ವಿಷಯದ ವಿವರಗಳಿಗೆ ದಾಟಿರಿ

Posts tagged ‘ಅಮೇರಿಕಾ’

30
ಜೂನ್

ನಿರ್ಮಾನುಷ ಪಟ್ಟಣದ ನೆಲದ ತು೦ಬೆಲ್ಲ ಮನುಷ್ಯನ ನೆತ್ತರೇ ಹರಡಿತ್ತು… !!

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

ಐಎಸ್ಐಎಸ್‘ಸ್ಥಳೀಯರು ಆ ಪಟ್ಟಣವನ್ನು ತೊರೆದು ತು೦ಬ ದಿನಗಳಾಗಿರಲಿಲ್ಲ ಎನ್ನುವುದಕ್ಕೆ ಅಲ್ಲಿನ ಮನೆಗಳ ಅ೦ಗಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಬಟ್ಟೆಗಳು ಸಾಕ್ಷಿಯಾಗಿದ್ದವು.ಅಲ್ಲಿನ ಜನ ಅದ್ಯಾವ ಪರಿ ಭಯಭೀತರಾಗಿದ್ದರೆ೦ದರೆ ತಮ್ಮ ತಮ್ಮ ವಾಹನಗಳನ್ನು ಸಹ ಅಲ್ಲಿಯೇ ಮರೆತು ಗುಳೆ ಎದ್ದಿದ್ದರು.ಇಡಿ ಪಟ್ಟಣದಲ್ಲೊ೦ದು ಸ್ಮಶಾನ ಮೌನ.ನಿರ್ಮಾನುಷತೆಯ ಫಲವೋ ಏನೋ ನಗರದ ವಿಲಕ್ಷಣ ಮೌನ ಅಸಹನೆ ಹುಟ್ಟಿಸುವ೦ತಿತ್ತು.ಮನುಷ್ಯರು ಬಿಡಿ,ಕೊನೆಗೊ೦ದು ಪ್ರಾಣಿಯೂ ನಮ್ಮ ಕಣ್ಣಿಗೆ ಬಿದ್ದಿರಲಿಲ್ಲ.ಊರಿನ ಬೀದಿಗಳಲ್ಲಿ ನಮಗೆ ಕಾಣಿಸುತಿದ್ದದ್ದು ಅದೊ೦ದೇ.ಕೆ೦ಪು ನೆತ್ತರು! ಮನುಷ್ಯನ ತಾಜಾ ರಕ್ತ..!! ಅದೊ೦ದು ಭೀಭತ್ಸಪೂರ್ಣ ಅನುಭವ.ನಮ್ಮ ಸೈನಿಕರು ನೆಲದ ಮೇಲೆಲ್ಲ ಹರಡಿ ಬಿದ್ದಿದ್ದ ಪುಟ್ಟಮಕ್ಕಳ ಬಟ್ಟೆಗಳ ಮೇಲೆ ಹೆಜ್ಜೆಯನ್ನಿಟ್ಟು ನಡೆಯುವುದು ಅನಿವಾರ್ಯವಾಗಿತ್ತು.ರಾತ್ರಿಯಿಡಿ ನಡೆದ ಭೀಕರ ಕಾಳಗದ ಪರಿಣಾಮವಾಗಿ ನಗರದ ಮನೆಗಳ ಗೋಡೆಗಳ ತು೦ಬೆಲ್ಲ ಸಿಡಿಗು೦ಡಿನಿ೦ದಾದ ಅಸ೦ಖ್ಯಾತ ತೂತುಗಳು ,ಜೇನುಹುಟ್ಟನ್ನು ನೆನಪಿಸುವ೦ತಿದ್ದವು.ಹತ್ತಾರು ಮೊಬೈಲ್ ಫೋನುಗಳು, ಚಿಕ್ಕ ಮಕ್ಕಳ ಚಪ್ಪಲಿಗಳು ವರ್ಜಿತ ಮನೆಗಳಲ್ಲಿ ಸರ್ವೇ ಸಾಮಾನ್ಯವೆ೦ಬ೦ತೆ ಕಾಣ ಸಿಗುತ್ತಿದ್ದವು.ಸುಲಭವಾಗಿ ಕೈಗೆಟುಕುತ್ತಿದ್ದ ಇ೦ಥಹ ಕೆಲವು ಅಮೂಲ್ಯ ವಸ್ತುಗಳು ನಮ್ಮ ಸೈನಿಕರಲ್ಲಿ ಯಾವ ಆಸಕ್ತಿಯನ್ನೂ ಮೂಡಿಸುತ್ತಿರಲಿಲ್ಲ.ಕನಿಷ್ಟಪಕ್ಷ ಅವುಗಳನ್ನು ನಮ್ಮ ಯೋಧರು ಮುಟ್ಟುತ್ತಲೂ ಇರಲಿಲ್ಲ.ನಮ್ಮ ಸೈನಿಕರು ಹುಡುಕುತ್ತಿದ್ದ ವಸ್ತುಗಳೇ ಬೇರೆ.ಅವರು ವಿಶೇಷವಾಗಿ ಹುಡುಕುತಿದ್ದದ್ದು ಡಿವಿಡಿಗಳಿಗಾಗಿ..!! ಅವು ಯಾವುದೋ ಸಿನಿಮಾ ಅಥವಾ ಇ೦ಪಾದ ಹಾಡುಗಳುಳ್ಳ ಸಾಮಾನ್ಯ ಡಿವಿಡಿಗಳಲ್ಲ.ತಮ್ಮ ಸಾಧನೆಗಳನ್ನು ಪ್ರದರ್ಶಿಸುವುದಕ್ಕಾಗಿ ಜಿಹಾದಿಗಳು ಸೈನಿಕರಿಗಾಗಿಯೇ ತಯಾರಿಸಿಟ್ಟ ಡಿವಿಡಿಗಳವು.

