ವಿಷಯದ ವಿವರಗಳಿಗೆ ದಾಟಿರಿ

Posts tagged ‘ಚಕ್ರವರ್ತಿ ಸೂಲಿಬೆಲೆ’

16
ಫೆಬ್ರ

ಎತ್ತ ಸಾಗುತ್ತಿದೆ ಕನ್ನಡದ ಬೌದ್ಧಿಕ ಜಗತ್ತು..?

– ಡಾ. ಪ್ರವೀಣ ಟಿ. ಎಲ್
ಉಪನ್ಯಾಸಕರು
ಕುವೆಂಪು ವಿಶ್ವವಿದ್ಯಾನಿಲಯ

downloadಬೌದ್ಧಿಕವಲಯದಲ್ಲಿ ಮುಕ್ತ ಸಂವಾದಗಳು ಜ್ಞಾನದ ಬೆಳವಣಿಗೆಯ ದೃಷ್ಟಿಯಿಂದ ಅತ್ಯಂತ ಮುಖ್ಯ. ಅವುಗಳು ಹೆಚ್ಚೆಚ್ಚು ನಡೆಯಲೆಂದೇ ಯುಜಿಸಿಯಂತಹ ಸಂಸ್ಥೆಗಳು, ಸರ್ಕಾರಗಳು ಕೋಟಿಗಟ್ಟಲೇ ಹಣವನ್ನು ನೀಡುತ್ತವೆ. ವಿದ್ಯಾರ್ಥಿಗಳ ನಡುವೆ, ಚಿಂತಕರ ನಡುವೆ ಸಂವಾದಗಳು, ಚರ್ಚೆಗಳು ನಡೆದರೆ ಮಾತ್ರವೇ ತಮ್ಮ ತಿಳುವಳಿಕೆಯ ಮಿತಿಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಹಾಗೂ ಹೊಸ ಹೊಸ ಚಿಂತನೆಯ ಉಗಮಕ್ಕೆ ದಾರಿಯಾಗಲಿವೆ. ಆಗ ಅಲ್ಲಿನ ಬೌದ್ಧಿಕ ವಲಯವು ಹೆಚ್ಚು ಕ್ರಿಯಾಶೀಲವಾಗಿದೆ ಎಂದು ತೀರ್ಮಾನಿಸಬಹುದು. ಕರ್ನಾಟಕದ ಸಂದರ್ಭದಲ್ಲಿ ಬುದ್ಧಿಜೀವಿಗಳೆಂದರೆ ಸಾಹಿತಿಗಳು ಎಂಬಂತಾಗಿದೆ. ಕನ್ನಡ ಬೌದ್ಧಿಕ ವಲಯದಲ್ಲಿ ಇಂತಹ ಸಂವಾದಗಳು ನಡೆಯುತ್ತಿವೆಯೇ? ಎಂಬ ಮುಖ್ಯ ಪ್ರಶ್ನೆಯೊಂದನ್ನು ಕೇಳಿಕೊಳ್ಳಬೇಕಾದ ಸುಸಂದರ್ಭದಲ್ಲಿದ್ದೇವೆ. Read more »

4
ಜುಲೈ

ಏನಿದು ಯುವಾ ಬ್ರಿಗೇಡ್?

– ಯುವಾ ಬ್ರಿಗೇಡ್

Yuva Brigadeಯುವಾ ಬ್ರಿಗೇಡ್ ಭಾರತವನ್ನು ವಿಶ್ವಗುರುವನ್ನಾಗಿಸುವ ಕನಸು ಕಟ್ಟಿಕೊಂಡ 18 ರಿಂದ 30 ವಯಸ್ಸಿನ ಯುವಕರ ಪಡೆ. ಯುವ ಶಕ್ತಿಯನ್ನು ದೇಶಪ್ರೇಮದ ನಿಟ್ಟಿನಲ್ಲಿ ತಿರುಗಿಸಿ ಅದನ್ನು ರಾಷ್ಟ್ರನಿರ್ಮಾಣದ ಕಾಯಕಕ್ಕೆ ಹಚ್ಚಿ ಅದರಿಂದ ಬಂದ ಫಲಿತಾಂಶವನ್ನು ಭಾರತ ಮಾತೆಯ ಚರಣಗಳಿಗೆ ಅರ್ಪಣೆ ಮಾಡುವ ಅಭಿಲಾಷೆ ಹೊತ್ತ ಯುವಕರ ಸಮೂಹ. ಪ್ರಖರ ರಾಷ್ಟ್ರವಾದಿ ಶ್ರೀ ಚಕ್ರವರ್ತಿ ಸೂಲಿಬೆಲೆಯವರ ನೇತೃತ್ವದಲ್ಲಿ ನಾಡಿನ ಹಿರಿಯ ರಾಷ್ಟ್ರಪ್ರೇಮಿ ಸಾಧಕರ ಮಾರ್ಗದರ್ಶನದಲ್ಲಿ ಕರ್ನಾಟಕದ ಮೂಲೆ ಮೂಲೆಗೂ ತಲುಪುತ್ತಿರುವ ಈ ಸಂಘಟನೆ ಆರಂಭವಾಗಿ ಇನ್ನೂ ವರ್ಷವೂ ಕಳೆದಿಲ್ಲ ಎಂದರೆ ಅಚ್ಚರಿಯಾಗಬಹುದು.

