ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕನ್ನಡ ಪುಸ್ತಕ’

7
ಜುಲೈ

ಕನ್ನಡ ಪುಸ್ತಕೋದ್ಯಮ ಎದುರಿಸುತ್ತಿರುವ ಸವಾಲುಗಳು

– ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ,ಬಾಗಲಕೋಟ

ಕನ್ನಡ ಪುಸ್ತಕಈ ವಿಷಯ ಮೊನ್ನೆ ಗೊತ್ತಾಯಿತು. ಲೇಖಕ ಮತ್ತು ಪ್ರಕಾಶಕರಾಗಿರುವ ನನ್ನ ಸ್ನೇಹಿತರೋರ್ವರಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಪುಸ್ತಕ ಖರೀದಿಗೆ ಸಂಬಂಧಿಸಿದಂತೆ ಪತ್ರ ಬಂದಿತ್ತು. ಆ ಪತ್ರದಲ್ಲಿ ಉಲ್ಲೇಖಿಸಿದಂತೆ ಪುಸ್ತಕದ ಮೂರು ನೂರು ಪ್ರತಿಗಳನ್ನು ಕಳುಹಿಸಿಕೊಡುವಂತೆ ಹಾಗೂ ಪುಸ್ತಕದ ಪ್ರತಿ ಪುಟಕ್ಕೆ 40 ಪೈಸೆಗಳ ಬೆಲೆ ನಿಗದಿಪಡಿಸಲಾಗಿರುವುದನ್ನು ಸೂಚಿಸಲಾಗಿತ್ತು. ನನ್ನ ಸ್ನೇಹಿತನ ಪುಸ್ತಕ ಒಟ್ಟು ನೂರು ಪುಟಗಳಲ್ಲಿದ್ದು ಅದರ ಮುಖ ಬೆಲೆ ಎಪ್ಪತ್ತು ರೂಪಾಯಿಗಳಾಗಿತ್ತು. ಹೀಗಿದ್ದೂ ಆತ ಒಂದು ಪ್ರತಿಗೆ ನಲವತ್ತು ರೂಪಾಯಿಗಳಂತೆ 300 ಪ್ರತಿಗಳನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಮಾರಾಟ ಮಾಡಬೇಕಾದ ಅನಿವಾರ್ಯತೆ ಎದುರಾಯಿತು. ಈ ಪುಸ್ತಕದ ಮಾರಾಟದಿಂದ ಅವನಿಗೇನಾದರೂ ಲಾಭವಾಗಿರಬಹುದೆ ಎನ್ನುವ ಸಂದೇಹ ನನ್ನನ್ನು ಕಾಡುತ್ತಿರುವ ಹೊತ್ತಿನಲ್ಲೇ ಆತ ಪ್ರಕಟಣೆಯ ಮೇಲೆ ಆದ ಖರ್ಚಿನ ಲೆಕ್ಕ ಒಪ್ಪಿಸಿದ. ಪುಸ್ತಕದ ಒಟ್ಟು ಸಾವಿರ ಪ್ರತಿಗಳ ಪ್ರಕಟಣೆಗಾಗಿ ಆತ ಮುದ್ರಕರಿಗೆ ಕೊಟ್ಟ ಹಣ ಬರೊಬ್ಬರಿ ಮೂವತ್ತು ಸಾವಿರ ರೂಪಾಯಿಗಳು.ಈ ನಡುವೆ ಪುಸ್ತಕದ ಬಿಡುಗಡೆ ಕಾರ್ಯಕ್ರಮಕ್ಕಾಗಿ ನಾಲ್ಕೈದು ಸಾವಿರ ರೂಪಾಯಿಗಳು ಖರ್ಚಾದವು. ಸಾವಿರ ಪ್ರತಿಗಳು ಕೈಸೇರಿದಾಗ ಅವುಗಳಲ್ಲಿ ನೂರರಿಂದ ನೂರೈವತ್ತು ಪ್ರತಿಗಳು ಗೌರವ ಪ್ರತಿ ರೂಪದಲ್ಲಿ ಪುಕ್ಕಟ್ಟೆಯಾಗಿ ಕೈಬಿಟ್ಟವು. ಮೂರು ನೂರು ಪ್ರತಿಗಳನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಮಾರಾಟ ಮಾಡುವುದರಿಂದ ಬರುವ ಹಣ ಹನ್ನೆರಡು ಸಾವಿರ ರೂಪಾಯಿಗಳು. ಪರಿಚಯದ ಪುಸ್ತಕ ಮಾರಾಟಗಾರರನ್ನು ಸಂಪರ್ಕಿಸಿದಾಗ ಎರಡು ನೂರು ಪ್ರತಿಗಳೇನೋ ಶೇಕಡಾ 20ರ ರಿಯಾಯಿತಿ ದರದಲ್ಲಿ ಮಾರಾಟವಾದರೂ ಅವರಿಂದ ಬರಬೇಕಾದ ರೂ.11,200/- ಇನ್ನೂ ಆತನ ಕೈಸೇರಿಲ್ಲ. ಸುಮಾರು ಮೂರು ನೂರು ಪ್ರತಿಗಳು ಮಾರಾಟವಾಗದೆ ಹಾಗೇ ಉಳಿದುಕೊಂಡಿವೆ.

ಮತ್ತಷ್ಟು ಓದು »