ವಿಷಯದ ವಿವರಗಳಿಗೆ ದಾಟಿರಿ

Posts tagged ‘ಗೋಪಾಲ ಕೃಷ್ಣ ಅಡಿಗ’

28
ಮಾರ್ಚ್

ಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು ಪುರುಷೋತ್ತಮನ ಆ ಅಂಥ ರೂಪ-ರೇಖೆ? – ಭಾಗ 2

– ರೋಹಿತ್ ಚಕ್ರತೀರ್ಥ

ಶ್ರೀ ರಾಮನವಮಿಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು ಪುರುಷೋತ್ತಮನ ಆ ಅಂಥ ರೂಪ-ರೇಖೆ? – ಭಾಗ 1

ಶ್ರೀ ರಾಮನವಮಿಯ ದಿವಸ ರಾಮನಾಮಾಮೃತವೆ
ಪಾನಕ, ಪನಿವಾರ, ಕೋಸಂಬರಿ;
ಕರಬೂಜ ಸಿದ್ದೋಟುಗಳ ಹೋಳು, ಸೀಕರಣೆ;
ವ್ಯಕ್ತಮಧ್ಯಕ್ಕೆ ಬಂದುರಿವ ಶಬರಿ

ಎಂದು ಶುರುವಾಗುತ್ತದೆ ಅಡಿಗರ ಕವಿತೆ. ರಾಮನ ಹುಟ್ಟುಹಬ್ಬ ಬೇಸಗೆಯಲ್ಲಿ ಬರುತ್ತದೆ ಎನ್ನುವುದನ್ನು ಹೇಳಲಿಕ್ಕೇ ಕವಿ ಎರಡು ಸಾಲುಗಳಲ್ಲಿ ಪಾನಕ, ಪನಿವಾರ, ಕೋಸಂಬರಿ, ಕರಬೂಜ ಸಿದ್ದೋಟುಗಳ ಹೋಳು, ಸೀಕರಣೆಗಳನ್ನು ಹರಡಿ ಕೂತಿದ್ದಾರೆ! ಇಲ್ಲಿ ಪಾನಕ ಎಂದರೆ ಪಾನಕ, ಪನಿವಾರ ಎಂದರೆ ಪನಿವಾರ. ಅದಕ್ಕೆ ಎರಡನೆ ಅರ್ಥ ಇರುವ ಹಾಗೇನೂ ಕಾಣುತ್ತಿಲ್ಲ. ನಾನು ಈಗಾಗಲೇ ಹೇಳಿದ ಹಾಗೆ, ಅಡಿಗರು ಚಿತ್ರಕ ಶಕ್ತಿಯ ಕವಿ. ಒಂದು ಸಂಗತಿಯನ್ನು ವಿವರಿಸಲು ಎಷ್ಟು ಮೂರ್ತ ಉದಾಹರಣೆಗಳು ಸಾಧ್ಯವೋ ಅಷ್ಟನ್ನು ಎತ್ತಿಕೊಂಡು ಬರಬಲ್ಲ ಪ್ರತಿಭಾವಂತ. “ಬೇಸಗೆ” ಅಂದಿದ್ದರೆ ಸಾಕಿತ್ತು. ರಾಮನ ಬರ್ತ್‍ಡೇ ಸಮಯದಲ್ಲಿ ಸೆಕೆ ವಿಪರೀತ ಇರುತ್ತೆ ಎಂದಿದ್ದರೂ ನಡೆಯುತ್ತಿತ್ತು. ಆದರೆ, ಅಂತಹ ಯಾವ ಮಾತನ್ನೂ ಹೇಳದೆ ಪಾನಕ-ಕೋಸಂಬರಿಗಳ ಬಗ್ಗೆ ಹೇಳುತ್ತ ಅಡಿಗರು ಒಂದು ವಿಭಿನ್ನ ವಾತಾವರಣವನ್ನು ಸೃಷ್ಟಿಸುತ್ತಾರೆ. ಅದನ್ನು ಓದುವಾಗ ನಮಗೆ ಹಬ್ಬದ ವಾತಾವರಣ ಕಂಡಂತೆ ಆಗಬೇಕು. ಆ ಸಿಹಿಭಕ್ಷ್ಯಗಳನ್ನು ತಿಂದಹಾಗನಿಸಬೇಕು. ಕಾವ್ಯದ ಉದ್ಧೇಶ ರಸೋತ್ಪತ್ತಿಯಲ್ಲವೆ?