8 ಜೂನ್ 2014 ರಂದು ಆರಂಭವಾದ ಯುವಾ ಬ್ರಿಗೇಡ್ ಇದುವರೆಗೂ ಹತ್ತಾರು ವಿಶಿಷ್ಟ ವೈವಿಧ್ಯಮಯ ಕಾರ್ಯ ಕಲಾಪಗಳ ಮೂಲಕ ವ್ಯಾಪಕವಾಗಿ ಜನಮಾನಸವನ್ನು ತಲುಪಿರುವುದು ಒಂದು ಸಾಧನೆಯೇ ಸರಿ. ಹಾಗಂತ ಇದೇನು ರಾತ್ರೋ ರಾತ್ರಿ ಸಂಭವಿಸಿದ ಘಟನೆಯಲ್ಲ. ಪ್ರಾರಂಭದಲ್ಲಿ ಫೇಸ್ ಬುಕ್ ಮುಂತಾದ ಸಾಮಾಜಿಕ ತಾಣಗಳ ಮೂಲಕ ತಾಯಿ ಭಾರತಿಯನ್ನು ವಿಶ್ವಗುರುವನ್ನಾಗಿಸುವ ಕಲ್ಪನೆಯನ್ನು ಬಿತ್ತರಿಸಿ ಮುಂದಿನ ದಿನಗಳಲ್ಲಿ ಒಂದೊಂದೇ ಯೋಜನೆಗಳ ಮೂಲಕ ಹಳ್ಳಿಗಾಡಿನ ಯುವಕನನ್ನೂ ಸಂಘಟನೆಯೊಂದಿಗೆ ಬೆಸೆದುಕೊಳ್ಳುವಂತೆ ಮಾಡಿದ ಯುವಾ ಬ್ರಿಗೇಡ್ ನ ಕಾರ್ಯಗಳನ್ನು ವೀಕ್ಷಿಸುವುದು ಒಂದು ಚೇತೋಹಾರಿ ಪಯಣವಾಗಿದೆ. ಜೂನ್ ತಿಂಗಳಲ್ಲಿ ಉದ್ಘಾಟನೆಯಾದ ಯುವಾ ಬ್ರಿಗೇಡ್ ತಂಡಕ್ಕೆ ಬಹುತೇಕ ಎಲ್ಲಾ ಜಿಲ್ಲೆಗಳಿಂದ ತರುಣರು ಆಗಮಿಸಿ ರಾಷ್ಟ್ರಕಾರ್ಯದಲ್ಲಿ ಕೈಜೋಡಿಸುವ ಪ್ರತಿಜ್ಞೆಗೈದರು.

ಜುಲೈ ತಿಂಗಳಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ ಇಡೀ ರಾಜ್ಯದಲ್ಲಿ ವಿಜೃಂಭಣೆಯಿಂದ ನಡೆಯಿತು. ಅನೇಕ ಜಿಲ್ಲಾ ಕೇಂದ್ರಗಳಲ್ಲಿ ಮಾಜಿ ಸೈನಿಕರನ್ನು ಕರೆದು ಗೌರವಿಸಲಾಯ್ತು. ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೇನೆಯ ಪರಾಕ್ರಮದ ಕುರಿತು ಸರಣಿ ಉಪನ್ಯಾಸಗಳು ನಡೆದವು. ಅನೇಕ ತರುಣರ ಹೃದಯದಲ್ಲಿ ಸೈನ್ಯ ಸೇರುವ ಆಸೆಯ ಕಿಡಿಯನ್ನು ಹೊತ್ತಿಸಲಾಯ್ತು. ಸಾರ್ವಜನಿಕರಿಗೆ ಸೇನೆಯ ಬಗ್ಗೆ ಕೃತಜ್ಞತಾ ಭಾವನೆ ಮೂಡಿ ಹೆಮ್ಮೆಯಿಂದ ತಲೆ ಎತ್ತಿ ನಿಲ್ಲಬಲ್ಲ ವಾತಾವರಣವನ್ನು ಕಲ್ಪಿಸಲಾಯ್ತು.

