ವಿಷಯದ ವಿವರಗಳಿಗೆ ದಾಟಿರಿ

Posts tagged ‘ದೇವೇಗೌಡ’

8
ಆಗಸ್ಟ್

ಬಾಂಗ್ಲಾ ಬಾಂಬ್ ಮತ್ತು ಬೇಜವಾಬ್ದಾರಿ ರಾಜಕಾರಣಿಗಳು

– ರಾಕೇಶ್ ಶೆಟ್ಟಿ

ಬಂಗಾಳಿಗಳ ಬಗ್ಗೆ ಯೋಚಿಸುವಾಗ ಕನಿಕರವಾಗುತ್ತದೆ.ಸ್ವಾತಂತ್ರ್ಯಾ ನಂತರದ ಬರೋಬ್ಬರಿ ಮೂವತ್ತು ವರ್ಷವನ್ನು ಕಾಂಗ್ರೆಸ್ (INC ಮತ್ತು ಬಂಗಾಳಿ ಕಾಂಗ್ರೆಸ್) ಕೈಗೆ ಕೊಟ್ಟು ಪೆಟ್ಟು ತಿಂದು ನಂತರದ ಮೂವತ್ತೇಳು ವರ್ಷಗಳನ್ನು ಕಮ್ಯುನಿಸ್ಟರ ಕೈಯಲಿಟ್ಟು ಹೈರಾಣಾಗಿ ಕಡೆಗೆ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಪಕ್ಷದ ಕೈಗೆ ರಾಜ್ಯದ ಚುಕ್ಕಾಣಿಯನ್ನು ಕೊಟ್ಟರೂ ಅವರ ಕಷ್ಟಗಳು ಮಾತ್ರ ತೀರಲೇ ಇಲ್ಲ ಬದಲಾಗಿ ಹೆಚ್ಚಾಗುತ್ತಲೇ ಹೋದವು. ಅಯೋಗ್ಯರನ್ನೇ ಆರಿಸಿಕೂರಿಸಿದರೆ ಸಮಸ್ಯೆ ಉಲ್ಬಣವಾಗದೇ ಪರಿಹಾರವಾಗಲು ಸಾಧ್ಯವೇ? “ಊದೋದು ಬಿಟ್ಟು ಬಾರ್ಸೋದ್ ತಗೊಂಡರು” ಎನ್ನುವಂತಹ ಪರಿಸ್ಥಿತಿ ಪಶ್ಚಿಮ ಬಂಗಾಳ ರಾಜ್ಯಕ್ಕೆ ಅನ್ವಯವಾಗುತ್ತದೆ.

ಕಮ್ಯುನಿಸ್ಟರ ಹಿಂಸಾಚಾರ,ಓಲೈಕೆಯ ರಾಜಕಾರಣವನ್ನು ವಿರೋಧಿಸುತ್ತಲೇ ರಾಜಕೀಯ ಅಧಿಕಾರಕ್ಕೇರಿದ ಮಮತಾ ಬ್ಯಾನರ್ಜಿ,೨೦೧೧ರಲ್ಲಿ ಅಧಿಕಾರಕ್ಕೇರಿದ ನಂತರ ಅಳವಡಿಸಿಕೊಂಡಿದ್ದು ಕಮ್ಯುನಿಸ್ಟರ ಹಿಂಸಾಚಾರ,ಓಲೈಕೆಯ ರಾಜಕಾರಣವನ್ನೇ. ಆದರೆ ಕಮ್ಯುನಿಸ್ಟರು ತೀರಾ ಮಮತಾ ಬ್ಯಾನರ್ಜಿಯಷ್ಟು ಕ್ರಿಮಿನಲ್ ಎಲಿಮೆಂಟುಗಳನ್ನು ಸಾಬರನ್ನು ಈ ಮಟ್ಟಕ್ಕೆ ಓಲೈಸುತ್ತಿರಲಿಲ್ಲ ಎನ್ನುತ್ತಾರೆ ಬೆಂಗಾಲಿ ಗೆಳೆಯರು. ಅಧಿಕಾರವನ್ನು ಉಳಿಸಿಕೊಳ್ಳಲಿಕ್ಕಾಗಿ ಮಮತಾ ಯಾವುದೇ ಮಟ್ಟಕ್ಕಾದರೂ ಇಳಿಯಬಲ್ಲರು ಅದು ಮುಂದೆ ದೇಶವನ್ನೇ ಮತ್ತೊಮ್ಮೆ ವಿಭಜನೆಯ ಹಂತಕ್ಕೆ ತಂದಿಡುವಂತದ್ದಾದರೂ ಆಕೆಗದು ಸಮ್ಮತವೇ ಎನಿಸುತ್ತದೆ.ದೇಶಕಂಡ ಅತ್ಯಂತ ಬೇಜವಾಬ್ದಾರಿ ಮತ್ತು ಅಪಾಯಕಾರಿ ರಾಜಕಾರಣಿಗಳ ಪಟ್ಟಿಯಲ್ಲಿ ಸದ್ಯಕ್ಕೆ ಈಕೆಯದ್ದೇ ಅಗ್ರಸ್ಥಾನ.ಅಸ್ಸಾಂ ರಾಜ್ಯದಲ್ಲಿ, ಸುಪ್ರೀಂ ಕೋರ್ಟ್ ಕಣ್ಗಾವಲಿನಲ್ಲಿ ನಡೆಯುತ್ತಿರುವ National Register of Citizens (NRC)ಯ ಅಂತಿಮ ಕರಡು ಪಟ್ಟಿಯ ವಿಷಯದಲ್ಲಿ ಈಕೆ ಮಾಡುತ್ತಿರುವ ಕೊಳಕು ರಾಜಕೀಯ ನೋಡಿದರೆ ಅಧಿಕಾರಕ್ಕೋಸ್ಕರ ದೇಶವನ್ನೇ ಇಬ್ಭಾಗ ಮಾಡಿಸಿದ ನೆಹರೂ-ಜಿನ್ನಾ ಜೋಡಿಯ ಆತ್ಮವೇನಾದರೂ ಈಕೆಯ ಮೇಲೆ ಆವಾಹನೆಯಾಗಿರಬಹುದೇ ಎನ್ನುವ ಅನುಮಾನ ಮೂಡುತ್ತದೆ.

ಮತ್ತಷ್ಟು ಓದು »

25
ಡಿಸೆ

ಪ್ರಶ್ನೆ ರಾಹುಲ್ ಪಟ್ಟಾಭಿಷೇಕದ್ದಲ್ಲ; ಕಾಂಗ್ರೆಸ್ಸಿನ ನಿಗೂಢ ನಡೆಗಳದ್ದು

– ರಾಕೇಶ್ ಶೆಟ್ಟಿ

ಸೋನಿಯಾ ಗಾಂಧಿಯವರನ್ನು ಅಧ್ಯಕ್ಷೆಯನ್ನಾಗಿಸುವಾಗ,ವಯೋವೃದ್ಧ ಕೇಸರಿಯವರನ್ನು ಹೇಗೆ ನಡೆಸಿಕೊಳ್ಳಲಾಗಿತ್ತು ಎನ್ನುವುದು ಈಗ ಇತಿಹಾಸ. ಆದರೆ ಕೇಸರಿಯವರ ರಾಜಕೀಯ ಅಧ್ಯಾಯ ತೀರಾ,ಇಂದಿರಾ ಗಾಂಧಿಯವರ ಕಾಲದಲ್ಲಿ ದಲಿತ ನಾಯಕ ಜಗಜೀವನ್ ರಾಮ್ ಅವರ ರಾಜಕೀಯ ಜೀವನವನ್ನು ಮುಗಿಸಿದಷ್ಟು ಕ್ರೂರವಾಗಿರಲಿಲ್ಲವೆಂಬುದೇ ಸಮಾಧಾನ!

