ಟುಕೊಂಡೇನೂ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಲು ಹೊರಟಿದ್ದರೆಯೇ ಎಂದು ನಿರೀಕ್ಷೆಯಿಟ್ಟುಕೊಂಡರೇ ಆಘಾತವಾಗುತ್ತದೆ.

ಮತ್ತಷ್ಟು ಓದು »

9
ಡಿಸೆ

‘ಶಿಕ್ಷಣ ಕ್ರಾಂತಿ’ಯ ಅನಿವಾರ್ಯತೆ

– ವಿನಾಯಕ ಪೈ
ಉಪನ್ಯಾಸಕರು
ಉಡುಪಿ

swami-vivekananda-quotes-educationಶಿಕ್ಷಣವೆಂದರೆ ಮೊದಲೇ ಮನುಷ್ಯನಲ್ಲಿ ಇರುವ ಪರಿಪೂರ್ಣತೆಯನ್ನು ಪ್ರಕಾಶಪಡಿಸುವುದು
– ಸ್ವಾಮಿ ವಿವೇಕಾನಂದ

ವಿವೇಕಾನಂದರು ಭಾರತ ಕಂಡಂತಹ ಶ್ರೇಷ್ಟ ಚಿಂತಕ, ಧೀರ ಸನ್ಯಾಸಿ, ಅಪ್ರತಿಮ ದೇಶ ಪ್ರೇಮಿ. ಸಾಮಾಜಿಕ ಒಡಕುಗಳ ವಿರುದ್ಧ ಪ್ರತಿಭಟಿಸಿ ಜಾಗೃತಿ ಸೃಷ್ಟಿಸಿದ ಸಮಾಜ ಸುಧಾರಕ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಹಿರಿಮೆಯನ್ನು, ದೇಶದ ಅಂತಃಸತ್ವವನ್ನು ಮನೆ ಮನೆಯಲ್ಲಿ ಪಸರಿಸಿ ರಾಷ್ಟ್ರ ದೀವಿಗೆಯ ಬೆಳಕನ್ನು ಎಲ್ಲೆಲ್ಲೂ ಚೆಲ್ಲಿದ ಯುಗಪುರುಷ. ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಭಾರತದ ಬಗೆಗಿನ ದ್ವಂದ್ವಗಳನ್ನು, ಕೀಳರಿಮೆಯನ್ನು ಹೋಗಲಾಡಿಸಿ ಭಾರತ ಸರ್ವಕಾಲಕ್ಕೂ ಶ್ರೇಷ್ಟ ಎಂದು ಭೋಗರಾಷ್ಟ್ರಗಳಲ್ಲಿ ಜ್ಞಾನೋದಯಗೊಳಿಸಿದ  ಪವಿತ್ರ ಬೋಧಿವೃಕ್ಷದ ಪ್ರತಿರೂಪ ವಿವೇಕಾನಂದರು. ಮತ್ತಷ್ಟು ಓದು »

19
ನವೆಂ

ಮಾನಸಿಕ ದಾಳಿಗಳು ನಮ್ಮನ್ನು ಆಯಾಸಗೊಳಿಸುವುದಿಲ್ಲ : ಡಾ. ಮೋಹನ್ ಆಳ್ವ

mohan-alva2016 ರ ನುಡಿಸಿರಿ ಕಾರ್ಯಕ್ರಮ ನಡೆಯುತ್ತಿರುವ ಈ ಸಮಯದಲ್ಲಿ ಆಳ್ವಾಸ್ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರವರ ಬಳಿ ನುಡಿಸಿರಿಯ ಉದ್ದೇಶಗಳ ಕುರಿತು ಶ್ರೀಮತಿ ಮೌಲ್ಯ ಜೀವನ್ ರವರು ನಡೆಸಿದ ಒಂದು ಸಂದರ್ಶನ ನಿಲುಮೆಯ ಓದುಗರಿಗಾಗಿ ಇಲ್ಲಿದೆ.

