ವಿಷಯದ ವಿವರಗಳಿಗೆ ದಾಟಿರಿ

Recent Articles

12
ಏಪ್ರಿಲ್

ಮದ್ಯ, ಮಾಂಸ, ಮಾನಿನಿಯರ ಮಧ್ಯೆ ಮಿಲಿಯನೇರ್ ಮಲ್ಯ ಬರೆದ ಮತ್ತಿಳಿಸುವ ಕಥೆ !

ಮಾಡಿದ್ದುಣ್ಣೋ ಮಹರಾಯ ಎಂಬ ಗಾದೆಯನ್ನು ಯಾರು ಯಾವ ಕಾಲದಲ್ಲಿ ಮಾಡಿದರೋ ತಿಳಿಯದಲ್ಲ. ಭರತಭೂಮಿ ಎಂಬುದು ಆದರ್ಶ ಮಾನವ ಮೌಲ್ಯಗಳ ನೆಲೆವೀಡು. ಇಂಥಾ ನೆಲದಲ್ಲೇ ಯುಗದ/ಕಾಲದ ಪ್ರಭಾವದಿಂದ ಮಾನವೀಯ ಮೌಲ್ಯಗಳಿಗೇ ಮೌಲ್ಯವಿಲ್ಲದಂತಾಗಿದೆ. ಶ್ರೀರಾಮ ಜನಿಸಿ, ಆಳಿ, ಆದರ್ಶ ಯಾವುದೆಂದು ತೋರಿಸಿಕೊಟ್ಟ ಈ ದೇಶದಲ್ಲಿ, ಪ್ರಾಜ್ಞರು ಹೇಳುತ್ತಲೇ ಬಂದರು: “ಮದ್ಯ, ಮಾಂಸ ಮತ್ತು ಮಾನಿನಿ” ಈ ಮೂರನ್ನು ದೂರವಿಡಿ ಎಂಬುದಾಗಿ. ಇಲ್ಲಿ ಮಾನಿನಿ ಎಂದರೆ ಕೇವಲ ಬೆಲೆವೆಣ್ಣುಗಳು ಎಂದರ್ಥ. ಮದ್ಯಕುಡಿದ ಯಾವ ಪ್ರಾಣಿಯೂ ತನ್ನ ಇತಿಮಿತಿಯನ್ನು ಮೀರಿ ವಿಚಿತ್ರಗತಿಯಲ್ಲಿ ವರ್ತಿಸುತ್ತದೆ, ಯಾಕೆಂದರೆ ಮದ್ಯದ ಮತ್ತು ನೆತ್ತಿಗೇರಿದಾಗ ಎಲ್ಲಿ ಏನಾಗುತ್ತಿದೆ ಎಂದಾಗಲೀ, ತಾನು ಏನು ಮಾಡುತ್ತಿದ್ದೇನೆ ಎಂದಾಗಲೀ ಅರ್ಥವಾಗದಲ್ಲ. ಮದ್ಯ, ಮಾಂಸ ಮತ್ತು ಮಾನಿನಿ ಈ ಮೂರೂ ಒಮ್ಮೆ ನಮ್ಮನ್ನು ತಮ್ಮ ತೆಕ್ಕೆಗೆ ಸೆಳೆದುಕೊಂಡರೆ ಅವುಗಳಿಂದ ಬಿಡುಗಡೆ ಬಹುತೇಕ ಸಾಧ್ಯವಿಲ್ಲ. ಅಂಥದ್ದರಲ್ಲಿ ಕಾಲಗತಿಯಲ್ಲಿ ಮದ್ಯ ತಯಾರಿಕೆಯನ್ನೇ ಉದ್ದಿಮೆಯನ್ನಾಗಿ ಮಾಡಿಕೊಂಡು ಕೆಲವರು ಬೆಳೆದರು. ಅದೆಷ್ಟೋ ಕುಟುಂಬಗಳು ಅವರ ತಯಾರಿಕೆಯ ಮದ್ಯವನ್ನು ನಿತ್ಯವೂ ಕುಡಿಯುತ್ತಾ ಬೀದಿ ಪಾಲಾದವು!

ದುಶ್ಯಂತ-ಶಕುಂತಲೆಯರ ಪ್ರಿಯ ಪುತ್ರ-ಚಕ್ರವರ್ತಿ ಭರತನ ಹೆಸರಿನಿಂದ ಭಾರತವೆನಿಸಿದ ಈ ಪುಣ್ಯನೆಲದಲ್ಲಿ, ಸಗರಪುತ್ರ ಭಗೀರಥ ತನ್ನ ಅಖಂಡ ತಪಸ್ಸಿನಿಂದ ಗಂಗೆಯನ್ನು ಧರೆಗೆ ಕರೆತಂದ ಎಂಬುದು ನಮಗೆಲ್ಲಾ ತಿಳಿದಿರುವ ವಿಷಯ. ನಿಜ ಘಟನೆಗಳನ್ನೇ ಕಥೆಯನ್ನಾಗಿಸಿದ ಇತಿಹಾಸವನ್ನು, ವಿಜ್ಞಾನವೆಂಬ ಕನ್ನಡಕ ಹಾಕಿಕೊಂಡು ಹಳದಿ ಬಣ್ಣದಲ್ಲೇ ಎಲ್ಲವನ್ನೂ ನೋಡುತ್ತಾ ನಾವು ತೆರಳುವಾಗ, ಜೀವ ಇರುವ ಜೀವಿಯೂ ನಮಗೆ ಸತ್ತ ಪ್ರಾಣಿಯ ಹಾಗೇ ಕಾಣಿಸುವುದು ಸಹಜ; ಯಾಕೆಂದರೆ ಅದು ನಮ್ಮ ಅಧಿಕಪ್ರಸಂಗದ ಪರಾಕಾಷ್ಠೆ.

ಮತ್ತಷ್ಟು ಓದು »

12
ಏಪ್ರಿಲ್

ಕನ್ನಡದಲ್ಲೂ ಮಾಹಿತಿ ಮುದ್ರಿತವಾಗಲಿ

– ರವಿ ಸಾವ್ಕರ್

ಇತ್ತೀಚಿಗೆ ಪೆಪ್ಸಿಕೋ ರವರ ಲೇಸ್ , ಮ್ಯಾಕ್ ಡೋನಾಲ್ದ್ ರವರ ಬರ್ಗರ್ ಗಳಲ್ಲಿ ಆರೋಗ್ಯಕ್ಕೆ ಹಾನಿಕಾರವಾಗುವಂಥಹ ಕೊಬ್ಬಿನಂಶ ಹೆಚ್ಚಾಗಿ ಇದೆ ಅನ್ನೋದರ ಬಗ್ಗೆ ಸುದ್ದಿ ಪ್ರಚಾರದಲ್ಲಿದೆ. ತಯಾರಕರು ತಮ್ಮ ಉತ್ಪಾದನೆಗಳಲ್ಲಿ ಯಾವ ಸಾಮಗ್ರಿ ಎಷ್ಟು ಪ್ರಮಾಣದಲ್ಲಿದೆ ಎಂದು ಗ್ರಾಹಕನಿಗೆ ಸರಿಯಾಗಿ ತಿಳಿಸುವುದು ಅವರ ಕರ್ತವ್ಯ. ಹಾಗೆಯೇ ಅದನ್ನು ಕೇಳಿ ಪಡೆಯುವುದೂ ಸಹ ಒಬ್ಬ ಗ್ರಾಹಕನಹಕ್ಕು ಆಗಿದೆ. Centre for Science and Environment (CSE) ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ.

ಆದರೆ ಇಂಥಹ ಚರ್ಚೆಗಳಲ್ಲಿ ಈ ಮಾಹಿತಿಯನ್ನು ಜನರು ಅರಿಯಬೇಕಾದರೆ ಅದು ಜನರ ಭಾಷೆಯಲ್ಲಿ ಇರಬೇಕು ಅನ್ನೋ ಅತಿ ಮುಖ್ಯವಾದ ಅಂಶವನ್ನು ಮರೆತ ಹಾಗಿದೆ. ಒಂದು ವರದಿಯ ಪ್ರಕಾರ ನಮ್ಮ ದೇಶದಲ್ಲಿ ೭% ಜನರಿಗೆ ಮಾತ್ರ ಇಂಗ್ಲಿಷ್ ನಲ್ಲಿ ಇರುವುದನ್ನು ಅರ್ಥಮಾಡಿಕೊಳ್ಳಬಲ್ಲರು. ಮಿಕ್ಕ ೯೩% ಜನರಿಗೆ ಇಂಗ್ಲಿಷ್ ನಲ್ಲಿ ಮಾಹಿತಿ ತಲುಪಿಸಲಾಗದ ಪರಿಸ್ಥಿತಿ ಇರುವಾಗ , ಕೇವಲ ಇಂಗ್ಲಿಷ್ನಲ್ಲಿ ಮಾಹಿತಿಯನ್ನು ನಮೂದಿಸಿದರೆ ನಮ್ಮ ಜನರಿಗೆ ಹೇಗೆ ಅರ್ಥವಾದೀತು? ಒಬ್ಬ ಕನ್ನಡ ಮಾತ್ರ ಬರುವ ಗ್ರಾಹಕನೂ ಸಹ ಅಷ್ಟೇ ದುಡ್ಡು ಕೊಟ್ಟು ಖರೀದಿ ಮಾಡಿರುತ್ತಾನೆ. ಅವನಿಗೆ ಆ ಸಾಮಗ್ರಿಯ ಬಗೆಗೆ ಮಾಹಿತಿಯನ್ನು ತಿಳಿಸದಿರುವುದು ಯಾವ ನ್ಯಾಯ ?