ದೇವೇಗೌಡರ ನೇತೃತ್ವದ ಸರ್ಕಾರವನ್ನು ವಿನಾಕಾರಣ ಬೀಳಿಸಿದ್ದ ಕಾಂಗ್ರೆಸ್ಸಿಗೆ ಮುಂದಿನ ಚುನಾವಣೆ ಗೆಲ್ಲಲು ನಾಯಕರೇ ಇರಲಿಲ್ಲವೆಂಬ ನೆಪವೊಡ್ಡಿ ಸೋನಿಯಾ ಅವರನ್ನು ಮುನ್ನೆಲೆಗೆ ತರಲಾಯಿತು. ರಾಜೀವ್ ಗಾಂಧಿಯವರ ಕೊಲೆಯ ನಂತರ ದೇಶವನ್ನು,ಪಕ್ಷವನ್ನು ಸಮರ್ಥವಾಗಿ ಮುಂದುವರೆಸಿದ್ದ ಪಿವಿ ನರಸಿಂಹರಾವ್ ಕಾಂಗ್ರೆಸ್ಸಿನಲ್ಲಿ ಯಾರಿಗೂ ಆಗ ಬೇಡವಾಗಿದ್ದರು. ಕಾರಣ ಸ್ಪಷ್ಟ, ನೆಹರೂ ಕುಟುಂಬದ ಸುತ್ತ ಸುತ್ತುವ ಕ್ಷುದ್ರ ಗ್ರಹಗಳಿಗೆ, ನಕಲಿ ಗಾಂಧಿ ಕುಟುಂಬದ ಮುಖ ಸ್ತುತಿ ಮಾಡುವ ಗುಲಾಮರು ಇಷ್ಟವಾಗುತ್ತಾರೆಯೇ ಹೊರತು ಸ್ವಂತ ಬುದ್ಧಿಶಕ್ತಿ,ಚಿಂತನೆಯುಳ್ಳ ನಾಯಕರಲ್ಲ. ಇಂದಿರಾ ಕಾಲದಲ್ಲಿ ಜಗಜೀವನ್ ರಾಮ್,ಮೊರಾರ್ಜಿ ದೇಸಾಯಿಯಂತವರನ್ನು ಹಣಿಯಲಾಗಿತ್ತು. ಸೋನಿಯಾ ಕಾಲಕ್ಕೆ ನರಸಿಂಹರಾವ್,ಕೇಸರಿಯವರು ನೆಹರೂ ಕುಟುಂಬದ ರಾಜಕೀಯ ಬೇಟೆಗೆ ಬಲಿಯಾದರು.ಕೇಸರಿಯವರನ್ನು ಕಾಂಗ್ರೆಸ್ ಪಕ್ಷದ ಸಂವಿಧಾನಕ್ಕೆ ವ್ಯತಿರಿಕ್ತವಾಗಿ ಅಧ್ಯಕ್ಷ  ಹುದ್ದೆಯಿಂದ ಇಳಿಸಿ, ಸೋನಿಯಾ ಅವರಿಗೆ ಪಟ್ಟ ಕಟ್ಟಲು,ಸೋನಿಯಾರ ಟೀಮು ಸೇರಿಕೊಂಡಿದ್ದ ಪ್ರಣಬ್ ಮುಖರ್ಜಿ,ಶರದ್ ಪವಾರ್ ಅವರಂತವರಿಗೂ ಮುಂದೊಂದು ದಿನ ಕೇಸರಿಯವರಿಗೆ ಸಿಕ್ಕ ಅದೇ ರುಚಿಯ ಸ್ವಾದವೂ ಸಿಕ್ಕಿತು. ಶರದ್ ಪವಾರ್, ಸಂಗ್ಮಾ, ತಾರೀಖ್ ಅನ್ವರ್ ಅವರನ್ನು ಪಕ್ಷದಿಂದ ಹೊರಹಾಕಿದರು. ಮುಂದೊಂದು ದಿನ ಅಡ್ಡಿಯಾಗಬಹುದಾಗಿದ್ದ ರಾಜೇಶ್ ಪೈಲಟ್,ಮಾಧರಾವ್ ಸಿಂಧಿಯಾ ರಸ್ತೆ ಮತ್ತು ವಿಮಾನಾಪಘಾತಗಳಲ್ಲಿ ಸತ್ತರು.ಈ ರೀತಿ ವಿಮಾನಾಪಘಾತ/ರಸ್ತೆ ಅಪಘಾತಗಳಲ್ಲಿ ಸಾಯುವವರ ಪಟ್ಟಿ ಭಾರತದ ರಾಜಕೀಯ ಇತಿಹಾಸದಲ್ಲಿ ಅಲ್ಲಲ್ಲಿ ಸಿಗುತ್ತದೆ.ಆದರೆ ಹಾಗೆ ಸಿಗುವ ಪಟ್ಟಿ ಇದೇ ನೆಹರು ಕುಟುಂಬದ ಆಸುಪಾಸಿನಲ್ಲಿ ಸುತ್ತುತ್ತದೆ. ನಿಗೂಢತೆ ಮತ್ತು ನೆಹರೂ ಕುಟುಂಬಕ್ಕೂ ಅದೇನೋ ಒಂದು ನಂಟು.