ಮತ್ತಷ್ಟು ಓದು »

18
ಮೇ

ಜಗತ್ತಿನ ಪ್ರಶ್ನೆಗಳಿಗೆ ನಿರುತ್ತರ ಕೊರಿಯ

– ರೋಹಿತ್ ಚಕ್ರತೀರ್ಥ

ಉತ್ತರ ಕೊರಿಯಾಫೆಬ್ರವರಿ 12, 2013. ಮಂಗಳವಾರ. ದೊಡ್ಡಣ್ಣ ಅಮೆರಿಕದ ಅಧ್ಯಕ್ಷ ಒಬಾಮ ಟಿವಿಗಳಲ್ಲಿ ಕಾಣಿಸಿಕೊಂಡು, “ಈ ಪ್ರಯತ್ನ ಕೂಡಲೇ ನಿಲ್ಲಬೇಕು. ಇಲ್ಲವಾದರೆ ತಕ್ಕ ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ” ಅಂತ ಘೋಷಿಸಿದ್ದೇ ತಡ, ಒಂದರ ಹಿಂದೊಂದರಂತೆ ಘೋಷಣೆ, ಬೆದರಿಕೆಗಳ ಸುರಿಮಳೆ. ಜಪಾನ್, ದಕ್ಷಿಣ ಕೊರಿಯ, ರಷ್ಯ, ಇಂಗ್ಲೆಂಡ್, ಫ್ರಾನ್ಸ್, ಸಿಂಗಪುರ, ಮಲೇಷಿಯಾದಂತಹ ಹತ್ತುಹಲವಾರು ದೇಶಗಳ ಅಧ್ಯಕ್ಷರುಗಳು ತಮ್ಮ ಹೇಳಿಕೆಗಳನ್ನು ತಾರಕಸ್ವರದಲ್ಲಿ ಕೂಗಿ ಹೇಳಲು ಕ್ಯೂ ನಿಂತುಬಿಟ್ಟರು. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾ ಕಿ ಮೂನ್ ಕೂಡ, “ನಿಮ್ಮ ಪ್ರಯೋಗಗಳನ್ನು ಕೂಡಲೇ ಸ್ಥಗಿತಗೊಳಿಸಿ. ಇಲ್ಲವಾದರೆ ಪ್ರತಿರೋಧ ಎದುರಿಸಿ” ಅಂತ ಘಂಟಾಘೋಷವಾಗಿ ಹೇಳಿದರು. ಹೆಗಲಿಗೆ ಕೈಹಾಕಿ ಕುಶಲ ಕೇಳುವ ಗೆಳೆಯ ಚೀನಾ ಕೂಡ (ಒಳಗೊಳಗೆ ಬೆಂಬಲಿಸಿದರೂ), ಈ ಪರೀಕ್ಷೆಗಳನ್ನೆಲ್ಲ ಕೈಬಿಟ್ಟು ಸುಮ್ಮನಿದ್ದರೆ ಏನು ನಷ್ಟ? ಅಂತ ಆಪ್ತಸಲಹೆ ಕೊಟ್ಟು ಕೈತೊಳೆದುಕೊಂಡಿತು.

