ವಿಷಯದ ವಿವರಗಳಿಗೆ ದಾಟಿರಿ

Posts tagged ‘ಪಂಪ’

7
ಮಾರ್ಚ್

‘ಆರ್ ಅಂಕುಸ(ರ?)ವಿಟ್ಟೊಡಂ’: ಒಂದು ಪರಿಶೀಲನೆ

– ಡಾ.ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕರು,
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,
ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

ಪಂಪ ವಿರಚಿತ ವಿಕ್ರಮಾರ್ಜುನ ವಿಜಯ (ಕ್ರಿ.ಶ.942) ಕೃತಿಯಲ್ಲಿನ ಬನವಾಸಿ ವರ್ಣನೆಯನ್ನು ಮಾಡುವ ಚತುರ್ಥಾಶ್ವಾಸದ 28 ರಿಂದ 32ನೆಯ ಪದ್ಯಗಳು ಸಾಕಷ್ಟು ಚರ್ಚಿತವಾದವು. ಇಂದಿಗೂ ಈ ಪದ್ಯಗಳನ್ನು ಕುರಿತು ಚರ್ಚೆ ನಡೆಯುತ್ತಲೇ ಇದೆ. ಇವುಗಳಲ್ಲಿ ಒಂದು ಪದ್ಯ:

ತೆಂಕಣಗಾಳಿ ಸೋಂಕಿದೊಡಮೊಳ್ನುಡಿಗೇಳ್ದೊಡಮಿಂಪನಾಳ್ದ ಗೇ
ಯಂ ಕಿವಿವೊಕ್ಕಡಂ ಬಿರಿದಮಲ್ಲಿಗೆಗಂಡೊಡಮಾದ ಕೆಂದಲಂ
ಪಂ ಗೆಡೆಗೊಂಡೊಡಂ ಮಧುಮಹೋತ್ಸವಮಾದೊಡಮೇನನೆಂಬೆನಾ
ರಂಕುಸವಿಟ್ಟೊಡಂ ನೆನೆವುದೆನ್ನ ಮನಂ ವನವಾಸಿದೇಶಮಂ1 (4-32) Read more »

30
ಸೆಪ್ಟೆಂ

ಇತಿಹಾಸದ ಅಚ್ಚರಿಗಳಲ್ಲಿ ಒಂದು ಇಣುಕು: ‘ಕರ್ನಾಟಕದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಹುಗಳು’

– ರಾಘವೇಂದ್ರ ಅಡಿಗ ಹೆಚ್.ಎನ್

Chidananda Murthy - Kannada ಕಳೆದ ವಾರ ಕನ್ನಡದ ಒಂದು ಅಪೂರ್ವ ಮತ್ತು ನೂತನ ಸ್ವರೂಪದ ಕೃತಿಯೊಂದರ ಬಿಡುಗಡೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನೆರವೇರಿತು.( ಆ ಸಂದರ್ಭದಲ್ಲಿ ನಾನೂ ಸಹ ಅಲ್ಲಿ ಇದ್ದೆ ಎನ್ನುವ ವಿಚಾರವೇ ನನಗೊಂದು ಖುಷಿಯ ಸಂಗತಿ.) ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದ ಅಗ್ರರಲ್ಲಿ ಒಬ್ಬರಾದ ಡಾ. ಎಮ್. ಚಿದಾನಂದಮೂರ್ತಿಯವರ ‘ಕರ್ನಾಟದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಗಳು’ ಎನ್ನುವ ಹೆಸರಿನ ಕೃತಿಯು ಗಾತ್ರದಲ್ಲಿ ಚಿಕ್ಕದಾಗಿದ್ದರೂ ಅದರಲ್ಲಿರುವ ವಿಷಯದ ದೃಷ್ಟಿಯಿಂದ ತೀರಾ ವಿನೂತನವಾದುದ ಅಷ್ಟೇ ಅಲ್ಲ ಬಹು ಮೌಲ್ಯಯುತವಾದುದು ಕೂಡ. ಲೇಖಕರೇ ಹೇಳುವಂತೆ ‘ಇಂತಹಾ ಒಂದು ಪುಸ್ತಕ ಕನ್ನಡದಲ್ಲಿ ಬರುತ್ತಿರುವುದು ಇದೇ ಮೊದಲು,ಇತರೆ ಭಾರತೀಯ ಭಾಷೇಗಳಲ್ಲಿಯೂ ಬಂದಂತಿಲ್ಲ’. ಈ ಒಂದು ಪುಸ್ತಕದಿಂದ ನಾವು-ನೀವು ಓದಿರುವ ಕನ್ನಡದ ಪ್ರಾಚೀನ ಕವಿಗಳು, ನಮ್ಮನ್ನಾಳಿದ ರಾಜ ಮಹಾರಾಜರ ವಂಶಸ್ಥರ ಕುರಿತಾಗಿ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳಬಹುದು.

