ವಿಷಯದ ವಿವರಗಳಿಗೆ ದಾಟಿರಿ

Posts tagged ‘ಆತ್ಮಹತ್ಯೆ’

9
ಆಗಸ್ಟ್

ಆತ್ಮಹತ್ಯೆಯಲ್ಲಿನ ಮನಸ್ತಿತಿ.

– ಗೀತಾ ಹೆಗ್ಡೆ

suicide_2439218fಆತ್ಮಹತ್ಯೆ ಮಹಾ ಪಾಪ.  ಆತ್ಮಹತ್ಯೆ ಮಾಡಿಕೊಂಡವರು, ದುರ್ಮರಣದಲ್ಲಿ ಸತ್ತವರು ಅಂತರ್ ಪಿಶಾಚಿಯಾಗಿ ಅಲೆಯುತ್ತಾರಂತೆ. ಅವರಿಗೆ ಇಹದಲ್ಲೂ ಪರದಲ್ಲೂ ಸ್ಥಾನವಿಲ್ಲವಂತೆ.. ದೆವ್ವವಾಗಿ ಅಲೆಯುತ್ತಾರಂತೆ,  ಹಾಗಂತೆ ಹೀಗಂತೆ ಅನ್ನುವ ಕಥೆಗಳು ಚಿಕ್ಕಂದಿನಿಂದ ನನ್ನ ತಲೆ ಹೊಕ್ಕಿ ಶಾಶ್ವತವಾಗಿ ನೆಲೆಯೂರಿದ್ದು ಬದುಕನ್ನು ಎದುರಿಸುವ ಛಲಕ್ಕೆ ನಾಂದಿಯಾಗಿರಬಹುದೇ ಅನ್ನುವ ಸಣ್ಣ ಗುಮಾನಿ ಕಾಡಿದ್ದು ಇತ್ತೀಚಿನ ಘಟನೆಗಳನ್ನು ನೋಡಿದಾಗ, ಬರಹಗಳನ್ನು ಓದಿದಾಗ ನೆನಪುಗಳು ಹೆಡೆಯೆತ್ತಿ ನನ್ನ ಸ್ವಂತ ಅನುಭವ ಬರೆಯಲು ಪ್ರೇರೇಪಿಸಿತು. ಆ ಒಂದು ಮನಸ್ಥಿತಿ ಹೇಗಿರುತ್ತದೆ ಎನ್ನುವುದು ಈ ಲೇಖನದ ತಾತ್ಪರ್ಯ. Read more »

10
ಜುಲೈ

ಕಬ್ಬು ಸಕ್ಕರೆಗಷ್ಟೇ ಸೀಮಿತವೆ?

– ರಾಘವೇಂದ್ರ ಅಡಿಗ

ಕಬ್ಬು ಬೆಳೆಗಾರರುರಾಜ್ಯದಲ್ಲಿ ಇದೇ ಇಪ್ಪತ್ತು ದಿನಗಳಲ್ಲಿ ಸುಮಾರು ಇಪ್ಪತ್ತೈದು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲಿ ಬಹುಪಾಲು ಮಂದಿ ಕಬ್ಬು ಬೆಳೆಗಾರರೇ ಆಗಿದ್ದು ಸಾಲ ಮಾಡಿ ಬೆಳೆದ ಕಬ್ಬನ್ನು ಸಕ್ಕರೆ ಕಾರ್ಖಾನೆಗೆಳಿಗೆ ನೀಡಿದ ಬಳಿಕ ಕಾರ್ಖಾನೆ ಮಾಲೀಕರಿಂದ ಬರಬೇಕಾದ ಹಣ ಬರದೆ ಸಾಲದ ಬಡ್ಡಿಯನ್ನೂ ಕಟ್ಟಲಾಗದೆ ಆತ್ಮಹತ್ಯೆಯ ಮೊರೆ ಹೋಗುತ್ತಿದ್ದಾರೆ. ರೈತರ ಈ ಸರಣಿ ಆತ್ಮಹತ್ಯೆಗೆ ಸರ್ಕಾರ ಹಾಗೂ ಕಾರ್ಖಾನೆ ಮಾಲೀಕರೇ ನೇರ ಹೊಣೆ ಎಂದು ವಿರೋಧ ಪಕ್ಷಗಳ ನಾಯಕರೂ ಸೇರಿದಂತೆ ಎಲ್ಲರೂ ಗುಲ್ಲೆಬ್ಬಿಸುತ್ತಿದ್ದಾರೆ. ಇದು ತಕ್ಕಮಟ್ಟಿಗೆ ನಿಜವೂ ಆಗಿರಬಹುದು. ಆದರೆ ಇಂದಿನ ಕೃಷಿ ಪದ್ದತಿ, ರೈತರ ಮನಸ್ಥಿತಿಯೂ ಸಹ ಈ ದುರ್ದೆಸೆಗೆ ಕಾರಣೆವೆಂದರೆ ಅದು ತಪ್ಪಲ್ಲ.

