ವಿಷಯದ ವಿವರಗಳಿಗೆ ದಾಟಿರಿ

Posts tagged ‘ಚಿಂತೆ’

20
ಫೆಬ್ರ

ಬೆಲೆಯಿಲ್ಲದ ಬದುಕು..!

– ಗೀತಾ ಹೆಗ್ಡೆ

21happy1ಇದು ಕಾಲನ ನಿಯಂತ್ರಣದಲ್ಲಿ ಕಳೆಯುತ್ತಿರುವ ಕಾಲವೊ ಅಥವಾ ಮನುಜ ತಾನಾಗಿ ತಂದುಕೊಂಡ ಅತಿ ಆಸೆಯ ಫಲವೊ ಯಾವುದು ನನ್ನ ನಿರ್ಧಾರಕ್ಕೆ ಸಿಗುತ್ತಿಲ್ಲ. ಯೋಚಿಸುತ್ತ ಕುಳಿತರೆ ಹಗಲಂತೂ ನಿದ್ದೆ ಬರೋಲ್ಲ ಬಿಡಿ ; ರಾತ್ರಿಯ ನಿದ್ರೆಯನ್ನೂ ಕಸಿದು ಕೊಳ್ಳುವಷ್ಟು ಕ್ರೂರಿ.  ನಿರಾತಂಕವಾದ ಬದುಕು ಕಾಣುವ ಹಂಬಲ ಕೊನೆ ಗಾಲದಲ್ಲಿ ಅದೆಷ್ಟು ಮನೆ ಮಾಡಿತ್ತೊ ಹರೆಯದಲ್ಲಿ ; ಅದೆ ರೀತಿ ಹಿಂದೆ ತಿರುಗಿ ನೋಡಿದಾಗ ಹರೆಯದ ಕನಸೂ ಅಂದುಕೊಂಡಂತೆ ಸಾಕಾರವಾಗದ ನೆನಪು ಬಿಚ್ಚಿಕೊಳ್ಳುವುದು ಇಳಿ ವಯಸ್ಸಿನಲ್ಲಿ.. ಆದರೂ ಬದುಕಿನೊಂದಿಗಿನ ಪ್ರೀತಿ ಸಾಯೋದೆ ಇಲ್ಲ.  ಮತ್ತೆ ವಯಸ್ಸಿಗೆ ತಕ್ಕಂತೆ ಅಥವಾ ಕಾಲಕ್ಕೆ ತಕ್ಕಂತೆ ಮನಸ್ಸು ಬದಲಾಯಿಸಿಕೊಳ್ಳುತ್ತ ತೃಪ್ತಿ ಕಾಣಲು ಹವಣಿಸುತ್ತದೆ ಮನ.  ಗಾದೆ ಇದೆಯಲ್ಲ “ಬಿದ್ದರೂ ಮೂಗು ಮೇಲೆ” ಸಮರ್ಥಿಸಿಕೊಳ್ಳುವುದರಲ್ಲಿ ನಿಸ್ಸೀಮ ಈ ಮನಸ್ಸು. ಆದರೆ ಜೀವನ ಯಾವಾಗ, ಹೇಗೆ, ಯಾವ ರೀತಿ ತಿರುವು ಪಡೆಯುತ್ತದೆ ಅನ್ನುವುದು ಯಾರಿಗೂ ಗೊತ್ತಾಗುವುದೆ ಇಲ್ಲ.  ನಾವಂದು ಕೊಂಡಂತೆ ಯಾವುದೂ ನಡೆಯುವುದಿಲ್ಲ.  ನಮ್ಮೆದುರಿಗೆ ಕಾಣುವುದೆಲ್ಲ ಸತ್ಯ ಅಂತ ನಾವಂದುಕೊಳ್ಳುತ್ತೇವೆ.  ಆದರೆ ಅಲ್ಲಿ ಹಾಗಿರೋದೆ ಇಲ್ಲ.  ಆ ನಿಯಾಮಕ ಇನ್ನೇನೊ ಬರೆದಿರುತ್ತಾನೆ.  ಅದು ಗೊತ್ತಾಗುವುದು ಕಾಲ ಸರಿದಂತೆ ಅದರ ಪ್ರಭಾವ ಅರಿವಾಗುತ್ತ ನಡೆಯುತ್ತದೆ.  ಅದಕ್ಕೆ ಮನುಷ್ಯನಿಗೆ. ಜೀವನದ ಅರಿವಾಗುತ್ತ ನಡೆಯುವುದು ವಯಸ್ಸಾದಂತೆ.  ಹರೆಯದಲ್ಲಿ ಅದೆಷ್ಟು ಬಿಸಿ ರಕ್ತದ ಉಮೇದಿಯಲ್ಲಿ ಉರಿದಿರುತ್ತಾನೊ ವಯಸ್ಸಾದಂತೆ ಅಷ್ಟೆ ಪಾತಾಳದತ್ತ ಅವನ ಮನಸ್ಸು.  ಆಗ ಅವನ ಬಾಯಲ್ಲಿ ವೇದಾಂತ, ಸತ್ಸಂಗ, ಆಶ್ರಮ ಕಾಣುವುದು.  ಮಾತು, ನಡೆ, ನುಡಿ ಎಲ್ಲ ಬದಲಾಗುವುದು. Read more »

Advertisements