ವಿಷಯದ ವಿವರಗಳಿಗೆ ದಾಟಿರಿ

Posts tagged ‘ಆಳ್ವಾಸ್ ನುಡಿಸಿರಿ ೨೦೧೫’

26
ನವೆಂ

“ನುಡಿಸಿರಿ” ಮತ್ತು ಮೊಸರಲ್ಲಿ ಕಲ್ಲು ಹುಡುಕುವ ಮನಸ್ಥಿತಿ

– ಗುರುಪ್ರಸಾದ್ ಆಚಾರ್ಯ

ಆಳ್ವಾಸ್ ನುಡಿಸಿರಿ೨೦೧೫” ಆಳ್ವಾಸ್ ನುಡಿಸಿರಿ ” ಮತ್ತು ” ಆಳ್ವಾಸ್ ವಿರಾಸತ್ ” ಈ ಎರಡು ಸಾಂಸ್ಕೃತಿಕ ಹಬ್ಬಗಳ ಹೆಸರು ಕೇಳದ ಜನರು ತೀರಾ ವಿರಳ ಅಂತನೇ ಹೇಳಬೇಕು, ಆ ಮಟ್ಟಿಗೆ ಅದು ಜನರ ಗಮನ ಸೆಳೆದಿದೆ. ಬರಿಯ ರಾಜ್ಯ ಮಾತ್ರವಲ್ಲ ರಾಷ್ಟ್ರ ಮಟ್ಟಕ್ಕೂ ತನ್ನ ಖ್ಯಾತಿಯನ್ನ ವಿಸ್ತರಿಸಿ ಅದರಾಚೆಗೂ ತನ್ನ ಛಾಪು ಮೂಡಿಸಿದೆಯೆಂದರೆ ಅದರ ಸ್ವರೂಪ, ವೈಶಿಷ್ಟ್ಯತೆ ಹೇಗಿದ್ದರಬೇಡ. ಇವೆರಡರ ಕಲ್ಪನೆಯೇ ವಿಶಿಷ್ಟವಾದದ್ದು ” ನುಡಿಸಿರಿ ” ಅನ್ನೋದು ನಮ್ಮ ನಾಡಿನ ನುಡಿಗಾಗಿ ಮೀಸಲಿಟ್ಟ ಕಾರ್ಯಕ್ರಮವಾದರೆ ” ವಿರಾಸತ್ ” ನಮ್ಮ ಸಾಂಸ್ಕೃತಿಕ ವೈಭವಕ್ಕೆ ಹಿಡಿದ ಕೈಗನ್ನಡಿ. ಪಾಶ್ಚಿಮಾತ್ಯ ಸಂಸ್ಕೃತಿ ಮತ್ತು ಭಾಷೆ ಇವೆರಡರ ಕಬಂಧ ಬಾಹುಗಳ ಬಂಧನದಲ್ಲಿರೋ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಈ ಎರಡೂ ಕಾರ್ಯಕ್ರಮಗಳೇ ಆಶಾಕಿರಣ. ಅಷ್ಟಾಗಿದ್ದೂ ಈ ನುಡಿಸಿರಿಯ ಬಗ್ಗೆ ಅಪಸ್ವರ ಏಳುತ್ತಿದೆ ಅಂದರೆ ಅದನ್ನ ದುರಂತವೆನ್ನದೆ ಇನ್ನೇನನ್ನಲಿ…??