ಮತ್ತಷ್ಟು ಓದು »

11
ಏಪ್ರಿಲ್

ಬರದ ಸೀಮೆಯಿಂದ ಹೊರಟ ನೆನಪಿನ ಬಂಡಿ

-ಕಾಲಂ ೯

ಇದೆಲ್ಲವೂ ೧೯೮೦ರ ದಶಕದ ಮಾತು. ಹೈದ್ರಾಬಾದ್ ಕರ್ನಾಟಕ ಸೀಮೆಯಲ್ಲಿ ಆಗಷ್ಟೇ ಎಂಎಸ್ಸಿ ಪೂರ್ಣಗೊಳಿಸಿದ ತರುಣನೊಬ್ಬ ಕೆಲಸ ಅರಸಿಕೊಂಡು ಬೆಂಗಳೂರಿನ ಶಾಸಕರ ಭವನಕ್ಕೆ ಬಂದಿಳಿಯುತ್ತಾನೆ. ತನ್ನೂರಿನ ಶಾಸಕನನ್ನು ಹಿಡಿದುಕೊಂಡು ನೌಕರಿ ಗಿಟ್ಟಿಸಿಕೊಳ್ಳುವ ಇರಾದೆ ಹೊಂದಿದ್ದ ಆ ಯುವಕ, ರಾಜ್ಯದ ಯಾವುದಾದರೊಂದು ಕಾಲೇಜಿನಲ್ಲಿ ಉಪನ್ಯಾಸಕನಾಗಬೇಕೆಂಬ ಮಹಾ ಗುರಿಯನ್ನೂ ಮನಸ್ಸಿನಲ್ಲಿ ಹಾಕಿಕೊಂಡಿದ್ದ !

ಆದರೆ, ಯುವಕ ಹುಡುಕಿಕೊಂಡು ಬಂದಿದ್ದ ಆ ದಲಿತ ಶಾಸಕನ ಯೋಜನೆಯೇ ಬೇರೆ ಆಗಿತ್ತು. ಏನಾದರೂ ಮಾಡಿ ಯುವಕನನ್ನು ಪತ್ರಕರ್ತನನ್ನಾಗಿಸಬೇಕು ಎಂಬುದು ಆತನ ಗುರಿ. ಹೈದ್ರಾಬಾದ್ ಕರ್ನಾಟಕ ಪ್ರಾಂತ್ಯದಲ್ಲಿ ಓದುವ ಹುಡುಗರೇ ಕಡಿಮೆ. ಅದರಲ್ಲಿಯೂ ಓದಿದವರೆಲ್ಲರೂ ಮೇಷ್ಟ್ರು-ಕ್ಲರ್ಕ್ ಎಂದು ಕೆಲಸ ಹುಡುಕಿಕೊಂಡು ಹೋದರೆ, ಆ ಭಾಗದ ಸಂಕಟಗಳನ್ನು , ನೋವುಗಳನ್ನು ರಾಜ್ಯದ ಜನರಿಗೆ ಅರ್ಥೈಸುವವರು ಯಾರು ಎಂಬುದು ಶಾಸಕನ ಕಳಕಳಿ. ಹಾಗಾಗಿಯೇ ಏನೋ, ಕೆಲಸ ಹುಡುಕಿಕೊಂಡು ಬಂದಿದ್ದ ಯುವಕನಿಗೆ ತನ್ನ ಶಾಸಕರ ಕಚೇರಿಯಲ್ಲಿಯೇ ಅಶನ-ವಶನ ನೀಡಿದ್ದಲ್ಲದೇ, ತಲೆಯಲ್ಲಿ ಪತ್ರಕರ್ತನ ಕನಸನ್ನೂ ಬಿತ್ತಿದ. ಇದೊಂದು ನನಸಾಗದ ಕನಸು ಎಂದು ಕಲ್ಯಾಣ ಕರ್ನಾಟಕದ ಯುವಕ ಅಂದುಕೊಳ್ಳುತ್ತಿರುವಾಗಲೇ, ರಾಜಕಾರಣಿಯೊಬ್ಬರು ಇಂಗ್ಲಿಷ್ ಪತ್ರಿಕೆಯೊಂದನ್ನು ಆರಂಭಿಸಿದರು. ಕನಸು ಸಾಕಾರಗೊಂಡಿತು ಎನ್ನುವಷ್ಟರಲ್ಲಿ, ಪತ್ರಿಕೆಯೇ ಕಣ್ಮುಚ್ಚಿತು ! ಯುವಕನ ನಿರುದ್ಯೋಗ ಮುಂದುವರಿಯಿತು.

ಆ ದಿನಗಳಲ್ಲಿಯೇ ಟೈಂಸ್ ಆಫ್ ಇಂಡಿಯಾ ಪತ್ರಿಕೆ ವರದಿಗಾರರು ಬೇಕಿದ್ದಾರೆ ಎಂದು ತನ್ನ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸಿತು. ಪತ್ರಿಕೆ ಆಹ್ವಾನಿಸಿದ್ದ ಬಿಡಿ ವರದಿಗಾರ, ಹಿರಿಯ ವರದಿಗಾರ, ಉಪ ಸಂಪಾದಕ ಎಂಬ ಮೂರು ಹುದ್ದೆಗಳಿಗೂ ಕಲ್ಯಾಣ ಕರ್ನಾಟಕದ ಕಲಿ ಅರ್ಜಿ ಗುಜರಾಯಿಸಿದ. ಎಲ್ಲವಕ್ಕೂ ಅರ್ಜಿ ಹಾಕಲೇಬೇಕು ಎಂಬುದು ಶಾಸಕನ ಒತ್ತಾಯವಾಗಿತ್ತು. ಯಾವುದಾದರು ಒಂದು ಹುದ್ದೆಗಾದರೂ ಸಂದರ್ಶನ ಬರಲಿ ಎಂಬುದು ಒತ್ತಾಯದ ಹಿಂದಿನ ತಂತ್ರ. ಮತ್ತಷ್ಟು ಓದು »

10
ಏಪ್ರಿಲ್

ಕೈದಿಯೊಬ್ಬ ಜೈಲು ಸೂಪರಿಂಟೆಂಡೆಂಟ್ ಆಗಿದ್ದು!… ಮ್ಯಾಜಿಸ್ಟ್ರೇಟರೂ ಆಗಿದ್ದು!!

– ಕವಿ ನಾಗರಾಜ್

ಸುಮಾರು ೩೭ ವರ್ಷಗಳ ಹಿಂದೆ ಅವನೊಬ್ಬ ಜೈಲಿನ ಕೈದಿಯಾಗಿದ್ದ. ಆರು ತಿಂಗಳು ಹಾಸನದ ಜೈಲಿನಲ್ಲಿದ್ದ. ಅವನ ಮೇಲೆ ಭಾರತ ರಕ್ಷಣಾ ಕಾಯದೆಯನ್ವಯ ಹಲವಾರು ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿದ್ದವು. ಅದೇ ವ್ಯಕ್ತಿ  ಜೈಲಿನಿಂದ ಹೊರಬಂದ  ಸುಮಾರು ನಾಲ್ಕು ವರ್ಷಗಳ ನಂತರ  ಒಂದು ಉಪಕಾರಾಗೃಹದ ಜೈಲು ಸೂಪರಿಂಟೆಂಡೆಂಟ್ ಆಗಿ ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದ. ಇದಾಗಿ ೧೦ ವರ್ಷಗಳ ನಂತರದಲ್ಲಿ ಅವನು ತಹಸೀಲ್ದಾರ್ ಮತ್ತು ತಾಲ್ಲೂಕು ದಂಡಾಧಿಕಾರಿಯಾದ. ಆ ಹುದ್ದೆಯಲ್ಲಿ ಸುಮಾರು ೧೨ ವರ್ಷಗಳ ಕಾಲ ಕೆಲಸ ಮಾಡಿದ. ಹೀಗೇ ಆಗಲು ಸಾಧ್ಯವೇ? ಒಬ್ಬ ಕೈದಿ ಜೈಲು ಸೂಪರಿಂಟೆಂಡೆಂಟ್ ಆಗುವುದು ಮತ್ತು ನಂತರ ತಾಲ್ಲೂಕು ಮ್ಯಾಜಿಸ್ಟ್ರೇಟರೂ ಆದನೆಂದರೆ ಯಾರೂ ನಂಬಲಾರರು. ಆದರೆ ಇದು ನಡೆದ ಸಂಗತಿ.

      ಅವನು ಕೆ.ಪಿ.ಎಸ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಕಂದಾಯ ಇಲಾಖೆಯ ಸೇವೆಗೆ ಪ್ರಥಮ ದರ್ಜೆ ರೆವಿನ್ಯೂ ಇನ್ಸ್ ಪೆಕ್ಟರ್ ಆಗಿ ೧೯೭೩ರಲ್ಲಿ ಕೆಲಸಕ್ಕೆ ಸೇರಿದ್ದ. ಅವನು ಎರಡು ವರ್ಷ ಸೇವೆ ಸಲ್ಲಿಸಿಬಹುದು. ೧೯೭೫ರಲ್ಲಿ ಕರಾಳ ತುರ್ತು ಪರಿಸ್ಥಿತಿ ಜಾರಿಗೆ ಬಂದು ಆಗ ಆರೆಸ್ಸೆಸ್ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳನ್ನು ನಿಷೇಧಿಸಲಾಗಿತ್ತು. ಅವನನ್ನೂ ಆರೆಸ್ಸೆಸ್ ಕಾರ್ಯಕರ್ತನೆಂಬ ಕಾರಣದ ಮೇಲೆ ಬಂಧಿಸಿ ಭಾರತ ರಕ್ಷಣಾ ಕಾಯದೆಯಡಿಯಲ್ಲಿ ಮೊಕದ್ದಮೆ ದಾಖಲಿಸಿದಾಗ ಅವನನ್ನು ಸೇವೆಯಿಂದ ಅಮಾನತ್ತಿನಲ್ಲಿ ಇರಿಸಲಾಯಿತು.
9
ಏಪ್ರಿಲ್

ಏಕಪಾತ್ರಾಭಿನಯಕ್ಕೆ ಪಾತ್ರ ಹುಡುಕುತ್ತಿದ್ದಾಗ ಸಿಕ್ಕ ಸೇನಾನಿ..!!!!!

