ಮಾನಸಿಕ ದಾಳಿಗಳು ನಮ್ಮನ್ನು ಆಯಾಸಗೊಳಿಸುವುದಿಲ್ಲ : ಡಾ. ಮೋಹನ್ ಆಳ್ವ
2016 ರ ನುಡಿಸಿರಿ ಕಾರ್ಯಕ್ರಮ ನಡೆಯುತ್ತಿರುವ ಈ ಸಮಯದಲ್ಲಿ ಆಳ್ವಾಸ್ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರವರ ಬಳಿ ನುಡಿಸಿರಿಯ ಉದ್ದೇಶಗಳ ಕುರಿತು ಶ್ರೀಮತಿ ಮೌಲ್ಯ ಜೀವನ್ ರವರು ನಡೆಸಿದ ಒಂದು ಸಂದರ್ಶನ ನಿಲುಮೆಯ ಓದುಗರಿಗಾಗಿ ಇಲ್ಲಿದೆ.
ಮೌಲ್ಯ ಜೀವನ್: ಈ ಮೊದಲು ‘ಕನ್ನಡ ಮನಸ್ಸು’ ಎಂಬ ಪರಿಕಲ್ಪನೆಯಲ್ಲಿ ಆಳ್ವಾಸ್ ನುಡಿಸಿರಿ ನಡೆಯುತ್ತಿತ್ತು. ಆದರೆ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ನಂತರ ವಿಭಿನ್ನ ಪರಿಕಲ್ಪನೆಗಳಲ್ಲಿ ನುಡಿಸಿರಿ ನಡೆಯುತ್ತ ಬಂದಿದೆ. ಈ ಬಾರಿ `ಕರ್ನಾಟಕ-ನಾಳೆಗಳ ನಿರ್ಮಾಣ’ ಎಂಬ ಕೇಂದ್ರ ವಿಷಯದಡಿಯಲ್ಲಿ ನುಡಿಸಿರಿ ನಡೆಯುತ್ತಿದೆ. ಈ ಪರಿಕಲ್ಪನೆಗಳ ಬಗ್ಗೆ ನೀವು ಏನು ಹೇಳುತ್ತೀರಿ? ಮತ್ತಷ್ಟು ಓದು 
ಸ್ತ್ರೀ ಸ್ವಾತಂತ್ರ್ಯ ಮತ್ತು ವರ್ತಮಾನದ ತಲ್ಲಣಗಳು
– ಶ್ರೀಶೈಲ್ ಮಗದುಮ್ಮ
ಬಹುಷಃ ಹಲವಾರು ಶತಮಾನಗಳಿಂದ ಚರ್ಚಿವಾಗುತ್ತಿರುವ ವಿಷಯಗಳಲ್ಲಿ ಸ್ತ್ರೀ ಸ್ವಾತಂತ್ರ್ಯವೂ ಕೂಡ ಒಂದು. ಈಗ ಹಲವಾರೂ ವರ್ಷಗಳಿಂದ ಆಂತರಿಕ ಸ್ವಾತಂತ್ರ್ಯದಿಂದ ಬಾಹ್ಯ ಸ್ವಾತಂತ್ರ್ಯದ ಬಗ್ಗೆ ಹಲವಾರು ಚರ್ಚೆಗಳು ಶುರುವಾಗಿವೆ. ಅದರಲ್ಲಿ ನನ್ನ ಬಟ್ಟೆ ನನ್ನ ಆಯ್ಕೆ, ನಾವು ಯಾವಾಗ ಬೇಕಾದರೂ ಎಲ್ಲಿಗೆ ಬೇಕಾದರೂ ಹೋಗುತ್ತೇವೆ ಅದನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ ಅನ್ನುವ ಚರ್ಚೆಗಳು. ಇರಲಿ ಯಾರು ಯಾವ ಬಟ್ಟೆಯನ್ನಾದರೂ ಹಾಕಲಿ, ಯಾರು ಎಲ್ಲಿಗಾದರೂ ಹೋಗಲಿ ಅದು ಅವರ ಇಷ್ಟ, ಇದನ್ನು ಪ್ರಶ್ನಿಸುವುದು ಕೂಡ ಆಕ್ಷೇಪಾರ್ಹವಾದದ್ದು. ಆದರೆ ಈ ವಾದವನ್ನು ಇಟ್ಟುಕೊಂಡು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಮಾಜವನ್ನು ಯಾವ ಕಡೆಗೆ ತಗೆದುಕೊಂಡು ಹೋಗುತ್ತಿದ್ದಾರೆ ಎನ್ನುವ ಕಡೆ ಗಮನಹರಿಸಬೇಕಾಗಿದೆ. ಮತ್ತಷ್ಟು ಓದು 
ಉತ್ತರ ಕನ್ನಡ ಹವ್ಯಕರ ದೊಡ್ಡಬ್ಬ (ದೀಪಾವಳಿ) ದ ಆಚರಣೆ
– ಗೀತಾ ಹೆಗ್ಡೆ
ನಮ್ಮ ಹವ್ಯಕ ಜನಾಂಗದಲ್ಲಿ ದೀಪಾವಳಿ ಹಬ್ಬ ಎಂದು ಕರೆಯುವ ವಾಡಿಕೆ ಇಲ್ಲ. ಚೌತಿ ಹಬ್ಬ (ಗಣೇಶ ಚತುರ್ಥಿ) ಮಾರ್ನೋಮಿ ಹಬ್ಬ ಅಥವಾ ನವರಾತ್ರಿ ಹಬ್ಬ ( ದಸರಾ ಹಬ್ಬ) ದೊಡ್ಡಬ್ಬ (ದೀಪಾವಳಿ ಹಬ್ಬ) ಹೀಗೆ ತಮ್ಮದೆ ಶೈಲಿಯಲ್ಲಿ ಹಬ್ಬಗಳನ್ನು ಕರೆಯುವ ವಾಡಿಕೆ ಅನಾದಿ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೂ ಈ ಹಬ್ಬಗಳನ್ನು ಆಚರಿಸುವ ರೀತಿ ಕೂಡಾ ವಿಭಿನ್ನವಾಗಿದೆ. ಯಾವುದೇ ಹವ್ಯಕರ ಮನೆಗೆ ತೆರಳಿದರೂ ಹಬ್ಬ ಆಚರಿಸುವ ರೀತಿ, ಅಡುಗೆ ಮಾಡುವ ರೀತಿ, ಹವ್ಯಕ ಭಾಷೆ, ನಡೆ, ನುಡಿ, ಆದರಾಥಿತ್ಯ ಎಲ್ಲವೂ ಒಂದೇ ರೀತಿ ಇರುತ್ತದೆ. ಇದು ಉತ್ತರ ಕನ್ನಡದ ಹವ್ಯಕರ ನಡೆಯಾದರೆ ದಕ್ಷಿಣ ಕನ್ನಡದ ಕಡೆ ಹವ್ಯಕ ಭಾಷೆ, ಹಬ್ಬದ ಆಚರಣೆ ವಿಭಿನ್ನವಾಗಿ ಇರುತ್ತದೆ. ಅಡುಗೆ ಊಟ ಉಪಚಾರ ಪೂಜೆ, ಶಾಸ್ತ್ರ ಎಲ್ಲವೂ ವಿಭಿನ್ನವಾಗಿದೆ. ಎಲ್ಲರೂ ಹವ್ಯಕ ಬ್ರಾಹ್ಮಣರೇ ಆದರೂ ಸ್ವಲ್ಪ ವ್ಯತ್ಯಾಸ. ಮತ್ತಷ್ಟು ಓದು 
ಕಂಬಳ ಅಮಾನವೀಯ ಆಚರಣೆಯೇ?
ಕಂಬಳ ಒಂದು ಅಮಾನವೀಯ ಆಚರಣೆಯೇ?ಜಗಳಕ್ಕೆ ಬುಡ ಯಾವುದು?
