ವಿಷಯದ ವಿವರಗಳಿಗೆ ದಾಟಿರಿ

Recent Articles

27
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 12
ಅಲ್ಲೂರಿ ಸೀತಾರಾಮರಾಜು
– ರಾಮಚಂದ್ರ ಹೆಗಡೆ

Alluri-Sitarama-Rajuಭಾರತದ ಸ್ವಾತಂತ್ರ್ಯಕ್ಕಾಗಿ, ಆದಿವಾಸಿ ಗುಡ್ಡಗಾಡು ಜನಾಂಗಗಳ ಹಕ್ಕುಗಳಿಗೆ ತನ್ನ ಪ್ರಾಣವನ್ನು ತೆತ್ತ ಕ್ರಾಂತಿಕಾರಿ ಹೋರಾಟಗಾರ, ಭಾರತದ ನೆಲದಲ್ಲಿ ತಮ್ಮದೇ ಆದ ಇತಿಹಾಸ ಮತ್ತು ಸಂಸ್ಕೃತಿಯನ್ನು ಕಾಪಾಡಿಕೊಂಡು ಬಂದಿರುವ, ಈ ನೆಲದ ನಿಜ-ವಾರಸುದಾರರೆಂದು ಹೇಳಲಾಗುವ ಆದಿವಾಸಿಗಳ ಹಕ್ಕು ಕುರಿತಂತೆ ಈ ದೇಶದಲ್ಲಿ ಪ್ರಥಮ ಬಾರಿಗೆ ಧ್ವನಿ ಎತ್ತಿದ್ದು ಆಂಧ್ರ ಪ್ರದೇಶದ ಉತ್ತರ ತೆಲಂಗಾಣದ ಅಲ್ಲೂರಿ ಸೀತಾರಾಮ ರಾಜು ಎಂಬ ಒಬ್ಬ ಅಪ್ರತಿಮ ನಾಯಕ ಮತ್ತು ದೇಶಭಕ್ತ. ಇಂದಿನ ಬಸ್ತಾರ್ ಅರಣ್ಯ ಪ್ರದೇಶವೆಂದು ಕರೆಯುವ ಆಂಧ್ರ ಗಡಿ ಭಾಗದ ಅರಣ್ಯ ಸೇರಿದಂತೆ ಮಧ್ಯಪ್ರದೇಶ, ಒಡಿಶಾ, ಆಂಧ್ರದ ಗಡಿಭಾಗದ ಅರಣ್ಯದಲ್ಲಿ ವಾಸವಾಗಿರುವ ಚೆಂಚು ಎಂಬ ಬುಡಕಟ್ಟು ಜನಾಂಗದ ಪರವಾಗಿ ೧೯೨೦ರ ದಶಕದಲ್ಲಿ ಬ್ರಿಟಿಷರ ವಿರುದ್ಧ ಪ್ರಥಮ ಬಾರಿಗೆ ಧ್ವನಿ ಎತ್ತಿ ಹೋರಾಡಿ ಅವರಿಂದ ಅಮಾನುಷವಾಗಿ ಹತ್ಯೆಯಾದ ಹುತಾತ್ಮ ಮತ್ತು ಸ್ವಾತಂತ್ರ್ಯ ಹೋರಾಟಗಾರ ಈ ಅಲ್ಲೂರಿ ಸೀತಾರಾಮ ರಾಜು. ಇವರ ತಂದೆ ವೆಂಕಟರಾಮರಾಜು ಮಹಾ ದೇಶಭಕ್ತರಾಗಿದ್ದರಿಂದ ಮಗನಿಗೆ ದೇಶಭಕ್ತಿಯ ಮೊದಲ ಪಾಠ ಅವರಿಂದಲೇ ನಡೆಯಿತು. ಮತ್ತಷ್ಟು ಓದು »

27
ಆಗಸ್ಟ್

ಉಪನಿಷತ್ ವಾಙ್ಮಯ 2: ಆಮಿಷ ಒಡ್ಡದೆ ಉತ್ತರಿಸು; ಅರಿವಿನ ಮಟ್ಟವನೆತ್ತರಿಸು!

