ದೇವರ ನಾಡಿನಲ್ಲಿ ಮರಣ ಮೃದಂಗ
– ಮಲ್ಲಿ ಶರ್ಮ
ಬೋಟ್ ಹೌಸ್, ಸರೋವರಗಳು, ಅರಬೀ ಸಮುದ್ರ, ತೆಂಗು ಅಡಿಕೆ ಕೃಷಿ, ಆಹಾ ಈ “GOD’S OWN COUNTRY” ಇದೆಯಲ್ಲಾ, ಅಲ್ಲಿಯ ಟೂರಿಸಂ ಕುರಿತ HD ವಿಡಿಯೋ ಯೂಟ್ಯೂಬಲ್ಲಿ ನೋಡೋವಾಗ ಆಹಾ!!! ಇದಪ್ಪಾ ಸ್ವರ್ಗ ಅಂದ್ರೆ, ಅಂತ ಉದ್ಘಾರ ತೆಗೆದುಬಿಡ್ತಾರೆ ಪ್ರತಿಯೊಬ್ಬರೂ. ಆದರೆ ದೇವರ ಸ್ವಂತ ನಾಡಾದ ಕೇರಳದಲ್ಲಿ ಭಯಾನಕ ರಾಕ್ಷಸರು ಬೀಡು ಬಿಟ್ಟಿರೋ ಸಂಗತಿ ನಿಮಗೆಷ್ಟು ಗೊತ್ತು? ಮತ್ತಷ್ಟು ಓದು
ಕಮ್ಯುನಿಸ್ಟರ ರಕ್ತ ಚರಿತ್ರೆಯ ಪುಟಗಳು
– ರಾಕೇಶ್ ಶೆಟ್ಟಿ
ಇತ್ತೀಚೆಗೆ ಹೈದರಾಬಾದ್ ಯುನಿವರ್ಸಿಟಿಯ ರೋಹಿತ್ ವೆಮುಲ ಎಂಬ ಯುವಕನ ಆತ್ಮಹತ್ಯೆ ಹಾಗೂ ದೆಹಲಿಯ ಜೆ.ಎನ್.ಯು ವಿವಾದಗಳ ಸಮಯದಲ್ಲಿ ಕಾಕಗಳು (ಕಾಂಗ್ರೆಸ್+ಕಮ್ಯುನಿಸ್ಟ್) ಮೋದಿಯವರ ಸರ್ಕಾರ ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ಮಾಡುತ್ತಿವೆ ಎಂದು ಉಯಿಲೆಬ್ಬಿಸಿದ್ದಾರೆ.ಕರ್ನಾಟಕದಲ್ಲಿರುವ ಇವರ ಅಣ್ತಮ್ಮಂದಿರು ದಿನ ಬೆಳಗಾದರೆ ಟೌನ್ ಹಾಲ್ ಎದುರು ನಿಲ್ಲುತ್ತಿದ್ದಾರೆ. ಆದರೆ,ಯುನಿವರ್ಸಿಟಿ,ವಿದ್ಯಾರ್ಥಿಗಳ ಬಗ್ಗೆ ಮಾತನಾಡುವ ನೈತಿಕತೆ ಕಾಕಗಳಿಗಿದೆಯೇ? ಕರ್ನಾಟಕದ ಕುವೆಂಪು ಯುನಿವರ್ಸಿಟಿಯಲ್ಲಿದ್ದ CSLC ಎಂಬ ಸಂಶೋಧನಾ ಕೇಂದ್ರವನ್ನು ಮುಚ್ಚಿಸಿದ್ದು ಇದೇ ಕಾಂಗ್ರೆಸ್ ಸರ್ಕಾರ,ಮುಚ್ಛಿಸುವಂತೆ ಒತ್ತಡ ಹಾಕಿದ್ದು ಟೌನ್ ಹಾಲ್ ಬುದ್ಧಿಜೀವಿಗಳೇ. ಕಾಂಗ್ರೆಸ್ಸಿನವರ ಇತಿಹಾಸ ಎಲ್ಲರಿಗೂ ತಿಳಿದಿರುವುದೇ.ಆದರೆ ಈ ಕಮ್ಯುನಿಸ್ಟರ ಪುಣ್ಯ ಕಾರ್ಯಗಳ ಬಗ್ಗೆ ಸ್ವಲ್ಪ ಹೇಳಬೇಕು. (ಇದು ಕೇವಲ ಕೇರಳದ ಕಮ್ಯುನಿಸ್ಟರ ಇತಿಹಾಸ.ಬಂಗಾಳದ ಕಾಮ್ರೇಡುಗಳ ಕತೆ ಇದಕ್ಕೂ ದೊಡ್ಡದು)
