ವಿಷಯದ ವಿವರಗಳಿಗೆ ದಾಟಿರಿ

Recent Articles

23
ಏಪ್ರಿಲ್

ನೆಪೋಲಿಯನ್ ಹಾದಿ

– ರಂಜನ್ ಕೇಶವ

1378983-bona10ಕೇವಲ 27 ವರ್ಷದ ಹರೆಯ ನೆಪೋಲಿಯನ್ ಬೋನಾಪಾರ್ಟ್ ಆಗಷ್ಟೇ ಇಟಲಿಯಲ್ಲಿಯ ಫ್ರೆಂಚ್ ಸೇನೆಗೆ ಬ್ರಿಗೇಡಿಯರ್ ಜನರಲ್ ಆಗಿ ನೇಮಕಗೊಂಡಿದ್ದ . ಅಲ್ಲಿಯತನಕವೂ ಯಾವತ್ತೂ ಒಂದು ಬೃಹತ್ ಸೇನೆಯನ್ನು ನೇತೃತ್ವ ವಹಿಸಿರಲಿಲ್ಲ . ಮೊದಲ ಬಾರಿಗೆ ನೇಮಕಗೊಂಡ ಈ ಚಿಕ್ಕ ಹುಡುಗ ಏನು ಸಾಧಿಸಿ ತೋರಿಸಿಯಾನೋ ಎಂದು ಅವನ ಕೆಳಗಿನವರು ಮೂದಲಿಸುತ್ತಿದ್ದರು. ಅದಲ್ಲದೇ ಕುಬ್ಜಕಾಯ ಬೇರೆ ಎಂದು ಅಣಕಿಸುತ್ತಿದ್ದರಂತೆ. ಆದರೆ ನೆಪೋಲಿಯನ್ನಿನ ಆ ಕುಬ್ಜ ಶರೀರದೊಳಡಗಿತ್ತು ಅಧಮ್ಯ ಆತ್ಮವಿಶ್ವಾಸ ಮಿತಿಮೀರಿದ ಛಲ. ಇದನ್ನು ವ್ಯಕ್ತಪಡಿಸಲು ಒಂದು ಅವಕಾಶಕ್ಕಾಗಿ ಹಾತೊರೆಯುತ್ತಿದ್ದನಷ್ಟೇ. ಸಿಕ್ಕ ಈ ಮೊದಲ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳುವುದಕ್ಕಾಗಿ ಜಾಗರೂಕತೆಯಿಂದ ತಯಾರಿಮಾಡುತ್ತಿದ್ದ. ಮತ್ತಷ್ಟು ಓದು »

22
ಏಪ್ರಿಲ್

ಕನ್ನಡ ಎನೆ ಕಿವಿ ನಿಮಿರಬೇಕಿರುವುದು ಪರರದ್ದು!

-ಸಂಕೇತ್ ಡಿ ಹೆಗಡೆ, ಸಾಗರ

images (7)ಕೋರಾ ಅಂತ ಒಂದು ಸಾಮಾಜಿಕ ಜಾಲತಾಣವಿದೆ. ಮೊನ್ನೆ ಹೀಗೆ ಜಾಲಾಡುತ್ತಿದ್ದಾಗ ಒಂದು ಭಲೇ ಬುದ್ಧಿವಂತಿಕೆಯ ಪ್ರಶ್ನೆ ಎದುರಾಯಿತು. ಪುಣ್ಯಾತ್ಮನೊಬ್ಬ ಬೆಂಗಳೂರಿನ ರಸ್ತೆಯೊಂದರ ಮೇಲೆ ಕಾರಿನಲ್ಲಿ ಕುಳಿತು ಪೋಸ್ಟ್ ಮಾಡಿದ್ದು. “ನಾನೀಗ ಬೆಂಗಳೂರಿನಲ್ಲಿದ್ದೇನೆ. ಕರ್ನಾಟಕ ಇಲ್ಲಿಂದ ಎಷ್ಟು ಕಿಲೋಮೀಟರ್ ಪ್ರಯಾಣಿಸಿದರೆ ಸಿಗುತ್ತೆ” ಅಂತ! ಹಾಗೆ ಕೇಳಿದವನ ಕಂಡು ಮತ್ತೊಬ್ಬ ಉತ್ತರ ಬರೆದಿದ್ದ. “೧೦೮ಕ್ಕೆ ಕರೆಮಾಡಿ ’ನಾನು ಬೆಂಗಳೂರಿನಲ್ಲಿದ್ದೇನೆ, ನನಗೆ ಕರ್ನಾಟಕಕ್ಕೆ ಕರೆದುಕೊಂಡುಹೋಗಿ’ ಅಂತ ಹೇಳಿ. ಅವರು ವಿಲ್ಸನ್ ಗಾರ್ಡನ್ ಅನ್ನುವ ಸ್ಥಳದಲ್ಲಿರುವ ನಿಮ್ಹಾನ್ಸ್ ಅನ್ನುವ ಕಟ್ಟಡದ ಬಳಿ ಇಳಿಸುತ್ತಾರೆ” ಅಂತ. ಇವರ ಪ್ರಶ್ನೋತ್ತರಗಳ ನೋಡಿ ಉಕ್ಕಿಬಂದ ನಗು, “ತಪ್ಪು ಅವನದಲ್ಲ” ಎಂದು ಅನಿಸಿದಾಗ ಮುಚ್ಚಿಕೊಂಡು ಹಿಂದೆಹೋಗಿಬಿಟ್ಟಿತು. ಎಂತಹ ಸ್ಥಿತಿಗೆ ಬೆಂಗಳೂರನ್ನು ತಂದಿಟ್ಟುಬಿಟ್ಟಿದ್ದೇವೆ ಅನ್ನುವುದು ನೆನಪಾಗಿ ಹೃದಯದ ಒಂದು ಮೂಲೆಯಲ್ಲಿರುವ ಭಾಷಾಭಿಮಾನಕ್ಕೆ ಅತೀವ ವೇದನೆಯಾಯಿತು. ಪಾಪ ಆ ಕಾರಿನವನದೇನು ತಪ್ಪು? ಬೆಂಗಳೂರಿನ ಗಾಳಿಯನ್ನು ಪ್ರಥಮ ಬಾರಿಗೆ ಕುಡಿಯುತ್ತಿರುವ ಯಾವನಿಗೆ ಕರ್ನಾಟಕದ “ರಾಜಧಾನಿ”ಯ ಗಾಳಿ ಕುಡಿದ ಅನುಭವವಾಗುತ್ತೆ? ಅವನೋ ಕನ್ನಡಿಗರ ನಾಡಾಗಿರುವ, ಕನ್ನಡವನ್ನು ಉಸಿರಾಗಿಸಿಕೊಂಡಿರುವ, ಕನ್ನಡತನದ ಬೀಡಾಗಿರುವ ಪ್ರದೇಶವೊಂದು ಸಿಕ್ಕಾಗ ಇಳಿದುಕೊಂಡುಬಿಡೋಣ ಅಂದುಕೊಂಡಿದ್ದ. ಅವನಿಗೇನು ಗೊತ್ತು, “ದಿಸ್ ಇಸ್ ಕರ್ನಾಟಕಾಸ್ ಕ್ಯಾಪಿಟಲ್, ಫಾರ್ ಯು” ಅಂತ. ಬೆಂಗಳೂರು ಕರ್ನಾಟಕದಲ್ಲಿದೆ, ಅದೇ ಅದರ ರಾಜಧಾನಿ ಅಂತ ಅವನಿಗೆ ಗೊತ್ತಿಲ್ಲದಿರುವ ಅವನ ಸಾಮಾನ್ಯ ಜ್ನಾನಕ್ಕೆ ವಿಷಾದಿಸೋಣ. ಆದರೆ ಅವನಿಗೆ ಬೆಂಗಳೂರಿನಲ್ಲಿದ್ದರೂ ಇದು ಕರ್ನಾಟಕವೆನ್ನುವುದು ಗೊತ್ತಾಗದ ಮಟ್ಟದಲ್ಲಿ ನಾವು ಬೆಂಗಳೂರನ್ನು ಕಾಪಾಡಿಕೊಂಡಿದ್ದೇವೆ ಎಂಬ ಕಟುವಾಸ್ತವಕ್ಕೆ, ಕೇವಲ ವಿಷಾದಿಸಿದರೆ ಸಾಕೇನು? ಮತ್ತಷ್ಟು ಓದು »

