ಭವಿಷ್ಯದ ಅರಮನೆಯ ಕನಸೇನೋ ಚಂದ, ಆದರೆ….
– ಗುರುರಾಜ ಕೋಡ್ಕಣಿ. ಯಲ್ಲಾಪುರ
‘ಕಂಗ್ರಾಟ್ಸ್ ಅನಿತಾ.. ನೀನು ಸಾಧಿಸಿಬಿಟ್ಟೆ ಮಗಳೇ, ನೀನು ಸಾಧಿಸಿ ಬಿಟ್ಟೆ. ನಿನಗೀಗ ಕ್ಯಾಂಪಸ್ ಸಂದರ್ಶನದಲ್ಲಿ ಕೆಲಸ ಸಿಕ್ಕಿರುವ ಕಂಪನಿ ಎಂಥಹ ಅದ್ಭುತ ಸಂಸ್ಥೆ ಗೊತ್ತೆ..?? ಈ ಒಂದು ವರ್ಷದ ಅವಧಿಯಲ್ಲೇ ಅದು ಸಾವಿರಾರು ಕೋಟಿಗಳಷ್ಟು ಲಾಭ ಪಡೆದುಕೊಂಡಿದೆ. ನಿನ್ನ ಶ್ರಮ ಸಾರ್ಥಕವಾಯಿತು ಮಗು. ದೀಪಾ, ಎಲ್ಲರಿಗೂ ಐಸ್ ಕ್ರೀಮ್ ತರಿಸು, ನಮ್ಮ ಮಗಳ ಈ ಯಶಸ್ಸನ್ನು ಖುಷಿಯಾಗಿ ಆಚರಿಸೋಣ’ ಎಂದು ಕೈಯಲ್ಲಿದ್ದ ಪತ್ರವನ್ನು ಅಪ್ಪ ಸಂತಸದಿಂದ ಓದುತ್ತಿದ್ದಾಗ ಅನಿತಾಳದ್ದು ನಿರ್ವಿಕಾರ ಮುಖಭಾವ. ಪದವಿ ಮುಗಿಯುವ ಮುನ್ನವೇ ಆಕೆಯ ಪ್ರತಿಭೆಯನ್ನು ಗಮನಿಸಿದ್ದ ಪ್ರತಿಷ್ಟಿತ ಕಂಪನಿಯೊಂದು ಆಕೆಗೆ ಉದ್ಯೋಗವನ್ನು ನೀಡಿತ್ತು. ಉದ್ಯೋಗ ಖಾತ್ರಿಯ ಪತ್ರವನ್ನೋದುತ್ತಿದ್ದ ಅಪ್ಪನಿಗೆ ಹೆಮ್ಮೆಯಿಂದ ಕೊರಳುಬ್ಬಿದ ಅನುಭವ. ಸಂತಸದ ಹಿಂದೆಯೇ ಅಮ್ಮನದ್ದೊಂದು ಸಣ್ಣ ಎಚ್ಚರಿಕೆ,’ಈಗ ಕೇವಲ ಐಸ್ ಕ್ರೀಮ್ ತಿಂದು ಸಂಭ್ರಮಿಸೋಣ ಮಗಳೇ, ನೀನು ಇನ್ನಷ್ಟು ಶ್ರಮಪಡು. ಹೆಚ್ಚು ಹೆಚ್ಚು ಏಕಾಗ್ರತೆಯಿಂದ ಓದು. ಕಡಿಮೆಯೆಂದರೂ ತೊಂಬತ್ತೈದು ಪ್ರತಿಶತ ಅಂಕಗಳನ್ನು ನೀನು ಗಳಿಸಬೇಕು. ನಿನ್ನ ಅಂಕಗಳನ್ನು, ಪ್ರತಿಭೆಯನ್ನು ನೋಡಿ ಕಂಪನಿ ನಿನಗೆ ಒಂದೇ ವರ್ಷದಲ್ಲಿ ಡಬ್ಬಲ್ ಪ್ರಮೋಷನ್ ಕೊಟ್ಟು ಬಿಡಬೇಕು. ಹಾಗೆ ಅಭ್ಯಾಸದಲ್ಲಿ ನಿನ್ನನ್ನು ನೀನು ತೊಡಗಿಸಿಕೊ ಮಗಳೇ, ಓದುವುದೊಂದೇ ನಿನ್ನ ಗುರಿಯಾಗಬೇಕು ಈಗ. ಇದು ಕಷ್ಟಪಡುವ ಕಾಲ. ಮುಂದೆ ಭವಿಷ್ಯದಲ್ಲಿ ನೀನು ಸಾಧನೆಯ ಶಿಖರದೆತ್ತರಕ್ಕೆ ನಿಂತಾಗ ಈಗ ಪಟ್ಟ ಶ್ರಮವೂ ನಿನಗೆ ಸಿಹಿಯಾದ ಅನುಭವವಾಗಿ ಭಾಸವಾಗುತ್ತದೆ ಮಗು. ಈಗ ಕೇವಲ ಓದುವುದೊಂದೇ ನಿನ್ನ ಗಮ್ಯ, ಶ್ರಮಪಡು ಅಷ್ಟೇ’ ಎನ್ನುವ ಅಮ್ಮನ ಮಾತುಗಳನ್ನು ಕೇಳಿದ ಅನಿತಾಳ ಮುಖದಲ್ಲಿ ಭಾವಹೀನ ಶುಷ್ಕನಗೆಯೊಂದು ಮೂಡಿದ್ದನ್ನು ಆಕೆಯ ಸಾಧನೆಯನ್ನು ಆಸ್ವಾಧಿಸುವ ಸಂಭ್ರಮದಲ್ಲಿದ್ದ ಪೋಷಕರು ಗಮನಿಸಲೇ ಇಲ್ಲ. ಮತ್ತಷ್ಟು ಓದು 
ಉಪನಿಷತ್ ವಾಙ್ಮಯ 2: ಆಮಿಷ ಒಡ್ಡದೆ ಉತ್ತರಿಸು; ಅರಿವಿನ ಮಟ್ಟವನೆತ್ತರಿಸು!
– ಸ್ವಾಮಿ ಶಾಂತಸ್ವರೂಪಾನಂದ
ಉಪನಿಷತ್ ವಾಙ್ಮಯ :- ಉಪನಿಷತ್ ವಾಙ್ಮಯ 1
ನಚಿಕೇತ ಯಮಸದನಕ್ಕೆ ಹೋದ. ಅಲ್ಲಿ ಮೂರು ದಿನ ಕಾದ. ಭೂಮಿಯಿಂದ ಸೂಕ್ಷ್ಮದೇಹಿಯಾಗಿ ಮೃತ್ಯುವಿನ ಲೋಕಕ್ಕೆ ಹೋಗುತ್ತಿರುವಾಗ ಅವನು ಒಬ್ಬನೇ ಇದ್ದದ್ದಲ್ಲ. ಅವನ ಮುಂದೆ ಸಾವಿರಾರು ಜನ, ಹಿಂದೆ ಸಾವಿರಾರು ಜನ ಸಾಗರದ ರೀತಿಯಲ್ಲಿ ಹೋಗುತ್ತಿದ್ದರಂತೆ. ಅವರೆಲ್ಲರೂ ಯಾವಾವುದೋ ಕಾರಣಕ್ಕೆ ತೀರಿಕೊಂಡರು. ಬದುಕಿನ ಯಾತ್ರೆ ಮುಗಿಸಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡವರು. ಭೂಮಿಯ ಮೇಲಿನ ವ್ಯವಹಾರಗಳನ್ನು ಮುಗಿಸಿ ಪರಲೋಕಕ್ಕೆ ಹೊರಟವರು. ಇಲ್ಲಿ ನಾವು ಉಪನಿಷತ್‍ಕಾರನ ಲೋಕಪ್ರಜ್ಞೆಯನ್ನು ಗಮನಿಸಬೇಕು. ಕತೆ ಕೇವಲ ನಚಿಕೇತ ಮತ್ತು ಯಮನ ಮಾತುಕತೆಯ ಸುತ್ತ ಸುತ್ತುವುದಾದರೂ ಉಪನಿಷತ್‍ಕಾರ ಇವೆಲ್ಲ ಸಣ್ಣಸಣ್ಣ ವಿವರಗಳನ್ನು ಕೂಡ ನಮ್ಮ ಕಣ್ಮುಂದೆ ತಂದು ಬೆಚ್ಚಿಬೀಳಿಸುತ್ತಾನೆ. ಭೂಮಿಯಲ್ಲಿ ಪ್ರತಿಕ್ಷಣದಲ್ಲೂ ನೂರಾರು ಜೀವಗಳು ಕೈಕಾಲು-ಪಪ್ಪುಸಗಳ ಕಾರ್ಯ ನಿಲ್ಲಿಸಿ ನಿಶ್ಚೇಷ್ಟಿತವಾಗುತ್ತಲೇ ಇರುತ್ತವೆ; ಪ್ರತಿ ನಿಮಿಷದಲ್ಲೂ ಅಸಂಖ್ಯಾತ ಜನರು ಮೃತ್ಯುವಿಗೆ ಪಕ್ಕಾಗುತ್ತಲೇ ಇರುತ್ತಾರೆ ಎಂಬ ಎಚ್ಚರಿಕೆಯನ್ನು ಓದುಗನಿಗೆ ಅದುಹೇಗೆ ಉಪನಿಷತ್ ದಾಟಿಸುತ್ತದೆ ನೋಡಿ! ಇಂಥ ನೂರಾರು ಜೀವರ ನಡುವಿನಲ್ಲಿ ನಚಿಕೇತನೂ ಇದ್ದ. ಅವನಿಗೆ ಭೂಲೋಕವನ್ನು ಬಿಟ್ಟು ಬಂದೆನಲ್ಲಾ ಎಂಬ ಚಿಂತೆಯೂ ಇರಲಿಲ್ಲ; ದೇವರ ಲೋಕ ಸೇರುವ ದಾರಿಯಲ್ಲಿದ್ದೇನೆಂಬ ಸಂತೋಷವೂ ಇರಲಿಲ್ಲ. ದುಃಖ ಸಂತೋಷಗಳಿಲ್ಲದ ಒಂದು ವಿಚಿತ್ರ ಸ್ಥಿತಿಯಲ್ಲಿ ಅವನು ಯಮಪುರಿಗೆ ಹೋದ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ-9
ಪಂಡಿತ್ ಮದನ ಮೋಹನ ಮಾಳವೀಯ
– ರಾಮಚಂದ್ರ ಹೆಗಡೆ
ಭಾರತೀಯ ಸ್ವಾತಂತ್ರ್ಯ ಹೋರಾಟ ಹಾಗೂ ನಂತರದ ಭವ್ಯ ಭಾರತದ ಭವಿಷ್ಯದ ನಿರ್ಮಾಣದಲ್ಲಿ ಪಂಡಿತ ಮದನ ಮೋಹನ ಮಾಳವೀಯರ ಪಾತ್ರ ಬಹುದೊಡ್ಡದು. ಗಾಂಧೀಜಿಯವರು ರಾಷ್ಟ್ರಪಿತನಾದರೆ ಪಂಡಿತ ಮದನ ಮೋಹನ ಮಾಳವೀಯರು “ರಾಷ್ಟ್ರಗುರು” ಎನ್ನಬೇಕು. ಭಾರತೀಯ ಸಂಸ್ಕೃತಿ ಪರಂಪರೆಯ ಉಳಿವಿಗಾಗಿ, ಭಾರತೀಯ ಚಿಂತನೆಯ ಶಿಕ್ಷಣದ ಪ್ರಸಾರಕ್ಕಾಗಿ ದೇಶಾದ್ಯಂತ ಭಿಕ್ಷೆ ಎತ್ತಿ ‘ಬನಾರಸ್ ಹಿಂದೂ ವಿಶ್ವವಿದ್ಯಾಲಯ’ ವನ್ನು ಸ್ಥಾಪಿಸಿದ ಮಹನೀಯ ಮಾಳವೀಯರು. ಸ್ವಾತಂತ್ರ್ಯ ಹೋರಾಟಗಾರ, ಕವಿ-ಸಾಹಿತಿ, ಪತ್ರಿಕೆಗಳನ್ನು ಕಟ್ಟಿಬೆಳೆಸಿದ ಧೀಮಂತ, ವಿದ್ಯಾಧಾತ ಮತ್ತು ಭಾರತೀಯ ಮೌಲ್ಯಗಳ ಹಿತಚಿಂತಕ, ಮೌಡ್ಯ, ಜಾತೀವಾದಗಳನ್ನು ಪೋಷಿಸದ ಮನೋಭಾವನೆ ಹೊಂದಿದ್ದ ಮಾಳವೀಯರು ‘ಪಂಡಿತ’ರೆಂದೇ ಹೆಸರುವಾಸಿ. ಮತ್ತಷ್ಟು ಓದು 
ಹಸುವಿನ ಕೆಚ್ಚಲು ಹಿಂಡಿ ತೋಳನಿಗೆ ಹಾಲುಣಿಸುವವರು
– ರೋಹಿತ್ ಚಕ್ರತೀರ್ಥ
ದಡ್ಡ ವೈರಿಯನ್ನು ಗೆಲ್ಲುವುದು ಸುಲಭ. ಆದರೆ ಅತಿ ಬುದ್ಧಿವಂತ ಶತ್ರುವಿನದ್ದೇ ಸಮಸ್ಯೆ. ಕ್ರಿಸ್ಟೋಫರ್ ನೊಲನ್‍ನ ಡಾರ್ಕ್ ನೈಟ್ ಸಿನೆಮಾ ಸರಣಿಯನ್ನು ನೋಡಿದವರಿಗೆ ಜೋಕರ್‍ನ ಪರಿಚಯ ಚೆನ್ನಾಗಿಯೇ ಇರುತ್ತದೆ. ಈತ ಹೊಡೆ ಬಡಿ ಕೊಲ್ಲು ಎನ್ನುವಂಥ ನೇರಾನೇರ ವಿಲನ್ ಅಲ್ಲ. ನಾಯಕನ ಜೊತೆಗೇ ಇದ್ದು, ಆತನ ತಂತ್ರಗಳನ್ನೆಲ್ಲ ಕರಗತ ಮಾಡಿಕೊಳ್ಳಬಲ್ಲ; ಸಂದರ್ಭ ಬಂದರೆ ನಾಯಕನಿಗಿಂತ ಚೆನ್ನಾಗಿ ಅವನ್ನು ಪ್ರಯೋಗಿಸಬಲ್ಲ ಚತುರನೀತ. ಇಂಥವರನ್ನು ಸಂಭಾಳಿಸುವುದು ಕಷ್ಟದ, ನಾಜೂಕಿನ, ಬುದ್ಧಿವಂತಿಕೆ ಮತ್ತು ಸಂಯಮ ಬೇಡುವ ಕೆಲಸ. ಸಿನೆಮಾದಲ್ಲಿ ಈತನ ಹಾವಭಾವ, ವೇಷಭೂಷಣಗಳನ್ನು ನೋಡಿಯಾದರೂ ವಿಲನ್ ಎನ್ನಬಹುದೇನೋ; ಆದರೆ ನಿಜಜೀವನದಲ್ಲಿ ಇವರು ನಮ್ಮ ನಿಮ್ಮಂತೆಯೇ ಇರುತ್ತಾರೆ. ನಮ್ಮ ಭಾಷೆಯನ್ನೇ, ನಮ್ಮ ಧಾಟಿಯಲ್ಲೇ ಮಾತಾಡುತ್ತಾರೆ. ನಮಗೇನೋ ಬಹಳ ದೊಡ್ಡ ಉಪಕಾರ ಮಾಡಲಿಕ್ಕೆಂಬಂತೆ ಹಿಂದೆ ಮುಂದೆ ಸುಳಿದಾಡಿಕೊಂಡಿರುತ್ತಾರೆ. “ನೀನೂ? ಬ್ರೂಟಸ್!” ಎಂದು ನಾವು ಕಂಗಾಲಾಗಿ ನೆಲಕ್ಕುರುಳುವಷ್ಟರಲ್ಲಿ ಕಾಲ ಮಿಂಚಿರುತ್ತದೆ. ಮತ್ತಷ್ಟು ಓದು 
ಅರಿವೇ ಗುರು
– ಗೀತಾ ಹೆಗ್ಡೆ
ಗುರು ಬ್ರಹ್ಮ ಗುರು ವಿಷ್ಣುಃ ಗುರು ದೇವೊ ಮಹೇಶ್ವರಃ
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುಭ್ಯೋನಮಃ
