‘ಸತ್ಯ ಹರಿಶ್ಚಂದ್ರ’ ನ ನೋಡಿದ ಮೋಹನ ದಾಸನೂ…‘ಕ್ರೈಂ ಡೈರಿ’ ನೋಡುವ ನಮ್ಮ ಮಕ್ಕಳೂ…
-ನಿತ್ಯಾನಂದ.ಎಸ್.ಬಿ
“………. ಅದೊಂದು ದಿನ ಸಂಚಾರಿ ಬೊಂಬೆ ಪ್ರದರ್ಶಕರು ನಮ್ಮ ಊರಿಗೆ ಬಂದರು. ಅವರು ನನಗೆ ತೋರಿಸಿದ ಒಂದು ಚಿತ್ರ, ಶ್ರವಣ ಕುಮಾರ. ಆ ಚಿತ್ರದಲ್ಲಿ ಶ್ರವಣ ತನ್ನ ಕುರುಡು ತಂದೆ ತಾಯಿಯರನ್ನು ಅಡ್ಡೆಯಲ್ಲಿ ಕೂರಿಸಿಕೊಂಡು, ಅದನ್ನು ಹೆಗಲಿನ ಮೇಲೆ ಹೊತ್ತುಕೊಂಡು ಯಾತ್ರೆಗಾಗಿ ಹೋಗುತ್ತಿದ್ದ. ಅಂದು ಆ ದೃಶ್ಯ ನನ್ನ ಅಂತರಂಗದಲ್ಲಿ ಶಾಶ್ವತವಾಗಿ ಅಂಕಿತವಾಯಿತು. ಇಗೋ ಇಲ್ಲಿ ನಿನಗೊಂದು ಆದರ್ಶವಿದೆ. ಅದನ್ನು ಅನುಕರಿಸು ಎಂದು ನನಗೆ ನಾನೇ ಹೇಳಿಕೊಂಡೆ. ಶ್ರವಣ ಮರಣ ಹೊಂದಲು ಅವನ ಮಾತಾಪಿತೃಗಳು ಮಾಡಿದ ಆರ್ತವಿಲಾಪ ನನ್ನ ಕಿವಿಗೆ ಈಗಲೂ ಕೇಳುವಂತಿದೆ. ಆ ದೃಶ್ಯ ನನ್ನ ಹೃದಯವನ್ನು ಕರಗಿಸಿತು. ಅದೇ ಸಮಯದಲ್ಲಿ ನಾನು ನೋಡಿದ ಇನ್ನೊಂದು ನಾಟಕವೆಂದರೆ ಸತ್ಯ ಹರಿಶ್ಚಂದ್ರ. ಅದು ನನ್ನ ಮನಸ್ಸನ್ನು ಸೂರೆಗೊಂಡಿತ್ತು. ಅದನ್ನು ಎಷ್ಟು ಸಲ ನೋಡಿದರೂ ನನಗೆ ತೃಪ್ತಿಯೇ ಆಗಲಿಲ್ಲ. ಆದರೆ ನಮ್ಮ ತಂದೆ ಎಷ್ಟು ಸಲ ನೋಡಲು ಅನುಮತಿ ಕೊಟ್ಟಾರು? ಅದರ ಹುಚ್ಚು ನನ್ನನ್ನು ಹಗಲೂ ರಾತ್ರಿ ಬಿಡಲೇ ಇಲ್ಲ. ಲೆಕ್ಕವಿಲ್ಲದಷ್ಟು ಸಲ ನಾನೇ ಹರಿಶ್ಚಂದ್ರನಾಗಿ ಆ ನಾಟಕವನ್ನು ಅಭಿನಯಿಸಿಕೊಂಡೆ. ಎಲ್ಲರೂ ಏಕೆ ಸತ್ಯಹರಿಶ್ಚಂದ್ರನಂತೆ ಸತ್ಯಸಂಧರಾಗಿರಬಾರದು? ಇದೇ ಹಗಲೂ ರಾತ್ರಿ ನನ್ನನ್ನು ನಾನೇ ಕೇಳಿಕೊಳ್ಳುತ್ತಿದ್ದ ಪ್ರಶ್ನೆ. ಸತ್ಯವನ್ನು ಅನುಸರಿಸಬೇಕೆಂದು ಹರಿಶ್ಚಂದ್ರ ಪಟ್ಟ ಕ್ಲೇಶಗಳನ್ನೆಲ್ಲಾ, ಆಪತ್ತುಗಳನ್ನೆಲ್ಲಾ ನಾನೂ ಪಡಬೇಕು. ಇದೊಂದೇ ನನ್ನ ಮನಸ್ಸಿನಲ್ಲಿ ಸ್ಪೂರ್ತಿ ತುಂಬಿದ ಆದರ್ಶ. ಹರಿಶ್ಚಂದ್ರನ ಕಥೆಯನ್ನು ನಾನು ಅಕ್ಷರಶಃ ನಂಬಿದೆನು. ನೆನಪು ಮಾಡಿಕೊಂಡು ಪದೇ ಪದೇ ಅಳುತ್ತಿದ್ದೆನು. ಹರಿಶ್ಚಂದ್ರ ಐತಿಹಾಸಿಕ ವ್ಯಕ್ತಿ ಆಗಿರಲಾರ ಎಂಬುದು ಇಂದು ನನ್ನ ಬುದ್ಧಿಗೆ ಗೋಚರಿಸುತ್ತಿದೆ. ಆದರೆ ನನ್ನ ಮಟ್ಟಿಗೆ ಹರಿಶ್ಚಂದ್ರ, ಶ್ರವಣ ಇಬ್ಬರೂ ಜೀವಂತ ವ್ಯಕ್ತಿಗಳು. ಆ ನಾಟಕಗಳನ್ನು ಓದಿದರೆ ಮತ್ತೆ ಮೊದಲಿನಂತೆ ನಾನು ಕಣ್ಣೀರು ಹಾಕದೇ ಇರಲಾರೆನೆಂಬುದು ನನ್ನ ನಂಬಿಕೆ……..”
ಕನ್ನಡ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಪಾಲ್ಗೊಳ್ಳುವ ಆಸೆಯೇ?
–ಓಂ ಶಿವಪ್ರಕಾಶ್
ಪ್ರತಿಯೊಬ್ಬ ಕನ್ನಡಿಗನಲ್ಲೂ ಕನ್ನಡಕ್ಕೆ ದುಡಿಯುವ ಬಲವಾದ ಆಸೆಯಿರುತ್ತದೆ. ಅಕ್ಷರ ಕಲಿಯುವ ದೆಸೆಯಿಂದ ಹಿಡಿದು, ದುಡಿದು ದೊಡ್ಡವನಾಗುವವರೆಗೂ ಹೇಗೆ ತನ್ನ ಆಸೆಯನ್ನು ಈಡೇರಿಸಿಕೊಳ್ಳುವುದೆಂಬ ಪ್ರಶ್ನೆ ಮನಸ್ಸಿನಲ್ಲಿ ಸುಳಿಯುತ್ತಲೇ ಇರುತ್ತದೆ. ಮಾಹಿತಿ ತಂತ್ರಜ್ಞಾನದ ಕ್ಷೇತ್ರದಲ್ಲಂತೂ, ಅದನ್ನು ಬಳಸುವ ಸಾಮಾನ್ಯನಿಂದ ಹಿಡಿದು, ತಂತ್ರಜ್ಞಾನದ ಜೊತೆಗೇ ದಿನದೂಡುವ ತಂತ್ರಜ್ಞನವರೆಗೂ ಎಲ್ಲರಿಗೂ ಕನ್ನಡ ಬಳಸುವ ಮತ್ತು ಬೆಳೆಸುವ ಆಸೆ ಖಂಡಿತ ಇರುತ್ತದೆ. ಅಂತಹ ಆಸೆಗಳನ್ನು ಮತ್ತೆ ಚಿಗುರಿಸಿ, ಮಾಹಿತಿ ತಂತ್ರಜ್ಞಾನದ ಬಳಕೆದಾರನ ದಿನನಿತ್ಯದ ಪ್ರಶ್ನೆಗಳನ್ನು ಉತ್ತರಿಸುತ್ತಾ, ಕನ್ನಡದ ತಾಂತ್ರಿಕ ಬೆಳವಣಿಗೆಗೆ ನಾಂದಿಯಾಗಲು ನಾವು ಇಡಬೇಕಾದ ‘ಹೆಜ್ಜೆಗಳು” ಅನೇಕ.