ಬಹುಶಃ ಕಳೆದ ಬಾರಿಯೇ ಇದ್ದಿರಬೇಕು…. ತೀರಾ ಹಿಂದುಳಿದ ವರ್ಗದ ಸಾಂಸ್ಕೃತಿಕ ಕಲಾಪ್ರಕಾರವೊಂದನ್ನ ಅಳವಡಿಸಿಕೊಂಡಿದ್ದಕ್ಕೆ ಅಪಸ್ವರವೊಂದು ಕೇಳಿ ಬಂದಿತ್ತು. ಕಾರಣ ಆ ಕಲಾವಿದರು ತಮ್ಮ ಮೈ ಮತ್ತು ಮುಖಕ್ಕೆ  ಪೂರ್ತಿ ಕಪ್ಪು ಬಣ್ಣ ಬಳಿದುಕೊಂಡಿದ್ದರು.ಭಾರತದಲ್ಲಿ ಕಲಾ ಪ್ರಕಾರಗಳು ಲೆಕ್ಕವಿಲ್ಲದಷ್ಟಿದೆ ಅನ್ನೋದು ನಮಗೆಲ್ಲಾ ಗೊತ್ತಿದ್ದ ವಿಷಯವೇ.ಪ್ರತಿಯೊಂದು ಜನಾಂಗಕ್ಕೂ ಅದರದೇ ಆದ ಸಾಂಸ್ಕೃತಿಕ ಆಚರಣೆಗಳಿರುತ್ತದೆ.ಆ ಜನಾಂಗಕ್ಕೆ ಆ ಕಲಾ ಪ್ರಕಾರದ ಕುರಿತು ಅಭಿಮಾನವಿದ್ದೇ ಇರುತ್ತದೆ, ಇಂಥಾದ್ದರಲ್ಲಿ ಆ ಕಲಾ ಪ್ರಕಾರ ಉಳಿಯಲಿ ಅನ್ನುವ ನಿಟ್ಟಿನಲ್ಲಿ ಅಂತಾ ಕಲಾವಿದರನ್ನ ಕರೆದು ಅವರಿಗೊಂದು ವೇದಿಕೆ ಕಲ್ಪಿಸಿಕೊಟ್ಟು ಆ ಕಲೆಯನ್ನೂ ಉಳಿಸುವ ಪ್ರಯತ್ನ ಪಟ್ಟ ಮೋಹನ್ ಆಳ್ವಾರವರು ಟೀಕೆಗೊಳಪಡುತ್ತಾರೆ.ಅದು ಆ ಜನಾಂಗದ ನಿಂದನೆ ಎಂಬಂತೆ ಲೇಖನ ಬರೆಯುತ್ತಾರೆ.ವಾಸ್ತವದಲ್ಲಿ ” ಜನಾಂಗೀಯ ನಿಂದನೆ ” ಅನ್ನೋ ಆರೋಪ ಹೊರಿಸಿದವರ್ಯಾರು ಆ ಕಲಾವಿದರನ್ನ ಮಾತಾಡಿಸಿ ಅವರ ಮನದ ಮಾತನ್ನ ತಮ್ಮ ಬರಹದ ಮೂಲಕ ಹೇಳಿದ್ದಲ್ಲ. ತಮಗೆ ತಾವೇ ಅದು ಜನಾಂಗೀಯ ಅವಹೇಳನ ಅನ್ನುವ ನಿರ್ಧಾರ ತೆಗೆದುಕೊಂಡು ಡಂಗುರ ಸಾರಿಬಿಟ್ಟಿದ್ದರು. ಆದರೆ ಅದೇ ಕಲಾ ಪ್ರಕಾರವನ್ನ ಖುದ್ದು ರಾಜ್ಯಸರ್ಕಾರವೇ ಒಮ್ಮೆ ಗಣರಾಜ್ಯೋತ್ಸವ ದಿನದ ಪೆರೇಡ್ ನಲ್ಲೋ ಅಥವಾ ದಸರಾ ಉತ್ಸವದಲ್ಲೂ ಪ್ರದರ್ಶಿಸಲು ಅವಕಾಶ ಮಾಡಿಕೊಟ್ಟಿತ್ತು. ಆವಾಗ ಏನೂ ಮಾತನಾಡದವರು ಆಳ್ವಾಸ್ ನುಡಿಸಿರಿಯಲ್ಲಿ ಇದನ್ನ ಕಂಡೊಂಡನೆ ಕೆಂಡ ತುಳಿದವರಂತೆ ಆಡತೊಡಗಿದ್ದಾದರೂ ಯಾಕೆ…? ಕಲಾವಿದರಿಗೆ ಮುನಿಸಿಲ್ಲ, ಕಲೆಯನ್ನ ಪೋಷಿಸೋರಿಗೂ ಕೀಳಾಗಿ ಕಾಣಿಸುವ ಯೋಚನೆ ಇಲ್ಲದಿರುವಾಗ ಮೂರನೆ ವ್ಯಕ್ತಿಗಳಿಂದ ಅಪಸ್ವರ ಬರುತ್ತಿರುವುದು  ಯಾಕೆ…?