– ಸ್ವಾಮಿ ಶಾಂತಸ್ವರೂಪಾನಂದ
ಉಪನಿಷತ್ ವಾಙ್ಮಯ :- ಉಪನಿಷತ್ ವಾಙ್ಮಯ 1

yama_nachiketaನಚಿಕೇತ ಯಮಸದನಕ್ಕೆ ಹೋದ. ಅಲ್ಲಿ ಮೂರು ದಿನ ಕಾದ. ಭೂಮಿಯಿಂದ ಸೂಕ್ಷ್ಮದೇಹಿಯಾಗಿ ಮೃತ್ಯುವಿನ ಲೋಕಕ್ಕೆ ಹೋಗುತ್ತಿರುವಾಗ ಅವನು ಒಬ್ಬನೇ ಇದ್ದದ್ದಲ್ಲ. ಅವನ ಮುಂದೆ ಸಾವಿರಾರು ಜನ, ಹಿಂದೆ ಸಾವಿರಾರು ಜನ ಸಾಗರದ ರೀತಿಯಲ್ಲಿ ಹೋಗುತ್ತಿದ್ದರಂತೆ. ಅವರೆಲ್ಲರೂ ಯಾವಾವುದೋ ಕಾರಣಕ್ಕೆ ತೀರಿಕೊಂಡರು. ಬದುಕಿನ ಯಾತ್ರೆ ಮುಗಿಸಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡವರು. ಭೂಮಿಯ ಮೇಲಿನ ವ್ಯವಹಾರಗಳನ್ನು ಮುಗಿಸಿ ಪರಲೋಕಕ್ಕೆ ಹೊರಟವರು. ಇಲ್ಲಿ ನಾವು ಉಪನಿಷತ್‍ಕಾರನ ಲೋಕಪ್ರಜ್ಞೆಯನ್ನು ಗಮನಿಸಬೇಕು. ಕತೆ ಕೇವಲ ನಚಿಕೇತ ಮತ್ತು ಯಮನ ಮಾತುಕತೆಯ ಸುತ್ತ ಸುತ್ತುವುದಾದರೂ ಉಪನಿಷತ್‍ಕಾರ ಇವೆಲ್ಲ ಸಣ್ಣಸಣ್ಣ ವಿವರಗಳನ್ನು ಕೂಡ ನಮ್ಮ ಕಣ್ಮುಂದೆ ತಂದು ಬೆಚ್ಚಿಬೀಳಿಸುತ್ತಾನೆ. ಭೂಮಿಯಲ್ಲಿ ಪ್ರತಿಕ್ಷಣದಲ್ಲೂ ನೂರಾರು ಜೀವಗಳು ಕೈಕಾಲು-ಪಪ್ಪುಸಗಳ ಕಾರ್ಯ ನಿಲ್ಲಿಸಿ ನಿಶ್ಚೇಷ್ಟಿತವಾಗುತ್ತಲೇ ಇರುತ್ತವೆ; ಪ್ರತಿ ನಿಮಿಷದಲ್ಲೂ ಅಸಂಖ್ಯಾತ ಜನರು ಮೃತ್ಯುವಿಗೆ ಪಕ್ಕಾಗುತ್ತಲೇ ಇರುತ್ತಾರೆ ಎಂಬ ಎಚ್ಚರಿಕೆಯನ್ನು ಓದುಗನಿಗೆ ಅದುಹೇಗೆ ಉಪನಿಷತ್ ದಾಟಿಸುತ್ತದೆ ನೋಡಿ! ಇಂಥ ನೂರಾರು ಜೀವರ ನಡುವಿನಲ್ಲಿ ನಚಿಕೇತನೂ ಇದ್ದ. ಅವನಿಗೆ ಭೂಲೋಕವನ್ನು ಬಿಟ್ಟು ಬಂದೆನಲ್ಲಾ ಎಂಬ ಚಿಂತೆಯೂ ಇರಲಿಲ್ಲ; ದೇವರ ಲೋಕ ಸೇರುವ ದಾರಿಯಲ್ಲಿದ್ದೇನೆಂಬ ಸಂತೋಷವೂ ಇರಲಿಲ್ಲ. ದುಃಖ ಸಂತೋಷಗಳಿಲ್ಲದ ಒಂದು ವಿಚಿತ್ರ ಸ್ಥಿತಿಯಲ್ಲಿ ಅವನು ಯಮಪುರಿಗೆ ಹೋದ. ಮತ್ತಷ್ಟು ಓದು »

26
ಆಗಸ್ಟ್

ಬ್ರಹ್ಮರ್ಷಿ ನಾರಾಯಣ ಗುರುಗಳ ಮೇಲೇಕೆ ಬೌದ್ಧಿಕ ವಿಧ್ವಂಸಕರ ವಕ್ರದೃಷ್ಟಿ?

