ವಿಷಯದ ವಿವರಗಳಿಗೆ ದಾಟಿರಿ

Recent Articles

3
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 18:
ದುರ್ಗಾ ದೇವಿ ವೋಹ್ರಾ (ದುರ್ಗಾ ಬಾಭಿ) :
– ರಾಮಚಂದ್ರ ಹೆಗಡೆ

20-women-who-made-our-heads-raise-high-8_1457531002_725x725ನೀವು ‘ಲೆಜೆಂಡ್ ಆ ಭಗತ್ ಸಿಂಗ್’ ಸಿನೆಮಾ ನೋಡಿದ್ದರೆ ಅದರಲ್ಲಿ ಬ್ರಿಟಿಷ್ ಅಧಿಕಾರಿ ಸೌಂಡರ್ಸ್ ಹತ್ಯೆಯ ನಂತರ ಭಗತ್ ಸಿಂಗ್ ಲಾಹೋರ್ ನಿಂದ ಕಲ್ಕತ್ತಾ ಗೆ ತಪ್ಪಿಸಿಕೊಂಡು ಹೋಗುವ ದೃಶ್ಯ ನೋಡಿರುತ್ತೀರಿ. ಬ್ರಿಟಿಷರು ಭಗತ್ ಸಿಂಗ್ ಗಾಗಿ ದೇಶಾದ್ಯಂತ ಕಟ್ಟೆಚ್ಚರದ ಹುಡುಕಾಟ ನಡೆಸಿದ್ದಾಗ ಅಲ್ಲಿಂದ ಕಲ್ಕತ್ತಾ ಗೆ ತಪ್ಪಿಸಿಕೊಂಡು ಹೋಗುವ ಐಡಿಯಾ ಕೊಟ್ಟು ಹಾಗೆ ತಪ್ಪಿಸಿಕೊಂಡು ಹೋಗಲು ಭಗತ್ ಸಿಂಗ್ ನ ಪತ್ನಿಯಂತೆ ವೇಷ ಧರಿಸಿ ಅವನಿಗೆ ಕಲ್ಕತ್ತಾ ತಲುಪಲು ನೆರವಾದವಳು ಈ ದುರ್ಗಾ ಬಾಭಿ. ಮತ್ತಷ್ಟು ಓದು »

3
ಸೆಪ್ಟೆಂ

ಅಂಬೇಡ್ಕರ್, ಮಾರ್ಕ್ಸ್ ಮತ್ತು ಬುದ್ಧ…..

