ವಿಷಯದ ವಿವರಗಳಿಗೆ ದಾಟಿರಿ

Posts tagged ‘ಚೌತಿ’

4
ಸೆಪ್ಟೆಂ

ಇಂಡೋನೇಷ್ಯದ ನೋಟಿನಲ್ಲೂ ಈತನದೊಂದು ಫೋಟೋ ಇದೆ!

– ರೋಹಿತ್ ಚಕ್ರತೀರ್ಥ

Ganapati-Ganesh in Space Lighten Background Wallpaper - 1366x768ಗಿರೀಶ ಕಾರ್ನಾಡರ ಹಯವದನ ನಾಟಕ ಗೊತ್ತಲ್ಲ? ಪದ್ಮಿನಿ ಎಂಬ ಸುರಸುಂದರ ಹೆಣ್ಣನ್ನು ಮೋಹಿಸಿ ತಲೆ ಕಡಿದುಕೊಳ್ಳುವ ಮತ್ತು ಇದ್ದ (ಮತ್ತು ಬಿದ್ದ) ತಲೆಯ ಬದಲಾಗಿನ್ನೊಂದು ತಲೆ ಅಂಟಿಸಿಕೊಂಡು ಪೇಚಾಡುವ ಇಬ್ಬರು ಜೀವದ ಗೆಳೆಯರ ಕತೆ ಅದು. ಆ ನಾಟಕದ ಪ್ರಾರಂಭದಲ್ಲಿ ಭಾಗವತ ಹೇಳುತ್ತಾನೆ: “ಸರ್ವ ವಿಘ್ನಗಳನ್ನೂ ನಿರ್ಮೂಲನಗೊಳಿಸಿ ಸಕಲ ಈಪ್ಸಿತಗಳಲ್ಲಿ ಸಿದ್ಧಿಯನ್ನು ನೀಡುವ ಆ ವಿಘ್ನೇಶ್ವರನೇ ಇಂದಿನ ನಮ್ಮ ನಾಟಕಕ್ಕೆ ಯಶಸ್ಸನ್ನು ನೀಡಲಿ. ಆತನ ಮಹಾತ್ಮ್ಯವನ್ನಾದರೂ ವರ್ಣಿಸುವುದು ಹೇಗೆ? ಆನೆಯ ಮುಖ, ಮನುಷ್ಯನ ದೇಹ, ಮುಖದಲ್ಲಿ ಮುರುಕು ದಂತ, ದೇಹದಲ್ಲಿ ಬಿರುಕು ಬಿಟ್ಟ ಉದರ – ಹೇಗೆ ನೋಡಿದರೂ ಅಪೂರ್ಣತೆಗೇ ಸಾಕ್ಷಿಯಾಗಿರುವಂತೆ ಕಾಣುವ ಈ ವಕ್ರತುಂಡನೇ ವಿಘ್ನಹರ್ತನೂ ಆಗಿರಬೇಕು ಎಂಬುದರ ರಹಸ್ಯವನ್ನಾದರೂ ಹೇಗೆ ಬಿಡಿಸೋಣ? ಬಹುಶಃ ದೇವರ ಪೂರ್ಣತ್ವ ಮನುಷ್ಯ ಕಲ್ಪನೆಗೇ ಒಗ್ಗಲಾರದಂಥಾದ್ದು ಎಂಬುದನ್ನೇ ಈ ಮಂಗಳಮೂರ್ತಿಯ ರೂಪ ಸಂಕೇತಿಸುತ್ತಿರಬಹುದು” Read more »