– ರೋಹಿತ್ ಚಕ್ರತೀರ್ಥ
“ಜಗಳಕ್ಕೆ ಬುಡ ಯಾವುದೋ ಬೋಳೀಮಗನೆ” ಅಂತ ನಮ್ಮ ಕಡೆ ಒಂದು ಗಾದೆ. ಚಿಕ್ಕವನಿರುವಾಗ ಕೇಳಿದ್ದು (ಪಾವೆಂ ಆಚಾರ್ಯರು ಇದನ್ನು ಒಮ್ಮೆ ಬರೆದೂ ಇದ್ದರು ಎನ್ನುವುದನ್ನು ಕೇಳಿದ್ದೇನೆ). ಒಗೆದ ಕಲ್ಲನ್ನು ಕಚ್ಚಿ ಹಿಡಿವ ಹಸಿಮಣ್ಣಿನ ಹಾಗೆ ಮನಸ್ಸು ಇಂಥ ಮಾತುಗಳನ್ನು ಬೇಗನೆ ಗ್ರಹಿಸಿ ಹಿಡಿದಿಟ್ಟುಕೊಂಡು ಬಿಡುತ್ತದೆ! ಈಗ ಕೂತು ಯೋಚನೆ ಮಾಡಿದರೆ ಇದಕ್ಕೆ ಎರಡು ಅರ್ಥ ಪದರಗಳಿರುವುದು ಹೊಳೆಯುತ್ತಿದೆ. ಒಂದು, ಜಗಳಕ್ಕೆ ಕಾರಣವೇ ಬೇಕಾಗಿಲ್ಲ; ಯಾವ ಕ್ಷುಲ್ಲಕ ವಿಚಾರವನ್ನು ಹಿಡಿದುಕೊಂಡೂ ಜಗಳವಾಡಬಹುದು ಎನ್ನುವುದು. ಇನ್ನೊಂದು, ನಮ್ಮಲ್ಲಿ ‘ಬೋಳೀಮಗ’ ಎಂಬ ಶಬ್ದಪ್ರಯೋಗ ಆದೊಡನೆ ಅದುವರೆಗೆ ನಡೆಯುತ್ತಿದ್ದ ಮಾತಿನ ಚಕಮಕಿಗೆ ಹೊಸ ರೂಪ, ಬಣ್ಣ, ವೇಗ ಸಿಗುತ್ತದೆ. ಉರಿಯಲೋ ಆರಲೋ ಎನ್ನುತ್ತ ಓಲಾಡುವ ಬಡಕಲು ಬೆಂಕಿಗೆ ಸೀಮೆಎಣ್ಣೆ ಸುರಿವಂತಹ ಪರಿಣಾಮವನ್ನು ಈ ಶಬ್ದ ಮಾಡುತ್ತದೆ – ಎನ್ನುವುದು. ಮತ್ತಷ್ಟು ಓದು 
ಸಾಮಾಜಿಕ ಸಮಾನತೆಯ ಐಡಿಯಾಲಜಿ ಹಾಗೂ ಸಮವಸ್ತ್ರ ನಿಯಮದ ಸಮಸ್ಯೆ
– ವಿನಾಯಕ ಹಂಪಿಹೊಳಿ
ಪಶ್ಚಿಮದ ದೇಶಗಳು ಶಾಲಾ ಕಾಲೇಜುಗಳಲ್ಲಿರುವ ಸಮವಸ್ತ್ರದ ನಿಯಮವನ್ನು ಕೇವಲ ಒಂದು ಶಿಸ್ತಿನ ನಿಯಮವನ್ನಾಗಿ ನೋಡುವದಿಲ್ಲ. ಆ ದೇಶಗಳು ಪ್ರೊಟೆಸ್ಟಂಟ್ ಚಳುವಳಿಯ ಕಾಲದಿಂದ ರೂಪಿಸಿಕೊಂಡಿರುವ ಸಾಮಾಜಿಕ ಸಮಾನತೆಯ ಐಡಿಯಾಲಜಿಯನ್ನು ಶಾಲೆಗಳಲ್ಲಿ ಅನುಷ್ಠಾನಕ್ಕೆ ತರುವ ಮತ್ತು ಬೆಳೆಯುತ್ತಿರುವ ಮಕ್ಕಳಿಗೆ ಆ ಐಡಿಯಾಲಜಿಯನ್ನು ತಿಳಿಸುವ ಪ್ರಯತ್ನ ಎಂದು ಅರ್ಥೈಸಲಾಗುತ್ತದೆ. ಶಾಲೆ ಎಂಬ ಸಂಸ್ಥೆಯ ಮುಂದೆ ಎಲ್ಲ ಮಕ್ಕಳೂ ಸಮಾನರು ಹಾಗೂ ಅಲ್ಲಿ ಬಡವ ಮತ್ತು ಬಲ್ಲಿದ ಎಂಬ ಭೇದವಿಲ್ಲ ಎಂಬ ಉನ್ನತವಾದ ಆಶಯವನ್ನು ಈ ಸಮವಸ್ತ್ರದ ನಿಯಮವು ಹೊಂದಿದೆ. ಹೀಗಾಗಿ ಅಲ್ಲಿ ಸಮವಸ್ತ್ರವನ್ನು ಹಾಕಿಕೊಳ್ಳಲು ಒಪ್ಪದಿರುವವರನ್ನು ಸಾಮಾಜಿಕ ಸಮಾನತೆಯ ವಿರೋಧಿ ಎಂದೇ ಪರಿಗಣಿಸಲಾಗುತ್ತದೆ. ಮತ್ತಷ್ಟು ಓದು 
ದೇವಾಲಯಗಳ ಮೇಲೆ ಸರಕಾರದ ವಕ್ರದೃಷ್ಟಿ
ಡಾ. ಸಂತೋಷ್ ಕುಮಾರ್ ಪಿ.ಕೆ
ಶಿವಮೊಗ್ಗ
ಕಳೆದ ಹಲವಾರು ದಶಕಗಳಿಂದ ಭಾರತದಲ್ಲಿ ಒಂದು ವಿಚಾರ ಚಾಲ್ತಿಯಲ್ಲಿದೆ, ಅದೆಂದರೆ ಸರ್ಕಾರವು ದೇವಾಲಯಗಳನ್ನು ತನ್ನ ಅಧೀನಕ್ಕೆ ತೆಗೆದುಕೊಳ್ಳುವುದು. ಇದರ ಕುರಿತು ವ್ಯಾಪಕವಾದ ಚರ್ಚೆಯಾಗಲಿ ಅಥವಾ ವಿರೋಧವಾಗಲಿ ಆಗಿಲ್ಲವಾದ್ದರಿಂದ ಸರ್ಕಾರಗಳು ಕಾನೂನಿನ ಹೆಸರಲ್ಲಿ ಸ್ವೇಚ್ಚಾಚಾರವಾಗಿ ದೇವಾಲಯಗಳ ಮೇಲೆ ಆಕ್ರಮಣ ಮಾಡುತ್ತಾ ಬಂದಿವೆ. ಮಹಮದ್ ಘೋರಿ, ಘಜ್ನಿ ಇವರುಗಳ ದಾಳಿಯಲ್ಲಿ ಭಾರತದ ದೇವಾಲಯಗಳು ಭೌತಿಕವಾಗಿ ನಾಶವಾದರೆ, ಆಧುನಿಕ ಕಾಲಘಟ್ಟದಲ್ಲಿ ಬಂದ ಸರ್ಕಾರಗಳಿಂದ ಇಡೀ ದೇವಾಲಯದ ಪರಂಪರೆ ನಾಶ ಹೊಂದುತ್ತಿರುವುದು ಖಚಿತ. ಇತ್ತೀಚೆಗಷ್ಟೆ ಗೋಕರ್ಣ ದೇವಾಲಯವನ್ನು ಮಠದ ಸುಪರ್ದಿಯಿಂದ ಬಿಡುಗಡೆಗೊಳಿಸಿ ಸರ್ಕಾರ ತನ್ನ ವಶಕ್ಕೆ ತೆಗೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದರ ಕುರಿತು ಚರ್ಚಿಸಲು ಸಕಾಲ ಒದಗಿದೆ. ಮತ್ತಷ್ಟು ಓದು 
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೩ )
– ಡಾ. ಮಾಧವ ಪೆರಾಜೆ
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೧ )
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )
ಎರಡು ಭಿನ್ನ ಶಾಸನಗಳು:
