ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )
– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
ಕಾರ್ಲ್ ಮಾರ್ಕ್ಸ್ ನ ಒಟ್ಟು ಚಿಂತನೆಯನ್ನು ಹೀಗೆ ಸಂಗ್ರಹಿಸಬಹುದು: ಕೈಗಾರಿಕೆಗಳು ಬೆಳೆದು, ಯಂತ್ರ ಸಂಸ್ಕೃತಿಯ ಮೂಲಕ ಆಧುನಿಕತೆಯು ಸಮಾಜವನ್ನು ಪ್ರವೇಶಿಸಿರುವುದರಿಂದ ಮನುಷ್ಯ ಜಾಗೃತನಾಗಬೇಕು. ಯಂತ್ರಗಳು ಮನುಷ್ಯನ ಉದ್ಯೋಗವನ್ನು ಕಸಿಯುವುದು ಮಾತ್ರವಲ್ಲ; ಸಮಾಜದಲ್ಲಿ ಬಹು ದೊಡ್ಡ ಆರ್ಥಿಕ ಅಸಮತೋಲನವನ್ನು ಸೃಷ್ಟಿಸುತ್ತವೆ. ಯಂತ್ರಗಳಿಂದ ಮನುಷ್ಯ ತನ್ನ ಅಸ್ಮಿತೆಯನ್ನು ಕಳೆದುಕೊಳ್ಳುತ್ತಾನೆ. ಯಾವ ಕೆಲಸವನ್ನು ಯಾರೂ ಮಾಡಬಹುದೆಂಬ ಸನ್ನಿವೇಶ ಸೃಷ್ಟಿಯಾಗುತ್ತದೆ. ಇದರಿಂದಾಗಿ ಪ್ರತಿಯೊಬ್ಬರಿಗೂ ಕೆಲಸದಲ್ಲಿದ್ದ ಶ್ರದ್ಧೆ, ಪ್ರೀತಿ, ಆತ್ಮೀಯತೆಗಳು ಕಾಣೆಯಾಗುತ್ತವೆ. ತಾವು ಬಯಸಿದಂತೆ ಕೆಲಸಗಾರರನ್ನು ಬಳಸಿಕೊಳ್ಳುವ ಸ್ವಾತಂತ್ರ್ಯವನ್ನು ಬಂಡವಾಳಶಾಹಿಗಳು ಪಡೆಯುತ್ತಾರೆ. ಇದರಿಂದಾಗಿ ಕಾರ್ಮಿಕರನ್ನು ಅತಿ ಕಡಿಮೆ ಸಂಬಳಕ್ಕೆ ದುಡಿಸಿಕೊಂಡು ಹೊಸ ಬಗೆಯ ಗುಲಾಮಗಿರಿ ನಡೆಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಬಂಡವಾಳಶಾಹಿಗಳು ಲಾಭ ಎಂದು ಏನನ್ನು ಕರೆಯುತ್ತಾರೋ ಅದು ಶೋಷಣೆಯ ಮೂರ್ತ ಮೊತ್ತ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 30:
ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ:
– ರಾಮಚಂದ್ರ ಹೆಗಡೆ
ರಾಷ್ಟ್ರಧ್ವಜದ ಗೌರವ ರಕ್ಷಣೆಗಾಗಿ ಬ್ರಿಟಿಷರ ಗುಂಡಿಗೆ ಎದೆಯೊಡ್ಡಿ ಬಲಿದಾನಗೈದ ಅಸ್ಸಾಮಿನ ವೀರವನಿತೆಯರು ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ. ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರದ ಭೂಪಟ, ವಂದೇಮಾತರಂ ಎಲ್ಲವೂ ದೇಶಾಭಿಮಾನದ ಅಭಿವ್ಯಕ್ತಿಯ ಸಂಕೇತಗಳಾದರೂ ಅವು ನಮ್ಮಲ್ಲಿ ಸೃಷ್ಟಿಸುವ ಭಾವ ವರ್ಣನಾತೀತ. ಸೈನಿಕನೊಬ್ಬ ಯುದ್ಧ ಗೆದ್ದಾಗ, ಕ್ರೀಡಾಳುವೊಬ್ಬ ಆಟದಲ್ಲಿ ಗೆದ್ದಾಗ ತ್ರಿವರ್ಣ ಧ್ವಜ ಹಿಡಿದು ಕುಣಿದು ಕುಪ್ಪಳಿಸುವುದು ಕಾಣುತ್ತೇವೆ. ಯುದ್ಧಕ್ಕೆ ಹೋರಾಟ ಯೋಧನೊಬ್ಬ ಗೆದ್ದರೆ ಧ್ವಜ ಹಿಡಿದು ಬರುವೆ, ಸತ್ತರೆ ತ್ರಿವರ್ಣಧ್ವಜವನ್ನು ಸುತ್ತಿಕೊಂಡು ಬರುವೆ ಎಂದು ಹೇಳಿದ್ದು ಈ ಎಲ್ಲ ಸಂಕೇತಗಳ ಕುರಿತು ನಮಗಿರುವ ಹೆಮ್ಮೆ ಅಭಿಮಾನದ ಪ್ರತೀಕ. ರಾಷ್ಟ್ರಧ್ವಜವೆಂದರೆ ಕೇವಲ ಅದು ಬಟ್ಟೆಯಲ್ಲ. ಅದು ನಮ್ಮ ಹೆಮ್ಮೆ, ದೇಶದ ಕುರಿತ ಪ್ರೀತಿಯ ಸಂಕೇತ, ಅದು ನಮ್ಮ ಆತ್ಮಾಭಿಮಾನದ ಸಂಕೇತ. ರಾಷ್ಟ್ರಧ್ವಜದ ಪೂಜ್ಯತೆ ಹಾಗೂ ಗೌರವದ ರಕ್ಷಣೆಗಾಗಿ ೧೭ ರ ತರುಣಿ ಕನಕಲತಾರಿಂದ ಹಿಡಿದು ೭೩ ರ ವೃದ್ಧೆ ಮಾತಂಗಿನಿ ಹಜ್ರಾರವರೆಗೆ ಸ್ವಾತಂತ್ರ್ಯ ಸಮರದ ಉದ್ದಕ್ಕೂ ಸಾವಿರಾರು ಮಂದಿ ಬಲಿದಾನ ಮಾಡಿದ್ದಾರೆ. ಮತ್ತಷ್ಟು ಓದು 
ಪ್ರೇತದ ಆತ್ಮ ಚರಿತೆ! (ಭಾಗ ೨)
– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಅದು ಮನುಕುಲ ಕಂಡ ಪರಮ ಪಾಪಿಗಳಲ್ಲೊಬ್ಬ ಔರಂಗಜೇಬ ದಿಲ್ಲಿಯ ಗದ್ದುಗೆಯಲ್ಲಿದ್ದ ಸಮಯ. ಪ್ರಜೆಗಳನ್ನು ಪರಿಪಾಲನೆ ಮಾಡಬೇಕಾದ ದೊರೆಯೇ ಜಿಸಿಯಾ ತಲೆಗಂದಾಯ ಹೇರಿ ಒಂದು ನಿರ್ದಿಷ್ಟ ಸಮಾಜದ ಸರ್ವನಾಶಕ್ಕೆ ಪಣತೊಟ್ಟು ಸಾವಿರಾರು ದೇವಾಲಯಗಳನ್ನು ದ್ವಂಸ ಮಾಡುತ್ತಿದ್ದ ಕಂಟಕಕಾಲ.. ಆ ಹೊತ್ತಿನಲ್ಲಿ ಸ್ವಾಭಿಮಾನಿ ಹಿಂದೂಗಳ ಪಾಲಿಗೆ ಆಪತ್ಭಾಂದವರಾಗಿ ಶಿವಾಜಿ ಮಹಾರಾಜರು ಉದಿಸಿದರು. ಸಹ್ಯಾದ್ರಿಯ ಸಿಂಹದ ಗುಡುಗಿಗೆ ದಿಲ್ಲಿಯ ಮೊಘಲರ ಮಯೂರ ಸಿಂಹಾಸನ ತಣ್ಣಗೆ ಕಂಪಿಸಿದ್ದಂತೂ ಸತ್ಯ. ಪ್ರವಾಹಕ್ಕೆ ವಿರುದ್ಧವಾಗಿ ಈಜಿ ತನ್ನ ಸದ್ಗುಣಗಳಿಂದ ಪ್ರಜೆಗಳ ಹೃದಯವನ್ನೂ… ಖಡ್ಗಪರಾಕ್ರಮದಿಂದ ಯವನರ ಸೈನ್ಯವನ್ನೂ ಗೆದ್ದ ಶಿವಾಜಿ, ಹಿಂದವೀ ಸ್ವಾರಾಜ್ಯವನ್ನು ಕಟ್ಟಿದರು. ಅಖಂಡ ಹಿಂದೂ ಸಾಮ್ರಾಜ್ಯಕ್ಕೆ ಬೀಜಾರೋಹಣ ಮಾಡಿದವರು ಶಿವಾಜಿ ಮಹಾರಾಜರಾದರೂ, ಅವರ ಕನಸನ್ನು ನನಸು ಮಾಡಿದವರು ಮಾತ್ರ ಪುಣೆಯ ಪೇಶ್ವಾಗಳು. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 29:
