ಇಂದು ಕಂಬಳ, ನಾಳೆ ಜೋಡೆತ್ತಿನ ಗಾಡಿ, ಸಂಕ್ರಾಂತಿ, ನಾಡಿದ್ದು ಇನ್ನೇನೋ…?
– ಶಿವಕುಮಾರ ಪಿ.ವಿ.
ಸಂಶೋಧನಾ ವಿದ್ಯಾರ್ಥಿ
ರಾಜ್ಯಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ.
ಪ್ರಾಣಿಗಳಿಗೆ ಹಿಂಸೆ ನೀಡಿ ಮನರಂಜನೆ ಪಡೆಯಲಾಗುತ್ತಿದೆ ಎಂಬುದು ಕಂಬಳ, ಜಲ್ಲಿಕಟ್ಟುವಿನಂತ ಕ್ರೀಡೆಗಳನ್ನು ನಿಲ್ಲಿಸಲು ಪ್ರಾಣಿದಯಾ ಸಂಘಗಳು ನೀಡುತ್ತಿರುವ ಕಾರಣ. ನ್ಯಾಯಾಲಯವೂ ಕೂಡ ‘ಪ್ರಾಣಿ ಹಿಂಸೆ’ಯ ಮಾನದಂಡವನ್ನಾದರಿಸಿ ಈ ಕ್ರೀಡೆಗಳಿಗೆ ನಿಷೇಧಾಜ್ಞೆಯನ್ನೂ ಹೇರುತ್ತಿದೆ. ಇದನ್ನಿಟ್ಟುಕೊಂಡೇ ನೋಡಿದರೆ, ಕೋಳಿ-ಕುರಿ, ದನಗಳನ್ನು ಕಡಿದು ತಿನ್ನುವುದು ಅವುಗಳ ಮಾರಣಹೋಮವಾಗಿ ಕಾಣಿಸಬೇಕಿತ್ತು. ಆದರೆ ಹಾಗಾಗುತ್ತಿಲ್ಲ. ಆಶ್ಚರ್ಯವೆಂದರೆ, ಪ್ರಾಣಿ ಹಿಂಸೆ, ಪ್ರಾಣಿ ಬಲಿಯನ್ನು ನಿಷೇಧಿಸಬೇಕೆನ್ನುವ ಸಕಲ ಪ್ರಾಣಿಗಳ ಜೀವಪರ ದಯಾಳುಗಳೆ ಬೀಫ್, ಮತ್ತಿತರ ಮಾಂಸ ಖಾದ್ಯಗಳನ್ನು, ಅವುಗಳ ರಕ್ತದ ಸೂಪನ್ನು ಚಪ್ಪರಿಸುತ್ತಿರುತ್ತಾರೆ. ಅದಕ್ಕಾಗಿ ಹೋರಾಟಗಳನ್ನೂ ಮಾಡುತ್ತಾರೆ. ಪ್ರಾಣಿಗಳನ್ನು ಬೇಕಾದರೆ ಕಡಿದು ತಿನ್ನಿ, ಆದರೆ ಅವುಗಳಿಗೆ ಹಿಂಸೆ ಕೊಡಬೇಡಿ ಎಂಬುದು ಇವರ ಆಕ್ಷೇಪಣೆ! ಹಾಗಾದರೆ, ಪ್ರಾಣಿ ಹಿಂಸೆಯ ಗುರಾಣಿಯ ಹಿಂದಿರುವ ತರ್ಕವೇನು, ಇವರ ನಿಜವಾದ ಕಾಳಜಿ ಪ್ರಾಣಿ ಹಿಂಸೆ ಮಾಡಬಾರದೆನ್ನುವುದೇ? ಮತ್ತಷ್ಟು ಓದು
ಪ್ರಾಣಿಗಳ ಕ್ರೀಡೆ ಮತ್ತು ಐಡೆಂಟಿಟಿ
– ವಿನಾಯಕ ಹಂಪಿಹೊಳಿ
