ವಿಷಯದ ವಿವರಗಳಿಗೆ ದಾಟಿರಿ

Posts tagged ‘ಜೀವನ’

20
ಫೆಬ್ರ

ಬೆಲೆಯಿಲ್ಲದ ಬದುಕು..!

– ಗೀತಾ ಹೆಗ್ಡೆ

21happy1ಇದು ಕಾಲನ ನಿಯಂತ್ರಣದಲ್ಲಿ ಕಳೆಯುತ್ತಿರುವ ಕಾಲವೊ ಅಥವಾ ಮನುಜ ತಾನಾಗಿ ತಂದುಕೊಂಡ ಅತಿ ಆಸೆಯ ಫಲವೊ ಯಾವುದು ನನ್ನ ನಿರ್ಧಾರಕ್ಕೆ ಸಿಗುತ್ತಿಲ್ಲ. ಯೋಚಿಸುತ್ತ ಕುಳಿತರೆ ಹಗಲಂತೂ ನಿದ್ದೆ ಬರೋಲ್ಲ ಬಿಡಿ ; ರಾತ್ರಿಯ ನಿದ್ರೆಯನ್ನೂ ಕಸಿದು ಕೊಳ್ಳುವಷ್ಟು ಕ್ರೂರಿ.  ನಿರಾತಂಕವಾದ ಬದುಕು ಕಾಣುವ ಹಂಬಲ ಕೊನೆ ಗಾಲದಲ್ಲಿ ಅದೆಷ್ಟು ಮನೆ ಮಾಡಿತ್ತೊ ಹರೆಯದಲ್ಲಿ ; ಅದೆ ರೀತಿ ಹಿಂದೆ ತಿರುಗಿ ನೋಡಿದಾಗ ಹರೆಯದ ಕನಸೂ ಅಂದುಕೊಂಡಂತೆ ಸಾಕಾರವಾಗದ ನೆನಪು ಬಿಚ್ಚಿಕೊಳ್ಳುವುದು ಇಳಿ ವಯಸ್ಸಿನಲ್ಲಿ.. ಆದರೂ ಬದುಕಿನೊಂದಿಗಿನ ಪ್ರೀತಿ ಸಾಯೋದೆ ಇಲ್ಲ.  ಮತ್ತೆ ವಯಸ್ಸಿಗೆ ತಕ್ಕಂತೆ ಅಥವಾ ಕಾಲಕ್ಕೆ ತಕ್ಕಂತೆ ಮನಸ್ಸು ಬದಲಾಯಿಸಿಕೊಳ್ಳುತ್ತ ತೃಪ್ತಿ ಕಾಣಲು ಹವಣಿಸುತ್ತದೆ ಮನ.  ಗಾದೆ ಇದೆಯಲ್ಲ “ಬಿದ್ದರೂ ಮೂಗು ಮೇಲೆ” ಸಮರ್ಥಿಸಿಕೊಳ್ಳುವುದರಲ್ಲಿ ನಿಸ್ಸೀಮ ಈ ಮನಸ್ಸು. ಆದರೆ ಜೀವನ ಯಾವಾಗ, ಹೇಗೆ, ಯಾವ ರೀತಿ ತಿರುವು ಪಡೆಯುತ್ತದೆ ಅನ್ನುವುದು ಯಾರಿಗೂ ಗೊತ್ತಾಗುವುದೆ ಇಲ್ಲ.  ನಾವಂದು ಕೊಂಡಂತೆ ಯಾವುದೂ ನಡೆಯುವುದಿಲ್ಲ.  ನಮ್ಮೆದುರಿಗೆ ಕಾಣುವುದೆಲ್ಲ ಸತ್ಯ ಅಂತ ನಾವಂದುಕೊಳ್ಳುತ್ತೇವೆ.  ಆದರೆ ಅಲ್ಲಿ ಹಾಗಿರೋದೆ ಇಲ್ಲ.  ಆ ನಿಯಾಮಕ ಇನ್ನೇನೊ ಬರೆದಿರುತ್ತಾನೆ.  ಅದು ಗೊತ್ತಾಗುವುದು ಕಾಲ ಸರಿದಂತೆ ಅದರ ಪ್ರಭಾವ ಅರಿವಾಗುತ್ತ ನಡೆಯುತ್ತದೆ.  ಅದಕ್ಕೆ ಮನುಷ್ಯನಿಗೆ. ಜೀವನದ ಅರಿವಾಗುತ್ತ ನಡೆಯುವುದು ವಯಸ್ಸಾದಂತೆ.  ಹರೆಯದಲ್ಲಿ ಅದೆಷ್ಟು ಬಿಸಿ ರಕ್ತದ ಉಮೇದಿಯಲ್ಲಿ ಉರಿದಿರುತ್ತಾನೊ ವಯಸ್ಸಾದಂತೆ ಅಷ್ಟೆ ಪಾತಾಳದತ್ತ ಅವನ ಮನಸ್ಸು.  ಆಗ ಅವನ ಬಾಯಲ್ಲಿ ವೇದಾಂತ, ಸತ್ಸಂಗ, ಆಶ್ರಮ ಕಾಣುವುದು.  ಮಾತು, ನಡೆ, ನುಡಿ ಎಲ್ಲ ಬದಲಾಗುವುದು. ಮತ್ತಷ್ಟು ಓದು »

6
ಆಕ್ಟೋ

ಮಹತ್ತರ ಸಂತಸಗಳ ಹುಡುಕಾಟದ ನಡುವೆ….!