ವಾಂಚಿನಾಥನ್ ಅಯ್ಯರ್
– ರಾಮಚಂದ್ರ ಹೆಗಡೆ
ತಮಿಳುನಾಡಿನ ರಾಷ್ಟ್ರಭಕ್ತ ಕ್ರಾಂತಿಕಾರಿ, ಬ್ರಿಟಿಷ್ ಸಾಮ್ರಾಜ್ಯಕ್ಕೆ ಸೆಡ್ಡು ಹೊಡೆದು ಪ್ರಾಣಾರ್ಪಣೆ ಮಾಡಿದ ಹುತಾತ್ಮ ವಾಂಚಿನಾಥನ್ ಅಯ್ಯರ್. ಜನರಿಂದ ‘ವಂಚಿ’ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಈ ೨೫ ರ ದೇಶಭಕ್ತ ತರುಣ ತಿರುನಲ್ವೇಲಿಯ ಕಲೆಕ್ಟರ್ ರಾಬರ್ಟ್ ಆಶ್ ನನ್ನು ಹಾಡಹಗಲೇ ಗುಂಡಿಕ್ಕಿ ತಾನೂ ಆತ್ಮಾರ್ಪಣೆ ಮಾಡಿದ. ತಿರುನಲ್ವೇಲಿ ಜಿಲ್ಲೆಯ ಸೆಂಗೊತ್ತೈ ಎಂಬ ಊರಿನಲ್ಲಿ ಜನಿಸಿದ ವಾಂಚಿನಾಥನ್ ಪ್ರಾಥಮಿಕ ಶಿಕ್ಷಣವನ್ನು ತನ್ನೂರಿನಲ್ಲೇ ಮುಗಿಸಿ, ಎಂ.ಎ ಪದವಿಯನ್ನು ತಿರುವನಂತಪುರದ ಕಾಲೇಜಿನಲ್ಲಿ ಪಡೆದಿದ್ದ. ಕಾಲೇಜಿನಲ್ಲಿ ಓದುವಾಗಲೇ ಮದುವೆಯೂ ಆಗಿತ್ತು. ಸರ್ಕಾರಿ ಹುದ್ದೆಯಲ್ಲಿ ನೌಕರಿ ಮಾಡುತ್ತಿದ್ದ. ಅದೇ ಹೊತ್ತಿಗೆ ತಮಿಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ಜೋರಾಗಿತ್ತು. ಸ್ವದೇಶೀ ನೇವಿಗೇಷನ್ ಕಂಪನಿ ಹುಟ್ಟುಹಾಕಿ ಬ್ರಿಟಿಷರಿಗೆ ಸೆಡ್ಡು ಹೊಡೆದ ರಾಷ್ಟ್ರಭಕ್ತ ಚಿದಂಬರಂ ಪಿಳ್ಳೈ ಹಾಗೂ ‘ಭಾರತಮಾತಾ ಅಸೋಸಿಯೇಷನ್’ ಕಟ್ಟಿ ಕ್ರಾಂತಿಕಾರಿಗಳನ್ನು ತಯಾರು ಮಾಡುತ್ತಿದ್ದ ನೀಲಕಂಠ ಬ್ರಹ್ಮಚಾರಿ ಅವರ ಹೋರಾಟಗಳಿಂದ ವಾಂಚಿ ಸ್ವಾತಂತ್ರ್ಯ ಸಮರದೆಡೆಗೆ ಆಕರ್ಷಿತನಾದ. ದಕ್ಷಿಣ ಭಾರತದ ಕೆಲವೇ ಕೆಲವು ಕ್ರಾಂತಿಕಾರಿ ಸಂಘಟನೆಗಳಲ್ಲಿ ಒಂದಾದ, ನೀಲಕಂಠನಿಂದ ಬ್ರಹ್ಮಚಾರಿಯವರ ‘ಭಾರತಮಾತಾ ಅಸೋಸಿಯೇಷನ್’ ಸಶಸ್ತ್ರ ಕ್ರಾಂತಿಗಾಗಿ ಯುವಕರನ್ನು ತರಬೇತಿಗೊಳಿಸುತ್ತಿತ್ತು. ಮತ್ತಷ್ಟು ಓದು 
ಭಾಮಿನಿ ಷಟ್ಪದಿಯಲ್ಲಿ ಭಗವಾನ್ ಶ್ರೀಧರ ಸ್ವಾಮಿಗಳ ಚರಿತ್ರೆ
– ಗುರುಪ್ರಸಾದ್ ಕೆ ಕೆ.