ಅಗಸ್ಟ್ ತಿಂಗಳಲ್ಲಿ ಯುವಾ ಬ್ರಿಗೇಡ್ ನ ರಾಜ್ಯ ಮಟ್ಟದ ಸಭೆ ನಡೆಯಿತು. ಅದರಲ್ಲಿ ರಾಜ್ಯ, ವಿಭಾಗ ಮತ್ತು ಜಿಲ್ಲೆಗಳಿಗೆ ಸಂಚಾಲಕರನ್ನು ಆರಿಸಲಾಯ್ತು. ತಾಲ್ಲೂಕು ಮಟ್ಟದಲ್ಲಿ ಯುವಾ ಬ್ರಿಗೇಡ್ ಆರಂಭಿಸಲು ತೀರ್ಮಾನ ಕೈಗೊಳ್ಳಲಾಯಿತು.

Read more »

15
ಆಕ್ಟೋ

ಕಾಡುವ ಹೆಮ್ಮಿ೦ಗ್ವೆಯೂ,ನೆನಪಾಗುವ ತೇಜಸ್ವಿಯೂ

– ಗುರುರಾಜ ಕೊಡ್ಕಣಿ,ಯಲ್ಲಾಪುರ

Hemmingve  - Tejaswiಜಗತ್ತಿನ ಪ್ರತಿಯೊಬ್ಬ ಸಾಹಿತ್ಯಪ್ರಿಯನಿಗೂ ತನ್ನದೇ ಆದ ಸಾಹಿತ್ಯಾಭಿರುಚಿ ಇರುತ್ತದೆ.ನೆಚ್ಚಿನ ಬರಹಗಾರರಿರುತ್ತಾರೆ.ಅವರ ನೆಚ್ಚಿನ ಬರಹ ಅವರವರ ಆಸಕ್ತಿಯನ್ನವಲ೦ಬಿಸಿರುತ್ತದೆ ಎ೦ಬುದು ನಿಸ್ಸ೦ಶಯ.ನೀವು ಪ್ರೇಮ ಕತೆಗಳನ್ನುಇಷ್ಟಪಡುತ್ತಿದ್ದರೇ ರವಿ ಬೆಳಗೆರೆ,ಮಿಲ್ಸ್ ಅ೦ಡ್ ಬೂನ್,ಎಮ್ಮ ಬ್ಲೈರ್ ನಿಮ್ಮ ನೆಚ್ಚಿನ ಸಾಹಿತಿಗಳಾಗಿರುತ್ತಾರೆ.ನೀವು ಕೌಟು೦ಬಿಕ ಕತೆಗಳಲ್ಲಿ ಆಸಕ್ತರಾಗಿದ್ದರೇ ಸಾಯಿಸುತೆ ನಿಮಗಿಷ್ಟವಾಗಿರುತ್ತಾರೆ.ಸ್ತ್ರೀ ಪ್ರಧಾನ ಕತೆಗಳು ನಿಮ್ಮ ಫೇವರೇಟ್ ಆಗಿದ್ದರೇ ಎ೦.ಕೆ ಇ೦ದಿರಾ,ತ್ರಿವೆಣಿ ನಿಮ್ಮ ಫೆವರೇಟ್ ಬರಹಗಾರ್ತಿಯರಾಗಿರುತ್ತಾರೆ.ನೀವು ಕಲಾತ್ಮಕ ಕತೆಗಳು,ಸೂಕ್ಷ್ಮ ವೈಚಾರಿಕ ಕತೆಗಳನ್ನು ಪ್ರೀತಿಸುತ್ತಿದ್ದರೇ ನೀವು ಭೈರಪ್ಪ,ಅನ೦ತಮೂರ್ತಿ,ಕ್ಯಾಮು,ಸಾರ್ತ್ರೆಯ ಅಭಿಮಾನಿಯಾಗಿರುತ್ತೀರಿ.