– ಸಂತೋಷ್ ತಮ್ಮಯ್ಯ
narayanaguru-24-1472006537ಕೆಲವರ್ಷಗಳ ಹಿಂದೆ ಉತ್ತರ ಭಾರತದ ಎಲ್ಲೋ ಬಾಂಬ್ ಸ್ಪೋಟಿಸಿದವರನ್ನು ಹಿಡಿಯಲು ಭಯೋತ್ಪಾದನಾ ನಿಗ್ರಹ ದಳ ಮಂಗಳೂರಿಗೆ ಆಗಮಿಸಿತ್ತು. ಭಯೋತ್ಪಾದಕರು ತಲೆಮರೆಸಿಕೊಂಡಿದ್ದಾರೆ ಎನ್ನಲಾದ ಉಲ್ಲಾಳ ಪ್ರದೇಶದ ಒಂದು ಊರೊಳಗೂ ಅವರು ನುಗ್ಗಿ ಭಯೋತ್ಪಾದಕರನ್ನೂ ಹಿಡಿದಿದ್ದರು. ಆದರೆ ಭಯೋತ್ಪಾದನಾ ನಿಗ್ರಹ ದಳವೆಂಬ ಚಾಲಾಕಿಗಳ ತಂಡವನ್ನು ಸ್ಥಳೀಯರು ಊರಿಂದ ಜಪ್ಪಯ್ಯ ಎಂದರೂ ಹೊರಹೋಗಬಿಡಲಿಲ್ಲ. ಜನರು ಕಾಶ್ಮೀರದಲ್ಲಿ ಕಲ್ಲೆಸೆಯುವವರಂತೆ ಅಧಿಕಾರಿಗಳಿದ್ದ ಕಾರುಗಳತ್ತ ಕಲ್ಲೆಸೆದರು, ಟಯರುಗಳನ್ನು ಸುಟ್ಟು ರಸ್ತೆಗೆಸೆದರು. ಹೀಗೆ ಮಾಡಿದವರೇನೂ ಬಾಂಗ್ಲಾ ವಲಸಿಗರಲ್ಲ. ಲಷ್ಕರ್ ತೊಯಿಬಾದವರಲ್ಲ. ಎಲ್ಲರೂ ಕರಾವಳಿಯ ಬ್ಯಾರಿಗಳೆಂಬ ಸ್ಥಳೀಯ ಮುಸ್ಲಿಮರು. ಶಂಕಿತ ಭಯೋತ್ಪಾದಕನೂ ತಮ್ಮಂತೆ ಒಬ್ಬ ಮುಸಲ್ಮಾನ ಎಂಬ ಒಂದೇ ಒಂದು ಕಾರಣಕ್ಕೆ ಸ್ಥಳೀಯರು ಹಾಗೆ ವರ್ತಿಸಿದ್ದರು. ಆದರೂ ನಮ್ಮಲ್ಲಿ ಭಯೋತ್ಪಾದನೆಗೆ ಧರ್ಮವಿಲ್ಲ! ವಿಚಿತ್ರವೆಂದರೆ ಆಗ ಕರಾವಳಿಯ ರಕ್ಷಕರೆಂಬಂತೆ ವರ್ತಿಸುವ ಮಂಗಳೂರಿನ ಸಮಸ್ತ ಬುದ್ಧಿಜೀವಿಗಳು, ಬಾಂಬುಗಳನ್ನೇ ಅಕ್ಷರಗಳಾಗಿ ಬರೆಯುವವರಾರೂ ‘ಬ್ಯಾರಿಗಳು ಬಲ್ಲವರಾಗಬೇಕು’ ಎಂದು ತಲೆಕೆಟ್ಟವರಿಗೆ ಬುದ್ಧಿಹೇಳಲಿಲ್ಲ. ಮತ್ತಷ್ಟು ಓದು »

26
ಆಗಸ್ಟ್

ಜಮ್ಮು-ಕಾಶ್ಮೀರ : ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು

IMG-20160824-WA0001 copy28th ಆಗಸ್ಟ್,ಅಂದರೆ ಮುಂದಿನ ಭಾನುವಾರದ ಬೆಳಗ್ಗೆ 10.30 -1.30 ವರೆಗಿನ ಸಮಯ “ನಿಲುಮೆ ಬಳಗ”ದ ಜೊತೆ ಮೀಸಲಿಡಿ…

(ಸ್ಥಳ : ಮಿಥಿಕ್ ಸೊಸೈಟಿ, ನೃಪತುಂಗ ರಸ್ತೆ, opp RBI,ಬೆಂಗಳೂರು)

ಕಳೆದ ಕೆಲವು ದಿನಗಳಿಂದ “ಕಾಶ್ಮೀರ” ಸಮಸ್ಯೆಯ ಬಗ್ಗೆ ದೇಶದ ವಿವಿಧ ನಗರಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿ ಭಾರತ ವಿರೋಧಿ ಮನಸ್ಥಿತಿಯನ್ನು ಉತ್ತೇಜಿಸುವ ವಿಧ್ವಂಸಕ ಕೆಲಸ ನಡೆಯುತ್ತಿದೆ.ದೇಶ ವಿರೋಧಿ ಕೂಗುಗಳು,ಸುಳ್ಳು ಇತಿಹಾಸದ ವೈಭವೀಕರಣವಾಗುತ್ತಿರುವ ಈ ಸಮಯದಲ್ಲಿ ರಾಷ್ಟ್ರೀಯ ಹಿತಾಸಕ್ತಿಗೆ ಬದ್ಧವಾಗಿ,ಜನ ಸಾಮಾನ್ಯರಿಗೆ ಮತ್ತು ಯುವ ಜನತೆಗೆ ಸತ್ಯವೇನು ಎಂದು ತಿಳಿಸಬೇಕಾದದ್ದು ಜವಬ್ದಾರಿಯುತ ಸಮೂಹವಾಗಿ ನಮ್ಮ ಕರ್ತ್ಯವ್ಯ.