– ಭೀಮಸೇನ್ ಪುರೋಹಿತ್

ಪ್ರತಿವರ್ಷ ನಮ್ಮ ಕಾಲೇಜಿನಲ್ಲಿ ನಡೆಯುವ ಅಂತರ್ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧಾಹಬ್ಬ “ದವನ”ದಲ್ಲಿ “ಏಕಪಾತ್ರಾಭಿನಯ”ವೂ ಒಂದು ಸ್ಪರ್ಧೆ.. ಈ ವರ್ಷ ಯಾರ ಅಭಿನಯ ಮಾಡಲಿ ಎಂದು ಯೋಚಿಸುತ್ತಿದ್ದೆ.. ಅಭಿನಯವಂತೂ ಇದ್ದಿದ್ದೇ. ಆದಷ್ಟು ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರನೊಬ್ಬನ ಪಾತ್ರ ಆಯ್ದುಕೊಂಡರೆ, ಬಹಳಷ್ಟು ಜನಕ್ಕೆ ಆ ಚರಿತ್ರೆಯನ್ನು ತಲುಪಿಸಿದಂತಾಗುತ್ತದೆ, ಅದರಲ್ಲೂ ಕರ್ನಾಟಕದವನೇ ಆದರೆ, ಪಾತ್ರದ ಸಂಭಾಷಣೆ ಬರೆಯುವುದೂ ನನಗೆ ಸುಲಭವಾಗುತ್ತದೆ ಎಂದು ಭಾವಿಸಿ, ಅಂಥಾ ಚಾರಿತ್ರಿಕವ್ಯಕ್ತಿಯ ಹುಡುಕಾಟದಲ್ಲಿ ಇದ್ದಾಗ, ಥಟ್ಟನೆ ಒಬ್ಬನ ನೆನಪಾಯಿತು..
ಎಂಟನೆ ತರಗತಿಯಲ್ಲಿದ್ದಾಗ ಅವನ ಬಗೆಗಿನ ಪುಸ್ತಕ ಓದಿದ್ದಷ್ಟೇ ನೆನಪು.. ಆದರೆ, ಅವನ ಉಜ್ವಲ ದೇಶಭಕ್ತಿ ಇವತ್ತಿಗೂ ಅವನ ಚಿತ್ರಣವನ್ನು ನನ್ನ ಮನಸ್ಸಿನಲ್ಲಿ ಹಸಿರಾಗಿಸಿದೆ..

“ಸುರಪುರ”-ಗದಗ ಜಿಲ್ಲೆಯ ಊರು. “ಬೇಡ”ನಾಯಕರು ಅದನ್ನು ಆಳುತ್ತಿದ್ದರು. ವಿಜಯನಗರದ ರಾಜರುಗಳಿಂದ ಪ್ರಭಾವಿತರಾಗಿದ್ದ ನಾಯಕರು, ಸಹಜವಾಗಿಯೇ ನಾಡು-ನುಡಿಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಧೈರ್ಯ-ಸಾಹಸಗಳಿಗೆ ಹೆಸರಾದ ವಂಶ ಅದು.. ಇಂಥ ಪರಂಪರೆಯಲ್ಲಿ ಬಂದವನೇ ಈ ಲೇಖನದ ಮೂಲಸ್ರೋತ “ವೆಂಕಟಪ್ಪ ನಾಯಕ”…!!

ಮತ್ತಷ್ಟು ಓದು »

8
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೩)

ರವಿ ತಿರುಮಲೈ 

ಲೋಕಜೀವನ ಮಂಥನ

ತಿರು ತಿರುಗಿ ತೊಳಲುವುದು ತಿರಿದನ್ನವುಣ್ಣುವುದು 
ಮೆರೆದು ಮೈಮರೆಯುವುದು ಹಲ್ಲ ಕಿರಿಯುವುದು 
ಮರಳಿ ಕೊರಗಾಡುವುದು, ಕೆರಳುವುದು ನರಳುವುದು 
ಇರವಿದೇನೊಣರಗಳೇ? – ಮಂಕುತಿಮ್ಮ 
 
ತಿರು ತಿರುಗಿ ತೊಳಲುವುದು ತಿರಿದು ಅನ್ನವನ್ನು ಉಣ್ಣುವುದು ಮೆರೆದು ಮೈ ಮರೆಯುವುದು ಹಲ್ಲ ಕಿರಿಯುವುದು. 
ಮರಳಿ ಕೊರಗಾಡುವುದು ಕೆರಳುವುದು ನರಳುವುದು ಇರವು ಇದೇನು ಒಣ ರಗಳೇ? ಮಂಕು ತಿಮ್ಮ 
 
ತಿರುದು= ಬಿಕ್ಷೆಯತ್ತಿ , ಉಣ್ಣುವುದು= ತಿನ್ನುವುದು, ಕೆರಳುವುದು= ಕೋಪಗೊಳ್ಳುವುದು, ರಗಳೆ= ಪರದಾಟ.   
 
ಮತ್ತೆ ಮತ್ತೆ ಮನುಷ್ಯ ಪರದಾಡುವುದು, ನಾವು ಎಲ್ಲ ಕಡೆಯೂ ಕಾಣಬಹುದು. ಪರದಾಡಿ ಅವರಿವರನ್ನು ಕಾಡಿ ಬೇಡಿ ಹೊಟ್ಟೆ ತುಂಬಿಸಿಕೊಳ್ಳುವುದು. ಪಡೆದದ್ದು ಹೆಚ್ಚಾದರೆ ಮೆರೆದು ಅಹಂಕಾರ ತೋರಿಸುವುದು. ತಮ್ಮನ್ನು ತಾವು, ಬಹಳ ಸಾಧಿಸಿದೆವೆಂದು ಅಹಂಕಾರದಿಂದ ಮೆರೆಯುವುದು., ಪಡೆದದ್ದನ್ನು ಉಳಿಸಿಕೊಳ್ಳಲು ಅವರಿವರ ಮುಂದೆ ಹಲ್ಲು  ಕಿರಿಯುವುದು, ಗಿಂಜುವುದು, ಬೇಡುವುದು ನಾವು ಸರ್ವೇ ಸಾಮಾನ್ಯವಾಗಿ ಎಲ್ಲರಲ್ಲೂ ಕಾಣುತ್ತೇವೆ. ತಾವು ಅಂದುಕೊಂಡದ್ದು ಸಿಗದಿದ್ದ್ದರೆ ಕೋಪಗೊಳ್ಳುವುದು,ಹಾಗೂ ಸಿಗದಿದ್ದರೆ, ಕೈಲಾಗತನದಿಂದ ಸಂಕಟಪಡುವುದು ಅಥವಾ ನರಳುವುದು, ಇದನೆಲ್ಲಾ ಮಾನ್ಯ ಡಿ.ವಿ.ಜಿ.ಯವರು ಸತ್ವವಿಲ್ಲದ ಒಣ ರಗಳೆ ಅಥವಾ ಸತ್ವವಿಲ್ಲದ ಜೀವನದ ಪರಿ ಎಂದು ಈ ಕಗ್ಗದಲ್ಲಿ ಸೂಚ್ಯವಾಗಿ ಹೇಳುತ್ತಾರೆ. 
 
ಹೊಟ್ಟೆಪಾಡಿಗಾಗಿಯೇ ಮತ್ತೆ ಮತ್ತೆ ಪರದಾಡುವುದು, ನಮಗೆ ಸೂಕ್ತವೋ ಅಲ್ಲವೋ , ನಾವು ಇಷ್ಟಪಟ್ಟು ಮಾಡುವ ಕೆಲಸವೋ ಅಲ್ಲವೋ, ಆ ಕೆಲಸದಲ್ಲಿ ನಮಗೆ ತೃಪ್ತಿ ಸಿಗುತ್ತದೆಯೋ ಇಲ್ಲವೋ, ಇವೆಲ್ಲವನ್ನೂ ಪರಿಗಣಿಸದೆ ಮಾತ್ರ ಉದರ ಫೋಷಣೆಗಾಗಿಯೇ ಕೆಲಸ ಮಾಡುವುದು. ಇದು ಅವಶ್ಯಕವೇ ಹೌದು. ಆದರೆ ಹೀಗೆ ಮಾಡುವ ಕೆಲಸದಲ್ಲಿ ಒಂದು ಉತ್ಸಾಹವಿಲ್ಲದೆ, ತೃಪ್ತಿಯಿಲ್ಲದೆ, ಕೇವಲ  ಯಾಂತ್ರಿಕವಾಗಿ ನಾವು ನಮ್ಮ ಕೆಲಸಕಾರ್ಯಗಳನ್ನು ಮಾಡುತ್ತಿದ್ದೇವೆ. ನಮ್ಮ ಗುಣಕ್ಕೆ,  ನಮ್ಮ ಸ್ವಭಾವಕ್ಕೆ ಹೊಂದುವ ಕೆಲಸ ನಾವು ಮಾಡಬೇಕೆಂದರೂ, ಆಗದೆ ಕೇವಲ  ಹೊಟ್ಟೆಪಾಡಿಗಾಗಿ ಕೆಲಸಮಾಡುತ್ತ ರಸಾನುಭವವಿಲ್ಲದೆ, ನೀರಸವಾದ ಜೀವನಮಾದುತ್ತೇವೆ. ಅದನ್ನೇ ಒಣ ರಗಳೆ ಎಂದು ಗುಂಡಪ್ಪನವರು ಹೇಳುತ್ತಾರೆ. 

