ವಿಷಯದ ವಿವರಗಳಿಗೆ ದಾಟಿರಿ

Posts tagged ‘ಎಡಪಂಥೀಯ’

22
ಫೆಬ್ರ

ಭಾರತದ ಎಡಪಂಥೀಯರು ದೇಶವಿರೋಧದತ್ತೇಕೆ ಸಾಗುತ್ತಾರೆ?

– ವಿನಾಯಕ್ ಹಂಪಿಹೊಳಿ

ಕಮ್ಯುನಿಸ್ಟ್ಭಾರತದಲ್ಲಿ ಇಂದು ಎಡಪಂಥವು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದೆ. ಸರ್ಕಾರದಿಂದ ಎಲ್ಲ ಸವಲತ್ತುಗಳನ್ನು ಪಡೆದರೂ, ಶಿಕ್ಷಣ ಕ್ಷೇತ್ರದ ಎಲ್ಲ ಆಯಕಟ್ಟಿನ ಜಾಗಗಳನ್ನು ಆವರಿಸಿದರೂ, ಸೋಶಿಯಲ್ ಮೀಡಿಯಾ ಹೊರತುಪಡಿಸಿ ಬಹುತೇಕ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಎಡಪಂಥೀಯ ಚಿಂತನೆಯನ್ನೇ ಪ್ರಸಾರ ಮಾಡಿದ್ದರೂ, ಸರ್ಕಾರೀ ಪ್ರಶಸ್ತಿಗಳಲ್ಲಿ ಬಹುತೇಕ ಪಾಲನ್ನು ಎಡಪಂಥೀಯರಿಗೆ ಮೀಸಲಿಟ್ಟಿದ್ದರೂ, ಹಲವಾರು ಜನಪರ ಸರ್ಕಾರೀ ಯೋಜನೆಗಳು ಎಡಪಂಥೀಯ ಚಿಂತನೆಯನ್ನೇ ಅವಲಂಬಿಸಿಕೊಂಡಿದ್ದರೂ ಅದೇಕೋ ಬಹುತೇಕ ಭಾರತೀಯರು ಮಾತ್ರ ಎಡಪಂಥವನ್ನು ಒಪ್ಪಿಕೊಂಡೇ ಇಲ್ಲ.

ಎಡಪಂಥ ಶಬ್ದವು ಫ್ರೆಂಚ್ ಕ್ರಾಂತಿಯ ಅವಧಿಯಲ್ಲಿ ಹುಟ್ಟಿರುವ ಶಬ್ದವಾದರೂ ಕಾಲಕ್ರಮದಲ್ಲಿ, ಸೋಶಿಯಾಲಿಸಂ, ಕಮ್ಯುನಿಸಂ ಮುಂತಾದ ಕಲ್ಪನೆಗಳನ್ನು ಒಳಗೊಳ್ಳುತ್ತ ಹೋಯಿತು. ಸಮಾಜದಿಂದ ಹೆಚ್ಚು ಪ್ರಯೋಜನ ಪಡೆಯಲಾಗದವರ ಕುರಿತು ವಿಶೇಷ ಕಾಳಜಿಯನ್ನು ತೋರಿಸುವದು ಎಡಪಂಥದ ತತ್ತ್ವ. ಬಹುಸಂಖ್ಯಾತ ರಿಲಿಜನ್ನಿನವರಿಂದ ತುಳಿತಕ್ಕೊಳಗಾಗುವ ಅಲ್ಪಸಂಖ್ಯಾತ ರಿಲಿಜನ್ನಿನ ಜನರ ಕುರಿತು ಕಾಳಜಿ ತೋರಿಸುತ್ತದೆ. ಶ್ರೀಮಂತರಿಂದ ಅನ್ಯಾಯಕ್ಕೊಳಗಾದ ಬಡವರ ಪರವಾಗಿ ನಿಲ್ಲುತ್ತದೆ. ಒಟ್ಟಿನಲ್ಲಿ ಸಮಾಜದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಎಂಬ ಆದರ್ಶ ಸ್ಥಾಪಿಸುವದೇ ಇದರ ಉದ್ದೇಶ.

ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗೆ ಕಾರಣವಾಗುವ ಪ್ರತಿಯೊಂದನ್ನೂ ಎಡಪಂಥವು ವಿರೋಧಿಸುತ್ತದೆ. ಬಹುಸಂಖ್ಯಾತರಿರುವ ರಿಲಿಜನ್ನಿನ ಜನರಿಂದ ಅಲ್ಪಸಂಖ್ಯಾತರ ರಿಲಿಜನ್ನಿನ ಜನರಿಗೆ ಸಾಮಾಜಿಕ ಅನ್ಯಾಯಗಳಾಗುವದರಿಂದ ರಿಲಿಜನ್ನುಗಳನ್ನು ವಿರೋಧಿಸುತ್ತದೆ. ಖಾಸಗೀ ಉದ್ಯಮಗಳಿಂದಾಗಿ ಆರ್ಥಿಕ ಸಂಪತ್ತುಗಳು ಉದ್ದಿಮೆದಾದರಲ್ಲಿಯೇ ಕ್ರೋಢೀಕರಣಗೊಳ್ಳುವದರಿಂದ ಖಾಸಗೀಕರಣವನ್ನು ವಿರೋಧಿಸುತ್ತದೆ. ರೈತರು ಬೆಳೆಯುವ ಬೆಳೆಯನ್ನು ಸಂಗ್ರಹಿಸಿಟ್ಟುಕೊಳ್ಳುವ ಜಮೀನುದಾರರನ್ನು ವಿರೋಧಿಸುತ್ತದೆ.

ಮತ್ತಷ್ಟು ಓದು »

12
ಫೆಬ್ರ

ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೨

– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ

Social Science Column Logoನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧

ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು:
1960 ಹಾಗೂ 70ರ ದಶಕದಲ್ಲಿ ಪ್ರಾರಂಭವಾದ ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು ಮಾರ್ಕ್ಸ್ ವಾದಿ ನಿಲುವುಗಳಿಗಿಂತ ಭಿನ್ನವಾದ ನಿಲುವನ್ನು ಮುಂದಿಡಲು ಯಶಸ್ವಿಯಾದವು. ವರ್ಗಾದಾರಿತವಲ್ಲದ ಅಸ್ಮಿತೆಯ ರಾಜಕೀಯ ಕೇವಲ ಸಾಂಕೇತಿಕ ಎನ್ನುವ ಮಾರ್ಕ್ಸ್ ವಾದಿ ನಿಲುವನ್ನು ಇವು ಅಲ್ಲಗಳೆಯುತ್ತವೆ. ಈ ಸಿದ್ಧಾಂತವು ಅಸ್ಮಿತೆ ರಾಜಕೀಯವನ್ನು ಒಂದು ವಿಶಿಷ್ಟ ಬಗೆಯ ರಾಜಕೀಯ ಎಂದೇ ಪ್ರತಿಪಾದಿಸುತ್ತದೆ. ಅಸ್ಮಿತೆಯಾದಾರಿತ ಚಳುವಳಿಗಳನ್ನು ಆಧುನಿಕತೆಯ ಪರಿಣಾಮವಾಗಿ ಆರ್ಥಿಕ ಮತ್ತು ಸಾಮಾಜಿಕ ವಲಯದ ಉನ್ನತ ಸ್ಥರದಲ್ಲಿ ಆದ ರಾಚನಿಕ ಬದಲಾವಣೆ ಅಸ್ಮಿತೆ ರಾಜಕೀಯವನ್ನು ಹುಟ್ಟು ಹಾಕಿದೆ ಮತ್ತು ಇದೊಂದು ಐತಿಹಾಸಿಕವಾದ ಸಾಮೂಹಿಕ ಪ್ರತಿಕ್ರಿಯೆ ಎಂದು ಈ ಸಿದ್ಧಾಂತದ ಪ್ರತಿಪಾದನೆಯಾಗಿದೆ. ಕೆಲವು ವಿದ್ವಾಂಸರು ಹೇಳುವಂತೆ ಅಸ್ಮಿತೆ ರಾಜಕೀಯವು ಕೈಗಾರಿಕೋತ್ತರ ಸಮಾಜದಲ್ಲಾಗುತ್ತಿರುವ ಒಂದು ಬಗೆಯ ಸ್ಥಿತ್ಯಂತರ (ಟೌರಿನ್ 1981).  ಹಬರ್ಮಾಸ್ರವರ ಅಭಿಪ್ರಾಯದಲ್ಲಿ ಅಸ್ಮಿತೆ ಚಳುವಳಿಗಳು ಪ್ರಭುತ್ವದ ನಿಯಂತ್ರಣ ಹಾಗೂ ಅದರ ನಿರ್ಣಯಗಳ ಒತ್ತಡಕ್ಕೆ ಹೆಚ್ಚು ಹೆಚ್ಚಾಗಿ ಒಳಗಾಗುತ್ತಿರುವ ಸಮುದಾಯಗಳು ಅಂತಹ ಹಿಡಿತದಿಂದ ತಪ್ಪಿಸಿಕೊಳ್ಳುವ ಪ್ರಯತ್ನದ ಫಲವಾಗಿವೆ (ಹಬರ್ಮಾಸ್ 1985).

