ವಿಷಯದ ವಿವರಗಳಿಗೆ ದಾಟಿರಿ

Posts tagged ‘ಗಾಂಧಿ’

22
ಆಗಸ್ಟ್

ನೆಹರೂ,ಗಾಂಧಿಗೊಂದು ನ್ಯಾಯ, ಸಾವರ್ಕರ್’ರಿಗೊಂದು ನ್ಯಾಯವೇ?

  • ರಾಕೇಶ್ ಶೆಟ್ಟಿ

ಸಾವರ್ಕರ್ ಅವರ ಹೆಸರು ಕೇಳಿದರೆ ದ್ವೇಷಕಾರುವ ಸಿದ್ದರಾಮಯ್ಯನವರು, ಸುಳ್ಳುಗಳೇ ತುಂಬಿರುವ ಲೇಖನವೊಂದನ್ನು ಬರೆದು ಮುಖ್ಯಮಂತ್ರಿಗಳನ್ನು ಚರ್ಚೆಗೆ ಕರೆದಿದ್ದಾರೆ. ಮಾಜಿ ಮುಖ್ಯಮಂತ್ರಿಯೊಬ್ಬರು ಹೀಗೆ ಆಧಾರ ರಹಿತ ಸುಳ್ಳುಗಳ ಸರಮಾಲೆಯನ್ನು ಹೇಗೆ ಬರೆಯಲು ಸಾಧ್ಯ? ಅವರ ಲೇಖನದ ಕೆಲವು ಪ್ರಶ್ನೆಗಳು, ಸುಳ್ಳುಗಳ ಬಗ್ಗೆ ಮಾತನಾಡುತ್ತಲೇ, ಸಾವರ್ಕರ್, ಗಾಂಧಿ, ನೆಹರೂ ಅವರ ಜೈಲುವಾಸಗಳ ಬಗ್ಗೆ ಒಂದಿಷ್ಟು ವಿಷಯಗಳನ್ನು ಹಂಚಿಕೊಳ್ಳಬೇಕು.

10 ಡಿಸೆಂಬರ್ 1934 – ಬ್ರಿಟಿಷ್ ಪಾರ್ಲಿಮೆಂಟಿನಲ್ಲಿ ಜವಹರಲಾಲ್ ನೆಹರೂ ಅವರ ಜೈಲುವಾಸದ ಬಗ್ಗೆಯೊಂದು ಚರ್ಚೆಯಾಗುತ್ತದೆ. ಸದಸ್ಯರಾದ ಹಾರಾಲ್ದ್ ಹೇಲ್ಸ್ ಅವರು, ನೆಹರೂ ಅವರ ಪತ್ನಿ ಕಮಲಾ ನೆಹರೂ ಅವರ ಅನಾರೋಗ್ಯದ ಸ್ಥಿತಿಯನ್ನು ಗಮನಿಸಿ, ಜವಹರಲಾಲ್ ನೆಹರೂ ಅವರನ್ನು ಶೀಘ್ರ ಬಿಡುಗಡೆ ಮಾಡುವ ಬಗ್ಗೆ ಪರಿಶೀಲಿಸುವಂತೆ ಆಗ್ರಹಿಸುತ್ತಾರೆ.

ಅದಕ್ಕೆ ಉತ್ತರವಾಗಿ, ಅಂದಿನ ಬ್ರಿಟಿಷ್ ಭಾರತದ ಅಧೀನ ಕಾರ್ಯದರ್ಶಿಯಾಗಿದ್ದ ಬಟ್ಲರ್ ಉತ್ತರಿಸುತ್ತಾ : ಅವರ ಹೆಂಡತಿಯನ್ನು ನೋಡಿಕೊಳ್ಳಲಿ ಎನ್ನುವ ಕಾರಣಕ್ಕಾಗಿಯೇ, ಕಳೆದ ಬೇಸಿಗೆಯಲ್ಲಿಯೇ ಅವರನ್ನು ಕೆಲವು ದಿನಗಳ ಕಾಲ ಬಿಡುಗಡೆ ಮಾಡಿದ್ದೆವು. ಈಗ ಅವರನ್ನು ಆಸ್ಪತ್ರಗೆ ಹತ್ತಿರ ಇರುವ ಜೈಲಿಗೆ ವರ್ಗಾವಣೆ ಮಾಡಲಾಗಿದ್ದು, ವಾರದಲ್ಲಿ ಒಂದು ಅಥವಾ ಎರಡು ದಿನ ವೈದ್ಯರ ಸಲಹೆಯಂತೆ ಅವರು ಹೋಗಿ ನೋಡಿಕೊಂಡು ಬರಲು ಅನುಮತಿ ನೀಡಲಾಗಿದೆ.