– ಗುರುರಾಜ ಕೋಡ್ಕಣಿ. ಯಲ್ಲಾಪುರ
buddha_or_karl_marx“ಅದೊಮ್ಮೆ ಬುದ್ಧನ ಅಗ್ರಗಣ್ಯ ಶಿಷ್ಯರಲ್ಲಿ ಒಬ್ಬನಾದ ಅನಾಥಪಿಂಡಿಕನು ಬುದ್ದನಿರುವಲ್ಲಿಗೆ ಆಗಮಿಸುತ್ತಾನೆ. ಹಾಗೆ ಬಂದವನೇ ಬುದ್ಧನಿಗೆ ವಂದಿಸಿ, ಪಕ್ಕದಲ್ಲಿದ್ದ ಆಸನದಲ್ಲಿ ಕುಳಿತುಕೊಳ್ಳುತ್ತ ‘ಹೇ ಮಹಾಜ್ಞಾನಿಯೇ, ಗೃಹಸ್ತನೆನಿಸಿಕೊಂಡವನಿಗೆ ತುಂಬ ಆಸಕ್ತಿದಾಯವೆನ್ನಿಸುವ ಹಿತನೀಡುವ, ಆದರೆ ಅಷ್ಟೇ ಕಷ್ಟವೆನಿಸುವ ಕಾರ್ಯ ಯಾವುದೆಂದು ನಿನಗನ್ನಿಸುತ್ತದೆ .’? ಎಂದು ಪ್ರಶ್ನಿಸುತ್ತಾನೆ. ಹೀಗೊಂದು ಪ್ರಶ್ನೆಯನ್ನು ಕೇಳಿ ಮುಗುಳ್ನಕ್ಕ ಗೌತಮ, ‘ಅಂತಹ ಹಲವಾರು ಕೆಲಸಗಳಿವೆ ಶಿಷ್ಯೋತ್ತಮನೇ. ನ್ಯಾಯಬದ್ಧವಾಗಿ ಸಂಪತ್ತನ್ನು ಗಳಿಸುವುದು ಅಂಥದ್ದೊಂದು ಬಹುಮುಖ್ಯ ಕಾರ್ಯ. ಮೊದಲು ವ್ಯಕ್ತಿ ತಾನು ಧರ್ಮಯುತವಾಗಿ ಸಂಪತ್ತನ್ನು ಗಳಿಸಿಕೊಳ್ಳಬೇಕು. ನಂತರ ತನ್ನ ಹತ್ತಿರದ ಬಂಧುಗಳೂ ಸಹ ನ್ಯಾಯಸಮ್ಮತವಾಗಿಯೇ ಸಂಪತ್ತಿನ ಗಳಿಕೆ ಮಾಡುವಂತೆ ನೋಡಿಕೊಳ್ಳಬೇಕು. ಮೂರನೆಯದ್ದಾಗಿ ವ್ಯಕ್ತಿಯೊಬ್ಬ ತುಂಬ ಕಾಲ ಬದುಕಿ ದೀರ್ಘಾಯುಷಿಯೆನ್ನಿಸಿಕೊಳ್ಳಬೇಕು. ಇವೆಲ್ಲವೂ ಮನುಷ್ಯನಿಗೆ ಇಷ್ಟವಾಗುವ, ಹಿತವೆನಿಸುವ ಕಾರ್ಯಗಳೇ. ಆದರೆ ಅವುಗಳ ಸಾಧನೆ ಸುಲಭಸಾಧ್ಯವಲ್ಲ. ಇಂಥಹ ಐಹಿಕ ಭೋಗಗಳ ಗಳಿಕೆಗೂ ನಂಬಿಕೆ, ಸಚ್ಚಾರಿತ್ರ್ಯ, ಉದಾರತೆ ಮತ್ತು ವಿವೇಕವೆನ್ನುವ ನಾಲ್ಕು ಮೌಲ್ಯಗಳ ಆಶೀರ್ವಾದ ಬೇಕು. ಸಚ್ಚಾರಿತ್ರ್ಯವೆನ್ನುವುದು ಮನುಷ್ಯನ ಮನಸ್ಸು ಚಂಚಲವಾಗದೇ ಕುಡಿತ, ಕಳ್ಳತನ ಕೊಲೆಗಳಂತಹ ಕೆಟ್ಟ ಕಾರ್ಯಗಳನ್ನು ಮಾಡದಂತೆ ಆತನನ್ನು ತಡೆಯುತ್ತದೆ. ಉದಾರತೆಯ ಭಾವವು ಮನುಷ್ಯನನ್ನು ದುರಾಸೆಯಂತಹ ದುರ್ಗುಣಗಳಿಂದ ಮುಕ್ತವಾಗಿಸಿ ತೆರೆದ ಮನಸ್ಸಿನಿಂದ ದಾನಧರ್ಮಗಳನ್ನು ಮಾಡುವಂತೆ ಪ್ರೋತ್ಸಾಹಿಸುತ್ತದೆ. ವಿವೇಕವೆನ್ನುವುದು ಮನುಷ್ಯನನ್ನು ವಿಮೋಚನೆಯತ್ತ ಕರೆದೊಯ್ಯುವ ಮಾರ್ಗ. ವಿವೇಕವೆನ್ನುವ ಹಾರೈಕೆ, ಮನುಷ್ಯನನ್ನು ಜಡತ್ವ, ಕುಯುಕ್ತಿ, ಆಲಸ್ಯ ಅನುಮಾನದಂತಹ ಅವಗುಣಗಳಿಂದ ದೂರವಿರಿಸುತ್ತದೆ. ಹಾಗಾಗಿ ನೈತಿಕತೆಯಿಂದ, ನ್ಯಾಯಸಮ್ಮತ ದುಡಿಮೆಯಿಂದ ಬೆವರು ಸುರಿಸಿ ಗಳಿಸಿದ ಆಸ್ತಿಯೂ ಸಾಮಾನ್ಯ ಮನುಷ್ಯನಿಗೆ ಒಂದು ವರದಾನವಿದ್ದಂತೆಯೇ ಸರಿ. ಹೀಗೆ ಸಿರಿವಂತನಾಗುವ ಗೃಹಸ್ತ, ಬದುಕಿನುದ್ದಕ್ಕೂ ತಾನು ಸಂತಸವಾಗಿರುವುದಲ್ಲದೇ, ಸದಾಕಾಲ ತನ್ನ ಹೆತ್ತವರು, ಮಡದಿ ಮಕ್ಕಳು ಮತ್ತು ಸ್ನೇಹಿತರನ್ನೂ ಸಹ ಸಂತೋಷವಾಗಿರಸಬಲ್ಲ. ಸಂತಸವೇ ಸಾಮಾನ್ಯನೊಬ್ಬನ ಬದುಕಿನ ಸಾರ್ಥಕತೆ ‘ಎನ್ನುತ್ತ ಉತ್ತರಿಸುತ್ತಾನೆ’ ಎಂದು ಬರೆಯುತ್ತಾರೆ, ಸಂವಿಧಾನ ಶಿಲ್ಪಿ ಡಾ.ಭೀಮರಾವ್ ಅಂಬೇಡ್ಕರ್ ತಮ್ಮ ‘Buddha Or Karl Marx’ಎನ್ನುವ ಕೃತಿಯಲ್ಲಿ. ಮತ್ತಷ್ಟು ಓದು »

2
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 17:
ಧೋಂಡಿಯ ವಾಘ್
– ರಾಮಚಂದ್ರ ಹೆಗಡೆ