ಮತ್ತಷ್ಟು ಓದು »

6
ಫೆಬ್ರ

ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧

– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ

Social Science Column Logoರಾಜಕೀಯ ಸಿದ್ಧಾಂತದಲ್ಲಿ ಅಸ್ಮಿತೆ ರಾಜಕೀಯದ ಪರಿಕಲ್ಪನೆ ಪ್ರಬಲವಾಗಿದ್ದು 20ನೇ ಶತಮಾನದ ಉತ್ತರಾರ್ಧದಲ್ಲಿ. ತಮ್ಮ ಅಸ್ತಿತ್ವ ಸಂಪೂರ್ಣ ಅವಗಣನೆಗೆ ಒಳಗಾಗಿದೆ ಮತ್ತು ಆ ಕಾರಣದಿಂದ ತಮ್ಮನ್ನು ಪ್ರಾತಿನಿಧ್ಯದಿಂದ ವಂಚಿತರನ್ನಾಗಿಸಿ ರಾಜಕೀಯ ಮುಖ್ಯವಾಹಿನಿಯಿಂದ ದೂರವಿರಸಲಾಗಿದೆ ಎನ್ನುವ ಭಾವನೆ ಬೆಳೆಸಿಕೊಂಡ ಒಂದು (ಸಾಮಾಜಿಕ/ಸಾಂಸ್ಕೃತಿಕ) ಗುಂಪು ರಾಜಕೀಯ ಸಂಚಲನೆಗೆ ತೊಡಗುವ ಪ್ರಕ್ರಿಯೆಯನ್ನು ಅಸ್ಮಿತೆ ರಾಜಕೀಯ ಎಂದು ಕರೆಯಲಾಗುತ್ತದೆ. ಸಾರ್ವತ್ರಿಕ ಒಳಿತು ಅಸ್ಮಿತೆ ರಾಜಕೀಯದ ಗುರಿಯಾಗಿರುವುದಿಲ್ಲ ಮತ್ತು ಅಂತಹ ರಾಜಕೀಯ ಹೋರಾಟ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ತನ್ನನ್ನು ಮುಖ್ಯವಾಹಿನಿಯೊಂದಿಗೆ ಗುರುತಿಸಿಕೊಳ್ಳುವಂತೆ ಮಾಡುವುದು ಒಂದು ಗುಂಪಿನ ಅಸ್ಮಿತೆ ರಾಜಕೀಯದ ಮುಖ್ಯ ಉದ್ದೇಶವಾಗಿರುತ್ತದೆ.