ಅದೆಲ್ಲ ಸರಿ, ಆದರೆ ವ್ಯಕ್ತಮಧ್ಯಕ್ಕೆ ಬಂದುರಿವ ಶಬರಿ – ಎಂಬ ಸಾಲಿಗೆ ಏನರ್ಥ? ಇಷ್ಟೆಲ್ಲ ಹಬ್ಬದ ವಾತಾವರಣ ಕಟ್ಟಿಕೊಡುವಾಗ ಮಧ್ಯದಲ್ಲಿ ಶಬರಿ ಯಾಕೆ ಬರಬೇಕು? ಅವಳು ಯಾಕೆ ಉರಿಯಬೇಕು? ವ್ಯಕ್ತಮಧ್ಯ ಎಂಬ ಪದವನ್ನು ಅಡಿಗರು ಎತ್ತಿಕೊಂಡಿರುವುದು (ಇತ್ತೀಚೆಗೆ ಕೆಲವು ಬುದ್ಧಿವಂತರು ಸುಡಬೇಕು ಎಂದು ಆದೇಶಿಸಿದ) ಭಗವದ್ಗೀತೆಯಿಂದ! ಅಲ್ಲಿ ಸಾಂಖ್ಯಯೋಗದಲ್ಲಿ Read more »

27
ಮಾರ್ಚ್

ಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು ಪುರುಷೋತ್ತಮನ ಆ ಅಂಥ ರೂಪ-ರೇಖೆ? – ಭಾಗ 1

– ರೋಹಿತ್ ಚಕ್ರತೀರ್ಥ

Gopala Krishna Adigaಗೋಪಾಲಕೃಷ್ಣ ಅಡಿಗರು ನನ್ನ ಮೆಚ್ಚಿನ ಕವಿ.ಲ್ಯಾಟಿನ್ ಜಗತ್ತಿಗೆ ನೆರೂಡ ಇದ್ದ ಹಾಗೆ, ಶಿಷ್ಟ ಅಮೆರಿಕಕ್ಕೆ ಎಲಿಯೆಟ್ ಇದ್ದ ಹಾಗೆ ಕನ್ನಡ ಜಗತ್ತಿಗೆ ಅಡಿಗರು. ಅವರನ್ನು ಕೇವಲ ಕನ್ನಡದ ನೆಲಕ್ಕೆ ಸೀಮಿತಗೊಳಿಸುವುದು ತಪ್ಪಾಗಬಹುದು. ಅಡಿಗರು ಇಂಗ್ಲೀಷಿನಲ್ಲಿ ಬರೆದಿದ್ದರೆ ಅಥವಾ ಅವರು ಬರೆದಿದ್ದನ್ನು ಅಷ್ಟೇ ಸಮರ್ಥವಾಗಿ ಇಂಗ್ಲೀಷಿಗೆ ಅನುವಾದಿಸುವುದು ಸಾಧ್ಯವಿದ್ದರೆ, ನಮಗೆ ಇನ್ನೊಂದು ನೊಬೆಲ್ ಅನಾಯಾಸವಾಗಿ ದೊರೆಯುತ್ತಿತ್ತು. ಅಡಿಗರ ಕಾವ್ಯಕೃಷಿಯ ಬಗ್ಗೆ ಗೊತ್ತಿಲ್ಲದ ಕನ್ನಡಿಗ ಸಿಗುವುದು ಅಪರೂಪ. ಅವರ ಹೆಸರು ತಿಳಿಯದವರು ಕೂಡ “ಯಾವ ಮೋಹನ ಮುರಲಿ ಕರೆಯಿತು ದೂರ ತೀರಕೆ ನಿನ್ನನು” ಎಂಬ ಹಾಡು ಕೇಳಿದರೆ, ಕೊರಳು ತುರಿಸಿಕೊಳ್ಳುವ ಬೆಕ್ಕಿನಂತೆ ಕಣ್ಣುಮುಚ್ಚಿ ಕಾವ್ಯಾರ್ಥವನ್ನು ಆನಂದಿಸುತ್ತಾರೆ. ನವ್ಯ ಎಂಬ ಒಂದು ಪಂಥವನ್ನೇ ಕನ್ನಡದಲ್ಲಿ ಸೃಷ್ಟಿಸಿದ, ಕಾವ್ಯಲೋಕದಲ್ಲಿ ಹೊಸದಾರಿ ಕೊರೆದ, ಒಂದು ಯುಗದ ಕಣ್ಣು ತೆರೆಸಿದ ಕವಿ ಎಂದು ಕರೆಸಿಕೊಂಡ ಅಡಿಗರು ಕನ್ನಡಿಗರಿಗೆ ಕೊಟ್ಟಿರುವ ಸಫಲ ಕವಿತೆಗಳ ಸಂಖ್ಯೆ ದೊಡ್ಡದು. ಕುಮಾರವ್ಯಾಸನನ್ನು ಓದಿಕೊಂಡರೆ ಹೇಗೋ ಹಾಗೆಯೇ ಅಡಿಗರನ್ನು ಓದಿಕೊಂಡರೂ ಶಬ್ದ ಮತ್ತು ಅರ್ಥಗಳ ದಾರಿದ್ರ್ಯ ಬರುವುದಿಲ್ಲ ಎಂದು ಧೈರ್ಯವಾಗಿ ಹೇಳಬಹುದು.