ಇಷ್ಟೆಲ್ಲ ಅಧ್ವಾನಕ್ಕೆ ಕಾರಣವಾಗಿದ್ದು ಉತ್ತರ ಕೊರಿಯ ಎಂಬ ದೇಶ, ತಾನೇ ಹೇಳಿಕೊಂಡಂತೆ – ಬಹಳ ಸಣ್ಣಪ್ರಮಾಣದಲ್ಲಿ ನಡೆಸಿದ, ಮಾಪಕಗಳಲ್ಲಿ 4.9ರಷ್ಟು ದಾಖಲಾದ ನ್ಯೂಕ್ಲಿಯರ್ ಪರೀಕ್ಷೆ. 2006ರ ಪರೀಕ್ಷೆಯ ಹತ್ತುಪಟ್ಟು, 2009ರ ಪರೀಕ್ಷೆಯ ಎರಡು ಪಟ್ಟು ಶಕ್ತಿಶಾಲಿಯಾಗಿದ್ದ ಈ ಪರೀಕ್ಷೆಯಿಂದ ಉತ್ತರ ಕೊರಿಯ ಅಮೆರಿಕೆಗೆ ತನ್ನ ತಾಕತ್ತು ತೋರಿಸಲು ಹೊರಟಿತ್ತು. ಗಾಯದ ಮೇಲೆ ಗೀರೆಳೆದಂತೆ, ಪರೀಕ್ಷೆ ನಡೆಸಿದ ಮೇಲೆ, “ನಮ್ಮ ವ್ಯವಹಾರಗಳಲ್ಲಿ ಪದೇಪದೇ ಮೂಗು ತೂರಿಸುವ ಅಮೆರಿಕಕ್ಕೆ ನಾವು ಕೊಡುತ್ತಿರುವ ಎಚ್ಚರಿಕೆ ಇದು. ಅದರ ಹಸ್ತಕ್ಷೇಪ ನಿಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಪರೀಕ್ಷೆಗಳನ್ನು ನಡೆಸುತ್ತ ಹೋಗುತ್ತೇವೆ” ಅಂತ ಹೇಳಿಕೆ ಕೂಡ ಬಿಡುಗಡೆ ಮಾಡಿತು. ಅಚ್ಚರಿಯ ಮಾತೆಂದರೆ “ಜಗತ್ತಿನ ಸೂಪರ್ ಪವರ್ ನಾಯಕನಾಗಿ ಹೊರಹೊಮ್ಮುತ್ತಿರುವ ನಮ್ಮ ದೇಶದ ಯುದ್ಧ ಸಿದ್ಧತೆಗೆ ಹೆದರಿ ಬಾಲಮುದುರಿ ಕುಂಯ್‍ಗುಡುತ್ತಿರುವ ಅಮೆರಿಕ” ಅಂತ ರಾಷ್ಟ್ರೀಯ ಚಾನೆಲ್‍ನಲ್ಲಿ ಬಂದ ಸುದ್ದಿಯನ್ನು ನೋಡಿ ಪ್ಯೊಂಗ್‍ಯಾಂಗಿನ ಬೀದಿಗಳಲ್ಲಿ ಜನ ಸಂಭ್ರಮಿಸಿ ಕುಣಿದರು! ದೇಶಪ್ರೇಮ ಎನ್ನುತ್ತೀರೋ, ಹಿಸ್ಟೀರಿಯ ಎನ್ನುತ್ತೀರೋ!

ಈ ಎಲ್ಲ ರಾಜಕೀಯ ಪ್ರೇರಿತ ರಾದ್ಧಾಂತ, ಗೊಂದಲಗಳನ್ನು ಬದಿಗಿಟ್ಟು ಈ ಕತೆಯ ಸುತ್ತ ಹಬ್ಬಿಬೆಳೆದ ಹುತ್ತವನ್ನು ತಡವುತ್ತ ಹೋದರೆ, ಕೊನೆಗೆ ನಮಗೆ ಹಾವು ಗೋಚರಿಸಬಹುದೋ ಏನೋ! ಹಾಗಾಗಿ, ಉತ್ತರ ಕೊರಿಯದ ಸುತ್ತ ಸುಮ್ಮನೆ ನಿಷ್ಪಕ್ಷಪಾತವಾಗಿ ಒಂದು ಸುತ್ತು ಹಾಕ್ಕೊಂಡು ಬರೋಣ, ಬನ್ನಿ. ಮತ್ತಷ್ಟು ಓದು »

17
ಜೂನ್

ಹದಿಮೂರರ ಪೋರಿಯೂ ನಮಗೆ ಬದುಕು ಕಲಿಸಬಲ್ಲಳು!

– ಸಹನಾ ವಿಜಯಕುಮಾರ್.  ಬೆಂಗಳೂರು

ಆನ್ ಫ್ರ್ಯಾಂಕ್ಹದಿಮೂರು ವರ್ಷದ ಚುರುಕು ಹುಡುಗಿಯೊಬ್ಬಳು ಸತತವಾಗಿ ಎರಡು ವರ್ಷಗಳ ಕಾಲ ಹೊರಪ್ರಪಂಚದ ಸಂಪರ್ಕ ಕಡಿದುಕೊಂಡು ತನ್ನ ಕುಟುಂಬದೊಂದಿಗೆ ಅಜ್ಞಾತವಾಸದಲ್ಲಿರಬೇಕಾಗಿ ಬಂದರೆ ಏನಾಗಬಹುದು? ಹಣೆಬರಹವನ್ನು ಹಳಿಯುತ್ತ ದಿನದೂಡಬಹುದು. ತನಗೆ ಈ ದುರ್ಗತಿಯನ್ನು ತಂದಿತ್ತ ದೇವರನ್ನು ಶಪಿಸುತ್ತ ಕಣ್ಣೀರಿಡಬಹುದು ಅಥವಾ ಸುಮ್ಮನೆ ಕೊರಗಿ ಖಿನ್ನತೆಗೊಳಗಾಗಬಹುದು. ಅದೆಲ್ಲ ಬಿಟ್ಟು ತನ್ನ ನೋವು ಸಂಕಟ ತೊಳಲಾಟಗಳನ್ನು, ಆ ದಿನಗಳ ಚಿತ್ರಣವನ್ನು ತನ್ನ ಡೈರಿಯಲ್ಲಿ ಯಥಾವತ್ತಾಗಿ ದಾಖಲಿಸಿಟ್ಟು ಸಾವಿನ ನಂತರವೂ ಸ್ಮರಣೀಯಳಾಗಬಹುದೇ? ವ್ಯತಿರಿಕ್ತ ಪರಿಸ್ಥಿತಿಯನ್ನು ಎಳೆ‍ಎಳೆ‍ಯಾಗಿ ಬಿಡಿಸಿಟ್ಟು, ಸಣ್ಣ-ಪುಟ್ಟದ್ದಕ್ಕೆಲ್ಲ ಧೃತಿಗೆಡುವವರಿಗೆ ಸ್ಫೂರ್ತಿಯಾಗಿ ವಿಶ್ವಕ್ಕೇ ಮಾನವೀಯತೆಯ ಪಾಠ ಕಲಿಸುವ ಗುರುವಾಗಬಹುದೇ? ಹೌದು ಎನ್ನುತ್ತದೆ ಇತಿಹಾಸ. ತನ್ನ ಪುಟ್ಟ ಬದುಕನ್ನು ಡೈರಿಯ ಪುಟಗಳಲ್ಲಿ ಸ್ಫುಟವಾಗಿ ಬರೆದಿಟ್ಟು, ಸತ್ತ ಮೇಲೂ ತನ್ನ ಬರಹದಿಂದಲೇ ಬದುಕಿರುವ ಈ ಬಾಲೆಯ ಹೆಸರು ‘ಆನ್ ಫ್ರ್ಯಾಂಕ್’.