ಸರ್ಕಾರದ ವಿರುದ್ಧದ ಪಿತೂರಿಯ ಆರೋಪದಲ್ಲಿ ನೆಹರೂ ಎರಡು ವರ್ಷಗಳ ಸಾಮಾನ್ಯ ಶಿಕ್ಷೆಗೆ ಗುರಿಯಾಗಿದ್ದರು. ಆ ಜೈಲು ಶಿಕ್ಷೆಯ ಅವಧಿಯ ಕುರಿತು ನಡೆದ ಚರ್ಚೆಯಿದು. ಕೇಸ್ ದಾಖಲಾಗಿ ಬಂಧನವಾದ ನಂತರ, ನೆಹರೂ ಅವರ ಭಾವನೆಗಳಿಗೆ ಘಾಸಿ(!)ಯಾಗುವುದಾದರೆ ಪ್ರಕರಣದ ವಿಚಾರಣೆಯನ್ನು ಖಾಸಗಿಯಾಗಿಯೇ ಮಾಡುವ ಆಫರ್ ಅನ್ನು ಬ್ರಿಟಿಷ್ ಅಧಿಕಾರಿ ನೀಡುತ್ತಾರೆ! ಕಡೆಗೆ, 6 ತಿಂಗಳ ಮೊದಲೇ ಬಿಡುಗಡೆ ಮಾಡುತ್ತದೆ ಬ್ರಿಟಿಷ್ ಸರ್ಕಾರ. ನೆಹರೂ ಅವರ ಮೇಲೆ ಇಂತಹ ಪ್ರೀತಿಯನ್ನು ಇದೇ ಮೊದಲ ಬಾರಿಯೇನೂ ಬ್ರಿಟಿಷ್ ಸರ್ಕಾರ ತೋರಿಸಿದ್ದಲ್ಲ.