ಪೆಟಾ ಹಾಗೂ ಇನ್ನಿತರ ಪ್ರಾಣಿದಯಾ ಸಂಘದವರು ಪ್ರಾಣಿಗಳನ್ನು ಆಹಾರವಾಗಿ ಹೊರತುಪಡಿಸಿ ಉಳಿದೆಲ್ಲ ಕಾರ್ಯಸಾಧನೆಗಾಗಿ ಬಳಸಿಕೊಳ್ಳುವ ಪ್ರಕ್ರಿಯೆಯನ್ನು ವಿರೋಧಿಸುತ್ತಾರೆ. ಅವುಗಳನ್ನು ಮೋಜಿಗಾಗಿ ಪಂದ್ಯಗಳಲ್ಲಿ ಬಳಸುವುದನ್ನು, ಮೆರವಣಿಗೆಯಲ್ಲಿ ಉಪಯೋಗಿಸುವುದನ್ನು, ಅವುಗಳ ಚರ್ಮದಿಂದ ಉಪಯೋಗಿ ವಸ್ತುಗಳನ್ನು ನಿರ್ಮಿಸುವುದನ್ನು, ಸರ್ಕಸ್ಸಿನಲ್ಲಿ ಪ್ರಾಣಿಗಳನ್ನು ಹೊಡೆದು ಪಳಗಿಸುವುದನ್ನು ವಿರೋಧಿಸುತ್ತಾರೆ. ಮೋಜಿಗಾಗಿ ಪ್ರಾಣಿಗಳನ್ನು ಹೊಡೆದೋಡಿಸುವ ಆಟಗಳನ್ನು, ಕೊಲ್ಲುವ ಆಚರಣೆಗಳನ್ನು, ನಿಷೇಧಿಸಬೇಕೆಂದು ಈ ಪ್ರಾಣಿದಯಾ ಸಂಘಗಳು ಪ್ರಯತ್ನಿಸುತ್ತವೆ. ಪ್ರಾಣಿದಯಾ ಸಂಘಗಳ ಈ ಕಾಳಜಿಯು ಜನಸಾಮಾನ್ಯ ಭಾರತೀಯರಿಗೆ ಮೇಲ್ನೋಟಕ್ಕೆ ಅರ್ಥವಾಗಿರುವಂತೆಯೇ ಭಾಸವಾಗುತ್ತದೆ. ಮತ್ತಷ್ಟು ಓದು
ಕಂಬಳ ಅಮಾನವೀಯ ಆಚರಣೆಯೇ?

ತುಳುನಾಡ ನಂಬಿಕೆಗಳು…
– ಭರತೇಶ ಆಲಸಂಡೆಮಜಲು
ಬಾಳಿಗೊಂದು ನಂಬಿಕೆ ಎಂಬಂತೆ, ಈ ಬಾಹ್ಯ ಜಗತ್ತು ನಂಬಿಕೆಯ ತಲೆದಿಂಬುನಿಟ್ಟು ಮಲಗಿದೆ. ಈ ನಂಬಿಕೆಯಲ್ಲಿ ಎಲ್ಲವೂ ಶೂನ್ಯ ಆಕಾಶ ಅನಂತವಾದರೆ, ಅಣು ಪರಮಾಣುಗಳು ಎನೋ ಕತ್ತಲಲ್ಲಿ ತೇಲುವ ಸೂಕ್ಷ್ಮ ಜೀವಿ, ಆ ಆಗಾಧ ಶಕ್ತಿಯ ಕೊಲ್ಮಿಂಚು ಎಲ್ಲೋ ಹುಟ್ಟಿ ಶಕ್ತಿಯ ಅದುಮಿದ ಶೂನ್ಯ, ಸತ್ಯದ ಜಗದಲ್ಲಿ ನಾವೊಂದು ಭ್ರಾಮರಕ ನಿರ್ಮಿತಿಗಳು ಅದೇ ನಿರಾಕಾರ, ನಿರ್ಗುಣ, ನಿರಾಮಯ, ಆಗೋಚರ ಬ್ರಹ್ಮಾಂಡದ ಸ್ವರೂಪಗಳು ನಮ್ಮ ನಮ್ಮ ಜ್ಞಾನದ ಅಳತೆಯೊಳಗೆ…. “ನೈಜ ಜಗತ್ತಿನಲ್ಲಿ ಬಣ್ಣಗಳೇ ಇಲ್ಲ, ವಾಸನೆಯೂ ಇಲ್ಲ, ಮೃದುತ್ವ ಕಾಠೀಣ್ಯಗಳು ಇಲ್ಲ, ಅವೆಲ್ಲ ಏನಿದ್ದರೂ ನಮ್ಮ ನಿಮ್ಮ ಮಿದುಳಿನಲ್ಲಿ ನಮ್ಮ ನಿಮ್ಮ ಜ್ಞಾನದಲ್ಲಿ” ಎಂದು ಪ್ರಸಿದ್ಧ ನರ ವಿಜ್ಞಾನಿ ನೋಬೆಲ್ ವಿಜೇತ ಸರ್ ಜಾನ್ ಐಕೆಲ್ಸ್ ಹೇಳಿದ್ದಾರೆ.