ಆನ್ ಹುಟ್ಟಿದ್ದು 1929ನೇ ಇಸವಿಯ ಜೂನ್ 12ರಂದು, ಜರ್ಮನಿಯ ಫ್ರಾಂಕ್‍ಫರ್ಟ್ ಎಂಬಲ್ಲಿ. ಅಪ್ಪ ಓಟ್ಟೊ ಫ್ರ್ಯಾಂಕ್, ಅಮ್ಮ ಎಡಿತ್ ಹಾಗೂ ಅಕ್ಕ ಮಾರ್ಗೋಟ್‍ರನ್ನೊಳಗೊಂಡ ಸಣ್ಣ ಯಹೂದಿ ಕುಟುಂಬ ಇವರದ್ದು. ಅಪ್ಪ ಪುಸ್ತಕ ಪ್ರಿಯನಾದ್ದರಿಂದ ಮನೆಯಲ್ಲೇ ದೊಡ್ಡ ಗ್ರಂಥಾಲಯವಿತ್ತು. ಮಕ್ಕಳಿಗೂ ಪುಸ್ತಕಗಳನ್ನು ಓದಲು ಬಹಳ ಉತ್ತೇಜನವಿತ್ತು. ‘ಆನ್‍’ಗೆ  ನಾಲ್ಕು ವರ್ಷಗಳಾಗುವವರೆಗೂ ಎಲ್ಲ ಮಾಮೂಲಾಗಿಯೇ ಇತ್ತು. ಆದರೆ 1933ರ ಮಾರ್ಚ್ 13ರಂದು ನಡೆದ ಚುನಾವಣೆಯಲ್ಲಿ ಹಿಟ್ಲರ್‍ನ ನಾಜಿ ಪಕ್ಷ ಗೆದ್ದೊಡನೆ ಯಹೂದಿಗಳಲ್ಲಿ ಸಣ್ಣ ಸಂಚಲನ ಶುರುವಾಯಿತು. ಚಾನ್ಸೆಲರ್ ಆಗಿ ನಿಯುಕ್ತನಾದ ಹಿಟ್ಲರ್ ನಿರೀಕ್ಷಿಸಿದ್ದಂತೆಯೇ ದೌರ್ಜನ್ಯಕ್ಕಿಳಿದ. ಅವನು ಮಾಡಿದ ಮೊತ್ತ ಮೊದಲ ಕೆಲಸ Concentration Camp ಎಂದು ಕರೆಯಲ್ಪಡುತ್ತಿದ್ದ ಸಮರ ಶಿಬಿರ(ಯುದ್ಧದ ಸೆರೆಯಾಳುಗಳನ್ನು ಕೂಡಿಡುವ ಶಿಬಿರ)ಗಳನ್ನು ಶುರುಮಾಡಿ ಒಂದು ವರ್ಷದಲ್ಲೇ ಸುಮಾರು 45 ಸಾವಿರ ಜನರನ್ನು ಅಲ್ಲಿಗೆ ದೂಡಿದ್ದು. ಆಗ ಜರ್ಮನಿಯನ್ನು ತೊರೆದ ಸುಮಾರು 3 ಲಕ್ಷ ಯಹೂದಿ ಕುಟುಂಬಗಳಲ್ಲಿ ‘ಆನ್‍’ಳ ಕುಟುಂಬವೂ ಸೇರಿತ್ತು.