ಅಕ್ಟೋಬರ್ 24 ,1930 ರಂದು ಕೂಡ ಎರಡು ವರ್ಷಗಳ ಸಾಮಾನ್ಯ ಶಿಕ್ಷೆಗೆ ಗುರಿಯಾದಗಲೂ, ಅವರನ್ನು ಕೇವಲ 97 ದಿನಗಳಲ್ಲೇ ಬಿಡುಗಡೆ ಮಾಡಿತ್ತು ಬ್ರಿಟಿಷ್ ಸರ್ಕಾರ. ಬ್ರಿಟಿಷರಿಗೆ ನೆಹರೂ ಅವರ ಮೇಲೆ ಅದಿನ್ನೆಂತಹ ಪ್ರೀತಿ! ಅಥವಾ ನೆಹರೂ ಅವರು ಜೈಲಿನ ಒಳಗಿದ್ದರೂ, ಹೊರಗಿದ್ದರೂ ಬ್ರಿಟಿಷ್ ಸಾಮ್ರಾಜ್ಯಕ್ಕೆ ಅಪಾಯಕಾರಿಯಲ್ಲ ಅಂತಲೇ? ನೆಹರೂ ಅವರ ರಾಜಕೀಯ ಜೀವನದಲ್ಲಿ, ಒಂದೇ ಕೇಸಿನಲ್ಲಿ ಗರಿಷ್ಟ ಜೈಲು ವಾಸ ಅಂತ ಅವರಿಗೆ ಆಗಿದ್ದು ಕ್ವಿಟ್ ಇಂಡಿಯಾ ಎಂಬ Failed ಚಳವಳಿಯಲ್ಲಿ. 2 ವರ್ಷ 8 ತಿಂಗಳ ಸೆರೆವಾಸವದು. ಹಾಗೆಂದು ನೆಹರೂ ಅವರ ಸೆರೆವಾಸಗಳೇನು ಸೆಲ್ಯುಲಾರ್ ಜೈಲಿನಂತೆ ಒಂಟಿಯಾಗಿ, ಕತ್ತಲೆ ಹಾಗೂ ಕೆಟ್ಟ ಸೆಲ್ಲಿನೊಳಗಿನ ವಾಸವೇನು ಆಗಿರಲಿಲ್ಲ. ಮೇಲಿನ ಉದಾಹರಣೆಯಂತೆ ಬ್ರಿಟಿಷರ ಉದಾರತೆ ಹೇಗಾದರೂ ನೆಹರೂ ಅವರಿಗೆ ಸಿಗುತ್ತಿತ್ತು. ಉದಾಹರಣೆಗೆ, ದಂಡಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ನಂತರ ನೆಹರೂ ಅವರನ್ನು ನೈನಿಯಲ್ಲಿ ಜೈಲಿಗೆ ಹಾಕಿದರು. ಜೈಲಿನಲ್ಲಾದರೂ ಬಡಪಾಯಿ ನೆಹರೂ ಅವರಿಗೆ ಹೆಚ್ಚೇನು ಸೌಲಭ್ಯ ಸಿಗಲಿಲ್ಲ. ಅಬ್ಬಬ್ಬಾ ಎಂದರೆ ಒಬ್ಬ ಖೈದಿಯನ್ನು ಅವರ ಅಡುಗೆಯವನನ್ನಾಗಿ ನೇಮಿಸಲಾಯಿತು, ಗಾಳಿ ಬೀಸಲು ಮತ್ತೊಬ್ಬ ಖೈದಿ ನಿಯುಕ್ತಿಯಾದ. ಜೈಲಿನ ಊಟ ತಿಂದು ನಾಲಗೆ ಜಡ್ಡುಗಟ್ಟದಿರಲೆಂದು ಮನೆಯ ಊಟ, ಹಣ್ಣು ಹಂಪಲು ತರಿಸಿಕೊಳ್ಳುವ ಅವಕಾಶ ನೀಡಲಾಗಿತ್ತು.ನೆಹರೂ ಅವರ ದರ್ಶನಕ್ಕೆಂದು ಬರುತ್ತಿದ್ದ ಖೈದಿಗಳು ಬೇಕಾದ ಸಣ್ಣಪುಟ್ಟ ಸೇವೆಗಳನ್ನು ಮಾಡಿಕೊಡುತ್ತಿದ್ದರು. ತೀರಾ ನೆಹರೂ ಅವರ ಭಾಷೆಯಲ್ಲಿಯೇ ಹೇಳುವುದಾದರೆ, ಶೇ.95 ರಾಜಕೀಯ ಖೈದಿಗಳಿಗೆ ಇಂತಹ ಸೌಲಭ್ಯಗಳು ಸಿಗುತ್ತಿರಲಿಲ್ಲ. ನೆಹರೂ-ಗಾಂಧಿಯಂತವರು 5% ನೊಳಗಿದ್ದವರು. ಬ್ರಿಟಿಷರ ಪಾಲಿಗೆ ನಿರುಪದ್ರವಿಗಳಾಗಿರಬಹುದೇ?

ಮತ್ತಷ್ಟು ಓದು »
5
ಡಿಸೆ

ಮಾರ್ಕ್ಸ್ ವಾದ ಮತ್ತು ನೆಹರೂವಾದ ಗಾಂಧಿವಾದವನ್ನು ಕೊಂದಿತೇ?

