ಜನ್ಮಾಷ್ಟಮಿಗೂ ಇಮಾಮ್ ಸಾಹೇಬ್ರಿಗೂ ಏನು ಸಂಬಂಧ ಎಂದು ಕೇಳುತ್ತಿರಾ?? ಖಂಡಿತಾ ಸಂಬಂಧ ಇದೆ..!!
– ಅಜಿತ್ ಶೆಟ್ಟಿ ಹೆರಾಂಜೆ
ಹೌದು ಉಡುಪಿಯ ಮಟ್ಟಿಗೆ ಜನ್ಮಾಷ್ಟಮಿಗೂ ಇಮಾಮ್ ಸಾಹೇಬ್ರಿಗೂ ಖಂಡಿತಾ ಸಂಬಂಧ ಇದೆ. ದುರಂತ ಅಂದ್ರೆ ಈ ಸಂಬಂಧದ ಬಗ್ಗೆ ನಮಗೆ ಯಾರೂ ಎಂದೂ ಹೆಳಿದವರೇ ಇಲ್ಲ. ಶಾಲಾ ಕಾಲೇಜುಗಳಲ್ಲಿ ನಮ್ಮ ಯಾವುದೇ ಶಿಕ್ಷಕರು ಈ ಸಂಬಂಧದ ಬಗ್ಗೆ ಪಾಠ ಮಾಡಲಿಲ್ಲ. ನಮಗೆ ಗಾಂಧಿ ಗೊತ್ತಿತ್ತು, ನಮಗೆ ಬುದ್ದ ಗೊತ್ತಿತ್ತು, ನಮಗೆ ಅಕ್ಬರ್ ಗೊತ್ತಿತ್ತು, ನಮಗೆ ಮುಸೊಲಿನಿ, ಹಿಟ್ಲರ್ ಚಗುವೇರ ಗೊತ್ತಿತ್ತು. ಆದ್ರೆ ನಮ್ಮೂರಿನ ಮಹಾತ್ಮರ ಬಗ್ಗೆ ಗೊತ್ತೇ ಇಲ್ಲ. ಅವರು ನಮ್ಮ ಸಮಾಜವನ್ನು ಕಟ್ಟಲು ತಮ್ಮ ಇಡಿ ಜೀವಮಾನದ ಗಳಿಕೆಯನ್ನೆಲ್ಲವೂ ಸಮಾಜದ ಉದ್ದಾರಕ್ಕಾಗಿ ನೀರಿನಂತೆ ಹರಿಸಿ, ತಮ್ಮ ಇಡಿ ಜೀವನವನ್ನು ಸಮಾಜಕ್ಕಾಗಿ ತೇದಿ ಸವೆದು ಸದ್ದಿಲ್ಲದೆ ಮರೆಯಾದವರು. ಅವರಿಗೆ ಯಾವುದೇ ಪ್ರಚಾರದ ಹಂಗಿರಲಿಲ್ಲ, ಅವರಿಗೆ ತಮ್ಮ ಸಮಾಜದ ಬಗೆಗಿನ ತಾವು ನಿಭಾಯಿಸಬೇಕಿದ್ದ ಕರ್ತವ್ಯಗಳ ಅರಿವಿತ್ತು, ಸಮಸ್ಯೆಗಳು ಬಂದಾಗ ಅದನ್ನ ಸರ್ಕಾರ ಅಥವಾ ಇನ್ಯಾರೋ ಪರಿಹರಿಸಲಿ ಎಂದು ಯಾವತ್ತೂ ಕಾದವರಲ್ಲ. ಅವರು ಸ್ವತಃ ತಾವೇ ಅಂತಹಾ ಸಮಸ್ಯೆಗಳಿಗೆ ಎದೆಯೊಡ್ಡಿ ನಿಂತು ಪರಿಹರಿಸಿದವರು. ಆಗ ಅವರ ಕಣ್ಣಲ್ಲಿ ಜಾತಿ, ಮತ ,ಪಂತ, ಪಂಗಡ, ಇವ ನಮ್ಮವ ಇವ ಬೇರೆಯವನು ಎಂಬುವ ಯಾವುದೆ ಬೇಧ ಭಾವ ಇರಲಿಲ್ಲ. ಅವ್ರಲ್ಲಿ ಇದ್ದದ್ದು ಸಮಾಜದಲ್ಲಿ ತಾನು ಮಾಡಬೇಕಾಗಿದ್ದ ಕೆಲಸಗಳ ಬಗ್ಗೆ ಇದ್ದ ತುಡಿತ ಮಾತ್ರ. ಅಂತಹ ಅದೆಷ್ಟೋ ಗಣ್ಯರು ಕಾಲದ ಪುಟಗಳಲ್ಲಿ ಮರೆಯಾಗಿ ಹೋದರು. ಅವರನ್ನ ಅವರ ಸಾಧನೆಗಳನ್ನ ಮುಂದಿನ ತಲೆಮಾರಿಗೆ ಪರಿಚಯಿಸುವ ಹೊಣೆ ಹೊತ್ತ ಸರ್ಕಾರಗಳು ಇಂತವರ ಪರಿಚಯನ್ನು ಯಾವತ್ತೂ ಮುಂದಿನ ಪೀಳಿಗೆಗೆ ಮಾಡಲೇ ಇಲ್ಲ. ಅದಿರಲಿ ಸಮಾಜವೂ ಅಂತವರನ್ನ ಮರೆತಿತು. ಇಂತಹಾ ಅನೇಕ ಮರೆತುಹೋದ ಮಹಾನುಭಾವರಲ್ಲಿ ಉಡುಪಿಯ ಖಾನ ಬಹದ್ದೂರ್ ಹಾಜಿ ಅಬ್ದುಲ್ಲಾ ಹಾಜಿ ಕಾಸಿಮ್ ಸಾಹೇಬ್ ಬಹದ್ದೂರ್ ಕೂಡ ಒಬ್ಬರು. ಚಿಕ್ಕದಾಗಿ ಹೇಳೋದಾದರೆ ಹಾಜಿ ಅಬ್ದುಲ್ಲಾ ಸಾಹೇಬರು . ಹಾಜಿ ಅಬ್ದುಲ್ಲಾ ಸಾಹೆಬರು !! ? ಯಾರೀತ?? Read more
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೩ )
– ಡಾ. ಮಾಧವ ಪೆರಾಜೆ
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೧ )
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )
ಎರಡು ಭಿನ್ನ ಶಾಸನಗಳು:
ಆದರೆ ಈ ಮಾತಿಗೆ ಅಪವಾದಗಳಾಗಿ ಭಿನ್ನ ರಾಗವನ್ನು ಹಾಡುವ ಶಾಸಗಳೂ ಇಲ್ಲದಿಲ್ಲ. ಸದ್ಯಕ್ಕೆ ಅಂತಹ ಎರಡು ಶಾಸನಗಳು ನನ್ನ ಗಮನಕ್ಕೆ ಬಂದಿದೆ. ಮೊದಲನೆಯದು ಸಿರಗುಪ್ಪದ ಶಾಸನ, ಎರಡನೆಯದು ಹರಪನಹಳ್ಳಿಯ ಶಾಸನ. ಸಿರಗುಪ್ಪದ ಶಾಸನವು ಶಂಭುಲಿಂಗೇಶ್ವರ ದೇವಾಲಯದಲ್ಲಿರುವುದಾಗಿ ಅದರ ಕಾಲವು ಕ್ರಿ.ಶ. 1199 ಎಂದು ತಿಳಿದು ಬರುತ್ತದೆ. ಈ ಶಾಸನದ ಕೊನೆಯಲ್ಲಿ …… Read more
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೨ )
– ಡಾ. ಮಾಧವ ಪೆರಾಜೆ
ಮಧ್ಯಕಾಲದಲ್ಲಿ ಗುಡಿಗಳು:
