ವಿಷಯದ ವಿವರಗಳಿಗೆ ದಾಟಿರಿ

Posts tagged ‘ಅಖಂಡ ಭಾರತ’

6
ಜುಲೈ

ಅಂಬೇಡ್ಕರ್ ಅವರಿಗೂ ಬೇಡವಾಗಿತ್ತು ಆರ್ಟಿಕಲ್ 370

– ರಾಕೇಶ್ ಶೆಟ್ಟಿ

“ಮಿ.ಅಬ್ದುಲ್ಲಾ, ಭಾರತ ಕಾಶ್ಮೀರವನ್ನು ರಕ್ಷಿಸಬೇಕು, ಅಭಿವೃದ್ಧಿಗೊಳಿಸಬೇಕು ಮತ್ತು ಕಶ್ಮೀರಿಗಳಿಗೆ ಭಾರತದ ಇತರ ಪ್ರಜೆಗಳಂತೆಯೇ ಸಮಾನ ಹಕ್ಕುಗಳಿರಬೇಕೆಂದು ನೀವು ಬಯಸುತ್ತೀರ. ಆದರೆ, ಭಾರತ ಮತ್ತು ಭಾರತೀಯರಿಗೆ ಕಾಶ್ಮೀರ ರಾಜ್ಯದಲ್ಲಿ ಯಾವುದೇ ಹಕ್ಕುಗಳು ಇರಬಾರದು ಎನ್ನುತ್ತೀರ. ನಾನು ಭಾರತದ ಕಾನೂನು ಮಂತ್ರಿ, ನನ್ನ ದೇಶದ ಹಿತಾಸಕ್ತಿಯನ್ನು ನಾನು ಕಡೆಗಣಿಸಲಾರೆ… “, ಆರ್ಟಿಕಲ್ 370ರನ್ನು ಸಂವಿಧಾನದಲ್ಲಿ ಸೇರಿಸಿ ಜಮ್ಮು ಕಾಶ್ಮೀರದಲ್ಲಿ ಜಾರಿಗೊಳಿಸುವ ವಿಷಯದಲ್ಲಿ ಅಂಬೇಡ್ಕರ್ ಅವರನ್ನು ಒಪ್ಪಿಸಲು ನೆಹರೂ ಸಲಹೆ ಮೇರೆಗೆ ಬಂದಿದ್ದ ಶೇಖ್ ಅಬ್ದುಲ್ಲಾನ ಮುಖಕ್ಕೆ ಹೊಡೆದಂತೆ ಡಾ.ಅಂಬೇಡ್ಕರ್ ಅವರು ಹೇಳಿ ಕಳುಹಿಸಿದ್ದು ಹೀಗೆ. ಖುದ್ಧು  ಸಂವಿಧಾನ  ಶಿಲ್ಪಿಯೇ ವಿರೋಧಿಸಿದ್ದ ಈ ಆರ್ಟಿಕಲ್ 370ಯನ್ನು ಅಂದು ಅವರ ಬಾಯಿ  ಮುಚ್ಚಿಸಲು  “ತಾತ್ಕಾಲಿಕ” ಎಂಬ ಪದ ಬಳಸಲಾಯಿತು. ಹೆಂಡ ಕುಡಿದ ಮರ್ಕಟದಂತಾಡುತ್ತಿದ್ದ  ನೆಹರೂ  ಸಾಹೇಬರು, ತಮ್ಮ ಬಾಲವನ್ನು ಶೇಖ್ ಅಬ್ದುಲ್ಲಾನ ಕೈಗೆ ಇಟ್ಟಾಗಿತ್ತು. ಆರ್ಟಿಕಲ್  370  ಜಾರಿಯಾಗುತ್ತಿದಂತೆ ಹಿಂಬಾಗಿಲ ಮೂಲಕ ಅದಕ್ಕಿಂತಲೂ ಘೋರವಾದ ವಿಧಿ 35A ಅನ್ನು  ಜಮ್ಮು ಕಾಶ್ಮೀರಕ್ಕೆ ಅನ್ವಯಿಸಲಾಯಿತು. ಅಂದು ಅಂಬೇಡ್ಕರ್ ಅವರು ವಿರೋಧಿಸಿದ್ದ ಆರ್ಟಿಕಲ್ 370 ರದ್ಧತಿ ಬಗ್ಗೆ ಮಾತನಾಡುತ್ತಿರುವುದು ಕೇವಲ ಬಿಜೆಪಿ ಮಾತ್ರವೇ. ಹಾಗೂ ಇದನ್ನು ವಿರೋಧಿಸುವವರು ಕಾಂಗ್ರೆಸ್ ಇತ್ಯಾದಿ ಸೆಕ್ಯುಲರ್ ಪಕ್ಷಗಳು ಹಾಗೂ ಸೋ-ಕಾಲ್ಡ್ ಸಂವಿಧಾನ ರಕ್ಷಕರು…! Read more »