“ಜಮ್ಮು-ಕಾಶ್ಮೀರ : ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು” ಎಂಬ ಶೀರ್ಷಿಕೆಯಡಿಯಲ್ಲಿ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮವನ್ನು “ನಿಲುಮೆ ಬಳಗ” ಆಯೋಜಿಸುತ್ತಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು, ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾದ ಶ್ರೀ.ಶಂಕರ ಬಿದರಿಯವರು ಮಾಡಲಿದ್ದಾರೆ.

ಜಮ್ಮು ಕಾಶ್ಮೀರದ ಐತಿಹಾಸಿಕ ಸತ್ಯಗಳ ಬಗ್ಗೆ ವಿಜಯವಾಣಿಯ ಅಂಕಣಕಾರರು ಮತ್ತು ಅಂತರಾಷ್ಟ್ರೀಯ ವಿದ್ಯಾಮಾನಗಳ ವಿಶ್ಲೇಷಕರಾದ ಶ್ರೀ ಪ್ರೇಮಶೇಖರ ಅವರು ಬೆಳಕು ಚೆಲ್ಲಲ್ಲಿದ್ದಾರೆ.

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ವೀರ ಸೇನಾನಿ ಕ್ಯಾಪ್ಟನ್ ನವೀನ್ ನಾಗಪ್ಪ ಅವರು ಕಾರ್ಗಿಲ್ ಯುದ್ಧದ ಅನುಭವಗಳು, ಸ್ಥಳೀಯರು ಮತ್ತು ಯೋಧರ ಬಾಂಧವ್ಯಗಳ ಬಗ್ಗೆ ಬೆಳಕಲು ಚೆಲ್ಲಲ್ಲಿದ್ದಾರೆ.

ಸುಳ್ಳುಗಳಿಂದ ಆಜಾದಿ ಪಡೆಯಲು ಬರ್ತೀರಲ್ವಾ?

Event Link : https://www.facebook.com/events/288173218211336/?ti=icl
ನಿಮ್ಮೊಲುಮೆಯ,
ನಿಲುಮೆ ಬಳಗ

25
ಆಗಸ್ಟ್

ಭಾಮಿನಿ ಷಟ್ಪದಿಯಲ್ಲಿ ಭಗವಾನ್ ಶ್ರೀಧರ ಸ್ವಾಮಿಗಳ ಚರಿತ್ರೆ

– ಗುರುಪ್ರಸಾದ್ ಕೆ ಕೆ.
ಶ್ರೀಧರಭಾಮಿನಿಧಾರೆ ೧-೫

1)
ಮನೆಯ ದೇವರು ಹರಿಯ ನೆನೆಯುತ
ಮನದ ದೇವರು ಗುರುವರರ ನಾ
ಅನುಮತಿಯ ಬೇಡುತ ಪ್ರಾರಂಭಿಸುವೆ ಕಾವ್ಯವನೂ||
ತನುವು ಕೇವಲ ನಿಮ್ಮ ಆಣತಿ
ಯನೂ ನಡೆಸುವ ಪಾದಸೇವಕ
ಅನುದಿನವು ಭಜಿಸುವೆ ನಿಮ್ಮನು ಹರಸಿ ಭಕ್ತನನೂ||

ತಾತ್ಪರ್ಯ : ನನ್ನ ಮನೆದೇವರಾದ ವೆಂಕಟರಮಣನನ್ನು ಮನದಲ್ಲಿ ಧ್ಯಾನಿಸಿ, ಮನದ ದೇವರಾದ ಗುರು ಶ್ರೀಧರ ಸ್ವಾಮಿಗಳಲ್ಲಿ ಅನುಮತಿಯನ್ನು ಬೇಡುತ್ತಾ, ಬರೆಯಲು ಹೊರಟಿರುವ ಕಾವ್ಯರತ್ನಕ್ಕೆ ಯಶ ಸಿಗಲೆಂದು ಪ್ರಾರ್ಥಿಸಿಕೊಳ್ಳುತ್ತಿದ್ದೇನೆ. ಈ ದೇಹವು ನಿಮ್ಮ ಆಜ್ಞೆಯನ್ನು ಪರಿಪಾಲಿಸುವ ಪಾದ ಸೇವಕ ಮಾತ್ರವೇ ಆಗಿದೆ. ಪ್ರತಿದಿನ, ಪ್ರತಿಕ್ಷಣವೂ ನಿಮ್ಮ ಗುಣಗಾನ ಮಾಡುತ್ತಾ ಇರುವಂತಾಗಲೆಂದು ನೀವು ನನಗೆ ಆಶೀರ್ವದಿಸಿ ಎಂದು ಪ್ರಾರ್ಥಿಸಿಕೊಳ್ಳುತ್ತಿದ್ದೇನೆ. ಮತ್ತಷ್ಟು ಓದು »