ದೇವಾಲಯಗಳಿಗೆ ಇದ್ದಕ್ಕಿದ್ದಂತೆ ಪ್ರಸಿದ್ಧಿ ಬಂದಿರುವುದೇ ಮಧ್ಯಯುಗದಲ್ಲಿ ಎನ್ನುವುದು ಇನ್ನೊಂದು ಗಮನಾರ್ಹ ಅಂಶವಾಗಿದೆ. ಪುರಾಣಗಳು ಕಾವ್ಯಗಳು ದೇವಾಲಯಗಳ ಕುರಿತು ಹಾಡಿಹೊಗಳುವುದಕ್ಕೆ ಈ ಕಾಲದಲ್ಲಿ ಪ್ರಾರಂಭ ಮಾಡುತ್ತವೆ. ಅಗ್ನಿಪುರಾಣದ ಪ್ರಕಾರ ದೇವಾಲಯಗಳನ್ನು ಕಟ್ಟಿಸುವ ಬಯಕೆ ಬಂತೆಂದರೆ ಸಾಕು – ಅವರ ಪಾಪ ಪರಿಹಾರವಾಗುತ್ತದೆಯಂತೆ. ದೇವಾಲಯಕ್ಕೆ ಒಂದು ಇಟ್ಟಿಗೆಯನ್ನು ಇಟ್ಟರೆ ಅದು ಅವನಿಗೆ ಸಾಯುವಾಗ ಒಂದು ಯಜ್ಞವನ್ನು ಮಾಡಿದ ಪುಣ್ಯವನ್ನು ಕೊಡುತ್ತದೆಯಂತೆ – ಹಾಗೆಂದು ಹಯಶೀರ್ಷ ಸಂಹಿತೆ ಹೇಳುತ್ತದೆ. ಯಾವುದಾದರೊಂದು ಮಗು ಆಟದ ನೆಪದಲ್ಲಿ ಮರಳಿನಲ್ಲಿ ಗುಡಿ ಕಟ್ಟಿದರೂ ಆ ಮಗುವಿಗೆ ಸ್ವರ್ಗ ಲಭಿಸುತ್ತದೆ ಎಂದು ವಿಷ್ಣು ರಹಸ್ಯವು ತಿಳಿಸುತ್ತದೆ. ಹೀಗೆ ಇಲ್ಲಿಂದ ದೇವಾಲಯಗಳಿಗೆ ಮಹತ್ವವೂ ಪ್ರಸಿದ್ಧಿಯೂ ದೊರೆಯುತ್ತದೆ. ಶ್ರೀಮಂತರು,ಚಕ್ರವರ್ತಿಗಳು, ದಂಡನಾಯಕರು ದೇವಾಲಯಗಳನ್ನು ಕಟ್ಟಿಸುತ್ತಾರೆ. ದೇವಾಲಯಗಳನ್ನು ಕಟ್ಟಿಸುವುದು, ಅಂತಹ ದೇವಾಲಯಗಳಿಗೆ ಪೂಜಾರಿಗಳನ್ನು ನೇಮಕ ಮಾಡುವುದು, ದೇವಾಲಯಗಳ ಸಂದರ್ಶನಕ್ಕಾಗಿ ಹೋಗುವುದು, ಅಲ್ಲಿ ಪ್ರಾರ್ಥನೆ ಮಾಡುವುದು, ಯಾರು ಪೂಜೆ ಮಾಡಬಹುದು, ಮಾಡಬಾರದು ಎನ್ನುವುದು ಮೊದಲಾದವುಗಳೆಲ್ಲ ಈ ಕಾಲದಿಂದಲೇ ಆರಂಭವಾಗುತ್ತವೆ. ನಮ್ಮ ಕನಕದಾಸರು ಈ ಕಾಲದವರೆಂಬುದನ್ನು ಇಲ್ಲಿ ನೆನಪಿಸಿಕೊಳ್ಳೋಣ. ಹೀಗಾಗಿ ಮಧ್ಯಕಾಲೀನ ವಿಷಯಗಳಿಗೆ ಸಂಬಂಧಿಸಿದ ಈಗ ನಾವು ನಿರ್ದಿಷ್ಟವಾಗಿ ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸಿರುವುದರಿಂದ, ಈ ವಿವರಗಳು ಇನ್ನಷ್ಟು ಸ್ಪಷ್ಟವಾಗಬಲ್ಲವು. ಹಾಗಾದುದರಿಂದ ನಿರ್ದಿಷ್ಟವಾಗಿ ದೇವಾಲಯಕ್ಕೆ ಸಂಬಂಧಿಸಿದಂತೆ ಕರ್ನಾಟಕವನ್ನೇ ಲಕ್ಷಿಸಿ ಇನ್ನು ಮುಂದೆ ಈ ವಿಷಯವನ್ನು ಇನ್ನಷ್ಟು ವಿಸ್ತರಿಸೋಣ. Read more