” ಉದರ ವೈರಾಗ್ಯವಿದು  ” ಎಂದು ಹೇಳುವ ಪುರಂಧರ ದಾಸರ ಪದದಲ್ಲಿನ ಅಂತರ್ಯವೂ ಇದೆ ಆಗಿರುತ್ತೆ. ಹೀಗೆ ಹೊಟ್ಟೆಪಾಡಿಗಾಗಿ ಕೆಲಸಮಾಡುವಾಗ , ನಮಗೆ ಬೇಸರ, ಕೋಪ, ದ್ವೇಷ ಅಸೂಯೆ ಮುಂತಾದವುಗಳೆಲ್ಲ ಮನಸ್ಸಿಗೆ ಬಂದು ಒಂದು ರಸಾನುಭಾವವಿಲ್ಲದೆ ಅತೃಪ್ತಿಯ ಭಾವನೆಯೇ ಇರುವುದು ಹಾಗಾಗಿ ಈ ಜೀವನವೆಲ್ಲ ಒಂದು  ಒಣ ರಗಳೆ ಎಂದು ಹೇಳುತ್ತಾರೆ. 

ಇದು ಹೀಗೆ ಎಲ್ಲರಿಗೂ ಇರುವುದಿಲ್ಲ. ತಮ್ಮ ಕೆಲಸವನ್ನು ಬಹಳ ಇಷ್ಟಪಟ್ಟು ಮಾಡುವವರೂ ತಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಆಸಕ್ತಿ ತನ್ಮಯತೆ ಮತ್ತು ತೃಪ್ತಿಯನ್ನು ಕಂಡುಕೊಳ್ಳುವವರೂ ಇದ್ದಾರೆ. ಆದರೆ ಅವರ ಸಂಖ್ಯೆ ಬಹಳ ಕಡಿಮೆ. ಬಹಳ ಸಂಖ್ಯೆಯ  ಜನ, ಶ್ರೀ ಗುಂಡಪ್ಪನವರು ಹೇಳುವ ಹಾಗೆ  ನೀರಸವಾದ ಜೀವನವನ್ನೇ ನಡೆಸುತ್ತಾರೆ. ನಾವೂ ಸಹ ನಮ್ಮ ನಮ್ಮ ಕಾರ್ಯಕ್ಷೇತ್ರಗಳಲ್ಲಿ ತೃಪ್ತಿಯನ್ನು ಕಂಡುಕೊಳ್ಳಬಹುದೇನೋ ಎಂದು ಆಲೋಚಿಸುತ್ತಾ…………….

ಮುಂದಿನ ಕಗ್ಗಕ್ಕೆ ಹೋಗೋಣ,

 
ಇಂದಿನ ದಿನ ಎಲ್ಲರಿಗೂ ಶುಭವಾಗಲಿ
 
***************************************************
7
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೨)

– ರವಿ ತಿರುಮಲೈ

ಲೋಕಜೀವನ ಮಂಥನ

ಕೃತ್ರಿಮವೋ ಜಗವೆಲ್ಲ I  ಸತ್ಯತೆಯದೆಲ್ಲಿಹುದೋ?
ಕರ್ತೃವೆನಿಸಿದನೆ ತಾಂ ಗುಪ್ತನಾಗಿಹನು
ಚತ್ರವೀ ಜಗವಿದರೋಳಾರ ಗುಣವೆಂತಹುದೋ
ಯಾತ್ರಿಕನೆ, ಜಾಗರಿರೋ – ಮಂಕುತಿಮ್ಮ

ಕೃತ್ರಿಮ  =ಡಾ೦ಬಿಕತೆ, ನಾಟಕ, ಬೂಟಾಟಿಕೆ. ಕರ್ತೃವು = ಜಗತ್ತನ್ನು ಸೃಷ್ಟಿಮಾಡಿದ ಶಕ್ತಿ. ಗುಪ್ತ= ಅವ್ಯಕ್ತನಾಗಿ, ಅಮೂರ್ತನಾಗಿ, ಕಣ್ಣಿಗೆ ಕಾಣದೆ. ಯಾತ್ರಿಕ  = ಪಯಣಿಗ. ಜಾಗರಿರು- ಜಾಗ್ರತೆಯಾಗಿರು.

ಕ್ರುತ್ರಿಮವು  ಜಗವೆಲ್ಲ ಸತ್ಯತೆಯು ಎಲ್ಲಿಹುದೋ ? ಕರ್ತೃವೆನಿಸಿದವನು ತಾಂ ಗುಪ್ತನಾಗಿಹನು
ಚತ್ರವೀ ಜಗವಿದು ಇದರೊಳು ಯಾರ ಗುಣವೆಂತಹುದೋ ಯಾತ್ರಿಕನೆ ಜಾಗರಿರೊ ಮಂಕುತಿಮ್ಮ

ಹಿಂದಿನ ಐದು ಕಗ್ಗಗಳಲ್ಲಿ ವೇದಾಂತದ ಹಲವು ವಿಚಾರಗಳನ್ನು ನಮಗೆ ಅರುಹುತ್ತಾ, ಈ ಕಗ್ಗದಲ್ಲಿ ಮಾನ್ಯ ಗುಂಡಪ್ಪನವರು, ಈ ಜಗತ್ತಿನ ಪ್ರಸ್ತಾಪ ಮಾಡುತ್ತಾರೆ. ಈ ಜಗತ್ತು ಕೃತ್ರಿಮವೆನ್ನುತ್ತಾರೆ. ಇದನ್ನು ಕೇವಲ ಮಾನವರಜಗತ್ತಿಗೆ ಅನ್ವಯಿಸಿಕೊಳ್ಳಬೇಕು. ಏಕೆಂದರೆ, ಗಿಡ, ಮರ, ಪಶು ಪಕ್ಷಿ ಮತ್ತು ಅನ್ಯ ಜೀವಿಗಳಲ್ಲಿ ಇಂದಿಗೂ ಕೃತ್ರಿಮತೆ ನಾವು ಕಾಣುವುದಿಲ್ಲ. ಈ ಕೃತ್ರಿಮತೆ ಏನಿದ್ದರೂ ಕೇವಲ ಮಾನವರಿಗೆ ಅನ್ವಯಿಸುತ್ತದೆ. “ಏಕೆ ಹೀಗೆ? ಮಾನವರಲ್ಲಿ ಮಾತ್ರ ಏಕೆ? ಮಾನವರು ಮೊದಲಿನಿಂದಲೂ ಹೀಗೇ ಇದ್ದಾರೆಯೇ ಅಥವಾ ಈ ಕೃತ್ರಿಮತೆ ಕಾಲಕ್ರಮೇಣ ಜನಮಾನಸದಲ್ಲಿ ಹೊಕ್ಕಿದೆಯೇ?” ಎಂಬುದನ್ನು ಯೋಚಿಸಿದಾಗ ನಮಗೆ ಕಾಣುವುದು ಹೀಗೆ . ಮಾನವಮೊದಲಿನಿಂದಲೂ ಕೃತ್ರಿಮನಲ್ಲ. ಪ್ರಕೃತಿಯ ಮಗುವಾಗಿ ಪ್ರಕೃತಿಯಲ್ಲಿ ಒಂದಾಗಿ ಅಲ್ಲೇ ಜೀವಿಸುತ್ತಿದ್ದ. ಅವನೂ ಸಹ ಮಿಕ್ಕೆಲ್ಲ ಪ್ರಾಣಿಗಳಂತೆ, ತನ್ನ ಆಹಾರ ಹುಡುಕುವುದು, ತನ್ನನ್ನು ತಾನು ರಕ್ಷಿಸಿಕೊಳ್ಳುವುದು ಮತ್ತು ತನ್ನ ಸಂತತಿಯನ್ನು ಬೆಳೆಸುವುದು, ಇಷ್ಟಕ್ಕೆ  ತನ್ನ ಚಟುವಟಿಕೆಗಳನ್ನು ಮಿತಗೊಳಿಸಿಕೊಂಡಿದ್ದ. ಮಾನವ ಕಾಲಕ್ರಮೇಣ ಸಂಗ ಜೀವಿಯಾದ. ಅಲೆಮಾರಿಯಾಗಿದ್ದ ಅವನು ಒಂದು ಕಡೆ ನೆಲೆನಿಲ್ಲಲು ಆರಂಭಿಸಿದ ದಿನದಿಂದ ಅಲ್ಪ ಅಲ್ಪವಾಗಿ ಇವನಲ್ಲಿ ಇದು ತನ್ನದು, ಇದು ತನಗೆ, ಇವರು ತನ್ನವರು ಎಂಬ ಮಮಕಾರದ ಭಾವಗಳು ಬಂದವು.  ಮುಕ್ತನಾಗಿದ್ದ ಮನುಷ್ಯ ತನ್ನ ಸುತ್ತ ಒಂದು ವೃತ್ತವನ್ನು ಎಳೆದುಕೊಂಡ. ಆ ವೃತ್ತದಲ್ಲಿ ಇರುವುದೆಲ್ಲ ತನ್ನದು ಎನ್ನುವ ಮಮಕಾರವನ್ನು ಬೆಳೆಸಿಕೊಂಡ. ಕ್ರಮೇಣ ಅವನ ಪರಿವಾರ ಬೆಳೆದಂತೆ, ಆ ವೃತ್ತವನ್ನೂ ದೊಡ್ದದಾಗಿಸುವ ಪ್ರಯತ್ನ. ಹೀಗೇ ಅವನಿಗೆ ವಸ್ತು ಸಂಚಯನ ಅಭ್ಯಾಸವಾಗಿಹೋಯಿತು. ಇಷ್ಟಿದ್ದರೆ ಇನ್ನಷ್ಟರಾಸೆ. . ” ಕಡಿಮೆ ಸಂಪನ್ಮೂಲಗಳಿಗೆ ಅಧಿಕ ಬೇಡಿಕೆಯಾದರೆ, ಪೈಪೋಟಿ ಬೆಳೆಯುತ್ತದೆ” ಎನ್ನುವುದು ಅರ್ಥಶಾಸ್ತ್ರದ ಸಿದ್ಧಾಂತ. ಆ ಸಿದ್ಧಾಂತದ ಪ್ರಕಾರ, ಮನುಷ್ಯ ಮನುಷ್ಯನ ಮಧ್ಯೆ ತೀವ್ರ ಪೈಪೋಟಿ. ಎಲ್ಲ ವಿಷಯದಲ್ಲೂ. ಅಲ್ಲಿ ಎಲ್ಲರೂ,  ಎಂದಿಗೂ ಮುಂಚೂಣಿಯಲ್ಲಿ ನಿಲ್ಲಲು ಸುಳ್ಳು, ಮೋಸ, ದಗಾ, ಎಲ್ಲವನ್ನೂ ತನ್ನ ಮನೋಭಾವದಲ್ಲಿ ಅಳವಡಿಸಿಕೊಂಡ. ಯಾರು ಹೆಚ್ಚು ಸುಳ್ಳನ್ನು, ಹೆಚ್ಚು ಸಮರ್ಪಕವಾಗಿ, ಸುಳ್ಳರೆಂದು ಬಯಲಾಗದೆ, ಹೆಚ್ಚು ಸಮಯಕ್ಕೆ ಹೇಳಬಲ್ಲವರೋ ಅವರೇ ಈ ಪೈಪೋಟಿಯಲ್ಲಿ ಗೆಲ್ಲುತ್ತಾ ಬಂದರು. ಗೆಲುವಿಗೆ
ಇದು ಒಂದು ಸೂಕ್ತ ಮಾರ್ಗವೆಂದು ಮನಗಂಡು ಅದನ್ನೇ ಅಭ್ಯಾಸಮಾಡಿ, ತಮ್ಮ ಸ್ವಾಭಾವವಾಗಿಸಿಕೊಂಡರು. ” ರುಚ” ವೆಂದರೆ ಮನದೊಳಗಿನ ಭಾವ. “ಸತ್ಯ” ವೆಂದರೆ ಆ ಮನದೊಳಗಿನ ಆ ಭಾವ ಹಾಗೇ, ಬದಲಾಗದೆ,  ವ್ಯಕ್ತವಾದರೆ ಅದು ಸತ್ಯ. ಆದರೆ ಇಂದು ರುಚದಲ್ಲೂ ಕುಟಿಲತೆ, ಸತ್ಯದಲ್ಲೂ ಕುಟಿಲತೆ. ಇದನ್ನೇ ಮಾನ್ಯ ಗುಂಡಪ್ಪನವರು ” ಕೃತ್ರಿಮವು ಜಗವೆಲ್ಲ ಸತ್ಯತೆಯೆದಲ್ಲಿಹುದೋ ”  ಎಂದರು

ಆದರೆ ಇವುಗಳನ್ನೆಲ್ಲ ಮತ್ತು ಎಲ್ಲ ಪ್ರಾಣಿಗಳನ್ನು ಸೃಷ್ಟಿಸಿದ ಆ ಸೃಷ್ಟಿಕರ್ತನೂ ಎಲ್ಲೋ ಗುಹ್ಯನಾಗಿಬಿಟ್ಟಿದ್ದಾನೆ ಎನ್ನುತ್ತಾರೆ, ಶ್ರೀ ಡಿ ವಿ. ಜಿ. ಅಂದರೆ ಮನುಷ್ಯರ ಮನಸ್ಸುಗಳಲ್ಲಿ ಆ ದೈವ ಭಕ್ತಿ, ಪರಮಾತ್ಮ ಸೃಷ್ಟಿಯಾದ ಈ ಜಗತ್ತನ್ನು ಪೂಜಾಭಾವದಿಂದ ನೋಡುವ ಪರಿ, ಎಲ್ಲವೂ  ಆ ಪರಮಾತ್ಮನ ಸೃಷ್ಟಿ, ಇದನ್ನು ನಾನು ದುರುಪಯೋಗಪಡಿಸಿಕೊಳ್ಳಬಾರದು, ಮತ್ತು ಅವನು ನಿರ್ಮಿಸದ ಲೋಕದಲ್ಲಿ ನಾನೂ ಎಲ್ಲರಂತೆ, ಹಾಗಾಗಿ ದುರಾಸೆ, ದುರ್ಭಾವ, ದುರಾಲೋಚನೆ, ಸುಳ್ಳು ಮೋಸ, ತಟವಟ ಇವೆಲ್ಲವೂ ಇರಬಾರದು,ಇದ್ದರೆ ನಾನು ಆ ದೈವದ ಅವಕೃಪೆಗೆ  ಪಾತ್ರನಾಗುತ್ತೇನೆಂಬ ಭಯ ಯಾವುದೂ ಇಲ್ಲದೆ ಸ್ವೇಚ್ಚಾ ಮನೋಭಾವ ಬೆಳೆಸಿಕೊಂಡಿರುವುದರಿಂದ, ಅವನ ಮನಸ್ಸಿನಲ್ಲಿ ಆ ದೈವವಿಲ್ಲದಿರುವುದರಿಂದ, ಆ “ಸೃಷ್ಟಿಕರ್ತನೂ ಎಲ್ಲೋ ಗುಹ್ಯನಾಗಿಬಿಟ್ಟಿದ್ದಾನೆ” ಎನ್ನುತ್ತಾರೆ ಮಾನ್ಯ ಗುಂಡಪ್ಪನವರು. ಆ ದೇವರು ನಮ್ಮೆಲ್ಲರ ಕಲ್ಪನೆಯೆಂತೆ ಇರುವನೋ ಇಲ್ಲವೋ ಎಂಬ ಜಿಜ್ಞಾಸೆ ಬೇಡ. ಆದರೆ ಒಂದು ಮಾತು ಸತ್ಯ. ಆ ದೈವವಿದೆ, ನಾವದರ ಅಧೀನ ಎಂಬ ಭಾವಗಳು, ಮಾನವರು ಸಂಸ್ಕಾರವನ್ನು ಬೆಳೆಸಿಕೊಳ್ಳಲು ಮತ್ತು ಅವರೇ ನಿರ್ಮಿಸಿಕೊಂಡ ಸಮಾಜದಲ್ಲಿ ಒಂದು ಸಂಯಮ ಮತ್ತು ಶಿಸ್ತು ಇರಲು ಕಾರಣವಾಗಿದೆ ಎಂದರೆ ಅದು ಒಳ್ಳೆಯದೇ ಅಲ್ಲವೇ. ಅಂತಹ ದೈವದಲ್ಲಿ ಇಂದು ಭಯ ಭಕ್ತಿಗಳು ಇಂದು ಕಾಣೆಯಾಗಿವೆ ಎನ್ನುವ ಅರ್ಥದಲ್ಲಿ  ” ಆ ಸೃಷ್ಟಿಕರ್ತನೂ ಎಲ್ಲೋ ಗುಹ್ಯನಾಗಿಬಿಟ್ಟಿದ್ದಾನೆ” ಎನ್ನುತ್ತಾರೆ ಮಾನ್ಯ ಗುಂಡಪ್ಪನವರು. ವಾಚಕರೆ ಇದರ ವಿಚಾರವನ್ನು ಎಲ್ಲರೂ ಮಾಡಲೇ ಬೇಕು. ಏಕೆಂದರೆ ಯಾವುದೋ ಇದ್ದರೆ ಸಮಾಜ ಒಳ್ಳೆಯ ಸಮಾಜವಾಗಿ ಪರಿವರ್ತನೆಗೊಳ್ಳುತ್ತದೆ ಎಂದು ಅರಿತರೆ, ನಮ್ಮ ಸಮಾಜ ಸುಧಾರಿಸಲು ಎಲ್ಲೋ ಒಂದು ಮಾರ್ಗವಿದೆ ಎಂದು ಅರಿತುಕೊಳ್ಳಬಹುದು. ಎಲ್ಲರೂ  ಅದನ್ನು ಸಾಧಿಸಲು ಪ್ರಯತ್ನಿಸಬೇಕು.

ಇನ್ನು ಈ ಸಮಾಜದಲ್ಲಿ  ಹೇಗಿರಬೇಕೆಂದು ಒಂದು ಎಚ್ಚರಿಕೆಯನ್ನು ನೀಡುತ್ತಾರೆ ಶ್ರೀ ಡಿ ವಿ. ಜಿ ಯವರು, ಇಂತಹ ವಿಚಿತ್ರವಾದ ಜಗತ್ತಿನಲ್ಲಿ ಯಾರ ಗುಣ ಹೇಗಿರುತ್ತೋ ತಿಳಿಯುವುದು ಕಷ್ಟ ಎನ್ನುತ್ತಾರೆ. ನಯ ವಂಚಕರಿರುವ ಈ ಜಗತ್ತಿನಲ್ಲಿ ಮೋಸಮಾಡುವವರು ಕಡಿಮೆಯಾದರೂ ಮೋಸಹೋಗುವವರ ಸಂಖ್ಯೆ ಅಧಿಕ. ಇಲ್ಲಿ ಒಂದು ವಿಷಯ ಹೇಳಬೇಕು. ಮೋಸಮಾಡಲು ಬುದ್ಧಿವಂತಿಕೆ ಬೇಕು. ” ಎಲ್ಲ ಬುದ್ಧಿವಂತರೂ ಮೋಸಗಾರರಲ್ಲ. ಆದರೆ ಎಲ್ಲ ಮೋಸಗಾರರೂ ಬುದ್ಧಿವಂತರು” ಎನ್ನುವುದು ಸತ್ಯವಾದ ಮಾತು. ಇಂತಹವರ ಸಂಖ್ಯೆ ಕಡಿಮೆಯಾದರೂ ಅವರ ಬಲೆಗೆ ಬೀಳುವ

ಜನರ ಸಂಖ್ಯೆ ಹೆಚ್ಚಾದ್ದರಿಂದ ಎಲ್ಲರೂ ಒಂದಲ್ಲ ಒಂದು ಬಾರಿ ಆ ಮೋಸದ ವಂಚನೆಯ ಕೃತ್ರಿಮತೆಯ, ತಟವಟದ ಜನರ ಬಲೆಯಲ್ಲಿ ಸಿಕ್ಕು ಕಷ್ಟಪಟ್ಟಿರುವವರೇ ಆಗಿರುತ್ತಾರೆ.  ಹಾಗಾಗಿ ನೀ ಜಾಗರೂಕನಾಗಿರು ಎಂದು ಎಚ್ಚರಿಕೆಯನ್ನು ನೀಡುತ್ತಾರೆ. ಹಾಗೇ ನೀಡುವಾಗ” ಯಾತ್ರಿಕನೆ ” ಎನ್ನುವ ಪದ ಪ್ರಯೋಗ ಮಾಡುತ್ತಾರೆ. ಹೌದು ನಾವೆಲ್ಲರೂ ಈ ಜಗತ್ತಿನಲ್ಲಿ ಜೀವನವೆನ್ನುವ ಪ್ರಯಾಣವನ್ನು ಮಾನವರೂಪದ ಈ ಮಣ್ಣಿನ ಬಂಡಿಯಲ್ಲಿ ಮಾಡುವ “ಪ್ರಯಾಣಿಕ”ರೇ, ಅಲ್ಲವೇ?