ಕೆಲವೊಮ್ಮೆ ಅನಿರೀಕ್ಷಿತವಾಗಿ ಮನಸ್ಸನ್ನು ಕಲಕುವ ಬೇಸರದ ಸಂಗತಿಗಳು ಎದುರಾದಾಗ ಯಾವ ರೀತಿ ಸ್ವೀಕರಿಸಬೇಕು ಎನ್ನುವ ಗೊಂದಲ ಕಾಡುತ್ತದೆ. ತಪ್ಪು ಎಲ್ಲಿ ನಡೆದಿದೆ ಅನ್ನುವ ಹುಡುಕಾಟದಲ್ಲಿ ಅರಿವಾಗದೆ ಕಣ್ಣು ಮಂಜಾಗುವುದು ಸ್ವಾಭಾವಿಕ. ಇದುವರೆಗೆ ಸ್ನೇಹಿತರಂತೆ, ಹಿತೈಷಿಗಳಂತೆ ಜೊತೆಯಾಗಿದ್ದವರ ನಡೆ ಒಗಟಾಗಿ ಕಾಣುತ್ತದೆ. ನಾನು ನನ್ನವರು ಅನ್ನುವ ಮಮಕಾರ ಹೃದಯದಲ್ಲಿ ಮನೆ ಮಾಡಿ ಅನೇಕ ಸಂತಸದ ಕ್ಷಣಗಳು, ಮಾತುಗಳು ಮನಃಪಟದಲ್ಲಿ ಸರಿದಾಡಿ ದುಃಖಿಸಲು ಎಡೆಮಾಡಿಕೊಡುತ್ತದೆ. “ಹೊಡೆದವನಿಗೆ ನೋವು ಗೊತ್ತಾಗುವುದೇ ಇಲ್ಲ. ಆದರೆ ಹೊಡೆಸಿಕೊಂಡವನಿಗೆ ಮೌನದ ಪೆಟ್ಟು ಮನಸ್ಸನ್ನು ಘಾಸಿಗೊಳಿಸುತ್ತದೆ.” ಮತ್ತಷ್ಟು ಓದು 
ನುಡಿ ಮರಣ ಭಾಷಾವಸಾನ
– ಸುದರ್ಶನ ಗುರುರಾಜರಾವ್
ಮುನ್ನುಡಿ:
ಕೆಳಗಿನ ಕವಿತಾ ಸಂಭಾಷಣೆಯ ಮೂಲಕ – ಸಮಸ್ಯೆಯ ಪರಿಚಯ ಗಮನಿಸಿ
ಕನ್ನಡಿಗ
ಓ ತಾಯಿ ನೀನೇಕೆ ಬೇಡುತಿಹೆ ಭಿಕ್ಷೆ
ಎಲ್ಲಿ ಹೋಯಿತು ನಿನ್ನ ಮನೆ ಮಂದಿ ರಕ್ಷೆ
ಬಾಡಿ ನಲುಗಿಹುದಲ್ಲ ಈ ನಿನ್ನ ವದನ
ಏನಾಯ್ತು ಆ ನಿನ್ನ ಬಹು ಭವ್ಯ ಸದನ
ಭುವನೇಶ್ವರಿ ದೇವಿ (ಕನ್ನಡ ಮಾತೆ:)
ಮಗುವೆ ಮನೆಯಿದ್ದು ಪರದೇಶಿ ನಾನು
ದಿನವೂ ನಾ ಅರೆಹೊಟ್ಟೆ ನೀ ತಿಳಿಯೆಯೇನು
ನನ್ನ ಕೋರಿಕೆಗಿನಿತು ಕೊಡದೆ ಬೆಲೆಯನ್ನು
ಬೇಯಿಸುತ ಬಡಿಸಿಹರು ಕಲಬೆರೆಕೆಯನ್ನು ಮತ್ತಷ್ಟು ಓದು 
ಪ್ರತಿಭಾ ಪಲಾಯನ
-ಮಯೂರ ಲಕ್ಷ್ಮೀ