21
ಏಪ್ರಿಲ್

‘ಹೊಸ ತಲೆಮಾರಿನ ತಲ್ಲಣ’ ಕೃತಿ ಪರಿಚಯ

ಮು.ಅ ಶ್ರೀರಂಗ ಬೆಂಗಳೂರು

hosa talemarina tavaka tallanagalu0001ಡಾ. ರಹಮತ್ ತರೀಕೆರೆ ಅವರ ಸಂಪಾದಕತ್ವದಲ್ಲಿ  ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ ಹಂಪಿ ಅವರು ೨೦೦೮ರಲ್ಲಿ ಪ್ರಕಟಿಸಿರುವ ‘ಹೊಸ ತಲೆಮಾರಿನ ತಲ್ಲಣ’ ಕೃತಿಯ ಒಂದು ಪರಿಚಯ ಮಾಡಿಕೊಡುವುದು ಈ ಲೇಖನದ ಉದ್ದೇಶ. ಈ ಕೃತಿಯಲ್ಲಿ ಒಟ್ಟು   ೩೮ ಲೇಖನಗಳಿವೆ. ಸಂಪಾದಕರಾದ  ರಹಮತ್ ತರೀಕೆರೆಯವರು ತಮ್ಮ ಮುನ್ನುಡಿಯಲ್ಲಿ ಹೇಳಿರುವಂತೆ ‘ಈ ಸಂಕಲನವು ಬರಹದಲ್ಲಿ ತೊಡಗಿಕೊಂಡಿರುವವರಿಗೂ, ಸಾಹಿತ್ಯ ಅಧ್ಯಯನ ಮಾಡುವವರಿಗೂ, ಸಾಹಿತ್ಯದಲ್ಲಿ ಸಾಮಾನ್ಯ ಆಸಕ್ತಿ ಇರಿಸಿಕೊಂಡಿರುವ ಓದುಗರಿಗೂ ಉಪಯುಕ್ತ ಆಗಬಹುದು’.   ಈ ಕೃತಿಯಲ್ಲಿ ಮೂರು ಭಾಗಗಳಿವೆ. ಮೊದಲ ಭಾಗದಲ್ಲಿ  ಹೊಸತಲೆಮಾರಿನ ಲೇಖಕರ ಆತ್ಮ ಕಥಾನಾತ್ಮಕ ಮಾದರಿಯ ಬರಹಗಳಿವೆ. ಎರಡನೇ ಭಾಗದ ಬರಹಗಳು ಸಂಪಾದಕರ ಕೆಲವು ನಿರ್ದಿಷ್ಟ ಪ್ರಶ್ನೆಗಳಿಗೆ ಕೊಟ್ಟ ಉತ್ತರವಾಗಿ ಮೂಡಿಬಂದ ಲೇಖನಗಳಿವೆ. ಮೂರನೇ ಭಾಗದಲ್ಲಿ ಈ ಎರಡೂ  ಭಾಗದ ಬರಹಗಳಿಗೆ ಸಂಪಾದಕರು ಮಾಡಿರುವ   ‘ತಲ್ಲಣಗಳ ಸ್ವರೂಪ’ ಎಂಬ ಉತ್ತಮ  ವಿಶ್ಲೇಷಣೆ ಇದೆ. ಮತ್ತಷ್ಟು ಓದು »

20
ಏಪ್ರಿಲ್

ಭವಿಷ್ಯನಿಧಿಯ ಮೇಲೆ ವರ್ತಮಾನದ ಕಣ್ಣೇಕೆ?

ರಾಘವೇಂದ್ರ ಸುಬ್ರಹ್ಮಣ್ಯ

Bangalore PF Protestನಿನ್ನೆ ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರ ನೂತನ ಭವಿಷ್ಯ ನಿಧಿ ನೀತಿ ವಿರೋಧಿಸಿ ನಡೆದ ಪ್ರತಿಭಟನೆ ಮತ್ತದರ ಪರಿಣಾಮಗಳು ಇನ್ನೂ ನಮ್ಮಮುಂದೆಯೇ ಹೊಗೆಸೂಸುತ್ತ ನಿಂತಿವೆ. ಪ್ರತಿಭಟನೆಗೆ ಇಳಿದವರಲ್ಲಿ ಎಷ್ಟು ಜನಕ್ಕೆ ನೂತನ ಭವಿಷ್ಯ ನಿಧಿ(ಪಿಎಫ್) ನೀತಿ ಅಂದರೇನು, ಏನು ಬದಲಾವಣೆ ಆಗಿದೆ? ಅನ್ನೋದು ಹೋಗ್ಲಿ ಪಿಎಫ್ ಅಂದರೆ ಏನು ಅಂತಲೂ ಮಾಹಿತಿಯಿತ್ತೋ ಇಲ್ಲವೋ ಅನ್ನುವಷ್ಟು ಗೊಂದಲ ಶುರುವಾಗಿದೆ. ಪಿಎಫ್ ಯಾಕೆ ಬೇಕು? ಸರ್ಕಾರದ ನೀತಿಯೇನು ಮತ್ತದು ಹೇಗೆ ಬದಲಾಗ್ತಿದೆ ಅಂತಾ ನೋಡುವ ಪ್ರಯತ್ನವೇ ಈ ಲೇಖನ. ಇಲ್ಲಿರುವ ಎಲ್ಲಾ ಅಭಿಪ್ರಾಯ ನನ್ನದು ಮತ್ತು ನನ್ನದು ಮಾತ್ರ. ನಿಲುಮೆ ಇದನ್ನು ಬೆಂಬಲಿಸುತ್ತಿದೆಯೇ ಎಂಬುದು ಪ್ರಶ್ನೆಯೇ ಆಗಬಾರದು.