Read more »

1
ನವೆಂ

ಆಳ್ವಾಸ್ ನುಡಿಸಿರಿ : ನಮ್ಮ ಸಮೃದ್ಧ ಸಾಂಸ್ಕೃತಿಕ ಜೀವನದ ಅನಾವರಣ

– ಡಾ.ಎಂ.ಮೋಹನ್ ಆಳ್ವ

ಆಳ್ವಾಸ್ ನುಡಿಸಿರಿ ೨೦೧೫(ಬೆಳಗಾವಿ ಜಿಲ್ಲೆಯ ಅಥಣಿ, ಚಿಕ್ಕೋಡಿ, ನಿಪ್ಪಾಣಿ ಹಾಗೂ ಸವದತ್ತಿ ತಾಲೂಕುಗಳಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಿತು. ಈ ಘಟಕಗಳ ಕಾರ್ಯಕ್ರಮದಲ್ಲಿ ಡಾ.ಎಂ.ಮೋಹನ್ ಆಳ್ವರು ಆಳ್ವಾಸ್ ನುಡಿಸಿರಿಯ ಉದ್ದೇಶ, ಪ್ರಾಮುಖ್ಯತೆಗಳನ್ನು ಜನರೊಡನೆ ಮನಃಪೂರ್ವಕವಾಗಿ ಹಂಚಿಕೊಂಡರು. ಅವರ ಮನದಾಳದ ಮಾತುಗಳು ಹೀಗಿದ್ದವು )

ಭಾರತ ಎಲ್ಲಾ ವಿಧದಿಂದಲೂ ಸಂಪದ್ಭರಿತವಾದ ದೇಶ. ಈ ದೇಶದ ಸಾಂಸ್ಕೃತಿಕ ಹಿನ್ನೆಲೆ ಈ ಮಾತಿನಿಂದ ಹೊರತಾದುದಲ್ಲ. ಸಾಂಸ್ಕೃತಿಕವಾಗಿ ಅತ್ಯಂತ ಸಮೃದ್ಧವಾದ ದೇಶ ನಮ್ಮದು. ನಮಗಿರುವ ಸಾಂಸ್ಕೃತಿಕ ಹಿನ್ನೆಲೆ ಬೇರಾವ ದೇಶಕ್ಕೂ ಇಲ್ಲ. ಆದರೆ ಇಂದು ಈ ಎಲ್ಲಾ ಚಟುವಟಿಕೆಗಳ ಭಾರತೀಯರಾದ ನಮ್ಮಿಂದ ಎಲ್ಲೋ ದೂರ ಸರಿಯುತ್ತಿವೆ. ನಮ್ಮಿಂದ ಮರೆಯಾಗುತ್ತಿರುವ ಸಾಂಸ್ಕೃತಿಕ ಚಟುವಟಿಕೆಗಳನ್ನು ಉಳಿಸಿ, ಬೆಳೆಸಿ, ಆದರಿಸುವ ಕಾರ್ಯ ನಮ್ಮಿಂದಾಗಬೇಕಿದೆ. ಈ ಹಿನ್ನೆಲೆಯಲ್ಲಿ ನಾವು ಆರಂಭಿಸಿರುವ ಸಾಂಸ್ಕೃತಿಕ ಉತ್ಸವಗಳೇ `ಆಳ್ವಾಸ್ ನುಡಿಸಿರಿ’ ಹಾಗೂ `ಆಳ್ವಾಸ್ ವಿರಾಸತ್’ ಕಾರ್ಯಕ್ರಮಗಳು.