ಸಕ್ಕರೆಗೆ ಸೀಮಿತವಲ್ಲ!
ಮೊದಲನೆಯದಾಗಿ ನಮ್ಮ ರೈತರ ಮನಸ್ಥಿತಿ ಬದಲಾಗಬೇಕು. ಕಾರ್ಖಾನೆಗಳು, ಸರ್ಕಾರಗಳನ್ನೇ ಅವಲಂಬಿಸಿಕೊಳ್ಳುವುದರಿಂದ ಹೊರಬಂದು ತಾವೇ ಸ್ವತಂತ್ರವಾಗಿ ಯೋಚಿಸುವುದನ್ನು ಕಲಿಯಬೇಕಿದೆ. ಇಂದು ತಂತ್ರಜ್ಜಾನ ಅದೆಷ್ಟು ಮುಂದುವರಿದಿದೆ, ಮಾನವನು ತಾನದೆಷ್ಟರ ಮಟ್ಟಿಗೆ ಅದರ ಅನುಕೂಲಗಳನ್ನು ಬಳಸಿಕೊಳ್ಳುತ್ತಿದ್ದಾನೆ ಎನ್ನುವುದನ್ನು ನಾವ್ಯಾರೂ ಇನ್ನೊಬ್ಬರಿಗೆ ಹೇಳಿಕೊಡಬೇಕಾಗಿಲ್ಲ. ಕೃಷಿ ಕ್ಷೇತ್ರದಲ್ಲಿಯೂ ಸಹ ಹಿಂದಿನ ಕಾಲಕ್ಕಿಂತ ಸಾಕಷ್ಟು ಬದಲಾವಣೆಗಾಳಾಗಿವೆ. ಕ್ರಾಂತಿಕಾರಿ ರೀತಿಯಲ್ಲಾಗಿರುವ ತಾಂತ್ರಿಕ ಪ್ರಗತಿಯನ್ನೂ ನಮ್ಮವರೇ ಕೆಲವು ಕೃಷಿಕರು ಅದರ ಲಾಭವನ್ನು ಯಶಸ್ವಿಯಾಗಿ ಬಳಸಿಕೊಳ್ಳುತ್ತಿರುವುದನ್ನೂ ನಾವು ನೋಡುತ್ತಿದ್ದೇವೆ. ಆದರೆ ಇಂತಹಾ ಸನ್ನಿವೇಶದಲ್ಲಿಯೂ ಕಬ್ಬು ಬೆಳೆಗಾರರು ಬೆಳೆದ ಕಬ್ಬನ್ನೇ ನೆಲಸಮ ಮಾಡುವುದು, ಸುಡುವುದು ಅಲ್ಲದೆ ತಾನೂ ಕೂಡ ಆತ್ಮಹತ್ಯೆಯಂತಹಾ ಕೃತ್ಯಕ್ಕೆ ಮುಂದಾಗುತ್ತಿರುವುದು ನೋಡಿದರೆ ನಮ್ಮ ಕೃಷಿಕರಿಗೆ ಈ  ತಂತ್ರಜ್ಞಾನ ಬೆಳವಣಿಗೆಯ ಕುರಿತ ಸಾಮಾನ್ಯ ಜ್ಞಾನವೂ ಇಲ್ಲವೆ ಎನ್ನುವ ಪ್ರಶ್ನೆ ಎದುರಾಗುತ್ತದೆ.