ಏನಿದು ಪಿಎಫ್? ಮತ್ತಷ್ಟು ಓದು »

20
ಏಪ್ರಿಲ್

ಮೆಲ್ಲುಸಿರೆ ಸವಿಗಾನ….!

– ನಾಗೇಶ ಮೈಸೂರು

ಪೀಠಿಕೆ: ಬಲ್ಲವನೆ ಬಲ್ಲ, ಬೆಲ್ಲದ ರುಚಿಯ – ಎಂಬಂತೆ, ಹಳೆಯ ಹಾಡುಗಳು ಮಾಡುವ ಮೋಡಿ ಅದನ್ನು ಮೆಲ್ಲುವವರಷ್ಟೆ ಬಲ್ಲರು. ಹಾಗೆ ಬಂದು ಹೀಗೆ ಹೋಗದ ಜೀವಮಾನ ಪೂರ ಸಖರಾಗಿಬಿಡುವ ಈ ಗಾನ ರತ್ನಗಳ ನೆನಕೆಯ ಅನಾವರಣ, ಈ ಬರಹದ ಆಶಯ..

veera kesari

ಕತ್ತಲು ತುಂಬಿದ ಆಗಸದ ತುಂಬ ಚಿತ್ತಾರ ಬರೆದ ನಕ್ಷತ್ರಗಳ ರಾಶಿ. ಹುಣ್ಣಿಮೆ ಹಾಲಿನ ಬಿಂದಿಗೆಯನ್ಹೊತ್ತು ಇಳೆಗೆ ಸುರಿಯಲೆಂದೇ ತಂದ ಬೆಳದಿಂಗಳನೆಲ್ಲ ಕಣೆ ಕಟ್ಟಿಸಿ ದೃಷ್ಟಿ ಬೊಟ್ಟಾಗಿಸಿಕೊಂಡು ವಿಹರಿಸುತ್ತ ಮೋಡಗಳ ನಡುವೆ ದೋಣಿಯಲಿ ಸಾಗಿದಂತೆ ಸ್ವೈರ ವಿಹಾರದಲ್ಲಿದ್ದಾನೆ ಸುಧಾಕರ. ಅವನ ಸುತ್ತಲಿನ ಕಾಂತಿಗೆ ಚದುರಿ ಚೆಲ್ಲಾಡಿದ ಮೇಘ ಪುಂಜವೂ ಪ್ರಜ್ವಲ ದೀಪ ಹೊತ್ತಿಸಿದ ಉಜ್ವಲ ಹಣತೆಯಂತೆ ಫಳಫಳ ಹೊಳೆಯುತ್ತ ತೇಲಾಡಿವೆ. ಮಲಗಿದಲ್ಲಿಂದಲೇ, ಅದನ್ನೆ ನೆಟ್ಟ ನೋಟದಿಂದ ನೋಡುತ್ತಿದ್ದರೆ ತೇಲಿಹೋಗುತ್ತಿರುವುದು ನಾವ ಅಥವ ಆಗಸದ ಚೆನ್ನ, ಚೆಲುವೆಯರ ಅನ್ನುವುದೇ ಗೊತ್ತಾಗದ ಅಯೋಮಯ ಸ್ಥಿತಿ – ಒಂದರೆಕ್ಷಣ, ಸುತ್ತುತ್ತಿರುವ ಭುವಿ ಚಂದ್ರರ ಸಂಬಂಧವು ಮರೆತುಹೋದಂತಾಗಿ. ಮತ್ತಷ್ಟು ಓದು »

19
ಏಪ್ರಿಲ್

‘ಅಪರೇಷನ್ ಪೀಠತ್ಯಾಗ’ದ ಸೂತ್ರದಾರರು ಯಾರು?