ಹಾಗಾಗಿ ಈ ಜಗತ್ತು ಕೃತ್ರಿಮತೆ, ಕುಟಿಲತೆ, ಸುಳ್ಳು ಮತ್ತು ಮೋಸದಿಂದ ತುಂಬಿದೆ. ದೈವಭಕ್ತಿಯು ನಶಿಸಿದೆ. ಇಲ್ಲಿ ನೀನು ಜಾಗರೂಕನಾಗಿರು ಎಂದು ಎಚ್ಚರಿಸುವ ಭಾವವೇ ಈ ಕಗ್ಗ. ಆದರೆ ಈ ಸ್ತಿತಿ  ಅ-ನಿವಾರ್ಯ( incurable ) ಅಲ್ಲ. ಎಲ್ಲರೂ ಮನಸ್ಸು ಮಾಡಿದರೆ ಸಾಧ್ಯ. ಇಲ್ಲಿ ಸುಳ್ಳು

ಕೃತ್ರಿಮತೆ, ಕುಟಿಲತೆ, ಸುಳ್ಳು ಮತ್ತು ಮೋಸಗಳ ಸ್ಥಾನದಲ್ಲಿ ಕರುಣೆ ಪ್ರೀತಿ ಪ್ರೇಮ ಸಹೃದಯತೆ ಮುಂತಾದ  ಭಾವಗಳನ್ನು ಬೆಳೆಸಿಕೊಂಡು ನಾವಿರುವ ಜಗತ್ತನ್ನು ಸುಂದರವನ್ನಾಗಿಸಲು  ನಾವೆಲ್ಲರೂ ಪ್ರಯತ್ನಪಡೋಣವೆಂದು  ಹೇಳುತ್ತಾ, ………………

ಇವುಗಳನ್ನೇ ಚಿಂತಿಸುತ್ತಾ ವಿಚಾರಮಾಡುತ್ತಾ ಸುಧಾರಣೆಯ ಮಾರ್ಗ ಹುಡುಕುತ್ತಾ. ನಾವು ಮುಂದಿನ ಕಗ್ಗಕ್ಕೆ ಹೋಗೋಣ.

ಇಂದಿನ ದಿನ ನಿಮಗೆಲ್ಲರಿಗೂ ಶುಭವಾಗಲಿ.

ನಮಸ್ಕಾರ

**************************************************************************

6
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೧)

– ರವಿ ತಿರುಮಲೈ

ಲೋಕಜೀವನ ಮಂಥನ

ಹೊನ್ನೆಂದು ಜಗದಿ ನೀಂ ಕೈಗೆ ಕೊಂಡದನು ವಿಧಿ
ಮಣ್ಣೆನುವನ್, ಅವನವರ ಮಣ್ಣೆನುವೆ ನೀನು
ಬಿನ್ನವಿಂತಿರೆ ವಸ್ತು ಮೌಲ್ಯಗಳ ಗಣನೆಯೀ
ಪಣ್ಯಕ್ಕೆ ಗತಿಯನ್ತೋ? – ಮಂಕುತಿಮ್ಮ

ಹೊನ್ನು ಎಂದು ಜಗದಿ ನೀ೦  ಕೈಗೆ ಕೊಂಡದನು ವಿಧಿ ಮಣ್ಣೆನುವನು, ಅವನ ವರ ಮಣ್ಣೆನುವೆ ನೀನು
ಭಿನ್ನವು ಇಂತಿರೆ ವಸ್ತು ಮೌಲ್ಯಗಳ ಗಣನೆಯು ಈ ಪಣ್ಯಕ್ಕೆ ಗತಿಯೇನೋ ಮಂಕುತಿಮ್ಮ

ಹೊನ್ನು= ಚಿನ್ನ, ಜಗದಿ=ಜಗತ್ತಿನಲ್ಲಿ, ಭಿನ್ನ=ವ್ಯತ್ಯಾಸ, ಪಣ್ಯ= ವ್ಯಾಪಾರ.

ಯಾವುದನ್ನು ನೀನು ಚಿನ್ನ ಎಂದು ಕೈಗೆ ಎತ್ತಿಕೊಳ್ಳುತೀಯೋ, ಅದು ವಾಸ್ತವದಲ್ಲಿ ಚಿನ್ನವಾಗಿರದೆ, ಮಣ್ಣಂತೆ ನಿಷ್ಪ್ರಯೋಜಕವಾಗುತ್ತದೆ. ಆದರೆ ಕೆಲವು ಬಾರಿ ಬಯಸದೆ ಸಂದ ಭಾಗ್ಯವನ್ನು, ಆ ಪರಮಾತ್ಮನ  ಕರುಣೆಯಿಂದ ವರ ರೂಪದಲ್ಲಿ ಸಂದದ್ದು ನಿನಗೆ ನಿಷ್ಪ್ರಯೋಜಕವಾಗಿ ಕಾಣುತ್ತದೆ. ಹೀಗೆ ವಸ್ತುಗಳ ನಿಜರೂಪ ಗುರುತಿಸುವುದರಲ್ಲಿ ನಮಗೆ ವ್ಯತ್ಯಾಸವಾದರೆ ಈ ಜಗತ್ತಿನ ವ್ಯಾಪಾರ ನಡೆಯುವುದು ಹೇಗೆ ಎಂದು ಪ್ರಶ್ನಿಸುತ್ತಾರೆ ಮಾನ್ಯ ಗುಂಡಪ್ಪನವರು.
ಮತ್ತಷ್ಟು ಓದು »

5
ಏಪ್ರಿಲ್

ಮಂಕು ತಿಮ್ಮನ ಕಗ್ಗ – ರಸಧಾರೆ (೨೦)

– ರವಿ ತಿರುಮಲೈ

ಲೋಕಜೀವನ ಮಂಥನ

ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು? I
ಚಂಡಚತುರೋಪಾಯದಿಂದಲೇನಹುದು ? II
ತಂಡುಲದ ಹಿಡಿಯೊಂದು ತುಂಡುಬಟ್ಟೆಯದೊಂದು I
ಅಂಡಲೆತವಿದಕೇನೋ? – ಮಂಕುತಿಮ್ಮ II

ಚಂಡ= ಉಗ್ರ, ಚತುರೋಪಾಯ = ನಾಲ್ಕು ವಿಧವಾದ ಉಪಾಯಗಳು, ಮುಗಿದೇನಹುದು = ಮುಗಿದು ಏನು ಅಹುದು= ಮುಗಿದರೆ ಏನಾಗುತ್ತದೆ.
ತಂಡುಲ=ಅಕ್ಕಿ, ಅಂಡಲೆತ= ಸುಮ್ಮನೆ ಸುತ್ತಾಟ.

ಅಂದಿನ ಮತ್ತು ಇಂದಿನ ವಾಸ್ತವಿಕ ಚಿತ್ರಣವನ್ನು ನಮಗೆ ಗುಂಡಪ್ಪನವರು ಕೊಟ್ಟಿದ್ದಾರೆ ಈ ಕಗ್ಗದಲ್ಲಿ. ನಮ್ಮಲ್ಲಿ ಅನೇಕ ದೇವರುಗಳು. ಆ ದೇವರುಗಳ ಸಂಖ್ಯೆ ಎಷ್ಟಿದೆಯಂದರೆ ಎಣಿಸಲೂ ಸಾಧ್ಯವಿಲ್ಲ. ಒಂದುಕಡೆ ತಿರುಪತಿ ತಿಮ್ಮಪ್ಪನಾದರೆ, ಇನ್ನೊಂದು ಕಡೆ, ಬದರಿಯ ಬದರೀನಾಥ, ಒಂದುಕಡೆ ಮಧುರೆಯ ಮೀನಾಕ್ಷಿಯಾದರೆ, ಇನ್ನೊಂದುಕಡೆ ಕಾಶಿಯ ವಿಶಾಲಾಕ್ಷಿ, ಒಂದುಕಡೆ ಪೂರಿಯ ಜಗನ್ನಾಥನಾದರೆ  ಇನ್ನೊಂದುಕಡೆ  ತಿರುವನಂತಪುರದ ಅನಂತಪದ್ಮನಾಭ, ಒಂದುಕಡೆ ವಿನಾಯಕನಾದರೆ, ಇನ್ನೊಂದುಕಡೆ ಷಣ್ಮುಖ, ಹೀಗೇ ಬರೆಯುತ್ತಹೋದರೆ ಪಟ್ಟಿ ಬಹಳ ಉದ್ದ ಆದೀತು. ದೇಶ ಕಾಲ ಸಂಧರ್ಭಕ್ಕನುಗುಣವಾಗಿ ನಮಗೆ ನಾವು ಪೂಜಿಸುವ ದೇವತೆಗಳು ಬದಲಾಗುತ್ತ ಹೋಗುತ್ತಾರೆ. ಇದನ್ನೇ ಗುಂಡಪ್ಪನವರು “ಕಂಡ ದೈವಕ್ಕೆಲ್ಲ” ಎಂದಿರಬೇಕು.