14054142_567988006738362_7112786577959153087_nಮಲೆನಾಡು ಪ್ರದೇಶದಲ್ಲಿ ಬ್ರಿಟಿಷರ ನಿದ್ದೆಗೆಡಿಸಿ ಸಹ್ಯಾದ್ರಿಯ ಹುಲಿ ಎಂಬ ಖ್ಯಾತಿಗೆ ಪಾತ್ರನಾದ ವೀರ ಧೋಂಡಿಯ ವಾಘ್. ಹುಟ್ಟಿನಿಂದ ಮರಾಠಾ ಆಗಿದ್ದ ದೋಂಡಿಯಾ ವಾಘ್ ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲೂಕಿನಿಂದ ಬಂದ ಒಬ್ಬ ಕೂಲಿ ಸೈನಿಕ. ಮೊದಲು ಕೊಲ್ಹಾಪುರ, ಧಾರವಾಡ ಮುಂತಾದ ಕಡೆ ಸಂಸ್ಥಾನಗಳಲ್ಲಿ ದುಡಿದು ನಂತರ ಹೈದರಾಲಿ ಸೈನ್ಯದಲ್ಲಿ ಸೇರಿಕೊಂಡಿದ್ದ. ನಂತರ ಸೈನ್ಯದಿಂದ ಓಡಿಹೋದ ವಾಘ್ ತನಗೆ ಬೇಕಾದ ಜನರ ಒಂದು ತಂಡವನ್ನು ಖಾಸಗಿ ಸೈನ್ಯವಾಗಿ ಕಟ್ಟಿದ. ಕೆಲಕಾಲ ಸೆರೆಯಲ್ಲಿದ್ದ ವಾಘ್ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸವಾಲೆಸೆಯುವ ತೀರ್ಮಾನ ಕೈಗೊಂಡ. ಅಲ್ಲಿಂದ ಬಿಡುಗಡೆಯಾಗಿ ಬ್ರಿಟಿಷರ ವಿರೋಧಿಯಾಗಿ ಬೆಳೆದ. ಮೈಸೂರು ಸಂಸ್ಥಾನವು ಬ್ರಿಟಿಷರಿಗೆ ವಾರ್ಷಿಕ ಕಾಣಿಕೆಯನ್ನು ಒಪ್ಪಿಸುವ ಸಲುವಾಗಿ ರೈತರ ಮೇಲೆ ಕರ ಹೇರಿದಾಗ ವಾಘ್ ಅದರ ವಿರುದ್ಧ ದನಿಯೆತ್ತಿದ. ರೈತರು ದೋಂಡಿಯಾ ವಾಘನನ್ನು ಬೆಂಬಲಿಸಿದರು. ಆರಂಭದಲ್ಲಿ ಅವನ ಸಂಘಟನೆ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿದ್ದು, ಬ್ರಿಟಿಷರು ಬಿನ್ನುಹತ್ತಿದಾಗ ಹೈದರಾಬಾದ್ ಕರ್ನಾಟಕ ಪ್ರಾಂತಕ್ಕೆ ಬಂದು ಸೇರಿದ. ಮತ್ತಷ್ಟು ಓದು »

1
ಸೆಪ್ಟೆಂ

ವೀಡಿಯೋ ಗೇಮ್ ಸಾಧಕ – ಬಾಧಕಗಳ ಒಂದು ವಿಶ್ಲೇಷಣೆ

– ಶೈಲೇಶ್ ಕುಲ್ಕರ್ಣಿ

camp-pokemon-169-enವೀಡಿಯೊಗೇಮ್ ಗಳು ನಿಜಕ್ಕೂ ವ್ಯಕ್ತಿಯ ದೈಹಿಕ ಅಥವಾ ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಲ್ಲಷ್ಟು ಪ್ರಭಾವಶಾಲಿಯೇ ಎಂಬ ಪ್ರಶ್ನೆಯನ್ನಿಟ್ಟುಕೊಂಡೇ ಪರ-ವಿರೋಧದ ಚರ್ಚೆ ಕಳೆದ ೩೦ವರ್ಷಗಳಿಂದಲೂ ವಿಶ್ವದಾದ್ಯಂತ ನಡೆದಿದೆ. ಸಿನೆಮಾ, ಕುಣಿತಗಳಿಂದ ತೊಡಗಿ ದೂರದರ್ಶನ, ಅಂತರ್ಜಾಲ, ಕಾದಂಬರಿಗಳಾದಿಯಾಗಿ ಬಹುಶಃ ಮನುಷ್ಯನ ಗಮನವನ್ನೆಲ್ಲಾ ತನ್ನಲ್ಲಿ ಹಿಡಿದಿಡಬಲ್ಲ ಸಾಧ್ಯತೆಯುಳ್ಳ ಎಲ್ಲಾ ಚಟುವಟಿಕೆಗಳೂ ಒಂದಲ್ಲ ಒಂದು ಸಾರಿ ಈ ರೀತಿಯ ಟೀಕೆಯನ್ನ ಎದುರಿಸಿಯೇ ಬಂದಿವೆ. ಮತ್ತಷ್ಟು ಓದು »

1
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 16:
ಚಾಪೇಕರ್ ಸಹೋದರರು
– ರಾಮಚಂದ್ರ ಹೆಗಡೆ

ChapekarBrsಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮೈಲಾರ ಮಹಾದೇವರ ಕುಟುಂಬ ಸೆರೆವಾಸ ಅನುಭವಿಸಿದರೆ ವಿವೇಕಾನಂದರ ಕುಟುಂಬ ರಾಷ್ಟ್ರಜಾಗೃತಿಯಲ್ಲಿ ತೊಡಗಿಕೊಂಡ ಸ್ಫೂರ್ತಿದಾಯಕ ಕಥೆಯನ್ನು ಇದೇ ಸರಣಿಯಲ್ಲಿ ಹಿಂದೆ ಓದಿದ್ದೇವೆ. ಪುಣೆಯ ಚಾಪೇಕರ್ ಕುಟುಂಬ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಬಲಿದಾನಗೈದು ಭಾರತಮಾತೆಯ ದಾಸ್ಯ ವಿಮುಕ್ತಿ ಆಂದೋಲನದಲ್ಲಿ ಸಂಪೂರ್ಣವಾಗಿ ತನ್ನನ್ನು ಸಮರ್ಪಿಸಿಕೊಂಡ ಕಥೆ ರೋಮಾಂಚನಕಾರಿ. ಒಂದೇ ತಾಯಿಯ ಮಡಿಲಲ್ಲಿ ಜನಿಸಿದ ಮೂವರು ದಾಮೋದರ ಚಾಪೇಕರ್, ಬಾಲಕೃಷ್ಣ ಚಾಪೇಕರ್ ಮತ್ತು ವಾಸುದೇವ್ ಚಾಪೇಕರ್ ತಮ್ಮ ಅಪ್ರತಿಮ ಶೌರ್ಯ ಹಾಗೂ ದೇಶಭಕ್ತಿಯಿಂದಾಗಿ ಕ್ರಾಂತಿಯ ಕಹಳೆ ಮೊಳಗಿಸಿ ಬಲಿದಾನಗೈದ ಕಥೆ ಇತಿಹಾಸದಲ್ಲಿ ಅಪರೂಪದ ಸಂಗತಿ. ದೇಶದ ಇತರ ಕ್ರಾಂತಿಕಾರಿಗಳ ಹೋರಾಟದ ಯಶೋಗಾಥೆಯನ್ನು, ಬಲಿದಾನದ ಸಾಹಸ ಕಥೆಯನ್ನು ಕೇಳುತ್ತಲೇ ಬೆಳೆದ ಚಾಪೇಕರ್ ಸಹೋದರರಿಗೆ ತಾವೂ ದೇಶದ ದಾಸ್ಯ ವಿಮುಕ್ತಿಗೆ ಹೋರಾಡಬೇಕೆಂಬ ಕನಸು ಹುಟ್ಟಿತು. ಇಂಗ್ಲಿಷರ ದರ್ಪ ದಬ್ಬಾಳಿಕೆಯ ವಿರುದ್ಧ ಹೋರಾಡಲು ಶರೀರಬಲ ಬೇಕು, ಸಂಘಟನೆ ಬೇಕು ಎಂದು ನಿರ್ಧರಿಸಿದ ಚಾಪೇಕರ್ ಸಹೋದರರು ದಿನನಿತ್ಯ ಕಠಿಣ ವ್ಯಾಯಾಮ ಯೋಗಾಭ್ಯಾಸದಲ್ಲಿ ನಿರತರಾದರು. ಮದುವೆಯಾಗಿ ಮಕ್ಕಳಾಗಿ ಹೊಸ ಜವಾಬ್ದಾರಿಗಳು ಬಂದರೂ ಅವರ ಸ್ವಾತಂತ್ರ್ಯದ ಕನಸು ದೂರಾಗಲಿಲ್ಲ. ಮತ್ತಷ್ಟು ಓದು »

31
ಆಗಸ್ಟ್

ಕಾಶ್ಮೀರದ ಐತಿಹಾಸಿಕ ಸತ್ಯಗಳು : ನಿಲುಮೆ ವಿಚಾರ ಸಂಕಿರಣ

– ಹರೀಶ್ ಆತ್ರೇಯ

14088692_10154596775090649_5386569408904041755_nಕಾಶ್ಮೀರ ವಿವಾದಿತ ಪ್ರದೇಶವೇಕಾಗುತ್ತಿದೆ ಮತ್ತು ಅಲ್ಲಿನ ನಿಜ ಸ್ವರೂಪವೇನು ಎಂಬುದನ್ನು ತಿಳಿಯಲು ನಿಲುಮೆ ತಂಡ ಆಯೋಜಿಸಿದ ಕಾಶ್ಮೀರದ ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು ಎಂಬ ಸಂವಾದ ಕಾರ್ಯಕ್ರಮದಲ್ಲಿನ ಪ್ರೊ. ಪ್ರೇಮಶೇಖರ್ ರವರ ಕೆಲವು ವಿಚಾರಗಳನ್ನು ಹಂಚಿಕೊಳ್ಳುತಿದ್ದೇನೆ..