– ಮಂಜುನಾಥ ಹೆಗಡೆ

FB_IMG_1460892892983ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಮೇಲೆ ಬಂದಂತಹ ಅತ್ಯಾಚಾರ ಆರೋಪವನ್ನು ಇತ್ತೀಚೆಗೆ ನ್ಯಾಯಾಲಯವು ತಳ್ಳಿಹಾಕಿ, “ಇದು ಶ್ರೀಗಳನ್ನು ಸಿಕ್ಕಿಹಾಕಿಸಲು ನಡೆಸಿದ ಷಡ್ಯಂತ್ರ” ಎಂದು ಷರಾ ಬರೆದಿದ್ದಲ್ಲದೇ, CID ಮತ್ತು FSLಗಳನ್ನು ಕೂಡ ತರಾಟೆಗೆ ತೆಗೆದುಕೊಂಡಿದೆ. ಹಾಗಾದರೆ ಯಾರು, ಯಾಕಾಗಿ ಒಂದು ಧಾರ್ಮಿಕ ಸಂಸ್ಥೆಯ ಮೇಲೆ ಹಗೆ ಸಾಧಿಸಲು ಹೊರಟಿದ್ದಾರೆ ? ಯಾರು ಮಠವನ್ನು ಇನ್ನಿಲ್ಲವಾಗಿಸುವ “ಷಡ್ಯಂತ್ರ” ಮಾಡುತ್ತಿದ್ದಾರೆ? ಆಮೂಲಾಗ್ರವಾಗಿ ಎಲ್ಲವನ್ನೂ ಪರಿಶೀಲಿಸಬೇಕಾಗಿದೆ!

ಸುಮಾರು 1200 ವರ್ಷಗಳ ಹಿಂದೆ ಆದಿಶಂಕರಾಚಾರ್ಯರು ಗೋಕರ್ಣದ ಸಮೀಪದ ಅಶೋಕೆಯಲ್ಲಿನ ಸೌಮ್ಯ ಪ್ರಕೃತಿಯ ಮಡಿಲಲ್ಲಿ ಧರ್ಮಪಾಲನೆಗಾಗಿ ಮಠವೊಂದನ್ನು ಸ್ಥಾಪಿಸಿ ತಮ್ಮ ಜ್ಯೇಷ್ಠ ಶಿಷ್ಯ ಸುರೇಶ್ವರಾಚಾರ್ಯರಿಂದ ಸನ್ಯಾಸ ದೀಕ್ಷೆ ಪಡೆದು ತಮ್ಮಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾನಂದರನ್ನು ಪೀಠಾಧಿಪತಿಯನ್ನಾಗಿ ಮಾಡಿ ಗೋಕರ್ಣ ದೇವಾಲಯದ ಆಡಳಿತವೂ ಸೇರಿದಂತೆ ಹಲವಾರು ಹೊಣೆಗಾರಿಕೆಗಳನ್ನು ಕೊಡುತ್ತಾರೆ. ಇದು ರಾಜಗುರುಪೀಠವಾಗಿದ್ದು ಸಮಾಜದ ಅಂತರಂಗ ಮತ್ತು ಬಹಿರಂಗ ಶ್ರೇಯೋಭಿವೃದ್ಧಿಗಾಗಿ ದುಡಿಯುತ್ತಿದೆ. ಅಲ್ಲಿಂದ ಇಲ್ಲಿನವರೆಗೂ ಶ್ರೀಮಠದ ಮಾರ್ಗದರ್ಶನದಲ್ಲಿ ಧರ್ಮಪಾಲನೆ ನಡೆಯುತ್ತಾ ಬಂದಿದೆ. ಶಂಕರರಿಂದ ಆರಂಭಿಸಿ 35 ತಲೆಮಾರುಗಳು ಕಳೆದಿವೆ. ಪ್ರಸ್ತುತ ಶ್ರೀ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು 36ನೇ ಪೀಠಾಧೀಶರಾಗಿರುತ್ತಾರೆ. ಶ್ರೀಗಳ ಪ್ರೇರಣೆಯಂತೆ ಬಿಂದು-ಸಿಂಧು, ಮುಷ್ಟಿಭಿಕ್ಷೆ, ವಿದ್ಯಾನಿಧಿ, ಕಾಮದುಘಾ, ಗುರುಕುಲ, ಭಾರತೀ ವಿದ್ಯಾಲಯಗಳು, ಗ್ರಾಮರಾಜ್ಯ, ವಿದ್ಯಾನಿಧಿ, ಜೀವನದಾನ ಮೊದಲಾದ ಹತ್ತು ಹಲವಾರು ಸಮಾಜಮುಖಿ ಯೋಜನೆಗಳು ಆರಂಭಗೊಂಡವು. ಅಷ್ಟಾಗಿ ಮಠದ ಸಂಪರ್ಕ ಇಲ್ಲದವರೂ ಮಠಕ್ಕೆ ಬರಲಾರಂಭಿಸಿದರು! ಮಠದ ಪ್ರಸಿದ್ಧಿಯೂ ಜಾಸ್ತಿಯಾಗುತ್ತಾ ಬಂತು! ಬರೀ ಜಪ-ತಪ-ಅನುಷ್ಠಾನಗಳೇ ಆಗಿದ್ದರೆ ತೊಂದರೆ ಇರಲಿಲ್ಲವೇನೋ! ಆದರೆ ಇದು ರಾಜಗುರು ಪೀಠ. ಇಲ್ಲಿ ಕಾವಿಯೂ ಇದೆ, ಕಿರೀಟ-ಶ್ವೇತಛತ್ರಗಳೂ ಇವೆ! ಸಮಾಜದಲ್ಲಿ ನಡೆಯುವ ಅಧರ್ಮ ಕಾರ್ಯಗಳ ನಿಗ್ರಹವೂ ಪೀಠದ ಹೊಣೆಯಾಗಿರುತ್ತದೆ! ಮತ್ತಷ್ಟು ಓದು »