ಅದು ಸೆಪ್ಟಂಬರ್ ೧೭,೧೯೯೬ರ ದಿನ.ಕೇರಳದ ಪರುಮಲ ಜಿಲ್ಲೆಯ ದೇವಸ್ವೋಮ್ ಕಾಲೇಜಿನ ಕ್ಯಾಂಪಸ್ಸಿಗೆ ಲಗ್ಗೆಯಿಟ್ಟ ಕಮ್ಯುನಿಸ್ಟರು ‘ಅನು,ಸುಜಿತ್,ಕಿಮ್’ ಎಂಬ ಎಬಿವಿಪಿಯ ಕಾರ್ಯಕರ್ತರ ಮೇಲೆ ಮುಗಿಬಿದ್ದರು.ಎಬಿವಿಪಿಯೊಂದಿಗೆ ಗುರುತಿಸಿಕಂಡಿದ್ದೇ ಈ ಹುಡುಗರು ಮಾಡಿದ್ದು ತಪ್ಪು,ಕೇರಳದಲ್ಲಿ ಕಮ್ಯುನಿಸ್ಟರು ನಿಮ್ಮನ್ನು ಸುತ್ತುವರೆದರೆಂದರೇ ಸ್ಟಾಲಿನ್/ಮಾವೋ ಪ್ರೇತಾತ್ಮ ಮೃತ್ಯು ರೂಪದಲ್ಲಿ ನಿಮ್ಮೆದುರು ಬಂದು ನಿಂತಂತೆಯೇ ಸರಿ.ಪ್ರಾಣ ಉಳಿಸಿಕೊಳ್ಳಲು ಓಡಿದ ಈ ಹುಡುಗರು ಪಂಪಾ ನದಿಗೆ ಹಾರಿ ಈಜಲಾರಂಭಿಸಿದ್ದರು.ನೀರಿಗೆ ಬಿದ್ದ ವಿದ್ಯಾರ್ಥಿಗಳ ಮೇಲೆ ಕಮ್ಯುನಿಸ್ಟ್ ಗೂಂಡಾಗಳು ಕಲ್ಲು ತೂರಲಾರಂಭಿಸಿದರು. ಆಚೆ ದಡದಲ್ಲಿ ಬಟ್ಟೆ ಒಗೆಯುತ್ತಿದ್ದ ಹೆಣ್ಣು ಮಕ್ಕಳು ಕಮ್ಯುನಿಸ್ಟರ ಕಲ್ಲಿನೇಟಿಗೆ ತುತ್ತಾಗಿ ಮುಳುಗುತ್ತಿದ್ದ ಹುಡುಗರತ್ತ ಸೀರೆಗಳನ್ನೆಸೆದು ಅವರನ್ನು ಉಳಿಸಿಕೊಳ್ಳಲು ಪ್ರಯತ್ನಿಸಿದರೇ,ಮಹಿಳಾವಾದದ ಭಾಷಣ ಬಿಗಿಯುವ ಕಾಮ್ರೇಡುಗಳು ಅವರ ಮೇಲೆ ಕಲ್ಲಿನ ಮಳೆ ಸುರಿದರು.ವಿಧಿಯಿಲ್ಲದೇ ಆ ಹೆಣ್ಣುಮಕ್ಕಳು ಪ್ರಾಣ ಉಳಿಸಿಕೊಳ್ಳಲು ಓಡಿದರು.ಇತ್ತ ಹದಿಹರೆಯದ ವಿದ್ಯಾರ್ಥಿಗಳ ಪ್ರಾಣಕ್ಕೆ ಆಜಾದಿ ಸಿಕ್ಕಿತ್ತು.ಸ್ಟಾಲಿನ್ ಘೋರಿಯೊಳಗಿಂದಲೇ ಲಾಲ್ ಸಲಾಂ ಎಂದನೇನೋ. ಕಡೆಗೇನಾಯ್ತು.ಅವರದ್ದೇ ಸರ್ಕಾರ,ಅವರು ಮಾಡಿದ್ದೇ ಕಾನೂನು.ಯಾರೆಂದರೇ ಯಾರಿಗೂ ಶಿಕ್ಷೆಯಾಗಲಿಲ್ಲ.ಇಂದು ಅದೇ ಕಮ್ಯುನಿಸ್ಟರು ವಿದ್ಯಾರ್ಥಿಗಳ ಆಜಾದಿ ಬಗ್ಗೆ ಮಾತನಾಡುತಿದ್ದಾರೆಂದರೇ ಎಂತ ವ್ಯಂಗ್ಯವಲ್ಲವೇ?