25
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 11
ಸೋದರಿ ನಿವೇದಿತಾ (ಮಾರ್ಗರೇಟ್ ಎಲಿಜಬೆತ್ ನೊಬೆಲ್)
– ರಾಮಚಂದ್ರ ಹೆಗಡೆ

220px-Sœur_Niveditaವಿದೇಶಿ ನೆಲದಲ್ಲಿ ಹುಟ್ಟಿ ಭಾರತದ ಸೇವೆಗೆ ತನ್ನ ಅರ್ಪಿಸಿಕೊಂಡ, ಭಾರತಕ್ಕಾಗಿಯೇ ತನ್ನ ಪೂರ್ತಿ ಜೀವನ ಅರ್ಪಿಸಿದ ಐರ್ಲೆಂಡ್ ದೇಶದ ಹೆಣ್ಣುಮಗಳು ಮಾರ್ಗರೇಟ್ ಎಲಿಜಬೆತ್ ನೊಬೆಲ್. ಸ್ವಾಮಿ ವಿವೇಕಾನಂದರ ಭಾಷಣ ಹಾಗೂ ಚಿಂತನೆಗಳ ಪ್ರಭಾವಕ್ಕೆ ಒಳಗಾಗಿ ಭಾರತದೆಡೆಗೆ ಆಕರ್ಷಿತರಾದ ಮಾರ್ಗರೇಟ್ ಸ್ವಾಮಿ ವಿವೇಕಾನಂದರಿಂದ ಬ್ರಹ್ಮಚರ್ಯ ಹಾಗೂ ಸೇವೆಯ ದೀಕ್ಷೆ ಪಡೆದು ‘ಸೋದರಿ ನಿವೇದಿತಾ’ ಆದರು. ಬಾಲ್ಯದಿಂದಲೇ ಆಧ್ಯಾತ್ಮದ ಸೆಳೆತ ಹೊಂದಿದ್ದ ಮಾರ್ಗರೇಟ್ ನೊಬೆಲ್ಲರಿಗೆ ಲಂಡನ್ನಿನಲ್ಲಿ ಸ್ವಾಮಿ ವಿವೇಕಾನಂದರ ದರ್ಶನವಾಯಿತು. ಭಾರತೀಯ ಧರ್ಮ, ಸಂಸ್ಕೃತಿ, ವೇದ ಉಪನಿಷತ್ತುಗಳ ಕುರಿತ ಅವರ ಚಿಂತನೆಗಳಿಂದ ಮಂತ್ರಮುಗ್ಧರಾದ ಆಕೆ ಅವರನ್ನೇ ತನ್ನ ‘ಗುರುದೇವ’ ರೆಂದು ಸ್ವೀಕರಿಸಿದರು. ಭಾರತೀಯ ಚಿಂತನೆಗಳ ಅಧ್ಯಯನದಲ್ಲಿ ತೊಡಗಿದ ಆಕೆಗೆ ಭಾರತವನ್ನು ಕಾಣುವ ಹೆಬ್ಬಯಕ್ಕೆ ಹುಟ್ಟಿತು. ಸ್ವಾಮೀಜಿ ಅವರೊಂದಿಗೆ ನಿರಂತರವಾಗಿ ಪತ್ರ ಸಂಪರ್ಕದಲ್ಲಿದ್ದ ಅವರಿಗೆ ಒಮ್ಮೆ ಸ್ವಾಮೀಜಿ ಹೀಗೆ ಬರೆದರು: “ನನ್ನ ದೇಶದ ಸ್ತ್ರೀಯರಿಗೆ ವಿದ್ಯಾಭ್ಯಾಸ ಕೊಡುವ ಅಗತ್ಯ ತುಂಬಾ ಇದೆ. ಅದಕ್ಕೆ ತಕ್ಕ ಯೋಜನೆಗಳನ್ನು ಹಾಕುತ್ತಿದ್ದೇನೆ. ನಿನ್ನಿಂದ ನನಗೆ ತುಂಬಾ ಸಹಾಯವಾದೀತು. ಇಲ್ಲಿ ನಿನಗಾಗಿ ಸಹಸ್ರಾರು ಮಹಿಳೆಯರು ಕಾಯುತ್ತಿದ್ದಾರೆ.” ಎಂದು ಬರೆದರು. ಈ ಕರೆಗೆ ಓಗೊಟ್ಟ ಮಾರ್ಗರೆಟ್ ಭಾರತಕ್ಕೆ ಬಂದು ಇಲ್ಲಿಯ ಸ್ತ್ರೀಯರ ಅನಕ್ಷರತೆ, ಅಜ್ಞಾನಗಳನ್ನು ತೊಡೆದು ಅವರ ಸರ್ವಾಂಗೀಣ ಉದ್ಧಾರಕ್ಕೆ ತೊಡಗಬೇಕೆಂಬ ನಿರ್ಧಾರವನ್ನು ಮನದಾಳದಿಂದ ಕೈಗೊಂಡರು. ಮತ್ತಷ್ಟು ಓದು »