ಆದರೆ ಇದು ಸರಿಯೇ ಅಲ್ಲವೇ ಎಂದು ಸ್ವಲ್ಪ ವಿಶ್ಲೇಷಿಸೋಣವೇ? ಭಾರತೀಯರಾದ ನಮಗೆ ಎಲ್ಲವೂ ದೈವವೇ? ಗಿಡ ಮರ ಬಳ್ಳಿ ನದಿ ಗುಡ್ಡ ಬೆಟ್ಟ, ಆಕಾಶ ಸೂರ್ಯ ಚಂದ್ರ ಎಲ್ಲ ಗ್ರಹಗಳು, ಪಕ್ಷಿ ಮೀನು ಪ್ರಾಣಿಗಳು ಎಲ್ಲವೂ ದೇವರೇ. ಅಷ್ಟೇ ಅಲ್ಲ ಎಲ್ಲದರಲ್ಲೂ ದೈವವನ್ನು ಕಾಣುವ ಸಂಸ್ಕೃತಿ ನಮ್ಮದು. ಅವುಗಳನ್ನೆಲ್ಲ ಕಾಪಾಡುವ ಕಾರಣದಿಂದ ಅವುಗಳಿಗೆಲ್ಲ ದೈವತ್ವವನ್ನು ಆರೋಪಿಸಿದ್ದಾರೆ ನಮ್ಮ ಪೂರ್ವಜರು. ಒಂದು ರೀತಿಯಲ್ಲಿ ಇದು ಒಳ್ಳೆಯದೇ ಅಲ್ಲವೇ ವಾಚಕರೆ? ಆದರೆ ವ್ಯಕ್ತಿ ಆಂತರ್ಯದಲ್ಲಿಬೆಳೆಯುತ್ತಾ  ಹೋದಂತೆಲ್ಲ ಅನೇಕದಿಂದ ಏಕಕ್ಕೆ  ಬರುವುದೇ ಅಧ್ಯಾತ್ಮಸಾಧನೆಯ ಗುರಿ. ಆಕಾರದಿಂದ ನಿರಾಕಾರಕ್ಕೆ ಬರುವುದೇ ಎಲ್ಲ ಸಾಧನೆಯ ಫಲ.

ಆದರೆ ನಾವು ಏಕೆ ಈ ದೈವಕ್ಕೆ ಕೈ ಮುಗಿಯುತ್ತೇವೆ? ಇದಕ್ಕೆ ನನ್ನ ಅರಿವಿನ ಪರಿಮಿತಿಯಲ್ಲಿ ವಿವರಿಸುತ್ತೇನೆ.   ನಮಗೆ ಆಸೆಗಳುಂಟು. ಆಸೆಗಳು ನಾವು ಈ ಬದುಕಿಗೆ ಅಂಟಿಕೊಂಡಿರುವುದರಿಂದ ಉಂಟು. ಈ ಆಸೆಯ ಪಕ್ಕ ಪಕ್ಕದಲ್ಲೇ ಒಂದು ಭಯವೂ ಉಂಟು. ಮಾನವರಿಗೆ ಎರಡು ರೀತಿಯ ಭಯಗಳುಂಟು. ಒಂದು ತನ್ನಲ್ಲಿರುವ ವಸ್ತು, ವಿಷಯ ಅಥವಾ ವ್ಯಕ್ತಿ ಯನ್ನು ಕಳೆದುಕೊಳ್ಳುವ ಭಯ. ಎರಡು, ತಾನು ಆಸೆ ಪಟ್ಟ ವಸ್ತು, ವ್ಯಕ್ತಿ, ವಿಷಯಗಳು ಸಿಗದೆಹೋಗುವ ಭಯ. ಮಾನವನ ಎಲ್ಲ ಭಯಗಳನ್ನೂ ಈ ಎರಡು ಅಂದರೆ ಎರಡೇ ವಿಭಾಗಗಳಲ್ಲಿ ಸೇರಿಸಬಹುದು. ಮೂರನೆಯದು ನನಗೆ ಗೋಚರಿಸುತ್ತಿಲ್ಲ.

ಆದರೆ ಈ ಭಯ ಸಹಜವಾದದ್ದೇ. ಮನುಷ್ಯನಿಗೆ ತನ್ನ ಜೀವನದಲ್ಲಿ ತನಗೆ ಸಂಬಂಧಿಸಿದ ಎಲ್ಲ ವ್ಯಕ್ತಿ, ವಿಷಯ ಮತ್ತು ವಸ್ತುವಿನ ಮೇಲೆ ಮಮಕಾರವಿರುತ್ತದೆ. ಈ ಮಮಕಾರವೇ ಈ ಭಯಕ್ಕೆ ಕಾರಣ.

ಈ ವ್ಯಕ್ತಿ, ವಿಷಯ ಮತ್ತು ವಸ್ತುಗಳು ಹಲವಿಧದಲ್ಲಿ ಇರಬಹುದು, ತನ್ನವರು, ಅವರಿಗೆ ಸಂಬಂಧಿಸಿದ ವಿಷಯಗಳಾದ, ಆರೋಗ್ಯ, ವಿದ್ಯೆ, ಪರಸ್ಪರ ಸಂಬಂಧಗಳು ವಿವಾಹಕ್ಕೆ, ಪ್ರೇಮಕ್ಕೆ, ಉದ್ಯೋಗ, ಹಣಕಾಸು, ಹೀಗೆ ಹತ್ತು ಹಲವಾರು ವಿಷಯಗಳಿಗೆ  ನಾವು ಅಂಟಿಕೊಂಡಿರುತ್ತೇವೆ. ಅವುಗಳಲ್ಲಿ ಇರುವುದು ಕಳೆದು ಹೋಗುವ ಭಯ ಅಥವಾ ಬಯಸಿದ್ದು ಆಗದೆ ಹೋಗಬಹುದಾದ ಭಯ. ಕಳೆದು ಹೋಗುವುದು ಏಕೆ? ಬಯಸಿದ್ದು ಆಗದೆ ಹೋಗುವುದು ಏಕೆ? ಎಂದು ಖಚಿತವಾಗಿ ನಮಗೆ ಅರಿಯದಾದಾಗ ಮತ್ತು ಸಂಶಯಗಳಿದ್ದಾಗ, ನಮಗರಿಯದ ಯಾವುದೋ ಶಕ್ತಿ ಅಥವಾ ನಮ್ಮನ್ನು ಕಾಯುವ ಯಾವುದೋ ಶಕ್ತಿಗೆ ನಾವು ಕೈಮುಗಿದು,  ಬೇಡುವುದೋ ಅಥವಾ ಶರಣಾಗುವುದೋ ಮಾಡುತ್ತೇವೆ. ಅದನ್ನೇ ಗುಂಡಪ್ಪನವರು ” ಆ ವಿಚಿತ್ರಕೆ ಶರಣಾಗೋ ” ಎನ್ನುತ್ತಾರೆ.

ಭಾರತೀಯರಾದ ನಮಗೆ ಎಲ್ಲವೂ ದೇವರೇ ಆದ್ದರಿಂದ, ಇಷ್ಟೊಂದು ಬಗೆಬಗೆಯ ದೇವರುಗಳು ನಮ್ಮಲ್ಲಿ, ಹಣಕ್ಕೊಬ್ಬ, ಗುಣಕ್ಕೊಬ್ಬ, ವಿದ್ಯೆಗೊಬ್ಬ, ಆರೋಗ್ಯಕ್ಕೊಬ್ಬ, ಪಾಪನಾಶನಕ್ಕೊಬ್ಬ, ಪರಮಾರ್ಗಕ್ಕೊಬ್ಬ. ಮತ್ತು ಈ ದೇವತೆಗಳನ್ನು ಒಲಿಸಿಕೊಳ್ಳಲು ಹಲವಾರು ವಿಧಾನಗಳು. ದರ್ಶನ, ಅರ್ಚನೆ, ಅಭಿಷೇಕ, ದಾನ,ಧ್ಯಾನ, ಭಜನೆ,  ಆನ್ನ ಸಂತರ್ಪಣೆ, ಸಮಾರಾಧನೆ, ಪರೋಪಕಾರದ ಕೆಲಸಗಳು, ಹೋಮ, ಹವನ, ಯಜ್ಞ, ಯಾಗಾದಿಗಳು, ಹೀಗೆ ನಮಗೆ ತೋಚಿದ್ದು, ಮತ್ತು ಪರರಿಂದ ಸೂಚಿಸಲ್ಪಟ್ಟ, ಸಾಮ, ದಾನ , ಬೇಧ, ದಂಡದಂತ ಚತುರೋಪಾಯಗಳನ್ನೂ ಉಪಯೋಗಿಸಿ, ನಮ್ಮ ಕಾರ್ಯ ಸಾಧನೆಗೆ ಆ ದೇವರನ್ನು ಸದಾಕಾಲ ಒಲಿಸಿಕೊಳ್ಳಲು ಪ್ರಯತ್ನಿಸುತ್ತೇವೆ. ಇದು ಒಂದು ಮಾನಸಿಕ  ಸ್ವಯಂ ಚಿಕಿತ್ಸೆ.  ನಮ್ಮ ಮನಸ್ಸುಗಳಲ್ಲಿ ಉದ್ಭವಿಸುವ ಹಲವಾರು ಪ್ರಶ್ನೆ ಮತ್ತು ಸಂದೇಹಗಳಿಗೆ ನಾವೇ ಕಂಡುಕೊಳ್ಳುವ ಸಮಾದಾನ.