ಚೈತ್ರ ಮಾಸದ ಶುಕ್ಲಪಕ್ಷದ ಒಂಬತ್ತನೆ ದಿನ ನವಮಿ. ರಾಮನ ಬರ್ತ್‍ಡೇ. ರಾಮಾಯಣದ ನಾಯಕಮಣಿ, ಮರ್ಯಾದಾಪುರುಷೋತ್ತಮ ಶ್ರೀರಾಮಚಂದ್ರನ ಬಗ್ಗೆ ಅಡಿಗರು ಒಂದು ಕವಿತೆ ಬರೆದಿದ್ದಾರೆ. ಉಡುಪಿಯ ರಥಬೀದಿಯ ಪರಿಸರದಲ್ಲಿ ಪ್ರತಿವರ್ಷದ ಬೇಸಗೆಯಲ್ಲಿ ನಡೆಯುವ ವಸಂತೋತ್ಸವದಲ್ಲೊಮ್ಮೆ ಅವರು ಈ ಕವನ ವಾಚಿಸಿದ್ದರಂತೆ. (ಪ್ರಾಸಂಗಿಕವಾಗಿ ಒಂದಷ್ಟು ಮಾತು: ಉಡುಪಿ ಮತ್ತು ಅಡಿಗರ ಸಂಬಂಧಕ್ಕೆ ಹಲವು ಕೊಂಡಿಗಳಿವೆ. ಅಡಿಗರು ಆಚಾರ್ಯ ಮಧ್ವರ ಮೇಲೆ “ಆನಂದತೀರ್ಥರಿಗೆ” ಎಂಬ ಕವಿತೆ ಬರೆದಿದ್ದಾರೆ. ಹಾಗೆಯೇ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕ ಮತ್ತು ಪ್ರಿನ್ಸಿಪಾಲ್ ಆಗಿಯೂ ಕೆಲವರ್ಷ ಕೆಲಸ ಮಾಡಿದ್ದಾರೆ. ಅವರ “ಸುವರ್ಣಪುತ್ಥಳಿ” ಕವನಸಂಗ್ರಹಕ್ಕೆ ಉಡುಪಿಯ ಜಿ. ರಾಜಶೇಖರ ಮುನ್ನುಡಿ ಬರೆದರು)

Read more »