ಡಾ|| ಬಿ.ವಿ ವಸಂತ ಕುಮಾರ್
ಕನ್ನಡ ಪ್ರಾಧ್ಯಾಪಕರು
ಮಹಾರಾಣಿ ಮಹಿಳಾ ಕಾಲೇಜು
ಮೈಸೂರು

ಇಂದು ಕೇರಳ ಹಾಗೂ ಕರ್ನಾಟಕದಲ್ಲಿ ಕ್ರಮವಾಗಿ ಮಾರ್ಕ್ಸ್ ವಾದಿ ಹಾಗೂ ನೆಹರೂವಾದೀ ಪ್ರಭುತ್ವಗಳು ಆಳುತ್ತಿವೆ. ಈ ಎರಡೂ ರಾಜ್ಯಗಳಲ್ಲಿ ಸೈದ್ಧಾಂತಿಕವಾದ ಕಾರಣಗಳಿಗಾಗಿ ಹಿಂದೂ ಕಾರ್ಯಕರ್ತರ ಕೊಲೆಗಳು ಆಗುತ್ತಿವೆ ಎಂಬ ಚರ್ಚೆಗಳು ನಡೆಯುತ್ತಿವೆ. ಇದರೊಟ್ಟಿಗೆ ಕೇರಳ ಹಾಗೂ ಕರ್ನಾಟಕದ ಪಿ.ಎಫ್.ಐ ಸಂಘಟನೆಯು ಮುಸ್ಲಿಂ ಮೂಲಭೂತವಾದಿ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಸಂಗವಿರುವ ಸಂಘಟನೆಗಳ ಜೊತೆಗೆ ಹೆಸರು ತುಳುಕು ಹಾಕಿಕೊಂಡಿದೆ. ಈ ನಡುವೆ ದಕ್ಷಿಣ ಭಾರತದ ಹೆಸರಾಂತ ನಟ ಕಮಲಹಾಸನ್ ಹಿಂದೂ ಭಯೋತ್ಫಾದನೆಯ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಅದನ್ನು ಮತ್ತೊಬ್ಬ ಕನ್ನಡದ ನಟ ಪ್ರಕಾಶ ರೈ ಸಮರ್ಥಿಸಿದ್ದಾರೆ. ಈ ಎಲ್ಲಾ ವಿದ್ಯಮಾನಗಳನ್ನು ಬಿಜೆಪಿಯ ರಾಜ್ಯ ನಾಯಕರು ಹಾಗೂ ರಾಷ್ಟ್ರ ನಾಯಕರು ಖಂಡಿಸಿ ಹೋರಾಟಕ್ಕಿಳಿದಿದ್ದಾರೆ. ಮತ್ತಷ್ಟು ಓದು »

28
ಜೂನ್

ಗಾಂಧಿ ತಾತಾ ಯಾಕಾಗಿ ಹೀಗೆಲ್ಲಾ ಮಾಡಿದಿರಿ?

– ಶ್ರೀಕಾಂತ್ ಆಚಾರ್ಯ

mahatma_gandhiನೇರಾ ನೇರಾ ವಿಷಯಕ್ಕೆ ಬರುತ್ತೀನಿ. ಕೆಲವಷ್ಟು ವಿಷಯಗಳಲ್ಲಿ ಗಾಂಧೀ ತಾತಾ ತುಂಬಾ ಇಷ್ಟವಾಗಿ ಬಿಡುತ್ತಾರೆ. ಆದರೆ ಉಳಿದ ಕೆಲವು ವಿಷಯಗಳಲ್ಲಿ ನನಗೆ ಗಾಂಧೀಜಿಯ ಬಗ್ಗೆ ಒಳ್ಳೆಯ ಅಭಿಪ್ರಾಯಗಳಿಲ್ಲ. ಅಷ್ಟಕ್ಕೂ ನನ್ನ ಅಭಿಪ್ರಾಯ ಇಲ್ಲಾರಿಗೂ ಅನಿವಾರ್ಯವಲ್ಲ ಬಿಡಿ. ಹೇಳಿದ್ದೆಲ್ಲವನ್ನ ಸುಖಾಸುಮ್ಮನೆ ನಂಬಿ ಬಿಡಿ ಅಂತ ನಿಮ್ಮಲ್ಲಿ ಅಂಗಾಲಾಚುವುದೂ ಇಲ್ಲ. ಸಮಾನ ಮನಸ್ಕರಿದ್ದರೆ ಓದಿಕೊಳ್ಳಬಹುದು. ಹೌದು ಅಂತನ್ನಿಸಿದರೆ ಮಾತ್ರ ತಾಕಲಾಟಕ್ಕೆ ಎಡತಾಕುತ್ತೀರಿ. ಯೋಚನೆಗೆ ಬೀಳುತ್ತೀರಿ. ಅಖಂಡ ಭಾರತದ ಕೋಟ್ಯಾಂತರ ಜನರ ಹೃದಯ ಹೊಕ್ಕಿ ಕುಳಿತ ಗಾಂಧೀಜಿಯನ್ನ ಕೆಲವೊಂದು ಕಾರಣಕ್ಕೆ ದ್ವೇಷಿಸುತ್ತಿದ್ದೀನಿ ಅಂದರೆ ಬಹುಷಃ ನೀವೂ ತಕರಾರು ಮಾಡಲಿಕ್ಕಿಲ್ಲ(ವಿಷಯ ಬಲ್ಲವರಿಗೆ ಮಾತ್ರ) ಅಲ್ಲವಾ? ಮತ್ತಷ್ಟು ಓದು »