24
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 10
ಹಲಗಲಿಯ ಬೇಡರು
– ರಾಮಚಂದ್ರ ಹೆಗಡೆ
bedaಬ್ರಿಟಿಷ್ ಸರ್ಕಾರದ ದೌರ್ಜನ್ಯ ದೇಶದಾದ್ಯಂತ ಆವರಿಸಿದ್ದ ಕಾಲ. ಅದಕ್ಕೆ ಉತ್ತರವಾಗಿ 1857 ರಲ್ಲಿ ದೇಶದ ವಿವಿದೆಡೆಗಳಲ್ಲಿ ಪ್ರಖರ ಹೋರಾಟ ಆರಂಭವಾಯಿತು. 1857 ರ ನವೆಂಬರ್ ನಲ್ಲಿ ಆಂಗ್ಲ ಸರ್ಕಾರ ‘ನಿಶ್ಶಸ್ತ್ರೀಕರಣ ಕಾನೂನನ್ನು’ ಜಾರಿಗೆ ತಂದು ದೇಶದ ಯಾರೂ ತಮ್ಮ ಬಳಿ ಯಾವುದೇ ಶಸ್ತ್ರಗಳನ್ನು ಹೊಂದುವಂತಿಲ್ಲ ಎಂಬ ಕರಾಳ ನಿಯಮವನ್ನು ಹೇರಿತು. ಅದರ ಪ್ರಕಾರ ಎಲ್ಲರೂ ತಮ್ಮಲ್ಲಿದ್ದ ಶಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕಾಯ್ತು. ಆದರೆ ಬೇಡರಿಗೆ ಆಯುಧಗಳೇ ಜೀವನೋಪಾಯದ ಆಧಾರಗಳು. ಹಾಗಾಗಿ ಆಯುಧಗಳನ್ನು ಹಿಂತಿರುಗಿಸುವುದಿಲ್ಲ ಎಂದು ಇದರ ವಿರುದ್ಧ ದಿಟ್ಟ ದನಿಯೆತ್ತಿ ಬ್ರಿಟಿಷ್ ಸರ್ಕಾರವನ್ನು ಬೆಚ್ಚಿ ಬೀಳಿಸಿ ಪ್ರಾಣಾರ್ಪಣೆಗೈದವರು ನಮ್ಮ ಕರ್ನಾಟಕದ ಹಲಗಲಿಯ ಬೇಡರು. ಮತ್ತಷ್ಟು ಓದು »

24
ಆಗಸ್ಟ್

ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!

– ತೇಜಸ್ವಿನಿ ಹೆಗಡೆ.