Read more »

3
ಜುಲೈ

ಪರಿಹಾರಭಾಗ್ಯದ ಆಸೆಗೆ ಪ್ರಾಣ ಕಳೆದುಕೊಂಡ ಶಾಸಕ

– ಪ್ರವೀಣ್ ಕುಮಾರ್ ಮಾವಿನಕಾಡು

Nilume Sulsuddi - Shasakara Aatmahatyeಶಾಸಕರು ಅಥವಾ ಮಂತ್ರಿಗಳು ಆತ್ಮಹತ್ಯೆ ಮಾಡಿಕೊಂಡರೆ ರೈತ ಸಂಘಟನೆಗಳ ವತಿಯಿಂದ ಪರಿಹಾರ ನೀಡಲಾಗುವುದು ಎನ್ನುವ ಘೋಷಣೆಯನ್ನು ನಂಬಿ ಶಾಸಕನೊಬ್ಬ ಅಧಿವೇಶನದ ನಡುವೆಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ!ಶೂನ್ಯ ವೇಳೆಯಲ್ಲಿ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಶಾಸಕನನ್ನು ಕೆಳಗಿಳಿಸಿ ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಮಾರ್ಗಮದ್ಯದಲ್ಲಿಯೇ ಅಸುನೀಗಿದ್ದಾನೆ.

ಇದರಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣಗೊಂಡಿದ್ದು ಇತರ ಶಾಸಕರು ರಾಜ್ಯ ಹೆದ್ದಾರಿಯಲ್ಲಿ ಟೈರ್ ಗಳನ್ನು ಸುಟ್ಟು ಪ್ರತಿಭಟನೆ ನಡೆಸಿದರು.ರೈತ ಸಂಘಟನೆಗಳ ರಾಜ್ಯ ಮುಖಂಡರು ಬಂದು ಪರಿಹಾರ ನೀಡುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದ ಶಾಸಕರು,ಮೃತ ದೇಹವನ್ನು ಪೋಸ್ಟ್ ಮಾರ್ಟಮ್ ಗೆ ಒಯ್ಯಲೂ ಅವಕಾಶ ನೀಡದೇ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು.ನಂತರ ಸ್ಥಳಕ್ಕೆ ಬಂದ ಸ್ಥಳೀಯ ರೈತ ಮುಖಂಡನ ಬೈಕ್ ಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ನಂತರ ಸ್ಥಳದಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಬೇಕಾಯಿತು.

Read more »

27
ಏಪ್ರಿಲ್

ರೈತರ ಆತ್ಮಹತ್ಯೆ, ಹೀಗೊಂದು ಚಿಂತನೆ

– ಭರತ್ ಎನ್ ಶಾಸ್ತ್ರಿ

ರೈತಆತ್ಮಹತ್ಯೆಗಳು ಘೋರನಿರ್ಧಾರಗಳು ಎನ್ನುವುದರಲ್ಲಿ ಸಂಶಯವಿಲ್ಲ. ಯಾವುದೇ ಸಾವು ತರುವ ಶೂನ್ಯತೆ, ಮತ್ತು ಬಂಧುಮಿತ್ರರಿಗೆ ಅಥವಾ ಪ್ರೀತಿಪಾತ್ರರಿಗೆ ತರುವ ಯಾತನೆ ಅನುಭವಿಸಿದವರಿಗೇ ಗೊತ್ತು. ಅದರಲ್ಲೂ ಆತ್ಮಹತ್ಯೆ ತರುವ ಸಂಕಟ ಮಾತ್ರ ಹಲವು ಆಯಾಮಗಳದ್ದು.

ಆದರೆ, ಭಾರತದಲ್ಲಿ ರೈತರ ಆತ್ಮಹತ್ಯೆಗಳು ವಿಚಿತ್ರಕಾರಣಗಳಿಂದ ಮಾಧ್ಯಮಗಳ ದೊಡ್ಡಗಂಟಲಿನಿಂದ ಜನರ ಗಮನ ಸೆಳೆಯುತ್ತವೆ. ರೈತರ ಆತ್ಮಹತ್ಯೆಗಳಿಗೆ ಕಾರಣ ಹುಡುಕಲು ನಡೆಸಿದ ವೈಜ್ಞಾನಿಕ ಮತ್ತು ಭಾವೋದ್ವೇಗರಹಿತ ಅಧ್ಯಯನಗಳು ಒಂದೋ ಅವಗಣಿಸಲ್ಪಟ್ಟಿವೆ, ಅಥವಾ ರಾಜಕೀಯ ಕಾರಣಗಳಿಂದ ಆಳುವವರ ಮತ್ತು ಮಾಧ್ಯಮಗಳ ಕೆಂಗಣ್ಣಿಗೆ ಗುರಿಯಾಗಿವೆ.