ಶ್ರೀಧರಭಾಮಿನಿಧಾರೆ ೧-೫
ಶ್ರೀಧರಭಾಮಿನಿಧಾರೆ ೬-೧೦
6)
ವೆಂಕಟಾಚಲ ಗಿರಿಯ ಅಧಿಪತಿ
ವೆಂಕಟೇಶನು ಕುಲದ ದೈವನು
ಸುಂಕಸಂಗ್ರಹ ಮಾಡುವಂತಹ ವಂಶ ಇವರದ್ದೂ||
ಸಂಕ ಇಹಕೂ ಪರಕು ಬೆಸೆಯುವ
ಸಂಕಟವ ಬಹುದೂರ ಸರಿಸುವ
ಪಂಕಜಾತ್ಮನು ಕರುಣೆ ತೋರಿಹ ವಂಶ ಇವರದ್ದೂ||
ತಾತ್ಪರ್ಯ : ಸಪ್ತಗಿರಿವಾಸ ಶ್ರೀನಿವಾಸನು ಇವರ ಕುಲದೇವರಾಗಿದ್ದಾನೆ. ಈ ‘ಪತಕಿ’ ಎಂಬ ಶಬ್ಧವು ‘ಫಸಕೀ’ ಎಂಬ ಶಬ್ದದ ಅಪಭ್ರಂಶವಾಗಿದ್ದು, ಸುಂಕವಸೂಲಿ ಮಾಡುವ ಅಧಿಕಾರಿಗೆ ಈ ಹೆಸರು ಹೇಳುವ ವಾಡಿಕೆ ಇತ್ತು. ಈ ವಂಶದಲ್ಲಿ ಹಿಂದೆ ಯಾರೋ ಸುಂಕವಸೂಲಿ ಮಾಡುವ ಅಧಿಕಾರದಲ್ಲಿ ಇದ್ದುದರಿಂದ ಈ ಮನೆತನಕ್ಕೆ ಪತಕಿ ಎಂಬ ಹೆಸರು ಬಂತು. ಬಹಳ ಧರ್ಮಿಷ್ಟರಾದ ಇವರ ವಂಶದ ಮೇಲೆ, ಸಂಕಟನಾಶಕ, ಇಹ-ಪರಗಳ ಸೇತುವೆಯಾದ ವೆಂಕಟೇಶ್ವರನ ಪೂರ್ಣಾನುಗ್ರಹ ಇತ್ತು. ಮತ್ತಷ್ಟು ಓದು 
ಪ್ರತಿಭಟನೆಯನ್ನೂ ಅಪರಾಧವನ್ನೂ ಏಕೆ ಸಮೀಕರಿಸುತ್ತೀರಿ ಮಾಧ್ಯಮಗಳೇ?