ಆದರೆ ಈ ಮಾತಿಗೆ ಅಪವಾದಗಳಾಗಿ ಭಿನ್ನ ರಾಗವನ್ನು ಹಾಡುವ ಶಾಸಗಳೂ ಇಲ್ಲದಿಲ್ಲ. ಸದ್ಯಕ್ಕೆ ಅಂತಹ ಎರಡು ಶಾಸನಗಳು ನನ್ನ ಗಮನಕ್ಕೆ ಬಂದಿದೆ. ಮೊದಲನೆಯದು ಸಿರಗುಪ್ಪದ ಶಾಸನ, ಎರಡನೆಯದು ಹರಪನಹಳ್ಳಿಯ ಶಾಸನ. ಸಿರಗುಪ್ಪದ ಶಾಸನವು ಶಂಭುಲಿಂಗೇಶ್ವರ ದೇವಾಲಯದಲ್ಲಿರುವುದಾಗಿ ಅದರ ಕಾಲವು ಕ್ರಿ.ಶ. 1199 ಎಂದು ತಿಳಿದು ಬರುತ್ತದೆ. ಈ ಶಾಸನದ ಕೊನೆಯಲ್ಲಿ …… ಮತ್ತಷ್ಟು ಓದು 
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )
– ಡಾ. ಮಾಧವ ಪೆರಾಜೆ
ಮಧ್ಯಕಾಲದಲ್ಲಿ ಗುಡಿಗಳು:
ದೇವಾಲಯಗಳಿಗೆ ಇದ್ದಕ್ಕಿದ್ದಂತೆ ಪ್ರಸಿದ್ಧಿ ಬಂದಿರುವುದೇ ಮಧ್ಯಯುಗದಲ್ಲಿ ಎನ್ನುವುದು ಇನ್ನೊಂದು ಗಮನಾರ್ಹ ಅಂಶವಾಗಿದೆ. ಪುರಾಣಗಳು ಕಾವ್ಯಗಳು ದೇವಾಲಯಗಳ ಕುರಿತು ಹಾಡಿಹೊಗಳುವುದಕ್ಕೆ ಈ ಕಾಲದಲ್ಲಿ ಪ್ರಾರಂಭ ಮಾಡುತ್ತವೆ. ಅಗ್ನಿಪುರಾಣದ ಪ್ರಕಾರ ದೇವಾಲಯಗಳನ್ನು ಕಟ್ಟಿಸುವ ಬಯಕೆ ಬಂತೆಂದರೆ ಸಾಕು – ಅವರ ಪಾಪ ಪರಿಹಾರವಾಗುತ್ತದೆಯಂತೆ. ದೇವಾಲಯಕ್ಕೆ ಒಂದು ಇಟ್ಟಿಗೆಯನ್ನು ಇಟ್ಟರೆ ಅದು ಅವನಿಗೆ ಸಾಯುವಾಗ ಒಂದು ಯಜ್ಞವನ್ನು ಮಾಡಿದ ಪುಣ್ಯವನ್ನು ಕೊಡುತ್ತದೆಯಂತೆ – ಹಾಗೆಂದು ಹಯಶೀರ್ಷ ಸಂಹಿತೆ ಹೇಳುತ್ತದೆ. ಯಾವುದಾದರೊಂದು ಮಗು ಆಟದ ನೆಪದಲ್ಲಿ ಮರಳಿನಲ್ಲಿ ಗುಡಿ ಕಟ್ಟಿದರೂ ಆ ಮಗುವಿಗೆ ಸ್ವರ್ಗ ಲಭಿಸುತ್ತದೆ ಎಂದು ವಿಷ್ಣು ರಹಸ್ಯವು ತಿಳಿಸುತ್ತದೆ. ಹೀಗೆ ಇಲ್ಲಿಂದ ದೇವಾಲಯಗಳಿಗೆ ಮಹತ್ವವೂ ಪ್ರಸಿದ್ಧಿಯೂ ದೊರೆಯುತ್ತದೆ. ಶ್ರೀಮಂತರು,ಚಕ್ರವರ್ತಿಗಳು, ದಂಡನಾಯಕರು ದೇವಾಲಯಗಳನ್ನು ಕಟ್ಟಿಸುತ್ತಾರೆ. ದೇವಾಲಯಗಳನ್ನು ಕಟ್ಟಿಸುವುದು, ಅಂತಹ ದೇವಾಲಯಗಳಿಗೆ ಪೂಜಾರಿಗಳನ್ನು ನೇಮಕ ಮಾಡುವುದು, ದೇವಾಲಯಗಳ ಸಂದರ್ಶನಕ್ಕಾಗಿ ಹೋಗುವುದು, ಅಲ್ಲಿ ಪ್ರಾರ್ಥನೆ ಮಾಡುವುದು, ಯಾರು ಪೂಜೆ ಮಾಡಬಹುದು, ಮಾಡಬಾರದು ಎನ್ನುವುದು ಮೊದಲಾದವುಗಳೆಲ್ಲ ಈ ಕಾಲದಿಂದಲೇ ಆರಂಭವಾಗುತ್ತವೆ. ನಮ್ಮ ಕನಕದಾಸರು ಈ ಕಾಲದವರೆಂಬುದನ್ನು ಇಲ್ಲಿ ನೆನಪಿಸಿಕೊಳ್ಳೋಣ. ಹೀಗಾಗಿ ಮಧ್ಯಕಾಲೀನ ವಿಷಯಗಳಿಗೆ ಸಂಬಂಧಿಸಿದ ಈಗ ನಾವು ನಿರ್ದಿಷ್ಟವಾಗಿ ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿರುವುದರಿಂದ, ಈ ವಿವರಗಳು ಇನ್ನಷ್ಟು ಸ್ಪಷ್ಟವಾಗಬಲ್ಲವು. ಹಾಗಾದುದರಿಂದ ನಿರ್ದಿಷ್ಟವಾಗಿ ದೇವಾಲಯಕ್ಕೆ ಸಂಬಂಧಿಸಿದಂತೆ ಕರ್ನಾಟಕವನ್ನೇ ಲಕ್ಷಿಸಿ ಇನ್ನು ಮುಂದೆ ಈ ವಿಷಯವನ್ನು ಇನ್ನಷ್ಟು ವಿಸ್ತರಿಸೋಣ. ಮತ್ತಷ್ಟು ಓದು 
ಭಾಮಿನಿ ಷಟ್ಪದಿಯಲ್ಲಿ ಭಗವಾನ್ ಶ್ರೀಧರ ಸ್ವಾಮಿಗಳ ಚರಿತ್ರೆ
– ಗುರುಪ್ರಸಾದ್ ಕೆ ಕೆ.
ಶ್ರೀಧರಭಾಮಿನಿಧಾರೆ ೨೧-೨೫
21)
ಒಂದು ವರ್ಷದ ಮೇಲೆ ವರ್ಷವು
ಸಂಧಿತಾಗಲೆ ನೋಡುನೋಡುತ
ಬಂದೆ ಬಿಟ್ಟಿತು ತಾಯಿಯಗಲುವ ಕಾಲ ಸಿರಿಧರಗೇ||
ಬಂಧು ಇರುವುದು ತಾಯಿ ಮಾತ್ರವೆ
ಚೆಂದದಿಂ ಸೇವೆಯನು ಮಾಡುತ
ದುಂದುಭಿ ಎಂಬ ನಾಮದಲ್ಲಿಯ ವರುಷ ಬಂದಿಹುದೂ||
ತಾತ್ಪರ್ಯ : ವರುಷಗಳು ಉರುಳುತ್ತಿರಲು, ಅನಾರೋಗ್ಯದಿಂದ ತಾಯಿಯ ಅನಾಸಕ್ತಿಯೂ ಹೆಚ್ಚುತ್ತಲೇ ಹೋಯಿತು. ಜೀವನದಲ್ಲಿ ಯಾವ ಸ್ವಾರಸ್ಯವೂ ಇಲ್ಲದೇ ಅನಾಸಕ್ತರಾದ ತಾಯಿಯನ್ನು, ಶ್ರೀಧರರು ಅಪಾರ ಮಾತೃಭಕ್ತಿಯಿಂದ ಸೇವೆಗೈಯ ತೊಡಗಿದರು. ಹೀಗಿರುವಾಗ ಸನ್ 1921 ನೇ ವರ್ಷದಲ್ಲಿ ದುಂದುಭಿ ನಾಮ ಸಂವತ್ಸರವು ಬಂದಿತು. ದುಂದುಭಿ ಸಂವತ್ಸರದ ಮಾರ್ಗಶಿರ ಮಾಸದ ತಿಂಗಳಲ್ಲಿ ಮಂಗಳವಾರ ಬಂದಿತು. ಮತ್ತಷ್ಟು ಓದು 