ಕನ್ನಡದ ಶ್ರೇಷ್ಠ ಸಂಶೋಧಕರೂ, ಚಿಂತಕರೂ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ಡಾ. ಎಮ್. ಚಿದಾನಂದಮೂರ್ತಿಗಳ ಈ ಕಿರುಹೊತ್ತಿಗೆ ಅವರ ಹಲವು ವರ್ಷಗಳ ಪರಿಶ್ರಮದ ಫಲ. ಶತ ಶತಮಾನಗಳ ಹಿಂದೆ ಆಳಿಹೋದ ರಾಜವಂಶಸ್ಥರ, ನೂರಾರು-ಸಾವಿರಾರು ವರ್ಷಗಳ ಹಿಂದೆ ಬದುಕಿ ಕಾವ್ಯಗಳನ್ನು ರಚಿಸಿದ ಪ್ರಾಚೀನ ಕವಿಮಹೋದಯರ ಈಗಿನ ವಂಶಸ್ಥರು ಯಾರೆನ್ನುವುದನ್ನು ಪತ್ತೆ ಮಾಡಿ ಅವರನ್ನು ಸಂದರ್ಶಿಸಿ, ಅವರ ಬಳಿ ಇದ್ದ ಅಂದಿನ ಕಾಲದ ಕುರುಹುಗಳನ್ನು ನೋಡಿ ಅದರ ಬಗ್ಗೆ ಲೇಖನ ಅಥವಾ ಪುಸ್ತಕ ಬರೆಯುವುದು ಅಷ್ಟೇನೂ ಸುಲಭವಲ್ಲ. ಉದಾಹರಣೆಗೆ ಕನ್ನಡದ ಆದಿಕವಿ ಪಂಪನನ್ನು ತೆಗೆದುಕೊಂಡರೆ ಅವನ ಕಾಲ ಕ್ರಿ.ಶ.೯೦೨. ಅವನು ‘ವಿಕ್ರಮಾರ್ಜುನ ವಿಜಯ’ ಕಾವ್ಯವನ್ನು ಪೂರ್ಣಗೊಳಿಸಿದ್ದು ಕ್ರಿ.ಶ.೯೪೨ ರಲ್ಲಿ. ಅಂದರೆ ಇಂದಿಗೆ ಸುಮಾರು ಸಾವಿರದ ನೂರು ವರ್ಷಗಳಾದವು. ಹೀಗೆ ಸಾವಿರ ವರ್ಷಗಳ ಹಿಂದೆ ಬದುಕಿದ್ದ ಪಂಪನ ತಂದೆ ಹಾಗೂ ತಾಯಿಯ ವಂಶಸ್ಥರ ವಿವರಗಳಾನ್ನು ಪತ್ತೆ ಮಾಡುವುದು ಮತ್ತು ಅವರನ್ನು ಸ್ವತಃ ಸಂದರ್ಶಿಸಿ ಮತ್ತಷ್ಟು ಮಾಹಿತಿಯನ್ನು ಕಲೆಹಾಕಿ ಪುಸ್ತಕ ಪ್ರಕಟಿಸುವುದು ಬಲು ಅಪರೂಪದ ಸಂಗತಿ. ಹೀಗಾಗೆ ಇಂತಹಾ ಪುಸ್ತಕವು ಕನ್ನಡದಲ್ಲಿ ತೀರಾ ನೂತನವಾಗಿರುವುದು ಸಾಧ್ಯ.

Read more »