ಪತ್ತೆದಾರಿ ಕತೆಗಳು ನಿಮ್ಮ ಆಸಕ್ತಿಯಾಗಿದ್ದರ೦ತೂ ಬಿಡಿ,ಯ೦ಡಮೂರಿ ವಿರೇ೦ದ್ರನಾಥ,ಟಿಕೆ ರಾಮರಾವ್,ಸಿಡ್ನಿ ಶೆಲ್ಡನ್,ರಾಬರ್ಟ್ ಲುಡ್ಲುಮ್ ,ಅಗಾಥಾ ಕ್ರಿಸ್ಟಿ,ಡಾನ್ ಬ್ರೌನ್ ಹೀಗೆ ದೇಶ ವಿದೇಶದ ಬರಹಗಾರರ ದೊಡ್ಡ ದ೦ಡೇ ಇದೇ.ಹಾಸ್ಯ,ವಿಡ೦ಬನೆಗೆ ಬೀಚಿ,ಬರ್ನಾಡ್ ಷಾ.ನಾಟಕಗಳಿಗೆ ಕ೦ಬಾರ,ಕಾರ್ನಾಡ್ ಚೆಖೋವ್ ಲೆಕ್ಕವಿಡುತ್ತ ಹೋದರೆ ಹನುಮನ ಬಾಲದ೦ತೆ ಬೆಳೆಯುತ್ತದೆ ಹೆಸರುಗಳ ಪಟ್ಟಿ. ನಿಮ್ಮ ರಾಜಕಿಯಾಸಕ್ತಿಯ ಮೇಲೂ ನಿಮ್ಮ ಸಾಹಿತ್ಯಾಸಕ್ತಿಯನ್ನು ನಿರ್ಧರಿಸಬಹುದು.ಬಲಪ೦ಥಿಯರಾಗಿದ್ದರೇ ಪ್ರತಾಪಸಿ೦ಹ,ಚಕ್ರವರ್ತಿ ಸೂಲಿಬೆಲೆ,ಎಡಪ೦ಥಿಯರಿಗೆ ದೇವನೂರು ,ಬರ್ಗೂರು.ಇತ್ಯಾದಿ ಇತ್ಯಾದಿ.ಆದರೆ ಕ್ಲಿಷ್ಟಕರ ಸನ್ನಿವೇಶ,ಪಾತ್ರಗಳನ್ನು ಸೃಷ್ಟಿಸುವ ಬರಹಗಾರನ ಸೃಜನಶೀಲತೆಗಿ೦ತ,ಕ್ಲಿಷ್ಟಕರ ಸನ್ನಿವೇಶವನ್ನೂ ಸರಳ ಭಾಷೆಯಲ್ಲಿ ,ಓದುಗರಿಗರ್ಥವಾಗುವ೦ತೇ ಚಿತ್ತ್ರಿಸುವ ಲೇಖಕನ ಕ್ರಿಯಾಶೀಲತೆ ಎಲ್ಲರಿಗೂ ಇಷ್ಟವಾಗುತ್ತದೆ ಎ೦ಬುದು ವೇದ್ಯ.ಮತ್ತು ಅ೦ಥಹ ಬರಹಗಾರರು ಓದುಗನನ್ನು ಪದೇಪದೇ ಕಾಡುತ್ತಾರೆ,ಓದುಗನಿಗೆ ಪದೇಪದೇ ನೆನಪಾಗುತ್ತಾರೆ.ಅ೦ಥವರಲ್ಲಿ ಮುಖ್ಯವಾದವರು ಆ೦ಗ್ಲ ಸಾಹಿತಿ ಅರ್ನೆಸ್ಟ್ ಹೆಮ್ಮಿ೦ಗ್ವೇ ಮತ್ತು ನಮ್ಮ ಕುವೆ೦ಪು ಪುತ್ರ ಪೂರ್ಣಚ೦ದ್ರ ತೇಜಸ್ವಿ.