ಮತ್ತಷ್ಟು ಓದು »

9
ಸೆಪ್ಟೆಂ

ತಮಿಳುನಾಡು, ಕಾವೇರಿ, ಜಯಲಲಿತ, ದೇವೇಗೌಡರು ಮತ್ತು ನಾನು

– ಪ್ರೇಮಶೇಖರ

jayನೆರೆಯ ತಮಿಳುನಾಡಿನಲ್ಲಿ ಹಲವು ಅಚ್ಚರಿ ಹುಟ್ಟಿಸುವ ವಿರೋಧಾಭಾಸಗಳು ಕಾಣಸಿಗುತ್ತವೆ. ತಮಿಳರು ಮಹಾ ಭಾಷಾಭಿಮಾನಿಗಳು. ತಮ್ಮ ನಾಡು ನುಡಿಯ ಬಗ್ಗೆ ಅವರ ಪ್ರೀತಿ, ಅಭಿಮಾನ, ಕಾಳಜಿಗೆ ಸಮಕಾಲೀನ ಭಾರತೀಯ ಇತಿಹಾಸದಲ್ಲಿ ದಂತಕತೆಯ ಆಯಾಮವೊದಗಿಬಿಟ್ಟಿದೆ. ಆದರೆ, ಇಂತಹ ಸ್ವಾಭಿಮಾನಿ ತಮಿಳರು ಕಳೆದ ನಲವತ್ತು-ನಲವತ್ತೈದು ವರ್ಷಗಳಿಂದಲೂ ತಮಿಳೇತರರನ್ನು ತಮ್ಮ ರಾಜಕೀಯ ನಾಯಕರನ್ನಾಗಿ ಒಪ್ಪಿಕೊಂಡು ಅವರ ಕೈಯಲ್ಲಿ ತಮ್ಮ ರಾಜ್ಯವನ್ನಿಟ್ಟುಬಿಟ್ಟಿದ್ದಾರೆ. ಕರುಣಾನಿಧಿ ಕಳೆದ ನಾಲ್ಕು ದಶಕಗಳಿಂದಲೂ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಅನಭಿಷಿಕ್ತ ಸಾಮ್ರಾಟರಾಗಿ ಮೆರೆಯುತ್ತಿದ್ದಾರೆ, ನಾಲ್ಕು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದಾರೆ. ಈ ಕರುಣಾನಿಧಿ ತೆಲುಗು ಮೂಲದವರು. ಡಿಎಂಕೆ ಪಕ್ಷವನ್ನು ಒಡೆದು ಅದಕ್ಕೆ ಪರ್ಯಾಯವಾಗಿ “ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ” (ಎಐಎಡಿಎಂಕೆ) ಪಕ್ಷ ಕಟ್ಟಿ ಸತತ ಹತ್ತು ವರ್ಷಗಳವರೆಗೆ ತಮಿಳುನಾಡನ್ನು ಆಳಿದ ಎಂ. ಜಿ. ರಾಮಚಂದ್ರನ್ (ಎಂಜಿಆರ್) ಒಬ್ಬ ಮಲೆಯಾಳಿ. ಅವರ ಸಹವರ್ತಿ ಮತ್ತು ಉತ್ತರಾಧಿಕಾರಿ, ಕೋಟ್ಯಂತರ ತಮಿಳರ ಪ್ರೀತಿಯ “ಅಮ್ಮ” ಜಯಲಲಿತಾರ ಮೂಲ ಕರ್ನಾಟಕದಲ್ಲಿ. ಅದಕ್ಕೂ ಹಿಂದೆ ಹೋಗುವುದಾದರೆ ದ್ರಾವಿಡ ಚಳುವಳಿಯ ಅಧ್ವರ್ಯು, ತಮಿಳುನಾಡಿನ ಇತಿಹಾಸದ ದಿಕ್ಕನ್ನೇ ಬದಲಿಸಿದ “ಪೆರಿಯಾರ್” ಬಿರುದಾಂಕಿತ ಇ. ವಿ. ರಾಮಸ್ವಾಮಿ ನಾಯಕರ್ ಕನ್ನಡಿಗರಂತೆ. ಇವರೆಲ್ಲರೂ ತಮಿಳನ್ನು ತಮ್ಮದಾಗಿಸಿಕೊಂಡು, ತಮಿಳುನಾಡಿಗೆ ತಮ್ಮನ್ನರ್ಪಿಸಿಕೊಂಡು ತಮಿಳರ ಹೃದಯಗಳಲ್ಲಿ ಸ್ಥಾನ ಗಳಿಸಿಕೊಂಡುಬಿಟ್ಟರು. ಮತ್ತಷ್ಟು ಓದು »