ಮೌಲ್ಯ ಜೀವನ್:  ಈ ಮೊದಲು ‘ಕನ್ನಡ ಮನಸ್ಸು’ ಎಂಬ ಪರಿಕಲ್ಪನೆಯಲ್ಲಿ ಆಳ್ವಾಸ್ ನುಡಿಸಿರಿ ನಡೆಯುತ್ತಿತ್ತು. ಆದರೆ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ನಂತರ ವಿಭಿನ್ನ ಪರಿಕಲ್ಪನೆಗಳಲ್ಲಿ ನುಡಿಸಿರಿ ನಡೆಯುತ್ತ ಬಂದಿದೆ. ಈ ಬಾರಿ `ಕರ್ನಾಟಕ-ನಾಳೆಗಳ ನಿರ್ಮಾಣ’ ಎಂಬ ಕೇಂದ್ರ ವಿಷಯದಡಿಯಲ್ಲಿ ನುಡಿಸಿರಿ ನಡೆಯುತ್ತಿದೆ. ಈ ಪರಿಕಲ್ಪನೆಗಳ ಬಗ್ಗೆ ನೀವು ಏನು ಹೇಳುತ್ತೀರಿ? ಮತ್ತಷ್ಟು ಓದು »

4
ನವೆಂ

ಯೌವನದ ಬರೆ..!

– ಗೀತಾ ಹೆಗ್ಡೆ

imagesಜಗತ್ತು ಎಷ್ಟು ವಿಚಿತ್ರ. ಯಾವುದು ನಮ್ಮ ಕೈಗೆ ಸಿಗುತ್ತದೆ ಎಂದು ಭಾವಿಸುತ್ತೇವೊ ಅದು ಸುಲಭದಲ್ಲಿ ಸಿಗೋದೇ ಇಲ್ಲ. ನನಗಾಗಿ ಈ ಜಗತ್ತಿದೆ. ನನ್ನ ಆಸೆಗಳೆಲ್ಲ ಇಲ್ಲಿ ಈಡೇರುತ್ತದೆ, ನಾ ಯಾವತ್ತೂ ಸೋಲೋದೆ ಇಲ್ಲ ಅನ್ನುವ ಭಾವಾವೇಶದಲ್ಲಿ ಸಾಗುವ ಈ ಯೌವ್ವನದ ಒಂದೊಂದು ಮಜಲು ದಾಟಿಕೊಂಡು ಹೋದಂತೆಲ್ಲ ಪರಿಸ್ಥಿತಿಯ ಅನುಭವ ತನ್ನಷ್ಟಕ್ಕೆ ಚಿತ್ತವನ್ನು ಕಲಕಲು ಶುರುಮಾಡುತ್ತದೆ. ನೂರೆಂಟು ಕನಸುಗಳ ಆಗರ ಈ ಯೌವ್ವನದ ಮೆಟ್ಟಿಲು. ಏರುವ ಗತಿ ತೀವ್ರವಾದಂತೆಲ್ಲ ಆಸೆಗಳ ಭಂಡಾರ ಹೆಚ್ಚುತ್ತಲೇ ಹೋಗುತ್ತದೆ. ಏರುವ ರಭಸದಲ್ಲಿ ಹಿಂತಿರುಗಿ ನೋಡುವ ಗೊಡವೆ ಕಡೆಗೆ ಲಕ್ಷವಿಲ್ಲ. ಅಷ್ಟೊಂದು ಕಾತರ, ನಿರೀಕ್ಷೆ, ಪಡೆದೆ ತೀರಬೇಕೆನ್ನುವ ಉತ್ಕಟ ಆಕಾಂಕ್ಷೆ. ಈ ಸಮಯದಲ್ಲಿ ಯಾರ ಮಾತೂ ಕಿವಿಗೆ ಬೀಳೋದೆ ಇಲ್ಲ. ನಾ ಮಾಡಿದ್ದೆ ಸರಿ. “ಕೋಳಿಗೆ ಮೂರೇ ಕಾಲು” ಎಂದು ವಾದ ಮಾಡುವ ಮೊಂಡು ಬುದ್ಧಿ ಅದೆಲ್ಲಿಂದ ಮನಸ್ಸು ಹೊಕ್ಕು ತಾಂಡವವಾಡುತ್ತೊ! ಮತ್ತಷ್ಟು ಓದು »

3
ನವೆಂ

ಶಿಕ್ಷಣ: ಗುರಿ ಭೀಮ, ಸಾಧಕ ಕುಚೇಲ!