ಭಾರತದ ವಿಭಜನೆಯಾದಾಗ ಬ್ರಿಟಿಷರು ತಮ್ಮ ನೇರ ಆಡಳಿತಕ್ಕೆ ಒಳಪಟ್ಟ ರಾಜ್ಯಗಳನ್ನು ಭಾರತವೆಂದು ಮತ್ತು ಉಳಿದ ದೇಶೀಯ ಸ್ವತಂತ್ರ್ಯ ಪ್ರಾಂತ್ಯಗಳನ್ನು ಅವುಗಳ ಇಚ್ಚೆಯಂತೆ ಭಾರತದಲ್ಲಾಗಲೀ ಅಥವಾ ಪಾಕೀಸ್ತಾನದಲ್ಲಿಯಾಗಲೀ ಸೇರುವಂತೆ ಹೇಳಲಾಯ್ತು. ಇಂಡಿಯನ್ ಇಂಡಿಪೆಂಡೆನ್ಸ್ ಆಕ್ಟ್ ಪ್ರಕಾರ “British paramount should relapse on the midnight of 14 Aug 1947. ಎಂದರೆ ಸುಮಾರು ಆರುನೂರು ಸ್ಥಳೀಯ ಸಂಸ್ಥಾನಗಳು ಬ್ರಿಟಿಷ್ ಕಾಲನಿಗಳಾಗುವದಕ್ಕೂ ಮುಂಚೆ ಇದ್ದ ರೀತಿಯಲ್ಲಿ ಸ್ವತಂತ್ರ್ಯವಾಗಿರಬಹುದು. ಅಲ್ಲಿನ ಸ್ಥಳೀಯ ನಾಯಕನ (ಆತ ನವಾಬನಾಗಿರಬಹುದು ಅಥವ ಅರಸನಾಗಿರಬಹುದು) ಆತನ ಆಜ್ಞೆ ಅಥವಾ ನಡೆಯಂತೆ ಆ ಸಂಸ್ಥಾನಗಳು ಪಾಕೀಸ್ತಾನದೊಳಗೆ ಅಥವಾ ಭಾರತದೊಳಗೆ ವಿಲೀನವಾಗಬಹುದು. ಅದರ ಜೊತೆಗೆ ಮತ್ತೂ ಒಂದು ಸಲಹೆಯನ್ನು ಬ್ರಿಟಿಷರು ಕೊಡುತ್ತಾರೆ ಅದೇನೆ೦ದರೆ ವಿಲೀನಗೊಳಿಸಿಕೊಳ್ಳುವಾಗ ಆ ಪ್ರಾಂತ್ಯದ ಭೌಗೋಳಿಕ ನೆಲೆ ಮತ್ತು ಪ್ರಜೆಗಳ ಧರ್ಮವನ್ನು ಪರಿಗಣಿಸಿ ಎಂಬುದಾಗಿತ್ತು. ಇದನ್ನು ಕೇಳಿದ ಕಾಶ್ಮೀರ ಮತ್ತು ತಿರುವನಂತಪುರಂ ಸಂಸ್ಥಾನಗಳು ಸ್ವತಂತ್ರ್ಯವಾಗುವ ಯೋಚನೆಯನ್ನು ಮಾಡಿದವು. ಅಂದರೆ ಯಾರ ಆಡಳಿತಕ್ಕೂ ಒಳಪಡದೆ (ಅತ್ತ ಪಾಕೀಸ್ತಾನವೂ ಅಲ್ಲ ಇತ್ತ ಭಾರತವೂ ಅಲ್ಲ) ಸ್ವತಂತ್ರ್ಯವಾಗಿ ರಾಜ್ಯಭಾರ ಮಾಡುವುದು. ಇದು ಪಾಕೀಸ್ತಾನಕ್ಕೆ ಸಮ್ಮತವಾಗಲಿಲ್ಲ. ಏಕೆಂದರೆ PAKISTAN ನಲ್ಲಿನ K ಕಾಶ್ಮೀರವನ್ನ ಸೂಚಿಸುತ್ತೆ. PAKISTAN ಎನ್ನುವುದು ಒಂದು ಪೂರ್ಣ ಹೆಸರಲ್ಲ, ಹಲವು ಸ್ಥಳಗಳ ಅಕ್ಷರಗಳನ್ನು ಸೇರಿಸಿದ ಸಂಕ್ಷಿಪ್ತ ರೂಪ. ಇದನ್ನು ಕೊಡಮಾಡಿದವನು ಲಂಡನ್ನಿನ ವಿದ್ಯಾರ್ಥಿಯಾಗಿದ್ದ  ಚೌದರಿ ರೆಹಮತ್ ಆಲಿ ಮತ್ತು ಪ್ರಕಟಿಸಿದ್ದು ೨೮ ಜನವರಿ ೧೯೩೩ರಂದು ನೌ ಆರ್ ನೆವರ್ ಎಂಬ ಪತ್ರಿಕೆಯಲ್ಲಿ, ಆತನ ಪ್ರಕಾರ ವಾಯುವ್ಯ ಭಾರತವು ಸಾಮಾಜಿಕವಾಗಿ ಮತ್ತು ಧಾರ್ಮಿಕವಾಗಿ ಭಿನ್ನವಾಗಿದೆ ಮತ್ತು ಧಾರ್ಮಿಕವಾಗಿ ಮಧ್ಯ ಏಷಿಯಾಕ್ಕೆ ಮತ್ತು ಪಶ್ಚಿಮ ಏಷಿಯ ಹತ್ತಿರವಾಗಿದೆ, ಆದ ಕಾರಣ ಈ ಭಾಗವನ್ನು ಭಾರತದಿಂದ ಪ್ರತ್ಯೇಕಿಸಿ ಮಧ್ಯ ಏಷಿಯಾದೊಂದಿಗೆ ಸೇರಿಸಿ ಹೊಸತೊಂದು ರಾಷ್ಟ್ರವನ್ನು ಮಾಡಬೇಕು ಎಂಬುದು. ಆತ ಸೇರಿಸಿದ ಪ್ರಾಂತ್ಯಗಳು ಈ ಕೆಳಗಿನಂತಿವೆ. ಮತ್ತಷ್ಟು ಓದು »

31
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 15:
ವಾಸುದೇವ ಬಲವಂತ ಫಡಕೆ:
– ರಾಮಚಂದ್ರ ಹೆಗಡೆ

