ನಿಲುಮೆಯಲ್ಲಿ ವಾರಕ್ಕೊಮ್ಮೆ ಒಂದು ಅಂಕಣ ಬರೆಯುವ ಆಸೆ ಸುಮಾರು ದಿನಗಳಿಂದ ಇತ್ತು. ಸುಮಾರು ಎರಡು ವರ್ಷಗಳ ಹಿಂದೆ ನಾನು ಇದೇ ಜಾಲತಾಣದಲ್ಲಿ ‘ನಿನ್ನೆಗೆ ನನ್ನ ಮಾತು’ ಎಂಬ ತುಂಬಾ ಧ್ವನಾರ್ಥಕವುಳ್ಳ ಹೆಸರನ್ನಿಟ್ಟುಕೊಂಡು ಒಂದು ಅಂಕಣ ಬರೆದಿದ್ದೆ. ಅದು ಐದು ಲೇಖನಗಳ ನಂತರ ಮುಂದುವರಿಯಲಿಲ್ಲ. ಬರೀ ಆರಂಭ ಶೂರತ್ವವಾಗಿ ಹೋಯಿತು. ಈ ಸಲದ ಲೇಖನಗಳಿಗೆ ಅಂಕಣರಂಗ ಎಂಬ ಹೆಸರನ್ನೇನೋ ಇಟ್ಟುಕೊಂಡಿರುವೆ. ಜತೆಗೇ ಯಾವುದಕ್ಕೂ ಇರಲಿ ಎಂಬ ಹುಷಾರಿನಿಂದ ಅನಿಯತಕಾಲಿಕ ಎಂಬ ರಕ್ಷಾಕವಚವನ್ನೂ ಧರಿಸಿಕೊಂಡಿರುವೆ!!. ಏಕೆಂದರೆ ವಾರಕ್ಕೊಂದರಂತೆಯೋ ಅಥವಾ ಹದಿನೈದು ದಿನಗಳಿಗೊಮ್ಮೆಯೋ ತಪ್ಪದೆ ಬರೆಯುವ ಬಗ್ಗೆ ನನಗೇ ಅನುಮಾನವಿದೆ. ಅದಕ್ಕೆ ಕಾರಣ ಬರವಣಿಗೆ ನನ್ನ ಮನದಾಳದ ಆಸೆಯಾದರೂ ಅದು ನನಗೆ ಓದಿನಷ್ಟು ಪ್ರಿಯವಾದುದಲ್ಲ. ಸುಲಭವೂ ಅಲ್ಲ. ನಾನು ಬರೆದರೆ ಒಂದು ಹತ್ತು ಪುಸ್ತಕಗಳ ಪರಿಚಯಾತ್ಮಕ ಲೇಖನವನ್ನು ಹೊಸ ಕನ್ನಡ ಸಾಹಿತ್ಯದ ಒಬ್ಬ ಹವ್ಯಾಸಿ ಓದುಗನ ಮಟ್ಟದಲ್ಲಿ ಮಾತ್ರ ಬರೆಯಬಲ್ಲೆ. ಅಂಕಣ ಬರೆಯಲು ಸಾಹಿತ್ಯವೊಂದೇ ಆಗಬೇಕೇ? ಬರೆಯುವ ಮನಸ್ಸಿದ್ದರೆ ಎಷ್ಟೊಂದು ವಿಷಯಗಳಿಲ್ಲ.
ಇಲ್ಲಿ ಒಂದಿಷ್ಟು ಹಾಸ್ಯ, ಹತಾಶೆ, ನೋವು, ಸಿಟ್ಟು, ಸೆಡವು, ಪ್ರಚಲಿತ ವಿದ್ಯಮಾನಗಳು, ಕಥೆ-ವ್ಯಥೆಗಳು, ಇತಿಹಾಸ, ದೇಶ, ಭಾಷೆ,ಧರ್ಮ, ಸಿನೆಮ, ಪುಸ್ತಕ ಪರಿಚಯ ಎಲ್ಲ ಸಿಗುತ್ತದೆ.
ನಮ್ಮ ನಮ್ಮ ಅಭಿಪ್ರಾಯಗಳನ್ನು ಒಂದೇ ವೇದಿಕೆಯಲ್ಲಿ ಹಂಚಿಕೊಳ್ಳಬೇಕೆಂಬ ಆಶಯವೆ ಈ ನಿಲುಮೆ. ನಿಲುಮೆಯೊಳಗೆ ಒಂದು ಸುತ್ತು ಹೊಡೆದು ಬನ್ನಿ. ನಿಮ್ಮ ಅಭಿಪ್ರಾಯ ತಿಳಿಸಿ. ಸಾಧ್ಯವಾದಲ್ಲಿ ನಿಮ್ಮ ಒಂದು ಲೇಖನ ಯಾ ಕವನಗಳನ್ನು ನಮಗೆ ಕಳುಹಿಸಿದರೆ ನಮ್ಮ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವೂ ಸೇರಿದಂತಾಗುತ್ತದೆ. ನಿಮ್ಮ ಲೇಖನಗಳನ್ನು nilume@sify.com ಅಥವಾ baraha@nilume.net ಇ-ಮೇಲ್ ವಿಳಾಸಕ್ಕೆ ಕಳುಹಿಸಿ. ಹನಿಹನಿ ಸೇರಿದರೆ ಹಳ್ಳ- ತೆನೆತೆನೆಗೂಡಿದರೆ ಬಳ್ಳ ಅನ್ನೋ ಮಾತಿದೆಯಲ್ಲ ಹಾಗೆಯೇ, ‘ನಿಲುಮೆ’ಯನ್ನ ಕನ್ನಡ ಸಾಹಿತ್ಯ ಪ್ರಪಂಚದ ಮನೆ ಮಾತಾಗಿಸುವ ಬನ್ನಿ. ಈ ನಿಲುಮೆ ಬರಿ ನಮ್ಮದಲ್ಲ ಇದು ನಿಮ್ಮದು, ಪ್ರತಿಯೊಬ್ಬ ಕನ್ನಡಿಗನದು.
ಹೆಚ್ಚಿನ ಮಾಹಿತಿಗೆ: https://nilume.net/about