20ನೇ ಶತಮಾನದ ಉತ್ತರಾರ್ಧದಲ್ಲಿ ಅಮೇರಿಕಾ ದೇಶದಲ್ಲಿ ಪ್ರಾರಂಭವಾದ (ದ್ವಿತೀಯ ಹಂತದ) ಸ್ತ್ರೀವಾದೀ ಚಳುವಳಿ, ಕರಿಯರ ನಾಗರೀಕ ಹಕ್ಕುಗಳ ಹೋರಾಟ, ಸಲಿಂಗಿಗಳು ತಮ್ಮ ಹಕ್ಕಿಗಳಿಗಾಗಿ ಮಾಡಿದ ಹೋರಾಟ ಮೊದಲಾದವುಗಳನ್ನು ಅಸ್ಮಿತೆ ರಾಜಕೀಯ ಎಂದು ಮೊತ್ತ ಮೊದಲ ಬಾರಿಗೆ ಗುರುತಿಸಲಾಯಿತು. ಈ ಎಲ್ಲಾ ಗುಂಪುಗಳು ತಮ್ಮ ವಿಶಿಷ್ಟ ಅಸ್ಮಿತೆಯನ್ನು ಗುರುತಿಸಿ ಗೌರವಿಸದೆ ಆ ಕಾರಣಕ್ಕಾಗಿ ತಾವು ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ಪ್ರಕ್ರಿಯೆಯ ವಿರುದ್ಧ ಹೋರಾಟ ಪ್ರಾರಂಬಿಸಿದವು. ತಾವು ಸಾಮಾಜಿಕವಾಗಿ ರಾಜಕೀಯವಾಗಿ ತುಳಿತಕ್ಕೊಳಗಾಗಿದ್ದೇವೆ ಎನ್ನುವ ಭಾವನೆಯನ್ನು ಆಧರಿಸಿ ಅಸ್ಮಿತೆ ರಾಜಕೀಯದ ಸಂಘಟನೆಯು ತನ್ನ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ಅಸ್ಮಿತೆ ರಾಜಕೀಯ ಎಂದು ಕರೆಯಲ್ಪಡುವ ರಾಜಕೀಯ/ಸಾಮಾಜಿಕ ಚಳುವಳಿಗಳ ವ್ಯಾಪ್ತಿ ವಿಶಾಲವಾದುದಾಗಿದೆ. ರಾಜಕೀಯ ಶಾಸ್ತ್ರದ ಅಧಯಯನಗಳಲ್ಲಿ ಅಸ್ಮಿತೆ ರಾಜಕೀಯಕ್ಕೆ ಸಂಬಂದಿಸಿದ ಬರವಣೆಗೆಗಳು ಪಾಶ್ಚಾತ್ಯ ಬಂಡವಾಳಿಶಾಹಿ ಪ್ರಜಾಪ್ರಭುತ್ವಗಳಿಗೆ ಸಂಬಂದಿಸಿರುತ್ತವೆ. ಬಂಡವಾಳಶಾಹಿ ವ್ಯವಸ್ಥೆಯ ಹಿಡಿತ ಪ್ರಬಲವಾಗುತ್ತಾ ಹೋದ ಹಾಗೆ ಪರಂಪರಾನುಗತವಾಗಿ ಬಂದ ಸಮುದಾಯಗಳು ತಮ್ಮ ಅಸ್ಮಿತೆಗಳನ್ನು ಕಳೆದುಕೊಳ್ಳುತ್ತಾ ಹೋಗಿ ಅಂತಹ ಸಮುದಾಯಗಳ ಸದಸ್ಯರಲ್ಲಿ ಪರಕೀಯತೆಯ ಭಾವನೆ ಹೆಚ್ಚಗುತ್ತಾ ಹೋದದ್ದರ ಪರಿಣಾಮದಿಂದಾಗಿ ಅಸ್ಮಿತೆ ರಾಜಕೀಯ ಹುಟ್ಟಿಕೊಂಡಿದೆ ಎಂದು ಕೆಲವರು ಭಾವಿಸುತ್ತಾರೆ.
ಮತ್ತಷ್ಟು ಓದು »