vasudev-balvant-phadke-stamp1೧೮೫೭ ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ನಂತರ ಭಾರತ ತಣ್ಣಗಾಗಿ ಹೋಗಿದೆ, ಭಾರತೀಯರು ತಮ್ಮ ಗುಲಾಮರಾಗಿದ್ದಾರೆ ಎಂದೇ ಭಾವಿಸಿದ್ದ ಬ್ರಿಟಿಷರಿಗೆ ಭಾರತೀಯರ ಕಿಚ್ಚು ಇನ್ನೂ ಆರಿಲ್ಲ ಎಂದು ತೋರಿಸಿದ ಕ್ರಾಂತಿ ಪುರುಷ, ಸ್ವಾತಂತ್ರ್ಯ ದಧೀಚಿ ವಾಸುದೇವ ಬಲವಂತ ಫಡಕೆ. ಆತನ ಮನೆಯಲ್ಲಿ ಎಲ್ಲವೂ ಇತ್ತು – ಹಣ , ಸುಖ, ಶಾಂತಿ, ನೆಮ್ಮದಿ. ಆದರೆ ದೇಶದಲ್ಲಿ ಇವ್ಯಾವುದೂ ಇಲ್ಲ ಎಂಬ ಕಾರಣಕ್ಕೆ ಆತ ಕ್ರಾಂತಿಗಿಳಿದ. ಚಿಕ್ಕಂದಿನಿಂದಲೇ ಅಜ್ಜ ಹಾಗೂ ತಂದೆಯಿಂದ ದೇಶಭಕ್ತಿಯ ಕಥೆಗಳನ್ನು ಕೇಳುತ್ತಾ ಬೆಳೆದ ವಾಸುದೇವನಿಗೆ ಹೇಗಾದರೂ ಮಾಡಿ ದೇಶವನ್ನು ದಾಸ್ಯಮುಕ್ತಗೊಳಿಸಬೇಕು ಎಂಬ ಹಂಬಲವಿತ್ತು. 1859 ರಲ್ಲಿ ತನ್ನ ಕಾಲೇಜು ಶಿಕ್ಷಣದ ನಂತರ ಆತ ಪುಣೆಯ ಮಿಲಿಟರಿ ಫೈನಾನ್ಸ್ ಕಚೇರಿಯಲ್ಲಿ ಕೆಲಸಕ್ಕೆ ಸೇರಿಕೊಂಡ. ಬ್ರಿಟಿಷ್ ಸರ್ಕಾರದ ಕೆಲಸವಾದರೂ ಒಳಗೊಳಗೇ ಆತನ ಸ್ವಾತಂತ್ರ್ಯದ ಆಸೆ ಬಲಗೊಳ್ಳುತ್ತಲೇ ಇತ್ತು. ಅದೇ ಸಮಯಕ್ಕೆ ವಾಸುದೇವನ ತಾಯಿ ಅನಾರೋಗ್ಯ ಪೀಡಿತರಾದಾಗ ಆತ ಕೆಲಸಕ್ಕೆ ರಜೆ ಕೇಳಿದ, ಬ್ರಿಟೀಷ್ ಅಧಿಕಾರಿಗಳ ಕೃಪಾಕಟಾಕ್ಷದಿಂದ ರಜೆ ದೊರೆಯುವ ವೇಳೆಗೆ ವಾಸುದೇವನ ತಾಯಿ ತೀರಿಕೊಂಡಿದ್ದರು. ತನ್ನ ತಾಯಿಯ ಅಂತಿಮ ದರ್ಶನಕ್ಕೂ ಅವಕಾಶ ನೀಡದ ಬ್ರಿಟಿಷರ ವಿರುದ್ಧ ಸಿಡಿದೆದ್ದ ವಾಸುದೇವ ‘ಇವರು ನನ್ನ ತಾಯಷ್ಟೇ ಅಲ್ಲ, ಭಾರತಮಾತೆಯಿಂದಲೂ ನಮ್ಮನ್ನು ದೂರಮಾಡುತ್ತಿದ್ದಾರೆ’ ಎಂಬ ಭಾವದಿಂದ ಬ್ರಿಟಿಷರ ವಿರುದ್ಧ ತಿರುಗಿ ಬಿದ್ದ. ತನ್ನ ಕೆಲಸಕ್ಕೆ ರಾಜೀನಾಮೆ ನೀಡಿ ಭಾರತೀಯರ ಎಲ್ಲ ಕಷ್ಟಗಳಿಗೆ, ಸಂಕಟಗಳಿಗೆ ಮೂಲ ಕಾರಣ ಗುಲಾಮಗಿರಿಯ ಜೊತೆಗೆ ಶಿಕ್ಷಣದ ಕೊರತೆ ಎಂಬುದನ್ನು ಗುರುತಿಸಿ “ಪೂಣಾ ನೇಟಿವ್ ಇನಿಸ್ಟಿಟ್ಯೂಷನ್ ” ಎಂಬ ವಿದ್ಯಾಕೇಂದ್ರವನ್ನು ಸ್ಥಾಪಿಸಿದ. ಇದೇ ಮುಂದೆ ‘ಮಹಾರಾಷ್ಟ್ರ ಎಜ್ಯುಕೇಷನ್ ಸೊಸೈಟಿ’ ಎಂಬ ಹೆಸರಿನಿಂದ ಭವ್ಯ ಸ್ವರೂಪ ತಾಳಿತು. ಮತ್ತಷ್ಟು ಓದು »

30
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 14:
ಸಂಗೊಳ್ಳಿ ರಾಯಣ್ಣ
– ರಾಮಚಂದ್ರ ಹೆಗಡೆ

Krantiveer Sangolli Rayanna_ Tujhe Salam Salam_ Rashtriya Samaj Paksh_Mahadev Jankar1857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮುನ್ನವೇ ಬ್ರಿಟಿಷ್ ಸಾಮ್ರಾಜ್ಯದ ಎದೆ ನಡುಗಿಸಿದ, ತನ್ನ ಅಪಾರ ಶೌರ್ಯ ಪರಾಕ್ರಮಗಳಿಂದ ಬ್ರಿಟಿಷರಿಗೆ ಸವಾಲಾಗಿ ನಿಂತು ಕ್ರಾಂತಿಯ ರಣಕಹಳೆ ಮೊಳಗಿಸಿದ ಕನ್ನಡ ನಾಡಿನ ಗಂಡುಗಲಿ, ನಮ್ಮೆಲ್ಲರ ಹೆಮ್ಮೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ. ಬಹುತೇಕರಿಗೆ ತಿಳಿಯದ ಅಚ್ಚರಿಯೆಂದರೆ, ನಮ್ಮ ರಾಯಣ್ಣ ಹುಟ್ಟಿದ್ದು ಆಗಸ್ಟ್ 15 ರಂದು ಮತ್ತು ದೇಶಕ್ಕಾಗಿ ಬಲಿದಾನಗೈದದ್ದು ಜನವರಿ 26 (15 ಆಗಸ್ಟ್ 1798 – 26 ಜನವರಿ 1831). ಒಂದು ಸ್ವಾತಂತ್ರ್ಯ ದಿನ, ಮತ್ತೊಂದು ಗಣರಾಜ್ಯ ದಿನ, ಎರಡೂ ದಿನಗಳೂ ಭಾರತೀಯರ ಪಾಲಿಗೆ ಅವಿಸ್ಮರಣೀಯ ದಿನಗಳು. ಬ್ರಿಟಿಷರ ದಬ್ಬಾಳಿಕೆಯನ್ನು ಮೆಟ್ಟಿ ನಿಂತು ಕೆಚ್ಚೆದೆಯಿಂದ ಅವರ ವಿರುದ್ಧ ಸಮರ ಸಾರಿದ ಕನ್ನಡದ ವೀರವನಿತೆ ಕಿತ್ತೂರ ರಾಣಿ ಚೆನ್ನಮ್ಮಳ ಬಲಗೈ ಬಂಟ ರಾಯಣ್ಣ. ತನ್ನವರದೇ ಮೋಸಕ್ಕೆ ಒಳಗಾಗಿ ಚೆನ್ನಮ್ಮ ಬ್ರಿಟಿಷರ ಸೆರೆಗೆ ಸಿಕ್ಕಾಗ ಕಿತ್ತೂರಿನ ಪರವಾಗಿ ಕ್ರಾಂತಿ ಕಹಳೆ ಮೊಳಗಿಸಿದ ಗಂಡುಗಲಿ. ಮತ್ತಷ್ಟು ಓದು »