19
ಏಪ್ರಿಲ್

ಸೋಸುಕ (ಫಿಲ್ಟರ್)

– ಎಸ್ ಎನ್ ಸಿಂಹ, ಮೇಲುಕೋಟೆ

man-on-seesaw-with-heart-and-brainಕೋಪದ ಭರದಲ್ಲಿ ತೆಗೆದುಕೊಳ್ಳುವ ತೀರ್ಮಾನಗಳು ಸರಿಯಾಗಿರುತ್ತವೆ ಎಂದು ನೀವು ಈಗಲೂ ಭಾವಿಸುತ್ತೀರಾ? ಎಂದ.
ದೂರಾನ್ವಯದೋಷದಿಂದ ಕೂಡಿದೆಯೆಂಬಂತೆ ಭಾಸವಾಗುವ ಇಂತಹ ವಾಕ್ಯಗಳು ಸಾಮಾನ್ಯ ಜನರಿಗೆ ಒಂದೇ ಸಲಕ್ಕೆ ಅರ್ಥವಾಗುವುದಿಲ್ಲ.
ಅವಳಿಗೂ ಹಾಗೇ ಆಯಿತು. ರೈಲು ನಿಲ್ದಾಣದ ಸಿಮೆಂಟು ಬೆಂಚಿನ ಮೇಲೆ ಮಗುವಿನೊಂದಿಗೆ ಕುಳಿತಿದ್ದ ಅವಳು ಗಲಿಬಿಲಿಗೊಂಡು, ಏನು? ಎಂದಳು.
ಸಿಟ್ಟಿನಲ್ಲಿ ತಗೋಳೋ ತೀರ್ಮಾನಗಳು ಸರಿಯಾಗಿರುತ್ವೆ ಅಂತೀರಾ? ಅಂದ.
ಅದಕ್ಕೇನೂ ಉತ್ತರಿಸದೆ, ‘ಊಟದ ಪಾರ್ಸೆಲ್ ಜೊತೆ ಚಾಕಲೇಟೂ ಬೇಕಂತೆ ಅಂತ ಡ್ಯಾಡಿಗೆ ಹೇಳಿ ತೆಗೆಸ್ಕೊಂ ಬಾ’ ಎಂದು ತನ್ನ ಮಗುವಿಗೆ ಹೇಳಿ ಕಳಿಸಿದಳು. ಖುಷಿಯಿಂದ ಓಡಿತು ಮಗು.
ಇವನ ಕಣ್ಣುಗಳಲ್ಲಿ ಮಾತ್ರ ಅದೇ ಪ್ರಶ್ನೆ ಸ್ಥಾಯಿಯಾಗಿ ನಿಂತಿದೆ.
ಬಲವಂತವಾಗಿ ನಗುತ್ತಾ, ನೀವು ಈಗಲೂ ಹಾಗೇ ಒಗಟಾಗಿಯೇ ಮಾತಾಡುತ್ತೀರಿ ಅಂದಳು. ಮತ್ತಷ್ಟು ಓದು »