21
ಆಗಸ್ಟ್

ಕೇವಲ ಲಕ್ಷದಷ್ಟು ಇಂಗ್ಲಿಷ್ ಸೈನಿಕರು ಇಡೀ ಭರತಖಂಡವನ್ನು ಬುಗುರಿಯಂತೆ ಆಡಿಸಿದಾದರೂ ಹೇಗೆ?

– ಸುಜಿತ್ ಕುಮಾರ್

ಈಸ್ಟ್ ಇಂಡಿಯಾ ಕಂಪನಿಯಿಂದ ಬ್ರಿಟಿಷ್ ರಾಜ್ ವರೆಗಿನ ನಡೆ.

ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು ಭಾಗವನ್ನು ತನ್ನ ಹಿಡಿತಕ್ಕೆ ಒಳಪಡಿಸಿಕೊಂಡಿತ್ತು ಎಂಬುದೇ ಪ್ರೆಶ್ನೆ. ಇನ್ನು ನಮ್ಮ ಭಾರತದ ವಿಷಯಕ್ಕೆ ಬಂದರೆ ಸಾವಿರಾರು ಮೈಲುಗಳ ದೂರ ಹಡಗುಗಳಲ್ಲಿ ಕ್ರಮಿಸಿ ಭರತಖಂಡವೆಂಬ ವಿಶ್ವದ ಏಳನೇ ಅತಿ ದೊಡ್ಡ ದೇಶವನ್ನು ಒಳಹೊಕ್ಕು ಸುಮಾರು ಇಪ್ಪತೈದು ಕೋಟಿ  ಜನರನ್ನು ಸುಮಾರು ಎರಡು ಶತಮಾನಗಳಿಗೂ ಹೆಚ್ಚಿನ ಕಾಲ ಹಿಂಡಿ ಹಿಪ್ಪೆಮಾಡಿಯಾಕಲು ಕೇವಲ ತೋಳ್ಬಲದ ಶಕ್ತಿಯೊಂದೇ ಸಾಕಾಗಿತ್ತೇ ಅಥವಾ ಕಾಲಕ್ಕೆ ತಕ್ಕಂತೆ ಹಂತ ಹಂತವಾಗಿ ಉಸಿರುಗಟ್ಟಿಸುವ ಬೇರೊಂದು ಯುಕ್ತಿಯೇ ಬೇಕಿತ್ತೆ? ಅಂತಹದೊಂದು ಕುತಂತ್ರಿ ಯುಕ್ತಿಯ ಪರಿಣಾಮವೇ ಅಂದು ಕೇವಲ ಲಕ್ಷದಷ್ಟು ಇಂಗ್ಲಿಷ್ ಸೈನಿಕರು ಇಡೀ ಭರತಖಂಡವನ್ನು ಬುಗುರಿಯಂತೆ ಆಡಿಸಲು ಸಾಧ್ಯವಾದದ್ದು. Read more »

15
ಆಗಸ್ಟ್

ಅಖಂಡ ಭಾರತ ಸಂಕಲ್ಪ ದಿನದ ಔಚಿತ್ಯವೇನು…?