29
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 13
ವೀರಪಾಂಡ್ಯ ಕಟ್ಟಬೊಮ್ಮನ್
– ರಾಮಚಂದ್ರ ಹೆಗಡೆ

Veerapandiya_Kattabomman_postage_stampಈಸ್ಟ್ ಇಂಡಿಯಾ ಕಂಪನಿ ಭಾರತಕ್ಕೆ ಆಗಮಿಸಿ ತನ್ನ ಬೇರು ಬಿಡಲು ಆರಂಭಿಸಿದ ದಿನಗಳಲ್ಲೇ ಅವರ ವಿರುದ್ಧ ಸಿಡಿದೆದ್ದು ಅವರಿಗೆ ಸೆಡ್ಡು ಹೊಡೆದು ನೇಣು ಶಿಕ್ಷೆಗೆ ಗುರಿಯಾದ ಅಪ್ರತಿಮ ಹೋರಾಟಗಾರ ವೀರಪಾಂಡ್ಯ ಕಟ್ಟಬೊಮ್ಮನ್. ಬ್ರಿಟಿಷರು ಭಾರತದಲ್ಲಿ ಭದ್ರವಾಗಿ ನೆಲೆಯೂರಿದ ತಕ್ಷಣ ತಮ್ಮ ದಬ್ಬಾಳಿಕೆಯನ್ನು ಆರಂಭಿಸಿದರು. ಸಣ್ಣ ಪುಟ್ಟ ರಾಜರುಗಳಿಗೆ ಕಿರುಕುಳ ನೀಡುತ್ತಾ ಅಧಿಕಾರ ಚಲಾಯಿಸಲು ಶುರುಮಾಡಿದರು. ಹೆಚ್ಚು ಹೆಚ್ಚು ತೆರಿಗೆ ವಿಧಿಸಿದರು. ಅವರ ಕಿರುಕುಳ ಸಹಿಸಲಾರದ ಬಹು ಮಂದಿ ರಾಜರುಗಳು ಅವರ ಅಡಿಯಾಳುಗಳಾದರು. ಆದರೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಪಾಂಚಾಲಂಕುರುಚ್ಚಿಯ ಪಾಳೆಯಗಾರ ವೀರಪಾಂಡ್ಯ ಕಟ್ಟಬೊಮ್ಮನ್ ಮಾತ್ರ ಅವರೆದುರು ಬಗ್ಗಲಿಲ್ಲ. ಪಾಂಚಾಲಂಕುರುಚ್ಚಿಯ ಸುತ್ತಮುತ್ತಲಿನ ಪ್ರದೇಶಕ್ಕೆ ಮ್ಯಾಕ್ಸ್‌ವೆಲ್ ಎಂಬಾತ ಆಗಿನ ಕಂಪೆನಿಯ ಅಧಿಕಾರಿ. ಬ್ರಿಟಿಷ್ ಸರ್ಕಾರಕ್ಕೆ ತೆರಿಗೆ ಕಟ್ಟಲು ಹಲವು ಬಾರಿ ನೋಟೀಸ್ ಕಳಿಸಿದರೂ ವೀರಪಾಂಡ್ಯ ಅದಕ್ಕೆ ಸೊಪ್ಪು ಹಾಕಲಿಲ್ಲ. ಇದನ್ನರಿತ ಮ್ಯಾಕ್ಸ್‌ವೆಲ್ ಬೊಮ್ಮುವಿಗೆ ಹಲವಾರು ಬೆದರಿಕೆ ಪತ್ರಗಳನ್ನು ಬರೆದ. ‘ಕಪ್ಪ ಸಲ್ಲಿಸಿ, ಇಲ್ಲದಿದ್ದರೆ ಯುದ್ಧಕ್ಕೆ ಬರುತ್ತೇವೆ’ ಎಂದು ಹೆದರಿಸಿದ. ‘ನಾವೀ ಮಣ್ಣಿನ ಮಕ್ಕಳು. ಇದು ನಮ್ಮ ಭೂಮಿತಾಯಿ. ನಾವು ಘನತೆ ಗೌರವಗಳಿಂದ ಬಾಳುವವರು. ನಮ್ಮ ಭೂಮಿಯ ಮರ್ಯಾದೆಯ ಸಲುವಾಗಿ ನಾವು ಪ್ರಾಣ ನೀಡುವೆವೇ ಹೊರತು ವಿದೇಶಿ ಶತ್ರುಗಳಿಗೆ ತಲೆಬಾಗುವುದಿಲ್ಲ. ಬನ್ನಿ ಹೋರಾಡೋಣ’ ಎಂದು ವೀರಪಾಂಡ್ಯ ಯುದ್ಧಕ್ಕೆ ಆಹ್ವಾನ ನೀಡಿದ. ಮತ್ತಷ್ಟು ಓದು »

28
ಆಗಸ್ಟ್

ಅರ್ಧ ನಿಮಿಷದ ಅಂತರದಲ್ಲಿ ಕಂಚು ಕೈತಪ್ಪಿತು!

– ರೋಹಿತ್ ಚಕ್ರತೀರ್ಥ

Manish Singh Rawat 2ನಸುಕಿನ ನಾಲ್ಕು ಗಂಟೆ. ಬದರಿನಾಥದ ಗಡಗಡ ಚಳಿಯಲ್ಲೂ ಇಪ್ಪತ್ತನಾಲ್ಕರ ಯುವಕನೊಬ್ಬ ಅಲಾರಂ ಇಲ್ಲದೆ ದಡ್ಡನೆದ್ದು ಕೂತಿದ್ದಾನೆ. ಒಂದೇ ಒಂದು ನಿಮಿಷವನ್ನು ವ್ಯರ್ಥ ಮಾಡದೆ; ಉದಾಸೀನವೆಂದು ಮತ್ತೆ ರಗ್ಗುಹೊದ್ದು ಮಲಗದೆ; ಅಯ್ಯಯ್ಯಪ್ಪ ಥಂಡಿ ಎಂದು ನೆಪ ಹೇಳದೆ ಎದ್ದು ಮುಖಪ್ರಕ್ಷಾಲನ ಮಾಡಿ ತನ್ನ ಎಂದಿನ ತೆಳು ಸಡಿಲ ಅಂಗಿ ತೊಟ್ಟು, ಕಾಲುಗಳಿಗೆ ಶೂ ಧರಿಸಿ ಮನೆಯಿಂದ ಹೊರಬಿದ್ದಿದ್ದಾನೆ. ಮೊದಲು ಅಂಗಳ, ಬೀದಿ, ಕೇರಿ ಎನ್ನುತ್ತ ಕೊನೆಗೆ ಬದರಿಯ ಮುಖ್ಯರಸ್ತೆಗಳಲ್ಲಿ ಅವನ ಪಯಣ ಸಾಗಿದೆ. ಅತ್ತ ನಡಿಗೆಯೆನ್ನಲಾಗದ ಇತ್ತ ಓಟ ಎನ್ನಲೂ ಬಾರದ ವಿಚಿತ್ರವಾದೊಂದು ಗತಿಯಲ್ಲಿ ಅವನ ಚಲನೆಯಿದೆ. ಬಾತುಕೋಳಿಯೊಂದು ತನ್ನ ಇಕ್ಕೆಲಗಳನ್ನು ಬಾಗಿಸುತ್ತ ಬಳುಕಿಸುತ್ತ ಪುತುಪುತು ನಡೆದಂತೆ ತನ್ನ ಇಡೀ ಮೈಯನ್ನು ರಬ್ಬರಿನ ಕೋಲಿನಂತೆ ಅತ್ತಿತ್ತ ಬಾಗಿಸುತ್ತ ಅವನು ನಡೆಯುವುದನ್ನು ಬೆಳಗ್ಗೆ ಪೇಪರು, ಹಾಲು ತರಲು ಹೊರಟವರು ಕ್ಷಣಕಾಲ ನಿಂತು ವಿಸ್ಮಯದಿಂದ ನೋಡುತ್ತಾರೆ. ಬದರಿಗೆ ಪ್ರವಾಸಿಗಳಾಗಿ ಬಂದವರು ಇವನ ನೃತ್ಯದಂಥ ನಡಿಗೆಯೋಟ ಕಂಡು ಮುಸಿಮುಸಿ ನಗುತ್ತಾರೆ. ಇನ್ನು ಕೆಲವರು ಇಂಥದೊಂದು ದೃಶ್ಯ ಮತ್ತೆ ಜನ್ಮದಲ್ಲಿ ಸಿಕ್ಕದೇನೋ ಎಂಬಂತೆ ತಮ್ಮ ಕ್ಯಾಮೆರಾ, ಮೊಬೈಲುಗಳಲ್ಲಿ ಆತನನ್ನು ದಾಖಲಿಸಿಕೊಳ್ಳುತ್ತಾರೆ. ಇದ್ಯಾವುದರ ಪರಿವೆಯೂ ಇಲ್ಲದೆ; ದೊಗಳೆ ಬನಿಯನ್ನು ಬೆವರಿಂದ ತೊಯ್ದು ತೊಪ್ಪೆಯಾದ್ದನ್ನೂ ಲೆಕ್ಕಿಸದೆ ಆ ತರುಣ ಓಡಿಯೇ ಓಡಿದ್ದಾನೆ. ಸುತ್ತಲಿನ ಜಗತ್ತು ಅವನ ಪಾಲಿಗೆ ನಗಣ್ಯ. ನಡಿಗೆಯ ದಾರಿ ಬಿಟ್ಟರೆ ಮಿಕ್ಕಿದ್ದೇನೂ ಈ ಜಗತ್ತಿನಲ್ಲಿ ಅಸ್ತಿತ್ವದಲ್ಲೇ ಇಲ್ಲವೆಂಬಂತೆ ಏಕಾಗ್ರಚಿತ್ತದಿಂದ ಹೋಗುತ್ತಿರುವ ಆ ಯುವಕನ ಕಣ್ಮುಂದೆ ಅತ್ತಿತ್ತ ಕದಲದೆ ನಿಶ್ಚಲವಾಗಿ ನಿಂತುಬಿಟ್ಟಿರುವುದೊಂದೇ – ರಿಯೋ ಒಲಿಂಪಿಕ್ಸ್‍ನ ಪದಕ! ಮತ್ತಷ್ಟು ಓದು »