18
ಏಪ್ರಿಲ್

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ: ಪರ ಮತ್ತು ವಿರೋಧ

-ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟೆ

sslc-examವೃತ್ತಿಪರ ಕೋರ್ಸುಗಳ ಏಕರೂಪ ಅರ್ಹತಾ ಪ್ರವೇಶ ಪರೀಕ್ಷೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕಳೆದ ಕೆಲವು ವರ್ಷಗಳಿಂದ ಈ ವಿಷಯವಾಗಿ ಶಿಕ್ಷಣ ಕ್ಷೇತ್ರದಲ್ಲಿ ಪರ ಮತ್ತು ವಿರೋಧವಾಗಿ ಮಾತುಗಳು ಕೇಳಿ ಬರುತ್ತಿವೆ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳು ಈ ಯೋಜನೆಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತಿವೆ. ಭಾರತದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ವಿಶೇಷವಾಗಿ ವೈದ್ಯಕೀಯ ಶಿಕ್ಷಣದ ಪ್ರವೇಶಕ್ಕಾಗಿ ಅನೇಕ ಪ್ರಕಾರದ ಅರ್ಹತಾ ಪರೀಕ್ಷೆಗಳು ಚಾಲ್ತಿಯಲ್ಲಿವೆ. ಪ್ರತಿ ರಾಜ್ಯಗಳಲ್ಲಿ ಆಯಾ ಸರ್ಕಾರ ವೈದ್ಯಕೀಯ ಕೋರ್ಸಿನ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸುತ್ತದೆ. ಜೊತೆಗೆ ಖಾಸಗಿ ಕಾಲೇಜುಗಳಲ್ಲಿನ ಮ್ಯಾನೆಜಮೆಂಟ್ ಸೀಟುಗಳಿಗಾಗಿ, ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳು ಮತ್ತು ಡೀಮ್ಡ್ ವಿಶ್ವವಿದ್ಯಾಲಯವೆಂದು ಮಾನ್ಯತೆ ಪಡೆದ ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳಿಗಾಗಿ ಎಂದು ಹೀಗೆ ಒಂದೇ ರಾಜ್ಯದಲ್ಲಿ ಅನೇಕ ಪ್ರಕಾರದ ಅರ್ಹತಾ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಯೊಬ್ಬ ಒಂದಕ್ಕಿಂತ ಹೆಚ್ಚಿನ ಅರ್ಹತಾ ಪ್ರವೇಶ ಪರೀಕ್ಷೆಗಳನ್ನು ಬರೆಯುವ ಸಂದಿಗ್ಧತೆಗೆ ಒಳಗಾಗುತ್ತಾನೆ. ಅಲ್ಲದೆ ಪ್ರತಿಯೊಂದು ಪ್ರವೇಶ ಪರೀಕ್ಷೆಯ ಶುಲ್ಕ ಅತ್ಯಂತ ದುಬಾರಿಯಾಗಿದ್ದು ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಇದು ಹೊರೆಯಾಗುತ್ತಿದೆ. ಮತ್ತಷ್ಟು ಓದು »

16
ಏಪ್ರಿಲ್

ಬಗೆಬಗೆಯಾಗಿ ಕಾಡುವ ನಗೆಗಾರ: ಚಾಪ್ಲಿನ್

– ರೋಹಿತ್ ಚಕ್ರತೀರ್ಥ

Tom Wilson (le policeman), Charlie Chaplin (le vagabond) et Jackie Coogan (le gosse)

Tom Wilson (le policeman), Charlie Chaplin (le vagabond) et Jackie Coogan (le gosse)