ಹೀಗೆ ಜರ್ಮನಿ ಬಿಟ್ಟು ಆಶ್ರಯ ಹುಡುಕಿಕೊಂಡು ಹೊರಟ ಈ ಕುಟುಂಬ ನೆಲೆ ಕಂಡುಕೊಂಡದ್ದು ಹಾಲೆಂಡ್‍ನಲ್ಲಿ. ಐದಾರು ವರ್ಷಗಳು ನೆಮ್ಮದಿಯಾಗಿ ಉರುಳಿದ್ದವೇನೋ, 1940ರ ಮೇ ತಿಂಗಳಿನಲ್ಲಿ ಹಾಲೆಂಡ್‍ನ ಮೇಲೆ ದಾಳಿ ನಡೆಸಿದ ಹಿಟ್ಲರ್‍ನ ಸೈನ್ಯ ಅದನ್ನು ಸುಲಭವಾಗಿ ವಶಪಡಿಸಿಕೊಂಡಿತು. ದುರುಳ ಹಿಟ್ಲರ್‍ನ ಯಹೂದಿ ವಿರೋಧಿ ಚಟುವಟಿಕೆಗಳು ಇಲ್ಲಿಯೂ ಗರಿಗೆದರಿದವು. ಯಹೂದಿಗಳೆಲ್ಲ ಹೆಸರು ನೋಂದಣಿ ಮಾಡಿಸುವುದು ಕಡ್ಡಾಯವಾಯಿತು. ಅಪ್ಪ ಓಟ್ಟೊ ತನ್ನ ಉದ್ಯಮವನ್ನು ಗೆಳೆಯರ ಹೆಸರಿಗೆ ಹಸ್ತಾಂತರಿಸಿದರೆ, ಓದಿನಲ್ಲಿ ಮುಂದಿದ್ದ ಅಕ್ಕ-ತಂಗಿಯರು ತಾವು ಹೋಗುತ್ತಿದ್ದ ಪ್ರತಿಷ್ಠಿತ ಶಾಲೆಗಳನ್ನು ಬಿಟ್ಟು ಯಹೂದಿಯರಿಗೆ ಮೀಸಲಿದ್ದ ಶಾಲೆ ಸೇರಬೇಕಾಯಿತು. ಅಕ್ಕ ಮಾರ್ಗೋಟ್ ತುಂಬಾ ಮೆದು ಸ್ವಭಾವದ ಅಂತರ್ಮುಖಿಯಾಗಿದ್ದರೆ ತಂಗಿ ಆನ್ ವಾಚಾಳಿ ಹಾಗೂ ನಿರ್ಭೀತ ವ್ಯಕ್ತಿತ್ವದವಳಾಗಿದ್ದಳು. ಹಿಟ್ಲರ್‍ನ ಸೇನೆ ಹೇರಿದ್ದ ನೂರೆಂಟು ನಿರ್ಬಂಧಗಳ ನಡುವೆಯೂ ಬದುಕು ಹೇಗೋ ಸಾಗುತ್ತಿತ್ತು. 1943ನೇ ಇಸವಿಯ ಜೂನ್ 12 ‘ಆನ್‍’ಳ 13ನೆಯ ಹುಟ್ಟುಹಬ್ಬ. ಅಂದು ತಾನು ಬಹಳ ದಿನಗಳಿಂದ ಬಯಸಿದ್ದ ಕೆಂಪು-ಬಿಳಿ ಚೌಕಗಳಿದ್ದ ಆಟೋಗ್ರಾಫ್ ಪುಸ್ತಕವೊಂದನ್ನು ಉಡುಗೊರೆಯಾಗಿ ಪಡೆದಳು. ಅದನ್ನು ಡೈರಿಯಂತೆ ಬಳಸುವ ನಿಶ್ಚಯ ಮಾಡಿ ಪ್ರತಿದಿನ ನಡೆಯುತ್ತಿದ್ದ ಘಟನೆಗಳನ್ನು ದಾಖಲಿಸತೊಡಗಿದಳು.

ಮತ್ತಷ್ಟು ಓದು »

19
ಸೆಪ್ಟೆಂ

ಸಿರಿಯಾದಲ್ಲಿ ಶಬ್ದವಿಲ್ಲದ ಯುದ್ಧವಂತೂ ನಡೆಯಲಿದೆ

– ಎಸ್.ಸುನಿಲ್ ಕುಮಾರ್

ರಾಷ್ಟೀಯ ಪ್ರಧಾನ ಕಾರ್ಯದರ್ಶಿ, YOUTH FOR NATION

ಸೈಬರ್ ಯುದ್ಧಈ ಬಾರಿ ಸಿರಿಯಾ ಮೇಲೆ ಕ್ಷಿಪಣಿ ಯುದ್ಧವೇರ್ಪಟ್ಟರೂ, ಕ್ಷಿಪಣಿ ಬಳಸದೇ ಇದ್ದರೂ ಸೈಬರ್ ಯುದ್ಧವಂತೂ ನಿಶ್ಚಿತವಾಗಿ ನಡೆಯಲಿದೆ. ಇದಕ್ಕೆ ಯಾರ ಅಪ್ಪಣೆಯೂ ಬೇಕಿಲ್ಲ. ಯಾರ ಸಮ್ಮತಿಗೂ ಕಾಯಬೇಕಿಲ್ಲ. ಏಕೆಂದರೆ ಇದೊಂದು ಮಾಯಾಯುದ್ಧ. ಇಲ್ಲಿ ಶತ್ರು ಎಲ್ಲಿರುವನು ಎಂದು ತಿಳಿಯುವುದೇ ಇಲ್ಲ. ದಾಳಿ ನಡೆಯುವುದೆ ಗೊತ್ತಾಗುವುದಿಲ್ಲ, ದಾಳಿ ಎಂದು ಶುರುವಾತು, ಎಲ್ಲಿ ಮುಗಿತು ಒಂದೂ ತಿಳಿಯುವುದಿಲ್ಲ. ತಿಳಿಯುವುದೊಂದೆ ಅದರಿಂದಾಗುವ ಹಾನಿ ಮಾತ್ರ, ಸೈಬರ್ ಯುದ್ಧದ ಪರಿಣಾಮ ಅತ್ಯಂತ ಅಪಾಯಕಾರಿ.