Read more »

7
ಜೂನ್

ಇದು ವಿಮರ್ಶೆಯಲ್ಲ ನನ್ನನಿಸಿಕೆ…

-ಕೆ.ಗುರುಪ್ರಸಾದ್

yADSಇತ್ತೀಚೆಗೆ ಒಂದು ವಿಷಯದ ಬಗ್ಗೆ ನಾ ಮೆಚ್ಚುವ ಇಬ್ಬರು ಲೇಖಕರ ಆರ್ಟಿಕಲ್ ಓದಿದೆ. ಒಂದು ಪ್ರತಾಪ್ ಸಿಂಹ ಅವರ ” ಮೇನಕೆ ಬಂದು ಕುಣಿಯುವವರೆಗೆ ವಿಶ್ವಾಮಿತ್ರ ಮಹಾತಪಸ್ವಿಯಾಗಿದ್ದ, ಬಿಜೆಪಿ ಕಥೆಯೂ ಹಾಗೇಯೇ ಆಯಿತು ” ಇನ್ನೊಂದು ಚಕ್ರವರ್ತಿ ಸೂಲಿಬೆಲೆಯವರ ” ಎರಡು ರಾಷ್ಟ್ರೀಯ ಪಕ್ಷ ಎಷ್ಟೊಂದು ಅಂತರ “. ಮೊದಲೇ ಹೇಳಿದಂತೆ ಎರಡೂ ಕರ್ನಾಟಕದಲ್ಲಿನ ಬಿಜೆಪಿಯ ಸೋಲಿನ ಕುರಿತಾಗೇ ಇರೋದು. ಪ್ರತಾಪ್ ಸಿಂಹ ಅವರು ಯಾವ ರೀತಿ ಸೋಲನುಭವಿಸಿತು ಅನ್ನೋದನ್ನ ವಿಶ್ಲೇಷಣೆ ಮಾಡಿದ್ದರೆ, ಸೂಲಿಬೆಲೆಯವರು ಎರಡು ಪಕ್ಷಗಳ ನಡುವಿನ ವ್ಯತ್ಯಾಸವನ್ನ ಜನರ ಮುಂದಿಡುವ ಪ್ರಯತ್ನ ಮಾಡಿದ್ದಾರೆ. ಈ ಎರಡು ಲೇಖನಗಳನ್ನ ಓದಿದ ನಂತರ ನನಗೆ ನನ್ನ ಅನಿಸಿಕೆಯನ್ನು ಹೇಳೋ ಮನಸಾಯಿತು ಹಾಗಾಗಿ ಈ ಸಣ್ಣ ಲೇಖನ…ಮೊದಲೇ ಶೀರ್ಷಿಕೆಯ ರೂಪದಲ್ಲಿ ಹೇಳಿದ್ದೇನೆ, ಇದು ವಿಮರ್ಶೆಯಲ್ಲ ಯಾಕೆಂದರೆ ಇಬ್ಬರೂ ತಮ್ಮ ಬರಹಗಳಿಂದ ಜನರ ಮಂತ್ರಮುಗ್ಧರನ್ನಾಗಿಸಿದವರು. ಅವರ ಕುರಿತಾಗಿ ವಿಮರ್ಶೆ ಮಾಡುವ ಯೋಗ್ಯತೆ ಎಳ್ಳಷ್ಟೂ ನನ್ನಲ್ಲಿಲ್ಲ ಅನ್ನೋದು ನನ್ನ ಧೃಡವಾದ ನಂಬಿಕೆ. ಹಾಗಾಗಿ ಇಲ್ಲಿರೋದು ಅದೇ ವಿಷಯದ ಕುರಿತಾದ ನನ್ನ ಅನಿಸಿಕೆ ಅಷ್ಟೇ..