ದೈನಂದಿನ ಬದುಕಿನಲ್ಲಿ ತಂತ್ರಜ್ಞಾನದ ಮುಖೇನ ಕನ್ನಡದಲ್ಲೇ ವ್ಯವಹರಿಸಬಹುದೇ? ಕನ್ನಡದ ತಾಂತ್ರಿಕ ಬೆಳವಣಿಗೆ ಹೇಗೆ ಸಾಧ್ಯ? ಅದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಬಗೆ ಹೇಗೆ? ಕನ್ನಡ ಭಾಷಾ ತಂತ್ರಜ್ಞಾನ ಬೆಳವಣಿಗೆಯ ತೊಡಕುಗಳ ನಿವಾರಣೆ ಸಾಧ್ಯವೇ? ತಂತ್ರಾಂಶಗಳು ನಡೆಯಬೇಕಿರುವ ಹಾದಿಯ ಕಿರು ಪರಿಚಯ ಎಲ್ಲಿ ಸಿಗಬಹುದು? ಇದಕ್ಕೊಂದು ಸಮುದಾಯವಿದೆಯೇ? ಈ ಸಮುದಾಯ ಅಭಿವೃದ್ದಿಯ ಪರಿಕಲ್ಪನೆ ಏನು? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಸಲುವಾಗಿ ‘ಹೆಜ್ಜೆ’ ರೂಪಿತಗೊಂಡಿದೆ.
ಮಾಹಿತಿ ತಂತ್ರಜ್ಞಾನದ ವಿವಿಧ ಸ್ತರಗಳಲ್ಲಿ ಕನ್ನಡದ ಬೆಳವಣಿಗೆಗೆ ಬೇಕಾದ ವಿಷಯಗಳ ಬಗ್ಗೆ ಅನುಭವಿ ತಜ್ಞರು, ತಂತ್ರಜ್ಞರು ತಮ್ಮ ಅನುಭವವನ್ನು ಹಂಚಿಕೊಳ್ಳುವುದರ ಮೂಲಕ ಪ್ರಾರಂಭವಾಗುವ ಈ ಕಾರ್ಯಕ್ರಮ, ಮೇಲೆ ಹೇಳಿದ ಅನೇಕ ಪ್ರಶ್ನೆಗಳಿಗೆ ಉತ್ತರವನ್ನು ಪಡೆದುಕೊಳ್ಳುವ ‘ಹೆಜ್ಜೆ’ಗಳ ಹಾದಿಯನ್ನು ನಿಮ್ಮ ಮುಂದೆ ತೆರೆಯಲಿದೆ.
ಬನ್ನಿ ನಮ್ಮೊಡನೆ ಜೊತೆಜೊತೆಯಾಗಿ ಹೆಜ್ಜೆ ಹಾಕಿ, ನಿಮ್ಮ ಬರುವಿಕೆಯನ್ನು ಇಂದೇ ಕಾಯ್ದಿರಿಸಿ
* * * * * *
ಚಿತ್ರಕೃಪೆ : hejje.sanchaya.net