ನಮ್ಮ ಯೋಚನಾ ಲಹರಿಯ ಶೂನ್ಯ ಜಾಗಗಳಲ್ಲಿ ಈ ನಂಬಿಕೆಗಳು ಅಚ್ಚಳಿದು ನಿಂತಿದೆ ನಮ್ಮ ನಂಬಿಕೆಗಳೇ ಹಾಗೆ ಅದು ಪ್ರಕೃತಿಯ ಅರಾಧನೆಯಿಂದ ಹಿಡಿದು ಗುರು ಹಿರಿಯರ ಪೂಜನೆಯವರೆಗೆ ಅದರಲ್ಲೂ ಕರಾವಳಿ ಇವೂಗಳ ಗೂಡು, ಬೀಡು. ಹಲವಾರು ವೈಶಿಷ್ಟ, ವಿಶೇಷ, ಆಚರಣೆ, ಅರಾಧನೆ, ಪಾಲನೆ ಇವುಗಳಿಂದಾಗಿ ವಿಶ್ವವ್ಯಾಪ್ತಿಯಲ್ಲಿ ಛಾಪನ್ನು ಮೂಡಿಸಿದೆ. ಎಲ್ಲರ ಮಂದ ದೃಷ್ಠಿ ಇತ್ತ ಕಡೆ ನೆಡುವಂತೆ ಮಾಡಿದೆ. ಇಲ್ಲಿನ ಆಚರಣೆ ಒಂದನ್ನು ಮೀರಿಸುವ ಇನ್ನೊಂದು ಪ್ರಬುದ್ಧವಾದದ್ದು. ಪ್ರಪಂಚದ ಬೇರೆ ಯಾವೂದೇ ಕೋಣೆಯಲ್ಲೂ ಅರಸಿ ಹುಡುಕಿದರೂ ಬಯಸಿ ಸಿಗಲಾರದು. ಯಾವುದೋ ಪೂವಾಗ್ರಹದ ನೆಲೆಯಲ್ಲಿ ತುಳುನಾಡು ತನ್ನ ಭವ್ಯ ಸಂಸ್ಕೃತಿಯ ಕಣಜದ ನೆಲೆಯಲ್ಲಿ ಇನ್ನೂ ಆಚರಣೆಗಳು ಉಳಿದು ನಡೆಯುತಿದೆ. ಒಂದಷ್ಟು ಜಿಜ್ಞಾಸೆ, ವಿಮರ್ಶೆಗಳಿಂದ ಮತ್ತಷ್ಟು ಪ್ರಚಾರವಾಗಿ ಇನ್ನಷ್ಟು ಗಟ್ಟಿಯಾಗಿ ತುಳುವರ ಮನಗಳಲ್ಲಿ ಅಗೆಲುಗಳ ರೂಪದಲ್ಲಿ ಭಾವುಕವಾಗಿ ಬೆಚ್ಚಗೆ ಕುಳಿತಿದೆ.
ಕಾನೂನಿನ ಹೆಸರಲ್ಲಿ ಮರೆಯಾಗಲಿದೆಯೆ ಕರಾವಳಿಯ ಕಂಬಳ ಕ್ರೀಡೆ?