ಮೊದಲಿಗೆ ಪ್ರತಾಪ್ ಸಿಂಹರ ಲೇಖನವನ್ನ ನೋಡೋದಾದ್ರೆ… ಬಿಜೆಪಿಯ ಸೋಲಿನ ಕುರಿತಾದ ಪ್ರತಾಪ್ ಅವರ ಅನಾಲಿಸಿಸ್ ಸೂಪರ್… ಎರಡು ಮಾತಿಲ್ಲದೆ ಒಪ್ಪಿಕೊಳ್ಳಬಹುದಾದ ರೀತಿಯಲ್ಲಿ ಪ್ರಸ್ತುತ ಪಡಿಸಿದ್ದಾರೆ. ಅಧಿಕಾರದ ಮೆಟ್ಟಲೇರುವ ಹೊತ್ತಲ್ಲಿ ಆದ ಸಣ್ಣ ಸಣ್ಣ ತಪ್ಪುಗಳು ಮುಂದೆ ಯಾವ ರೀತಿ ಯುಡಿಯೂರಪ್ಪ ಅವರನ್ನ ಕಾಡತೊಡಗಿತು, ಯಾವ ರೀತಿ ಹೈಕಮಾಂಡ್ ನ ನಡೆಗಳು ಯಡಿಯೂರಪ್ಪ ಅವರನ್ನ ತಪ್ಪು ದಾರಿ ಹಿಡಿಯುವಂತೆ ಪ್ರೇರೇಪಿಸಿತು ಅನ್ನೋದರ ಸ್ಪಷ್ಟ ಚಿತ್ರಣ ಕೊಡುತ್ತಾ ಹೋಗುತ್ತಾರೆ. ಆಪರೇಶನ್ ಕಮಲ, ರೆಡ್ಡಿಗಳ ದರ್ಪ, ಸುಷ್ಮಾರವರ ಮಾತುಗಳು, ಅನಂತ್ ಕುಮಾರರ ಒಳಸಂಚು ಹೀಗೆ…ಏಕಾಂಗಿತನವನ್ನ ಅನುಭವಿಸಿದ ಯಡಿಯೂರಪ್ಪನವರು ಎಡವಿದರು ಅಂದರು. ಇದೆಲ್ಲವನ್ನೂ ಒಪ್ಪೋಣ ಆದರೆ ಸ್ವಲ್ಪ ಹಿಂದಿನದನ್ನು ಮೆಲುಕು ಹಾಕಿದರೆ ಇದೇ ಪ್ರತಾಪ್ ಸಿಂಹ ಅವರು ಯಡಿಯೂರಪ್ಪ ಅವರನ್ನ ತಮ್ಮ ಎರಡು ಮೂರು ಲೇಖನದಲ್ಲಿ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದರು…( ೨೦೦೮ ರ ಲೇಖನಗಳು.. ಅವರ ಬ್ಲಾಗ್ ನಲ್ಲಿ ಈಗಲೂ ಲಭ್ಯವಿದೆ) ವರ್ಗಾವಣೆಯ ಕುರಿತಾಗಿ, ನಿವೃತ್ತಿ ವಯಸ್ಸನ್ನು ಏರಿಸಿದ್ದುದರ ಕುರಿತಾಗಿ ಹೀಗೆ ಹಲವು ವಿಷಯಗಳಲ್ಲಿ ನೇರವಾಗಿ ದೋಷಾರೋಪಣೆ ಮಾಡಿದ್ದ ಪ್ರತಾಪರಿಗೆ ಈಗ ಯುಡಿಯೂರಪ್ಪನವರ ತಪ್ಪುಗಳು ಕೂಡ ಬಿಜೆಪಿಯ ಸೋಲಿಗೆ ಒಂದು ಕಾರಣ ಅಂತನ್ನಿಸದೇ ಇರೋದು ನನಗೇಕೋ ಸರಿ ಅನ್ನಿಸಲಿಲ್ಲ. ಯಡಿಯೂರಪ್ಪನವರ ಪುತ್ರ ಪ್ರೇಮದ ಬಗ್ಗೆ ಟೀಕಿಸಿದ್ದ ಪ್ರತಾಪರು ಯಾಕೋ ಇಲ್ಲಿ ಅದನ್ನ ಉಲ್ಲೇಖಿಸಲಿಲ್ಲ. ಬಿಜೆಪಿಯಿಂದ ಹೊರ ಬಂದ ಮೇಲೆ ಯಡಿಯೂರಪ್ಪನವರ ನಡೆಯ ಬಗೆಗೆ ಯಾವುದೇ ರೀತಿಯ ಮಾತುಗಳನ್ನಾಡದೇ “ಬಿಜೆಪಿ” ಯಡಿಯೂರಪ್ಪನವರ ಬಳಿ ಹೋಗಿ ಅವರನ್ನ ಕರೆತರುವ ಪ್ರಯತ್ನ ಮಾಡಬೇಕು ಅಂದರು.

Read more »

16
ಮೇ

ನಮ್ಮ ಇತಿಹಾಸ ನಾವೇ ಬರೆದು ಓದೋದು ಬೇಡವೆ?