– ಕಲ್ಗುಂಡಿ ನವೀನ್‍

school-studentsಇಂದು ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಚರ್ಚೆಗಳು, ಪ್ರಯೋಗಗಳು ಇನ್ಯಾವುದೇ ಕ್ಷೇತ್ರದಲ್ಲಿ ನಡೆಯುತ್ತಿಲ್ಲ. ತೀರಾ ವಿರಳವಾಗಿದ್ದ ಓಪನ್ ಮಾದರಿ ಶಾಲೆಗಳು ಇಂದು ವಿಪುಲವಾಗಿವೆ. ಸರ್ಕಾರಿ ಶಾಲೆಗಳೂ ಅದರ ಕೆಲವು ಆಂಶಗಳನ್ನು “ಕಾಪಿ” ಮಾಡುತ್ತಿವೆ. ಇನ್ನು ಮಾಂಟೆಸ್ಸೊರಿ ಎಂಬ ಪದ್ಧತಿ (ಮಾರಿಯಾ ಮಾಂಟೆಸ್ಸೊರಿ ಎಂಬಾಕೆ ಚಾಲ್ತಿಗೆ ತಂದ ಶಿಕ್ಷಣ ಪದ್ಧತಿ) ಹೆಚ್ಚುಕಡಿಮೆ ಮನೆ ಮಾತಾಗಿದೆ. ಇದಲ್ಲದೆ, ಖಾಸಗಿ ನೆಲೆಯಲ್ಲಿ ಅನೇಕರು ತಾವೇ ಕಂಡರಿಸಿದ ಪದ್ಥತಿಯನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದಾರೆ. ಶಾಲೆ ಹೀಗೂ ಇರಬಲ್ಲುದೇ ಎಂದು ತಜ್ಞರೂ ಹುಬ್ಬೇರಿಸುವಂತೆ ಮಾಡಿದ್ದಾರೆ. “ಒಂದು ಇಡೀ ವರ್ಷ ನೀನು ಏನು ಬೇಕೋ ಮಾಡಿಕೋ, ನಿನಗಿಷ್ಟವಾದದ್ದನ್ನು ಕಲಿತುಕೋ” ಎಂದು ಶಾಲೆಯಲ್ಲಿ ಹೇಳುತ್ತಾರೆ ಎಂದರೆ ನಂಬುತ್ತೀರಾ? ಅದು ಆರೋಹಿ ಎಂಬ ಶಾಲೆ. ಶಿಕ್ಷಣದಲ್ಲಿ ಆಸಕ್ತಿ ಇರುವ ಎಲ್ಲರೂ ಒಮ್ಮೆ ಹೋಗಿ ನೋಡಿಯಾದರೂ ಬರಬೇಕಾದ ಶಾಲೆಯಿದು ( http://www.aarohilife.org ). ಪೂರ್ಣಪ್ರಮತಿ ಎಂಬ ವಿಶಿಷ್ಟ ಶಾಲೆಯಲ್ಲಿ ಪ್ರತಿ ವರ್ಷ ಶಿಕ್ಷಣ ಪದ್ಧತಿಗಳು ಹಾಗೂ ಕಲಿಕೆ ಹೇಗೆ ನಡೆಯುತ್ತದೆ ಎಂದು ವಿಶ್ಲೇಷಿಸಿ ಹೊಸ ಮಾರ್ಗಗಳನ್ನು ಕಂಡುಕೊಳ್ಳಲೆಂದೇ ಪೂರ್ಣಪ್ರಮತಿ ವ್ಯಾಖ್ಯಾ ಎಂಬ ಹೆಸರಿನಲ್ಲಿ ವಿಚಾರ ಸಂಕಿರಣಗಳನ್ನು ನಡೆಸುತ್ತಾರೆ. ಅನೇಕ ದೃಷ್ಟಿಕೋನಗಳಿಂದ ಹಾಗೂ ಪ್ರಯೋಗಗಳಿಂದಾಗಿ ಗಮನಿಸುತ್ತಿರಬೇಕಾದ ಶಾಲೆ, ಪೂರ್ಣಪ್ರಮತಿ (http://purnapramati.in/) ಹ್ಞಾ ಹಾಗೆ “ನೀವು ನೋಡಲೆಂದು ಬರಲೇಬೇಡಿ. ಮಕ್ಕಳು ತಮಗಿಷ್ಟವಾದದ್ದನ್ನು ಮಾಡುತ್ತಿರುತ್ತಾರೆ. ನಿಮ್ಮ ಭೇಟಿ ಅವರನ್ನು ಡಿಸ್ಟರ್ಬ್ ಮಾಡುತ್ತದೆ” ಎನ್ನುವ ಮಣಿವೆಣ್ಣನ್ ಅವರ ಶಾಲೆಯೂ ಇದೆ! ಅಷ್ಟೇ ಅಲ್ಲ ಅಲ್ಲಿನ ಪದ್ಧತಿಗಳು ನಿರಂತರ ಚರ್ಚೆ, ಮಂಥನದ ಆಧಾರದಿಂದ ಬದಲಾಗುತ್ತಿದೆ. ದೇಶದ ಶಿಕ್ಷಣ ವ್ಯವಸ್ಥೆ ನೀಡಿರುವ ಸ್ವಾತಂತ್ರ್ಯವನ್ನು ಚೆನ್ನಾಗಿಯೇ ಬಳಸಿಕೊಂಡು ಮೆಚ್ಚಿ ತಲೆದೂಗುವಂತಹ ಪ್ರಯತ್ನಗಳು ಖಾಸಗಿ ನೆಲೆಯಲ್ಲಿ ನಡೆದಿದೆ. ಇದರ ನಡುವೆ ನಮ್ಮ ಶಿಷ್ಟ ಪದ್ಧತಿಯನ್ನೇ ಮುಂದುವರೆಸುತ್ತಿರುವ, ಆದರೆ ಆದರ್ಶ ಪ್ರಾಯವಾದ ಖಾಸಗಿ ಶಾಲೆಗಳಿವೆ. ಇಲ್ಲಿಯೂ “ಅಂಕವಲ್ಲ, ಗುಣ ಮುಖ್ಯ” ಎಂದು ಯೋಚಿಸುತ್ತ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿರುವ ಶಾಲೆಗಳಿವೆ. ಇದರ ಜೊತೆ ತನ್ನಷ್ಟಕ್ಕೆ ತಾನು ಬೇರೆ ಯಾವ ಗೊಡವೆಗೂ ಹೋಗದೆ ಮುಂದುವರೆಯುತ್ತಿರುವ ಸಿ ಬಿ ಎಸ್ ಇ ಇತ್ಯಾದಿ ಕೇಂದ್ರದ ಪಠ್ಯಕ್ರಮವನ್ನು ಅಳವಡಿಸಿಕೊಂಡಿರುವ ಖಾಸಗಿ ಶಾಲೆಗಳಿವೆ. ಈ ಎಲ್ಲಕ್ಕಿಂತ ದೊಡ್ಡ, ಕೊರತೆ ಎಂಬ ಪದದ ಅರ್ಥವೇ ತಿಳಿಯದ ರಾಜವೈಭೋಗದ ಅಂತಾರಾಷ್ಟ್ರೀಯ ಶಾಲೆಗಳನ್ನು ಸದ್ಯದ ಚರ್ಚೆಯಿಂದ ದೂರ ಇಡೋಣ. ಮತ್ತಷ್ಟು ಓದು »