ಇದು ಅಧ್ಯಾತ್ಮ ಪ್ರಯಾಣದ ಒಂದು ಸ್ತರ. ಅವರವರ ಮಟ್ಟಿಗೆ ಸರಿ. ಆದರೆ ಗುಂಡಪ್ಪನವರು ” ತಂಡುಲದ ಹಿಡಿಯೊಂದು ತುಂಡುಬಟ್ಟೆಯದೊಂದು” ಒಂದು ಹಿಡಿ ಅಕ್ಕಿಗಾಗಿ, ಹೊಟ್ಟೆ ತುಂಬಿಸಿಕೊಳ್ಳಲು,ಗೇಣುದ್ದ ಬಟ್ಟೆಗಾಗಿ, ಮೈಮುಚ್ಚಲು ಮನುಷ್ಯ ಇಷ್ಟೆಲ್ಲಾ ಮಾಡಬೇಕೆ, ಎಂಬ ಭಾವದಲ್ಲಿ ಒಂದು ವೈರಾಗ್ಯದ ವಿಷಯವನ್ನು ಪ್ರಸ್ತಾಪ ಮಾಡುತ್ತಾರೆ.  ಆದರೆ ವೈರಾಗ್ಯವು ಅನುಭವದಿಂದ ಮಾತ್ರ ಬರಲು ಸಾಧ್ಯ. ಅಂತಹ ಅನುಭವನ್ನ್ನು ಕೊಡುವುದೇ ಜೀವನ. ಅಂತ ಅನುಭವಗಳನ್ನು ಪಡೆದು ಅನುಭವಿಸಿ, ಇಲ್ಲಿ ಯಾವುದರಿಂದಲೂ ಏನೂ ಆಗುವುದಿಲ್ಲ, ನಾನು ಇಲ್ಲಿನವನಲ್ಲ, ನನ್ನ ಮೂಲ ಬೇರೆ ಇದೆ, ” ಅಲ್ಲಿದೆ ನಮ್ಮ ಮನೆ. ನಾನೇಕೆ ಬಂದೆ ಸುಮ್ಮನೆ” ಎಂದು ಪುರಂದರದಾಸರು ಹೇಳುವಹಾಗೆ, ನಮಗೆ ಈ ಪ್ರಪಂಚದಿಂದ ಏನೂ ಆಗಬೇಕಾಗಿಲ್ಲವೆಂಬ “ನಿಜ” ವೈರಾಗ್ಯದ ಭಾವ ಮನದಲ್ಲಿ ಸ್ಥಿರವಾಗಿ ಮೂಡಿದರೆ…………….. ಆದರೆ ಕೆಲವರು ಹೀಗೂ ಯೋಚನೆ ಮಾಡುತ್ತಾರೆ, ಆ ವೈರಾಗ್ಯ ಬೇಕೆ?  ಈ ಜೀವನದಾಚಿನದು ಏನೋ ಗೊತ್ತಿಲ್ಲ. ಗೊತ್ತಿಲ್ಲದ ವಿಷಯದಲ್ಲಿ ಆಸಕ್ತಿ ತೋರಿ, ಇರುವುದನ್ನು ಬಿಡುವುದು ಸರಿಯಲ್ಲ. ಬದುಕಿರುವ ತನಕ ಬದುಕನ್ನು ಅನುಭವಿಸಿ ಬದುಕಬೇಕು, ಎನ್ನುತ್ತಾರೆ.

ಏನಾದರಾಗಲಿ ಒಂದು ಕಡೆ ಈ ಜಗತ್ತು ಮತ್ತು ಸಂಸಾರದಲ್ಲಿ ರಕ್ತಿ ಇನ್ನೊಂದುಕಡೆ ವಿರಕ್ತಿ. ಯಾವುದು ಬೇಕೋ ಅದನ್ನು ಆಯ್ದುಕೊಳ್ಳಲು ಎಲ್ಲರಿಗೂ ಸಂಪೂರ್ಣ ಸ್ವಾತಂತ್ರ್ಯ. ನಮ್ಮ ನಮ್ಮ ವಿಚಾರಗಳು ನಮಗೆ ಸಂತೋಷ ನೀಡಬೇಕು ಅಷ್ಟೇ.

ಇವುಗಳನ್ನೇ ಚಿಂತಿಸುತ್ತಾ ವಿಚಾರಮಾಡುತ್ತಾ ನಾವು ಮುಂದಿನ ಕಗ್ಗಕ್ಕೆ ಹೋಗೋಣ.

ಇಂದಿನ ದಿನ ನಿಮಗೆಲ್ಲರಿಗೂ ಶುಭವಾಗಲಿ.
ನಮಸ್ಕಾರ

******************************************************

5
ಏಪ್ರಿಲ್

ಮಂಗನಿಂದ ಮಾನವನಾದ ಎನ್ನುವುದು ಬರೇ ಅಪವಾದ !

ಇಷ್ಟಕ್ಕೂ ನಾವು ಓದಿದ ಜೀವಶಾಸ್ತ್ರದಲ್ಲಿ ಅಥವಾ ಸಮಾಜಶಾಸ್ತ್ರಲ್ಲಿ ಮಾನವನ  ಹುಟ್ಟಿನ ಬಗೆಗೆ ನಾವು ತಿಳಿದುಕೊಂಡ ಸತ್ಯ ಎಂಬುದು ಸುಳ್ಳು. ಅದೊಂದು ಹೋಲಿಕೆಯ ಕಥೆ ಅಷ್ಟೇ! ಯಾಕೆ ಎಂದು ಯಾರೂ ಚಿಂತಿಸಿದವರಿಲ್ಲ. ಹರಪ್ಪ ಮತ್ತು ಮೊಹೆಂಜೊದಾರೋ ಸ್ಥಳ ಮಂಗನಿಂದ ಮಾನವನಾದ ಎನ್ನುವುದು ಬರೇ ಅಪವಾದ !ಸಂಶೋಧನೆಗಳಲ್ಲಿ ಸಿಕ್ಕಿದವು ಎನ್ನಲಾದ ಕಲ್ಲಿನ ಆಯುಧಗಳು, ಉಪಯೋಗಿಸಿರಬಹುದಾದ ಮಣ್ಣಿನ ಮಡಕೆ-ಕುಡಿಕೆಗಳು, ಗುಹೆಗಳಲ್ಲಿನ ಗೋಡೆ ಚಿತ್ರಗಳು ಕೇವಲ ಇವುಗಳನ್ನೇ ಅವಲಂಬಿಸಿ ಕಟ್ಟಿದ ಅಂದಾಜು ಕಥೆಯೇ ಮಂಗನಿಂದ ಮಾನವ ಎಂಬುದಾಗಿದೆ!ಇದಕ್ಕೆ ಇದಮಿತ್ಥಂ ಎಂದು ಸಾಕ್ಷೀಕರಿಸುವ ಯಾವುದೇ ಪುರಾವೆಗಳು ಇರುವುದಿಲ್ಲ. ಆದಿ ಮಾನವ ಕಾಡೊಳಗೇ ವಾಸವಾಗಿದ್ದನೆಂದೂ ಮೊದಲು ಹಸಿ ಮಾಂಸವನ್ನಷ್ಟೇ ತಿಂದು ಬದುಕಿದ್ದನೆಂದೂ ನಂತರ ಬೆಂಕಿಯನ್ನು ಕಂಡುಹಿಡಿದನೆಂದೂ ಹಲವಾರು ಮೈನವಿರೇಳಿಸುವ ರೋಚಕ ಕಥೆಗಳನ್ನು ಕೇಳುತ್ತೇವೆ. ಕಲ್ಲಿನ ಚೂಪಾದ ಆಯುಧಗಳಿಂದ ಪ್ರಾಣಿಗಳನ್ನು ವಧಿಸುತ್ತಿದ್ದ ಮಾನವ ಕ್ರಮೇಣ ಲೋಹವನ್ನೂ ಕಂಡುಕೊಂಡು ಚಿಕ್ಕಪುಟ್ಟ ಲೋಹದ ಆಯುಧಗಳನ್ನು ತಯಾರಿಸಿಕೊಂಡ ಎಂದು ನಮಗೆ ಹೇಳಿದ ಕಥೆಗಳು ಸಾರುತ್ತವೆ. ನನಗನಿಸುತ್ತಿದೆ ಅವೆಲ್ಲಾ ಬರೇ ಕಟ್ಟುಕಥೆಗಳಾಗಿವೆ; ಅವುಗಳಲ್ಲಿ ಯಾವುದೇ ಹುರುಳಿಲ್ಲ.

ಭಾರತೀಯ ಆಯುರ್ವೇದಕ್ಕೆ ೩೦೦೦ ವರ್ಷಗಳ ದಾಖಲೆಯಿದೆ. ಎಷ್ಟೋಕಡೆ ೫೦೦೦ ವರ್ಷಗಳಷ್ಟು ಹಳೆಯ ದಾಖಲೆಗಳೂ ಸಿಗುತ್ತಿವೆ. ಒಂದೊಮ್ಮೆ ಹಾಗೆ ಮಂಗನಿಂದ ಮಾನವ ಎಂದಾದರೆ ನಮ್ಮ ಪೂರ್ವಜರು ಅಷ್ಟೊಂದು ಹಿಂದೆಯೇ ಬರೆದಿದ್ದ ಗ್ರಂಥಗಳು, ಪುರಾಣೇತಿಹಾಸಗಳು, ಮಹಾಕಾವ್ಯಗಳು, ವೇದ-ವೇದಾಂತಗಳೆಲ್ಲಾ ಸುಳ್ಳೇ?

ಮತ್ತಷ್ಟು ಓದು »