ವಿಷಯದ ವಿವರಗಳಿಗೆ ದಾಟಿರಿ

Posts tagged ‘ಗಡಿ’

24
ಆಗಸ್ಟ್

ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!

– ತೇಜಸ್ವಿನಿ ಹೆಗಡೆ.

india-pakistan-border5ಅದೊಂದು ಸುವಿಶಾಲ ಮನೆ. ಎಷ್ಟಂಕಣದ್ದು ಎಂದು ಹೇಳಲೂ ಆಗದಷ್ಟು ದೊಡ್ಡ ಮನೆ! ಆ ಮನೆಯೊಳಗೆ ಅಸಂಖ್ಯಾತ ಕೋಣೆಗಳು. ಗಾತ್ರದಲ್ಲಿ, ಆಕಾರಗಳಲ್ಲಿ, ಅಂದ ಚೆಂದಗಳಲ್ಲಿ ವಿವಿಧತೆಯನ್ನು, ವೈವಿಧ್ಯಗಳನ್ನು ಹೊಂದಿದ ಕೋಣೆಗಳು. ಅದೊಂದು ಬಹು ದೊಡ್ಡ ಒಟ್ಟು ಕುಟುಂಬ. ಕೆಲವು ಸದಸ್ಯರಿಗಂತೂ ಕೋಣೆಗಳೇ ಇಲ್ಲ. ಇದಕ್ಕಾಗಿ ಹೋರಾಟ ಮಾಡುತ್ತಿರುತ್ತಾರೆ. ಅವರ ಇದೇ ಅನಿವಾರ್ಯತೆಯನ್ನೇ ಬಂಡವಾಳ ಮಾಡಿಕೊಂಡು, ಅವರ ನೈಜ ಹೋರಾಟವನ್ನೇ ದಿಕ್ಕೆಡಿಸಿ, ತಮ್ಮ ಕುಟಿಲ ಸ್ವಾರ್ಥಕ್ಕಾಗಿಯೇ ಮನೆಯೊಡೆಯಲು ಕೆಲವೊಂದು ಸದಸ್ಯರು ಸಂಚು ಮಾಡುತ್ತಿರುತ್ತಾರೆ. ಕೆಲವು ನೆರಹೊರೆಯ ಕುಟುಂಬಗಳ ಕುಮ್ಮಕ್ಕೂ ಇದಕ್ಕೆ ಲಭಿಸುತ್ತಿರುತ್ತದೆ. ಹೀಗಾಗಿ ಕಚ್ಚಾಟ, ಜಗಳ, ಹೊಡೆದಾಟ ಪ್ರತಿದಿವಸವೂ ಅಲ್ಲಿ ನಡೆಯುತ್ತಿರುತ್ತದೆ ಮತ್ತು ಅದನ್ನು ಆ ಇಡೀ ಮನೆಯ ಜವಾಬ್ದಾರಿಯನ್ನು ಹೊತ್ತ ಯಜಮಾನ ಹಾಗೂ ಇನ್ನಿತರ ಹಿರಿಯ ಸದಸ್ಯರು ಬಗೆಹರಿಸಲು ಪ್ರಯತ್ನಿಸುತ್ತಲೇ ಇರುತ್ತಾರೆ. ಕಾಲ ಸರಿದಂತೇ, ಸ್ವಾರ್ಥಿಗಳ ಸತತ ತಲೆತುಂಬುವಿಕೆಯ ಪರಿಣಾಮದಿಂದ ಮನೆಯ ಕೆಲವೊಂದಿಷ್ಟು ಜನಕ್ಕೆ ಆಗಾಗ ಅನ್ನಿಸತೊಡಗುತ್ತದೆ.. ಈ ಮನೆಯೊಳಗೆ ಮಾತ್ರ ಸರಿಯಾದ ವ್ಯವಸ್ಥೆಯಿಲ್ಲ.. ಯಾವುದೂ ಸರಿಯಿಲ್ಲ.. ಭದ್ರತೆಯಿಲ್ಲ.. ಎಂಬಿತ್ಯಾದಿ ಕೊರಗು, ಕೂಗು ಎದ್ದೇಳುತ್ತಿರುತ್ತದೆ. ಮನೆಯನ್ನು ಒಂದಿಷ್ಟು ಪಾಲು ಮಾಡಿ ಹಂಚಿದರೇ ಪರಿಹಾರ ಎಂದು ಹೊರಟವರೂ ಹಲವರಿರುತ್ತಾರೆ. ಆದರೆ ಆ ಮನೆಯ ಹೊರಗೆ ಬಿದ್ದರೆ, ಅದರ ಅಕ್ಕ ಪಕ್ಕದ ಅಷ್ಟೇ ಮನೆಗಳೊಳಗಿನ ಸ್ಥಿತಿ-ಗತಿಯೂ ಬಹುಪಾಲು ಅದೇ ರೀತಿ ಇರುವುದು ಆ ಜನರಿಗೆ ಅರಿವಾಗಿರುವುದೇ ಇಲ್ಲ ಅಥವಾ ಕೆಲವರಿಗೆ ತಿಳಿದಿದ್ದರೂ ತಿಳಿಯದಂತೇ ನಟಿಸುತ್ತಿರುತ್ತಾರೆ. ಕ್ರಮೇಣ ಮನೆಯೊಳಗಿನ ಪ್ರತಿಯೊಂದು ಸಂಭ್ರಮದಲ್ಲೂ ಒಂದಲ್ಲಾ ಒಂದು ಕೊರಗು, ಕೆಡುಕು ತೆಗೆದು ಕಟಕಿಯಾಡುವ, ಮನೆಯನ್ನು, ಮನೆ ಮಂದಿಯನ್ನು ಹಳಿಯುತ್ತಲೇ, ಜರೆಯುತ್ತಲೇ ಸವೆಯುವ ಪ್ರಕ್ರಿಯೆ ಶುರುವಾಗುತ್ತದೆ. Read more »