– ವಿನಾಯಕ ಹಂಪಿಹೊಳಿ
ರಾಜ್ಯಾದ್ಯಂತ ಪ್ರತಿಭಟನೆಗಳನ್ನು ವರದಿ ಮಾಡುವ ಸಂದರ್ಭದಲ್ಲಿ ನಮ್ಮ ಮಾಧ್ಯಮಗಳು “ವಾಹನಗಳಿಗೆ ಬೆಂಕಿ ಹಚ್ಚುವದರ ಮೂಲಕ ಕಲ್ಲು ತೂರುವ್ರದರ ಮೂಲಕ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು” ಎಂಬ ಮಾತನ್ನು ಬಳಸಿದ್ದೇ ತಪ್ಪು ಎಂಬುದು ನನ್ನ ಅನಿಸಿಕೆ. ಏಕೆಂದರೆ ಇಂತಹ ಅನೈತಿಕ ಕಾರ್ಯಗಳನ್ನು, `ಆಕ್ರೋಶದ ಸಹಜ ಅಭಿವ್ಯಕ್ತಿ’ ಎಂಬಂತೆ ಬಿಂಬಿಸಿರುವದೇ ಆ ಕ್ರಿಯೆಯನ್ನು ಸಮರ್ಥಿಸಿದಂತೆ. ಉದಾಹರಣೆಗೆ “ಚಾರ್ಲಿ ಹೆಬ್ಡೋ ಕಚೇರಿಯ ಮೇಲೆ ಬಾಂಬು ಹಾಕುವದರ ಮೂಲಕ ಭಯೋತ್ಪಾದಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು” ಎಂದು ಸುದ್ದಿ ಬಿತ್ತರಿಸಿದರೆ ಹೇಗಿರುತ್ತದೆ? ಭಯೋತ್ಪಾದಕರಂತೆ ಜೀವ ತೆಗೆದಿಲ್ಲ ಎನ್ನುವದನ್ನು ಒಪ್ಪಬಹುದು. ಆದರೆ ಸಾಲಸೋಲ ಮಾಡಿ ಪಡೆದ ಲಾರಿಗಳೇ, ಜೀವನಾಧಾರವನ್ನಾಗಿ ಮಾಡಿಕೊಂಡಿರುವ ಲಾರಿ ಡ್ರೈವರು ಕ್ಲೀನರುಗಳಿಗೆ, ಅವರ ಸಂಸಾರಕ್ಕೆ ಇದ್ದ ಒಂದೇ ಜೀವನೋಪಾಯವನ್ನೇ, ಕಸಿದುಕೊಳ್ಳುವದು ಸರಿಯೇ? ಜೀವ ತೆಗೆಯುವದಕ್ಕಿಂತ ಜೀವನ ತೆಗೆಯುವದು ಕಡಿಮೆ ಅಪರಾಧವಾಯಿತೇ?ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 28:
ಮೆಣಸಿನಹಾಳ ತಿಮ್ಮನಗೌಡ
– ರಾಮಚಂದ್ರ ಹೆಗಡೆ
ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ಬ್ರಿಟಿಷರ ವಿರುದ್ಧ ಕ್ರಾಂತಿ ಕಹಳೆ ಮೊಳಗಿಸಿ ಹುತಾತ್ಮನಾದ ವೀರ ಕನ್ನಡಿಗ ಮೆಣಸಿನಹಾಳ ತಿಮ್ಮನಗೌಡರು. ಇಂದಿನ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮೆಣಸಿನಹಾಳದಲ್ಲಿ ಶ್ರೀಮಂತ ಪಾಟೀಲ ಕುಟುಂಬದಲ್ಲಿ ಜನಿಸಿದ ತಿಮ್ಮನಗೌಡ ಬ್ಯಾಡಗಿಗೆ ಸುಭಾಷಚಂದ್ರ ಬೋಸರು ಬಂದಾಗ ಸ್ವಾತಂತ್ರ್ಯ ಹೋರಾಟದ ಕುರಿತ ಅವರ ಭಾಷಣ ಕೇಳಿ ರೋಮಾಂಚಿತರಾಗಿ ತ್ಯಾಗ ಮತ್ತು ಬಲಿದಾನದ ದೀಕ್ಷೆ ತೊಟ್ಟು ತನ್ನ 21ರ ವಯಸ್ಸಿನಲ್ಲೇ ಕಾನೂನು ಭಂಗ ಚಳುವಳಿಗೆ ಧುಮುಕಿದರು. ಆ ಹೊತ್ತಿಗೆ ಬ್ರಿಟಿಷರ ದರ್ಪ ದೌರ್ಜನ್ಯಗಳು ಮಿತಿಮೀರಿದ್ದವು. ಸಾಮಾನ್ಯ ಬಡ ರೈತರನ್ನು ದುಪ್ಪಟ್ಟು ಕಂದಾಯ ಹಾಕಿ ಶೋಷಿಸಲಾಗುತ್ತಿತ್ತು. ಅದನ್ನು ಪ್ರತಿಭಟಿಸಿ ಶೋಷಣೆಯ ವಿರುದ್ಧ ದನಿಯೆತ್ತಿದ ತಿಮ್ಮನಗೌಡರನ್ನು ಬ್ರಿಟಿಷರು ಇನ್ನೂ ಅನೇಕ ಹೋರಾಟಗಾರರೊಂದಿಗೆ ಬಂಧಿಸಿ ಎರಡು ವರ್ಷಕಾಲ ಯರವಾಡ ಜೈಲಿನಲ್ಲಿ ಸೆರೆಯಲ್ಲಿಟ್ಟರು. ಅಲ್ಲಿ ತಿಮ್ಮನಗೌಡರು ಚರಖಾದಿಂದ ನೂಲು ತೆಗೆಯುವುದನ್ನು ಕಲಿತರು. ಜೈಲಿನಿಂದ ಬಿಡುಗಡೆಗೊಂಡ ತಿಮ್ಮನಗೌಡರಿಗೆ ಅವರ ಊರಿನಲ್ಲಿ ಭವ್ಯ ಸ್ವಾಗತ ದೊರೆಯಿತು. ಜೈಲಿನಿಂದ ಬಂದ ಮೇಲೆ ಮತ್ತೆ ತಿಮ್ಮನಗೌಡರು ತಮ್ಮ ಕ್ರಾಂತಿ ಚಟುವಟಿಕೆಗಳನ್ನು ಮುಂದುವರೆಸಿದರು. ಬ್ರಿಟಿಷ್ ದೌರ್ಜನ್ಯದ ವಿರುದ್ಧ ತರುಣರ ಗುಂಪು ಕಟ್ಟಿಕೊಂಡು ಊರೂರು ತಿರುಗಿ ಭಾಷಣ ಮಾಡುತ್ತಾ ಜನರಲ್ಲಿ ಜಾಗೃತಿ ಮೂಡಿಸುತ್ತಾ ಜನರನ್ನು ಬಡಿದೆಬ್ಬಿಸತೊಡಗಿದರು. ಮತ್ತಷ್ಟು ಓದು 
ಸಾಧಕರ ಹೆಸರಲ್ಲಿ ಅಸ್ಮಿತೆಯ ಹುಡುಕಾಟ
– ಡಾ.ಬಿ.ವಿ.ವಸಂತ ಕುಮಾರ್
ಭಾರತ ದೇಶ ಪ್ರಪಂಚದ ಒಂದು ವಿಶಿಷ್ಟ ದೇಶ. ಭಾರತದ ಬದುಕಿನ ದಾರಿಗಳನ್ನು ಇಲ್ಲಿನ ಮಹಾತ್ಮರು ನಿರ್ಮಿಸಿದ್ದಾರೆ. ಕಾಡಿನಿಂದ ಒಡಮೂಡಿದ ಈ ದಾರಿಗಳೆಡೆಗೆ ನಗರ ಮಹಾನಗರಗಳ ಜನರು ಮುಖಮಾಡಿದ್ದನ್ನೂ, ಮಾಡುತ್ತಾ ಇರುವುದನ್ನೂ, ಮುಂದೆ ಮಾಡುವುದನ್ನೂ ನೋಡಬಹುದು. ಇವರೇ ನಿಜವಾದ ರಾಷ್ಟ್ರ ನಿರ್ಮಾಪಕರು, ಸಂಸ್ಕೃತಿ ಸೃಷ್ಟಿಕರ್ತರು, ಕಲ್ಯಾಣದ ಮಹಾಕನಸುಗಾರರು. ಇಂಥವರನ್ನು ಸಂತರು, ಮಹಂತರು, ಶರಣರು, ಋಷಿಮುನಿಗಳು, ದಾರ್ಶನಿಕರು ಎಂದೆಲ್ಲ ಕರೆಯುತ್ತಾರೆ. ಅವರನ್ನು ಸಮಾಜದ ಜನ ಸದಾ ತಮ್ಮ ಬಾಳಿಗೆ ಆದರ್ಶದ ನಂದಾದೀವಿಗೆಯನ್ನಾಗಿಸಿಕೊಂಡಿದ್ದಾರೆ. ಅವರನ್ನು ಗುರುವೆಂದು ಸ್ವೀಕರಿಸಿ ತಾವು ಭಕ್ತರಾಗಿ ಗುರು-ಶಿಷ್ಯ ಪರಂಪರೆಯ ಆಧ್ಯಾತ್ಮಕ್ಕೂ ಅನುಭವಕ್ಕೂ ಕಾರಣರಾಗಿದ್ದಾರೆ. ಮತ್ತಷ್ಟು ಓದು 
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 27:
‘ಮಾಸ್ಟರ್ ದಾ’ ಸೂರ್ಯ ಸೇನ್
– ರಾಮಚಂದ್ರ ಹೆಗಡೆ
ಬಂಗಾಳದ ಮತ್ತೊಬ್ಬ ಕ್ರಾಂತಿಕಿಡಿ, ಬ್ರಿಟಿಷರ ಎದೆ ನಡುಗಿಸಿದ ‘ಚಿತ್ತಗಾಂಗ್ ಶಸ್ತ್ರಾಗಾರ ದಾಳಿ’ ಯ ರೂವಾರಿ ಸೂರ್ಯ ಸೇನ್. ಜನರು, ಕ್ರಾಂತಿಕಾರಿ ಸಹವರ್ತಿಗಳು ಪ್ರೀತಿಯಿಂದ ಕರೆಯುತ್ತಿದ್ದ ಹೆಸರು ಮಾಸ್ಟರ್ ದಾ. ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಚಿತ್ತಗಾಂಗ್ ನ ಸುತ್ತಮುತ್ತಲಿನ ಪ್ರದೇಶದಲ್ಲಿ ಬ್ರಿಟಿಷರ ವಿರುದ್ಧ ದೊಡ್ಡಮಟ್ಟದ ಹೋರಾಟವನ್ನು ರೂಪಿಸುವಲ್ಲಿ ಸೂರ್ಯ ಸೇನ್ ರ ಪಾತ್ರ ಪ್ರಮುಖವಾದದ್ದು. ಬಿಎ ವಿದ್ಯಾರ್ಥಿಯಾಗಿದ್ದಾಗ ಭಾರತ ಸ್ವಾತಂತ್ರ್ಯ ಸಮರದ ಕುರಿತು ಅರಿತ ಸೇನ್, ಕ್ರಾಂತಿಕಾರಿ ಸಂಘಟನೆ ಅನುಶೀಲನ ಸಮಿತಿಯೆಡೆಗೆ ಆಕರ್ಷಿತರಾದರು. ೧೯೧೮ ರಲ್ಲಿ ಚಿತ್ತಗಾಂಗ್ ನಲ್ಲಿ ಶಿಕ್ಷಕನಾಗಿ ವೃತ್ತಿ ಆರಂಭಿಸಿದ ಸೇನ್ ಆರಂಭದಲ್ಲಿ ಗಾಂಧೀಜಿಯವರ ಅಸಹಕಾರ ಚಳುವಳಿಯ ಭಾಗವಾಗಿದ್ದರು. ಆದರೆ ಅದು ಮಧ್ಯದಲ್ಲೇ ಸ್ಥಗಿತವಾದಾಗ ಬೇಸರಗೊಂಡ ಸೇನ್ ಭಾರತದ ಸ್ವಾತಂತ್ರ್ಯಕ್ಕೆ ಕ್ರಾಂತಿಮಾರ್ಗವೇ ಸರಿ ಎಂದು ನಿಶ್ಚಯಿಸಿದರು. ಕ್ರಾಂತಿಕಾರಿ ಸಂಘಟನೆ ಯುಗಾಂತರದ ಕಾರ್ಯಕರ್ತನಾಗಿ ಕ್ರಾಂತಿಕಾರ್ಯದಲ್ಲಿ ತೊಡಗಿಸಿಕೊಂಡ ಅವರು ಚಿತ್ತಗಾಂಗ್ ಜಿಲ್ಲೆಯಾದ್ಯಂತ ಕ್ರಾಂತಿ ಚಟುವಟಿಕೆ ಪಸರಿಸುವಲ್ಲಿ ಹಾಗೂ ಕ್ರಾಂತಿಕಾರಿಗಳ ಬಹುದೊಡ್ಡ ಯುವಪಡೆಯನ್ನು ಕಟ್ಟುವಲ್ಲಿ ಅವಿರತವಾಗಿ ದುಡಿದರು. ಮತ್ತಷ್ಟು ಓದು 
ಗುರು – ಶಿಷ್ಯ
– ಗೀತಾ ಹೆಗ್ಡೆ
ಅರಿವು ಅಂದರೆ ತಿಳುವಳಿಕೆ. ಇದು ನಮಗೆ ಹುಟ್ಟಿನಿಂದ ಬರಲು ಸಾಧ್ಯವಿಲ್ಲ. ಇದಕ್ಕೆ ಒಬ್ಬ ಗುರುವಿನ ಅಗತ್ಯ ಇದೆ. ಒಂಬತ್ತು ತಿಂಗಳು ಹೊತ್ತು ಹೆತ್ತು ಸಾಕಿದ ತಾಯಿ ಮೊದಲ ಗುರು. ಎಳೆ ಕಂದಮ್ಮನಿಗೆ ಹಾಲುಣಿಸುವ ತರಬೇತಿಯಿಂದ ಹಿಡಿದು ತನ್ನ ಜೀವಿತಾವಧಿಯ ಕೊನೆಯವರೆಗೂ ಒಂದಲ್ಲಾ ಒಂದು ಗಳಿಗೆಗಳ ಸಂದರ್ಭದಲ್ಲಿ ಜೊತೆಯಾಗಿ ನಿಂತು ಸಲಹುವ ಗುರು ರಕ್ಷೆ ಅವಳು. ಹಾಗಾದರೆ ತಂದೆ? ಮುದ್ದು ಮಾಡಿ ಎತ್ತಿ ಹಾರಿಸಿ ಕಂದನ ಲಾಲನೆ ಪಾಲನೆ ಕಡೆ ಕಣ್ಣಿಟ್ಟು ಬೇಕಾದ್ದೆಲ್ಲ ತನ್ನ ಶಕ್ತ್ಯಾನುಸಾರ ತಂದು ಕೊಡುವ; ತರಲಾರದ್ದಕ್ಕೆ ಸಂಕಟ ಪಡುತ್ತ ಹಪಹಪಿಸಿ ಮರೆಯಲ್ಲಿ ಕಣ್ಣೊರೆಸಿಕೊಂಡು ಜವಾಬ್ದಾರಿ ಹೊತ್ತು ಮಕ್ಕಳಿಗೆ ಶ್ರೀ ರಕ್ಷೆ ನೀಡಿ, ಬೆಳೆಯುವ ಮಕ್ಕಳ ಏಳಿಗೆಯ ನೋಡಿ ಬೀಗುವ ಕಣ್ಣಿಗೆ ಕಾಣದ ಗುರು ಎಂದರೂ ತಪ್ಪಾಗಲಾರದು. ಏಕೆಂದರೆ ಸಂಸಾರದಲ್ಲಿ ಮಕ್ಕಳಿಂದ ಏನೆ ತಪ್ಪು ಒಪ್ಪಿದ್ದರೂ ಸಾಮಾನ್ಯವಾಗಿ ತಾಯಿ ಕಲಿಸಿದ ಬುದ್ಧಿ ಹೇಳೋದೆ ಜಾಸ್ತಿ. ತಂದೆ, ತಾಯಿ ಕಲಿಸಿದ ಬುದ್ಧಿ ಹೇಳೋದು ಅಪರೂಪ. ತಂದೆ ತಾಯಿಯಾದವರೂ ಹೇಳುವುದೂ ಹಾಗೆ, ಒಳ್ಳೆದಾದರೆ ನಾ ಕಲಿಸಿದ್ದು ಅದೆ ತಪ್ಪಾದರೆ ಅವರಮ್ಮ ಕಲಿಸಿದ ಬುದ್ಧಿ. ಎಷ್ಟು ವಿಪರ್ಯಾಸ! ಮತ್ತಷ್ಟು ಓದು 