– ಗುರುರಾಜ ಕೋಡ್ಕಣಿ. ಯಲ್ಲಾಪುರ

ತುಂಬ ಬುದ್ಧಿವಂತನಾಗಿದ್ದ ಆ ವೃದ್ಧ ತನ್ನ ಹಳ್ಳಿಯ ಮುಖ್ಯಸ್ಥ. ಆತನ ಸಲಹೆ ಸೂಚನೆಗಳಿಲ್ಲದೇ ಹಳ್ಳಿಯ ಯಾವ ಕೆಲಸಕಾರ್ಯಗಳೂ ನಡೆಯುತ್ತಿರಲಿಲ್ಲ. ಹಳ್ಳಿಗರಿಗೆ ಆತನ ಮಾತೆಂದರೆ ವೇದವಾಕ್ಯ.ತಮ್ಮ ಖಾಸಗಿ ಸಮಸ್ಯೆಗಳ ಕುರಿತಾದ ಸಲಹೆಗಳಿಗಾಗಿಯೂ ಹಳ್ಳಿಗರು ಅವನನ್ನು ಭೇಟಿಯಾಗುತ್ತಿದ್ದರು. ದುರಂತವೆಂದರೆ ಇಂಥಹ ಬುದ್ಧಿವಂತ ಅಪ್ಪನಿಗೆ ಇದ್ದೊಬ್ಬ ಮಗ ಭಯಂಕರ ಸೋಮಾರಿ. ಯಾವುದೇ ಕೆಲಸ ಮಾಡದೆ ಬೀದಿಬೀದಿ ಸುತ್ತುತ್ತ,ಕುಡಿಯುತ್ತ ತಿನ್ನುತ್ತ, ಸ್ನೇಹಿತರೊಂದಿಗೆ ಕಾಲ ಕಳೆಯುವುದೊಂದೇ ಅವನ ಬದುಕಾಗಿತ್ತು. ಮೊದಮೊದಲು ಅಪ್ಪ ಅವನನ್ನು ಗದರಿಸುತ್ತಿದ್ದ. ಮಗ ಕೊಂಚ ದೊಡ್ಡವನಾಗುತ್ತಿದ್ದಂತೆಯೇ ಗದರಿಸುವುದನ್ನು ಬಿಟ್ಟು ಪ್ರೀತಿಯಿಂದ ಬುದ್ದಿವಾದ ಹೇಳಿ ನೋಡಿದ. ಆದರೆ ಅಪ್ಪನ ಗದರಿಕೆಯಾಗಲಿ, ಪ್ರೀತಿಯಾಗಲಿ ಮಗನ ವರ್ತನೆಯಲ್ಲಿ ಯಾವ ಬದಲಾವಣೆಯನ್ನೂ ತರಲಿಲ್ಲ. ಹೆಚ್ಚುತ್ತಿರುವ ತನ್ನ ವಯಸ್ಸಿನೊಂದಿಗೆ ಮಗನ ಭವಿಷ್ಯದ ಚಿಂತೆಯೂ ಹೆಚ್ಚಿತ್ತು ಊರ ಮುಖ್ಯಸ್ಥನಿಗೆ. ಹೇಗಾದರೂ ಸರಿ ತಾನು ಸಾಯುವುದರೊಳಗಾಗಿ ಮಗನನ್ನು ಸರಿದಾರಿಗೆ ತರಲೇಬೇಕೆಂದು ನಿಶ್ಚಯಿಸಿಕೊಂಡ ಹಿರಿಯ, ಅದೊಂದು ದಿನ ಮಗನನ್ನು ಕರೆದು, ‘ಮಗು ನೀನಿನ್ನೂ ಚಿಕ್ಕ ಹುಡುಗನಲ್ಲ, ಬೆಳೆದು ನಿಂತಿರುವ ಯುವಕ. ಮತ್ತಷ್ಟು ಓದು »

7
ಮಾರ್ಚ್

ಗುರುವಾಗುವುದು ಇಷ್ಟು ಕಷ್ಟವೇ?