5
ಜೂನ್

ಚೀನಿಗಳೊಂದಿಗಿನ ಯುದ್ಧ ಸೈನಿಕ ಕಾರ್ಯಾಚರಣೆಯೇ ಆಗಬೇಕಿಲ್ಲ

– ರಾಕೇಶ್ ಶೆಟ್ಟಿ

chini yuddhaಮೂರುವರೆ ವರ್ಷಗಳ ಹಿಂದಿನ ಮಾತು.ಬಹುಷಃ ೨೦೦೯ರ ನವೆಂಬರ್ ತಿಂಗಳಿರಬಹುದು.ಪ್ರಧಾನಿ ಮ(ಮೌ?)ನಮೋಹನ್ ಸಿಂಗ್ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.ಅದನ್ನು ಚೀನಾ ಖಡಕ್ ಆಗಿ ವಿರೋಧಿಸಿ, ’ನೀವು ಭಾರತೀಯರು ೧೯೬೨ ರ ಅನುಭವವನ್ನ ಮರೆತಿದ್ದಿರ!’ ಅಂತ ಬಹಿರಂಗವಾಗೇ ಹೇಳುವ ದಾರ್ಷ್ಟ್ಯ ತೋರಿತ್ತು.ಅಂದು ಅದು ಕ್ಯಾತೆ ತೆಗೆದಿದ್ದು ’ತವಾಂಗ್’ ನ ಕುರಿತಾಗಿ.

ಚೀನಿಗಳ ಬೆದರಿಕೆ ಬಗ್ಗೆ ಮಾತಡುವುದಕ್ಕಿಂತ ಮೊದಲು, ಏನಿದು ‘ತವಾಂಗ್’ ಅದಕ್ಕಾಗಿ ಯಾಕಿಷ್ಟು ಕಿತ್ತಾಟ? ಇದು ಯಾರಿಗೆ ಸೇರಿದ್ದು? ಭಾರತೀಯರಿಗೋ? ಚೀನಿಗಳಿಗೋ? ಈ ಮೊದಲು ಇದು ಯಾರಿಗೆ ಸೇರಿತ್ತು? ಅಂತ ನೋಡ ಹೊರಟರೆ, ಐತಿಹಾಸಿಕಾವಾಗಿ ಅಂದರೆ ೧೯೧೪ರಲ್ಲಿ ಬ್ರಿಟಿಷರು ಮೆಕ್-ಮಹೂನ್  ರೇಖೆಯನ್ನ ಗುರುತಿಸುವವರೆಗೂ ಅದು ಆಗಿನ ‘ಟಿಬೆಟ್’ ಗೆ ಸೇರಿತ್ತು. ೧೯೧೪ರಲ್ಲಿ ತವಾಂಗ್ ಅನ್ನು ೧೩ನೆ ಲಾಮ ಭಾರತಕ್ಕೆ ಬಿಟ್ಟು ಕೊಟ್ಟರು.ಆ ನಂತರ ಬಂದ ೧೪ನೆ ಅಂದರೆ ಈಗಿನ ‘ದಲೈ ಲಾಮ’ ಕೂಡ ತವಾಂಗ್ ಅನ್ನು ಭಾರತದ ಅಂಗವೆಂದೇ ಮಾನ್ಯ ಮಾಡಿದರು.

ಆದರೆ ೧೯೫೦ ರ ದಶಕದಲ್ಲಿ ಚೀನಿಗಳು ‘ಟಿಬೆಟ್’ ಅನ್ನು ಆಕ್ರಮಿಸಿಕೊಂಡರಲ್ಲ. ಈಗ ಅವರು ಹೇಳುವುದು , ‘ಒಂದು ಕಾಲದಲ್ಲಿ ತವಾಂಗ್ ಟಿಬೆಟ್ಗೆ ಸೇರಿತ್ತು, ಈಗ ಟಿಬೆಟ್ ನಮಗೆ ಸೇರಿದೆ, ಹಾಗಾಗಿ ಈ ತವಾಂಗ್ ನಮಗೆ ಸೇರಬೇಕು’ ಅಂತ (ಅದರ ಜೊತೆಗೆ ಇರಲಿ ಅಂತ ಇಡಿ ಅರುಣಾಚಲ ಪ್ರದೇಶವನ್ನು ಕೊಡಿ ಅನ್ನುತಿದ್ದಾರೆ).

Read more »