ಅದೊಂದು ಕಾಲದಲ್ಲಿ ನಳಂದಾ, ತಕ್ಷಶಿಲಾ ಮುಂತಾದ ವಿಶ್ವವಿಖ್ಯಾತ ವಿದ್ಯಾಲಯಗಳಿಂದ ಪ್ರಸಿದ್ಧಿಹೊಂದಿ ಎಲ್ಲೆಡೆಯಿಂದ ಎಲ್ಲರನ್ನೂ ಆಕರ್ಷಿಸಿ ಜ್ಞಾನದೇಗುಲವೆನಿಸಿದ್ದ ಭಾರತ ದೇಶವು ತನ್ನ ಹಿಂದಿನ ವೈಭವಗಳನ್ನು ಮರೆತುಹೋಗುವ ಸ್ಥಿತಿ ತಲುಪಿದ್ದಾದರೂ ಏಕೆ? ಯಾವುದೇ ಒಂದು ದೇಶವು ಆರ್ಥಿಕವಾಗಿ ಸಧೃಢವೆನಿಸಿಕೊಳ್ಳುವುದು ದೇಶದ ಬೆನ್ನೆಲುಬಾದ ಯುವಶಕ್ತಿಯಿಂದಾ ಮಾತ್ರ! ಜಗತ್ತಿಗೆ ಅರಿವು ನೀಡುವ ಜ್ಞಾನದೇಗುಲವೆನಿಸಿದ್ದ ಭಾರತ ಮೆಕಾಲೆಯ ಆಗಮನದಿಂದ ತನ್ನ ಮೌಲ್ಯಾಧರಿತ ಶಿಕ್ಷಣ ವ್ಯವಸ್ಥೆಯನ್ನೇ ಕಳೆದುಕೊಂಡಿತು. ಭಾರತವು ವಿಶ್ವಮಾನ್ಯವೆನಿಸಿದ್ದು ತನ್ನ ಜ್ಞಾನ-ವಿಜ್ಞಾನ, ತಂತ್ರಜ್ಞಾನಗಳಿಂದ ಪ್ರಪಂಚಕ್ಕೆ ನೀಡಿದ ಕೊಡುಗೆಯಿಂದ. ಮತ್ತಷ್ಟು ಓದು 
ಕನ್ನಡದ ಕಲಿಗಳಾಗಿ ಆಂಗ್ಲವನ್ನು ಮಣಿಸಿ- ಖಾಸಗಿ ಶಾಲೆಗಳ ಕಡೆಗಣಿಸಿ.
– ಸುದರ್ಶನ ಗುರುರಾಜರಾವ್
ಕನ್ನಡ ಮಾಧ್ಯಮದಲ್ಲಿದ್ದು ಇಂಗ್ಲಿಷ್ ಕಲಿಯಲು/ಕಲಿಸಲು ಸುಲಭ ವಿಧಾನ
೧.ಪರಿಚಯ
೨.ಕಲಿಕೆಯ ಕ್ರಮ (ಸ್ಥೂಲ ರೂಪು ರೇಷೆ )
೩.ಇಂಗ್ಲಿಷ್ ಭಾಷೆಯ ವ್ಯವಸ್ಥಿತ ಅಭ್ಯಾಸ ಮತ್ತು ಇಂಗ್ಲಿಷ್ ಕಲಿಕೆಯ ಪರಿಕರಗಳು- ಭಾಷಾಂತರ ಪಾಠಮಾಲೆ
೪.ಉಪಸಂಹಾರ ಮತ್ತು ಪರಿಸಮಾಪ್ತಿ.
ಪರಿಚಯ :
ಕನ್ನಡದಲ್ಲಿ ಕಲಿತರೆ ಭವಿಷ್ಯವಿಲ್ಲ, ಇಂಗ್ಲೀಷ್ ಮಾಧ್ಯಮ ಎಂದರೆ ಮಾತ್ರವೇ ಯಶಸ್ಸಿನ ಮಂತ್ರ ಎಂಬೊಂದು ನಂಬಿಕೆಯನ್ನು ಜನಮಾನಸದಲ್ಲಿ ಬಲವಾಗಿ ಬಿತ್ತಿ ಕಾಲಕ್ರಮದಲ್ಲಿ ನೀರೆರೆರ್ದು ಪೋಷಿಸಿಕೊಂಡು ಬಂದ ಖಾಸಗಿ ವ್ಯವಸ್ಥಾಪಕರು, ಅವರೊಡನೆ ಕೈಜೋಡಿಸಿ ತಮ್ಮ ನೆಲ-ಜಲ- ಭಾಷೆ ಸಂಸ್ಕೃತಿಗೆ ಚೂರಿ ಹಾಕಿದ ಭ್ರಷ್ಟ ರಾಜಕಾರಿಣಿಗಳು, ಧೃತರಾಷ್ಟ್ರನಂತೆ ತಿಳಿದು ಸುಮ್ಮನಿದ್ದ ಸರಕಾರವು ಜನರನ್ನು ಸುಲಿದು ಹಣದ ಹೊಳೆಯನ್ನು ತಮ್ಮ ಕಡೆಗೆ ಹರಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿವೆ. ಕ್ಲಿಷ್ಟ ಸಮಸ್ಯೆಗಳಿಗೆ ಪರಿಹಾರ ಬಹಳಷ್ಟು ಬಾರಿ ಸರಳವೇ ಇರುತ್ತದೆ. ಅದನ್ನು ಗುರುತಿಸಿ ಅಳವಡಿಸಿಕೊಳ್ಳುವ ಭಾರ ಪ್ರಜ್ಞಾವಂತ ಸಮಾಜದ್ದಾಗಿರಬೇಕು. ಅಂತಹ ಸರಳೋಪಾಯಗಳನ್ನು ಹುಡುಕಿಸಿ ಪಸರಿಸುವ ಕೆಲಸ ಶಿಕ್ಷಣ ಮತ್ತು ಸಾಹಿತ್ಯ-ಸಂಸ್ಕೃತಿ ಇಲಾಖೆಗಳದ್ದಾಗಿರಬೇಕು. ಆದರೆ ಎಲ್ಲರೂ ಕಳ್ಳರೇ! ಗೊಂದಲವನ್ನು ಹಬ್ಬಿಸಿ ಅದರ ಲಾಭ ಪಡೆಯಲು ನಿಂತ ಬೇಲಿಯೇ ಎದ್ದು ಹೊಲ ಮೇಯ್ದ ಪರಿಣಾಮವಾಗಿ ಇಂದು ಕನ್ನಡ ಶಾಲೆಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿವೆ. ಖಾಸಗಿಗೆ ಪೈಪೋಟಿ ಕೊಡುವಲ್ಲಿ ಸೋಲುತ್ತಿವೆ. ಅವುಗಳಲ್ಲಿ ಕೆಲವನ್ನು ನೋಡೋಣ ಮತ್ತಷ್ಟು ಓದು 
ಖಾಸಗಿ ಕಾಲೇಜಿನ ಕಲಿಕೆ- ಬರೀ ಗಿಲೀಟಿನ ಬುಡುಬುಡಿಕೆ
ಶ್ರದ್ಧಾಹಿ ಪರಮಾಗತಿಃ-
● ನನ್ನ ಆಟೋ ಮಾರಿದರು ಮಗಳಿಗೆ ಪ್ರವೇಶ ದೊರೆಯಲಿಲ್ಲ
● ೯೫% ಅಂಕ ಪಡೆದರೂ ಕಾಲೇಜಿನಲ್ಲಿ ಸೀಟಿಲ್ಲ
● ಹಿಂದೂ ಧರ್ಮದ ಮಕ್ಕಳಿಗೆ ಪ್ರವೇಶವಿಲ್ಲ; ನಮ್ಮ ಕೋಮಿನ ಮಕ್ಕಳಿಗೆ ಆದ್ಯತೆ
● ಪೋಷಕರು ಭರಿಸಲಾಗದಷ್ಟು ಕಾಲೇಜುಗಳು ದುಬಾರಿ
● ದುಬಾರಿ ಕಾಲೇಜಿಗೆ ಸೇರಿಸಿದರೂ ಟ್ಯೂಷನ್ ಹೇಳಿಸಲೇಬೇಕು – ಸಾವಿರಾರು ರೂಪಾಯಿಗಳ ಧಂಧೆ
● ದುಬಾರಿ ಕಾಲೇಜಿಗೆ ಸೇರಿಸುವ ಕುಟುಂಬಗಳಲ್ಲಿ ಆದಾಯದ ಬಹು ಭಾಗ ಶುಲ್ಕಕ್ಕೆ ಹೋಗುವ ಕಾರಣ ಜೀವನದ ಹಲವು ಅಗತ್ಯತೆಗಳನ್ನು ಕಡಿತಗೊಳಿಸಿಕೊಂಡು ಮನೆಯ/ಮನಸ್ಸಿನ/ದೇಹದ ಆರೋಗ್ಯಕ್ಕೆ ಸಂಚಾಕಾರ ತಂದುಕೊಳ್ಳುವ ಸಾಧ್ಯತೆ ಹೆಚ್ಚು.
● ಇಷ್ಟೆಲ್ಲಾ ಕಷ್ಟ ಪಡುವ ತಾಯಿತಂದೆಯರಿಂದ ಅಥವಾ ಮಗುವೇ ಸಂವೇದನಾಶೀಲನಾಗಿದ್ದರೆ ಅದಕ್ಕೆ ಕಷ್ಟಗಳು ತಿಳಿದು ನೇರ ಅಥವಾ ಪರೋಕ್ಷ ಒತ್ತಡಕ್ಕೆ ಒಳಗಾಗಿ ವಿದ್ಯಾಭ್ಯಾಸಕ್ಕೆ ಆಡ್ದಿಯಾಗಬಹುದು.
● ಇದು ಒಂದು ಆರೋಗ್ಯಕರ ಬೆಳವಣಿಗೆ ಅಲ್ಲ.
● ಕ್ರಿಶ್ಚಿಯನ್ ಅಥವಾ ಮುಸಲ್ಮಾನರ ವಿದ್ಯಾ ಸಂಸ್ಥೆಗಳಿಗೆ ಸೇರಿ ಅಲ್ಲಿ ಹೂವು ಮುಡಿಯುವಂತಿಲ್ಲ, ಹಣೇ ಕುಂಕುಮ ಇಡುವಂತಿಲ್ಲ, ಸೀರೆ ಉಡುವಂತಿಲ್ಲ, ಬಳೆ ತೊಡುವಂತಿಲ್ಲ ಎಂಬ ತಲೆಹರಟೆ ಅಸಹಿಷ್ಣತೆಯ ಪರಮಾವಧಿಯ ನಿಷೇಧಗಳನ್ನು ಅನುಭವಿಸಬೇಕು. ಇನ್ನು ಲವ್ ಜಿಹಾದು/ಪ್ರೇಮಕ್ಕೆ ಒತ್ತಡ ಹಾಕುವುದು ಇತ್ಯಾದಿ ಸಮಸ್ಯೆಗಳು ಸೇರಿ ‘ಕಾಸು ಹಾಳು ತಲೆಯು ಬೋಳು’ ಎಂಬ ಗಾದೆಯಂತೆ ಆಗುವುದೊಂದು ಅಭಾಸ.
ಈ ಸಮಸ್ಯೆಗಳು ಎಂದಿಗೂ ಇದ್ದಂತಹವೇ.ಆದರೆ ಇತ್ತೀಚೆಗೆ ಅದರ ವ್ಯಾಪ್ತಿ, ಗಹನತೆ ಹೆಚ್ಚಾಗಿದೆ. ಮತ್ತಷ್ಟು ಓದು 
“ನೆಟ್ಟಿ”ಗೇರಿದ ಪಠ್ಯ @ ನೆತ್ತಿಗೇರುವುದೇ?
-ಸುದರ್ಶನ ರಾವ್
ಅಂತರ್ಜಾಲದಲ್ಲಿ ಕನ್ನಡ ಮಾಧ್ಯಮ ಶಾಲಾ ಪಠ್ಯಗಳು
ನಾವು ಶಾಲೆಯಲ್ಲಿ ಓದುತ್ತಿರುವಾಗ ಒಂದು ತರಗತಿಯಿಂದ ಉತ್ತೀರ್ಣರಾಗಿ ಇನ್ನೊಂದು ತರಗತಿಗೆ ಹೋಗುವುದರ ಜೊತೆಗೆ ಮುಂದಿನ ತರಗತಿಯ ಪಠ್ಯ ಪುಸ್ತಕಗಳ ಬೇಟೆಯೂ ಶುರುವಾಗುತ್ತಿತ್ತು. ಏಪ್ರಿಲ್ ಹತ್ತನೇ ತಾರೀಖು ನಮ್ಮ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಿ ಅಧಿಕೃತವಾಗಿ ಪಾಸಾಗಿದ್ದೇವೆಂದು ಘೋಷಣೆಯಾಗುತ್ತಿದ್ದಂತೆ ನಮಗಿಂತ ಒಂದು ವರ್ಷ ಮುಂದಿನ ವಿದ್ಯಾರ್ಥಿಗಳೊಂದಿಗೆ ನಮ್ಮ ಮಾತುಕತೆ ಶಾಲಾ ಆವರಣದಲ್ಲೇ ಶುರುವಾಗುತ್ತಿತ್ತು. . ಮತ್ತಷ್ಟು ಓದು 