ಜೂನ್ ೨೦೧೦ ರಲ್ಲಿ ಇರಾನಿನ ಅಣುಸ್ಥಾವರಗಳು ಸ್ಟಕ್ಸ್‌ನೆಟ್ ಎಂಬ ಕಂಪ್ಯೂಟರ್ ವೈರಸ್ ದಾಳಿಂದ ನಿಷ್ಕ್ರಿಯಗೊಳ್ಳುತ್ತದೆ. ನಿರ್ದಿಷ್ಟವಾಗಿ ಅಣುಸ್ಥಾವರದ ಸೆಂಟ್ರಿಫ್ಯೂಜ್‌ಗಳನ್ನೆ ಗುರಿಯಾಗಿರಿಸಿ ಇರಾನಿನ ಅಣುಶಕ್ತಿ ಉತ್ಪಾದನಾ ಸಾಮರ್ಥ್ಯವನ್ನು ಕುಂಠಿತಗೊಳಿಸಿದ ಸ್ಟಕ್ಸ್‌ನೆಟ್  ಅಮೆರಿಕಾ ಮತ್ತು ಇಸ್ರೇಲ್ ಸೇರಿ ಇರಾನಿನ ವಿರುದ್ಧ ಬಳಸಲು ತಯಾರಿಸಿದ ಸೈಬರ್ ಅಸ್ತ್ರ ಎಂದು ಜೂನ್ ೧. ೨೦೧೨ ರಂದು “ನ್ಯೂಯಾರ್ಕ್ ಟೈಮ್ಸ್” ವರದಿ ಮಾಡುತ್ತದೆ. ಹಾಗೆಯೆ ಈ ಕಾರ್ಯಾಚರಣೆಯ ಹೆಸರು “ಆಪರೇಷನ್ ಒಲಂಪಿಕ್ ಗೇಮ್ಸ್” ಎಂಬುದನ್ನು ಉಲ್ಲೇಖಿಸುತ್ತದೆ.
ದೇಶವೊಂದು ಯಾವುದೇ ಸೈನಿಕರನ್ನು ಕಳುಹಿಸದೆ, ವಾಯುಪಡೆ ನೌಕಾಪಡೆಗಳನ್ನು ನಿಯೋಜಿಸದೆ ಗುಂಡಿನ ಆರ್ಭಟವೂ ಇಲ್ಲದೆ ಹೇಗೆ ಯುದ್ಧ ಮಾಡಬಹುದು ಹಾಗೂ ಇದರಿಂದ ಹೇಗೆ ಶತ್ರು ರಾಷ್ಟ್ರವನ್ನು ಹಣೆಯಬಹುದೆಂಬ ಪಾಠವನ್ನು ಅಮೆರಿಕಾ ಮತ್ತು ಇಸ್ರೇಲ್ ಜಗತ್ತಿಗೆ ಹೇಳಿಕೊಟ್ಟವು.

ಮತ್ತಷ್ಟು ಓದು »

5
ಮೇ

ಒಸಾಮಾ – ಒಬಾಮಾ…!