– ರಾಘವೇಂದ್ರ ಅಡಿಗ. ಹೆಚ್.ಎನ್
ಶತಮಾನಗಳ ಇತಿಹಾಸ ಹೊಂದಿರುವ ಕರ್ನಾಟಕದ ಕರಾವಳಿಯಲ್ಲಿನ ಕಂಬಳ ಕ್ರೀಡೆಗೆ ಇದೀಗ ಕಂಟಕವು ಎದುರಾಗಿದೆ. ಹೋರಿಗಳನ್ನು ಹಿಂಸಾತ್ಮಕವಾಗಿ ಬೆದರಿಸುವ ತಮಿಳುನಾಡಿನ ಜಲ್ಲಿಕಟ್ಟು ಸ್ಪರ್ಧೆ ಮತ್ತು ಮಹಾರಾಷ್ಟ್ರದ ಎತ್ತಿನ ಗಾಡಿ ಓಟದ ಸ್ಪರ್ಧೆಯನ್ನು ಸುಪ್ರೀಂ ಕೋರ್ಟ್ 2014ರ ಮೇ 7ರಂದು ನಿಷೇಧಿಸಿ ಆದೇಶ ಹೊರಡಿಸಿತ್ತು. ಪ್ರಾಣಿಗಳನ್ನು ಮನರಂಜನೆಗಾಗಿ ಹಿಂಸಾತ್ಮಕವಾಗಿ ನಡೆಸಿಕೊಳ್ಳಬಾರದು ಎಂಬುದು ನ್ಯಾಯಾಲಯದ ತೀರ್ಪಿನ ತಾತ್ಪರ್ಯವಾಗಿತ್ತು. ಇದೀಗ ಸುಪ್ರೀಂ ಕೊರ್ಟ್ ತೀರ್ಪಿನ ಹಿನ್ನೆಲೆಯನ್ನಿಟ್ಟುಕೊಂಡು ಭಾರತೀಯ ಪ್ರಾಣಿಗಳ ಕಲ್ಯಾಣ ಮಂಡಳಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕಂಬಳ ನಡೆಸದಂತೆ ಸೂಚಿಸಿದೆ. ಹೀಗಾಗಿ ದ.ಕ ಜಿಲ್ಲಾಡಳಿತದ ಕ್ರೀಡೆಗೆ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ಕಂಬಳದ ಆಚರಣೆ, ಇತಿಹಾಸ, ಹಿನ್ನೆಲೆಯ ಮೇಲೆಂದು ಇಣುಕು ನೋಟವಿಲ್ಲಿದೆ.
ಕರಾವಳಿ ಕರ್ನಾಟಕದ ಬೇಸಾಯ ವೃತ್ತಿಯೇ ಪ್ರಮುಖವಾಗಿರುವ ಸಮಾಜದಲ್ಲಿ ಕೋಣಗಳು ಅವರ ಬದುಕಿನ ಅವಿಭಾಜ್ಯ ಅಂಗವಾಗಿ ಹೋಗಿದೆ. ಬೇಸಾಯಗಾರರು ಭತ್ತದ ಗದ್ದೆಗಳಲ್ಲಿ ಉತ್ತಿದ ಬಳಿಕ ಕೋಣ ಎತ್ತುಗಳನ್ನು ಓಡಿಸುತ್ತಿದ್ದ ಆಚರಣೆ ಮತ್ತು ಆಟ ‘ಕಂಬಳ’. ಕಂಬಳ ಅತವಾ ತುಳು ಭಾಷೆಯಲ್ಲಿ ಹೇಳುವಂತೆ ‘ಕಂಬುಲ’ ಎಂದರೆ ಉಳುವುದಕ್ಕೆ ಮತ್ತು ಬೀಜಗಳ ಬಿತ್ತನೆಗೆ ಸಿದ್ದವಾಗಿರುವ ಕೆಸರುಗದ್ದೆ ಎಂದೇ ಹುರುಳು. ಕೆಸರುಗದ್ದೆಯಲ್ಲಿ, ಬಾಕಿಮಾರು ಗದ್ದೆಯಲ್ಲಿ, ಕಂಬಳ ಗದ್ದೆಯಲ್ಲಿ ದಪ್ಪನೆ ಮಯ್ಯ, ಸಾಕಿದ ಕೋಣಗಳನ್ನು ಓಡಿಸುವುದು ಒಂದು ಮನೋರಂಜನೆ ಆಟ. ಹೀಗೆಂದ ಮಾತ್ರಕ್ಕೆ ಕಂಬಳವು ಕೇವಲ ಕೋಣಗಳ ಓಟದ ಸ್ಪರ್ಧೆಯು ಮಾತ್ರವೇ ಎಂದು ತಿಳಿಯಬೇಕಿಲ್ಲ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿನ ರೈತರು ಭತ್ತದ ಕೊಯ್ಲಿನ ಬಳಿಕದಲ್ಲಿ ಮನರಂಜನೆಗಾಗಿ ಏರ್ಪಡಿಸುತ್ತಿದ್ದ ಆಟವಿದಾಗಿದ್ದು ಇಂತಹಾ ಆಚರಣೆಯ ಜತೆಗೆ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಧಾರ್ಮಿಕ ನಂಬಿಕೆಯೂ ಮಿಳಿತಗೊಂಡಿದೆ.