3
ಜೂನ್

ಗಾಂಧಿ ಮತ್ತು ದೇವನೂರ

– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ

ಗಾಂಧಿ ಮತ್ತು ಅಂಬೇಡ್ಕರ್ಮೊನ್ನೆ ಗಾಂಧಿ ನೆನಪಾದರು. ನೆನಪಾದರು ಎನ್ನುವುದು ಅವರು ಮರೆತುಹೋಗಿರಬಹುದು ಎಂದೂ ಧ್ವನಿಸಬಹುದು. ನೆನಪು ಮತ್ತು ಮರೆತುಹೋಗುವಿಕೆ ಈ ಎರಡೂ ಸ್ಥಿತಿಗಳಲ್ಲಿ ಗಾಂಧಿ ಜೀವಂತವಾಗಿದ್ದು ನಮ್ಮನ್ನು ಕಾಡುತ್ತಲೇ ಇರುವರು. ಇದು ಗಾಂಧಿಯಂಥ ಗಾಂಧಿಯಿಂದ ಮಾತ್ರ ಸಾಧ್ಯವಾಗುವಂತಹದ್ದು. ಏಕೆಂದರೆ ಗಾಂಧಿ ಸೂಟು ಬೂಟು ಧರಿಸಿ, ಪಂಚೆ ಉಟ್ಟುಕೊಂಡು ಮತ್ತು ಲಂಗೋಟಿ ಸಿಕ್ಕಿಸಿಕೊಂಡು ಭಾರತೀಯ ಜೀವನಕ್ರಮದ ಎಲ್ಲ ವರ್ಗಗಳನ್ನು ತಮ್ಮೊಳಗೆ ಅಂತರ್ಗತಗೊಳಿಸಿಕೊಂಡವರು. ಒಬ್ಬನೇ ವ್ಯಕ್ತಿ ತನ್ನ ಜೀವಿತಾವಧಿಯಲ್ಲಿ ಭಾರತೀಯ ಜೀವನ ಕ್ರಮದ ಎಲ್ಲ ವರ್ಗಗಳನ್ನು ಪ್ರತಿನಿಧಿಸುವುದು ಅದು ಗಾಂಧೀಜಿಯಂಥ ವ್ಯಕ್ತಿಯಿಂದ ಮಾತ್ರ ಸಾಧ್ಯವಾಗುವ ಬಹುದೊಡ್ಡ ಸಾಮಾಜಿಕ ಪಲ್ಲಟ.

ಇನ್ನು ಗಾಂಧಿ ಏಕೆ ನೆನಪಾದರು ಎನ್ನುವ ವಿಷಯಕ್ಕೆ ಬರುತ್ತೇನೆ. ಆವತ್ತು ದಲಿತ ಸಂಘರ್ಷ ಸಮಿತಿಯವರ ಮೆರವಣಿಗೆ ರಸ್ತೆಯ ಮೇಲೆ ನಡೆದು ಹೋಗುತ್ತಿತ್ತು. ಬುದ್ಧ, ಬಸವ, ಅಂಬೇಡ್ಕರ್ ಎನ್ನುವ ಜಯಘೋಷ ಅಲ್ಲಿ ಮೊಳಗುತ್ತಿತ್ತು. ಜೊತೆಗೆ ಬುದ್ಧ-ಬಸವ-ಅಂಬೇಡ್ಕರರ ಆಳೆತ್ತರದ ಭಾವಚಿತ್ರಗಳು ರಾರಾಜಿಸುತ್ತಿದ್ದವು. ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಶತಮಾನಗಳಿಂದ ಮನೆಮಾಡಿಕೊಂಡಿದ್ದ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಮತ್ತು ಹಿಂದುಳಿದ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಈ ಮೂವರು ಮಾಡಿದ ಪ್ರಯತ್ನ ಮತ್ತು ಹೋರಾಟ ಅದು ಚರಿತ್ರೆಯ ಪುಟಗಳಲ್ಲಿ ಸದಾಕಾಲ ಅಳಿಸಲಾಗದ ಐತಿಹಾಸಿಕ ಪ್ರಯತ್ನವಾಗಿ ದಾಖಲಾಗಿ ಉಳಿದಿದೆ. ಆದರೆ ಆ ಸಂದರ್ಭ ಅಲ್ಲಿನ ಭಾವಚಿತ್ರಗಳಲ್ಲಿ ಮತ್ತು ಅವರು ಮೊಳಗಿಸುತ್ತಿದ್ದ ಜಯಘೋಷಗಳಲ್ಲಿ ಗಾಂಧಿ ಅನುಪಸ್ಥಿತಿ ನನಗೆ ಬಹುಮುಖ್ಯ ಕೊರತೆಯಾಗಿ ಕಾಣಿಸಿತು.