ದಲಿತರ ‘ದೇಗುಲದ ಪ್ರವೇಶ’ದ ಸುತ್ತಾಮುತ್ತ… ( ಭಾಗ ೧ )
– ಡಾ. ಮಾಧವ ಪೆರಾಜೆ
‘ದೇವಾಲಯ ಪ್ರವೇಶ’ ಎನ್ನುವ ಸಂಗತಿಯು ಈಗ ಒಂದು ಜ್ವಲಂತ ಸಮಸ್ಯೆ ಎನ್ನುವ ಹಾಗೆ ಪ್ರತಿಬಿಂಬಿತವಾಗುತ್ತಿದೆ. ಕನ್ನಡದ ಜನಪ್ರಿಯ ದಿನಪತ್ರಿಕೆಯಾದ ಪ್ರಜಾವಾಣಿಯಲ್ಲಿ ‘ದೇಗುಲ ಪ್ರವೇಶವೂ ಶುದ್ಧೀಕರಣವೂ’ ಎನ್ನುವ ಲೇಖನ (ಲೇ: ಹೊಸಕೆರೆ ನಂಜುಂಡೇಗೌಡ, ದಿ.6.10.14) ಪ್ರಕಟವಾಗಿದೆ. ಈ ಹಿನ್ನೆಲೆಯಲ್ಲಿ ಇದು ಅತ್ಯಂತ ಸಮಕಾಲೀನ ಸಂಗತಿಯಾಗಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಈ ಉಪನ್ಯಾಸಕ್ಕೆ ಸಂಬಂಧಿಸಿದ ಹಾಗೆ ಶೀರ್ಷಿಕೆಯ ಹಾಗಿರುವ ‘ಬಾಗಿಲನು ತೆರೆದು’ ಎನ್ನುವ ಕೀರ್ತನೆಯ ಸಾಲೊಂದು, ಈ ಉಪನ್ಯಾಸಕ್ಕೆ ಬಾಗಿಲೇ ಆಗುತ್ತದೆ ಎನ್ನುವ ಹಿನ್ನೆಲೆಯಲ್ಲಿ ಆ ಕೀರ್ತನೆಯನ್ನು ಪೂರ್ಣವಾಗಿ ಇಲ್ಲಿ ಉದ್ಧರಿಸಲಾಗಿದೆ. Read more
ಪಂಕ್ತಿ ಭೋಜನದ ಸುತ್ತಮುತ್ತ
-ಪ್ರಜ್ಞಾ ಆನಂದ್
ಉಡುಪಿಯಲ್ಲಿ ಊಟದ ಮಧ್ಯೆ ಬ್ರಾಹ್ಮಣಳಲ್ಲವೆಂಬ ಕಾರಣಕ್ಕೆ ಓರ್ವ ಮಹಿಳೆಯನ್ನು ಊಟದ ಪಂಕ್ತಿಯಿಂದ ಹೊರಹಾಕಿದ ಘಟನೆ ಬಹಳ ಚರ್ಚೆಯನ್ನು ಹುಟ್ಟುಹಾಕಿದೆ. ಆದರೆ ಆ ಘಟನೆಯನ್ನು ವಿಶ್ಲೇಶಿಸುವ ಸಂದರ್ಭದಲ್ಲಿ ಪರ ಹಾಗೂ ವಿರೋಧದ ಬಗ್ಗೆ ನಡೆದ ಚರ್ಚೆಗಳು ತೀರ ಬಾಲಿಶವಾಗಿಯೂ, ಅನುಚಿತವಾಗಿಯೂ ಇದ್ದಂತೆ ಕಂಡುಬಂದಿತು;ಒಂದು ರೀತಿಯಲ್ಲಿ ನಿಷ್ಪ್ರಯೋಜಕವೂ ಹೌದು.