india-pakistan-border5ಅದೊಂದು ಸುವಿಶಾಲ ಮನೆ. ಎಷ್ಟಂಕಣದ್ದು ಎಂದು ಹೇಳಲೂ ಆಗದಷ್ಟು ದೊಡ್ಡ ಮನೆ! ಆ ಮನೆಯೊಳಗೆ ಅಸಂಖ್ಯಾತ ಕೋಣೆಗಳು. ಗಾತ್ರದಲ್ಲಿ, ಆಕಾರಗಳಲ್ಲಿ, ಅಂದ ಚೆಂದಗಳಲ್ಲಿ ವಿವಿಧತೆಯನ್ನು, ವೈವಿಧ್ಯಗಳನ್ನು ಹೊಂದಿದ ಕೋಣೆಗಳು. ಅದೊಂದು ಬಹು ದೊಡ್ಡ ಒಟ್ಟು ಕುಟುಂಬ. ಕೆಲವು ಸದಸ್ಯರಿಗಂತೂ ಕೋಣೆಗಳೇ ಇಲ್ಲ. ಇದಕ್ಕಾಗಿ ಹೋರಾಟ ಮಾಡುತ್ತಿರುತ್ತಾರೆ. ಅವರ ಇದೇ ಅನಿವಾರ್ಯತೆಯನ್ನೇ ಬಂಡವಾಳ ಮಾಡಿಕೊಂಡು, ಅವರ ನೈಜ ಹೋರಾಟವನ್ನೇ ದಿಕ್ಕೆಡಿಸಿ, ತಮ್ಮ ಕುಟಿಲ ಸ್ವಾರ್ಥಕ್ಕಾಗಿಯೇ ಮನೆಯೊಡೆಯಲು ಕೆಲವೊಂದು ಸದಸ್ಯರು ಸಂಚು ಮಾಡುತ್ತಿರುತ್ತಾರೆ. ಕೆಲವು ನೆರಹೊರೆಯ ಕುಟುಂಬಗಳ ಕುಮ್ಮಕ್ಕೂ ಇದಕ್ಕೆ ಲಭಿಸುತ್ತಿರುತ್ತದೆ. ಹೀಗಾಗಿ ಕಚ್ಚಾಟ, ಜಗಳ, ಹೊಡೆದಾಟ ಪ್ರತಿದಿವಸವೂ ಅಲ್ಲಿ ನಡೆಯುತ್ತಿರುತ್ತದೆ ಮತ್ತು ಅದನ್ನು ಆ ಇಡೀ ಮನೆಯ ಜವಾಬ್ದಾರಿಯನ್ನು ಹೊತ್ತ ಯಜಮಾನ ಹಾಗೂ ಇನ್ನಿತರ ಹಿರಿಯ ಸದಸ್ಯರು ಬಗೆಹರಿಸಲು ಪ್ರಯತ್ನಿಸುತ್ತಲೇ ಇರುತ್ತಾರೆ. ಕಾಲ ಸರಿದಂತೇ, ಸ್ವಾರ್ಥಿಗಳ ಸತತ ತಲೆತುಂಬುವಿಕೆಯ ಪರಿಣಾಮದಿಂದ ಮನೆಯ ಕೆಲವೊಂದಿಷ್ಟು ಜನಕ್ಕೆ ಆಗಾಗ ಅನ್ನಿಸತೊಡಗುತ್ತದೆ.. ಈ ಮನೆಯೊಳಗೆ ಮಾತ್ರ ಸರಿಯಾದ ವ್ಯವಸ್ಥೆಯಿಲ್ಲ.. ಯಾವುದೂ ಸರಿಯಿಲ್ಲ.. ಭದ್ರತೆಯಿಲ್ಲ.. ಎಂಬಿತ್ಯಾದಿ ಕೊರಗು, ಕೂಗು ಎದ್ದೇಳುತ್ತಿರುತ್ತದೆ. ಮನೆಯನ್ನು ಒಂದಿಷ್ಟು ಪಾಲು ಮಾಡಿ ಹಂಚಿದರೇ ಪರಿಹಾರ ಎಂದು ಹೊರಟವರೂ ಹಲವರಿರುತ್ತಾರೆ. ಆದರೆ ಆ ಮನೆಯ ಹೊರಗೆ ಬಿದ್ದರೆ, ಅದರ ಅಕ್ಕ ಪಕ್ಕದ ಅಷ್ಟೇ ಮನೆಗಳೊಳಗಿನ ಸ್ಥಿತಿ-ಗತಿಯೂ ಬಹುಪಾಲು ಅದೇ ರೀತಿ ಇರುವುದು ಆ ಜನರಿಗೆ ಅರಿವಾಗಿರುವುದೇ ಇಲ್ಲ ಅಥವಾ ಕೆಲವರಿಗೆ ತಿಳಿದಿದ್ದರೂ ತಿಳಿಯದಂತೇ ನಟಿಸುತ್ತಿರುತ್ತಾರೆ. ಕ್ರಮೇಣ ಮನೆಯೊಳಗಿನ ಪ್ರತಿಯೊಂದು ಸಂಭ್ರಮದಲ್ಲೂ ಒಂದಲ್ಲಾ ಒಂದು ಕೊರಗು, ಕೆಡುಕು ತೆಗೆದು ಕಟಕಿಯಾಡುವ, ಮನೆಯನ್ನು, ಮನೆ ಮಂದಿಯನ್ನು ಹಳಿಯುತ್ತಲೇ, ಜರೆಯುತ್ತಲೇ ಸವೆಯುವ ಪ್ರಕ್ರಿಯೆ ಶುರುವಾಗುತ್ತದೆ. ಮತ್ತಷ್ಟು ಓದು »

23
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ-9
ಪಂಡಿತ್ ಮದನ ಮೋಹನ ಮಾಳವೀಯ
– ರಾಮಚಂದ್ರ ಹೆಗಡೆ