ಮತ್ತಷ್ಟು ಓದು »

22
ಜನ

ರಾಜರಿಲ್ಲದ ರಾಜ್ಯದಲ್ಲಿ ವಂಶಾಡಳಿತದ ಪೋಷಣೆ

-ಗೋಪಾಲ ಕೃಷ್ಣ

vamshadalitaರಾಜಪ್ರಭುತ್ವದ ನೆರಳು ಮಾಸುವ ಮುನ್ನವೇ, ಕುಟುಂಬ ರಾಜಕಾರಣ ತಲೆ ಎತ್ತುತ್ತಿದೆ. ಪ್ರಜಾಪ್ರಭುತ್ವದ ಹರೆಯದಲ್ಲೇ ಆಶಯಗಳು ಸತ್ತು ಬೀಳುತ್ತಿವೆ.  ಜನಸೇವೆಯೆಂಬ ಟೊಳ್ಳು ಕುದುರೆಗೆ ಹಣ, ಹೆಣ್ಣು, ಅಧಿಕಾರದ ಲೇಪನ ಹಚ್ಚಿ ಹಾದಿ ತಪ್ಪಿಸಲಾಗುತ್ತಿದೆ.  ದೇಶ ವಿಭಜನೆಯ ನಂತರ, ಧರ್ಮದ ಮೂಲಕ ವಿಭಜನೆ, ಇದೀಗ ಜಾತಿ ಜಾತಿಗಳ ನಡುವೆ ವಿಭಜಿಸಿ, ಸಾಮರಸ್ಯದ ಬದಲಿಗೆ ಸಂಘರ್ಷದ ಬೋಧನೆ ನಡೆಯುತ್ತಿದೆ.ಕಾಲು ಮುರಿದ ಕಾರ್ಯಾಂಗ,ಸವೆದು ಹೋದ ಶಾಸಕಾಂಗಗಳ ಮಧ್ಯೆ ಆಮ್ ಆದ್ಮಿ ಕಂಗಾಲಾಗಿದ್ದಾನೆ.

ಇಲ್ಲಿ ದೂರುವುದಾದರೂ ಯಾರನ್ನು? ಸಂತತಿ ರಾಜಕಾರಣದ ಉನ್ನತೀಕರಣಕ್ಕೆ ನೀರು-ಗೊಬ್ಬರ ಹಾಕಿ ಬೆಳೆಸುತ್ತಿರುವಾಗ ವಂಶಾಡಳಿತದ ಫಲ ದೊರೆಯದೆ ಮತ್ತಿನ್ನೇನು ಸಿಕ್ಕೀತು…..? ನಾಗರೀಕ, ಜ್ಞಾನಸಂಪನ್ನ ಸಮಾಜದಲ್ಲಿಯೇ ಜನತಂತ್ರ ವ್ಯವಸ್ಥೆಗೆ ಧಕ್ಕೆಯಾದರೆ, ಪ್ರಜಾಪ್ರಭುತ್ವಕ್ಕೆ ಉಳಿಗಾಲವುಂಟೇ?ಉದಾತ್ತ ಭಾರತ ಸಂಸ್ಕೃತಿಯನ್ನು ಬಿಟ್ಟು, ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋದ ಯುವ ಜನತೆಯಿಂದ ಸಮೃದ್ಧ ರಾಷ್ಟ್ರ ನಿರ್ಮಾಣವನ್ನು ಬಯಸಲಾದೀತೆ? ತಪ್ಪು-ಒಪ್ಪುಗಳಿಗೆ ನಮ್ಮ ಮನಸ್ಸುಗಳು ಒಗ್ಗೂಡದಿರುವಾಗ, ಚಾರಿತ್ರ್ಯವಂತ ಸಮಾಜದ ನಿರೀಕ್ಷೆ ನಮ್ಮ ಭ್ರಮೆಯಲ್ಲವೇ?
ಮತ್ತಷ್ಟು ಓದು »