ಪರವಾಗಿ ವಾದಿಸಿದ ಬಹುತೇಕರು ಹೇಳಿದ್ದೇನೆಂದರೆ ಊಟ ಎನ್ನುವದು ಬ್ರಾಹ್ಮಣರಿಗೆ ಯಜ್ಞ ಇದ್ದಂತೆ ಹಾಗೂ ಅನೇಕ ವಿಧಿ ವಿಧಾನಗಳನ್ನು ಅನುಸರಿಸಬೇಕಾದ್ದರಿಂದ ಬ್ರಾಹ್ಮಣರಿಗೆ ಬೇರೆಯದೆ ಪಂಕ್ತಿಭೋಜನ ಸರಿ ಎಂದು. ಇದನ್ನು ವಿರೋಧಿಸಿ ಹೇಳಿದವರಲ್ಲಿ ಇದೊಂದು ಅಮಾನವೀಯ, ಹಿಂದೂ ಧರ್ಮಕ್ಕೆ ತೊಡಕು, ಜಾತ್ಯಾತೀತವಲ್ಲ ಇತ್ಯಾದಿ ಹೇಳಿಕೆಗಳು. ಬಹುತೇಕವಾಗಿ ಎಲ್ಲರೂ ಜಾತ್ಯಾತೀತದ ಆಧಾರದ ಮೇಲೆ ಇದನ್ನು ವಿರೋದಿಸಿದ್ದಾರೆ. ಬ್ರಾಹ್ಮಣ, ಶೂದ್ರ ಇತ್ಯಾದಿಯಾಗಿ ಹೈಪೊಥೆಟಿಕಲ್ ಥಿಯರಿಯನ್ನು ಹೊಂದಿದ್ದವನಿಗೆ ಈ ಘಟನೆ ಹೊಸ ಫಾರ್ಮುಲಾದ ಅವಿಷ್ಕಾರವನ್ನು ನೀಡಿರಬಹುದು. ಇದಕ್ಕೂ ಮೀರಿದ ರೀತಿಯಲ್ಲಿ ಪಂಕ್ತಿಭೇದದ ಬಗ್ಗೆ ವಿವರಣೆಯನ್ನು ನೀಡಬಹುದಾದರೆ ನೈಜತೆಯ ಬಗ್ಗೆ ಪರಿಶೀಲಿಸಲು ಅನುಕೂಲವಾಗಬಹುದು.
ಪಂಕ್ತಿಭೇದದ ಪರ ವಾದಿಸುವವರನ್ನು ತೆಗೆದುಕೊಂಡರೆ ಅವರ ಪ್ರಕಾರ ಬ್ರಾಹ್ಮಣರ ಊಟ ಎಂಬುದು ಯಜ್ಞ.ಈ ವಿಧಿ ವಿಧಾನದ ಆಚರಣೆಗೋಸ್ಕರ ಪ್ರತ್ಯೇಕ ಪಂಕ್ತಿಭೋಜನದ ಅಗತ್ಯತೆಯನ್ನು ವಿವರಿಸುತ್ತಾರೆ. ಆದರೆ ಅದು ನಿಜವಾದಲ್ಲಿ, ಎಲ್ಲಾ ಬ್ರಾಹ್ಮಣರೂ ಎಲ್ಲಾ ಪ್ರದೇಶದಲ್ಲಿಯೂ, ಎಲ್ಲಾ ಸಂದರ್ಭದಲ್ಲಿಯೂ ಅಂತಹ ಆಚರಣೆಗಳನ್ನು ಅನುಸರಿಸಬೇಕಾಗಿತ್ತು. ಆದರೆ ಇಂತಹ ಆಚರಣೆಗಳನ್ನು ಕಟ್ಟುನಿಟ್ಟಾಗಿ ಆಚರಿಸುವ ಬ್ರಾಹ್ಮಣರು ತೀರ ಅತ್ಯಲ್ಪ;ದೇವಾಲಯ, ಮಠಗಳಲ್ಲಿರುವ ಕೆಲವೇ ಮಂದಿ ಮಾತ್ರ. ಉಳಿದವರು ಕಟ್ಟುನಿಟ್ಟಾಗಿ ಆಚರಣೆಗಳನ್ನು ಪಾಲಿಸುವವರಲ್ಲ. ಎಷ್ಟೋ ಸಮಯದಲ್ಲಿ ಹೊಟೆಲ್ ಗಳಲ್ಲಿ ತಿನ್ನುವದು ಸಾಮಾನ್ಯವೆ. ಅಲ್ಲೆಲ್ಲಾ ಪಂಕ್ತಿಬೇದಗಳೂ ಲೆಕ್ಕಕ್ಕಿರುವದಿಲ್ಲ, ಅಡುಗೆ ಮಾಡಿದ ಜನರ ಕುಲ ಗೋತ್ರಗಳೂ ಲೆಕ್ಕಕ್ಕಿರುವದಿಲ್ಲ. ಊಟದ ಆಚರಣೆ/ಪದ್ದತಿಗಳೂ ಅನುಸರಿಸಲೇಬೇಕಾದ ಯಜ್ಞವೆಂಬಂತೆ ಎಲ್ಲಾ ಬ್ರಾಹ್ಮಣರಿಗೆ ತೋರುವದೂ ಇಲ್ಲ. ಕೆಲವು ದಿವಸಗಳಲ್ಲಿ, ಕೆಲವು ಸಂದರ್ಭಗಳಲ್ಲಿ, ಕೆಲವು ಸ್ಥಳಗಳಲ್ಲಿ ಮಾತ್ರ ಆ ಸ್ಥಳದ ಸಂಪ್ರದಾಯ ಎಂಬಂತೆ ಪಾಲಿಸುತ್ತಾರೆ.ಹಾಗಾಗಿ, ಉಡುಪಿ ಮಠದಲ್ಲಿನ ಪಂಕ್ತಿಭೇದ ಆ ಸ್ಥಳಕ್ಕೆ, ಸಂದರ್ಭಕ್ಕೆ ಮಾತ್ರ ಸೀಮಿತವಾಗಿರುವದೇ ಹೊರತು, ಬ್ರಾಹ್ಮಣ ಆಚರಣೆ/ವಿಧಿ ವಿಧಾನಗಳು, ಯಜ್ಞ ಎಂಬೆಲ್ಲಾ ಕಾರಣ ಕೊಟ್ಟು ಸಮರ್ಥಿಸುವದು ಹಾಸ್ಯಾಸ್ಪದ.
ಪ್ರತ್ಯೇಕ ಪಂಕ್ತಿ ಭೋಜನ ನಿಂತರೆ ಮಡೆ ಸ್ನಾನವೂ ನಿಂತೀತು
– ರಾಕೇಶ್ ಶೆಟ್ಟಿ
ಉಡುಪಿಯ ಕೃಷ್ಣ ತಿರುಗಿ ನಿಂತಷ್ಟು ಸುಲಭವಲ್ಲ ’ಮಡೆ ಸ್ನಾನ’ ನಿಲ್ಲುವುದು…! ಅಂತ ವರ್ಷದ ಹಿಂದೆ ಮಡೆಸ್ನಾನ ಅನ್ನುವ ವಿಕೃತಿಯನ್ನು ವಿರೋಧಿಸಿ ಬರೆದಿದ್ದು ನಿಜವಾಗಿದೆ.ನಿನ್ನೆ ಮತ್ತೆ ಕುಕ್ಕೆಯಲ್ಲಿ ಮಡೆಸ್ನಾನ ಸಾಂಗೋಪಾಂಗವಾಗಿ ನೆರವೇರಿದೆ.ತಾವು ತಿಂದು ಬಿಡುವ ಎಂಜಲ ಮೇಲೆ ಮನುಷ್ಯರು ಹೊರಳಾಡುತ್ತಾರೆ ಅಂತ ಗೊತ್ತಿದ್ದು ಉಣ್ಣುವ ರೋಗಗ್ರಸ್ತ ಅಹಂ ಮನಸ್ಸುಗಳು ಮತ್ತು ಇನ್ನೊಬ್ಬರ ಎಂಜಲೆಲೆಯೇ ಪರಮ ಪವಿತ್ರ ಅನ್ನುವ ಮೂಢರು ಎಂಜಲೆಲೆಯ ಸ್ನಾನದಲ್ಲಿ ಮಿಂದು ಪುನೀತರಾಗಿದ್ದಾರೆ.
ಇನ್ನೊಂದೆಡೆ “ನಾವೆಲ್ಲ ಹಿಂದೂ,ನಾವೆಲ್ಲ ಒಂದು” ಅನ್ನುವವರೆಲ್ಲ ಸದ್ದಿಲ್ಲದೆ ಹಿಂದೆಯೇ ನಿಂತು ಎಂಜಲೆಲೆಯ ಮೇಲೆ ದೇವರ ಹೆಸರಿನ ನಂಬಿಕೆ(ಹೆದರಿಕೆ?)ಯಲ್ಲಿ ಜಾಗೃತರಲ್ಲದವರನ್ನು ಉರುಳಾಡಿಸಿ ಕೃತಾರ್ತರಾಗಿದ್ದಾರೆ.ಅಲ್ಲಿಗೆ “ನಾವೆಲ್ಲ ಹಿಂದೂ – ನಾವಿನ್ನೂ ಹಿಂದು” ಎನ್ನಲಡ್ಡಿಯಿಲ್ಲ ಅಲ್ಲವೇ?