19
ಆಕ್ಟೋ

ಸಾಮಾಜಿಕ ಸಮಾನತೆಯ ಐಡಿಯಾಲಜಿ ಹಾಗೂ ಸಮವಸ್ತ್ರ ನಿಯಮದ ಸಮಸ್ಯೆ

– ವಿನಾಯಕ ಹಂಪಿಹೊಳಿ

rjp_310816_kesari1ಪಶ್ಚಿಮದ ದೇಶಗಳು ಶಾಲಾ ಕಾಲೇಜುಗಳಲ್ಲಿರುವ ಸಮವಸ್ತ್ರದ ನಿಯಮವನ್ನು ಕೇವಲ ಒಂದು ಶಿಸ್ತಿನ ನಿಯಮವನ್ನಾಗಿ ನೋಡುವದಿಲ್ಲ. ಆ ದೇಶಗಳು ಪ್ರೊಟೆಸ್ಟಂಟ್ ಚಳುವಳಿಯ ಕಾಲದಿಂದ ರೂಪಿಸಿಕೊಂಡಿರುವ ಸಾಮಾಜಿಕ ಸಮಾನತೆಯ ಐಡಿಯಾಲಜಿಯನ್ನು ಶಾಲೆಗಳಲ್ಲಿ ಅನುಷ್ಠಾನಕ್ಕೆ ತರುವ ಮತ್ತು ಬೆಳೆಯುತ್ತಿರುವ ಮಕ್ಕಳಿಗೆ ಆ ಐಡಿಯಾಲಜಿಯನ್ನು ತಿಳಿಸುವ ಪ್ರಯತ್ನ ಎಂದು ಅರ್ಥೈಸಲಾಗುತ್ತದೆ. ಶಾಲೆ ಎಂಬ ಸಂಸ್ಥೆಯ ಮುಂದೆ ಎಲ್ಲ ಮಕ್ಕಳೂ ಸಮಾನರು ಹಾಗೂ ಅಲ್ಲಿ ಬಡವ ಮತ್ತು ಬಲ್ಲಿದ ಎಂಬ ಭೇದವಿಲ್ಲ ಎಂಬ ಉನ್ನತವಾದ ಆಶಯವನ್ನು ಈ ಸಮವಸ್ತ್ರದ ನಿಯಮವು ಹೊಂದಿದೆ. ಹೀಗಾಗಿ ಅಲ್ಲಿ ಸಮವಸ್ತ್ರವನ್ನು ಹಾಕಿಕೊಳ್ಳಲು ಒಪ್ಪದಿರುವವರನ್ನು ಸಾಮಾಜಿಕ ಸಮಾನತೆಯ ವಿರೋಧಿ ಎಂದೇ ಪರಿಗಣಿಸಲಾಗುತ್ತದೆ. ಮತ್ತಷ್ಟು ಓದು »

17
ಆಕ್ಟೋ

ಪರಿಸರ ಶಿಕ್ಷಣ: ಸಾಧನೆ ಮತ್ತು ಸವಾಲುಗಳು

– ಕಲ್ಗುಂಡಿ ನವೀನ್
ಬೆಂಗಳೂರು
ದೂರವಾಣಿ: 944 89 05214

curriculumಇಂದು ಪರಿಸರ, ಪರಿಸರ ಮಾಲೀನ್ಯ ಎಂದರೆ ಅದನ್ನು ವಿವರಿಸಲು ಹೆಚ್ಚು ಶ್ರಮಪಡಬೇಕಿಲ್ಲ. ಆ ಕುರಿತಾದ ಜಾಗೃತಿ ಜನಸಾಮಾನ್ಯರಲ್ಲಿ ಇದೆ. ಇದೊಂದು ತೀರಾ ಇತ್ತೀಚಿನ ಸಂತೋಷದಾಯಕ ಬೆಳವಣಿಗೆ ಎಂದರೆ ಪರಿಸರ ಕುರಿತಾದ ಸಕಾರಾತ್ಮಕ ನಿಲುವು. ಹಿಂದೆ ಪರಿಸರ ಎಂಜಿನಿಯರ್‍ ಒಬ್ಬರು ಹೇಳುತ್ತಿದ್ದರು: “..ನಾವು ಪರಿಸರದ ಪರವಾಗಿ ಮಾತನಾಡಿದರೆ, ನಮ್ಮನ್ನು ಕರುಣೆಯಿಂದ ನೋಡಲಾಗುತ್ತಿತ್ತು” ಎಂದು! ಇಂದು ಆ ಸ್ಥಿತಿ ಖಂಡಿತಾ ಇಲ್ಲ.  ಈ ಜಾಗೃತಿ ಹದಗೆಡುತ್ತಿರುವ ನಮ್ಮ ಪರಿಸರ ವ್ಯವಸ್ಥೆಯನ್ನು ಸರಿಪಡಿಸುವಷ್ಟು ದೃಢವಾಗಿದೆಯೇ ಎಂಬ ಪ್ರಶ್ನೆ ಬೇರೆ! ಆದರೆ ಆ ಜಾಗೃತಿ ಮೂಡಿರುವುದು ಗಮನಾರ್ಹ ಮತ್ತು ಸಂತೋಷದಾಯಕ ಅಂಶ. ಮತ್ತಷ್ಟು ಓದು »

1
ಆಕ್ಟೋ

ಆಗಬೇಕಿದೆ ಸರಸ್ವತಿ ಮಂದಿರಗಳ ಜೀರ್ಣೋದ್ಧಾರ

– ಮುರಳಿ ಕೃಷ್ಣ ಕಡವ

ಒಂದೂರಿನ ಒಂದಷ್ಟು ಜನ ತಮ್ಮ ಮಕ್ಕಳ ವಿದ್ಯಾಭ್ಯಾಸ ಸರಿಯಾಗಿ ನಡೆಯುತ್ತಿಲ್ಲಾ ಅಂತ ಒಬ್ಬ ಜ್ಯೋತಿಷಿಯ ಬಳಿ ಸಲಹೆಗಾಗಿ ಹೋದರು. ಜ್ಯೋತಿಷಿಯು ತನ್ನೆಲ್ಲಾ ಲೆಕ್ಕಚಾರಗಳನ್ನು ಮಾಡಿ, “ನಿಮ್ಮೂರಿನ ಮಧ್ಯದಲ್ಲಿ ದೇವರ ಸಾನ್ನಿಧ್ಯವಿದೆ, ಅಲ್ಲಿ ಒಂದು ದೇವಸ್ಥಾನದ ನಿರ್ಮಾಣವಾಗಬೇಕು” ಎಂಬ ಪರಿಹಾರವನ್ನು ನೀಡಿದರು. ದೇವರ ಮೇಲಿನ ಭಕ್ತಿಗಿಂತ ಭಯವೇ ಜಾಸ್ತಿ ನೋಡಿ ಜನರಿಗೆ. ಸರಿ ಎಂದು ಒಂದೇ ವರ್ಷದಲ್ಲಿ ಲಕ್ಷಗಟ್ಟಲೇ ದುಡ್ಡು ಸಂಗ್ರಹಿಸಿ, ಒಂದು ಗುಡಿಯನ್ನ ಎದ್ದು ನಿಲ್ಲಿಸಿ, ದೇವರ ಮೂರ್ತಿಯನ್ನ ಪ್ರತಿಷ್ಟಾಪಿಸಿಯೇ ಬಿಟ್ಟರು. ಅದಕ್ಕೊಬ್ಬ ಪೂಜಾರಿಯನ್ನೂ ನೇಮಿಸಿ ಪೂಜೆ, ಹೋಮ ಹವನಗಳನ್ನೂ ನಡೆಸಲಾಯಿತು. ಆದರೆ ಅವರು ಎದುರಿಸುತ್ತಿದ್ದ ಸಮಸ್ಯೆಗೆ ಪರಿಹಾರ ಸಿಗಲೇ ಇಲ್ಲ. ಕೇಳಿದರೆ ಆ ಜನರ ಉತ್ತರ ಏನು ಗೊತ್ತಾ “ನಮ್ಮ ಕೆಲಸ ನಾವು ಮಾಡಿದ್ದೇವೆ ಫಲಾಫಲಗಳೆಲ್ಲಾ ದೇವರಿಗೆ ಬಿಟ್ಟದ್ದು” ಅಂತ. ಮತ್ತಷ್ಟು ಓದು »

13
ಸೆಪ್ಟೆಂ

ಗುರು – ಶಿಷ್ಯ

– ಗೀತಾ ಹೆಗ್ಡೆ

images-1ಅರಿವು ಅಂದರೆ ತಿಳುವಳಿಕೆ. ಇದು ನಮಗೆ ಹುಟ್ಟಿನಿಂದ ಬರಲು ಸಾಧ್ಯವಿಲ್ಲ. ಇದಕ್ಕೆ ಒಬ್ಬ ಗುರುವಿನ ಅಗತ್ಯ ಇದೆ. ಒಂಬತ್ತು ತಿಂಗಳು ಹೊತ್ತು ಹೆತ್ತು ಸಾಕಿದ ತಾಯಿ ಮೊದಲ ಗುರು. ಎಳೆ ಕಂದಮ್ಮನಿಗೆ ಹಾಲುಣಿಸುವ ತರಬೇತಿಯಿಂದ ಹಿಡಿದು ತನ್ನ ಜೀವಿತಾವಧಿಯ ಕೊನೆಯವರೆಗೂ ಒಂದಲ್ಲಾ ಒಂದು ಗಳಿಗೆಗಳ ಸಂದರ್ಭದಲ್ಲಿ ಜೊತೆಯಾಗಿ ನಿಂತು ಸಲಹುವ ಗುರು ರಕ್ಷೆ ಅವಳು. ಹಾಗಾದರೆ ತಂದೆ? ಮುದ್ದು ಮಾಡಿ ಎತ್ತಿ ಹಾರಿಸಿ ಕಂದನ ಲಾಲನೆ ಪಾಲನೆ ಕಡೆ ಕಣ್ಣಿಟ್ಟು ಬೇಕಾದ್ದೆಲ್ಲ ತನ್ನ ಶಕ್ತ್ಯಾನುಸಾರ ತಂದು ಕೊಡುವ; ತರಲಾರದ್ದಕ್ಕೆ ಸಂಕಟ ಪಡುತ್ತ ಹಪಹಪಿಸಿ ಮರೆಯಲ್ಲಿ ಕಣ್ಣೊರೆಸಿಕೊಂಡು ಜವಾಬ್ದಾರಿ ಹೊತ್ತು ಮಕ್ಕಳಿಗೆ ಶ್ರೀ ರಕ್ಷೆ ನೀಡಿ, ಬೆಳೆಯುವ ಮಕ್ಕಳ ಏಳಿಗೆಯ ನೋಡಿ ಬೀಗುವ ಕಣ್ಣಿಗೆ ಕಾಣದ ಗುರು ಎಂದರೂ ತಪ್ಪಾಗಲಾರದು. ಏಕೆಂದರೆ ಸಂಸಾರದಲ್ಲಿ ಮಕ್ಕಳಿಂದ ಏನೆ ತಪ್ಪು ಒಪ್ಪಿದ್ದರೂ ಸಾಮಾನ್ಯವಾಗಿ ತಾಯಿ ಕಲಿಸಿದ ಬುದ್ಧಿ ಹೇಳೋದೆ ಜಾಸ್ತಿ. ತಂದೆ, ತಾಯಿ ಕಲಿಸಿದ ಬುದ್ಧಿ ಹೇಳೋದು ಅಪರೂಪ. ತಂದೆ ತಾಯಿಯಾದವರೂ ಹೇಳುವುದೂ ಹಾಗೆ, ಒಳ್ಳೆದಾದರೆ ನಾ ಕಲಿಸಿದ್ದು ಅದೆ ತಪ್ಪಾದರೆ ಅವರಮ್ಮ ಕಲಿಸಿದ ಬುದ್ಧಿ. ಎಷ್ಟು ವಿಪರ್ಯಾಸ! ಮತ್ತಷ್ಟು ಓದು »