ವಿಷಯದ ವಿವರಗಳಿಗೆ ದಾಟಿರಿ

Posts tagged ‘ದಲಿತ ಸಾಹಿತ್ಯ ಸಮ್ಮೇಳನ’

14
ಮೇ

ದಲಿತರನ್ನು ಇತರರಿಂದ ದೂರವಿಡಲು ನಡೆಸುತ್ತಿರುವ ಹುನ್ನಾರ ಇನ್ನೆಷ್ಟು ದಿನ ಮುಂದುವರೆಯುವುದು?

– ಶಿವಾನಂದ ಸೈದಾಪೂರ
ಪಿ.ಜಿ ಡಿಪ್ಲೊಮಾ ಇನ್ ಅಂಬೇಡ್ಕರ್ ಸ್ಟಡಿಸ್
ಆರ್. ಸಿ. ಯು ಬೆಳಗಾವಿ.

ಈಗಲೇ ಎರಡು ದಿನಗಳಲ್ಲಿ ನಡೆದ ಘಟನೆಗಳು; ನೂರಕ್ಕೆ ನೂರರಷ್ಟು ಮತದಾನದ ಜಾಗೃತಿಗಾಗಿ ಊರೂರುಗಳಿಗೆ ಸಂಪರ್ಕ ಮಾಡುತ್ತಿರುವ ಹೊತ್ತಲ್ಲಿ ಆದ ಸ್ವಂತ ಅನುಭವ. ದಲಿತರ ಓಣಿಗಳನ್ನು ಪ್ರವೇಶಿಸುವಾಗ ನಡೆದಂತದ್ದವುಗಳು.

ಘಟನೆ ೧ : ಓಣಿಯ ಪ್ರವೇಶಕ್ಕೂ ಮೊದಲು ಗಮನಿಸಿದಾಗ ಕಣ್ಣಿಗೆ ರಾಚುವಂಥದ್ದು; ಈ ಕೇರಿಯಲ್ಲಿ ಕಾಂಗ್ರೆಸ್ ಒಂದನ್ನು ಬಿಟ್ಟು ಬಿಜೆಪಿಯವರಿಗೆ ಪ್ರವೇಶವಿಲ್ಲ! ಈ ರೀತಿ ಫಲಕ ನೇತಾಡುತಿತ್ತು. ಇಂತಹ ವಾತಾವರಣ ಇನ್ನೂ ಯಾಕೆ ಹೀಗಿದೆ? ಚುನಾವಣೆ ಸಂದರ್ಭದಲ್ಲಿಯೇ ಯಾಕೆ ಹೀಗೆ? ಇದನ್ನು ಏನು ಅಂತ ತರ್ಕಿಸಬಹುದು? ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಯಾಕೆ ಈ ವಾತಾವರಣ? ಅಸ್ಪೃಶ್ಯತೆ ನಿವಾರಣೆಗಾಗಿ ಒಂದು ಕಡೆ ಹೋರಾಟಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಅವರನ್ನು ಸ್ವೃಶ್ಯ ಸಮಾಜ ವಾಸಿಯಾಗಲು ಬಿಡದೆ ನಡೆಸುತ್ತಿರುವ ರಾಜಕೀಯ ಷಡ್ಯಂತ್ರವೇ ಬಹಳಷ್ಟಿವೆ. Read more »