ಹೆಚ್ಚುತ್ತಿರುವ ಜನಸಂಖ್ಯೆ, ದುಡಿಯುವ ಯುವಜನತೆಯ ಕೈಗೆ ಉದ್ಯೋಗಗಳ ಅಭಾವ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ಕುಸಿಯುತ್ತಿರುವ ಮಹಾನಗರ/ ನಗರಗಳು ಇವೆಲ್ಲ ಸಮಸ್ಯೆಯ ಜತೆ ಸಕ್ಷಮವಲ್ಲದ ಕೃಷಿಕ್ಷೇತ್ರ ಕೂಡ ಭಾರತದ ಹಿಂದುಳಿಕೆಯ ಕಾರಣವಾಗಿದೆ.

ಆತ್ಮಹತ್ಯೆಗಳ ಬಗ್ಗೆ ಭಾರತದ ಒಟ್ಟೂ ಪರಿಸ್ಥಿತಿಯನ್ನು ಅವಲೋಕಿಸುವುದಾದರೆ, ಮೂರುದಶಕಗಳ ಹಿಂದೆ ಸುಮಾರು ೪೦,೦೦೦(ಒಂದು ವರ್ಷಕ್ಕೆ) ದಷ್ಟಿದ್ದ ಆತ್ಮಹತ್ಯೆಗಳ ಸಂಖ್ಯೆ ೨೦೦೯ ಕ್ಕೆ ೧೨೭,೧೫೧ ಕ್ಕೆ ಏರಿತು. ಅದೇ ೨೦೧೩ ರಲ್ಲಿ ಒಟ್ಟು ಆತ್ಮಹತ್ಯೆಗಳ ಸಂಖ್ಯೆ ೧,೩೪,೭೯೯! ಈ ಐದು ವರ್ಷಗಳಲ್ಲಿ ಕರ್ನಾಟಕದ ಕೊಡುಗೆ ಹತ್ತಿರ ಹತ್ತಿರ ೮.೪%. ಕರ್ನಾಟಕದಲ್ಲಿ ೨೦೦೯ ರ ವರ್ಷದಲ್ಲಿ ಸಂಭವಿಸಿದ ಆತ್ಮಹತ್ಯೆಗಳು ಸುಮಾರು ೧೦,೬೮೦. ಇದರಲ್ಲಿ ರೈತರ ಸಂಖ್ಯೆ ೩೩೭, ಎಂದರೆ ೩.೧೫%. ಇದರ ಅರ್ಥ ಪ್ರತಿ ೩೦ ಆತ್ಮಹತ್ಯೆಗಳಲ್ಲಿ ಒಬ್ಬ ರೈತನ ಜೀವನಷ್ಟವಾಗಿದೆ. ಇನ್ನುಳಿದವರ ವೃತ್ತಿ ಏನಿತ್ತು? ಸೋಜಿಗವೆಂದರೆ ರೈತರ ಆತ್ಮಹತ್ಯೆಯ ಬಗ್ಗೆ ಅಂತರ್ಜಾಲದಲ್ಲಿ ಸುಲಭವಾಗಿ ಸಿಕ್ಕುವ ಮಾಹಿತಿ ಮಿಕ್ಕ ವೃತ್ತಿಯಲ್ಲಿರುವವರ ಬಗ್ಗೆ ಸಿಗುವುದಿಲ್ಲ. ಬೆಂಗಳೂರನ್ನೇ ಉದಾಹರಣೆಗೆ ತೆಗೆದುಕೊಳ್ಳುವುದಾದರೆ, ಸಾಫ್ಟ್ ವೇರ್ ಉದ್ಯಮದಲ್ಲಿ ಮಿತಿಮೀರಿದ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ ಎಷ್ಟು ಎಂದು ನೀವು ಹುಡುಕಾಡಿದರೆ ಅಂಕಿ-ಅಂಶಗಳನ್ನು ಪಡೆಯಲು ಕಷ್ಟ ಪಡಬೇಕಾಗುತ್ತದೆ!

Read more »