– ಶ್ರೀಕಾಂತ. ಎನ್, ಸಂಶೋಧನಾ ವಿದ್ಯಾರ್ಥಿ ಕುವೆಂಪು ವಿ.ವಿ

16614791-Orange-cartoon-characters-sit-in-on-a-lecture--Stock-Photoನನಗೀಗ ಇಪ್ಪತ್ತೈದು ವಯಸ್ಸು. ಈಗ ನಾನು ಸಂಶೋಧನಾ ವಿದ್ಯಾರ್ಥಿ. ಇಲ್ಲಿಗೆ ಬರುವ ಮುನ್ನ ಎರಡು ವರ್ಷ ಶಿಕ್ಷಕನಾಗಿ ಕೆಲಸ ಮಾಡಿದ್ದೆ. ಅದರ ಅನುಭವವನ್ನು ಹಂಚಿಕೊಳ್ಳುತ್ತಿದ್ದೇನೆ. ತಲೆಯ ತುಂಬಾ ಹುಡುಗರಿಗೆ ಅದು ಹೇಳಬೇಕು ಇದು ಹೇಳಬೇಕು ಎಂದು ಹಿಂದಿನ ದಿನ ಘಂಟೆಗಟ್ಟಲೇ ತಯಾರಾಗಿ, ಡಸ್ಟರ್, ಚಾಕ್, ಅಟೆಂಡೆನ್ಸ್, ಸಣ್ಣ ಚೀಟಿ ಹಿಡಿದು ತರಗತಿಗೆ ಮೊದಲನೇ ಬಾರಿ ಹೊರಟ ನನಗೆ ದೊಡ್ಡ ಆಶ್ಚರ್ಯ ಕಾದಿತ್ತು. ಯುನಿವರ್ಸಿಟಿ ನೀನು ಗಣಿತ ಪಾಠ ಮಾಡಲು ಯೋಗ್ಯ ಎಂದು ಒಂದು ಕಾರ್ಡ್ ಕೊಟ್ಟು ಕಳುಹಿಸಿತ್ತೇ ಹೊರತು, ಹೇಗೆ ಪಾಠ ಮಾಡುವುದು ಎಂದು ತಿಳಿಸಿರಲಿಲ್ಲ. ನನಗಿಂತ ಎತ್ತರ & ದಪ್ಪ, ನೋಡಲು ಪ್ರಬುದ್ಧರಾಗಿ ಕಾಣುತ್ತಿದ್ದ ಹುಡುಗರು ಅನುಮಾನದೊಂದಿಗೆ ಎದ್ದು ನಿಂತಾಗ, ನನ್ನ ಊಹೆಗಳೆಲ್ಲಾ ತಲೆಕೆಳಗಾಯಿತು. ಪಾಠ ಹೇಗೆ ಮಾಡುವುದು, ಏನೇನೆಲ್ಲಾ ಹೊಸತು ಹೇಳಬೇಕು ಎಂದಷ್ಟೇ ಯೋಚಿಸಿ ಹೋದ ನನಗೆ, ನನ್ನ ದೇಹದ ಗಾತ್ರ ಕೂಡ ಮಾನದಂಡ ಎಂದು ತಿಳಿದಾಗ, ಹಿಂದಿನ ದಿನ ತಯಾರಾದದ್ದೆಲ್ಲಾ ಸೊನ್ನೆಯಿಂದ ಗುಣಿಸಿದ ಹಾಗೆ ನಾಶವಾಯಿತು. ಕೆಲವರಂತು, ಇವರು ಲೆಕ್ಚರ್ ಅಲ್ಲವೆಂದು ಭಾವಿಸಿಯೇ ಕುಳಿತಿದ್ದರು. ಎಲ್ಲರನ್ನು ಕೂಡಿಸಿ, ಜೋರಾಗಿ ಕೇಳುತ್ತಿದ್ದ ಹೃದಯ ಬಡಿತ ಎಣಿಸುತ್ತಾ, ನನ್ನನ್ನೇ ತಿನ್ನುವಂತೆ ನೋಡುತ್ತಿದ್ದ 60*2 ಕಣ್ಣುಗಳ ತೀವ್ರತೆ ತಡೆಯಲಾಗದೆ ಬೋರ್ಡ್ ಕಡೆ ತಿರುಗಿ ಅಳಿಸಿದ್ದ ಬೋರ್ಡನ್ನು ಮತ್ತೆ ಅಳಿಸುತ್ತಾ ನನ್ನನ್ನು ಸಮಾಧಾನ ಮಾಡಿಕೊಂಡೆ. ನನ್ನ ಸಹೋದ್ಯೋಗಿ ಹೇಳಿ ಕಳಿಸಿದಂತೆ ಮೊದಲು ನನ್ನ ಪರಿಚಯ ಮಾಡಿಕೊಂಡು, ಅವರ ಹೆಸರು ಕೇಳಿ, ಭಯದಿಂದ ನನಗೆ ತೋಚಿದ್ದು ಹೇಳಿ ಬಂದಾಗ, ಇಷ್ಟೊಂದು ಕಷ್ಟವೇ ಗುರುವಾಗೋದು ? ನನ್ನ ಕೆರಿಯರ್ ಆಯ್ಕೆ ತಪ್ಪೇ ! ಎಂದೆನಿಸಿತು.

ಮತ್ತಷ್ಟು ಓದು »