12
ಮಾರ್ಚ್

‘ತುರ್ತು ಪರಿಸ್ಥಿತಿ’ ವಿರುದ್ಧದ ಹೋರಾಟದಲ್ಲಿ ಹಾಸನ ಜಿಲ್ಲೆ ವಹಿಸಿದ ಪಾತ್ರ

-ಕ.ವೆಂ.ನಾಗರಾಜ್

ತುರ್ತು ಪರಿಸ್ಥಿತಿಪರಕೀಯರ ಸಂಕೋಲೆಯಿಂದ ೧೯೪೭ರಲ್ಲಿ ದೇಶ ಸ್ವತಂತ್ರಗೊಂಡ ಕೇವಲ ೨೮ ವರ್ಷಗಳ ನಂತರದಲ್ಲಿ ಸ್ವಕೀಯರಿಂದಲೇ ಪ್ರಜಾಪ್ರಭುತ್ವಕ್ಕೆ ಅತಿ ದೊಡ್ಡ ಗಂಡಾಂತರ ೧೯೭೫ರಲ್ಲಿ ತುರ್ತುಪರಿಸ್ಥಿತಿ ರೂಪದಲ್ಲಿ ಬಂದೆರಗಿತ್ತು. ಎರಡು ವರ್ಷಗಳ ಈ ತುರ್ತುಪರಿಸ್ಥಿತಿಯ ಅವಧಿ ದೇಶದ ಅತ್ಯಂತ ಕಲಂಕಿತ ಅವಧಿಯಾಗಿದ್ದು, ಇಂದು ಕಂಡುಬರುತ್ತಿರುವ ಅಧಿಕಾರದ ಹಪಾಹಪಿಗೆ ಭದ್ರ ತಳಪಾಯ ಒದಗಿಸಿತ್ತು. ಅಲಹಾಬಾದ್ ಉಚ್ಚನ್ಯಾಯಾಲಯವು ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ಮೇಲಿದ್ದ ಭ್ರಷ್ಠಾಚಾರದ ಆರೋಪವನ್ನು ಎತ್ತಿ ಹಿಡಿದು ಅವರ ಚುನಾವಣೆಯ ಗೆಲುವನ್ನು ಅನೂರ್ಜಿತಗೊಳಿಸಿದ್ದಲ್ಲದೆ ಮುಂದಿನ ಆರು ವರ್ಷಗಳು ಅವರು ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದ್ದನ್ನು ಅವರು ಲೆಕ್ಕಿಸದೆ ಹೇಯಮಾರ್ಗ ಹಿಡಿದು ದೇಶದ ಮೇಲೆ ಅನಗತ್ಯವಾದ ತುರ್ತುಪರಿಸ್ಥಿತಿ ಹೇರಿ ಸರ್ವಾಧಿಕಾರಿಯಾಗಿ ಅಟ್ಟಹಾಸದಿಂದ ಮೆರೆದರು. ಕಹಿಯಾದ ಕಠಿಣ ಸತ್ಯವೆಂದರೆ ಭ್ರಷ್ಠಾಚಾರ ತಪ್ಪಲ್ಲವೆಂಬ ಭಾವನೆಗೆ, ಭ್ರಷ್ಠಾಚಾರ ಇಂದು ಮುಗಿಲೆತ್ತರಕ್ಕೆ ಬೆಳೆದಿರುವುದಕ್ಕೆ ಅಂದು ಹಾಕಿದ್ದ ಈ ಭದ್ರ ಬುನಾದಿಯೇ ಕಾರಣ. ಕಾಯದೆ, ಕಾನೂನುಗಳನ್ನು ಅನುಕೂಲಕ್ಕೆ ತಕ್ಕಂತೆ ತಿದ್ದಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘವೂ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳನ್ನು ನಿಷೇಧಿಸಲಾಯಿತು. ಲೋಕಸಭೆಯ ಅವಧಿ ಪೂರ್ಣಗೊಂಡರೂ ಸಂಸತ್ತಿನಲ್ಲಿ ನಿರ್ಣಯ ಮಾಡಿ ಮತ್ತೆ ಎರಡು ವರ್ಷಗಳ ಅವಧಿಗೆ ಮುಂದುವರೆಸಲಾಯಿತು. ಸಂವಿಧಾನಕ್ಕೆ ಹಲವು ತಿದ್ದುಪಡಿಗಳನ್ನು ಮಾಡಲಾಯಿತು. ೧೯೭೫ರ ಜೂನ್ ೨೬ರ ಬೆಳಕು ಹರಿಯುವಷ್ಟರಲ್ಲಿ ಭಾರತದ ಸ್ವತಂತ್ರತೆ ನಿರ್ಬಂಧಿಸಲ್ಪಟ್ಟಿತು. ಅಭಿವ್ಯಕ್ತಿ ಸ್ವಾತಂತ್ರ್ಯ, ಲೇಖನ ಸ್ವಾತಂತ್ರ್ಯ, ಪತ್ರಿಕಾ ಸ್ವಾತಂತ್ರ್ಯ, ಸ್ವಂತ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ, ಇತ್ಯಾದಿ ಎಲ್ಲಾ ನಾಗರಿಕ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ದೇಶಾದ್ಯಂತ ನೂರಾರು ವಿರೋಧ ಪಕ್ಷದ ನಾಯಕರುಗಳನ್ನು ಬಂಧಿಸಿ ಸೆರೆಯಲ್ಲಿರಿಸಿದರು. ಜನರು ಸರ್ಕಾರದ ವಿರುದ್ಧ ಮಾತನಾಡಲು ಅಂಜುವಂತೆ ಆಯಿತು. ಆಕಾಶವಾಣಿ ಇಂದಿರಾವಾಣಿ ಆಯಿತು, ದೂರದರ್ಶನ ಇಂದಿರಾದರ್ಶನವಾಯಿತು. ಇಂದಿರಾ ಪರ ಸುದ್ದಿಗಳಿಗೆ ಮಾತ್ರ ಅವಕಾಶ. ‘ಇಂದಿರಾ ಅಂದರೆ ಇಂಡಿಯಾ, ಇಂಡಿಯಾ ಅಂದರೆ ಇಂದಿರಾ’ ಆಗಿಹೋಯಿತು.

ಮತ್ತಷ್ಟು ಓದು »