Pandit-Madan-Mohan-Malaviya-Laywerಭಾರತೀಯ ಸ್ವಾತಂತ್ರ್ಯ ಹೋರಾಟ ಹಾಗೂ ನಂತರದ ಭವ್ಯ ಭಾರತದ ಭವಿಷ್ಯದ ನಿರ್ಮಾಣದಲ್ಲಿ ಪಂಡಿತ ಮದನ ಮೋಹನ ಮಾಳವೀಯರ ಪಾತ್ರ ಬಹುದೊಡ್ಡದು. ಗಾಂಧೀಜಿಯವರು ರಾಷ್ಟ್ರಪಿತನಾದರೆ ಪಂಡಿತ ಮದನ ಮೋಹನ ಮಾಳವೀಯರು “ರಾಷ್ಟ್ರಗುರು” ಎನ್ನಬೇಕು. ಭಾರತೀಯ ಸಂಸ್ಕೃತಿ ಪರಂಪರೆಯ ಉಳಿವಿಗಾಗಿ, ಭಾರತೀಯ ಚಿಂತನೆಯ ಶಿಕ್ಷಣದ ಪ್ರಸಾರಕ್ಕಾಗಿ ದೇಶಾದ್ಯಂತ ಭಿಕ್ಷೆ ಎತ್ತಿ ‘ಬನಾರಸ್ ಹಿಂದೂ ವಿಶ್ವವಿದ್ಯಾಲಯ’ ವನ್ನು ಸ್ಥಾಪಿಸಿದ ಮಹನೀಯ ಮಾಳವೀಯರು. ಸ್ವಾತಂತ್ರ್ಯ ಹೋರಾಟಗಾರ, ಕವಿ-ಸಾಹಿತಿ, ಪತ್ರಿಕೆಗಳನ್ನು ಕಟ್ಟಿಬೆಳೆಸಿದ ಧೀಮಂತ, ವಿದ್ಯಾಧಾತ ಮತ್ತು ಭಾರತೀಯ ಮೌಲ್ಯಗಳ ಹಿತಚಿಂತಕ, ಮೌಡ್ಯ, ಜಾತೀವಾದಗಳನ್ನು ಪೋಷಿಸದ ಮನೋಭಾವನೆ ಹೊಂದಿದ್ದ ಮಾಳವೀಯರು ‘ಪಂಡಿತ’ರೆಂದೇ ಹೆಸರುವಾಸಿ. ಮತ್ತಷ್ಟು ಓದು »

23
ಆಗಸ್ಟ್

“ಭಾರತ್ ಕಿ ಬರ್ಬಾದಿ” ಕೂಗಿನ ಹಿಂದಿರುವ ಕೈಗಳು ಯಾರದ್ದು?

– ರಾಕೇಶ್ ಶೆಟ್ಟಿ

downloadಉಗ್ರ ಬರ್ಹನ್ ವಾನಿಯ ಹತ್ಯೆಯಾಗಿ ಒಂದು ತಿಂಗಳು ಕಳೆದು ಕಾಶ್ಮೀರ ಕಣಿವೆಯ ಒಂದೆರಡು ಜಿಲ್ಲೆಗಳನ್ನು ಬಿಟ್ಟು ಉಳಿದೆಲ್ಲವೂ ತಣ್ಣಗಾಗಿದ್ದರೂ ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಬೆಂಬಲ ನೀಡುತ್ತಿರುವ ದೇಶದ್ರೋಹಿಗಳ ಕೂಗು ಇನ್ನು ತಣ್ಣಗಾಗಿಲ್ಲ. ಇಷ್ಟು ದಿನ ಶ್ರೀನಗರದಲ್ಲೋ, ದೆಹಲಿಯ JNUವಿನಲ್ಲೋ, ಉತ್ತರ ಭಾರತದಲ್ಲೆಲ್ಲೋ ಕಾಣಿಸಿಕೊಳ್ಳುತ್ತಿದ್ದ ಈ Urban Naxalರು ಈಗ ನಮ್ಮ ಬೆಂಗಳೂರಿಗೂ ಕಾಲಿಟ್ಟಿದ್ದಾರೆ. ಕಾಶ್ಮೀರದಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಗಲಭೆ ಶುರುವಾಗಿ ಒಂದು ವಾರ ಕಳೆಯುವಷ್ಟರಲ್ಲೇ (ಜುಲೈ15,16) We Stand with Kashmir ಎನ್ನುವ ಹೆಸರಿನೊಂದಿಗೆ ಬೆಂಗಳೂರಿನ ಟೌನ್ ಹಾಲ್ ಮುಂದೆ ನಿಂತು “ಕಾಶ್ಮೀರದ ಆಜಾದಿ” ಕೇಳಲು ಹೊರಟಿದ್ದ ಈ ಅರ್ಬನ್ ನಕ್ಸಲರ ಆಸೆಗೆ ನಾವೊಂದಿಷ್ಟು ಜನರು ಸೇರಿ ತಣ್ಣಿರೇರಚಿದ್ದೆವು. ಅದಾದ ನಂತರ, ‘ತಾತ್ಕಾಲಿಕವಾಗಿ’ ನಾವು ಅವರನ್ನು ತಡೆದಿದ್ದೇವೆ ಅಂತಲೇ ನಾನು ಬರೆದಿದ್ದೆ. ಆ ಆತಂಕ ನಿಜವೆಂಬಂತೆ ಮೊನ್ನೆ ಆಗಸ್ಟ್ 13ರಂದು ಅಮ್ನೆಸ್ಟಿ ಇಂಡಿಯಾ ಎಂಬ NGO ಹೆಸರಿನಡಿಯಲ್ಲಿ, ಕಳ್ಳರೆಲ್ಲಾ ಸಂತೆಯಲ್ಲಿ ಒಂದಾಗುವಂತೆ ಬಂದು ಸೇರಿಕೊಂಡಿದ್ದಾರೆ. ಮತ್ತಷ್ಟು ಓದು »