ಡಾ.ಅಜಕ್ಕಳ ಗಿರೀಶ್ ಭಟ್

ಅಂತೂ ಅಮೆರಿಕ ಒಸಾಮಾನನ್ನು ಕೊಂದಿದೆ ಅನ್ನುವುದನ್ನು ಅದು ಅಧಿಕೃತವಾಗಿ ಘೋಷಿಸಿದೆ. ಹೀಗೆ ಕೊಲ್ಲುವುದು ಅಮೆರಿಕಕ್ಕೆ ಏನೂ ಕಷ್ಟದ ಸಂಗತಿಯಲ್ಲ. ಅದು ಅದನ್ನು ದಕ್ಕಿಸಿಕೊಳ್ಳಬಲ್ಲುದು. ಆದರೆ ಹಲವು ಪ್ರಶ್ನೆಗಳು ಎಲ್ಲರ ಮನಸ್ಸಲ್ಲೂ ಏಳುವುದು ಸಹಜ. ಕೆಲದಿನಗಳಾದ ನಂತರ ಆ ಪ್ರಶ್ನೆಗಳನ್ನು ಎಲ್ಲರೂ ಮರೆಯುತ್ತಾರೆ ಅನ್ನೋದು ಕೂಡ ನಮಗೆಲ್ಲ ಗೊತ್ತು.ನಾವು ಕೂಡ ಮರೀತೇವೆ.ಹಾಗೆ ಮರೆಯುವುದು ನಮ್ಮ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಮುಖ್ಯ.ಆದರೂ ಈಗ ಮನಸಲ್ಲಿ ಬಂದ ಆಲೋಚನೆಗಳಲ್ಲಿ ಕೆಲವನ್ನು ಮರುನೆನೆದುಕೊಳ್ಳುತ್ತೇನೆ.ಇವು ನನ್ನ ಮನಸಲ್ಲಿ ಮಾತ್ರ ಬಂದ ಪ್ರಶ್ನೆಗಳಲ್ಲವಾದ್ದರಿಂದ ಈ ಪ್ರಶ್ನೆಗಳ ಬಗ್ಗೆ ನಾನು ಯಾವುದೇ ಕಾಪಿರೈಟ್ ಕ್ಲೈಮ್ ಮಾಡುವುದಿಲ್ಲ!!!

ನೋಡಿ,ಇದು ಅನ್ಯಾಯವಲ್ಲವೇ? ವ್ಯಕ್ತಿಯನ್ನು ವಿಚಾರಣೆಯಿಲ್ಲದೆ ಕೊಲ್ಲುವುದು ನ್ಯಾಯವೇ?

ಆಧುನಿಕ ನ್ಯಾಯಶಾಸ್ತ್ರದಲ್ಲಿ ಎಲ್ಲಾದರೂ ವಿಚಾರಣೆಯಿಲ್ಲದೆ ಹೀಗೆ ಶಿಕ್ಷೆ ನೀಡುವುದನ್ನು ಸಮರ್ಥಿಸಲಾಗಿದೆಯೇ? ಲಾಡೆನ್ ಗೆ ಫೇರ್ ಟ್ರಯಲ್ ನೀಡಲಾಗಿಲ್ಲ. ಅವನನ್ನು ಯಾವ ಕೋರ್ಟಿನಲ್ಲಿ ವಿಚಾರಣೆ ಮಾಡಲಾಗಿದೆ? ತಾನು ಕೊಲೆ ಮಾಡಿದ್ದೇನೆ ಅಂತ ಒಬ್ಬ ವ್ಯಕ್ತಿ ಹೇಳಿದ ಕೂಡಲೇ ಯಾವ ಕೋರ್ಟು ಕೂಡ ವಿಚಾರಣೆಯಿಲ್ಲದೆ ಆ ವ್ಯಕ್ತಿಯನ್ನು ಗಲ್ಲಿಗೆ ಹಾಕುವುದಿಲ್ಲ. ಹಾಗಿರುವಾಗ ,ಅಮೆರಿಕವಿರಬಹುದು ಅಥವಾ ಅದರಪ್ಪನಿರಬಹುದು, ಕಾನೂನನ್ನು ಕೈಗೆ ತೆಗೆದುಕೊಳ್ಳುವುದೆಂದರೇನು? ಓಯ್!! ಅಮ್ನೆಸ್ಟಿ ಇಂಟರ್ ನ್ಯಾಷನಲ್ ಅನ್ನುವ ಸಂಸ್ಥೆಯವರೇ!!!ಎಲ್ಲಿದ್ದೀರಿ? ಒಸಾಮಾನ ಮಾನವ ಹಕ್ಕಿಗೆ ಬೆಲೆ ಇಲ್ಲವೇ???

ಮತ್ತಷ್ಟು ಓದು »