ನನಗಾಗ ಹದಿನಾಲ್ಕು ವರ್ಷ. ಪ್ರೈಮರಿ ದಾಟಿ ಆಗಷ್ಟೇ ಹೈಸ್ಕೂಲಿಗೆ ಕಾಲಿಟ್ಟಿದ್ದೆ. ಮನೆಯಲ್ಲಿ ನಡೆಯಲಿದ್ದ ಒಂದು ಮದುವೆ ಸಮಾರಂಭಕ್ಕಾಗಿ ವಿಸಿಆರ್ ಬಾಡಿಗೆ ಪಡೆದಿದ್ದರು. ಎರಡೇ ಎರಡು ದಿನ ಮನೆಯಲ್ಲಿರುವ ಈ ಭಾಗ್ಯದ ಪೂರ್ಣ ಸದುಪಯೋಗ ಪಡೆಯಬೇಕಾದರೆ ದಿನದ ಇಪ್ಪತ್ತನಾಲ್ಕು ಗಂಟೆಯೂ ಪಿಚ್ಚರ್ ಹಾಕಿ ಓಡಿಸಬೇಕು ಎಂಬುದು ನಮ್ಮ ನಿಲುವು. ಹಾಗೆ ಬಾಡಿಗೆಗೆ ತಂದಿದ್ದ ಮೂರ್ನಾಲ್ಕು ಚಿತ್ರಗಳ ಪೈಕಿ ಒಂದು – ಗೋಲ್ಡ್ ರಶ್. ದೂರ ದೇಶವೊಂದರಲ್ಲಿ ದೊಡ್ಡ ಪ್ರಮಾಣದ ಚಿನ್ನದ ನಿಕ್ಷೇಪವಿದೆ ಎಂಬ ಸುದ್ದಿಯ ಜಾಡು ಹಿಡಿದು ಹೊರಡುವ ಮನುಷ್ಯರು ಎಂತೆಂಥ ತೊಂದರೆಗಳಲ್ಲಿ ಸಿಕ್ಕಿಕೊಳ್ಳುತ್ತಾರೆ; ಕೊನೆಗೂ ಮನುಷ್ಯನಿಗೆ ಮುಖ್ಯವಾಗುವುದು ಚಿನ್ನವೋ ಜೀವನವೋ ಎಂಬುದನ್ನು ತೋರಿಸುವ ಆ ಚಿತ್ರ ಕಪ್ಪುಬಿಳುಪಿನದ್ದು. ಅದನ್ನು ಒಮ್ಮೆ ನೋಡಿ ತೃಪ್ತಿಯಾಗದೆ ಮನೆಗೆ ಬಂದುಹೋದವರಿಗೆಲ್ಲ ತೋರಿಸಿ ಟೇಪು ಕಿತ್ತು ಬರುವಷ್ಟು ಸಲ ಬಳಸಿ ಮರಳಿಸಿದ್ದು ಅಚ್ಚಳಿಯದ ನೆನಪು ನನಗೆ. ಅದುವೇ ನನ್ನ ಮತ್ತು ಚಾಪ್ಲಿನ್ನನ ಪ್ರಥಮ ಚುಂಬನ. ಬಿದ್ದೂಬಿದ್ದೂ ನಕ್ಕು ದಂತಭಗ್ನವಾಗುವುದೊಂದು ಬಾಕಿ ಇತ್ತು ಅಷ್ಟೆ! ಮತ್ತಷ್ಟು ಓದು »

16
ಏಪ್ರಿಲ್

ಬ್ಯಾಟಲ್ ಆಫ್ ಅಸಲ್ ಉತ್ತರ್

– ರಂಜನ್ ಕೇಶವ

a13bb3246cdeb67b1c52ef54fd147bb6ಸೆಪ್ಟಂಬರ್ 6 1965 ರಂದು ಪಾಕಿಸ್ತಾನೀ ಸೇನೆಯನ್ನು ತಡೆಯುವ ಸಲುವಾಗಿ ನಾಲ್ಕನೇ ಗ್ರೆನೇಡಿಯರ್ ಬ್ರಿಗೇಡ್, ಇಚೋಗಿಲ್ ಕಾಲುವೆಯ ಪನ್ನಾ ಸೇತುವೆಯನ್ನು ಆಕ್ರಮಿಸಲು ಕಳುಹಿಸಿರುತ್ತಾರೆ. ಅದು ಸೇನಾನೆಲೆ ದಿಬ್ಬಾಪುರದಿಂದ 11 ಕಿ ಮೀ ದೂರದ ಪ್ರದೇಶ . ಆದರೆ ಪಾಕಿಗಳು ಷೆಲ್ ಧಾಳಿ ಮುಖಾಂತರ ತೀವ್ರವಾಗಿ ಪ್ರತಿಕ್ರಿಯಿಸಿದ್ದರಿಂದ ಭಾರತೀಯ ಪಡೆ ಮುಂದುವರೆದರೂ ಸೇತುವೆಯನ್ನು ದ್ವಂಸಗೊಳಿಸಲಾಗದೇ ಹಿಮ್ಮೆಟ್ಟಬೇಕಾಯಿತು . ಅದೇ ಸಮಯದಲ್ಲಿ ಒಂದು ಗೋರ್ಖಾ ಪಡೆ ಬಲ್ಲನ್ವಾಲಾ ಎಂಬ ಪ್ರದೇಶವನ್ನು ಗೆಲ್ಲಲಾಗದೇ ಹಿಮ್ಮೆಟ್ಟಬೇಕಾಯಿತು . ಮತ್ತೆ ಪ್ರಾರಂಭದ ವಿಫಲತೆಯನ್ನು ಸರಿಪಡಿಸಿಕೊಂಡು ಸೇನಾವ್ಯೂಹವನ್ನು ಪುನರ್ ರಚಿಸಲು ಖೇಮ್ ಖರನ್ ನ ಅಸಲ್ ಉತ್ತರ್ ಎಂಬಲ್ಲಿಗೆ ಬಂದು ಸೇರಿದರು. ಮತ್ತಷ್ಟು ಓದು »