4
ಜನ

ಕಳೆದುಹೋಗುತ್ತಿರುವ ದಲಿತ ಚಿಂತನೆ

– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ

ದಲಿತ ಸಾಹಿತ್ಯ ಸಮ್ಮೇಳನದಲಿತ ಸಾಹಿತ್ಯವಲಯ ಒಂದಿಷ್ಟು ಹೆಚ್ಚೇ ಎನ್ನುವಷ್ಟು ಮುನಿಸಿಕೊಂಡಿದೆ. ಅದಕ್ಕೆಂದೇ ಕಳೆದ ಆರು ವರ್ಷಗಳಿಂದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪರ್ಯಾಯವಾಗಿ ಅವರು ದಲಿತ ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸುತ್ತಿರುವರು. ಸಾಹಿತ್ಯದ ಮುಖ್ಯವಾಹಿನಿಯಲ್ಲಿ ನಮಗೆ ಪ್ರವೇಶ ದೊರೆಯುತ್ತಿಲ್ಲ, ಪ್ರಶಸ್ತಿ-ಪುರಸ್ಕಾರ-ಗೌರವಗಳಿಂದ ನಾವು ವಂಚಿತರು, ದಲಿತ ಸಾಹಿತ್ಯ ಮತ್ತು ಬರಹಗಾರರನ್ನು ಅಸ್ಪೃಶ್ಯರಂತೆ ಕಾಣಲಾಗುತ್ತಿದೆ ಹೀಗೆ ಹಲವು ಕಾರಣಗಳನ್ನು ಮುಂದಿಟ್ಟುಕೊಂಡು ಕನ್ನಡದ ದಲಿತ ಸಾಹಿತ್ಯವಲಯ ತನ್ನ ಅಸ್ಮಿತೆಯನ್ನು ಪ್ರತ್ಯೇಕವಾಗಿ ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ನಿಜಕ್ಕೂ ಕನ್ನಡದ ಒಟ್ಟು ಸಾಹಿತ್ಯ ಕ್ಷೇತ್ರಕ್ಕೆ ಆತಂಕ ತಂದೊಡ್ಡುತ್ತಿರುವ ಬೆಳವಣಿಗೆಯಿದು. ದಲಿತ ಸಾಹಿತ್ಯ ಈಗ ಕನ್ನಡ ಸಾಹಿತ್ಯದ ಬಹುಮುಖ್ಯ ಭಾಗ ಎನ್ನುವ ಮನ್ನಣೆಗೆ ಪಾತ್ರವಾಗಿದೆ. ದಲಿತ ಸಾಹಿತ್ಯವನ್ನು ಹೊರಗಿಟ್ಟು ಕನ್ನಡ ಸಾಹಿತ್ಯದ ಬೆಳವಣಿಗೆ ಹಾಗೂ ಇತಿಹಾಸವನ್ನು ನೋಡುವುದು ಅಧ್ಯಯನ ಹಾಗೂ ಸಂಶೋಧನೆಯ ದೃಷ್ಟಿಯಿಂದ ಅಸಾಧ್ಯದ ಸಂಗತಿ. ಹಾಗೆ ನೋಡುವುದು ಕೂಡ ಸಲ್ಲದು. ಹಾಗೊಂದು ವೇಳೆ ದಲಿತ ಸಾಹಿತ್ಯವನ್ನು ಹೊರಗಿಟ್ಟು ನೋಡಿದಲ್ಲಿ ಕನ್ನಡ ಸಾಹಿತ್ಯದ ಒಟ್ಟು ಚಿತ್ರಣ ನಮಗೆ ದಕ್ಕಲಾರದು. ಇಲ್ಲಿ ಕುವೆಂಪು, ಕಾರಂತ, ಬೇಂದ್ರೆ ಅವರಷ್ಟೇ ದೇವನೂರ ಮಹಾದೇವ, ಬರಗೂರು ರಾಮಚಂದ್ರಪ್ಪ, ಸಿದ್ಧಲಿಂಗಯ್ಯ ಸಹ ಕನ್ನಡದ ಬಹುಮುಖ್ಯ ಬರಹಗಾರರು. ಕನ್ನಡ ಸಾಹಿತ್ಯದ ಬೆಳವಣಿಗೆಗೆ ದಲಿತ ಬರಹಗಾರರು ನೀಡಿದ ಕೊಡುಗೆ ತುಂಬ ಮೌಲಿಕವಾದದ್ದು. ಇವತ್ತು ದಲಿತ ಸಾಹಿತ್ಯ ಕನ್ನಡ ಸಾಹಿತ್ಯದ ಮುಖ್ಯಧಾರೆಯಲ್ಲಿ ತನ್ನನ್ನು ಗುರುತಿಸಿಕೊಂಡಿದೆ. ಅನೇಕ ದಲಿತ ಲೇಖಕರ ಸಾಹಿತ್ಯವನ್ನು ಆದರ್ಶವಾಗಿಟ್ಟುಕೊಂಡು ಬರವಣಿಗೆಯ ಕೃಷಿಯಲ್ಲಿ ತೊಡಗಿಸಿಕೊಂಡ ಹಲವಾರು ದಲಿತೇತರ ಬರಹಗಾರರು ಇಲ್ಲಿರುವರು. ಕಾರಂತರ ‘ಚೋಮನ ದುಡಿ’ಯಷ್ಟೇ ಮಹಾದೇವರ ‘ಕುಸುಮ ಬಾಲೆ’ ಸಹ ಅಸಂಖ್ಯಾತ ಓದುಗರ ಓದಿನ ವ್ಯಾಪ್ತಿಗೆ ದಕ್ಕಿದೆ. ಅನೇಕ ದಲಿತ ಲೇಖಕರು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಮತ್ತು ಗೌರವಕ್ಕೆ ಭಾಜನರಾಗಿರುವರು. ದಲಿತ ಸಾಹಿತಿಗಳನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುತ್ತಿಲ್ಲ ಎನ್ನುವ ಆಪಾದನೆಯಿಂದ ಕಳಚಿಕೊಳ್ಳುವ ಪ್ರಯತ್ನವಾಗಿ 81 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧಲಿಂಗಯ್ಯನವರನ್ನು ಅಧ್ಯಕ್ಷರನ್ನಾಗಿ ಮಾಡಲಾಯಿತು. ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಅಕಾಡೆಮಿಗಳಿಗೆ ದಲಿತ ಸಾಹಿತಿಗಳನ್ನು ಆಯ್ಕೆ ಮಾಡಿದ ಉದಾಹರಣೆಗಳಿವೆ. ಹೀಗಿದ್ದೂ ದಲಿತ ಸಾಹಿತ್ಯವಲಯ ಮುನಿಸಿಕೊಂಡಿದೆ.

Read more »