– ಚಕ್ರವರ್ತಿ ಸೂಲಿಬೆಲೆ

ಬ್ರಿಟಿಷ್ ಅಧಿಕಾರಿ ಮ್ಯಾಲೆಸನ್ ಈ ದೇಶದ ಜನರನ್ನು ಹುಚ್ಚರು ಅಂತ ಕರೀತಾನೆ. ಏಕೆ ಗೊತ್ತೇನು? ನೇಣು ಶಿಕ್ಷೆಗೆ ಕಳಿಸಿದರೆ ಈ ದೇಶದ ಜನ ಹೆದರೋದಿರಲಿ, ತಾವೇ ನೇಣುಗಂಬದ ಬಳಿ ಧಾವಿಸಿ ನೇಣು ಕುಣಿಕೆಯನ್ನು ಕೊರಳಿಗೆ ಹಾಕಿಕೊಂಡುಬಿಡ್ತಾ ಇದ್ದರಂತೆ. ಆದಷ್ಟು ಬೇಗ ನನ್ನ ನೇಣಿಗೇರಿಸಿ ಅಂತ ಗೋಗರಿಯುತ್ತಾ ಇದ್ದರಂತೆ. ಹೀಗೇಕೆಂದು ಪ್ರಶ್ನಿಸಿದಾಗ, ಪುನರ್ಜನ್ಮ ನಂಬೋರು ನಾವು, ಬೇಗ ಹೊರಟರೆ, ಬೇಗ ಮರಳಿ ಬರುತ್ತೇವಲ್ಲ! ಅನ್ನುವ ವಾದ ಮಂಡಿಸುತ್ತಿದ್ದರಂತೆ. ಹೆದರಿಸಬೇಕೆಂದು ನೇಣಿಗೇರಿಸಿದರೆ, ಅದೇ ಪ್ರೇರಣೆಯಾಗುವ ರೀತಿ ಅತೀ ವಿಶಿಷ್ಟವಲ್ಲವೆ? ಅದಕ್ಕೇ ಬ್ರಿಟಿಷರಿಗೆ ಅಷ್ಟೊಂದು ಕೋಪ.

ಮೇ ೧೦ಕ್ಕೆ ೧೮೫೭ರಲ್ಲಿ ಸಂಗ್ರಾಮವೊಂದಕ್ಕೆ ಮುನ್ನುಡಿ ಬರೆಯಲಾಗಿತ್ತು. ಬ್ಯಾರಕ್‌ಪುರದ ಮಂಗಲ್‌ಪಾಂಡೆ ಆಂಗ್ಲ ಪೊಲೀಸ್ ಅಧಿಕಾರಿಯತ್ತ ಗುಂಡು ಸಿಡಿಸಿ, ತಿಂಗಳ ಕೊನೆಯಲ್ಲಿ ಆರಂಭವಾಗಬೇಕಾಗಿದ್ದ ಕ್ರಾಂತಿಗೆ ಆಗಲೇ ಕಿಡಿ ಹಚ್ಚಿಬಿಟ್ಟಿದ್ದ. ಅಲ್ಲಿಂದಾಚೆಗೆ ಮೀರತ್, ದೆಹಲಿಗಳು ಕ್ರಾಂತಿಯ ಕಿಡಿಗೆ ಉರಿದು ಬಿದ್ದವು. ಕಾನ್‌ಪುರ, ಝಾನ್ಸಿಗಳು ಜಯಘೋಷ ಮೊಳಗಿಸಿದವು. ಬಿಹಾರ ಕುದಿಯಿತು. ದಕ್ಷಿಣದಲ್ಲೂ ಬ್ರಿಟಿಷರ ಬುಡಕ್ಕೆ ಬಲವಾದ ಪೆಟ್ಟು ಬಿತ್ತು. ಅಂದುಕೊಂಡಂತೆಯೇ ಎಲ್ಲವೂ ಆಗಿದ್ದರೆ, ಇತಿಹಾಸದ ಹಾದಿ ಬೇರೆಯೇ ಇರುತ್ತಿತ್ತು. ಆ ವೇಳೆಗೆ ಆಂಗ್ಲರೊಟ್ಟಿಗೆ ಕಾದಾಡಿ ಹೈರಾಣಾಗಿದ್ದ ಸಿಕ್ಖರು ಭಾರತೀಯ ಸೈನಿಕರ ಬೆಂಬಲಕ್ಕೆ ಬರಲಿಲ್ಲ. ಅಯ್ಯೋ ಪಾಪ! ಅನ್ನುವ ಕೆಲವಷ್ಟು ಜನ ಆಂಗ್ಲ ಅಧಿಕಾರಿಗಳಿಗೆ ಉಳಿದುಕೊಳ್ಳುವ ಮಾರ್ಗ ತೋರಿದರು. ಅಂತೂ ಮಹಾಯುದ್ಧವೊಂದರಲ್ಲಿ ನಾವು ಸೋತಿದ್ದೆವು.

Read more »

24
ಏಪ್ರಿಲ್

ಒಳಸಂಚಿಗೆ ಬೇಕಿದೆ ಆತ್ಮವಿಶ್ವಾಸದ ಅಗ್ನಿಸ್ಪರ್ಷ

– ಚಕ್ರವರ್ತಿ ಸೂಲಿಬೆಲೆ
   ಅಗ್ನಿ ೫ ಬಂದನಂತರ ರಣಾಂಗಣದಲ್ಲಿ ನಮ್ಮನ್ನು ಸೋಲಿಸಲು ಚೀನಾಕ್ಕೆ ಸಾಧ್ಯವಾಗಲಾರದು ನಿಜ. ಆದರೆ ಸಂಸತ್ತಿನ ಮೇಜಿನ ಮೇಲೆಯೇ ನಮ್ಮ ಸೋಲಿಗೆ ಷರಾ ಬರೆದರೆ ಯಾರು ಏನು ಮಾಡಿಯಾರು ಹೇಳಿ!?

ನಾಲ್ಕು ವರ್ಷಗಳ ತಪಸ್ಸು ಪೂರ್ಣಗೊಂಡಿದೆ. ೭೦೦ ಕಿ.ಮೀ.ದೂರದವರೆಗೂ ಹೋಗಿ ಶತ್ರು ಠಾಣ್ಯ ನಾಶ ಮಾಡಿಬರಬಲ್ಲ. ಅಗ್ನಿ ೧ನ್ನು ನಭಕ್ಕೆ ಹಾರಿಬಿಟ್ಟಾಗಿನಿಂದಲೂ ೫,೦೦೦ ಕಿ.ಮೀ. ದೂರಕ್ಕೆ ಹೋಗಬಲ್ಲ ಅಗ್ನಿಯ ಕನಸು ಕಾಣುತ್ತಲೇ ಇದ್ದವರು ನಾವು. ಮೊನ್ನೆ ಅಗ್ನಿ ೫ ಯಶಸ್ವಿಯಾಗಿ ಉಡಾವಣೆಗೊಂಡು ಸೈನ್ಯದ ಶಕ್ತಿಯನ್ನು ನೂರ್ಮಡಿಗೊಳಿಸಿದಾಗ ಆ ಕನಸು ನನಸಾಯಿತು. ಕನಸು ನನಸುಗಳ ಕತೆ ಏನೇ ಇರಲಿ. ಸೈನ್ಯದ ಸಾಮರ್ಥ್ಯದ ಕುರಿತಂತೆ ನಡೆಯುತ್ತಿದ್ದ ವಾದ ವಿವಾದಗಳಿಂದ ಈ ಪರೀಕ್ಷೆ ಕೇಂದ್ರ ಸರ್ಕಾರವನ್ನಂತೂ ಪಾರುಮಾಡಿತು. ಅಗ್ನಿಯೂ ತಂಪೆರೆಯಬಲ್ಲದೆಂದರೆ ಹೀಗೇ ನೋಡಿ!

ಈ ನಾಲ್ಕು ವರ್ಷಗಳ ಪ್ರಯತ್ನ ಅಂತ್ಯ ಕಾಣಲು ಇನ್ನೂ ಸ್ವಲ್ಪ ಕಾಲಾವಕಾಶ ಬೇಕಿತ್ತು. ಆದರೆ ರಕ್ಷಣಾ ಸಚಿವ ಆಂಟನಿ ವಿಜ್ಞಾನಿಗಳಿಗೆ ದುಂಬಾಲು ಬಿದ್ದು ಈ ಪ್ರಯೋಗವನ್ನು ಸಾಧ್ಯವಾಗಿಸಿ ಯಶಸ್ಸು ಗಳಿಸಿಕೊಂಡರು. ಈ ನಿಟ್ಟಿನಲ್ಲಿ ಡಿಆರ್‌ಡಿಓಗೆ ಸಹಕಾರಿಯಾಗಿ ಹಲವು ವೈಜ್ಞಾನಿಕ ಸಂಸ್ಥೆಗಳು ದುಡಿದಿವೆ. ಯಶಸ್ಸಿನ ಈ ಹೊತ್ತಿನಲ್ಲಿ ಆ ವಿಜ್ಞಾನಿಗಳಿಗೆಲ್ಲ ಒಂದು ಪ್ರೀತಿಯ ಸಲಾಮು.

Read more »