ಆಳ್ವಾಸ್ ನುಡಿಸಿರಿ ಕನ್ನಡ ಭಾಷೆಯ ಕುರಿತಾದ ರಾಷ್ಟ್ರೀಯ ನಾಡು-ನುಡಿಯ ಉತ್ಸವ. ಇದು ಆರಂಭವಾಗಿ 12 ವರ್ಷ ಸಂದಿವೆ. ಇನ್ನು ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ. ವಿರಾಸತ್ ಆರಂಭವಾಗಿ 22 ವರ್ಷ ಕಳೆದಿವೆ. ದೇಶ-ವಿದೇಶಗಳಲ್ಲಿರುವ ಕಲಾ ರಸಿಕರನ್ನು ಒಂದುಗೂಡಿಸುವ ಕಾರ್ಯ ಇದಾಗಿದೆ.

ಸಾಂಸ್ಕೃತಿಕ ಚಟುವಟಿಕೆಗಳು ಅತೀ ಮುಖ್ಯ
ನಾವು ಈ ಕಾರ್ಯಕ್ರಮಗಳನ್ನು ಮಾಡುವಾಗ ಸಾಕಷ್ಟು ಹಣ ಖರ್ಚಾಗುತ್ತದೆ. ನೀವು ವ್ಯರ್ಥ ಹಣ ಪೋಲು ಮಾಡುತ್ತೀರಿ ಎನ್ನುವವರೂ ಇದ್ದಾರೆ. ಆದರೆ ನಮ್ಮ ಸಾಂಸ್ಕೃತಿಕ ಹಿನ್ನೆಲೆಯನ್ನು ಕಾಪಾಡುವಾಗ ಇದು ಅನಿವಾರ್ಯ ಹಾಗೂ ಅವಶ್ಯಕ. ಇಂದು ಅನೇಕ ಜಾಗತಿಕ ಸವಾಲುಗಳು ನಮ್ಮೆದುರಿಗಿವೆ. ವಿದ್ಯಾರ್ಥಿಗಳು ಅವನ್ನು ಎದುರಿಸಲು ಯಾವಾಗಲೂ ತಯಾರಾಗಿರಬೇಕು. ಹಾಗಿರುವಾಗ ಕೇವಲ ಶೈಕ್ಷಣಿಕವಾಗಿ ಬಲವಾಗಿದ್ದರೆ ಸಾಲದು; ಮಾನಸಿಕವಾಗಿ, ಬೌದ್ದಿಕವಾಗಿ ಆ ಸವಾಲುಗಳನ್ನೆದುರಿಸುವ ಪ್ರೌಢಿಮೆ ನಮ್ಮ ಮಕ್ಕಳಿಗಿರಬೇಕು. ಮಸ್ಯೆಗಳಿಗೆ ಪರಿಹಾರ ಹುಡುಕುವ, ಕಾಲಕ್ಕೆ ತಕ್ಕಂತೆ ಬದಲಾಗುವ ಮಾನಸಿಕ ಸ್ಥಿತಿ ಇರಲೇಬೇಕು. ಈ ಹಿನ್ನೆಲೆಯಲ್ಲಿ ಇಂದಿನ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಶ ಇರಬೇಕಾದುದು ಅತಿ ಮುಖ್ಯ. ಆದ್ದರಿಂದ ಇಂತಹ ಕಾರ್ಯಕ್ರಮಗಳು ಮಹತ್ವದ್ದೆನಿಸುತ್ತವೆ. ನಮ್ಮ ಸಸ್ಥೆಯಲ್ಲಿರುವ 22,000 ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಶ ನೀಡುವ ಕಾರ್ಯ ನಡೆದೇ ಇರುತ್ತದೆ. ನಮ್ಮ ವಿದ್ಯಾರ್ಥಿಗಳು ಎಲ್ಲ ರೀತಿಯಿಂದಲೂ ಸದೃಢರಾಗಿರಬೇಕೆಂಬ ಇರಾದೆ ನಮ್ಮದು. Read more »