– ಅಶ್ವಿನ್ ಅಮೀನ್

ಆಗಸ್ಟ್ 14,ಸಂಘಪರಿವಾರಾದಿಯಾಗಿ ಕೆಲ ಸಂಘಟನೆಗಳು ‘ಅಖಂಡ ಭಾರತ ಸಂಕಲ್ಪ ದಿನ’ವೆಂದು ಆಚರಿಸುತ್ತಾರೆ. ಪ್ರಾಚೀನ ಭಾರತದ ಭಾಗಗಳಾಗಿದ್ದ ಈಗ ಸ್ವತಂತ್ರ ದೇಶಗಳಾಗಿರುವ ಇಂದಿನ ಪಾಕಿಸ್ತಾನ, ಬಾಂಗ್ಲಾ (ಹಾಗು ಇತರ) ಗಳನ್ನು ಮತ್ತೆ ಭಾರತದೊಂದಿಗೆ ಸೇರಿಸಲು ಇಂದು ಪ್ರತಿಜ್ಞೆಗೈಯಲಾಗುತ್ತದೆ. ಈ ಆಚರಣೆ ಮೇಲ್ನೋಟಕ್ಕೆ ದೇಶಭಕ್ತಿಯ ಪ್ರತೀಕವೆಂಬಂತೆ ಕಂಡರೂ ಪ್ರಸ್ತುತ ಪರಿಸ್ಥಿತಿಯಲ್ಲಿ ಅದು ಸಾಧ್ಯವಾಗುವ ವಿಷಯವೇ ಎಂಬ ಪ್ರಶ್ನೆ ಬರುವುದು ಸುಳ್ಳಲ್ಲ. ಧರ್ಮ ದ್ವೇಷದ ಆಧಾರದ ಮೇಲೆ ವಿಭಜನೆಯಾಗಿರುವ ಈ ದೇಶಗಳು ಮತ್ತೆ ಭಾರತದೊಂದಿಗೆ ಸೇರುವುದು ಖಂಡಿತ ಅಸಂಭವ… ಒಂದು ವೇಳೆ ಹಾಗೂ ಹೀಗೂ ಅಖಂಡ ಭಾರತ ನಿರ್ಮಾಣವಾದರೆ ಭಾರತದ ಆಂತರಿಕ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಊಹಿಸಲೇ ಕಷ್ಟವಾಗುತ್ತದೆ.

ಭಾರತ-ಪಾಕ್ ಹಾಗು ಭಾರತ-ಬಾಂಗ್ಲಾ ವಿಭಜನೆಯಾದಂದಿನಿಂದ ಇಂದಿನವರೆಗೂ ಇವೆರಡೂ ದೇಶಗಳಲ್ಲಿ ಹಿಂದೂಗಳ ಮೇಲಿನ ಹಲ್ಲೆ, ಕೊಲೆ, ಅತ್ಯಾಚಾರ, ಬಲವಂತದ ಮತಾಂತರಗಳು ನಿಂತಿಲ್ಲ.. ಅಲ್ಲಿರುವ ಬೆರಳೆಣಿಕೆಯ ಹಿಂದುಗಳಿಗೆ ರಕ್ಷಣೆಯಿಲ್ಲದಾಗಿದೆ.  ಅಲ್ಲಿ ಹಿಂದೂಗಳ ಮೇಲೆ ನಡೆಯುವ ಎಲ್ಲಾ ಅತ್ಯಾಚಾರ, ಹತ್ಯಾಕಾಂಡಗಳು ಹೊರಗಿನ ಪ್ರಪಂಚಕ್ಕೆ ತಿಳಿಯುವುದಿಲ್ಲ.. ಕೆಲವೇ ಕೆಲವು ಘಟನೆಗಳು ಮಾತ್ರ ಮಾಧ್ಯಮದ ಮೂಲಕ ತಿಳಿಯುತ್ತದೆ. ಅಪ್ರಾಪ್ತ ಹಿಂದೂ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರಗೈದು ಮುಸ್ಲಿಂ ಆಗಿ ಮತಾಂತರಿಸಲಾಗುತ್ತಿದೆ. ಹಿಂದೂ ಜನರನ್ನು ಅಟ್ಟಾಡಿಸಿಕೊಂಡು ಹತ್ಯೆಗೈಯಲಾಗುತ್ತಿದೆ. ಬಲವಂತದ ಸುನ್ನತ್-ಮತಾಂತರಗಳು ಎಗ್ಗಿಲ್ಲದೆ ನಡೆಯುತ್ತಿದೆ… ಅಲ್ಲಿನ ಹಿಂದೂ ದೇಗುಲಗಳು ಧರೆಗುರುಳುತ್ತಿವೆ, ಕೆಲ ಕಡೆ ಹಿಂದುಗಳನ್ನು ಅವರ ಮನೆಯಿಂದಲೇ ಹೊರಗಟ್ಟಲಾಗುತ್ತಿದೆ. ಈ ಎಲ್ಲಾ ಆಕ್ರಮಣಗಳಿಗೆ ಹೆದರಿ ಈಗಾಗಲೇ ಪಾಕಿಸ್ತಾನದಿಂದ ಭಾರತದತ್ತ ವಲಸೆ ಬರುತ್ತಿರುವ ಹಿಂದೂ ಕುಟುಂಬಗಳ ಬಗ್ಗೆ ಕೇಳಿರುತ್ತೀರಿ. ಪಾಪ ಅವರ ಸ್ಥಿತಿ ಅತ್ತ ಪಾಕಿಸ್ತಾನವೂ ಇಲ್ಲ ಇತ್ತ ಭಾರತವೂ ಇಲ್ಲವೆಂಬಂತಾಗಿದೆ.
Read more »